ಪುತ್ತೂರಲ್ಲಿ ಸಿಎಂ ಕಾರ್ಯಕ್ರಮದಲ್ಲಿ ನೂಕುನುಗ್ಗಲು: 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

0
Spread the love

ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರು ತಾಲೂಕಿನ ಕ್ರೀಡಾಂಗಣದಲ್ಲಿ ನಡೆದಿದೆ.

Advertisement

‘ಅಶೋಕ ಜನಮನ–2025’ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಆಗಮಿಸಿದ್ದರಿಂದ ತೀವ್ರ ನೂಕುನುಗ್ಗಲು ಉಂಟಾಗಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥರಾದರು.

ಅಸ್ವಸ್ಥರನ್ನು ತಕ್ಷಣ ಪುತ್ತೂರು ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅಶೋಕ್ ರೈ ಮಾಲೀಕತ್ವದ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದು, ದೀಪಾವಳಿ ಹಬ್ಬದ ಅಂಗವಾಗಿ ಜನರಿಗೆ ತಟ್ಟೆ ಹಾಗೂ ವಸ್ತ್ರ ವಿತರಣೆ ಕೂಡ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮಕ್ಕೆ ಅಧಿಕೃತ ಉದ್ಘಾಟನೆ ನೆರವೇರಿಸಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here