Home Blog Page 14

ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆಕೋರರನ್ನು ಹಿಡಿಯುತ್ತೇವೆ – ಡಾ. ಜಿ. ಪರಮೇಶ್ವರ್

0

ಬೆಂಗಳೂರು: ಬೆಂಗಳೂರಿನ ಡೇರಿ ಸರ್ಕಲ್‌ ಬಳಿ ಬುಧವಾರ ಮಧ್ಯಾಹ್ನ ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿರುವ ಘಟನೆ ನಡೆದಿದೆ. ಎಟಿಎಂಗಳಿಗೆ ಹಣ ಹಾಕಲು ಹೋಗುತ್ತಿದ್ದ ಸಿಎಂಎಸ್ ವಾಹನವನ್ನು ಹೈಜಾಕ್ ಮಾಡಿ ಬಳಿಕ ಡೇರಿ ಸರ್ಕಲ್​ ಫ್ಲೈಓವರ್ ಮೇಲೆ ನಿಲ್ಲಿಸಿ ಬರೋಬ್ಬರಿ 7.11 ಕೋಟಿ ರೂ. ದೋಚಿಕೊಂಡು ಹೋಗಿದ್ದಾರೆ. ಇನ್ನು ಈ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಪ್ರತಿಕ್ರಿಯೇ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪೊಲೀಸರು ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ. ದರೋಡೆಕೋರರು ಕರ್ನಾಟಕದವರಾ? ಅವರು ಹೊರಗಿನವರಾ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಇನೋವಾ, ಸ್ವಿಫ್ಟ್ ಕಾರಿಗೆ ನಂಬರ್ ಪ್ಲೇಟ್ ಹಾಕ್ಕೊಂಡಿದ್ದರು. ಅವರು ಹೊರಗೆ ದಾಟಿದ್ದಾರಾ? ಯಾವ ವಾಹನದಲ್ಲಿ ಹಣ ಸಾಗಿಸಿದ್ದಾರೆ? ವಾಹನವು ರಾಜ್ಯದ ಹೊರಗೆ ಹೋಗಿದೆಯಾ? ಎಂದು ಹುಡುಕ್ತಿದ್ದೇವೆ.

ವಾಹನ ಬದಲಾಯಿಸಿದ್ದಾರೆ ಎಂಬುದು ಗೊತ್ತಾಗಿದೆ. ಖಂಡಿತಾ ದರೋಡೆಕೋರರನ್ನು ಹಿಡಿಯುತ್ತೇವೆ. ಘಟನೆ ವೇಳೆ ಯಾವೆಲ್ಲಾ ವಾಹನಗಳು ಓಡಾಡಿದ್ದವು? ರಾಜ್ಯದ ಹೊರಗೆ ಹೋಗಿರುವ ವಾಹನಗಳೆಷ್ಟು? ಎಲ್ಲದರ ಸಿಸಿಟಿವಿ ದೃಶ್ಯ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದರು.

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಲಕ್ಷ್ಮೇಶ್ವರ ಬಂದ್! ಬಸ್ ನಿಲ್ದಾಣ ಖಾಲಿ

0

ಗದಗ: ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಇಂದು ಲಕ್ಷ್ಮೇಶ್ವರ ಬಂದ್ʼಗೆ ಕರೆ ನೀಡಲಾಗಿದೆ. ರೈತ ಸಂಘಟನೆ, ಕನ್ನಡಪರ ಸಂಘಟನೆ, ಸ್ಬಾಮಿಜಿಗಳು, ವ್ಯಾಪಾರಸ್ಥರಿಂದ ಬಂದ್ʼಗೆ ಕರೆ ನೀಡಲಾಗದ್ದು, ಕಳೆದ 5 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವಾಗಿದೆ. ರೈತರ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಕಾರಣ ಇಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ನೀಡಿದ್ದಾರೆ.

