Home Blog Page 18

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ: ₹15.42 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

0

ಹಾವೇರಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮೇಲ್ಛಾವಣಿ ಹಂಚು ತೆಗೆದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮೊಹಮ್ಮದ್ ಗೌಸ್ ಹಂಚಿನಮನಿ ಮನೆಯಲ್ಲಿ ಅಡುಗೆ ಕೋಣೆಯ ಮೇಲ್ಚಾವಣಿಯ ಹಂಚನ್ನು ತೆಗೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಟ್ರೆಜರಿ ಬಾಗಿಲು ಮುರಿದು ಅದರಲ್ಲಿದ್ದ ಚಿನ್ನದ ಮಾಂಗಲ್ಯ ಸರ, ನೆಕ್ಲೆಸ್, ಜುಮುಕಿ, ಚೈನ್, ಚಿನ್ನದ ಪದಕದ ಸರ, ಒಂಬತ್ತು ಚಿನ್ನದ ಉಂಗುರಗಳು ಸೇರಿದಂತೆ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.

ಒಟ್ಟು ಸುಮಾರು ₹15,42,000 ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇನ್ನೂ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಧ್ಯರಾತ್ರಿ 3 ಗಂಟೆಗೆ ಸ್ಥಳಕ್ಕೆ ಶಿಗ್ಗಾವಿ ಡಿವೈಎಸ್ಪಿ, ಹಾನಗಲ್ ಪೊಲೀಸ್ ಠಾಣೆ ಸಿಪಿಐ ಬಸವರಾಜ್ ಹಳಬಣ್ಣನವರ, ಪಿಎಸ್ಐ ಸಂಪತ್ ಆನಿಕಿವಿ,

ಸೊಕೊ ಅಧಿಕಾರಿಗಳು, ಡಾಗ್ ಸ್ಕ್ವಾಡ್ ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ವಿದೇಶಿ ಮಹಿಳೆಯ ಅತ್ಯಾಚಾರ,ಕೊಲೆ ಕೇಸ್: 3 ಆರೋಪಿಗಳಿಗೆ ಮರಣದಂಡನೆ ವಿಧಿಸಿ ಗಂಗಾವತಿ ಕೋರ್ಟ್ ಐತಿಹಾಸಿಕ ತೀರ್ಪು

0

ಕೊಪ್ಪಳ: ಹಂಪಿ ಸಮೀಪ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಇಸ್ರೇಲ್ ಮೂಲದ ಮಹಿಳೆಯ ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.

ಅದರ ಬೆನ್ನಲ್ಲೇ ಫೆಬ್ರವರಿ 16ರಂದು ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಅವರು ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈ ಪೈಶಾಚಿಕ ಘಟನೆ 2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ನಡೆದಿತ್ತು.

ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಲಾಗಿದ್ದು, ಈ ವೇಳೆ ಅಮೆರಿಕದ ಪ್ರವಾಸಿಗನನ್ನು ಕೊಲೆ ಮಾಡಲಾಗಿತ್ತು. ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಮೂವರನ್ನೂ ದೋಷಿಗಳೆಂದು ಘೋಷಿಸಿ ಇದೀಗ ಮರಣದಂಡನೆ ವಿಧಿಸಿದೆ. ಘಟನೆ ನಡೆದ ಕೇವಲ ಒಂಬತ್ತು ತಿಂಗಳಲ್ಲೇ ಗಂಗಾವತಿ ಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದು ಗಮನಾರ್ಹವಾಗಿದೆ.

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು: ಕಾರ್ಣಿಕ ಹೇಳಿದ ಸ್ವಾಮೀಜಿ

0

ದಾವಣಗೆರೆ: ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ನಡೆದ ಜಾತ್ರೆಯಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳುಗದ್ದುಗೆ ಏರಿ ಕಾರ್ಣಿಕ ಪ್ರಕಟಿಸಿದರು.

