Home Blog Page 18

ಮಾಲೂರು ಪೊಲೀಸರ ಭರ್ಜರಿ ಭೇಟೆ: 60 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ.! ಇಬ್ಬರು ಅರೆಸ್ಟ್

0

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರತ್ಯೇಕ ಆರೋಪಿಗಳಿಂದ 60 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳು ವಶಕ್ಕೆ ಪಡೆದಿದ್ದಾರೆ.  ಪಶ್ಚಿಮ ಬಂಗಾಳ ಮೂಲದ ಹುಸ್ ದರ್ ಶೇಖ್ (24) ಹಾಗೂ ತಮಿಳುನಾಡು ಮೂಲದ ಉಮಾಶಂಕರ್ (27) ಬಂಧಿತ ಆರೋಪಿಗಳಾಗಿದ್ದು,

ಹುಸ್ ದರ್ ಶೇಖ್ ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ದಿ ಎಂಪೈರಿಯನ್ ಅಪಾರ್ಟ್‌ಮೆಂಟ್‌ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಚಲನವಲನವನ್ನು ಗಮನಿಸಿ ಕಳ್ಳತನಕ್ಕೆ ಯತ್ನಿಸಿದ್ದ.

ನವೆಂಬರ್ 4ರಂದು ಪ್ರೀತ್ ಕಮಲ್ ಎಂಬ ಮಹಿಳೆಯ ವಿಲ್ಲಾದಲ್ಲಿ ಯಾರೂ ಇರದ ಸಮಯವನ್ನು ಬಳಸಿಕೊಂಡು, ಸುಮಾರು 40 ಲಕ್ಷ ಮೌಲ್ಯದ 272 ಗ್ರಾಂ ಚಿನ್ನ–ವಜ್ರಾಭರಣ ಹಾಗೂ 640 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾನೆ. ನಂತರ ಪರಾರಿಯಾಗಿದ್ದ ಶೇಖ್ ಅನ್ನು ಪೊಲೀಸರು ಶೋಧಿಸಿ ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಆರೋಪಿಯಾದ ಉಮಾಶಂಕರ್ ಮನೆ ಕಳ್ಳತನ, ಸರಗಳ್ಳತನ ಮತ್ತು ಗಮನ ಬೇರೆಡೆ ಸೆಳೆಯುವ ಮೂಲಕ ಕಳ್ಳತನ ಮಾಡುವ ಶೈಲಿಗೆ ಹೆಸರಾದವನು. ನವೆಂಬರ್ 11ರಂದು ಮಾಲೂರಿನ ವೈಟ್ ಗಾರ್ಡನ್ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದಾಗ ಪೊಲೀಸರ ಕಣ್ಣೀಗೆ ಬಿದ್ದಿದ್ದಾನೆ.

ಓಡಲು ಪ್ರಯತ್ನಿಸಿದ ಉಮಾಶಂಕರ್‌ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ, ಹಲವು ಕಳ್ಳತನಗಳಲ್ಲಿ ತಾನೇ ತೊಡಗಿದ್ದನೆಂದು ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯಿಂದ 170 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ 21 ಲಕ್ಷ ಮೌಲ್ಯದ ಆಸ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ‌ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ಅಂದು ನಡೆಯಲಿದ್ದು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಅವರು ಕರೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ‌ದೇಶ‌ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರ್ಕಾರ ಅಂತ ಅರ್ಥ. ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ‌ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.‌

ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ
ಇಡೀ ದೇಶವೇ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು.‌ ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಕೂಡ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಅಂಗನವಾಡಿ ಆರಂಭಿಸಿದರು. ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‌ಕೆಜಿ,‌ ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು.‌ ಅರ್ಥಪೂರ್ಣ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಆಚರಿಸೋಣ ಎಂದರು.

ಹಾಡಹಗಲೇ ಕೋಟಿ ಕೋಟಿ ದರೋಡೆ ಕೇಸ್: ಶಂಕಿತರ ಫೋಟೋ ಬಿಡುಗಡೆ ಗೊಳಿಸಿದ ಪೊಲೀಸ್ ಇಲಾಖೆ

0

ಬೆಂಗಳೂರು: ಇತ್ತೀಚೆಗೆಷ್ಟೇ ಬೀದರ್ ನಲ್ಲಿ ಎಟಿಎಂ ವಾಹನ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಕೋಟ್ಯಾಂತರ ರೂಪಾಯಿ ಇದ್ದ ಹಣದ ಟ್ರಂಕ್ ದೋಚಿರುವ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಹೃದಯಭಾಗದಲ್ಲೇ ಅತಿದೊಡ್ಡ ದರೋಡೆ ನಡೆದಿದೆ. ಗ್ಯಾಂಗ್​​ವೊಂದು ಹಾಡಹಗಲೇ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದೆ.

