Home Blog Page 165

ಅವ್ಯವಸ್ಥೆಗಳ ಆಗರವಾದ ಪುರಸಭೆ ಮಳಿಗೆಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಗೆ ವಾಣಿಜ್ಯ ಮಳಿಗೆಗಳ ಸಂಕೀರ್ಣ ಅವ್ಯವಸ್ಥೆ, ಅಧ್ವಾನದ ಆಗರವಾಗಿದೆ. ಪಟ್ಟಣದ ಹೊಸ ಬಸ್‌ನಿಲ್ದಾಣದ ಹತ್ತಿರ ಸಣ್ಣ ಮತ್ತು ಮಧ್ಯಮ ಪಟ್ಟಣ ಅಭಿವೃದ್ಧಿ ಯೋಜನೆಯಡಿ ಸುಮಾರು 25 ವರ್ಷಗಳ ಹಿಂದೆ ವಾಣಿಜ್ಯ ಮಳಿಗೆ ನಿರ್ಮಿಸಲಾಗಿದೆ. ಈ ವಾಣಿಜ್ಯ ಮಳಿಗೆಯಲ್ಲಿ ಒಟ್ಟು 29 ಮಳಿಗೆಗಳಿದ್ದು, ಇದರಲ್ಲಿ 25 ಮಳಿಗೆಗಳನ್ನು 20 ವರ್ಷದ ಲೀಜ್ ಆಧಾರದ ಮೇಲೆ ಮತ್ತು 4 ಮಳಿಗೆಗಳನ್ನು 12 ವರ್ಷದ ಲೀಜ್ ಆಧಾರದ ಮೇಲೆ ನೀಡಲಾಗಿದೆ.

ಟೆಂಡರ್ ಪಡೆದವರು ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಅಂಗಡಿಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ನಿಯಂತ್ರಣದಲ್ಲಿರುವ ಐಡಿಎಸ್‌ಎಂಟಿ ಮಳಿಗೆಗಳು ಅವರ ಸೂಚನೆಯಂತೆ ನಡೆಯುತ್ತವೆ. ಆದರೆ ಇಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೂ ತರದೆ, ಪುರಸಭೆಯ ಯಾವುದೇ ಅನುಮತಿಯೂ ಇಲ್ಲದೆ, ಯಾರದೋ ಹಿತಾಸಕ್ತಿಯಿಂದಾಗಿ ಮಳಿಗೆಯಲ್ಲಿ ಕಾನೂನು ಬಾಹಿರವಾಗಿ ನಡೆದುಕೊಳ್ಳಲಾಗುತ್ತಿದೆ. 20 ವರ್ಷಗಳಿಂದ ಯಾವ ಅವಧಿಯ ಚುನಾಯಿತ ಮಂಡಳಿ ಮತ್ತು ಅಧಿಕಾರಿಗಳು ಈ ಬಗ್ಗೆ ಚಕಾರವೆತ್ತದಿರುವುದು ಅಚ್ಚರಿಗೆ ಕಾರಣವಾಗಿದೆ.

ಸಂಕೀರ್ಣದಲ್ಲಿ ಮಾಂಸಾಹಾರಿ ಹೋಟೆಲ್, ಎಗ್ ರೈಸ್ ಅಂಗಡಿಗಳಿರುವುದರಿಂದ ಪಾನಮತ್ತರು ಮದ್ಯ ಸೇವಿಸಿ ಈ ಅಂಗಡಿಗಳ ಮುಂದೆ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುತ್ತಾರೆ. ಇದರಿಂದಾಗಿ ಈ ವಾಣಿಜ್ಯ ಮಳಿಗೆಯಲ್ಲಿನ ಎಸ್‌ಬಿಐನ ಎಟಿಎಂ, ಔಷಧಿ ಅಂಗಡಿ, ಬೇಕರಿ ಹಾಗೂ ಹೂವು-ಹಣ್ಣು ಮಾರಾಟ ಮಳಿಗೆಗಳಿಗೆ ಬರುವ ಮಹಿಳೆಯರು, ಮಕ್ಕಳು, ಸಂಪ್ರದಾಯಸ್ಥರು ಭಯದಿಂದಲೇ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಬಾಡಿಗೆಯಿಂದ ಲಕ್ಷಾಂತರ ರೂಪಾಯಿ ಪುರಸಭೆಗೆ ಸಂದಾಯವಾಗುತ್ತಿದ್ದರೂ ಕಳೆದ 15 ವರ್ಷಗಳಿಂದ ಇಲ್ಲಿನ ಮಳಿಗೆಗಳ ಸ್ಥಿತಿ ಅಧೋಗತಿಗೆ ತಲುಪಿದೆ. ಇದು ಪುರಸಭೆಯ ಜವಾಬ್ದಾರಿಯನ್ನು ಪ್ರಶ್ನಿಸುವಂತಾಗಿದೆ.

