HomeSports Newsವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹೆಚ್ಚಲಿ : ರಾಮಣ್ಣ ಲಮಾಣಿ

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹೆಚ್ಚಲಿ : ರಾಮಣ್ಣ ಲಮಾಣಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ನೆಲೆಗೊಳ್ಳಲು ಸಾಧ್ಯವಿದ್ದು, ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಕ್ರೀಡೆಯಲ್ಲಿ ತೊಡಗಿಸಬೇಕು ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ಸಮೀಪದ ಆದರಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆದ್ರಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸಹಯೋಗದಲ್ಲಿ ನಡೆದ ಪು.ಬಡ್ನಿ ಗ್ರುಪ್ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮೊಬೈಲ್, ಟಿವಿ ಪ್ರಭಾವದಿಂದ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಕಷ್ಟು ಪ್ರತಿಭಾವಂತದರಿದ್ದು, ಅವರನ್ನು ಗುರುತಿಸಿ ಅವರಲ್ಲಿ ಕ್ರೀಡಾಸಕ್ತಿ ಮೂಡಿಸುವ ವಾತಾವರಣ ಸೃಷ್ಟಿಯಾಗಬೇಕಿದೆ ಎಂದರು.

ಕ್ರೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ. ಇಂದು ಕ್ರೀಡಾಕ್ಷೇತ್ರಕ್ಕೆ ಸಾಕಷ್ಟು ಮಹತ್ವ, ಅವಕಾಶಗಳಿದ್ದು ಗ್ರಾಮೀಣ ಪ್ರತಿಭೆಗಳು ಹೊರ ಬರಬೇಕಿದೆ ಎಂದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹಾಂತಗೌಡ ಪಾಟೀಲ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ ಅಧ್ಯಕ್ಷ, ಸದಸ್ಯರು, ಹಿರಿಯರು, ಶಿಕ್ಷಕ ವರ್ಗದವರು ಇದ್ದರು. ಬಿಆರ್‌ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕ ನುಡಿದರು.

ಕ್ರೀಡಾಕೂಟಕ್ಕೆ ಸಹಕರಿಸಿದ ಮಹನೀಯರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಶ್ರೀಕಾಂತ ನಂದೆಣ್ಣವರ, ಶಿಕ್ಷಕ ಚಂದ್ರು ಅಂಟಿನ, ಸಿಆರ್‌ಪಿ ಗಿರೀಶ ನೇಕಾರ ನಿರೂಪಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!