ಮುಳ್ಳುಗದ್ದುಗೆ ಏರಿ ಕುಣಿದ ಬಳಿಕ ಅವರು ಮಳೆ, ಬೆಳೆ ಹಾಗೂ ಸಾಮಾಜಿಕ ಪರಿಸ್ಥಿತಿಗಳ ಕುರಿತು ಭವಿಷ್ಯವಾಣಿ ಮಾಡಿದರು. ಈ ವರ್ಷ ಸಮೃದ್ಧ ಮಳೆಯಾಗಿ ಜಲಾಶಯಗಳು ತುಂಬಲಿದ್ದು ಕೃಷಿಗೆ ಅನುಕೂಲಕರ ವರ್ಷವಾಗಲಿದೆ ಎಂದು ಹೇಳಿದರು.

ಇದರ ಜೊತೆಗೆ ಪ್ರಯಾಣದ ವೇಳೆ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿ, ಜನರು ಜಾಗರೂಕರಾಗಿರಬೇಕು ಎಂದು ಸೂಚಿಸಿದರು. ರಾಜಕಾರಣಿಗಳು ಜನಸೇವೆಯಲ್ಲಿ ಹೆಚ್ಚು ತೊಡಗಿಕೊಂಡು ಜನರ ವಿಶ್ವಾಸ ಗಳಿಸಬೇಕು ಎಂಬ ಸಂದೇಶ ನೀಡಿದರು.

ಪ್ರತಿ ವರ್ಷ ನಡೆಯುವ ಈ ಸಂಪ್ರದಾಯಿಕ ಜಾತ್ರೆಯಲ್ಲಿ ಮುಳ್ಳುಗದ್ದುಗೆ ಉತ್ಸವ ವಿಶೇಷ ಸ್ಥಾನ ಹೊಂದಿದ್ದು, ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು. ಸ್ವಾಮೀಜಿಯ ಕಾರ್ಣಿಕ ಭವಿಷ್ಯದಲ್ಲಿ ನಿಜವಾಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಗಟ್ಟಿಯಾಗಿದೆ.

ಬ್ಯಾರಿಕೇಡ್ ಎದುರು ಫ್ಯಾನ್ಸ್ ಅತಿರೇಕ: ದರ್ಶನ್ ಹುಟ್ಟುಹಬ್ಬದಂದು ಅಭಿಮಾನಿಗೆ ಪೊಲೀಸ್ ಕಪಾಳಮೋಕ್ಷ

ಬೆಂಗಳೂರು: ಜೈಲಿನಲ್ಲಿದ್ದರೂ ನಟ ದರ್ಶನ್ ಜನ್ಮದಿನ ಸಂಭ್ರಮ ಅಭಿಮಾನಿಗಳಲ್ಲಿ ಕಡಿಮೆಯಾಗಿಲ್ಲ. ಆರ್‌ಆರ್ ನಗರದ ನಿವಾಸದ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುತ್ತಿರುವ ಹಿನ್ನೆಲೆ ಪೊಲೀಸರು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ.

ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಅಭಿಮಾನಿಗಳ ಪ್ರವೇಶ ತಡೆಯಲಾಗಿದ್ದು, ಈ ವೇಳೆ ಒಬ್ಬ ಅಭಿಮಾನಿ ಅತಿರೇಕ ತೋರಿದ ಕಾರಣ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ಕೆಲಕಾಲ ಉದ್ವಿಗ್ನತೆಗೆ ಕಾರಣವಾದರೂ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜೈಲುವಾಸದಲ್ಲಿರುವ ದರ್ಶನ್ ಈ ಬಾರಿ ಹುಟ್ಟುಹಬ್ಬವನ್ನು ಕಾರಾಗೃಹದಲ್ಲೇ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದಾರೆ. ಜೊತೆಗೆ ರಕ್ಷಿತಾ ಪ್ರೇಮ್, ಅನುಷಾ ರೈ, ಯಶಸ್ ಸೂರ್ಯ, ಚಿಕ್ಕಣ್ಣ, ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ ಹಾಗೂ ರಚಿತಾ ರಾಮ್ ಸೇರಿದಂತೆ ಹಲವು ಕಲಾವಿದರು ಶುಭಾಶಯ ತಿಳಿಸಿದ್ದಾರೆ.