ಬಂದ್ ಆಚರಣೆಗೆ ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಕನ್ನಡ ಸಂಘಟನೆಗಳು, ವ್ಯಾಪಾರಸ್ಥರು ಸಾಥ್ ನೀಡಿದ್ದಾರೆ. ರೈತರ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಇಂದು ಲಕ್ಷ್ಮೇಶ್ವರ ಬಂದ್ ಪ್ರಯುಕ್ತ, ಪಟ್ಟಣದ ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ರಿಂದ ರಜೆ ಘೋಷಣೆ ಆದೇಶಿಸಿದ್ದಾರೆ. ಇನ್ನು ಸ್ವಯಂ ಪ್ರೇರಿತವಾಗಿ ಲಕ್ಷ್ಮೇಶ್ವರ ಪಟ್ಟಣದ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಅಂತರ ಜಿಲ್ಲೆ ಬಸ್ ಸಂಚಾರ ಮಾತ್ರ ಆರಂಭವಾಗಿದ್ದು, ಲಕ್ಷ್ಮೇಶ್ವರ ತಾಲೂಕಿನ ಕೆಲವು ಗ್ರಾಮಗಳಿಗೆ ಬಸ್ ಸಂಚಾರ ಬಂದ್ ಆಗಿವೆ. ರೈತರ ಬೇಡಿಕೆಗಳು ಈಡೇರಿಸುವ ವರೆಗೆ ಹೋರಾಟ ಮಾಡುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ಕಲ್ಪಿಸಲಾಗಿದೆ.

ಉಡುಪಿ: ಯಕ್ಷಗಾನ ವೇಷಧಾರಿ ಹೃದಯಾಘಾತದಿಂದ ಸಾವು..!

0

ಉಡುಪಿ: ಯಕ್ಷಗಾನ ವೇಷಧಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಮೃತ ದುರ್ಧೈವಿಯಾಗಿದ್ದು, ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು.

ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ.

ಈಶ್ವರ ಗೌಡ ಅವರು ತಮ್ಮ ಪಾತ್ರ ಮುಗಿಸಿ ಇಹಲೋಕ ತ್ಯಜಿಸಿದ್ದಾರೆ. ಮಂದಾರ್ತಿ ಮೇಳದಲ್ಲಿ ತಂದೆ ಕೂಡ ವೇಷಧಾರಿಯಾಗಿದ್ದರು. ಈಶ್ವರ ಗೌಡ ಅವರು ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಪಾತ್ರ ನಿರ್ವಹಿಸಿದ್ದರು.

ಬೆಳಗಾವಿ: ಕಬ್ಬು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು!

0

ಬೆಳಗಾವಿ: ಕಬ್ಬು ಕತ್ತರಿಸುವ ಬೃಹತ್ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ  ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಜಮೀನಿನಲ್ಲಿ ನಡೆದಿದೆ.

ಸಪ್ತಸಾಗರ ಗ್ರಾಮದ ಶೋಭಾ ಶ್ರೀಕಾಂತ ಸಂಕ್ರಟ್ಟಿ (54) ಮೃತಪಟ್ಟ ಮಹಿಳೆಯಾಗಿದ್ದು,  ತಮ್ಮ ಸ್ವಂತ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ,

ಯಂತ್ರದ ಬುಡಕ್ಕೆ ಸಿಲುಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಸ್ಥಳ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

0

ಬಿಹಾರ: ಇಂದು ನಿತೀಶ್ ಕುಮಾರ್ 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಮತ್ತೊಮ್ಮೆ ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ನಿತೀಶ್ ಅವರ ಸಂಪುಟದಲ್ಲಿ ಯಾವ ಪಕ್ಷದ ಕೋಟಾದಿಂದ ಯಾವ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ನಿರ್ಧಾರವನ್ನೂ ಅಂತಿಮಗೊಳಿಸಲಾಗಿದೆ.

