Home Blog Page 14

ಬೆಂಗಳೂರು ವೇದಿಕೆಯಲ್ಲಿ ‘ಸಿಎಂ’ ಘೋಷಣೆ: ಅಭಿಮಾನಿಗಳ ಕೂಗಿಗೆ ಜೂನಿಯರ್ NTR ಮೌನ ಉತ್ತರ

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿನಲ್ಲಿ ನಡೆದ ಕಿಮ್ಸ್ ಆಸ್ಪತ್ರೆ ಹೊಸ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ವೇಳೆ ಅಭಿಮಾನಿಗಳು ‘ಸಿಎಂ, ಸಿಎಂ’ ಎಂದು ಘೋಷಣೆ ಕೂಗಿದ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಆರ್ಆರ್ಆರ್’ ಸಿನಿಮಾದ ಬಳಿಕ ಜೂನಿಯರ್ ಎನ್ಟಿಆರ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ನಂದಮೂರಿ ಕುಟುಂಬದ ವಾರಸುದಾರರಾಗಿರುವ ಅವರು, ಹಲವು ವರ್ಷಗಳಿಂದ ತೆಲುಗು ಚಿತ್ರರಂಗ ಹಾಗೂ ರಾಜಕೀಯದಲ್ಲಿ ಪ್ರಭಾವ ಹೊಂದಿರುವ ಕುಟುಂಬದ ಸದಸ್ಯರಾಗಿದ್ದಾರೆ.

ಒಂದು ಕಾಲದಲ್ಲಿ ಜೂನಿಯರ್ ಎನ್ಟಿಆರ್ ರಾಜಕೀಯದಲ್ಲೂ ಸಕ್ರಿಯರಾಗಿದ್ದು, ಕುಟುಂಬದ ಪಕ್ಷವಾದ ತೆಲುಗು ದೇಶಂ ಪಾರ್ಟಿ ಪರವಾಗಿ ತಾರಾ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ರಾಜಕೀಯದಿಂದ ದೂರ ಉಳಿದಿದ್ದಾರೆ.

ಕಾರ್ಯಕ್ರಮದಲ್ಲಿ ಜೂನಿಯರ್ ಎನ್ಟಿಆರ್ ಅವರನ್ನು “25 ವರ್ಷಗಳ ಬಳಿಕ ನಿಮ್ಮನ್ನು ನೀವು ಎಲ್ಲಿ ನೋಡಲು ಬಯಸುತ್ತೀರಿ?” ಎಂದು ಪ್ರಶ್ನಿಸಲಾಯಿತು. ಇದಕ್ಕೆ ಅವರು ತಮ್ಮ ಹಾಸ್ಯಮಯ ಶೈಲಿಯಲ್ಲಿ “ಆಗ ನನಗೆ 67 ವರ್ಷ ವಯಸ್ಸಾಗಿರುತ್ತದೆ” ಎಂದು ಉತ್ತರಿಸಿದರು.

ಈ ಉತ್ತರದ ನಂತರ ಅಭಿಮಾನಿಗಳು ‘ಸಿಎಂ, ಸಿಎಂ’ ಎಂದು ಜೋರಾಗಿ ಕೂಗತೊಡಗಿದರು. ಅಭಿಮಾನಿಗಳ ಕೂಗಾಟವನ್ನು ಗಮನಿಸಿದ ಜೂನಿಯರ್ ಎನ್ಟಿಆರ್ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿಯೇ ಮುಂದುವರಿದಿದ್ದಾರೆ.