ಸಂಕೀರ್ಣದ ಮುಂದೆ ನಾಲ್ಕೈದು ತಳ್ಳುಗಾಡಿಯ ಎಗ್‌ರೈಸ್, ಟಿಫನ್, ಚಹಾದ ಅಂಗಡಿಗಳಿಗೆ ಪರವಾನಿಗೆ ಕೊಟ್ಟಿದ್ದಾರೆ. ಇಲ್ಲಿನ ವ್ಯಾಪಾರಸ್ಥರು ತ್ಯಾಜ್ಯವನ್ನು ಚರಂಡಿಗೆ ಹಾಕುವುದರಿಂದ ಈ ಪ್ರದೇಶ ಗಬ್ಬು ನಾರುತ್ತಿದೆ. ಇಲ್ಲಿ ಕ್ಷಣ ಹೊತ್ತು ನಿಲ್ಲಲು ಆಗುವುದಿಲ್ಲ. ಆದರೂ ಸಂಬಂಧಿಸಿದ ಪುರಸಭೆ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ಸರ್ಕಾರದ ನಿಯಮದ ಪ್ರಕಾರ ವಾಣಿಜ್ಯ ಮಳಿಗೆಯ ಕಟ್ಟಡದಲ್ಲಿ ಮಾಂಸ, ಎಗ್ ರೈಸ್ ಮಾರಾಟ ನಿಷಿದ್ಧ. ಆದರೆ ಇಲ್ಲಿ ಸರ್ಕಾರದ ಆದೇಶಕ್ಕೆ ಯಾವುದೇ ಕಿಮ್ಮತ್ತು ಇಲ್ಲ.

ವಾಣಿಜ್ಯ ಸಂಕೀರ್ಣದಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳ ಕುರಿತು ಪುರಸಭೆಯವರನ್ನು ಪ್ರಶ್ನಿಸಿದಾಗ ಯಾವುದೇ ಅನುಮತಿ ಕೊಟ್ಟಿಲ್ಲವೆಂದು ಹೇಳುತ್ತಾರೆ. ಹಾಗಾದರೆ ಕಾನೂನು ಬಾಹಿರವಾಗಿ ನಡೆಯುತ್ತಿರುವ ವ್ಯಾಪಾರಕ್ಕೆ ರಕ್ಷಣೆ ಯಾರದು ಎಂಬುದಕ್ಕೆ ಜಿಲ್ಲಾಧಿಕಾರಿಗಳೇ ಉತ್ತರಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ವಾಣಿಜ್ಯ ಮಳಿಗೆಗಳಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವನ್ನು ಪತ್ತೆಹಚ್ಚಿ ಅವರನ್ನು ಅಲ್ಲಿಂದ ತೆರವುಗೊಳಿಸಲಾಗುವುದು. ಅಲ್ಲದೆ ಮಾಂಸ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ವ್ಯಾಪಾರಸ್ಥರು ಚರಂಡಿಯಲ್ಲಿ ಕಸ-ಮುಸುರೆ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಮಳಿಗೆ ಟೆಂಡರ್ ಅವಧಿ ಮುಗಿಯಲಿದ್ದು, ಮರು ಟೆಂಡರ್ ವೇಳೆ ನಿಯಮಾವಳಿಯಂತೆ ಮಳಿಗೆ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಇಲ್ಲಿ ಸಿದ್ಧಪಡಿಸಿ ಮಾರಾಟ ಮಾಡುವ ಆಹಾರದ ಗುಣಮಟ್ಟ, ಸ್ವಚ್ಛತೆ, ಕುಡಿಯುವ ನೀರು, ಡಸ್ಟ್ಬಿನ್‌ಗಳ ಬಗ್ಗೆ ಕಿಂಚಿತ್ತೂ ಗಮನ ಹರಿಸುವುದಿಲ್ಲ. ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಅನಧಿಕೃತ ವ್ಯಾಪಾರಸ್ಥರೇ ತುಂಬಿಕೊಂಡಿದ್ದು, ಮೂಲ ಮಾಲೀಕರೇ ಇಲ್ಲ. ನಿಯಮಾನುಸಾರ ಟೆಂಡರ್ ಪಡೆದವರು ಬೇರೆಯವರಿಗೆ ಬೇರೆ ಉದ್ದೇಶಕ್ಕೆ ಅಂಗಡಿ ಕೊಡುವಂತಿಲ್ಲ. ಅಲ್ಲದೆ ಇಡೀ ಕಟ್ಟಡದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದ್ದು, ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದಕ್ಕೆ ಪ್ರಭಾವಿಗಳ ಶ್ರೀರಕ್ಷೆ ಇದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗೋಡಿ ಆರೋಪಿಸಿದ್ದಾರೆ.

