Home Blog Page 153

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ

0

ಅಸ್ಸಾಂ: ಬಿಜೆಪಿ ದೇಶದ ಜನರ ಮೊದಲ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ನಕಾರಾತ್ಮಕ ರಾಜಕೀಯವನ್ನು ದೇಶದ ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದರು. ಮುಂಬೈನಲ್ಲಿ ಕಾಂಗ್ರೆಸ್ ಈಗ ನಾಲ್ಕನೇ ಅಥವಾ ಐದನೇ ಸ್ಥಾನಕ್ಕೆ ಕುಸಿದಿದೆ. ವರ್ಷಗಳ ಆಡಳಿತದ ನಂತರವೂ ಮಹಾರಾಷ್ಟ್ರವನ್ನು ಕಾಂಗ್ರೆಸ್ ಹಾಳು ಮಾಡಿದೆ. ಯಾವುದೇ ಅಭಿವೃದ್ಧಿ ದೃಷ್ಟಿಕೋನವಿಲ್ಲದ ಕಾಂಗ್ರೆಸ್ ಅಸ್ಸಾಂಗೆ ಅಥವಾ ಕಾಜಿರಂಗಕ್ಕೆ ಒಳಿತನ್ನು ತರಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಳೆದ ಒಂದೂವರೆ ವರ್ಷಗಳಲ್ಲಿ ಬಿಜೆಪಿಯ ಮೇಲಿನ ಜನರ ವಿಶ್ವಾಸ ನಿರಂತರವಾಗಿ ಹೆಚ್ಚಾಗಿದೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣೆಯಲ್ಲಿ, 20 ವರ್ಷಗಳ ನಂತರವೂ ಜನರು ಬಿಜೆಪಿಗೆ ದಾಖಲೆಯ ಮತಗಳನ್ನು ನೀಡಿದ್ದು, ಪಕ್ಷ ದಾಖಲೆಯ ಸ್ಥಾನಗಳನ್ನು ಗಳಿಸಿದೆ ಎಂದು ಮೋದಿ ಹೇಳಿದರು.

ಕಾಜಿರಂಗ ಅಸ್ಸಾಂನ ಆತ್ಮವಾಗಿದ್ದು, ಕೇವಲ ರಾಷ್ಟ್ರೀಯ ಉದ್ಯಾನವಲ್ಲ ಎಂದು ಪ್ರಧಾನಿ ಹೇಳಿದರು. ಇದು ಭಾರತದ ಜೀವವೈವಿಧ್ಯದ ಅಮೂಲ್ಯ ಸಂಪತ್ತಾಗಿದ್ದು, ಯುನೆಸ್ಕೋ ವಿಶ್ವ ಪರಂಪರಾ ತಾಣವಾಗಿ ಗುರುತಿಸಿದೆ. ಬೋಡೋ ಸಮುದಾಯದ ಯುವತಿಯರು ಬಾಗೂರುಂಬಾ ನೃತ್ಯದ ಮೂಲಕ ಹೊಸ ದಾಖಲೆ ನಿರ್ಮಿಸಿದ್ದು, 10,000ಕ್ಕೂ ಹೆಚ್ಚು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

0

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಶಶಿಕುಮಾರ್ ಶಿವಾನಂದ (19) ಎಂದು ಗುರುತಿಸಲಾಗಿದೆ.

ಆತ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಶಶಿಕುಮಾರ್ ಖಾಸಗಿ ಕಾಲೇಜಿನ ಕಟ್ಟಡದ ಮೇಲ್ಭಾಗದಲ್ಲಿ ಗಾಳಿಪಟ ಹಾರಿಸುತ್ತಿದ್ದನು. ಈ ವೇಳೆ ಗಾಳಿಪಟದ ದಾರ ತುಂಡಾಗಿ ಹಾರಿಹೋಗಿದ್ದು,

ಅದನ್ನು ಹಿಡಿಯಲು ಮುಂದಾದಾಗ ಆಯತಪ್ಪಿ ಕಟ್ಟಡ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿಲ್ಲ: CM ಸಿದ್ದರಾಮಯ್ಯ ವಾಗ್ದಾಳಿ

0

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧ ಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.

ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.

ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಚಿನ್ನಸ್ವಾಮಿ ಮೈದಾನದಲ್ಲಿ IPL ಆಟಕ್ಕೆ ಷರತ್ತುಬದ್ಧ ಅನುಮತಿ: ಸಚಿವ ಜಿ. ಪರಮೇಶ್ವರ್

0

ಬೆಂಗಳೂರು: ಜನರಿಗೆ ನಿರಾಶೆ ಉಂಟಾಗಬಾರದು ಎಂಬ ಉದ್ದೇಶದಿಂದ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುನ್ಹಾ ಸಮಿತಿ ಕೆಲವು ಶಿಫಾರಸ್ಸುಗಳನ್ನು ಮಂಡಿಸಿದ್ದರು. ಆ ಶಿಫಾರಸ್ಸಿನ ಪ್ರಕಾರ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚಿಸಿ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಲಾಗಿತ್ತು. “ನಾವು ಶಿಫಾರಸ್ಸುಗಳನ್ನು ಕೆಎಸ್ಸಿಎಗೆ ಕಳಿಸಿ ಸರಿಪಡಿಸಲು ಸೂಚಿಸಿದ್ದೇವೆ.

ಬಳಿಕ ಕೆಎಸ್ಸಿಎ ಮನವಿ ಮಾಡಿ, ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿತು. ಮಾರ್ಚ್‌ನಲ್ಲಿ ಐಪಿಎಲ್ ಆರಂಭವಾಗುತ್ತದೆ. ಅದಕ್ಕಾಗಿ ಶಾರ್ಟ್ಟೈಮ್ ಕಂಡೀಷನ್ ಪೂರೈಸಬೇಕು, ಅದಕ್ಕೆ ಅನುಮತಿ ನೀಡಲಾಗಿದೆ” ಎಂದರು.

“ಕೆಎಸ್ಸಿಎ ಎಲ್ಲವನ್ನೂ ಸರಿಪಡಿಸಲಿದೆ. ನಾವು ಮತ್ತೆ ಪರಿಶೀಲನೆ ನಡೆಸಿ, ಎಲ್ಲಾ ಸರಿಯಾದರೆ ಅನುಮತಿ ನೀಡಲಾಗುತ್ತದೆ. ಜನರಿಗೆ ನಿರಾಶೆ ಮಾಡಬಾರದು” ಎಂದರು. ಅವರ ಹೇಳಿಕೆಯಲ್ಲಿ ಗೇಟ್ ಮುಕ್ತಾಯಗೊಂಡಿದ್ದು, ದಾರಿಯಲ್ಲಿ ಪರಿಶೀಲನೆ ನಡೆಸಿದುದರ ಬಗ್ಗೆ ವಿವರ ನೀಡಲಾಗಿದೆ.

ರಾಜೀವ್ ಗೌಡ ಅರೆಸ್ಟ್ ಮತ್ತು ರಾಜ್ಯದ ಡ್ರಗ್ಸ್ ಸಮಸ್ಯೆಗಳ ಕುರಿತು ಸಹ ಅವರು ಮಾತನಾಡಿ, ಸಿಎಂ ಸೂಚನೆಗಳ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳಲು ತಂಡ ರಚಿಸಲಾಗಿದೆ. “ಸಿಎಂ ಎಚ್ಚರಿಕೆಯಿಂದ ನೋಡುತ್ತಾರೆ, ಸರ್ಕಾರ ಮತ್ತು ಪೊಲೀಸರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಧಾನವಾಗಿ ಇರಲು ಇದು ಅಗತ್ಯ” ಎಂದರು.