ಇತ್ತೀಚೆಗೆ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹಾಗೂ ಜೂನಿಯರ್ ಎನ್ಟಿಆರ್ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಅವರು ಜೂನಿಯರ್ ಎನ್ಟಿಆರ್ ಅವರನ್ನು ಪಕ್ಷದ ರಾಜಕೀಯದಿಂದ ದೂರ ಇಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಬಾಲಕೃಷ್ಣ ಅವರ ಅಳಿಯ ನಾರಾ ಲೋಕೇಶ್ ಅವರನ್ನು ರಾಜಕೀಯದಲ್ಲಿ ಬೆಳೆಸುವ ಉದ್ದೇಶದಿಂದ ಜೂನಿಯರ್ ಎನ್ಟಿಆರ್ ಅವರನ್ನು ಪಕ್ಕಕ್ಕೆ ಸರಿಸಲಾಗಿದೆ ಎಂಬ ವಿಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದೇ ಕಾರಣದಿಂದ ಜೂನಿಯರ್ ಎನ್ಟಿಆರ್ ಮಾತ್ರವಲ್ಲ, ಅವರ ಸಹೋದರ ಕಲ್ಯಾಣ್ ರಾಮ್ ಅವರನ್ನೂ ಪಕ್ಷದಿಂದ ದೂರ ಇಡಲಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ: ಭಾರತಕ್ಕೆ ಮೂರನೇ ಟಿ20 ವಿಶ್ವಕಪ್! ಪ್ರಧಾನಿ ಮೋದಿ ಅಭಿನಂದನೆ

0

ಅಂತಿಮ ಪಂದ್ಯದಲ್ಲಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ಭಾರತದ ಬ್ಯಾಟರ್‌ಗಳು ಹಾಗೂ ನಂತರ ಬೌಲರ್‌ಗಳ ಕಠಿಣ ಬೌಲಿಂಗ್‌ ನೆರವಿನಿಂದ ಭಾರತ ತಂಡ ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಿಸಿದೆ.

ಈ ಗೆಲುವಿನೊಂದಿಗೆ ಭಾರತ ಸತತ ಎರಡನೇ ಬಾರಿ ವಿಶ್ವಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 5 ವಿಕೆಟ್‌ ನಷ್ಟಕ್ಕೆ 255 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿತು. ಈ ಭಾರೀ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ ತಂಡ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ಔಟ್‌ ಆಗಿ ಸೋಲು ಒಪ್ಪಿಕೊಂಡಿತು. ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಸತತ ಎರಡು ಬಾರಿ ಅಂತಿಮ ಪಂದ್ಯ ಗೆದ್ದ ಮೊದಲ ತಂಡವಾಗಿ ಭಾರತ ಹೊರಹೊಮ್ಮಿದೆ. 2008, 2024 ಮತ್ತು 2026ರಲ್ಲಿ ಜಯಗಳಿಸುವ ಮೂಲಕ ಭಾರತ ಮೂರು ಬಾರಿ ಪ್ರಶಸ್ತಿ ಗೆದ್ದು ಹೊಸ ದಾಖಲೆ ನಿರ್ಮಿಸಿದೆ.

ಪಂದ್ಯದಲ್ಲಿ ಭಾರತ ತಂಡ ದಾಖಲಿಸಿದ 255 ರನ್‌ಗಳು ಟಿ20 ವಿಶ್ವಕಪ್‌ ಅಂತಿಮ ಪಂದ್ಯದಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ ತಂಡ ಆರಂಭದಲ್ಲಿ ಆಕ್ರಮಣಕಾರಿ ಆಟ ತೋರಿದರೂ ನಂತರ ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆರಂಭಿಕ ಆಟಗಾರ ಟಿಮ್ ಸೀಫರ್ಟ್ ವೇಗವಾಗಿ ರನ್‌ ಗಳಿಸಿದರೂ ಅಕ್ಷರ್‌ ಪಟೇಲ್‌, ಜಸ್ಪ್ರೀತ್‌ ಬುಮ್ರಾ ಮತ್ತು ಹಾರ್ದಿಕ್‌ ಪಾಂಡ್ಯ ಅವರ ಬೌಲಿಂಗ್‌ ಎದುರಿಸಲು ಸಾಧ್ಯವಾಗಲಿಲ್ಲ.

