Home Blog Page 15

ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಸಿ: ಕಿಡಿಗೇಡಿಯನ್ನು ಕೂಡಲೇ ಬಂಧಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿ ನಗರದ ಮಚ್ಚೆ ಆವರಣದಲ್ಲಿ ಅಪ್ಪಟ ದೇಶಭಕ್ತ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಸಿ ಬಳಿದಿರುವ ಕಿಡಿಗೇಡಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕ್ರಾಂತಿಸೇನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ ಹಬೀಬ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಪ್ಪಟ ದೇಶಭಕ್ತ, ದೇಶದ ಉಳಿವಿಗಾಗಿ, ಕನ್ನಡ ನೆಲ-ಜಲಕ್ಕಾಗಿ ಬ್ರಿಟಿಷರ ವಿರುದ್ಧ ಸಮರ ಸಾರಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವ ಅಪ್ರತಿಮ ಕ್ರಾಂತಿಕಾರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಸಿ ಬಳಿದಿರುವ ಘಟನೆ ನಡೆದಿದೆ. ಇದು ಅತ್ಯಂತ ಖಂಡನೀಯ. ಇದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅಭಿಮಾನಿಗಳಿಗೆ ಹಾಗೂ ದೇಶಾಭಿಮಾನಿಗಳಿಗೆ ತುಂಬಾ ಆಘಾತ ಉಂಟು ಮಾಡಿದೆ. ಈ ಕೂಡಲೇ ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳು кಿಡಿಗೇಡಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪುಲಿಗೆರೆ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಆಶ್ರಯದಲ್ಲಿ ಭಾರತೀಯ ವಿದ್ಯಾಭವನದಿಂದ ನಡೆಯುತ್ತಿರುವ ಪುಲಿಗೆರೆ ಉತ್ಸವದ ಮೊದಲ ದಿನ ಸಂಜೆ ಕಾರ್ಯಕ್ರಮದಲ್ಲಿ ಸಿದ್ದಾಪುರದ ಕೊಳಗಿ ಕೇಶವ ಹೆಗಡೆ ತಂಡದವರು ಸಾದರಪಡಿಸಿದ ಯಕ್ಷಗಾನ ನೃತ್ಯ ವೈಭವ ನೋಡುಗರ ಮೈನವಿರೇಳಿಸಿತು.

ಕಲಾವಿದರು ಕೃಷ್ಣಾರ್ಜುನರ ಕಾಳಗದ ಪ್ರಸಂಗ ಆಯ್ದುಕೊಂಡು ಪ್ರಸ್ತುತಪಡಿಸಿದ ಯಕ್ಷಗಾನ ಅತ್ಯಂತ ಮನಮೋಹಕವಾಗಿತ್ತು. ಗಯಗಂಧರ್ವನು ಯಜ್ಞವನ್ನು ಅಪವಿತ್ರಗೊಳಿಸಿದ ಹಿನ್ನೆಲೆಯಲ್ಲಿ ಕುಪಿತನಾದ ಶ್ರೀಕೃಷ್ಣ ಅವನನ್ನು ಎಂಟು ದಿನಗಳಲ್ಲಿ ಸಂಹರಿಸುವುದಾಗಿ ಶಪಥ ಮಾಡುತ್ತಾನೆ. ಇದನ್ನರಿತ ಗಯಗಂಧರ್ವ ಭಯಪಟ್ಟು ನನ್ನನ್ನು ಕಾಪಾಡು ಎಂದು ಅರ್ಜುನನಲ್ಲಿ ಮೊರೆ ಇಡುತ್ತಾನೆ. ಇದು ಕೃಷ್ಣಾರ್ಜುನರ ಕಾಳಗಕ್ಕೆ ಕಾರಣವಾಗಿರುತ್ತದೆ. ಈರ್ವರು ಕಲಾವಿದರು ಸನ್ನಿವೇಶ, ಸಂಗೀತಕ್ಕೆ ತಕ್ಕಂತೆ ನೃತ್ಯ ಮಾಡಿ ಎಲ್ಲರ ಮನ ಸೆಳೆದರು.