ಮರಣಪೂರ್ವ ಹೇಳಿಕೆ ವಿಶ್ವಾಸಾರ್ಹವಾಗಿರಬೇಕು: ಜೀವಾವಧಿ ಶಿಕ್ಷೆ ರದ್ದುಗೊಳಿಸಿ ಆರೋಪಿಗೆ ಖುಲಾಸೆ – ಹೈಕೋರ್ಟ್

0

ಬೆಂಗಳೂರು: ಮರಣಪೂರ್ವ ಹೇಳಿಕೆಯು ಮೃತರು ಹೇಳುವ ನಿಖರ ಪದಗಳೊಂದಿಗೆ ಪ್ರಶ್ನೋತ್ತರ ರೂಪದಲ್ಲಿದ್ದು, ಸಂಕ್ಷಿಪ್ತ ಹಾಗೂ ಸಂಪೂರ್ಣ ವಿಶ್ವಾಸಾರ್ಹವಾಗಿರಬೇಕು ಎಂದು ಮಹತ್ವದ ಮಾರ್ಗಸೂಚಿ ನೀಡಿರುವ ಹೈಕೋರ್ಟ್, ಮಹಿಳೆಯನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿಯ ಪೋಷಕರು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಸೋಮಶೇಖರ್ ಎಂಬ ಆರೋಪಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ. ಅವರಿದ್ದ ವಿಭಾಗೀಯ ಪೀಠ, ಮರಣಪೂರ್ವ ಹೇಳಿಕೆಯ ಸ್ವರೂಪ ಮತ್ತು ದಾಖಲಿಸುವ ವಿಧಾನದಲ್ಲಿ ಗಂಭೀರ ಲೋಪಗಳಿವೆ ಎಂದು ಅಭಿಪ್ರಾಯಪಟ್ಟಿತು.

ಮರಣಪೂರ್ವ ಹೇಳಿಕೆ ಪ್ರಶ್ನೋತ್ತರ ರೂಪದಲ್ಲಿದ್ದು, ಸಂತ್ರಸ್ತರು ಹೇಳಿರುವ ಪದಗಳು ನಿಖರವಾಗಿರಬೇಕು. ಜೊತೆಗೆ ಅದು ಚಿಕ್ಕದಾಗಿ, ಸಂಕ್ಷಿಪ್ತವಾಗಿ ಮತ್ತು ವಿಷಯಕ್ಕೆ ಸೀಮಿತವಾಗಿರಬೇಕು. ಆದರೆ ಈ ಪ್ರಕರಣದಲ್ಲಿ ಮರಣಪೂರ್ವ ಹೇಳಿಕೆ ಎರಡು ಪುಟಗಳಷ್ಟು ವಿಸ್ತಾರವಾಗಿದ್ದು, ಅದರಲ್ಲಿನ ಅಂಶಗಳು ಸಂಪೂರ್ಣ ವಿಶ್ವಾಸಾರ್ಹವಾಗಿಲ್ಲವೆಂದು ಪೀಠ ತಿಳಿಸಿದೆ.

ಇನ್ನೂ, ಮೃತರ ಮುಖ, ತುಟಿ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ವ್ಯಾಪಕ ಸುಟ್ಟ ಗಾಯಗಳಾಗಿದ್ದ ಸಂದರ್ಭದಲ್ಲಿ ಮರಣಪೂರ್ವ ಹೇಳಿಕೆ ದಾಖಲಿಸಲಾಗಿದೆ. ಇಂತಹ ಸ್ಥಿತಿಯಲ್ಲಿ ಹೇಳಿಕೆ ನೀಡಲು ಮೃತರ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಇತ್ತೇ ಎಂಬುದರ ಬಗ್ಗೆ ಗಂಭೀರ ಸಂದೇಹವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮರಣಪೂರ್ವ ಹೇಳಿಕೆಯನ್ನು ವೈದ್ಯರು ಮತ್ತು ತನಿಖಾಧಿಕಾರಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ದಾಖಲಿಸಿಕೊಂಡಿದ್ದು, ಹೇಳಿಕೆ ದಾಖಲಿಸಿದ ವಿಧಾನವೂ ಅನುಮಾನಾಸ್ಪದವಾಗಿದೆ ಎಂದು ನ್ಯಾಯಪೀಠ ಸೂಚಿಸಿದೆ.