ಮಧ್ಯಮ ಕ್ರಮದ ಆಟಗಾರರಾದ ಮಾರ್ಕ್‌ ಚಾಪ್‌ಮನ್‌, ಡ್ಯಾರಿಲ್‌ ಮಿಚೆಲ್‌ ಮತ್ತು ಮಿಚೆಲ್‌ ಸ್ಯಾಂಟ್ನರ್ ಸ್ವಲ್ಪ ಪ್ರತಿರೋಧ ತೋರಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತದ ಬೌಲರ್‌ಗಳ ಶಕ್ತಿಶಾಲಿ ಪ್ರದರ್ಶನದ ಎದುರು ನ್ಯೂಜಿಲೆಂಡ್‌ ತಂಡ 159 ರನ್‌ಗಳಿಗೆ ಕುಸಿದು ಭಾರತ ಭರ್ಜರಿ ಜಯ ಸಾಧಿಸಿತು.

ಭಾರತ ತಂಡದ ಈ ಅಮೋಘ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಟೀಮ್ ಇಂಡಿಯಾದ ಪ್ರದರ್ಶನವನ್ನು ಹಾಡಿ ಹೊಗಳಿದಿದ್ದಾರೆ.

ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು! ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಟೀಮ್ ಇಂಡಿಯಾ ಟೂರ್ನಿಯುದ್ದಕ್ಕೂ ಅತ್ಯುತ್ತಮ ಧೈರ್ಯವನ್ನು ತೋರಿಸಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನು ಸಂತಸ ಮತ್ತು ಹೆಮ್ಮೆ ಪಡುವಂತೆ ಮಾಡಿದೆ. ಅಭಿನಂದನೆಗಳು, ಟೀಮ್ ಇಂಡಿಯಾ! ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ತ್ರಿಷಾ ಮನೆಯಲ್ಲೇ ಇರಬೇಕು’: ಚರ್ಚೆ ಹುಟ್ಟುಹಾಕಿದ ಪಾರ್ಥಿಬನ್ ಹೇಳಿಕೆ

ನಟ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಅವರ ಬಗ್ಗೆ ಹರಿದಾಡುತ್ತಿರುವ ಸಂಬಂಧದ ಗಾಸಿಪ್ ತಮಿಳು ಚಿತ್ರರಂಗದಲ್ಲಿ ಚರ್ಚೆಯ ಕೇಂದ್ರವಾಗಿದ್ದು, ಇದೀಗ ಈ ವಿಚಾರಕ್ಕೆ ಹೊಸ ತಿರುವು ದೊರಕಿದೆ.

ವಿಜಯ್ ಮತ್ತು ತ್ರಿಷಾ ಇತ್ತೀಚೆಗೆ ವಿವಾಹ ಆರತಕ್ಷತೆಯೊಂದರಲ್ಲಿ ಒಟ್ಟಿಗೆ ಭಾಗವಹಿಸಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿಗಳು ಕೂಡ ಹೆಚ್ಚಾಗಿವೆ.

ಈ ವಿವಾದದ ನಡುವೆ ತಮಿಳು ನಟ ಹಾಗೂ ನಿರ್ದೇಶಕ ಪಾರ್ಥಿಬನ್ ಕಾರ್ಯಕ್ರಮವೊಂದರಲ್ಲಿ ಮಾಡಿದ ಹೇಳಿಕೆ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಪಾರ್ಥಿಬನ್ ಅವರಿಗೆ ಅವರು ಜೊತೆ ನಟಿಸಿದ ನಟಿಯರ ಕುರಿತು ಪ್ರಶ್ನೆ ಕೇಳಲಾಯಿತು. ಈ ವೇಳೆ ಪೊನ್ನಿಯನ್ ಸೆಲ್ವನ್ ಚಿತ್ರದ ಪಾತ್ರಗಳ ಚಿತ್ರಗಳನ್ನು ತೋರಿಸಲಾಯಿತು. ತ್ರಿಷಾ ಅಭಿನಯಿಸಿದ್ದ ‘ಕುಂದವೈ’ ಪಾತ್ರದ ಫೋಟೋ ಕಂಡಾಗ ಪಾರ್ಥಿಬನ್ ಪ್ರತಿಕ್ರಿಯೆ ನೀಡಿದರು.