ಬಳಿಕ ಶಿಗ್ಗಾವಿಯ ಬಸವೇಶ್ವರ ನೃತ್ಯ ಶಾಲೆಯ ಶರಣ ಶೇಖಪ್ಪ ಬಡ್ಡಿ ಮತ್ತು ತಂಡದವರು ಪ್ರದರ್ಶಿಸಿದ ಭರತನಾಟ್ಯ ಪ್ರದರ್ಶನ ನಾಟ್ಯ ಲೋಕವನ್ನೇ ಸೃಷ್ಟಿಸಿತ್ತು. ಯುವ ಕಲಾವಿದ ಶರಣ ಈವರೆಗೆ 500 ವೇದಿಕೆಗಳಲ್ಲಿ ತಮ್ಮ ಭರತನಾಟ್ಯ ಪ್ರದರ್ಶಿಸಿ ಕಲಾರಸಿಕರ ಮೆಚ್ಚುಗೆ ಗಳಿಸಿದ್ದಾರೆ. ಆರಂಭದಲ್ಲಿ ಸಾದರಪಡಿಸಿದ ಸ್ವಾಗತ ನೃತ್ಯ, ಸುಂದರವಾಗಿ ಮೂಡಿ ಬಂದಿತು. ನಂತರ ಗಣಪನ ಪೂಜಾ ನೃತ್ಯ ವೈಭವ ಮತ್ತು ಸಭಿಕರಿಗೆ ಹೂಗಳ ಸಮರ್ಪಣೆ ನೃತ್ಯವಂತೂ ಅದ್ಭುತವಾಗಿ ಮೂಡಿ ಬಂದಿತು.

ನಂತರ ಸ್ಥಳೀಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಡಾ. ಅರ್ಜುನ ವಠಾರ ಅವರು ಹಿಂದೂಸ್ತಾನಿ ಸಂಗೀತ ಪ್ರಸ್ತುತಪಡಿಸಿದರು. ಅವರು ಬಳಿಕ ದಾಸರ ಪದಗಳನ್ನು ಹಾಡಿ ಸಂಗೀತ ಪ್ರೇಮಿಗಳ ಮನಸೂರೆಗೊಂಡರು.

ಟ್ರಾಕ್ಟರ್‌ನಲ್ಲಿ ಟೇಪ್ ಹಾಕಿದರೆ ಎಚ್ಚರ!

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಇನ್ನು ಮುಂದೆ ನಿಮ್ಮ ಟ್ರಾಕ್ಟರ್‌ಗಳಲ್ಲಿ ಟೇಪ್ ಹಾಕಿಕೊಂಡು ಜೋರಾಗಿ ಹಾಡುಗಳನ್ನು ಕೂಗಿಸುತ್ತ ಪಟ್ಟಣದಲ್ಲಿ, ಊರುಗಳಲ್ಲಿ, ಗ್ರಾಮಗಳಲ್ಲಿ ತಿರುಗಾಡುತ್ತಿದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ಇನ್ನು ಮುಂದೆ ನರೇಗಲ್ಲ ಪೊಲೀಸರು ನಿಮ್ಮ ಟೇಪ್‌ಗಳನ್ನು ವಶಪಡಿಸಿಕೊಳ್ಳುತ್ತಾರೆ, ನಿಮಗೆ ದಂಡ ಹಾಕುತ್ತಾರೆ, ಇದಕ್ಕೂ ನೀವು ಬಗ್ಗದಿದ್ದರೆ ನಿಮ್ಮ ಗಾಡಿಯನ್ನೇ ಸೀಜ್ ಮಾಡುತ್ತಾರೆ.

