Home Blog Page 17

ವಿಜ್ರಂಭಣೆಯ ಶ್ರೀ ಬೀರಲಿಂಗೇಶ್ವರ ಜಾತ್ರೆ

ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ಅನೇಕ ಪೂಜಾ ಕೈಂಕರ್ಯಗಳು ನಡೆದವು.

ಬೆಳಿಗ್ಗೆ 10 ಗಂಟೆಗೆ ಸಕಲ ಮಂಗಳ ವಾದ್ಯಗಳೊಂದಿಗೆ ಪಲ್ಲಕ್ಕಿಯಲ್ಲಿ ದೇವರನ್ನು ಕೂರಿಸಿ ಗಂಗಾ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವದ ಮೂಲಕ ಸಂಚರಿಸಿ ಗುಡಿಯನ್ನು ತಲುಪಿತು. ಮಧ್ಯಾಹ್ನ ಮಹಾ ದಾಸೋಹದಲ್ಲಿ ನೂರಾರು ಭಕ್ತರು ಪ್ರಸಾದವನ್ನು ಸ್ವೀಕರಿಸಿದರು.

ರಾತ್ರಿ ಶಾಲಾ ಮಕ್ಕಳಿಂದ ಜಾನಪದ ರಸಮಂಜರಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಅವರು ದೇವಸ್ಥಾನಕ್ಕೆ ದೇಣಿಗೆ ನೀಡಿದ ದಾನಿಗಳಾದ ರಾಮಣ್ಣ ಕಂಕರಿ, ಮಾದೇವಪ್ಪ ಇದ್ಲಿ ಹನುಮಪ್ಪ ದೇವರವರ, ಶ್ರೀಕಾಂತ ಸೋಂಟಿ ರಾಮಣ್ಣ ಡಂಬಳ ನಾಗಪ್ಪ ಆಲೂರು, ಶರಣಪ್ಪ ಗಾಜಿ ಇವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೀರಲಿಂಗೇಶ್ವರ ಜಾತ್ರಾ ಕಮಿಟಿ ಸದಸ್ಯರಾದ ರಮೇಶ ಬನಾಪೂರ, ಬಸಪ್ಪ ದೇವರವರ, ಶಿವಾನಂದ ಡಂಬಳ, ಚಂದ್ರು ಆಲೂರ, ಹನುಮಪ್ಪ ಬಿಚಗಲ್ಲ, ಮಾರುತಿ ಕಟಗಿ, ಬಸವರಾಜ ಇದ್ಲಿ, ಮಂಜುನಾಥ ಕೊಪ್ಪಳ, ಶ್ರೀಕಾಂತ ಬಾಬರಿ, ಮಾರುತಿ ಹಚ್ಚಪ್ಪನವರ, ಬೀರಪ್ಪ, ಬಂಡಿಹಾಳ, ಮಲ್ಲಪ್ಪ ಡಂಬಳ, ಬೀರಪ್ಪ ಬನಾಪೂರ, ಪ್ರಕಾಶ ಯತ್ನಟ್ಟಿ ಮುಂತಾದವರಿದ್ದರು.

ರಾಜೀವ್ ಗೌಡನನ್ನು ಜೈಲಿಗೆ ಕರೆದೊಯ್ಯವಾಗ ಭಾರೀ ಹೈಡ್ರಾಮಾ; ವಾಹನ ಅಡ್ಡಹಾಕಿದ ಬೆಂಬಲಿಗರು, ಪೊಲೀಸರಿಂದ ಲಾಠಿ ಚಾರ್ಜ್!

0

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಮುಖಂಡ ರಾಜೀವ್ ಗೌಡನ ಜಾಮೀನು ಅರ್ಜಿಯನ್ನು ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್ ವಜಾಗೊಳಿಸಿ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಜೈಲಿಗೆ ಕರೆದೊಯ್ಯುವ ವೇಳೆ ಕೋರ್ಟ್​​ ಮುಂಭಾಗದಲ್ಲಿ ರಾಜೀವ್ ಗೌಡ ಬೆಂಬಲಿಗರು ತೊಂದರೆ ಉಂಟುಮಾಡಿದ್ದು, ರಾಜೀವ್ ಗೌಡನ ವಾಹನವನ್ನು ಅಡ್ಡಹಾಕಿ ಜನರು ಜೈಕಾರ ಮಾಡಲು ಯತ್ನಿಸಿದರು. ಕೂಡಲೇ ಅಲರ್ಟ್ ಆದ ಪೊಲೀಸರು, ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ರಾಜೀವ್ ಗೌಡನನ್ನು ಜೈಲಿಗೆ ಕರೆದೊಯ್ದರು.