ಮರಣಪೂರ್ವ ಹೇಳಿಕೆಯೊಂದರ ಆಧಾರ ಮಾತ್ರದಿಂದ ಆರೋಪಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿದ ಪೀಠ, ಈ ಪ್ರಕರಣದಲ್ಲಿ ಮರಣಪೂರ್ವ ಹೇಳಿಕೆ ನಿಯಮಬದ್ಧವಾಗಿ ದಾಖಲಿಸಿಕೊಳ್ಳಲಾಗಿಲ್ಲ. ಹೀಗಾಗಿ ಈ ಸಾಕ್ಷ್ಯವನ್ನು ತಿರಸ್ಕರಿಸಿ, ಆರೋಪಿಯನ್ನು ಖುಲಾಸೆಗೊಳಿಸಲಾಗುತ್ತಿದೆ ಎಂದು ಆದೇಶಿಸಿದೆ.

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

0

ದಾವಣಗೆರೆ: ಜನರು ತಮ್ಮ ಮೇಲಿನ ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. ಆದರೆ ಅದು ಅವಧಿಗೆ ಸಂಬಂಧಪಟ್ಟದ್ದಲ್ಲ, ಮುಂದಿನ 2028 ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರುಮುಂದಿನ ಸಿಎಂ ಸತೀಶ್ ಜಾರಕಿಹೊಳಿಎಂದು ಘೋಷಣೆ ಕೂಗುವುದು ನಮ್ಮ ಮೇಲಿನ ಅಭಿಮಾನದ ಪ್ರತಿಫಲ. ಆದರೆ ಈಗಲೇ ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ಅವಧಿಯಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದು ಪಕ್ಷದ ನಿರ್ಧಾರ. ನಾವು ಮುಂದಿನ ಚುನಾವಣೆಗೆ ಸಿಎಂ ಸ್ಥಾನದ ಆಕಾಂಕ್ಷಿಗಳು ಮಾತ್ರ ಎಂದು ಹೇಳಿದರು.

ಪ್ರಸ್ತುತ ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗಳು ಎದುರಿವೆ. ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ನಡೆಸುವುದು ಸೂಕ್ತವಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಸಾಕಷ್ಟು ಜವಾಬ್ದಾರಿಗಳಿದ್ದು,

ಕಾರಣಕ್ಕಾಗಿ ಅವರು ದೆಹಲಿಗೆ ಆಗಾಗ ಭೇಟಿ ನೀಡುತ್ತಾರೆ ಎಂದು ತಿಳಿಸಿದರು.ಯಾವುದೇ ವಿಷಯದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ವೇ ಆಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ: ಸ್ಮರಣ್ ಔಟ್, ನಿಕಿನ್ ಜೋಸ್ ಇನ್

0

ಜನವರಿ 22ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ತಂಡವನ್ನು ಅನುಭವಿ ಆಟಗಾರ ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.

ಆದರೆ ಮೊದಲ ಸುತ್ತಿನ ಪಂದ್ಯಗಳಲ್ಲಿ ಕರ್ನಾಟಕ ಪರ ಆಡಿದ್ದ ಯುವ ಆಟಗಾರ ಸ್ಮರಣ್ ರವಿಚಂದ್ರನ್ ಬಾರಿ ತಂಡದಿಂದ ಹೊರಗುಳಿದಿದ್ದಾರೆ. ವಿಜಯ ಹಝಾರೆ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ಅವರಿಗೆ ಭುಜಕ್ಕೆ ಗಾಯವಾಗಿದ್ದ ಕಾರಣ, ಅವರು ಪಂದ್ಯದಲ್ಲೂ ಕಣಕ್ಕಿಳಿಯಲಾಗಿರಲಿಲ್ಲ.