“ಕುಂದವೈ ಕೆಲ ದಿನ ಮನೆ ಒಳಗೆ ಇರೋದು ಉತ್ತಮ. ಎಲ್ಲವನ್ನೂ ಮುಕ್ತವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲಾ ಕವಿತೆಗಳನ್ನು ಆನಂದಿಸಲು ಸಾಧ್ಯವಿಲ್ಲ, ಕೆಲವು ಕವಿತೆಗಳನ್ನು ಮುಕ್ತವಾಗಿ ಓದಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಕುಂದವೈ ಹೊರಗೆ ಬಂದರೆ ಸಮಸ್ಯೆ” ಎಂದು ಪಾರ್ಥಿಬನ್ ಹೇಳಿರುವ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪಾರ್ಥಿಬನ್ ಅವರ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಅವರ ಮಾತನ್ನು ಬೆಂಬಲಿಸುತ್ತಿದ್ದಾರೆ. ಇನ್ನೂ ಕೆಲವರು ಈ ರೀತಿಯ ಕಾಮೆಂಟ್ ಅನಗತ್ಯ ಎಂದು ಟೀಕಿಸಿದ್ದಾರೆ.

ಇನ್ನೊಂದೆಡೆ ಕೆಲವರು ಪಾರ್ಥಿಬನ್ ಅವರನ್ನು ಮೆಚ್ಚಿ, “ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದಿದ್ದರೂ, ತಮ್ಮ ಮಾಜಿ ಪತ್ನಿಯ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿಲ್ಲ” ಎಂದು ಹೇಳಿದ್ದಾರೆ.

ಇದರ ಜೊತೆಗೆ ಕೆಲವರು ನಟ ವಿಜಯ್ ವಿರುದ್ಧವೂ ಟೀಕೆ ವ್ಯಕ್ತಪಡಿಸಿ, “ಪತ್ನಿಯ ಭಾವನೆಗಳಿಗೂ ಮಹತ್ವ ಕೊಡಬೇಕು” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 22ನೇ ಕಂತಿನ ಹಣ ಯಾವಾಗ ಬರುತ್ತೆ? ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಕೋಟ್ಯಂತರ ರೈತರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಹಣ ಜಮೆಯಾಗಲಿದೆ ಎಂಬ ನಿರೀಕ್ಷೆ ಇದ್ದರೂ, ಇದೀಗ ಹಣ ಜಮೆಯಾಗುವ ನಿಖರ ದಿನಾಂಕದ ಕುರಿತು ಹೊಸ ಮಾಹಿತಿ ಹೊರಬಿದ್ದಿದೆ.

ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ರೈತರಿಗೆ ವರ್ಷಕ್ಕೆ ₹6,000 ಆರ್ಥಿಕ ನೆರವು ನೀಡುತ್ತದೆ. ಈ ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2,000ರಂತೆ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ.

ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 13ರಂದು ರೈತರ ಬ್ಯಾಂಕ್ ಖಾತೆಗಳಿಗೆ 22ನೇ ಕಂತಿನ ₹2,000 ಜಮೆಯಾಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಈ ರೈತರಿಗೆ ಸಿಗಲ್ಲ ಕಂತಿನ ಲಾಭ

ಕೆಲವು ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದ ರೈತರು ಈ ಬಾರಿ ಪಿಎಂ ಕಿಸಾನ್ ಹಣದಿಂದ ವಂಚಿತರಾಗುವ ಸಾಧ್ಯತೆ ಇದೆ.