ಜಾಮೀನು ನೀಡಲು ಕೋರ್ಟ್ ನಿರಾಕರಣೆ; ಧಮ್ಕಿ ಪುಢಾರಿ ರಾಜೀವ್‌ ಗೌಡಗೆ ಜೈಲು!

ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ರಾಜಕೀಯ ಪುಢಾರಿ ರಾಜೀವ್ ಗೌಡನನ್ನು ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಿದರು.

ಆರೋಪಿಯ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರೂ, ತನಿಖೆ ಇನ್ನೂ ಮುಂದುವರಿಯಬೇಕಿದ್ದು ಆರೋಪಿಯ ಮೊಬೈಲ್ ಹಾಗೂ ಪರಾರಿಯಾಗಲು ಬಳಸಿದ ಕಾರನ್ನು ವಶಪಡಿಸಿಕೊಳ್ಳಬೇಕಿದೆ ಎಂದು ಪೊಲೀಸರು ವಾದಿಸಿದರು. ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್ ಗೌಡನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇದೇ ಪ್ರಕರಣದಲ್ಲಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದ ಮಂಗಳೂರು ಉದ್ಯಮಿ ಮೈಕಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

 

ಭೋಪಾಲ್| ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಎಸ್ಕೇಪ್ ಆದ ಕಳ್ಳ!

0

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದ ಘಟನೆ ಭದ್ರತಾ ವ್ಯವಸ್ಥೆಯ ಮೇಲಿನ ಗಂಭೀರ ಪ್ರಶ್ನೆಗಳನ್ನು ಎತ್ತಿ ತೋರಿಸಿದೆ.

ಭೋಪಾಲ್‌ನ ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಲಿಫ್ಟ್‌ನಿಂದ ಇಳಿಯುವ ವೇಳೆ, ಮಾಸ್ಕ್ ಧರಿಸಿದ್ದ ಅಪರಿಚಿತ ವ್ಯಕ್ತಿ ಆಕೆಯ ಕುತ್ತಿಗೆಯಿಂದ ಮಂಗಳಸೂತ್ರವನ್ನು ಕಸಿದುಕೊಂಡು ಪರಾರಿಯಾದ ಘಟನೆ ನಡೆದಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಆರೋಪಿ ಮಹಿಳೆಯೊಂದಿಗೆ ಲಿಫ್ಟ್‌ನಲ್ಲೇ ಪ್ರಯಾಣಿಸಿದ್ದ. ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ಆತ ಆಕೆಯ ಚಿನ್ನದ ಸರವನ್ನು ಕಸಿದು ವೇಗವಾಗಿ ಓಡಿಹೋಗಿದ್ದಾನೆ. ಮಹಿಳೆ ಕಿರುಚುತ್ತಾ ಬೆನ್ನಟ್ಟಲು ಯತ್ನಿಸಿದರೂ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ.

ಆಸ್ಪತ್ರೆಯೊಳಗೆ ಇಂತಹ ಘಟನೆ ಸಂಭವಿಸಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವಂತೆ ಆಗ್ರಹ ಕೇಳಿಬರುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಜಾಮೀನು ನೀಡಲು ಕೋರ್ಟ್ ನಿರಾಕರಣೆ; ಧಮ್ಕಿ ಪುಢಾರಿ ರಾಜೀವ್‌ ಗೌಡಗೆ ಜೈಲು!

0

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ರಾಜಕೀಯ ಪುಢಾರಿ ರಾಜೀವ್ ಗೌಡನನ್ನು ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಿದರು.

