ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಮೌನ ತಪಸ್ಸು..!
ವಿಶೇಷ ಮಕ್ಕಳಿಗೆ ಹಬ್ಬದ ಸ್ವಾಗತ..!
15ವರ್ಷ ಅಲೆದ್ರೂ ಸಿಗಲಿಲ್ಲ ಸೂರು!
“2012ರಿಂದ ಬಾಡಿಗೆ ಮನೆಯಲ್ಲಿದ್ದೇವೆ. ಅಂದಿನಿಂದಲೇ ಅರ್ಜಿ ಸಲ್ಲಿಸುತ್ತಿದ್ದೇವೆ. ದುಡಿಮೆ ಬಿಟ್ಟು ಕಾರ್ಯಾಲಯಕ್ಕೆ ಅಲೆದು ಸಾಕಾಗಿದೆ. ಈ ಬಾರಿ ಪಟ್ಟಿಯಲ್ಲಿ ನನ್ನ ಹೆಸರು ಬಂದರೂ ನಿವೇಶನ ನೀಡಿಲ್ಲ.”ಯಾಸ್ಮಿನ್ ಬೇಗಂ ಇಬ್ರಾಹಿಂಸಾಬ ಮಕಾಂದಾರವಾರ್ಡ್ ನಂ.17ರ ನಿವಾಸಿ
ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಅಲೈದೇವರಿಗೆ ಹರಕೆ..!
ನಿದ್ರೆಗೆ ಅಡ್ಡಿಯಾಗುತ್ತಿರುವ ಈ ವಿಟಮಿನ್ ಕೊರತೆಗಳು! ತಜ್ಞರ ಸಲಹೆ
ಇತ್ತೀಚಿನ ದಿನಗಳಲ್ಲಿ ಅನೇಕರು ನಿದ್ರಾಹೀನತೆ, ಮಧ್ಯರಾತ್ರಿ ಪದೇ ಪದೇ ಎಚ್ಚರವಾಗುವುದು ಮತ್ತು ಸಾಕಷ್ಟು ನಿದ್ರೆ ಮಾಡಿದರೂ ದಣಿವು ಅನುಭವಿಸುವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಸಾಮಾನ್ಯವಾಗಿ ಇದನ್ನು ಒತ್ತಡ ಮತ್ತು ಬ್ಯುಸಿ ಜೀವನಶೈಲಿಗೆ ಸಂಬಂಧಿಸಿದಂತೆ ನೋಡಲಾಗುತ್ತದೆ. ಆದರೆ ತಜ್ಞರ ಪ್ರಕಾರ ದೇಹದಲ್ಲಿನ ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯೂ ನಿದ್ರೆಯ ಗುಣಮಟ್ಟವನ್ನು ಹಾಳು ಮಾಡಬಹುದು.
ವೈದ್ಯರ ಮಾಹಿತಿ ಪ್ರಕಾರ ವಿಟಮಿನ್ ಡಿ, ವಿಟಮಿನ್ ಬಿ12, ಮ್ಯಾಗ್ನೀಶಿಯಂ ಮತ್ತು ಐರನ್ ದೇಹದ ನಿದ್ರೆ ನಿಯಂತ್ರಣ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇವುಗಳ ಕೊರತೆಯಿಂದ ನಿದ್ರೆ ಸರಿಯಾಗಿ ಬಾರದಿರುವುದು, ದಣಿವು ಮತ್ತು ಮಾನಸಿಕ ಅಸ್ಥಿರತೆ ಕಾಣಿಸಿಕೊಳ್ಳಬಹುದು.
ವಿಟಮಿನ್ ಡಿ ಕೊರತೆಯಿಂದ ನಿದ್ರೆಯ ಅವಧಿ ಹಾಗೂ ಗುಣಮಟ್ಟ ಕಡಿಮೆಯಾಗುವ ಸಾಧ್ಯತೆ ಇದೆ. ವಿಟಮಿನ್ ಬಿ12 ನರಮಂಡಲದ ಆರೋಗ್ಯಕ್ಕೆ ಅಗತ್ಯವಾಗಿದ್ದು, ಇದರ ಕೊರತೆಯಿಂದ ಪದೇ ಪದೇ ನಿದ್ರೆ ಭಂಗವಾಗಬಹುದು. ಮ್ಯಾಗ್ನೀಶಿಯಂ ದೇಹವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ; ಇದರ ಕೊರತೆಯಿಂದ ಆತಂಕ ಹಾಗೂ ನಿದ್ರಾಹೀನತೆ ಹೆಚ್ಚಾಗಬಹುದು. ಐರನ್ ಕೊರತೆಯಿಂದ ದೇಹಕ್ಕೆ ಆಮ್ಲಜನಕ ಸರಿಯಾಗಿ ಸರಬರಾಜಾಗದೆ ದಣಿವು ಮತ್ತು ಅಶಾಂತಿ ಉಂಟಾಗಬಹುದು.