ಪ್ರಾಥಮಿಕ ಮಾಹಿತಿ ಅನುನಾರ ಒಟ್ಟು 6 ಮಂದಿ ಆರೋಪಿಗಳ ಪೋಟೋ ಬಿಡುಗಡೆ ಮಾಡಿದೆ. ಹಳೆ ಆರೋಪಿಗಳು ಹಾಗು ಕೆಲ ಶಂಕಿತರ ಫೋಟೋ ಬಿಡುಗಡೆ ಮಾಡಲಾಗಿದ್ದು, ನಾಕ ಬಂದಿಯಲ್ಲಿ ಈ ಫೋಟೋ ದಲ್ಲಿರೋ ವ್ಯಕ್ತಿಗಳ ಫೋಟೋ ಮ್ಯಾಚ್ ಮಾಡುವಂತೆ ಎಲ್ಲಾ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ದರೋಡೆಕೋರರು ತಂದಿದ್ದ ಇನ್ನೋವಾ ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಿಡಿಸಿರುವುದು ಬೆಳಕಿಗೆ ಬಂದಿದೆ. ಹೌದು..KA 03 NC 8052 ಸಂಖ್ಯೆಯ ಇನ್ನೋವಾ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಆದ್ರೆ, KA 03 NC 8052 ಸಂಖ್ಯೆಯ ಮೂಲ ಕಾರು ಮಾರುತಿ ಸುಜುಕಿ ಎಂದು ತಿಳಿದುಬಂದಿದೆ. ಇದರಿಂದ ಈ ಗ್ಯಾಂಗ್ ಪಕ್ಕಾ ಪ್ಲ್ಯಾನ್ ಮಾಡಿಯೇ ಈ ಕೃತ್ಯ ಎಸಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ.

ಹಣ ದರೋಡೆ ಮಾಡಿ ಗ್ಯಾಂಗ್, ​ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಡೇರಿ ಸರ್ಕಲ್, ಕೋರಮಂಗಲ, ಸೋನಿ ವರ್ಡ್ ಜಂಕ್ಷನ್, ದೊಮ್ಮಲೂರು, ಮಾರತ್ತಹಳ್ಳಿ, ವೈಟ್​ ಫಿಲ್ಡ್​​ ಮಾರ್ಗವಾಗಿ ಹೊಸಕೋಟೆ ಕಡೆ ತೆರಳಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ದರೋಡೆಕೋರರ ಗ್ಯಾಂಗ್​​ ಬೆನ್ನುಬಿದ್ದಿದ್ದಾರೆ.

PM-KISAN ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ!

0

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ  ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆಯಲ್ಲಿ PM-KISAN ಯೋಜನೆಯ 21ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 21ನೇ ಕಂತಿನಲ್ಲಿ ₹18,000 ಕೋಟಿಗೂ ಹೆಚ್ಚು ಮೊತ್ತ ರೈತರ ಖಾತೆಗಳಿಗೆ ಜಮೆಯಾಗಿದೆ. ಈ ಪರಿಹಾರ ಸುಮಾರು 9 ಕೋಟಿ ರೈತರಿಗೆ ನೀಡಲಾಗಿದ್ದು, ಪ್ರತಿ ಅರ್ಹ ರೈತನಿಗೆ ₹2,000 ನಗದು ನೇರವಾಗಿ ಡಿಬಿಟಿ ಮೂಲಕ ತೆರಳಿದೆ.

ದೇಶಾದ್ಯಂತ ಸುಮಾರು ಒಂಬತ್ತು ಕೋಟಿ ರೈತರಿಗೆ ಈ ಯೋಜನೆಯಿಂದ ಪ್ರಯೋಜನ ಸಿಗುತ್ತಿದ್ದು, 21ನೇ ಕಂತಿನಲ್ಲಿ 18,000 ಕೋಟಿ ರೂ.ಗಳಿಗಿಂತ ಹೆಚ್ಚು ಹಣ ರೈತರ ಖಾತೆಗೆ ಜಮೆಯಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಈ ಯೋಜನೆಯಡಿಯಲ್ಲಿ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ ಈಗಾಗಲೇ 3.70 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಿತರಿಸಲಾಗಿದೆ. ಈ ನಿಧಿಯು ರೈತರಿಗೆ ಕೃಷಿ ಸಾಮಾಗ್ರಿಗಳ ಖರೀದಿಸಲು ಸಹಾಯ ಮಾಡಿದೆ.