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತದಲ್ಲಿ SIT ತನಿಖೆ 

0

ಬೆಂಗಳೂರು: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ಶೀಘ್ರದಲ್ಲೇ ಪೊಲೀಸ್ ಕಮಿಷನರ್‌ಗೆ ಸಮಗ್ರ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಸಿ.ಜೆ. ರಾಯ್ ಆತ್ಮಹತ್ಯೆಯ ಹಿಂದಿನ ನಿಜಾಂಶಗಳು ಎಸ್ಐಟಿ ವರದಿಯಿಂದ ಬಹಿರಂಗವಾಗುವ ಸಾಧ್ಯತೆ ಇದೆ. ಎಸ್ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ.

ಈ ಸಂಬಂಧ ಹಲವು ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸಿರುವ ಎಸ್ಐಟಿ, ಕಚೇರಿ ಸಿಬ್ಬಂದಿ, ಅಧಿಕಾರಿಗಳು, ಐಟಿ ಅಧಿಕಾರಿಗಳು ಹಾಗೂ ರಾಯ್ ಕುಟುಂಬದ ಸದಸ್ಯರು ಮತ್ತು ಆಪ್ತರು ಸೇರಿದಂತೆ ಹಲವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ರಾಯ್ ಅವರ ಆತ್ಮಹತ್ಯೆ ನಿರ್ಧಾರ ಕುಟುಂಬದ ಸದಸ್ಯರಿಗೂ ಅಚ್ಚರಿ ಮೂಡಿಸಿದೆ. ಉದ್ಯಮ ಕ್ಷೇತ್ರದಲ್ಲಿ ದಿಟ್ಟ ಮತ್ತು ಧೈರ್ಯಶಾಲಿ ನಿರ್ಧಾರಗಳಿಗೆ ಹೆಸರಾಗಿದ್ದ ರಾಯ್, ಇಂತಹ ಕಠಿಣ ಹೆಜ್ಜೆ ಏಕೆ ಇಟ್ಟರು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಅಂತಿಮ ಹಂತದ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ತಂಡ ಕೆಲವೇ ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದ್ದು, ಆ ವರದಿ ಮೂಲಕವೇ ಆತ್ಮಹತ್ಯೆಯ ಹಿಂದಿನ ಸತ್ಯಾಂಶಗಳು ಬೆಳಕಿಗೆ ಬರಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

 

ಬೆಂಗಳೂರಿನಲ್ಲಿ ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಕಳ್ಳಿ ಅರೆಸ್ಟ್.!‌ 

0

ಬೆಂಗಳೂರು: ಮನೆಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಮಾಲೀಕರ ಮನೆದಲ್ಲೇ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಕೋಣನಕುಂಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ದೀಪ ಎಂಬ ಮಹಿಳೆ ಬಂಧಿತಳಾಗಿದ್ದಾಳೆ.

