ತ್ಯಾಗ–ಸೌಹಾರ್ದದ ಬಕ್ರೀದ್ ಆಚರಣೆ
ಅಂಬಾಭವಾನಿ ಸನ್ನಿಧಿಯಲ್ಲಿ ಭಕ್ತಿಯ ಮಹಾಸಂಗಮ
ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಅಧಿಕ ಮಾಸದ ಪುಣ್ಯಕಾಲದ ಅಂಗವಾಗಿ ಇಲ್ಲಿನ ಎಸ್‌ಎಸ್‌ಕೆ ಸಮಾಜ ಪಂಚ ಟ್ರಸ್ಟ್ ಕಮಿಟಿ, ತರುಣ ಸಂಘ ಹಾಗೂ ಮಹಿಳಾ ಮಂಡಳದ ಸಂಯುಕ್ತ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮವು ಭಕ್ತಿಭಾವದಿಂದ ಜರುಗಿತು.
ಶ್ರೀ ಜಗದಂಬಾ ದೇವಿಯ 111ನೇ ಪ್ರತಿಷ್ಠಾಪನಾ ಮಹೋತ್ಸವದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ 111 ಮುತ್ತೈದೆಯರು ಕೆಂಪು ಸೀರೆ ಧರಿಸಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ದೇವಿಗೆ ಕುಂಕುಮಾರ್ಚನೆ ಸಲ್ಲಿಸಿದರು.
ಅರ್ಚಕರು ದೇವಿಯ ಸಹಸ್ರನಾಮ ಪಠಿಸುತ್ತಿದ್ದ ವೇಳೆ ಮುತ್ತೈದೆಯರು ಏಕಕಾಲದಲ್ಲಿ ಕುಂಕುಮಾರ್ಚನೆ ಸಲ್ಲಿಸಿದ ದೃಶ್ಯ ಭಕ್ತರ ಗಮನ ಸೆಳೆಯಿತು. ದೇವಸ್ಥಾನದ ಆವರಣ ಭಜನೆ, ದೇವಿಯ ನಾಮಸ್ಮರಣೆ ಹಾಗೂ ಜಯಘೋಷಗಳಿಂದ ಭಕ್ತಿಮಯ ವಾತಾವರಣದಲ್ಲಿ ಕಂಗೊಳಿಸಿತು.
ಮುಂಜಾನೆ ದೇವಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಅಲಂಕಾರ ಕಾರ್ಯಕ್ರಮಗಳು ನೆರವೇರಿದವು. ಶ್ರೀ ಅಂಬಾಭವಾನಿ ದೇವಿಗೆ ಕುಂಕುಮ ಹಾಗೂ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದ್ದು, ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 111 ಮುತ್ತೈದೆಯರಿಗೆ ಶ್ರೀ ಅಂಬಾಭವಾನಿ ದೇವಿಯ ಪಂಚಲೋಹ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು. ಬಳಿಕ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಎಸ್‌ಎಸ್‌ಕೆ ಸಮಾಜ ಪಂಚ ಟ್ರಸ್ಟ್ ಕಮಿಟಿ, ತರುಣ ಸಂಘ ಹಾಗೂ ಮಹಿಳಾ ಮಂಡಳದ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
“ಅಧಿಕ ಮಾಸದಂತಹ ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಆಧ್ಯಾತ್ಮಿಕ ಚಿಂತನೆ ಬೆಳೆಸುತ್ತವೆ. ದೇವಿಯ ಆರಾಧನೆಯಿಂದ ಕುಟುಂಬದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ”
ಲೋಕನಾಥ ಕಬಾಡಿ, ಪಂಚ ಕಮಿಟಿ ಅಧ್ಯಕ್ಷ
ಗುಂಡಿಗಳ ಗೂಡಾದ ಪಾಲಾ–ಬದಾಮಿ ರಸ್ತೆ!
ಸೇತುವೆ ನಿರ್ಮಿಸದಿದ್ದರೆ ಚುನಾವಣೆ ಬಹಿಷ್ಕಾರ!
ಬೀಜೋಪಚಾರದಿಂದಲೇ ಉತ್ತಮ ಇಳುವರಿ ಸಾಧ್ಯ: ಐ.ಎಸ್. ಪಾಟೀಲ
“ಬೀಜೋಪಚಾರ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಾವಯವ ಗೊಬ್ಬರ ಬಳಕೆ ಮಾಡಿದರೆ ಜಮೀನು ಫಲವತ್ತತೆ ಉಳಿಯುತ್ತದೆ. ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳತ್ತ ಗಮನ ಹರಿಸಬೇಕು”ಐ.ಎಸ್. ಪಾಟೀಲ
ಮಂತ್ರಿಗಿರಿ ಸಿಗದಿದ್ದರೆ ಪ್ರಾಣ ತ್ಯಾಗಕ್ಕೂ ಸಿದ್ಧ!
“ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ನಾಯಕರನ್ನು ನಿರ್ಲಕ್ಷಿಸಿದರೆ ಕಾರ್ಯಕರ್ತರ ಆಕ್ರೋಶ ಸ್ಫೋಟಗೊಳ್ಳಲಿದೆ. ಜಿ.ಎಸ್. ಪಾಟೀಲರಿಗೆ ಈ ಬಾರಿ ಸಚಿವ ಸ್ಥಾನ ಸಿಗಲೇಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಅನಿವಾರ್ಯ”ಮೌನೇಶ ಹಾದಿಮನಿ
ಪೂಜಾರಿಯೇ ಐಪಿಎಲ್ ಬೆಟ್ಟಿಂಗ್ ಕಿಂಗ್?: ಕ್ರಿಕೆಟ್ ಜೂಜಾಟದಲ್ಲಿ ಸಮೀರ್ ಬಂಧನ
ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಸಿಗುವ ವಿಚಾರ: ಶಾಸಕ ಇಕ್ಬಾಲ್ ಹುಸೇನ್ ಏನಂದ್ರೂ ಗೊತ್ತಾ?
ರಾಮನಗರ: “ನಮ್ಮ ಆಸೆ, ಅಭಿಲಾಷೆಗಳನ್ನು ಭಗವಂತ ಈಡೇರಿಸುತ್ತಿದ್ದಾನೆ, ಪ್ರಾರ್ಥನೆ ನೆರವೇರುವ ಕಾಲ ಬಂದಿದೆ” ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಎಲ್ಲರಿಗೂ ತಮ್ಮದೇ ಆದ ಆಸೆ ಮತ್ತು ನಿರೀಕ್ಷೆಗಳಿರುತ್ತವೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲೂ ಇದೇ ರೀತಿಯ ನಿರೀಕ್ಷೆ ಇತ್ತು. “ನಾನು ಮೌನ ಮುರಿದು ಮಾತನಾಡಿದ್ದೆ ಅಷ್ಟೇ. ಕೆಲವರು ಮೌನವಾಗಿ ಪ್ರಾರ್ಥನೆ ಮಾಡಿದ್ದರು. ಆ ಪ್ರಾರ್ಥನೆಗಳು ಈಗ ನೆರವೇರುವ ಹಂತಕ್ಕೆ ಬಂದಿದೆ” ಎಂದು ಹೇಳಿದರು.
ನಮ್ಮ ನಾಯಕರಿಗೆ ಒಂದು ಮಹತ್ವದ ಅವಕಾಶ ಸಿಗುವ ಕಾಲ ಹತ್ತಿರವಾಗಿದೆ ಎಂದು ಭಗವಂತನಿಗೆ ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಪರಮೇಶ್ವರ್ ಅವರಿಗೆ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, “ಪರಮೇಶ್ವರ್ ಕೂಡ ನಮ್ಮ ನಾಯಕರು. ಅವರು ಹಿರಿಯರು. ಅವರು ಕೇಳುವುದರಲ್ಲಿ ತಪ್ಪೇನಿದೆ? ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವಕಾಶ ಕೇಳುವುದು ಸಹಜ” ಎಂದು ಹೇಳಿದರು.
ಅದೇ ವೇಳೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ ಅವರು, “ನಮ್ಮ ಜಿಲ್ಲೆಯವರು ಹಾಗೂ ನಾಯಕರಾದ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎಂದು ನಾವು ಹೇಳಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ! ಕೆಲಕಾಲ ಆತಂಕ
ಜೈಪುರ/ನವದೆಹಲಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ದೆಹಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯದ ಹಿನ್ನೆಲೆ ವಿಮಾನವನ್ನು ಸುರಕ್ಷತಾ ದೃಷ್ಟಿಯಿಂದ ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.
ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸುತ್ತಿದ್ದರು. ಇದೇ ವೇಳೆ ದೆಹಲಿಯಲ್ಲಿ ಮಳೆ, ಗಾಳಿ ಹಿನ್ನೆಲೆ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಜೈಪುರಕ್ಕೆ ತಿರುಗಿಸಲಾಗಿದೆ ಎಂದು ತಿಳಿದುಬಂದಿದೆ.
ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಕೂಡ ಪ್ರಯಾಣಿಸುತ್ತಿದ್ದರು.
ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ವಿಮಾನ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