ನಿತೀಶ್ ಕುಮಾರ್ ಅವರ ಸಂಪುಟದ ಭಾಗವಾಗಿ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿಯೂ ಬಿಡುಗಡೆಯಾಗಿದೆ. ಹೊಸ ಸರ್ಕಾರದಲ್ಲಿ ಬಿಜೆಪಿ 14 ಸಚಿವರನ್ನು ಹೊಂದಿರುತ್ತದೆ. ಸಿಎಂ ನಿತೀಶ್ ಜೊತೆಗೆ, ಜೆಡಿಯು ಏಳು ಸಚಿವರನ್ನು ಹೊಂದಿರುತ್ತದೆ. ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ತಲಾ ಒಬ್ಬ ಸಚಿವರನ್ನು ಹೊಂದಿರುತ್ತದೆ.

ಜಿತನ್ ರಾಮ್ ಮಾಂಝಿ ಅವರ ಪುತ್ರ ಸಂತೋಷ್ ಕುಮಾರ್ ಸುಮನ್ ಅವರ ಪಕ್ಷದಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ಉಪೇಂದ್ರ ಕುಶ್ವಾಹ ಅವರ ಪುತ್ರ ದೀಪಕ್ ಪ್ರಕಾಶ್ ಅವರ ಪಕ್ಷದಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಕೂಡ ಇಬ್ಬರು ಸಚಿವರನ್ನು ಹೊಂದಲಿದೆ.

G20 ನಾಯಕರ ಶೃಂಗಸಭೆ: ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ!

0

ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು G20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ.

ನ.21 ರಿಂದ 23 ರ ವರೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ಜಿ20 ನಾಯಕರ ಶೃಂಗಸಭೆ ನಡೆಯಲಿದೆ. ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ, ವಿಪತ್ತು ಅಪಾಯ ಕಡಿತದಲ್ಲಿ ಜಿ20 ಕೊಡುಗೆ, ಹವಾಮಾನ ಬದಲಾವಣೆ ಮತ್ತು ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆಯ ಕುರಿತು ನಡೆಯುವ ಈ ಶೃಂಗಸಭೆಯ ಮೂರು ಅಧಿವೇಶನಗಳಲ್ಲಿ ಪ್ರಧಾನಿ ಮೋದಿ ಮಾತನಾಡುವ ನಿರೀಕ್ಷೆಯಿದೆ.

ಕೆಲವು ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ತನ್ನ ಬಿಳಿ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ, ಅಮೆರಿಕ ಶೃಂಗಸಭೆಯನ್ನು ಬಹಿಷ್ಕರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಹೊತ್ತಿನಲ್ಲೇ, ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾ ಆಯೋಜಿಸುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

Crime News: ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು!

0

ಹಾಸನ:- ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೇಲೂರು ಪಟ್ಟಣದಲ್ಲಿ ಜರುಗಿದೆ.

ಸ್ಪಂದನ (34) ಮೃತ ಮಹಿಳೆ. ಇವರು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಮಹಿಳೆ ಪತಿಯಿಂದ ದೂರಾಗಿ 8 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದ್ದನ್ನ ಸ್ಥಳೀಯರು ಗಮನಿಸಿದಾಗ ಈ ಪ್ರಕರಣ ಬಯಲಾಗಿದೆ.

ಮನೆಯ ಬಾಗಿಲು ತೆರೆದಿದ್ದರೂ ಯಾರ ಸುಳಿವು ಇಲ್ಲದೇ ಇದ್ದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಸ್ಪಂದನ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಸಂಪೂರ್ಣ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.

ಕೊಲೆ ಶಂಕೆ ಹಿನ್ನೆಲೆಯಲ್ಲಿ ಬೇಲೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕಿಲ್ಲರ್ ಬಿಎಂಟಿಸಿಗೆ ಬೆಳ್ಳಂ ಬೆಳಗ್ಗೆ ಮತ್ತೊಂದು ಬಲಿ: ವೃದ್ಧನ ತಲೆ ಮೇಲೆ ಬಸ್ ಚಕ್ರ ಹರಿದು ಸಾವು!