ನವೆಂಬರ್ 21ರವರೆಗೆ ನಡೆಯಲಿರುವ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆಯನ್ನು ತಮಿಳುನಾಡು ನೈಸರ್ಗಿಕ ಕೃಷಿ ಪಾಲುದಾರರ ವೇದಿಕೆ ಆಯೋಜಿಸಿದೆ. ಈ ಶೃಂಗಸಭೆಯು ಸುಸ್ಥಿರ, ಪರಿಸರ ಸ್ನೇಹಿ ಮತ್ತು ರಾಸಾಯನಿಕ ಮುಕ್ತ ಕೃಷಿ ಪದ್ಧತಿಗಳನ್ನು ಒತ್ತಿಹೇಳುತ್ತದೆ. ಈ ಕಾರ್ಯಕ್ರಮವು ರೈತ-ಉತ್ಪಾದಕ ಸಂಸ್ಥೆಗಳು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಮಾರುಕಟ್ಟೆ ಸಂಪರ್ಕವನ್ನು ಬೆಳೆಸುವ ಗುರಿಯನ್ನು ಹೊಂದಿದೆ.

ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ನಿಖಿಲ್ ಕುಮಾರಸ್ವಾಮಿ

0

ಬೆಂಗಳೂರು: ತುಂಗಭದ್ರಾ ಡ್ಯಾಮ್ ನಿಂದ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ, ತುಂಗಭದ್ರ ಡ್ಯಾಮ್ ಗೇಟ್ ಅಳವಡಿಕೆ ವಿಳಂಬ ಧೋರಣೆ ಖಂಡಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸಾವಿರಾರು ರೈತರ ನೇತೃತ್ವದಲ್ಲಿ ನವೆಂಬರ್ 25 ರಂದು ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಈ ಬಗ್ಗೆ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ವ್ಯಾಪ್ತಿಯ 4 ಜಿಲ್ಲೆಗಳ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ ಪ್ರತಿ ಎಕರೆಗೆ 50,000 ರೂ.ಪರಿಹಾರ ನೀಡಬೇಕು. ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಗಳನ್ನ ತೆರೆಯ ಬೇಕೆಂದು ರೈತರ ಜತೆ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ

ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಅತಿವೃಷ್ಟಿಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇನ್ನು ಸಂಕಷ್ಟದಲ್ಲಿರುವ ರೈತರ ಎರಡನೇ ಬೆಳೆಗೂ ನೀರು ಅಂದ್ರೆ ಹೇಗೆ.? ರೈತರ ಸಮಸ್ಯೆಗಳಿಗೆ ಈ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದೆ. ಭತ್ತದ ದರವು ಕುಸಿದಿದೆ. ಸರ್ಕಾರ ಈವರೆಗೂ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಈ ನಾಲ್ಕು ಜಿಲ್ಲೆಗಳ 10 ಲಕ್ಷ ಎಕರೆ ಜಮೀನು ಬದುಕೇ ತುಂಗಭದ್ರಾ ಜಲಾಶಯದ ಮೇಲೆ ನಿಂತಿದೆ. ಜಲಾಶಯದ ಕ್ರಸ್ಟ್ ಕಿತ್ತು ಹೋಗಿದ್ದರಿಂದ ಸಾವಿರಾರು ಕ್ಯೂಸೆಕ್ ನೀರು ಸಮುದ್ರ ಪಾಲಾಗಿದೆ. ಸರ್ಕಾರ ಆಂಧ್ರ, ತೆಲಂಗಾಣದ ಸಿಎಂಗಳ ಜತೆ ಸರ್ಕಾರ ಚರ್ಚೆ ಮಾಡಲಿ. ನಾವು ಕುಮಾರಣ್ಣ ಅವರ ಮೂಲಕ ಆಂಧ್ರದ ಸಿಎಂಗೆ ಒಪ್ಪಿಸ್ತೇವೆ ಎಂದು ಹೇಳಿದರು.

ಜಲಾಶಯನೋ ಅಥವಾ ಬೆಳೆಯೋ ಅನ್ನೋ ವಿಚಾರದಲ್ಲಿ ಸರ್ಕಾರ ರೈತರ ಜೊತೆಗೆ ಚರ್ಚೆ ಮಾಡಬೇಕು.ಎಲ್ಲಾ ಪಕ್ಷದ ನಾಯಕರು ಹಾಗೂ ನೀರಾವರಿ ತಜ್ಞರ ಸಭೆ ಕರೆಯಬೇಕು. ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಕೋರ್ಟ್‌ ಆವರಣದಲ್ಲೇ ಮಹಿಳೆ ಕೊಲೆಗೆ ಯತ್ನ: ಆರೋಪಿ ಅರೆಸ್ಟ್.!