ನರೇಗಲ್ಲ ಪಟ್ಟಣ ಮತ್ತು ಗ್ರಾಮಗಳಲ್ಲಿ ಟ್ರಾಕ್ಟರ್ ಹಾಡಿನ ಹಾವಳಿ ಹೆಚ್ಚಾಗಿದೆ. ಹಿಂದೆ ಬರುವ ವಾಹನದವರು ಎಷ್ಟೇ ಹಾರ್ನ್ ಮಾಡಿದರೂ ಕೇಳಿಸದ ಟ್ರಾಕ್ಟರ್ ಚಾಲಕರು ಹಾಗೇ ಸಾಗುತ್ತ ಅನೇಕ ಅನಾಹುತಗಳಿಗೆ ಮತ್ತು ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದಕ್ಕಾಗಿ ಈ ಕಠಿಣ ಕ್ರಮವನ್ನು ತೆಗೆದುಕೊಳ್ಳಲೇಬೇಕಾಗಿದೆ ಎಂದು ಪಿಎಸ್‌ಐ ಐಶ್ವರ್ಯ ನಾಗರಾಳ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಜೋರಾಗಿ ಹಾಡುಗಳನ್ನು ಹಾಕಿಕೊಂಡು ಓಡಾಡುವುದರಿಂದ ಹೃದಯ ರೋಗಿಗಳಿಗೆ, ಚಿಕ್ಕ ಮಕ್ಕಳಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಇನ್ನಿಲ್ಲದ ತೊಂದರೆಯಾಗುತ್ತಿರುವುದನ್ನು ಮನಗಂಡು ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ಮೂರು ದಿನಗಳಿಂದ ತಾವು ಮತ್ತು ತಮ್ಮ ಸಿಬ್ಬಂದಿಯವರು ಇಂತಹ ಟ್ರಾಕ್ಟರ್ ಚಾಲಕರನ್ನು ಹಿಡಿದು ಜಾಗೃತಿ ಮೂಡಿಸುತ್ತಿದ್ದೇವೆ. ಇನ್ನು ಎರಡು ಮೂರು ದಿನದೊಳಗೆ ಎಲ್ಲ ಟ್ರಾಕ್ಟರ್ ಚಾಲಕರು ಅಥವಾ ಮಾಲೀಕರು ತಮ್ಮ ಟೇಪ್‌ಗಳನ್ನು ಪಟ್ಟಣದೊಳಗೆ ಬಂದ್ ಮಾಡಿಕೊಳ್ಳದಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದರು.

ಅವಶ್ಯಕತೆಗೆ ಅನುಗುಣವಾಗಿ ವಿದ್ಯುತ್ ಬಳಕೆ ಮಾಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಎಚ್.ಟಿ. ಗ್ರಾಹಕರು ತಮ್ಮ ಉದ್ಯಮಗಳಿಗೆ ಅವಶ್ಯಕತೆ ತಕ್ಕಂತೆ ವಿದ್ಯುತ್ ಬಳಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಎಚ್.ಟಿ. ವಿದ್ಯುತ್ ಗ್ರಾಹಕರು ಸಿಜನಲ್ ಬೆಳೆಗಳ ಕೈಗಾರಿಕೆಗಳಿಗೆ ವರ್ಷದಲ್ಲಿ ಎರಡು ಬಾರಿ ಸಿಜನಲ್ ವಿದ್ಯುತ್ ಬಳಕೆ ಕಡಿಮೆ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಇಲಾಖೆಯಿಂದ ಎಚ್.ಟಿ. ಗ್ರಾಹಕರಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ಬಿಲ್ ನೀಡಲಾಗುತ್ತದೆ ಮತ್ತು ಸರಿಯಾದ ಸಮಯಕ್ಕೆ ವಿದ್ಯುತ್ ಬಿಲ್ ಪಾವತಿ ಮಾಡುವುದರಿಂದ ಯಾವುದೇ ದಂಡ ಇರುವುದಿಲ್ಲ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನಾ ವಿಭಾಗದ ಗದಗ ಅಧೀಕ್ಷಕ ಅಭಿಯಂತರರಾದ ನಜ್ಮುನ್ನಿಸಾ ಕೆ. ಅಲ್ಲಾವಲ್ಲಿ ತಿಳಿಸಿದರು.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಎಚ್.ಟಿ. ಗ್ರಾಹಕರ ಕುಂದು-ಕೊರತೆಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾದ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ರಾಜೇಶ ಬಿ. ಕಲ್ಯಾಣಶೆಟ್ಟಿ ಮಾತನಾಡುತ್ತಾ, ಒಂದು ಉದ್ಯಮ ನಡೆಯಬೇಕಾದರೆ ವಿದ್ಯುತ್ ಅವಶ್ಯಕತೆ ಇರುತ್ತದೆ. 2003ರಲ್ಲಿ ಕೆ.ಇ.ಆರ್.ಸಿ.ಯವರು ಹೆಸ್ಕಾಂಗೆ ಲೈಸನ್ಸ್ ನೀಡಿದ್ದು, ನಾವು ಅವರ ಅದೇಶದ ಮೇಲೆ ವಿದ್ಯುತ್ ಸರಬರಾಜು ಮಾಡುತ್ತೇವೆ. ದರವನ್ನು ಕೂಡಾ ಕೆ.ಇ.ಆರ್.ಸಿ.ಯವರು ನಿಗದಿ ಪಡಿಸುತ್ತಾರೆ. 150 ಎಚ್.ಪಿ. ಮೇಲೆ ಇದ್ದರೆ ಎಚ್.ಟಿ.ಗೆ ಹೋಗಬೇಕಾಗುತ್ತದೆ. ಪಡೆದ ವಿದ್ಯುತ್‌ನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೇ ಇದ್ದರೆ ಅದು ಉದ್ಯಮಿಗಳಿಗೆ ನಷ್ಟವಾಗುತ್ತದೆ ಎಂದು ತಿಳಿಸಿದರು.