ಕೋಣನಕುಂಟೆ ನಿವಾಸಿ ಜಗದೀಶ್ ಅವರ ಮನೆಯಲ್ಲಿ ಸುಮಾರು ಒಂದು ವರ್ಷದಿಂದ ಮನೆಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ಕೆಲಸ ಮಾಡುತ್ತಿದ್ದ ಅವಧಿಯಲ್ಲೇ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಒಂದೇ ಬಾರಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ ಮಾಡದೇ, ಆಗಾಗ ಒಂದೊಂದೇ ಚಿನ್ನದ ಆಭರಣ ಕದ್ದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆದಲ್ಲಿದ್ದ ಚಿನ್ನಾಭರಣಗಳು ಕಾಣೆಯಾಗಿರುವುದು ಗಮನಕ್ಕೆ ಬಂದ ನಂತರ ಜಗದೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ದೀಪ ಕೃತ್ಯ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದಿಂದ ಪಡೆದ ಹಣದಲ್ಲಿ ತಮಿಳುನಾಡಿನಲ್ಲಿ ಸೈಟ್ ಖರೀದಿ ಮಾಡಿರುವುದಾಗಿ ಆರೋಪಿಯು ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಆರೋಪಿ ಬಂಧನಕ್ಕೊಳಗಾಗಿದ್ದು, ಸುಮಾರು 200 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

ಮಹದೇವಪ್ಪ ದೊಡ್ಡವರು, ಈಗ ಅವರು ನಮ್ಮ ಹೈಕಮಾಂಡ್ ನ ಭಾಗ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಹೆಚ್.ಸಿ ಮಹದೇವಪ್ಪ ಅವರು ಅಧಿಕಾರ ಹಂಚಿಕೆ ವಿಚಾರವಾಗಿ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ, “ನಾಯಕರ ಹೇಳಿಗೆ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ನಾಯಕರು ಕ್ರಮ ಕೈಗೊಳ್ಳುತ್ತಾರೆ. ನಾನು ಮಹದೇವಪ್ಪನಿಗೆ ಹಾಗೂ ಬೇರೆಯವರಿಗೆ ಉತ್ತರ ನೀಡಲು ತಯಾರಿಲ್ಲ.

ನಾಯಕತ್ವ ವಿಚಾರವಾಗಿ ಈ ಹಿಂದೆ ಹೇಳಿರುವಂತೆ ನಾನು, ಸಿದ್ದರಾಮಯ್ಯನವರು ಹಾಗೂ ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ. ಈ ತೀರ್ಮಾನ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಇದು ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟು ವ್ಯವಹಾರವಲ್ಲ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಸಂದೇಶ ನೀಡುತ್ತಾರೆ” ಎಂದು ತಿಳಿಸಿದರು.

ನನಗೆ ಶಾಸಕರ ವಿದೇಶ ಪ್ರವಾಸ ಗೊತ್ತಿಲ್ಲ

ಶಾಸಕರ ವಿದೇಶ ಪ್ರವಾಸದ ಬಗ್ಗೆ ಕೇಳಿದಾಗ, “ನನಗೆ ಯಾವ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಮಾಧ್ಯಮಗಳಿಂದಷ್ಟೇ ತಿಳಿದಿದೆ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಇದು ಪ್ರವಾಸ ಕಳುಹಿಸುತ್ತಿರುವವರು ಉಂಟು ಹಾಗೂ ಪ್ರವಾಸ ಹೋಗುತ್ತಿರುವವರು ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ನಾಲ್ಕು ವಾಹನಗಳು ಭಸ್ಮ!