0

ಬೆಂಗಳೂರು:- ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ನಗರದಲ್ಲಿ ಜರುಗಿದೆ.

ಮಡಿವಾಳದ ಪೊಲೀಸ್ ಠಾಣೆ ಮುಂಭಾಗದಲ್ಲೇ ನಡೆದುಕೊಂಡು ಬರ್ತಿದ್ದ ವೃದ್ಧನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ವೃದ್ಧನ ತಲೆ ಮೇಲೆಯೇ ಬಸ್‌ ಹರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಡಿವಾಳ ನಿವಾಸಿ ವೆಂಕಟರಾಮಯ್ಯ ಮೃತ ದುರ್ದೈವಿ ಆಗಿದ್ದಾರೆ. ಮಡಿವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಜನರು ಅಕ್ರೋಶ ಹೊರಹಾಕಿದ್ದಾರೆ.

ಬಾರ್ ಮಾಡಲು ಅಡ್ಡಿಯಾಗಿದೆ ಅಂತ ದೇವಸ್ಥಾನವನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು!

0

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ‌ತಾಲೂಕಿನ ನಂದಗುಡಿ ಗ್ರಾಮದಲ್ಲಿ ಕಿಡಿಗೇಡಿಗಳ ಗುಂಪೊಂದು ಬಾರ್​ ಮಾಡಲು ಅಡ್ಡಿಯಾದ ಕಾರಣಕ್ಕೆ ರಾತ್ರೋ ರಾತ್ರಿ ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿದ್ದಾರೆ.

ಕಳೆದ ಕೆಲ ದಿನಗಳಿಂದ ಬಾರ್​​ಗೆ ಅನುಮತಿ ಕೋರಿ ಕೆಲವರು ಅರ್ಜಿ ಸಲ್ಲಿಸಿದ್ದರು. ಆದರೆ ಬಾರ್ ಮಾಡಲು ಉದ್ದೇಶಿಸಿರುವ ಜಾಗದ ಬಳಿಯೇ ದೇವಸ್ಥಾನವಿದೆ. ಹೀಗಾಗಿ ಅನುಮತಿ ನೀಡಬಾರದು ಎಂದು ಅಬಕಾರಿ ಇಲಾಖೆಗೆ ದೇವಸ್ಥಾನದ ಸಮಿತಿ ಅರ್ಜಿ ಹಾಕಿತ್ತು. ಇದೇ ಕಾರಣಕ್ಕೆ ದೇವಸ್ಥಾನ ಧ್ವಂಸ ಮಾಡಲಾಗಿದೆ.

ಬೆಳಿಗ್ಗೆ ವಾಕಿಂಗ್ ಬಂದಿದ್ದವರು ದೇಗುಲ ನೆಲಸಮ ಆಗಿದ್ದನ್ನು ಗಮನಿಸಿದ್ದಾರೆ. ಈ ಬಗ್ಗೆ ನಂದಗುಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರು ದೌಡಾಯಿಸಿದ್ದಾರೆ. ಪೋಲೀಸರು ಘಟನೆ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ಬಿಹಾರ ಸಿಎಂ ಆಗಿ 10ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣವಚನ!

0

ಪಾಟ್ನಾ:- ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಉನ್ನತ ಎನ್‌ಡಿಎ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಮುಖ್ಯ ವೇದಿಕೆಯ ಹೊರತಾಗಿ, ವಿಐಪಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಪೆಂಡಾಲ್‌ಗಳನ್ನು ಸಹ ನಿರ್ಮಿಸಲಾಗಿದೆ. ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ನಿತೀಶ್ ಜೊತೆಗೆ ಸುಮಾರು 20-22 ಜನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

error: Content is protected !!