ಹೆಸ್ಕಾಂ ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ವೀರೇಶ ಟಿ. ರಾಜೂರ್ ಮಾತನಾಡುತ್ತಾ, ಎಚ್.ಟಿ. ಗ್ರಾಹಕರು ತಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ ಅವುಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಸರ್ಕಾರವು ಉದ್ಯಮಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ಅವುಗಳನ್ನು ಸಮಪರ್ಕವಾಗಿ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಸಂಸ್ಥೆಯ ವಿದ್ಯುತ್ ಉಪ ಸಮಿತಿ ಚೇಯರ್ಮನ್ ಉದಯರವಿ ಸ್ವಾಗತಿಸುವ ಮೂಲಕ ಎಚ್.ಟಿ. ಗ್ರಾಹಕರ ತೊಂದರೆಗಳು ಸಾಕಷ್ಟು ಇದ್ದು ಅವುಗಳನ್ನು ಪರಿಹರಿಸಿಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಸಂಸ್ಥೆಯ ಸಹ ಗೌರವ ಕಾರ್ಯದರ್ಶಿಗಳಾದ ರಾಘವೇಂದ್ರ ಎಸ್. ಕಾಲವಾಡ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಜಯದೇವ ಎಂ. ಮೆಣಸಗಿ ವಂದಿಸಿದರು. ಸಭೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಉದ್ದಿಮೆದಾರರು ಮತ್ತು ಹೆಸ್ಕಾಂ ಅಧಿಕಾರಿಗಳು ಪಾಲ್ಗೊಂಡಿದ್ದರೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಚನ್ನವೀರಪ್ಪ ಪ್ರಭಣ್ಣ ಹುಣಸಿಕಟ್ಟಿ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಸಂಗಪ್ಪ ಗುಡಿಮನಿ ಮಾತನಾಡುತ್ತಾ, ಒಂದು ಉದ್ಯಮವನ್ನು ನಡೆಸಬೇಕಾದರೆ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಉದ್ದಿಮೆದಾರರಿಗೆ ಯಾವುದೇ ರೀತಿಯಿಂದ ಹೊರೆ ಮಾಡಬಾರದು. ಸರ್ಕಾರದಿಂದ ಉದ್ಯಮಗಳಿಗೆ ರೂ. 4 ದರದಲ್ಲಿ ವಿದ್ಯುತ್ ಪೂರೈಕೆ ಮಾಡಿದರೆ ಹೆಚ್ಚಿನ ಅನುಕೂಲವಾಗುತ್ತದೆ. ಇನ್ನು ಉದ್ಯಮವು ತೊಂದರೆಗೆ ಒಳಗಾದ ಸಂದರ್ಭದಲ್ಲಿ ವಿದ್ಯುತ್ ಬಿಲ್‌ನ್ನು ನಿಗದಿತ ಸಮಯಕ್ಕಿಂತ ವಿಳಂಬವಾದಲ್ಲಿ ಬಡ್ಡಿರಹಿತವಾಗಿ ಬಿಲ್‌ನ್ನು ಆಕರಣೆ ಮಾಡಬೇಕೆಂದು ವಿನಂತಿಸಿದರು.

ಕೊಲೆ ಆರೋಪಿ ಕಮಲಾಕರ್ ಭಟ್ ಗೆ ಮತ್ತೊಂದು ಸಂಕಷ್ಟ; ದಾಖಲಾಯ್ತು ಪೋಕ್ಸೋ ಕೇಸ್!

0

ಕಾರವಾರ:- ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಹೀಗಾಗಿ ಸದ್ಯ ಜೈಲಿನಿಂದ ಹೊರಬರುವುದು ಭಾರೀ ಕಷ್ಟವಾಗಿದೆ.

