Home Blog Page 154

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನೂತನ ಅಧ್ಯಕ್ಷ–ಗೌರವಾಧ್ಯಕ್ಷರ ಪದಗ್ರಹಣ!

0

ಕೊಪ್ಪಳ: ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನೂತನ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ನೂತನ ಸದಸ್ಯರ ಸೇರ್ಪಡೆ ಸಭೆ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವು ನಾಗನೂರು ಹಾಗೂ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಕರುಗಲ್ ಅವರನ್ನು ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ನಿರ್ಗಮಿತ ಅಧ್ಯಕ್ಷ ರವೀಂದ್ರ ವಿ.ಕೆ. ಹಾಗೂ ನಿರ್ಗಮಿತ ಗೌರವಾಧ್ಯಕ್ಷ ಪ್ರಕಾಶ ಕಂದಕೂರು ಅವರಿಗೂ ಸನ್ಮಾನ ಮಾಡಲಾಗಿದೆ.

ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ದೇವು ನಾಗನೂರು ಹಾಗೂ ಗೌರವಾಧ್ಯಕ್ಷ ಬಸವರಾಜ ಕರುಗಲ್, ಕ್ಲಬ್‌ನಲ್ಲಿ ಇದುವರೆಗೆ ಕೈಗೊಂಡಿರುವ ಚಟುವಟಿಕೆಗಳನ್ನು ಮುಂದುವರೆಸುವುದರ ಜೊತೆಗೆ ಸದಸ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಕ್ಲಬ್‌ನ ನೂತನ ಸದಸ್ಯರಾಗಿ ಸೇರ್ಪಡೆಯಾದ ಕುಬೇರ ಮಜ್ಜಗಿ ಮತ್ತು ರಮೇಶ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಭೆಯಲ್ಲಿ ಕ್ಲಬ್ ಸದಸ್ಯರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮುಕ್ಕಣ್ಣ ಕತ್ತಿ, ಕಾರ್ಯದರ್ಶಿ ದತ್ತು ಕಮ್ಮಾರ, ಖಜಾಂಚಿ ಅನಿಲ್ ಬಾಚನಹಳ್ಳಿ ಸೇರಿದಂತೆ ಕ್ಲಬ್ ಸದಸ್ಯರಾದ ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ಸುಬ್ಬಾರಾವ್ ಪಟವಾರಿ, ನಾಭಿರಾಜ ದಸ್ತೇನವರ, ಮಾರುತಿ ಕಟ್ಟಿಮನಿ, ಶ್ರೀಕಾಂತ ಅಕ್ಕಿ, ಹುಸೇನ ಪಾಷಾ, ದೊಡ್ಡೇಶ ಯಲಿಗಾರ, ವಿಠ್ಠಲ ದುತ್ತರಗಿ, ಸಂತೋಷ ದೇಶಪಾಂಡೆ, ಪ್ರಮೋದ ಕುಲಕರ್ಣಿ, ಬಸವರಾಜ ಕರ್ಕಿಹಳ್ಳಿ, ರವೀಂದ್ರ ವಿ.ಕೆ., ವಿನಾಯಕ, ಸಮೀರ ಪಾಟೀಲ್, ಶರಣಬಸವ ಹುಲಿಹೈದರ್, ಮಂಜುನಾಥ ಗಂಗಾವತಿ ಹಾಗೂ ಈರಯ್ಯ ಹಿರೇಮಠ ಉಪಸ್ಥಿತರಿದ್ದರು.

WPL 2026; ಪ್ಲೇಆಫ್​ಗೇರಲು ಬೆಂಗಳೂರು ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

0

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ.

ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್‌ಸಿಬಿ, +1.600 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಉಳಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಸಾಧಿಸಿದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದ್ದು, ಮೂರು ಪಂದ್ಯಗಳಲ್ಲಿ ಜಯಗಳಿಸಿದರೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಇನ್ನೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ. ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಇತರ ತಂಡಗಳಿಗೂ ಆರ್‌ಸಿಬಿಯನ್ನು ಹಿಂದಿಕ್ಕುವುದು ಕಷ್ಟವಾಗಿದೆ. ಈ ಹಿನ್ನೆಲೆ ಆರ್‌ಸಿಬಿ ತಂಡವು 14 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡು ನೇರವಾಗಿ ಫೈನಲ್ ಪ್ರವೇಶಿಸುವ ಭರವಸೆಯಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಬಿದ್ದಿಲ್ಲ ಬ್ರೇಕ್; ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ!

