ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಎನ್‌ಎಂಎಎಸ್ ಉಚಿತ ತರಬೇತಿ ಸಮಾರೋಪ ಸಮಾರಂಭವು ಸೋಮವಾರ ಪಟ್ಟಣದಲ್ಲಿ ಜರುಗಿತು.
ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ತಾಲೂಕಾ ಶಾಖೆಯಿಂದ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಸಂಘದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಅದರಲ್ಲಿ ಎನ್‌ಎಂಎಎಸ್ ಉಚಿತ ತರಬೇತಿಯೂ ಒಂದಾಗಿದೆ. ಎನ್‌ಎಂಎಎಸ್‌ನಿಂದ ಮಕ್ಕಳಿಗೆ ಹೆಚ್ಚು ಉಪಯೋಗವಾಗಲಿದ್ದು, ಅವರ ಭವಿಷ್ಯಕ್ಕೆ ಸಹಾಯಕಾರಿಯಾಗುತ್ತದೆ. ಲಕ್ಷ್ಮೇಶ್ವರ ತಾಲೂಕು ಶಾಖೆಯು ಗದಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಮಾದರಿಯೆಂದು ಸಂತಸ ವ್ಯಕ್ತಪಡಿಸಿದರು.
ನಿಕಟಪೂರ್ವ ಅಧ್ಯಕ್ಷ ರವಿ ಗುಂಜೀಕರ ಮಾತನಾಡಿ, ನೌಕರರಿಗೆ ಅನುಕೂಲವಾಗುವ ರೀತಿ ಸಂಘಟನೆಯ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತಾಲೂಕಾಧ್ಯಕ್ಷ ಗುರುರಾಜ ಹವಳದ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕಿ ನಾಯಕ, ಎಂ.ಎ. ನಿಟ್ಟಾಲಿ, ಜಿಲ್ಲಾ ಉಪಾಧ್ಯಕ್ಷ ಶ್ರೀಧರ್, ಜಿಲ್ಲಾ ಕಾರ್ಯದರ್ಶಿ ಮಲಕಶೆಟ್ಟಿ, ಆಯ್.ಎ. ಗಾಡಗೋಳಿ, ತಾಲೂಕಾ ಕಾರ್ಯದರ್ಶಿ ಎಂ.ಎ. ನದಾಫ್, ರಾಜ್ಯ ಪರಿಷತ್ ಸದಸ್ಯ ಎ.ಬಿ. ಗೌಡರ, ಎಮ್.ಡಿ. ವಾರದ, ಎಂ.ಎಸ್. ಹಿರೇಮಠ, ಎಲ್.ಎನ್. ನಂದೆಣ್ಣವರ, ಮಂಜುನಾಥ ಕೊಕ್ಕರಗುಂದಿ, ಬಿ.ಎಂ. ಯರಗುಪ್ಪಿ, ಫಕೀರಪ್ಪ ಹೂಗಾರ್, ಮಹಮ್ಮದ್‌ಹನೀಫ್ ಶಿರಹಟ್ಟಿ, ಎ.ಎಮ್. ಅಕ್ಕಿ, ಪ್ರಶಾಂತ ಸನದಿ ಇದ್ದರು. ನವೀನ ಅಂಗಡಿ ನಿರೂಪಿಸಿದರು.