ಅದೇ ಗಾಯದ ಹಿನ್ನೆಲೆಯಲ್ಲಿ ಸ್ಮರಣ್ ರವಿಚಂದ್ರನ್ ಅವರನ್ನು ರಣಜಿ ಟ್ರೋಫಿ ತಂಡದಿಂದ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ. ಅವರ ಬದಲಾಗಿ ಬಾರಿ ನಿಕಿನ್ ಜೋಸ್ ಅವರಿಗೆ ಕರ್ನಾಟಕ ರಣಜಿ ತಂಡದಲ್ಲಿ ಅವಕಾಶ ನೀಡಲಾಗಿದೆ.

ರಣಜಿ ಟ್ರೋಫಿಯ ಮಹತ್ವದ ಹಂತದಲ್ಲಿ ಕರ್ನಾಟಕ ತಂಡಕ್ಕೆ ಬದಲಾವಣೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಕ್ರಿಕೆಟ್ ಅಭಿಮಾನಿಗಳು ಕಾದು ನೋಡುತ್ತಿದ್ದಾರೆ.

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಕರುಣ್ ನಾಯರ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ವಿದ್ಯಾಧರ್ ಪಾಟೀಲ್, ವಿದ್ವತ್ ಕಾವೇರಪ್ಪ, ಅಭಿಲಾಷ್ ಶೆಟ್ಟಿ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೃತಿಕ್ ಕೃಷ್ಣ, ಕೆವಿ ಅನೀಶ್, ಎಂ. ವೆಂಕಟೇಶ್.

CL-7 ಲೈಸೆನ್ಸ್ ಲಂಚ ಪ್ರಕರಣ: ಅಬಕಾರಿ ಡಿಸಿ–ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

0

ಬೆಂಗಳೂರು: CL-7 ಲೈಸೆನ್ಸ್ ಮಾಡಿಸಿಕೊಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಡೆಪ್ಯೂಟಿ ಕಮಿಷನರ್ (ಡಿಸಿ), ಎಸ್ಪಿ ಹಾಗೂ ಕಾನ್ಸ್ಟೇಬಲ್ ಸೇರಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶಿಸಿದೆ.

ಬಂಧಿತರನ್ನು ಅಬಕಾರಿ ಡಿಸಿ ಜಗದೀಶ್, ಎಸ್ಪಿ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಗಣಿಗೆ ಎಂದು ಗುರುತಿಸಲಾಗಿದೆ. ಸಿಎಲ್-7 ಮದ್ಯ ಪರವಾನಗಿ ಮಾಡಿಸಿಕೊಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಇವರ ಮೇಲಿದೆ.

ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ತಡರಾತ್ರಿವರೆಗೂ ವಿಚಾರಣೆ ನಡೆಸಿ, ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮತ್ತು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಎಲ್ಲಾ ದಾಖಲೆಗಳೊಂದಿಗೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಲಯ, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಿದೆ.

CL-7 ಲೈಸೆನ್ಸ್ ಎಂದರೆ ಕರ್ನಾಟಕದಲ್ಲಿ ಹೋಟೆಲ್ ಹಾಗೂ ವಸತಿ ಗೃಹಗಳಿಗೆ ಅಬಕಾರಿ ಇಲಾಖೆಯಿಂದ ನೀಡಲಾಗುವ ಮದ್ಯ ಮಾರಾಟ ಪರವಾನಗಿ. ಪರವಾನಗಿ ಹೊಂದಿರುವ ಹೋಟೆಲ್ಗಳಿಗೆ ಮಾತ್ರ ಮದ್ಯ ಮಾರಾಟ ಮಾಡಲು ಕಾನೂನಾತ್ಮಕ ಅನುಮತಿ ಇರುತ್ತದೆ.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನೂತನ ಅಧ್ಯಕ್ಷ–ಗೌರವಾಧ್ಯಕ್ಷರ ಪದಗ್ರಹಣ!