  • eKYC ಪೂರ್ಣಗೊಳಿಸದವರು
  • ಭೂ ದಾಖಲೆಗಳ ಪರಿಶೀಲನೆ ಪೂರ್ಣವಾಗದವರು
  • ಬ್ಯಾಂಕ್ ಖಾತೆ ಸಂಖ್ಯೆ ಅಥವಾ IFSC ಕೋಡ್ ತಪ್ಪಾಗಿ ನೀಡಿದವರು
  • ಅರ್ಜಿಯಲ್ಲಿ ಹೆಸರು ಅಥವಾ ಆಧಾರ್ ಸಂಖ್ಯೆ ತಪ್ಪಾಗಿ ನಮೂದಿಸಿದವರು

ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಿಎಂ ಕಿಸಾನ್ ಸೌಲಭ್ಯ ಪಡೆಯಲು ‘ಫಾರ್ಮರ್ ಐಡಿ’ ಕಡ್ಡಾಯಗೊಳಿಸಲಾಗಿದೆ. ಅಗ್ರಿಸ್ಟಾಕ್ ಯೋಜನೆಯಡಿ ಈ ಐಡಿಗಳನ್ನು ಸಿದ್ಧಪಡಿಸಲು ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಫಾರ್ಮರ್ ಐಡಿ ಇಲ್ಲದ ರೈತರು ಹಣ ಪಡೆಯುವಲ್ಲಿ ತೊಂದರೆ ಎದುರಿಸಬೇಕಾಗಬಹುದು ಎಂದು ತಿಳಿಸಲಾಗಿದೆ.

ಶರಣಬಸವೇಶ್ವರ ಜಾತ್ರೆ ವೇಳೆ ದುರಂತ: ನಿಯಂತ್ರಣ ತಪ್ಪಿ ಮಹಿಳೆ ಮೈ ಮೇಲೆ ಹರಿದ ರಥ!

ಕಲಬುರಗಿ: ಜಿಲ್ಲಾ ಯಡ್ರಾಮಿ ತಾಲ್ಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಶರಣಬಸವೇಶ್ವರ ಜಾತ್ರೆಯ ರಥೋತ್ಸವದ ವೇಳೆ ಸಂಭವಿಸಿದ ದುರ್ಘಟನೆಗೆ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ರಾಮಸ್ಥರಾದ ನಾಗಮ್ಮ ಅವರು ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ 6 ಗಂಟೆಗೆ ಜಾತ್ರೆಯ ಅಂಗವಾಗಿ ಶರಣಬಸವೇಶ್ವರರ ರಥೋತ್ಸವ ಆರಂಭವಾಗಿತ್ತು. ಭಕ್ತರ ಉತ್ಸಾಹ ಹೆಚ್ಚಿರುವುದರಿಂದ ನಿಯಂತ್ರಣ ತಪ್ಪಿ ರಥ ಜನರಿದ್ದ ದಿಕ್ಕಿಗೆ ಚಲಿಸಿದಾಗ, ನಾಗಮ್ಮ ಅವರ ಮೇಲೆ ರಥದ ಚಕ್ರವು ಹರಿದು ಹೋಗಿದ್ದು, ತಕ್ಷಣವೇ ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಸೇರಿಸಿದರು.

ಸ್ಥಳೀಯ ಆಸ್ಪತ್ರೆಯಲ್ಲಿ ನಾಗಮ್ಮಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ಜಿಲ್ಲೆಯ ಶರಣಬಸವೇಶ್ವರರ ಜನ್ಮಸ್ಥಳವಾದ ಅರಳಗುಂಡಗಿ ಗ್ರಾಮದಲ್ಲಿ ಈ ರೀತಿಯ ದುರ್ಘಟನೆ ಜಾತ್ರೆಯ ಸಂದರ್ಭದಲ್ಲಿ ಅಪಾಯದ ಎಚ್ಚರಿಕೆ ನೀಡುತ್ತಿದೆ.