0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಪುಂಡಾಟ ಮುಂದುವರಿದಿದೆ.

ಕಳೆದ ಜನವರಿ 7ರಂದು ಮಧ್ಯಾಹ್ನ ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳಾದ ಆನಂದ್ ಹಾಗೂ ಅಬ್ದುಲ್ ಘನಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಜಾಬಂಧಿ ಕಚೇರಿಗೆ ಅನಧಿಕೃತವಾಗಿ ಪ್ರವೇಶಿಸಲು ಯತ್ನಿಸಿದ ಕೈದಿಗಳನ್ನು ತಡೆಯಲು ಮುಂದಾದ ಅಸಿಸ್ಟೆಂಟ್ ಜೈಲರ್ ಹಾಗೂ ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಈ ಘಟನೆ ಬಳಿಕ ಜೈಲಿನಲ್ಲಿ ಕರ್ತವ್ಯ ನಿರ್ವಹಣೆಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರಭಾರ ಅಧೀಕ್ಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಜೈಲಿನೊಳಗಿನ ಐಷಾರಾಮಿ ಜೀವನ, ಮದ್ಯ ಸೇವನೆ ಹಾಗೂ ಹುಟ್ಟುಹಬ್ಬ ಆಚರಣೆ ವಿಡಿಯೋಗಳು ವೈರಲ್ ಆಗಿ ಅಧಿಕಾರಿಗಳ ಅಮಾನತಿಗೆ ಕಾರಣವಾಗಿದ್ದರೂ, ಹೊಸ ಡಿಜಿಪಿ ಅಲೋಕ್ ಕುಮಾರ್ ಅವರ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಜೈಲಿನ ಅಕ್ರಮಗಳು ನಿಲ್ಲದಿರುವುದು ಮತ್ತೊಮ್ಮೆ ಬಹಿರಂಗವಾಗಿದೆ.

ಮೈಸೂರು| ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಯೋಧನ ಪತ್ನಿ ಮೇಲೆ ಹಲ್ಲೆ!

0

ಮೈಸೂರು:- ಜಿಲ್ಲೆ ಹುಣಸೂರು ತಾಲ್ಲೂಕಿನ ಹಳೆ ವಾರಂಚಿ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಯೋಧನ ಪತ್ನಿಯ ಮೇಲೆ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ.

ನೀಲಮ್ಮ ಎಂಬ ಮಹಿಳೆ ಮೇಲೆ ಸಂಬಂಧಿಕರಾದ ರವಿ, ಅಂಕಿತ ಹಾಗೂ ರೋಷನ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ನೀಲಮ್ಮ ಅವರ ಪತಿ ಶಿವರಾಜ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಜಮ್ಮು–ಕಾಶ್ಮಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್ ಅವರು ತಮ್ಮ ಸಂಬಂಧಿ ರವಿ ಪತ್ನಿ ಲೀಲಾವತಿಗೆ 10 ಸಾವಿರ ರೂಪಾಯಿ ಸಾಲ ನೀಡಿದ್ದು, ಆ ಹಣವನ್ನು ವಾಪಸ್ಸು ನೀಡುವಂತೆ ನೀಲಮ್ಮ ಕೇಳಿದ ವೇಳೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಏಕಾಏಕಿ ಹಲ್ಲೆ ನಡೆಸಲಾಗಿದ್ದು, ನೀಲಮ್ಮ ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಲಮ್ಮ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ತನಿಖೆ ಕೈಗೊಂಡಿದ್ದಾರೆ.

Finance Torture| ಮಗನ ಕ್ಯಾನ್ಸರ್ ಚಿಕಿತ್ಸೆಗೆ ಸಾಲ; ಹಣ ವಾಪಸ್ ಕಟ್ಟಲಾಗದೇ ಬೀದಿ ಪಾಲಾದ ವೃದ್ಧ ದಂಪತಿ!

