ರಾಯಚೂರು: ರಾಯಚೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು.
Advertisement
ಇತ್ತ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಜೀವದ ಹಂಗು ತೊರೆದು ಜನರು ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ. ಕಳಸೂರು ಮತ್ತು ಕೊಳೂರ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.