 

ರೋಗಿಗಳ ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ: ಗದಗ ಜಿಮ್ಸ್ ವಿರುದ್ಧ ಆಕ್ರೋಶ

0

ಗದಗ: ರೋಗಿಗಳ ರಕ್ಷಣೆಗೆ ಬಳಸಬೇಕಾದ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಕುರಿಗಳಂತೆ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಗದಗ ನಗರದ ಜಿಮ್ಸ್ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಸಾಗಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಾರ್ಯವನ್ನು ಆ್ಯಂಬುಲೆನ್ಸ್ ಚಾಲಕನೇ ದುರುಪಯೋಗಪಡಿಸಿಕೊಂಡು ನಡೆಸಿದ್ದಾನೆ ಎನ್ನಲಾಗಿದೆ.

ನಿಯಮಾನುಸಾರ ಆ್ಯಂಬುಲೆನ್ಸ್‌ಗಳನ್ನು ರೋಗಿಗಳ ಸಾಗಾಟಕ್ಕಾಗಿ ಮಾತ್ರ ಬಳಸಬೇಕಾಗಿದೆ. ಆದರೆ ಜಿಮ್ಸ್ ಆಸ್ಪತ್ರೆಯಿಂದ ಗದಗ ನಗರಕ್ಕೆ ಜನರನ್ನು ಸಾಗಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಆ್ಯಂಬುಲೆನ್ಸ್ ಬಂದು ನಿಲ್ಲುತ್ತಿದ್ದಂತೆಯೇ ಜನರು ಮುಗಿಬಿದ್ದು ಏರುತ್ತಿರುವ ದೃಶ್ಯಗಳು ಕಾಣಿಸುತ್ತಿದ್ದು, ನಿತ್ಯವೂ ಇದೇ ರೀತಿಯಲ್ಲಿ ಜನರ ಸಾಗಾಟ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅಪಹರಣ: ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ!

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅಲಿಯಾಸ್ ಗೋಪಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್, ಮಾರ್ಚ್ 8ರಂದು ಸಂಜೆ 7.30ರ ಸುಮಾರಿಗೆ ಕಿಡ್ನ್ಯಾಪ್ ಆಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೋಪಾಲ್ ರಿಯಲ್ ಎಸ್ಟೇಟ್ ಮತ್ತು ಹಣಕಾಸು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು.

ಕುಟುಂಬದ ಆರೋಪದ ಪ್ರಕಾರ, ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದು ಕಿಡಿಗೇಡಿಗಳು ಸ್ಪ್ರೇ ಬಳಸುವ ಮೂಲಕ ದಾಳಿ ನಡೆಸಿ ಅವರನ್ನು ಅಪಹರಿಸಿದ್ದಾರೆ.

ಘಟನೆಯ ನಂತರ, ಜಿಗಣಿ ಪೊಲೀಸರು, ಮೂರು ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ಆರೋಪಿಗಳಾದ ಮೋಹನ್ ಬಾಬು, ಹರೀಶ್ ಮತ್ತು ಕಿರಣ್ ಅವರನ್ನು ಗೋಪಾಲ್ ಪತ್ನಿಯ ಆರೋಪದ ಆಧಾರದ ಮೇಲೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಗಿನ 9 ಗಂಟೆಗೆ 7 ವಿಶೇಷ ಶೋಧ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಬೆಂಗಳೂರಿನ ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಮತ್ತು ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಪೊಲೀಸರು ಅಪಹರಣಗೊಂಡ ಗೋಪಾಲರನ್ನು ಶೀಘ್ರ ಪತ್ತೆಹಚ್ಚಲು ಎಲ್ಲಾ ದಿಕ್ಕುಗಳಲ್ಲಿ ತೀವ್ರ ತನಿಖೆ ನಡೆಸುತ್ತಿದ್ದಾರೆ.