0

ಹಾಸನ: ಹಾಸನದಲ್ಲಿ ಖಾಸಗಿ ಫೈನಾನ್ಸ್ ಅಮಾನವೀಯ ಕೃತ್ಯದಿಂದ ವೃದ್ಧ ದಂಪತಿ ಬೀದಿಪಾಲಾಗಿದ್ದಾರೆ.

ಎಸ್, ರಾಜ್ಯದಲ್ಲಿ ಖಾಸಗಿ ಫೈನಾನ್ಸ್‌ಗಳ ಹಾವಳಿ ಮಿತಿ ಮೀರುತ್ತಿರುವ ನಡುವೆ, ಸಾಲ ಕಟ್ಟಿಲ್ಲ ಎಂಬ ಕಾರಣಕ್ಕೆ ವೃದ್ಧ ದಂಪತಿಯನ್ನು ಮನೆಗೆ ಬೀಗ ಜಡಿದು ಬೀದಿಗೆ ತಳ್ಳಿದ ಅಮಾನವೀಯ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ.

ಮಗನ ಕ್ಯಾನ್ಸರ್ ಚಿಕಿತ್ಸೆಗೆಂದು 2023ರಲ್ಲಿ ಮನೆ ಅಡಮಾನ ಇಟ್ಟು 2 ಲಕ್ಷ ರೂ. ಸಾಲ ಪಡೆದಿದ್ದ ಸಣ್ಣಯ್ಯ (80) ಮತ್ತು ಜಯಮ್ಮ (75) ಒಂದು ವರ್ಷ ಕಂತು ಕಟ್ಟಿದ್ದರೂ, ಕೋರ್ಟ್ ಆದೇಶವಿದೆ ಎಂದು ಹೇಳಿ ಮನೆ ಹಾಗೂ ಕೊಟ್ಟಿಗೆಗೂ ಬೀಗ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒಂದು ವಾರದಿಂದ ಮನೆಯ ಹೊರಗೆ ವಾಸ ಮಾಡ್ತಿರೋ ದಂಪತಿ, ನಾವು ಸಾಲ ಕಟ್ಟುತ್ತೇವೆ ಸಮಯ ಕೊಡಿ ಎಂದು ಕೈ ಮುಗಿದು ಅಂಗಲಾಚುತ್ತಿದ್ದಾರೆ. ಜೊತೆಗೆ ಸಾಲ ತೀರಿಸಲು ತಮಗೆ ಯಾರಾದರೂ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಮಂಡ್ಯ| ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರ ದಾಳಿ; 10 ಕೆಜಿ ಗಾಂಜಾ ಸೀಜ್, ಮೂವರು ಅರೆಸ್ಟ್!

0

ಮಂಡ್ಯ:- ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನುಗ್ಗಹಳ್ಳಿ ಬಳಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 10 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಪಾಂಡವಪುರ ತಹಸೀಲ್ದಾರ್ ಬಸಪ್ಪರೆಡ್ಡಿ ರೋಣದ ನೇತೃತ್ವದಲ್ಲಿ, ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಗಾಂಜಾ ಡೀಲ್ ಮಾಡಲು ಕಾರಿನಲ್ಲಿ ಬಂದಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ರಕ್ಷಿತ್, ಗೌತಮ್ ಹಾಗೂ ಮನೋಜ್ ಬಂಧಿತ ಆರೋಪಿಗಳಾಗಿದ್ದು, ಒರಿಸ್ಸಾದಿಂದ ಗಾಂಜಾ ಖರೀದಿಸಿ ಸ್ಥಳೀಯರಿಗೆ ಮಾರಾಟ ಮಾಡಲು ತಂದಿದ್ದರು ಎನ್ನಲಾಗಿದೆ.

ಇದೀಗ ಆರೋಪಿಗಳು ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದ್ದು, ಅವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

ಬಿಜೆಪಿ ಸಂಸದ ಮನೋಜ್ ತಿವಾರಿ ಮುಂಬೈ ಮನೆಯಲ್ಲಿ ಕಳ್ಳತನ: ಮಾಜಿ ಉದ್ಯೋಗಿ ಅರೆಸ್ಟ್!