0

ಕೊಪ್ಪಳ: ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನೂತನ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ನೂತನ ಸದಸ್ಯರ ಸೇರ್ಪಡೆ ಸಭೆ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವು ನಾಗನೂರು ಹಾಗೂ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಕರುಗಲ್ ಅವರನ್ನು ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ನಿರ್ಗಮಿತ ಅಧ್ಯಕ್ಷ ರವೀಂದ್ರ ವಿ.ಕೆ. ಹಾಗೂ ನಿರ್ಗಮಿತ ಗೌರವಾಧ್ಯಕ್ಷ ಪ್ರಕಾಶ ಕಂದಕೂರು ಅವರಿಗೂ ಸನ್ಮಾನ ಮಾಡಲಾಗಿದೆ.

ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ದೇವು ನಾಗನೂರು ಹಾಗೂ ಗೌರವಾಧ್ಯಕ್ಷ ಬಸವರಾಜ ಕರುಗಲ್, ಕ್ಲಬ್‌ನಲ್ಲಿ ಇದುವರೆಗೆ ಕೈಗೊಂಡಿರುವ ಚಟುವಟಿಕೆಗಳನ್ನು ಮುಂದುವರೆಸುವುದರ ಜೊತೆಗೆ ಸದಸ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಕ್ಲಬ್‌ನ ನೂತನ ಸದಸ್ಯರಾಗಿ ಸೇರ್ಪಡೆಯಾದ ಕುಬೇರ ಮಜ್ಜಗಿ ಮತ್ತು ರಮೇಶ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಭೆಯಲ್ಲಿ ಕ್ಲಬ್ ಸದಸ್ಯರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮುಕ್ಕಣ್ಣ ಕತ್ತಿ, ಕಾರ್ಯದರ್ಶಿ ದತ್ತು ಕಮ್ಮಾರ, ಖಜಾಂಚಿ ಅನಿಲ್ ಬಾಚನಹಳ್ಳಿ ಸೇರಿದಂತೆ ಕ್ಲಬ್ ಸದಸ್ಯರಾದ ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ಸುಬ್ಬಾರಾವ್ ಪಟವಾರಿ, ನಾಭಿರಾಜ ದಸ್ತೇನವರ, ಮಾರುತಿ ಕಟ್ಟಿಮನಿ, ಶ್ರೀಕಾಂತ ಅಕ್ಕಿ, ಹುಸೇನ ಪಾಷಾ, ದೊಡ್ಡೇಶ ಯಲಿಗಾರ, ವಿಠ್ಠಲ ದುತ್ತರಗಿ, ಸಂತೋಷ ದೇಶಪಾಂಡೆ, ಪ್ರಮೋದ ಕುಲಕರ್ಣಿ, ಬಸವರಾಜ ಕರ್ಕಿಹಳ್ಳಿ, ರವೀಂದ್ರ ವಿ.ಕೆ., ವಿನಾಯಕ, ಸಮೀರ ಪಾಟೀಲ್, ಶರಣಬಸವ ಹುಲಿಹೈದರ್, ಮಂಜುನಾಥ ಗಂಗಾವತಿ ಹಾಗೂ ಈರಯ್ಯ ಹಿರೇಮಠ ಉಪಸ್ಥಿತರಿದ್ದರು.

WPL 2026; ಪ್ಲೇಆಫ್​ಗೇರಲು ಬೆಂಗಳೂರು ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

0

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ.

ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್‌ಸಿಬಿ, +1.600 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಉಳಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಸಾಧಿಸಿದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದ್ದು, ಮೂರು ಪಂದ್ಯಗಳಲ್ಲಿ ಜಯಗಳಿಸಿದರೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಇನ್ನೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ. ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಇತರ ತಂಡಗಳಿಗೂ ಆರ್‌ಸಿಬಿಯನ್ನು ಹಿಂದಿಕ್ಕುವುದು ಕಷ್ಟವಾಗಿದೆ. ಈ ಹಿನ್ನೆಲೆ ಆರ್‌ಸಿಬಿ ತಂಡವು 14 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡು ನೇರವಾಗಿ ಫೈನಲ್ ಪ್ರವೇಶಿಸುವ ಭರವಸೆಯಲ್ಲಿದೆ.

error: Content is protected !!