 

‘ಮನೆಗೆ ಊಟಕ್ಕೆ ಬಾ’: ಪುಟ್ಟ ಅಭಿಮಾನಿಯ ಪ್ರಶ್ನೆಗೆ ವಿಜಯ್ ದೇವರಕೊಂಡ ಮುದ್ದಾದ ಉತ್ತರ

ಟಾಲಿವುಡ್‌ನ ‘ರೌಡಿ ಬಾಯ್’ ವಿಜಯ್ ದೇವರಕೊಂಡ ಮತ್ತು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ವಿವಾಹವಾದರು. ಮದುವೆಯ ಬಳಿಕ ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಚಿತ್ರರಂಗದ ಗಣ್ಯರಿಗಾಗಿ ಅದ್ಧೂರಿ ಆರತಕ್ಷತೆ ಆಯೋಜಿಸಲಾಗಿತ್ತು.

ಈ ಸಂಭ್ರಮದ ನಡುವೆ ಪುಟ್ಟ ಅಭಿಮಾನಿಯೊಬ್ಬಳು ಕೇಳಿದ ಪ್ರಶ್ನೆ ಮತ್ತು ಅದಕ್ಕೆ ವಿಜಯ್ ದೇವರಕೊಂಡ ನೀಡಿದ ಉತ್ತರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ ಎಂಬ ಕಾರಣಕ್ಕೆ ಪುಟ್ಟ ಬಾಲಕಿಯೊಬ್ಬಳು ವಿಡಿಯೋ ಮೂಲಕ, “ನಾನು ನಿಮ್ಮ ಫ್ಯಾನ್ ಅಲ್ವಾ? ನಮಗೇನು? ನನ್ನನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುದ್ದಾಗಿ ಪ್ರಶ್ನಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಅದು ವಿಜಯ್ ದೇವರಕೊಂಡ ಗಮನಕ್ಕೂ ಬಂದಿದೆ.

ಮಹಿಳಾ ಗೌರವ ಮನೆಯಿಂದಲೇ ಆರಂಭವಾಗಬೇಕು: ನಟ ಎನ್‌ಟಿಆರ್‌

ಮಹಿಳೆಯರಿಗೆ ಗೌರವ ನೀಡುವ ಮನೋಭಾವ ಮನೆಮಟ್ಟದಿಂದಲೇ ಆರಂಭವಾಗಬೇಕು ಎಂದು ಪ್ಯಾನ್ ಇಂಡಿಯಾ ನಟ ಜೂ ಎನ್ಟಿಆರ್ ಹೇಳಿದ್ದಾರೆ.

ನಗರದ ಕಿಮ್ಸ್ ಆಸ್ಪತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಹಿಳೆಯರನ್ನು ಹೇಗೆ ನೋಡಬೇಕು ಎಂಬುದನ್ನು ಪದೇ ಪದೇ ನೆನಪು ಮಾಡಿಸಬೇಕಾದ ಪರಿಸ್ಥಿತಿ ಇರುವುದು ಬೇಸರದ ಸಂಗತಿ. ಮಹಿಳೆಯರು ಎಷ್ಟು ಮುಖ್ಯ ಎಂಬುದು ಸಹಜವಾಗಿ ಅರಿವಾಗಬೇಕು” ಎಂದರು.

ತಮ್ಮ ಇಬ್ಬರು ಪುತ್ರರು ಕೂಡ ಮಹಿಳೆಯರಿಗೆ ಗೌರವ ನೀಡುವ ವ್ಯಕ್ತಿಗಳಾಗಿಯೇ ಬೆಳೆಬೇಕು ಎಂದು ನಾನು ಖಾತ್ರಿಪಡಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ರಸ್ತೆ ಸುರಕ್ಷತೆ ಕುರಿತು ಮಾತನಾಡಿದ ಜೂ ಎನ್ಟಿಆರ್, ರಸ್ತೆ ಅಪಘಾತಗಳಿಂದ ತಮ್ಮ ಕುಟುಂಬ ದೊಡ್ಡ ನಷ್ಟ ಅನುಭವಿಸಿದೆ. ನಾನು, ನನ್ನ ದೊಡ್ಡ ಅಣ್ಣ ಹಾಗೂ ತಂದೆಯನ್ನು ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದೇವೆ. ನಾನು ಕೂಡ ಒಮ್ಮೆ ಭಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದೆ ಎಂದು ನೆನಪಿಸಿಕೊಂಡರು.