0

ದಾವಣಗೆರೆ: ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನಾಲ್ಕು ವಾಹನಗಳು ಭಸ್ಮವಾಗಿರುವ ಘಟನೆ ನಗರದ ಹಳೆ ಪಿ.ಬಿ. ರಸ್ತೆಯಲ್ಲಿರುವ LIC ಕಚೇರಿ ಸಮೀಪದ ಮಾರುತಿ ಗ್ಯಾರೇಜ್‌ನಲ್ಲಿ

ಅರುಣ್ ಅವರಿಗೆ ಸೇರಿದ ಗ್ಯಾರೇಜ್‌ ಆಗಿದ್ದು, ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಗ್ಯಾರೇಜ್‌ನಲ್ಲಿದ್ದ ಮೂರು ಕಾರುಗಳು ಹಾಗೂ ಒಂದು ಕ್ರೂಸರ್ ವಾಹನ ಸಂಪೂರ್ಣವಾಗಿ  ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಇನ್ನೂ ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಶ್ರಮಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ.

ಮಹಿಳೆಯರು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ʼನಲ್ಲಿ ಗೌಪ್ಯತೆ ಕಾಪಾಡುವುದು ಕಡ್ಡಾಯ: ಡಿಜಿಪಿ ಸಲೀಂ ಆದೇಶ

0

ಬೆಂಗಳೂರು: ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಗುರುತನ್ನು ರಕ್ಷಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ.

ಇನ್ನು ಮುಂದೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಅಥವಾ ಅಪ್ರಾಪ್ತ ಸಂತ್ರಸ್ತರ ಹೆಸರು, ವಿಳಾಸ ಸೇರಿದಂತೆ ಯಾವುದೇ ರೀತಿಯ ಗುರುತು ಸಾರ್ವಜನಿಕವಾಗಿ ಅಥವಾ ಅಧಿಕೃತ ದಾಖಲೆಗಳಲ್ಲಿ ಬಹಿರಂಗಪಡಿಸುವಂತಿಲ್ಲ ಎಂದು ಆದೇಶಿಸಲಾಗಿದೆ.

ದೂರು ಸ್ವೀಕರಿಸಿದ ಬಳಿಕ ಠಾಣಾಧಿಕಾರಿ ಅಥವಾ ತನಿಖಾಧಿಕಾರಿಯು ಸಂತ್ರಸ್ತರ ಮೂಲ ಹೆಸರನ್ನು ಬದಲಾಯಿಸಿ, ಸಾಂಕೇತಿಕ ಹೆಸರನ್ನು ಬಳಸಬೇಕು. ಎಫ್‌ಐಆರ್‌ನಲ್ಲೂ ಬದಲಾದ ಹೆಸರನ್ನೇ ನಮೂದಿಸಿ, “ಹೆಸರು ಬದಲಿಸಲಾಗಿದೆ” ಎಂದು ಸ್ಪಷ್ಟವಾಗಿ ದಾಖಲಿಸಬೇಕು.

ನ್ಯಾಯಾಲಯಕ್ಕೆ ಸಲ್ಲಿಸುವ ದೂರು ಪ್ರತಿ, ಮಹಜರು ವರದಿ, ಚಾರ್ಜ್‌ಶೀಟ್ ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ಇನ್ನು ಮುಂದೆ ‘ಮುಚ್ಚಿದ ಲಕೋಟೆಯಲ್ಲಿ’ (Sealed Cover) ಸಲ್ಲಿಸುವುದು ಕಡ್ಡಾಯವಾಗಿದೆ.
ತನಿಖೆಯ ಯಾವುದೇ ಹಂತದಲ್ಲೂ ಸಂತ್ರಸ್ತರ ವಿವರಗಳು ಸೋರಿಕೆಯಾಗದಂತೆ ತನಿಖಾಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

ಅನೇಕ ಪ್ರಕರಣಗಳಲ್ಲಿ ಸಂತ್ರಸ್ತರ ಗುರುತು ಬಹಿರಂಗವಾಗುವುದರಿಂದ ಸಾಮಾಜಿಕ ಮುಜುಗರ ಹಾಗೂ ಮಾನಸಿಕ ಕಿರುಕುಳ ಉಂಟಾಗುತ್ತಿತ್ತು. ಇದರಿಂದ ನ್ಯಾಯಾಂಗ ಹೋರಾಟದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿತ್ತು. ಸುಪ್ರೀಂಕೋರ್ಟ್ ಆಶಯದಂತೆ ಸಂತ್ರಸ್ತರಿಗೆ ಸಂಪೂರ್ಣ ಸುರಕ್ಷತೆ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಡಿ.ಕೆ. ಸುರೇಶ್ ತಿರುಗೇಟು

0

ಬೆಂಗಳೂರು:“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಬಾಲ ನಾಯಿಯನ್ನೇ ಅಲ್ಲಡಿಸಬಾರದು ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು” ಎಂದರು.

ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ ಎಂದು ಕೇಳಿದಾಗ, “ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ.

ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು.

ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ

ಶಾಸಕರ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಶಾಸಕರಾಗಿರುವುದರಿಂದ ಅವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ನೀವು ಶಾಸಕರಾಗಿ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ. ನೀವು ಶಾಸಕರಾಗಲು ಪ್ರಯತ್ನಿಸಿ. ಕೆಲವರು ವಿಶ್ವಾಸಕ್ಕೆ ಹೋಗುತ್ತಾರೆ, ಮತ್ತೆ ಕೆಲವರು ದೇಶ ನೋಡಲು ಹೋಗುತ್ತಾರೆ,

ಇನ್ನು ಕೆಲವರು ಅಧ್ಯಯನಕ್ಕಾಗಿ ಹೋಗುತ್ತಾರೆ. ಇಲ್ಲಿ ವ್ಯಾಖ್ಯಾನ ಮಾಡುವಂತದ್ದು ಇಲ್ಲ. ಆಗಾಗ್ಗೆ ಶಾಸಕರುಗಳು ವಿದೇಶಕ್ಕೆ ಹೋಗಿ ಬರುತ್ತಾರೆ. ಇದರಲ್ಲಿ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸಗಳ ಒತ್ತಡ, ಗೊಂದಲಗಳ ಮಧ್ಯೆ ಕುಟುಂಬ ಹಾಗೂ ಸ್ನೇಹಿತರ ವಿದೇಶ ಪ್ರವಾಸ ಎಲ್ಲರಿಗೂ ನೆಮ್ಮದಿ ನೀಡುತ್ತದೆ” ಎಂದು ತಿಳಿಸಿದರು.

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಕೇಳಿದಾಗ, “ಪಂದ್ಯ ಚೆನ್ನಾಗಿತ್ತು, ಭಾರತ ಗೆದ್ದಿದೆ, ಇನ್ನು ಅನೇಕ ಪಂದ್ಯ ಗೆಲ್ಲಬೇಕಿದೆ” ಎಂದು ತಿಳಿಸಿದರು. ಆರ್ ಎಸ್ಎಸ್ ನೋಂದಣಿಯಾಗಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರದ ಬಗ್ಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.

ಬಾಲಿವುಡ್ ಲೆಜೆಂಡ್ ಸಲೀಂ ಖಾನ್ ಆಸ್ಪತ್ರೆ ದಾಖಲು: ನಟ ಸಲ್ಮಾನ್ ಖಾನ್ ಭೇಟಿ

ಬಾಲಿವುಡ್‌ನ ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆ ದಾಖಲಿಸಲಾಗಿದೆ. ದಾಖಲು ಕಾರಣವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ, ಆದರೆ ಕುಟುಂಬದ ಸದಸ್ಯರು ಅವರ ಆರೋಗ್ಯದ ಪರಿಶೀಲನೆಗೆ ಹತ್ತಿರದಿಂದ ಪಾಲ್ಗೊಂಡಿದ್ದಾರೆ.

ಸಾಲ್ಮಾನ್ ಖಾನ್, ಅಲ್ವಿರಾ ಹಾಗೂ ಅತುಲ್ ಅಗ್ನಿಹೋತ್ರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಭಾವುಕರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ವಿಶಿಷ್ಟ ಚಿಕಿತ್ಸೆ ವ್ಯವಸ್ಥೆ ಜಾರಿಯಲ್ಲಿದೆ.