ಜೈಲಿನಲ್ಲಿದ್ದರೂ ಅಭಿಮಾನಿಗಳ ಉತ್ಸಾಹ ಕಡಿಮೆಯಾಗದಿರುವುದು ಕನ್ನಡ ಚಿತ್ರರಂಗದಲ್ಲಿ ದರ್ಶನ್‌ಗೆ ಇರುವ ಭಾರೀ ಜನಪ್ರಿಯತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತಿರುಗೇಟು ನೀಡಿದ ನಟಿ ತ್ರಿಶಾ

ಚೆನ್ನೈ: ತಮಿಳುನಾಡಿನಲ್ಲಿ ಸಿನಿಮಾ ಮತ್ತು ರಾಜಕೀಯ ನಡುವಿನ ಗಡಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ನೀಡಿದ ಹೇಳಿಕೆಗೆ ನಟಿ ತ್ರಿಷಾ ಕೃಷ್ಣನ್ ಕಾನೂನುಬದ್ಧ ಪ್ರತಿಕ್ರಿಯೆ ನೀಡಿದ್ದಾರೆ.

ನಟ ವಿಜಯ್ ಅವರ ರಾಜಕೀಯ ಪ್ರವೇಶವನ್ನು ಟೀಕಿಸುವ ವೇಳೆ ತ್ರಿಷಾ ಹೆಸರನ್ನು ಉಲ್ಲೇಖಿಸಲಾಗಿದ್ದು, ಇದರಿಂದ ಸಿನಿಮಾ ಹಾಗೂ ರಾಜಕೀಯ ವಲಯಗಳಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತ್ರಿಷಾ ಪರ ವಕೀಲರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ — ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ಸದಾ ತಟಸ್ಥ ನಿಲುವನ್ನೇ ಅನುಸರಿಸುತ್ತಾರೆ ಎಂದು ಹೇಳಿದ್ದಾರೆ. ತ್ರಿಷಾ ಅವರನ್ನು ಅವರ ಕಲೆಯ ಮೂಲಕವೇ ಗುರುತಿಸಬೇಕು ಹೊರತು ರಾಜಕೀಯ ಸಂಬಂಧಗಳಿಂದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕ ಹುದ್ದೆಯಲ್ಲಿರುವವರು ಮಾತನಾಡುವಾಗ ಸಮಚಿತ್ತತೆ ಮತ್ತು ಜವಾಬ್ದಾರಿ ಅಗತ್ಯ ಎಂದು ಹೇಳಿಕೆಯಲ್ಲಿ ಒತ್ತಿಹೇಳಲಾಗಿದೆ. ಸಂಬಂಧಿಸದ ವಿಷಯಗಳಲ್ಲಿ ತಮ್ಮ ಕಕ್ಷಿದಾರರ ಹೆಸರನ್ನು ಬಳಸಬಾರದು ಎಂದು ಕೂಡ ಮನವಿ ಮಾಡಲಾಗಿದೆ.

ನೈನಾರ್ ನಾಗೇಂದ್ರನ್ ನೀಡಿದ ವಿವಾದಾತ್ಮಕ ಹೇಳಿಕೆ ಬಳಿಕ ಈ ವಿಚಾರ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಚರ್ಚೆಯಾಗಿ ಪರಿಣಮಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬಿಗ್ ಶಾಕ್: ಆಯ್ಕೆ ಅಸಿಂಧು ಎಂದ ಹೈಕೋರ್ಟ್

0

ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪು ನೀಡಿದೆ.

ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷವಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರೆಂಬ ಆರೋಪವನ್ನು ಪರಿಗಣಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಲಾಗಿದೆ. ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ಕಳುಹಿಸಲಾಗಿದೆ.

ಆದರೆ ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಮನವಿ ಸಲ್ಲಿಸಿದ್ದರು.

ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದೆ.

ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರೋದು ಸುಬ್ಬಾರೆಡ್ಡಿಗೆ ಉಳಿದ ಪ್ರಮುಖ ಮಾರ್ಗವಾಗಿದೆ. ಮುಂದಿನ ಆರು ತಿಂಗಳೊಳಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡದಿದ್ದರೆ ಬಾಗೇಪಲ್ಲಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಗೋವಾ ರೆಸಾರ್ಟ್ ವಿಚಾರ: ಯಾವುದೂ ಬುಕ್ ಆಗಿಲ್ಲ- ಸಚಿವ ದಿನೇಶ್ ಗುಂಡೂರಾವ್

0

ಬೆಳಗಾವಿ: ಶಾಸಕರಿಗೆ ಗೋವಾದಲ್ಲಿ ರೆಸಾರ್ಟ್ ಬುಕ್ ಮಾಡಲಾಗಿದೆ ಎಂಬ ವಿಚಾರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಬೈಲಹೊಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೂ ಬುಕ್ ಆಗಿಲ್ಲ. ಹಾಲಿಡೇಗೆ ನಮ್ಮ ಶಾಸಕರು ಟೂರ್ ಹೋಗಬಾರದಾ? ಎಲ್ಲರೂ ಸೇರಿಯೂ ಹೋಗಬಹುದು, ಬಿಟ್ಟೂ ಹೋಗಬಹುದು. ಅದೇನು ದೊಡ್ಡ ವಿಷಯವಲ್ಲ ಎಂದು ಹೇಳಿದ್ದಾರೆ.

ಮತ್ತೆ ಶಾಸಕರು ಫಾರಿನ್ ಟೂರ್‌ಗೆ ಸಿದ್ಧರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಯಾರು ಹೋಗುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ವೈಯಕ್ತಿಕ ಟೂರ್‌ಗೆ ಹೊರಟರೆ ನಾವೇನು ಹೋಗಬೇಡಿ ಅಂತ ಹೇಳುವುದಕ್ಕೆ ಆಗುತ್ತಾ?” ಎಂದು ಮರುಪ್ರಶ್ನಿಸಿದರು.

ಸಿಎಂ ಬದಲಾವಣೆ ಗೊಂದಲಕ್ಕೆ ಹೈಕಮಾಂಡ್ ಏಕೆ ಫುಲ್ ಸ್ಟಾಪ್ ಇಡುತ್ತಿಲ್ಲ ಎಂಬ ಪ್ರಶ್ನೆಗೆ, ಯಾರು ಫುಲ್ ಸ್ಟಾಪ್ ಇಟ್ಟಿದ್ದಾರೆ, ಯಾರೂ ಇಟ್ಟಿಲ್ಲ ಎಂದು ಉತ್ತರಿಸಿದರು. ಇದೇ ವೇಳೆ, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.

ನಿರಂತರ ಸಿಎಂ ಬದಲಾವಣೆ ಕೂಗಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಗೊಂದಲ ಮೂಡುತ್ತಿದೆಯೇ ಎಂಬ ಪ್ರಶ್ನೆಗೆ, ನಮ್ಮಲ್ಲಿ ಯಾವುದೇ ಗೊಂದಲವೂ ಇಲ್ಲ. ಮೊನ್ನೆ ನಡೆದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೆವು. ಹಾವೇರಿಯಲ್ಲಿ ಸಾವಿರ ದಿನದ ಕಾರ್ಯಕ್ರಮವನ್ನೂ ಒಟ್ಟಾಗಿ ಮಾಡಿದ್ದೇವೆ. ಸರ್ಕಾರದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ, ಭಿನ್ನಮತವೂ ಇಲ್ಲ. ಈ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಸಮರ್ಥಿಸಿಕೊಂಡರು.

ಕಾಡಾನೆ ದಾಳಿಗೆ ಚಿಕ್ಕಮಗಳೂರಿನಲ್ಲಿ ಕಾರ್ಮಿಕನ ಸಾವು

0

ಚಿಕ್ಕಮಗಳೂರು: ಹುಣಸೆಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಯಲ್ಲಪ್ಪ ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ಯಲ್ಲಪ್ಪ, ನಾಗೇಶ್ ಗೌಡ ಅವರ ತೋಟದಲ್ಲಿ ಕೆಲಸ ಮಾಡುವ ವೇಳೆ ಕಾಡಾನೆ ದಾಳಿಗೆ ಗುರಿಯಾದರು.

ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುತ್ತಾಡುತ್ತಿದ್ದ ಕಾಡಾನೆ, ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿದದ್ದು ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ. ಅರಣ್ಯ ಇಲಾಖೆ ಈ ಘಟನೆಯ ಕುರಿತು ತ್ವರಿತ ತನಿಖೆ ನಡೆಸುತ್ತಿದ್ದು, ಕಾಡಾನೆ ಸಂಚಾರವನ್ನು ನಿಯಂತ್ರಿಸಲು ತಕ್ಷಣ ಕ್ರಮಗಳನ್ನು ಕೈಗೊಂಡಿದೆ.

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿಯಿಂದ ಚಾಲನೆ

0

ಕೋಲಾರ: ದೇಶದ ಹಾರ್ಮಿಕ ವೀರ್ಯದಲ್ಲಿ ಮತ್ತೊಂದು ಹೊಸ ಘಟ್ಟ – ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ ನಾಳೆ (ಫೆ.17) ಅಧಿಕೃತ ಚಾಲನೆ ಪಡೆಯುತ್ತಿದೆ. ವರಚುವಲ್ ಉದ್ಘಾಟನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ಈ ಘಟಕವನ್ನು ಉದ್ಘಾಟಿಸಲಿದ್ದಾರೆ.

ಸ್ಥಳೀಯ ಸನ್ನಿವೇಶದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭದ್ರತಾ ಕ್ರಮಗಳು ಗಟ್ಟಿಯಾಗಿದ್ದು, ಜಿಲ್ಲಾಧಿಕಾರಿ ಎಂ.ಆರ್. ರವಿ ಹಾಗೂ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ತಪಾಸಣೆ ಮಾಡಿದರು.

16 ಎಕರೆ ಪ್ರದೇಶದಲ್ಲಿ ನಿರ್ಮಿತ ಘಟಕವು ದೇಶದ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ. ಮೊದಲ ಹಂತದಲ್ಲಿ ವರ್ಷಕ್ಕೆ 10 H125 ಮಾದರಿಯ ಹೆಲಿಕಾಪ್ಟರ್‌ಗಳು ಉತ್ಪಾದನೆಗೆ ಬರುತ್ತವೆ. ಸ್ಥಳೀಯ ಉದ್ಯೋಗ ಅವಕಾಶಗಳು, ಕೋಲಾರ ಕೈಗಾರಿಕಾ ಬೆಳವಣಿಗೆ, ಮತ್ತು ರಾಷ್ಟ್ರಮಟ್ಟದ ಹೆಗ್ಗಳಿಕೆ – ಈ ಎಲ್ಲಾ ಅಂಶಗಳು ಈ ಘಟಕದ ಮಹತ್ವವನ್ನು ಹೆಚ್ಚಿಸುತ್ತಿವೆ.

ಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಬೆಂಗಳೂರು: ಪವಿತ್ರಾ ಗೌಡ ಅವರಿಗೆ ಮತ್ತೆ ಜಾಮೀನು ನಿರಾಕರಣೆ ಎದುರಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರು ಮಗಳ ಪರೀಕ್ಷೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿದ್ದರು.

25 ದಿನಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಅವರು ಜೈಲಿನಲ್ಲೇ ಉಳಿಯಬೇಕಾಗಿದೆ.

ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಕೂಡ ಭಾಗಿಯಾಗಿದ್ದರೆಂದು ಆರೋಪಿಸಲಾಗಿದೆ. ಆರೋಪಿಯು ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ.
ಇದಕ್ಕೂ ಮುನ್ನ ಜೈಲು ಆಹಾರದಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಮನೆ ಊಟಕ್ಕೆ ಅವಕಾಶ ಕೋರಿದ್ದರೂ ನಂತರ ಅದು ರದ್ದುಗೊಂಡಿತ್ತು.

error: Content is protected !!