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ ಸದ್ಯ ಜೈಲು ಸೇರಿದ್ದಾರೆ. ಈ ಮಧ್ಯೆ ಅವರ ವಿರುದ್ಧ ಇನ್ನೊಂದು ಕೇಸ್ ದಾಖಲಾಗಿದ್ದು, ಭಾರೀ ಸಂಕಷ್ಟ ತಂದೊಡ್ಡಿದೆ.

ಜನರ ಬದುಕು ಬದಲಿಸಿದ ಗ್ಯಾರಂಟಿ ಯೋಜನೆಗಳು: ಸಚಿವ ಸಂತೋಷ ಲಾಡ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅವರು ಶುಕ್ರವಾರ ಬೆಳಿಗ್ಗೆ ಕಲಘಟಗಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‌ಇಡಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಗೀತೆಗಳನ್ನು ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು. ಅವರ ಈ ಸರಳ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.

ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಮಾತನಾಡಿದರು. ವಾರ್ತಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ತಾ ಇಲಾಖೆಯ ಮನೋಜ ಮಸನಿ ವಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಸೀಲ್ದಾರ ಬಸವರಾಜ ಹೊಂಕಣನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಾಯ್. ಸಾವಂತ, ಕಲಘಟಗಿ ಪ.ಪಂ ಮುಖ್ಯಾಧಿಕಾರಿ ಚಂದ್ರಶೇಖರ ಬಿ, ಸಿಪಿಐ ಶ್ರೀಶೈಲ ಕೌಜಲಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.

ಕಾಂಗ್ರೆಸ್ ಸರ್ಕಾರ ಬಡವರ ಲೂಟಿ ಮಾಡುತ್ತಿದೆ: ರಾಜು ಕುರುಡಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ನಿಯಮಗಳನ್ನು ಕಠಿಣಗೊಳಿಸಿ ಬಡವರಿಗೆ ಸೂಕ್ತ ಸಮಯದಲ್ಲಿ ಸೇವೆ ದೊರೆಯದಂತೆ ಮಾಡಿದ್ದು, ಇದು ಘೋರ ಅನ್ಯಾಯ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಮತ್ತು ಎಂಆರ್‌ಐ ಸೇವೆ ಒದಗಿಸಲಾಗುತ್ತಿದೆ. ಆದರೆ ಜಿಲ್ಲಾ ಆಸ್ಪತ್ರೆಗಳಲ್ಲಿ ಬಡವರಿಗೆ ಸರಿಯಾಗಿ ಸೌಲಭ್ಯ ಸಿಗುತ್ತಿಲ್ಲ. ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಶುಲ್ಕ ಪಾವತಿಸಲಾಗದೆ ರೋಗಿಗಳು ಪರದಾಡುತ್ತಿದ್ದಾರೆ. ಬಡವರು ಜಿಲ್ಲಾಸ್ಪತ್ರೆಗಳಲ್ಲಿ ಸೌಲಭ್ಯವಿಲ್ಲದ ಕಾರಣ ಬೇರೆ ನಗರಗಳಿಗೆ ಅಲೆಯುವಂತಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಪ್ರತಿನಿತ್ಯ 35ರಿಂದ 80 ಎಂಆರ್‌ಐ ಸ್ಕ್ಯಾನಿಂಗ್ ನಡೆಯುತ್ತಿದ್ದವು. ಈಗ 3ರಿಂದ 13 ಸ್ಕ್ಯಾನಿಂಗ್ ಮಾತ್ರ ಸಾಧ್ಯವಾಗುತ್ತಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಡಯಾಗ್ನೋಸ್ಟಿಕ್ ಸೇವೆ ಒದಗಿಸಲು ಪಿಪಿಪಿ ಮಾದರಿ ಜಾರಿಗೊಳಿಸಿ ಗುತ್ತಿಗೆ ನೀಡಲಾಗಿದೆ. ಹಿಂದೆ ತಜ್ಞ ವೈದ್ಯರು ಸೂಚಿಸಿದರೆ ಸ್ಕ್ಯಾನಿಂಗ್ ನಡೆಯುತ್ತಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಎಸ್‌ಎಎಸ್‌ಟಿ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ ಬಳಿಕ ಸಮಸ್ಯೆ ಸೃಷ್ಟಿಯಾಗಿದೆ. ವಿವರಗಳನ್ನು ನಿಗದಿತ ತಂತ್ರಾಂಶದಲ್ಲಿ ಟ್ರಸ್ಟ್‌ಗೆ ರವಾನಿಸಿ ಅನುಮತಿ ಪಡೆಯಲು ರೋಗಿಗಳ ರೇಷನ್ ಮತ್ತು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಅಪಘಾತದ ಸಂದರ್ಭದಲ್ಲಿ ಮತ್ತು ಆಧಾರ್ ಕಾರ್ಡ್ ಇಲ್ಲದೆ ಬೇರೆ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರು ನರಳಾಡುವ ಸ್ಥಿತಿ ಎದುರಾಗಿದೆ.

ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವುದು ಬಡಜನರ ಸೇವೆ ಮಾಡಲು. ಆದರೆ ಸೇವೆ ಮಾಡುವುದನ್ನು ಬಿಟ್ಟು ಲೂಟಿ ಹೊಡೆಯುತ್ತಾ ಅಡ್ಡಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮುಂದೆ ಬರುವ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ (ರಾಜು) ಕುರುಡಗಿ ಚಾಟಿ ಬೀಸಿದ್ದಾರೆ.

ಬೆಂಗಳೂರು| 437 ಕೋಟಿ ರೂ. ಆಸ್ತಿ ತೆರಿಗೆ ಬಾಕಿ; ಹರಾಜು ಪ್ರಕ್ರಿಯೆ ಆರಂಭಿಸಿದ ಜಿಬಿಎ!

0

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 7,020 ಆಸ್ತಿಗಳಲ್ಲಿ 437.55 ಕೋಟಿ ರೂ. ಆಸ್ತಿ ತೆರಿಗೆ ಬಾಕಿಯಾಗಿ ಉಳಿದಿರುವ ಹಿನ್ನೆಲೆಯಲ್ಲಿ ಇಂದು ಆಸ್ತಿ ಹರಾಜು ಪ್ರಕ್ರಿಯೆ ಆರಂಭವಾಗಿದೆ.

ನಗರ ಪಾಲಿಕೆಗಳ ಜಂಟಿ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಹರಾಜು ನಡೆಯುತ್ತಿದೆ. SMS, IVRS ಕರೆಗಳು ಮತ್ತು ಸ್ಥಳೀಯ ಫಾಲೋ-ಅಪ್ ಮಾಡಿದರೂ ಹಲವರು ಪಾವತಿಸಿಲ್ಲ. 60 ದಿನಗಳಿಗಿಂತ ಹೆಚ್ಚು ಕಾಲ ಪಾವತಿ ಆಗದ ಕಾರಣ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 ಅನ್ವಯ ಆಸ್ತಿಗಳನ್ನು ಹರಾಜಿಗೆ ಇಡಲಾಗಿದೆ. ಹರಾಜು ಆರಂಭಕ್ಕೂ ಮುನ್ನ ಬಾಕಿದಾರರಿಗೆ ಬಾಕಿ ಪಾವತಿಸಲು ಅವಕಾಶವಿದ್ದು, ಪಾವತಿಸಿದಲ್ಲಿ ಹರಾಜು ರದ್ದುಪಡಿಸಲಾಗುತ್ತದೆ.

ಹರಾಜು ಪ್ರಾರಂಭವನ್ನು ಹೆಚ್ಚು ಬಾಕಿ ಇರುವ ಪಾಲಿಕೆಗಳಿಂದ ಮಾಡಲಾಗಿದೆ. ಇಂದಿನ ಹರಾಜಿನಲ್ಲಿ ಮಾರಾಟವಾದ ಆಸ್ತಿಗಳು ಉತ್ತರ ನಗರ ಪಾಲಿಕೆ – 2, ಪೂರ್ವ ನಗರ ಪಾಲಿಕೆ – 5.
ಪಾಲಿಕೆವಾರು ಬಾಕಿ ತೆರಿಗೆ ವಿವರ ಪ್ರಕಾರ, ಪೂರ್ವ ನಗರ ಪಾಲಿಕೆಗೆ 1,615 ಆಸ್ತಿಗಳಿಂದ 119.90 ಕೋಟಿ, ಪಶ್ಚಿಮಕ್ಕೆ 1,504 ಆಸ್ತಿಗಳಿಂದ 84.23 ಕೋಟಿ, ಕೇಂದ್ರಕ್ಕೆ 1,398 ಆಸ್ತಿಗಳಿಂದ 81.26 ಕೋಟಿ, ಉತ್ತರಕ್ಕೆ 1,156 ಆಸ್ತಿಗಳಿಂದ 79.83 ಕೋಟಿ ಮತ್ತು ದಕ್ಷಿಣಕ್ಕೆ 1,347 ಆಸ್ತಿಗಳಿಂದ 72.30 ಕೋಟಿ ಬಾಕಿ ಉಳಿದಿದೆ.