ಆರೋಪಿಯ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರೂ, ತನಿಖೆ ಇನ್ನೂ ಮುಂದುವರಿಯಬೇಕಿದ್ದು ಆರೋಪಿಯ ಮೊಬೈಲ್ ಹಾಗೂ ಪರಾರಿಯಾಗಲು ಬಳಸಿದ ಕಾರನ್ನು ವಶಪಡಿಸಿಕೊಳ್ಳಬೇಕಿದೆ ಎಂದು ಪೊಲೀಸರು ವಾದಿಸಿದರು. ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್ ಗೌಡನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇದೇ ಪ್ರಕರಣದಲ್ಲಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದ ಮಂಗಳೂರು ಉದ್ಯಮಿ ಮೈಕಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ನಡುವೆ ರಾಜೀವ್ ಗೌಡ ತನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾನೆ.

ಹಣ ಕೊಟ್ಟಿಲ್ಲ ಎಂದು ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ಮಗ! ಆರೋಪಿ ಅರೆಸ್ಟ್

0

ರಾಯಚೂರು: ಹಣ ಕೊಡಲು ನಿರಾಕರಿಸಿದ ತಾಯಿಯನ್ನೇ ಮಗ ಕಲ್ಲಿನಿಂದ ಜಜ್ಜಿ ಕೊಲೆಗೈದ ಹೃದಯವಿದ್ರಾವಕ ಘಟನೆ ಮಸ್ಕಿ ತಾಲೂಕಿನ ಜಕ್ಕೇರುಮಡು ತಾಂಡ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಚಂದವ್ವ (58) ಮೃತರು. ಕೊಲೆಗಡುಕ ಮಗ ಕುಮಾರನನ್ನು ಮುದಗಲ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕುಮಾರ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಊರಿಗೆ ಬಂದಾಗಲೆಲ್ಲ ತನ್ನ ತಾಯಿ ಚಂದವ್ವನಿಗೆ ಹಣ ಕೊಡಬೇಕು ಎಂದು ಜಗಳ ತೆಗೆದು ಹಲ್ಲೆ ನಡೆಸುತ್ತಿದ್ದನೆಂದು ತಿಳಿದುಬಂದಿದೆ. ಜನವರಿ 25ರಂದು ಬೆಳಗ್ಗೆ ಬೆಂಗಳೂರಿನಿಂದ ಜಕ್ಕೇರುಮಡು ತಾಂಡಕ್ಕೆ ಬಂದ ಕುಮಾರ, ತಾಯಿಯೊಂದಿಗೆ ಜಗಳ ತೆಗೆದು, ಹೊಲ ಮಾರಾಟ ಮಾಡಿ ಅಥವಾ ಅಡವಿಟ್ಟು ಎರಡು ಲಕ್ಷ ರೂಪಾಯಿ ನೀಡುವಂತೆ ಒತ್ತಾಯಿಸಿದ್ದಾನೆ.

ಇದಕ್ಕೆ ಚಂದವ್ವ, ಕಿರಿಯ ಪುತ್ರ ಸಂತೋಷನ ಮದುವೆ ಮಾಡಬೇಕಿದೆ, ನಮ್ಮ ಬಳಿ ಹಣವಿಲ್ಲ, ಹೊಲ ಮಾರಿದರೆ ಮದುವೆಗೆ ಹಣ ಎಲ್ಲಿಂದ ತರೋದು? ನೀನು ನಿನ್ನ ಪಾಡಿಗೆ ಹೆಂಡತಿಯ ಜೊತೆ ಇದ್ದು ತಮ್ಮನ ಮದುವೆ ಬಗ್ಗೆ ಯೋಚನೆ ಮಾಡಲ್ಲ ಎಂದು ಹೇಳಿ ಹಣ ಕೊಡಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಕುಮಾರ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್‌ಗಳನ್ನು ಒಡೆದು, ನಾಳೆಯೊಳಗೆ ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ತೆರಳಿದ್ದಾನೆ.

ನಿನ್ನೆ (ಸೋಮವಾರ) ಸಂಜೆ ಸುಮಾರು 5 ಗಂಟೆಗೆ ಮತ್ತೆ ಮನೆಗೆ ಬಂದ ಕುಮಾರ, ತಾಯಿಯೊಂದಿಗೆ ಜಗಳ ತೆಗೆದು, ಎರಡು ಲಕ್ಷ ರೂಪಾಯಿ ಕೊಡು, ನಾನು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದ್ದಾನೆ. ಹಣ ಇಲ್ಲ ಎಂದು ಚಂದವ್ವ ಹೇಳುತ್ತಿದ್ದಂತೆ, ಕುಮಾರ ಏಕಾಏಕಿ ತಾಯಿಯ ತಲೆ ಕೂದಲು ಹಿಡಿದು ಮನೆಯ ಮುಂದಿರುವ ಸತ್ಯಸೇವಲಾಲ ಭವನದ ಬಳಿ ಎಳೆದೊಯ್ದು ಗೋಡೆಗೆ ಗುದ್ದಿಸಿ, ತಲೆಗೆ ಕಲ್ಲಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.