0

ಮುಂಬೈ: ಬಿಜೆಪಿ ಸಂಸದ ಹಾಗೂ ಪ್ರಸಿದ್ಧ ಗಾಯಕ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರದಲ್ಲಿರುವ ಸುಂದರ್‌ಬನ್ ಅಪಾರ್ಟ್‌ಮೆಂಟ್‌ನ ಮನೆಯಿಂದ ಒಟ್ಟು 5.40 ಲಕ್ಷ ರೂ. ನಗದು ಕಳುವಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಮನೋಜ್ ತಿವಾರಿ ಅವರ ಮಾಜಿ ಕೆಲಸಗಾರ ಸುರೇಂದ್ರ ಕುಮಾರ್ ದೀನನಾಥ್ ಶರ್ಮಾ ಅವರನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಗುರುತಿಸಲಾಗಿದ್ದು, ನಕಲಿ ಕೀಲಿಗಳನ್ನು ಬಳಸಿ ಮನೆ, ಮಲಗುವ ಕೋಣೆ ಹಾಗೂ ಕ್ಲೋಸೆಟ್ ತೆರಳಿ ಕಳ್ಳತನ ನಡೆಸಿದ್ದಾನೆ ಎನ್ನಲಾಗಿದೆ.

ಮನೋಜ್ ತಿವಾರಿ ಅವರ ಮ್ಯಾನೇಜರ್ ಪ್ರಮೋದ್ ಪಾಂಡೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಯು ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಇಲ್ಲಿದೆ ಉತ್ತರ

0

ಸಾಮಾನ್ಯವಾಗಿ ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವಿಸುವ ವೇಳೆ ಒಸಡುಗಳಿಂದ ರಕ್ತಸ್ರಾವವಾಗುವುದು ಕಂಡುಬರುತ್ತದೆ. ಅಪರೂಪಕ್ಕೆ ಇಂತಹ ಅನುಭವವಾಗುವುದು ಸಾಮಾನ್ಯವೇ ಆಗಿರಬಹುದು. ಆದರೆ ಪದೇಪದೇ ಒಸಡುಗಳಿಂದ ರಕ್ತಸ್ರಾವವಾಗುತ್ತಿದ್ದರೆ ಅದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ಬಹುತೇಕ ಜನರು ಒಸಡು ರಕ್ತಸ್ರಾವವನ್ನು ಸಣ್ಣ ಸಮಸ್ಯೆಯೆಂದು ಪರಿಗಣಿಸುತ್ತಾರೆ. ಆದರೆ ಇದು ಕೆಲವೊಮ್ಮೆ ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು. ಹಾಗಾದರೆ ಒಸಡುಗಳಿಂದ ರಕ್ತಸ್ರಾವವಾಗಲು ಕಾರಣವೇನು? ಇದಕ್ಕೂ ಮಧುಮೇಹ (ಡಯಾಬಿಟಿಸ್) ಅಥವಾ ಹೃದಯ ಸಂಬಂಧಿ ಕಾಯಿಲೆಗಳಿಗೂ ಸಂಬಂಧವಿದೆಯೇ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ.

ಒಸಡುಗಳಿಂದ ರಕ್ತಸ್ರಾವವಾಗಲು ಕಾರಣವೇನು?

ಹೆಚ್ಚಿನ ಸಂದರ್ಭಗಳಲ್ಲಿ ಒಸಡು ಕಾಯಿಲೆ, ಅಂದರೆ ಪೆರಿಯೊಡಾಂಟಲ್ ಸೋಂಕಿನಿಂದ ರಕ್ತಸ್ರಾವವಾಗುತ್ತದೆ. ಒಸಡುಗಳಲ್ಲಿ ಊತ, ಉರಿತನ ಅಥವಾ ಸೋಂಕು ಇದ್ದರೆ ರಕ್ತಸ್ರಾವ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವು ಸಂದರ್ಭಗಳಲ್ಲಿ ಇದು ಇತರೆ ಗಂಭೀರ ಕಾಯಿಲೆಗಳ ಸಂಕೇತವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ.

ಡಯಾಬಿಟಿಸ್‌ಗೂ ಸಂಬಂಧವಿದೆಯೇ?

ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿದ್ದರೆ ದೇಹದಲ್ಲಿ ಸೋಂಕುಗಳು ಬೇಗನೆ ಬೆಳೆಯುತ್ತವೆ. ಈ ಕಾರಣದಿಂದ ಮಧುಮೇಹ ಇರುವವರಿಗೆ ಒಸಡಿಗೆ ಸಂಬಂಧಪಟ್ಟ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಅಧ್ಯಯನಗಳ ಪ್ರಕಾರ, ಡಯಾಬಿಟಿಸ್ ಇರುವವರಿಗೆ ಒಸಡು ಕಾಯಿಲೆಗಳ ಅಪಾಯ 3ರಿಂದ 4 ಪಟ್ಟು ಹೆಚ್ಚು. ಆದ್ದರಿಂದ ಒಸಡುಗಳಲ್ಲಿ ನಿರಂತರವಾಗಿ ರಕ್ತಸ್ರಾವವಾಗುತ್ತಿದ್ದರೆ, ಸಕ್ಕರೆ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎಂದು ತಜ್ಞರು ಸಲಹೆ ನೀಡುತ್ತಾರೆ.

ಹೃದಯ ಕಾಯಿಲೆಗಳ ಎಚ್ಚರಿಕೆನಾ?

ಹಲವಾರು ಅಧ್ಯಯನಗಳು ಒಸಡು ಕಾಯಿಲೆ ಅಥವಾ ನಿರಂತರ ರಕ್ತಸ್ರಾವ ಇರುವವರಿಗೆ ಹೃದಯ ಸಮಸ್ಯೆಗಳ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸೂಚಿಸುತ್ತವೆ. ಆದರೆ ಒಸಡು ರಕ್ತಸ್ರಾವದಿಂದಲೇ ಹೃದಯಾಘಾತವಾಗುತ್ತದೆ ಎಂಬುದಕ್ಕೆ ನೇರ ಪುರಾವೆಗಳು ಇಲ್ಲ. ಆದರೂ ಇದು ಹೃದಯ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡುವ ಸಂಕೇತವಾಗಿರಬಹುದು ಎಂದು ವೈದ್ಯರು ಅಭಿಪ್ರಾಯಪಡುತ್ತಾರೆ.

ನಿರ್ಲಕ್ಷ್ಯ ಮಾಡಿದರೆ ಏನಾಗಬಹುದು?

ಒಸಡುಗಳಿಂದ ರಕ್ತಸ್ರಾವವಾದರೆ ನಿಮಗೆ ಖಂಡಿತವಾಗಿ ಮಧುಮೇಹ ಅಥವಾ ಹೃದ್ರೋಗವಿದೆ ಎಂದರ್ಥವಲ್ಲ. ಆದರೆ ಇಂತಹ ಲಕ್ಷಣಗಳು ಆರಂಭಿಕ ಹಂತದಲ್ಲೇ ಕಾಯಿಲೆಗಳನ್ನು ಪತ್ತೆಹಚ್ಚಲು ಸಹಾಯಕವಾಗಬಹುದು. ಆದ್ದರಿಂದ ಇದನ್ನು ಹಗುರವಾಗಿ ತೆಗೆದುಕೊಳ್ಳುವುದು ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಏನು ಮಾಡಬೇಕು?

ಒಸಡುಗಳಲ್ಲಿ ಆಗಾಗ ರಕ್ತಸ್ರಾವವಾಗುವುದು, ಊತ, ನೋವು ಅಥವಾ ಬಾಯಿಯಲ್ಲಿ ದುರ್ವಾಸನೆ ಕಾಣಿಸಿಕೊಂಡರೆ ತಕ್ಷಣ ದಂತ ತಜ್ಞರನ್ನು ಸಂಪರ್ಕಿಸಿ. ಮಧುಮೇಹ ಅಥವಾ ಹೃದ್ರೋಗದ ಕುಟುಂಬದ ಇತಿಹಾಸವಿದ್ದರೆ ಇನ್ನಷ್ಟು ಎಚ್ಚರ ವಹಿಸಬೇಕು.