ಜಿಬಿಎ ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ಸೂಚಿಸಿದ್ದು, ಹರಾಜು ನೋಟಿಸ್ ಪಡೆದ ಎಲ್ಲಾ ಬಾಕಿದಾರರು ತಕ್ಷಣ ತಮ್ಮ ಬಾಕಿ ತೆರಿಗೆ ಪಾವತಿಸಬೇಕು. ಹರಾಜು ಮುಂದಿನ ದಿನಗಳಲ್ಲಿ ನಿಯಮಿತವಾಗಿ ನಡೆಯಲಿದೆ ಎಂದಿದ್ದಾರೆ.

ಮೈಸೂರು| ಶಾರ್ಟ್ ಸಕ್ರ್ಯೂಟ್‍ನಿಂದ ಹೊತ್ತಿ ಉರಿದ ನರ್ಸಿಂಗ್ ಕಾಲೇಜ್!

0

ಮೈಸೂರು:- ನರ್ಸಿಂಗ್ ಕಾಲೇಜ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡ ಹೊತ್ತಿ ಉರಿದಿರುವ ಘಟನೆ ನಗರದ ದೇವೇಗೌಡ ಸರ್ಕಲ್‍ನಲ್ಲಿ ಜರುಗಿದೆ.

ಶಾಸಕ ಡಾ. ಚಂದ್ರು ಲಮಾಣಿ ಮೇಲೆ ‘ಲೋಕಾ’ ದಾಳಿ ಬೆನ್ನಲ್ಲೇ ಹೈಡ್ರಾಮಾ; ಆಸ್ಪತ್ರೆ ಎದುರು ಬಿಜೆಪಿ ಕಾರ್ಯಕರ್ತರ ಆಕ್ರೋಶ, ಖಾಕಿ ಬಂದೋಬಸ್ತ್!

ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಇಡೀ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಸಕ ಡಾ. ಚಂದ್ರು ಲಮಾಣಿ ಮೇಲೆ ‘ಲೋಕಾ’ ದಾಳಿ ಬೆನ್ನಲ್ಲೇ ಹೈಡ್ರಾಮಾ; ಆಸ್ಪತ್ರೆ ಎದುರು ಬಿಜೆಪಿ ಕಾರ್ಯಕರ್ತರ ಆಕ್ರೋಶ, ಖಾಕಿ ಬಂದೋಬಸ್ತ್!

0

ಗದಗ:-ಕಮಿಷನ್ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಭಾರೀ ಹೈಡ್ರಾಮಾವೇ ನಡೆದಿದೆ.

ಎಸ್, ಲೋಕಾ ದಾಳಿ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಆಸ್ಪತ್ರೆ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಣಾಮ ಪರಿಸ್ಥಿತಿ ಉದ್ವಿಗ್ನವಾಗಿದೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ದ ಇದೇ ವೇಳೆ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಗದಗ: ಕಮಿಷನ್ ಆರೋಪದ ಮೇಲೆ ಶಾಸಕರ ವಿರುದ್ಧ ಲೋಕಾಯುಕ್ತ ದಾಳಿ – ಮೂವರು ರೆಡ್ ಹ್ಯಾಂಡ್ ಬಂಧನ

ಶಾಸಕರ ಮೇಲೆ ಲೋಕಾಯುಕ್ತ ದಾಳಿ ಮಾಡಲು ಸಚಿವ ಎಚ್ ಕೆ ಪಾಟೀಲ್ ಅವರ ಕುತಂತ್ರ ಕಾರಣ ಎಂದು ಈ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು. “ನಮ್ಮನ್ನು ತಳ್ಳಬೇಡಿ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಕಾರ್ಯಕರ್ತರು “ದಲಿತ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. ಘಟನೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ತಿಳಿದು ಬಂದಿದೆ.

error: Content is protected !!