70 ರ ದಶಕದಿಂದಲೂ ಶೋಲೆ, ದೀವಾರ್, ಜಂಜೀರ್ ಮುಂತಾದ ಚಿತ್ರಗಳಿಗೆ ಕಥೆ ಬರೆದ ಸಲೀಂ ಖಾನ್, ಭಾರತೀಯ ಚಿತ್ರರಂಗದ ಚಿರಸ್ಮರಣೀಯ ಕಥೆಗಾರರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ಅವರು ತಮ್ಮ 90 ನೇ ಹುಟ್ಟುಹಬ್ಬವನ್ನು ಆಚರಿಸಿದ್ದರು. ಅಭಿಮಾನಿಗಳು ಮತ್ತು ಚಿತ್ರರಂಗದ ಹಿರಿಯರು ಈಗ ಸಲೀಂ ಖಾನ್ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಫುಟ್ಬಾಲ್ ಆಟಗಾರ ಅರೆಸ್ಟ್!

0

ಬೆಂಗಳೂರು: ಡ್ರಗ್ ಪೆಡ್ಲಿಂಗ್ ನಡೆಸುತ್ತಿದ್ದ ವಿದೇಶಿ ಫುಟ್ಬಾಲ್ ಆಟಗಾರನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಸೌತ್ ಆಫ್ರಿಕಾ ಮೂಲದ ಕೊರ್ಲಿ ಡೇನಿಯಲ್ ಬಂಧಿತನಾಗಿದ್ದು, ಸ್ಪೋರ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಆಗಾಗ ಕೇರಳದಲ್ಲಿ ನಡೆಯುವ ಫುಟ್ಬಾಲ್ ಪಂದ್ಯಗಳಲ್ಲಿ ಭಾಗವಹಿಸುತ್ತಿದ್ದನು ಎನ್ನಲಾಗಿದೆ. ಆದರೆ ಜೀವನೋಪಾಯಕ್ಕಾಗಿ ಡ್ರಗ್ ಪೆಡ್ಲಿಂಗ್‌ಗೆ ತೊಡಗಿದ್ದನೆಂಬ ಆರೋಪ ಕೇಳಿಬಂದಿದೆ.

ಬಂಧಿತನಿಂದ ಸುಮಾರು 4 ಲಕ್ಷ 48 ಸಾವಿರ ರೂಪಾಯಿ ಮೌಲ್ಯದ 56 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಗೋವಿಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶ- ಓರ್ವ ಬಂಧನ

0

ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರ ಹಾವಳಿ ಮುಂದುವರೆದಿದೆ. ಇವರನ್ನು ಮಟ್ಟ ಹಾಕಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ನಗರದಲ್ಲಿಯೇ ಡ್ರಗ್ಸ್ ಮಾರಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು ಈತನಿಂದ ಒಟ್ಟಾರೆ ಒಂದೂವರೆ ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ.

LSD ಮಾತ್ರೆ, MDMA, ಹೈಡ್ರೋ ಗಾಂಜಾ, ಕೊಕೇನ್, LSD ಸ್ಟ್ರಿಪ್‌ಗಳನ್ನು ಪೊಲೀಸಕ್ಕೆ ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಂಗಳೂರಿನಲ್ಲಿ ಎರಡನೇ ಬಾರಿಗೆ ಬಂಧಿತನಾಗಿದ್ದು, ಹಿಂದೆ ಗಡಿಪಾರು ಮಾಡಲಾಗಿದ್ದನು. ಇದೀಗ, ಅವನ ವಿರುದ್ಧ ಹೊಸ ದಾಖಲೆ ಮತ್ತು ತನಿಖೆ ಮುಂದುವರಿದಿದೆ.

ಇದೊಂದಿಗೇ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಲ್ಲಿ ನೈಜಿರಿಯಾ ಮೂಲದ ವೆರೋನಿಕಾ ಎಮ್ಯಾನುಯೆಲ್ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿದ್ದು, 2.5 ಕೆಜಿ ಮೆಥಾಂಪೆಟಮೈನ್ ಗಾಂಜಾವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಈ ಪ್ರಕರಣಗಳು ಬೆಂಗಳೂರಿನಲ್ಲಿ ಡ್ರಗ್ಸ್ ವ್ಯಾಪಾರವು ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಹತ್ತಿರದ ಜಾಲದಿಂದ ನಡೆಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿವೆ.

error: Content is protected !!