ನಿರಂತರ ದಣಿವು, ಗಮನ ಕೇಂದ್ರೀಕರಣ ಕಷ್ಟ, ಮನಸ್ಥಿತಿಯಲ್ಲಿ ಬದಲಾವಣೆ, ತಲೆನೋವು ಹಾಗೂ ರಾತ್ರಿ ಸರಿಯಾಗಿ ನಿದ್ರೆ ಬರದಿರುವಂತಹ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ವೈದ್ಯರ ಸಲಹೆಯೊಂದಿಗೆ ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.
ಚೆನ್ನಾಗಿ ನಿದ್ರೆ ಬರಲು ಪ್ರತಿದಿನ ಒಂದೇ ಸಮಯಕ್ಕೆ ಮಲಗುವ ಅಭ್ಯಾಸ ಬೆಳೆಸಿಕೊಳ್ಳುವುದು, ಮಲಗುವ ಮೊದಲು ಮೊಬೈಲ್ ಬಳಕೆ ಕಡಿಮೆ ಮಾಡುವುದು, ಸಮತೋಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಯೋಗ ಹಾಗೂ ಧ್ಯಾನ ಅನುಸರಿಸುವುದು ಸಹಾಯಕವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಶಾಲೆಯಂಗಳದಲ್ಲಿ ಮತ್ತೆ ಮೊಳಗಿದ ಮಕ್ಕಳ ಕಲರವ..!
“ಪ್ರತಿಯೊಬ್ಬ ಮಗುವೂ ಶಾಲೆಯ ಬೆಳಕಿಗೆ ಬರಬೇಕು. ಶಿಕ್ಷಣವೇ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ. ಪಾಲಕರು ಮತ್ತು ಶಿಕ್ಷಕರು ಕೈಜೋಡಿಸಿದಾಗ ಮಾತ್ರ ಗ್ರಾಮೀಣ ಮಕ್ಕಳ ಬದುಕು ಪ್ರಕಾಶಮಾನವಾಗುತ್ತದೆ.”ಸುಜಾತಾ ಕಮ್ಮಾರ, ಎಸ್‌ಡಿಎಂಸಿ ಅಧ್ಯಕ್ಷೆ
ಸಚಿವ ಸಂಪುಟದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಆದ್ಯತೆ ನೀಡಿ: ಪವಾಡಿ ಹನುಮಂತಪ್ಪ
ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದು..!
ಪುಸ್ತಕದ ಜೊತೆಗೆ ಕನಸುಗಳಿಗೂ ಹೊಸ ಆರಂಭ..!
ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!
ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ.
ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ.
ತಾಲೂಕಿನಲ್ಲಿ ಸುಮಾರು 9 ರಿಂದ 10 ಲಕ್ಷ ಲಾಡುಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿದ್ದು, 80 ರಿಂದ 90 ಸಾವಿರ ಮನೆಗಳಿಗೆ ಲಾಡು ಬಾಕ್ಸ್ ವಿತರಿಸಲು ಯೋಜನೆ ರೂಪಿಸಲಾಗಿದೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಈ ಸಿಹಿ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದೆ.
ಲಾಡು ತಯಾರಿಕೆಗೆ ಸುಮಾರು 250 ರಿಂದ 300 ಮಂದಿ ಬಾಣಸಿಗರನ್ನು ನಿಯೋಜಿಸಲಾಗಿದ್ದು, ಸ್ವಚ್ಛತೆ ಹಾಗೂ ಗುಣಮಟ್ಟದ ಕುರಿತು ಶಾಸಕ ಶ್ರೀನಿವಾಸ್ ಸ್ವತಃ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೊರತೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಬೆಂಗಳೂರಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಸಂಜೆ 4:10ಕ್ಕೆ ಮುಖ್ಯಮಂತ್ರಿ ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ನಾಯಕರು ಹಾಗೂ ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.
ಅವರೊಂದಿಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯೂ ಇದ್ದು, ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆಗೆ ಭಾರೀ ಮಹತ್ವ ದೊರಕಿದೆ.