ಡ್ರೈವಿಂಗ್ ಮಾಡುವಾಗ ಕುಟುಂಬವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು. ಜವಾಬ್ದಾರಿ ಎನ್ನುವುದು ಒಳಗಿನಿಂದಲೇ ಬರಬೇಕು ಎಂದು ಸಲಹೆ ನೀಡಿದರು.

ಅಭಿಮಾನಿಗಳ ಬಗ್ಗೆ ಮಾತನಾಡಿದ ಅವರು, “ನಿಮ್ಮ ಪ್ರೀತಿಯನ್ನು ಪಡೆಯಲು ನಾನು ಅದೃಷ್ಟಶಾಲಿ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಕೋಟಿ ಕೋಟಿ ಧನ್ಯವಾದಗಳು. ಮನೆಗೆ ಸುರಕ್ಷಿತವಾಗಿ ಹೋಗಿ, ನಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ನಿಮ್ಮ ಮನೆಯಲ್ಲಿ ನಡೆಯಬಾರದು” ಎಂದು ಅಭಿಮಾನಿಗಳಿಗೆ ಮನವಿ ಮಾಡಿದರು.

2032–33ರ ವೇಳೆಗೆ ಮಹಿಳಾ ಮೀಸಲಾತಿ ಜಾರಿ ಸಾಧ್ಯ: ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ನೀಡಿರುವ 33% ಮೀಸಲಾತಿ ಮುಂದಿನ ದಿನಗಳಲ್ಲಿ ಸಂಸದೀಯ ವ್ಯವಸ್ಥೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಡಾ. ಬಾಬು ಜಗಜೀವನ ರಾಮ್ ಭವನದಲ್ಲಿ ಜೆಡಿಎಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಮಾಹಿತಿಯ ಪ್ರಕಾರ 2032–33ರ ವೇಳೆಗೆ ಮಹಿಳಾ ಮೀಸಲಾತಿ ಸಂಪೂರ್ಣವಾಗಿ ಜಾರಿಗೆ ಬರಬಹುದು ಎಂದು ತಿಳಿಸಿದರು.

33% ಮಹಿಳಾ ಮೀಸಲಾತಿ ಜಾರಿಗೆ ಬಂದರೆ ವಿಧಾನಸಭೆಯಲ್ಲಿ ಸುಮಾರು 75 ಮಹಿಳೆಯರು ಶಾಸಕರಾಗಿ ಆಯ್ಕೆಯಾಗಬಹುದು. ಎಲ್ಲ ಪಕ್ಷಗಳ ಮಹಿಳೆಯರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಹಿಳಾ ಮುಖ್ಯಮಂತ್ರಿಯೂ ಆಗುವ ಅವಕಾಶ ಇದೆ ಎಂದು ಹೇಳಿದರು.

ಇಂದಿನ ದಿನದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬರಲು ನರೇಂದ್ರ ಮೋದಿ ಅವರ ಸಂಕಲ್ಪ ಪ್ರಮುಖ ಕಾರಣ. ಇದರ ಕನಸು ಕಂಡವರು ಎಚ್.ಡಿ ದೇವೇಗೌಡ. ಮಹಿಳೆಯರ ಅಭಿವೃದ್ಧಿಗೆ ದೇವೇಗೌಡರು ಹಲವಾರು ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ 70% ಮಹಿಳಾ ಶಿಕ್ಷಕರನ್ನು ನೇಮಕ ಮಾಡಿದವರು ದೇವೇಗೌಡರು ಎಂದು ಕುಮಾರಸ್ವಾಮಿ ಹೇಳಿದರು.

error: Content is protected !!