ದಿನಕ್ಕೆ ಎರಡು ಬಾರಿ ಮೃದುವಾದ ಬ್ರಷ್ ಬಳಸಿ ಹಲ್ಲುಜ್ಜುವುದು, ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ. ಒಟ್ಟಾರೆ, ಒಸಡುಗಳಿಂದ ರಕ್ತಸ್ರಾವವನ್ನು ನಿರ್ಲಕ್ಷಿಸದೆ ಸಮಯದಲ್ಲೇ ತಜ್ಞರ ಸಲಹೆ ಪಡೆಯುವುದು ನಿಮ್ಮ ಒಟ್ಟಾರೆ ಆರೋಗ್ಯದ ರಕ್ಷಣೆಗೆ ಅಗತ್ಯ.

ಕೊಟ್ಟಿಗೆಪಾಳ್ಯದಲ್ಲಿ ಕಸದ ರಾಶಿಗೆ ಬೆಂಕಿ, ನೀಲಗಿರಿ ತೋಪಿಗೆ ವ್ಯಾಪಿಸಿದ ಅಗ್ನಿ ಜ್ವಾಲೆ!

0

ಬೆಂಗಳೂರು:- ಮಾಗಡಿ ರೋಡ್–ಮಾಲಗಾಳ ರಸ್ತೆಯ ಕೊಟ್ಟಿಗೆಪಾಳ್ಯದಲ್ಲಿ ಕಸದ ರಾಶಿಗೆ ಬೆಂಕಿ ಬಿದ್ದು, ಪಕ್ಕದಲ್ಲಿದ್ದ ನೀಲಗಿರಿ ತೋಪಿಗೆ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.

ನೀಲಗಿರಿ ತೋಪಿನ ಸಮೀಪದಲ್ಲೇ ಇದ್ದ ಕಸದ ರಾಶಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ತೀವ್ರತೆಯಿಂದ ಬೆಂಕಿಯ ಜ್ವಾಲೆ ಹೆಚ್ಚಾಗಿ ತೋಪಿಗೂ ಹರಡಿತು. ಇದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ವಿಷಯ ತಿಳಿದ ತಕ್ಷಣ ಕೊಟ್ಟಿಗೆಪಾಳ್ಯದ ಸ್ಥಳೀಯರು ಸ್ವಯಂಪ್ರೇರಿತವಾಗಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿ, ಅಗ್ನಿ ಅವಘಡವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಅಕ್ರಮವಾಗಿ ನೀರಿನ ಬಾಟಲ್ ಮಾರಾಟ; ರೈಲಿನಲ್ಲೇ ಯುವಕನ ಮೇಲೆ ಹಲ್ಲೆ! Video Viral

0

ಬೆಂಗಳೂರು:- ನೀರಿನ ಬಾಟಲ್ ಮಾರಾಟ ವಿಚಾರಕ್ಕೆ ರೈಲಿನಲ್ಲಿ ಯುವಕನ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಹಾಸನ ಮಾರ್ಗದ ರೈಲಿನಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಗೊಮ್ಮಟೇಶ್ವರ ರೈಲು ನಿಲ್ದಾಣದಲ್ಲಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಟಲ್ ಗಳನ್ನ ಅಕ್ರಮವಾಗಿ ಕೊಡ್ತಾನೆ ಎಂಬ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ರೈಲಿನ ಗುತ್ತಿಗೆ ಪುಡ್ ರಿಲವರಿ ಸಿಬ್ಬಂದಿಯಿಂದ ಈ ಹಲ್ಲೆ ನಡೆದಿದೆ. ಅಲ್ಲದೇ ಎಲ್ಲಾ ನೀರಿನ ಬಾಟಲಿಗಳನ್ನು ಹೊರಗೆ ಎಸೆಯುವಂತೆ ಧಮ್ಕಿ ಹಾಕಿದ್ದಾನೆ.

ಸ್ಥಳೀಯ ಹಾಗೂ ಆರ್ ಪಿಎಫ್ ಸಿಬ್ಬಂದಿಯ ಗಮನಕ್ಕೆ ತರದೆ ಗುತ್ತಿಗೆ ಸಿಬ್ಬಂದಿಯಿಂದ ಹಲ್ಲೆ ನಡೆಸಲಾಗಿದೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

error: Content is protected !!