HomeVijayanagarಮಹಿಳೆಯರಿಲ್ಲದ ಸಚಿವ ಸಂಪುಟಕ್ಕೆ ಆಕ್ರೋಶ

ಮಹಿಳೆಯರಿಲ್ಲದ ಸಚಿವ ಸಂಪುಟಕ್ಕೆ ಆಕ್ರೋಶ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರಿಲ್ಲದ ಸಚಿವ ಸಂಪುಟ ರಚನೆ ಮಹಿಳಾ ವಿರೋಧಿ ಮನೋಭಾವದ ಪ್ರತೀಕವಾಗಿದ್ದು, ಸಂವಿಧಾನಬದ್ಧ ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದರು.

ರಾಜ್ಯದ ಒಟ್ಟು ಮತದಾರರಲ್ಲಿ ಶೇ.52ರಷ್ಟು ಮಹಿಳೆಯರಿದ್ದು, ಸರ್ಕಾರ ರಚನೆಯಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ಮಹಿಳಾ-ಮಕ್ಕಳ ಕಲ್ಯಾಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಮಹತ್ವದ್ದಾಗಿದ್ದರೂ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ನೀಡದಿರುವುದು ಮಹಿಳೆಯರನ್ನು ರಾಜಕೀಯ ನಿರ್ಧಾರ ಪ್ರಕ್ರಿಯೆಯಿಂದ ದೂರವಿಡುವ ಪ್ರಯತ್ನವಾಗಿದೆ ಎಂದು ದೂರಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ 10 ಮಹಿಳಾ ಶಾಸಕರಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದು ಪಕ್ಷದ ಮಹಿಳಾ ಸಮಾನತೆಯ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಹೇಳಿದರು.

ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಮಹಿಳಾ ಸಂಘಟನೆಗಳು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದು ಮಹಿಳಾ ಸಬಲೀಕರಣಕ್ಕೆ ವಿರುದ್ಧವಾದ ನಡೆ ಎಂದು ಟೀಕಿಸಿದರು.

ಸಚಿವ ಸಂಪುಟದ ನಿರ್ಧಾರವನ್ನು ಮರುಪರಿಶೀಲಿಸಿ ಮಹಿಳೆಯರಿಗೆ ಸೂಕ್ತ ಹಾಗೂ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು ಎಂದು ಸಂಘಟನೆ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img