ಗಂಭೀರವಾಗಿ ಗಾಯಗೊಂಡ ಚಂದವ್ವರನ್ನು ಮುದಗಲ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಕಲಂ 115(2), 352, 351(2), 103(1) ಬಿಎನ್‌ಎಸ್–2023 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ!

0

ಭದ್ರಾವತಿ: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅನಿಮಿಯಾ ತಡೆಗಟ್ಟಲು ನೀಡಿದ ಖನಿಜಾಂಶ ಮಾತ್ರೆ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ.

ವಾರಕ್ಕೆ ಒಮ್ಮೆ ವಿದ್ಯಾರ್ಥಿಗಳಿಗೆ ಅನಿಮಿಯಾ ತಡೆಗಟ್ಟುವ ಉದ್ದೇಶದಿಂದ ಖನಿಜಾಂಶ ಮಾತ್ರೆ ನೀಡಲಾಗುತ್ತದೆ. ಅದರಂತೆ ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ವಿತರಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ, ಮಾತ್ರೆ ಸೇವಿಸಿದ ಬಳಿಕ ಏಕಾಏಕಿ 59 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥರಾದರು.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ (ಟಿಎಚ್) ಹಾಗೂ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

0

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ  ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದೇ ಸೂಕ್ತ ಎಂದು ಸೂಚಿಸಿ, ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2021ರಲ್ಲಿ ಕೋರ್ಟ್‌ನಿಂದ ಅವರಿಗೆ ಜಾಮೀನು ಮಂಜೂರಾಗಿತ್ತು. ಆದರೆ, ಇತ್ತೀಚೆಗೆ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಿಬಿಐ ಜಾಮೀನು ರದ್ದುಪಡಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಸಿಬಿಐ ಸಲ್ಲಿಸಿದ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಅವರು ಮತ್ತೆ ಜೈಲಿಗೆ ಹೋಗಬೇಕಾಯಿತು. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದಾರೆ. ಇದೀಗ ಹೈಕೋರ್ಟ್ ಆದೇಶದಂತೆ, ವಿನಯ್ ಕುಲಕರ್ಣಿ  ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾಗಿದೆ.

ಮಹಾಕಾಳೇಶ್ವರ VIP ದರ್ಶನ ಅರ್ಜಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್!

0

ನವದೆಹಲಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಗೆ ವಿಐಪಿ ದರ್ಶನ ನೀಡುವ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಧಾರ್ಮಿಕ ವಿಚಾರಗಳನ್ನು ನಿಯಂತ್ರಿಸುವುದು ನ್ಯಾಯಾಲಯದ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿದ ನ್ಯಾಯಾಲಯ, ಈ ರೀತಿಯ ನಿರ್ಧಾರಗಳನ್ನು ದೇವಾಲಯದ ಆಡಳಿತ ಮಂಡಳಿಯೇ ತೆಗೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ.

ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಆರ್. ಮಹಾದೇವನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಅರ್ಜಿದಾರ ದರ್ಪಣ್ ಅವಸ್ಥಿ ಅವರಿಗೆ ಈ ವಿಚಾರದಲ್ಲಿ ದೇವಾಲಯ ಪ್ರಾಧಿಕಾರದ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸುವಂತೆ ಸೂಚಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವಿಷ್ಣು ಶಂಕರ್ ಜೈನ್, ದೇವಾಲಯದ ಗರ್ಭಗುಡಿ ಪ್ರವೇಶದ ವಿಷಯದಲ್ಲಿ ಪ್ರತಿಯೊಬ್ಬ ನಾಗರಿಕನನ್ನೂ ಸಮಾನವಾಗಿ ಪರಿಗಣಿಸಬೇಕು ಎಂದು ವಾದಿಸಿದರು. ವಿಐಪಿ ಸ್ಥಾನಮಾನ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ. ಎಲ್ಲರಿಗೂ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಅಥವಾ ಎಲ್ಲರಿಗೂ ಸಮಾನ ಪ್ರವೇಶ ನೀಡಬೇಕು ಎಂದು ಅವರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ದೇವಾಲಯದ ಗರ್ಭಗುಡಿಯೊಳಗೆ ಸಂವಿಧಾನದ ಕಲಂ 14 (ಸಮಾನತೆಯ ಹಕ್ಕು) ಅನ್ವಯಿಸುತ್ತದೆ ಎಂದು ಒಪ್ಪಿಕೊಂಡರೆ, ಕಲಂ 19 (ವಾಕ್ಸ್ವಾತಂತ್ರ್ಯ) ಸೇರಿದಂತೆ ಇತರ ಮೂಲಭೂತ ಹಕ್ಕುಗಳನ್ನೂ ಅಲ್ಲಿ ಅನ್ವಯಿಸಬೇಕಾದ ಪರಿಸ್ಥಿತಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು.

“ಮೊದಲು ಇತರರು ಪ್ರವೇಶಿಸುತ್ತಿರುವುದರಿಂದ ನನಗೂ ಪ್ರವೇಶಿಸುವ ಹಕ್ಕು ಇದೆ ಎಂದು ನೀವು ಹೇಳುತ್ತೀರಿ. ನಂತರ ಮಾತನಾಡುವ ಹಕ್ಕಿನ ಆಧಾರದ ಮೇಲೆ ಮಂತ್ರಗಳನ್ನು ಪಠಿಸುವ ಹಕ್ಕನ್ನೂ ಬೇಡಿಕೊಳ್ಳುತ್ತೀರಿ. ಹೀಗೆ ಎಲ್ಲಾ ಮೂಲಭೂತ ಹಕ್ಕುಗಳನ್ನು ಗರ್ಭಗುಡಿಯೊಳಗೆ ವಿಸ್ತರಿಸಬೇಕಾದ ಸ್ಥಿತಿ ಬರಬಹುದು” ಎಂದು ಪೀಠ ಸ್ಪಷ್ಟಪಡಿಸಿತು.

ಈ ಹಿಂದೆ ಹೈಕೋರ್ಟ್ ಕೂಡ, ‘ವಿಐಪಿ’ ಎಂಬ ಪದವನ್ನು ಯಾವುದೇ ಕಾಯ್ದೆ ಅಥವಾ ನಿಯಮದಲ್ಲಿ ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿಲ್ಲ. ಇದು ದೇವಾಲಯ ನಿರ್ವಹಣಾ ಸಮಿತಿ ಹಾಗೂ ಜಿಲ್ಲಾಧಿಕಾರಿಗಳ ಆಡಳಿತಾತ್ಮಕ ವಿವೇಚನೆಗೆ ಒಳಪಟ್ಟ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕಮಿಷನ್–ಭ್ರಷ್ಟಾಚಾರ ಸರ್ಕಾರ ರಾಜ್ಯವನ್ನಾಳುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

0

ಬೆಂಗಳೂರು: ಕಮಿಷನ್, ಭ್ರಷ್ಟಾಚಾರ, ಲೂಟಿ ಮತ್ತು ದುಂಡಾವರ್ತಿಯ ಸರಕಾರವೇ ಇವತ್ತು ರಾಜ್ಯವನ್ನಾಳುತ್ತಿದೆ ಎಂದು ವಿಧಾನಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಟೀಕೆ ನಡೆಸಿದರು.

ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಆರೋಪಗಳನ್ನು ನಾವು ಮಾತ್ರ ಮಾಡುತ್ತಿಲ್ಲ, ರಾಜ್ಯದ ಜನರೇ ಈ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿಯೇ ನಮ್ಮ ಕೆಲವು ಸ್ನೇಹಿತರಿದ್ದಾರೆ. ಅವರಿಗೂ ಈ ಸರಕಾರದ ನಡೆ ಬೇಸರ ತಂದಿದೆ. ಫೋನ್ ಮಾಡಿದಾಗಲೂ ‘ಬಿಡಬೇಡ್ರಿ ಈ ಜನರನ್ನು’ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ಸರಕಾರ ಮಾಡುತ್ತಿರುವ ತಪ್ಪುಗಳನ್ನು ಜನರ ಗಮನಕ್ಕೆ ತರಲೇಬೇಕು. ಅದಕ್ಕಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದರು. ಅಬಕಾರಿ ಇಲಾಖೆಯಲ್ಲಿ 4 ಸಾವಿರ ಕೋಟಿ ಲೂಟಿ ನಡೆದಿದೆ ಎಂದು ನಾವು ಆರೋಪಿಸಿದ್ದೆವು. ಆದರೆ ಅದು ತಪ್ಪು ಎಂದು ಈಗ ಗೊತ್ತಾಗಿದೆ. ಲೂಟಿ ಮೊತ್ತ 6 ಸಾವಿರ ಕೋಟಿ ಎಂದು ಅಬಕಾರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನೇರವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.

ಈ ವಿಚಾರವಾಗಿ ನಿನ್ನೆ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಹಾಗಾದರೆ ಆ 6 ಸಾವಿರ ಕೋಟಿ ರೂಪಾಯಿಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಎಷ್ಟು ಪಾಲು ಬಂದಿದೆ ಎಂದು ಅವರು ಪ್ರಶ್ನಿಸಿದರು. ಜೊತೆಗೆ ಈ ಹಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪಾಲೆಷ್ಟು ಎಂಬುದನ್ನೂ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

Kane Richardson: ದಿಢೀರ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಆಟಗಾರ!

0

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗಿ ಕೇನ್ ರಿಚರ್ಡ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2023ರಲ್ಲಿ ಗಾಯದ ಕಾರಣ ಆಸ್ಟ್ರೇಲಿಯಾ ತಂಡದಿಂದ ಹೊರಬಿದ್ದಿದ್ದ ರಿಚರ್ಡ್ಸನ್, ಇತ್ತೀಚೆಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಆದರೆ ಇದೀಗ 34ನೇ ವಯಸ್ಸಿನಲ್ಲಿ ನಿವೃತ್ತಿ ನಿರ್ಧಾರ ಕೈಗೊಂಡಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಆಸ್ಟ್ರೇಲಿಯಾ ಪರ 25 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೇನ್ ರಿಚರ್ಡ್ಸನ್, ಒಟ್ಟು 1312 ಎಸೆತಗಳನ್ನು ಎಸೆದು 1240 ರನ್ ನೀಡಿದ್ದು, ಈ ಅವಧಿಯಲ್ಲಿ 39 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ ಕಳೆದ ಐದು ವರ್ಷಗಳಿಂದ ಅವರು ಆಸ್ಟ್ರೇಲಿಯಾ ಪರ ಯಾವುದೇ ಏಕದಿನ ಪಂದ್ಯವನ್ನೂ ಆಡಿರಲಿಲ್ಲ ಎಂಬುದು ಗಮನಾರ್ಹ.

ಇನ್ನು ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ರಿಚರ್ಡ್ಸನ್, 36 ಪಂದ್ಯಗಳಲ್ಲಿ 756 ಎಸೆತಗಳನ್ನು ಎಸೆದು 1056 ರನ್ ನೀಡಿ 45 ವಿಕೆಟ್‌ಗಳನ್ನು ಪಡೆದುಕೊಂಡಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಜೊತೆಗೆ ಇಂಡಿಯನ್ ಪ್ರೀಮಿಯರ್ ಲೀಗ್‌ಲ್ಲೂ ಕೇನ್ ರಿಚರ್ಡ್ಸನ್ ಕಣಕ್ಕಿಳಿದಿದ್ದರು. ಐಪಿಎಲ್‌ನಲ್ಲಿ ಒಟ್ಟು 15 ಪಂದ್ಯಗಳನ್ನು ಆಡಿರುವ ಅವರು, 335 ಎಸೆತಗಳಲ್ಲಿ 472 ರನ್ ನೀಡಿ 19 ವಿಕೆಟ್‌ಗಳನ್ನು ಕಬಳಿಸಿದ್ದರು. ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪರ ಅವರು ಆಡಿದ್ದರು.

ವಿಶೇಷವಾಗಿ 2021ರಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದ ಬಳಿಕ ಅವರು ಐಪಿಎಲ್‌ನಿಂದಲೂ ದೂರವಾಗಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

error: Content is protected !!