0

ಚಿಕ್ಕೋಡಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬಂದಿದ್ದ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿರುವ ಘಟನೆ ಅಥಣಿಯ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆಯಾಗಿದ್ದು,

ಬಾಬಾಸಾಹೇಬ್ ಚೌಹಾಣ್ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನ್ಯಾಯಾಲಯಕ್ಕೆ ಮೀನಾಕ್ಷಿ ಆಗಮಿಸಿದ್ದು, ಮಹಿಳೆಯನ್ನು ಕಂಡ ಆರೋಪಿ ಬಾಬಾಸಾಹೇಬ್ ಆಕೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಕೋತನಟ್ಟಿ ಗ್ರಾಮದಲ್ಲಿನ ಜಮೀನಿಗೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಕೆಯನ್ನು ಅಥಣಿ ಸಮುದಾಯದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯಿಂದಾಗಿ ಕೋರ್ಟ್‌ ಆವರಣದಲ್ಲಿ ಕೆಲಹೊತ್ತು ಆತಂಕದ ವಾತಾವರಣ ಉಂಟಾಗಿತ್ತು.

ಬೆಂಗಳೂರಿನಲ್ಲಿ ಹಾಡುಹಗಲೇ ದರೋಡೆ:  ATMಗೆ ಹಣ ಸಾಗಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ಕಳ್ಳತನ.!

0

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಹಾಡ ಹಗಲೇ ರಾಬರಿ ನಡೆದಿದ್ದು, ಸೆಂಟ್ರಲ್ ಟ್ಯಾಕ್ಸ್ ಆಫೀಸರ್ಸ್ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದರೋಡೆ ಮಾಡಿದ್ದಾರೆ.

ಈ ಘಟನೆ ನಗರ ಅಶೋಕ ಪಿಲ್ಲರ್ ಬಳಿ ನಡೆದಿದೆ.ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣ ರಾಬರಿ ಮಾಡಲಾಗಿದೆ. ಜೆಪಿ ನಗರ ಹೆಚ್ ಡಿ ಎಫ್ ಸಿ ಬ್ಯಾಂಕ್ ನಿಂದ ಹಣ ತರ್ತಿದ್ದ ಸಿಎಂಎಸ್ ವಾಹನವನ್ನು ಇನ್ನೋವಾ ಕಾರಿನಲ್ಲಿ ಬಂದ ರಾಬರ್ಸ್ ಅಡ್ಡಗಟ್ಟಿದ್ದಾರೆ.

ಈ ವೇಳೆ ನಾವು ಸೆಂಟ್ರಲ್ ಟ್ಯಾಕ್ಸ್ ಆಫೀಸರ್ಸ್, ಡಾಕ್ಯುಮೆಂಟ್ ವೆರಿಫೈ ಮಾಡಬೇಕು ಎಂದಿದ್ದಾರೆ. ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡಿದ್ದಾರೆ. ಡೈರಿ ಸರ್ಕಲ್ ಬಳಿ ಕರೆದೋಯ್ದು ಸಿಎಂಎಸ್ ಸಿಬ್ಬಂದಿ ಬಿಟ್ಟು ಹಣದ ಸಮೇತ ರಾಬರ್ಸ್ ಎಸ್ಕೇಪ್ ಆಗಿದ್ದಾರೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

30 ಕೋಟಿ ತೆರಿಗೆ ಬಾಕಿ: ಮತ್ತೆ ಮಲ್ಲೇಶ್ವರಂನ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

0

ಬೆಂಗಳೂರು: ಬಾಕಿ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಲಾಗಿದೆ. ಇಂದು ಬೆಳಿಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಲ್‌ಗೆ ಭೇಟಿ ನೀಡಿ ಸೀಜ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಲ್ ಮುಂಭಾಗ ನೂರಾರು ಸಿಬ್ಬಂದಿ ಉಪಸ್ಥಿತರಿದ್ದರು.

ಮಾಲ್ 30.81 ಕೋಟಿ ರೂಪಾಯಿ ಪ್ರಾಪರ್ಟಿ ಟ್ಯಾಕ್ಸ್ ಜಿಬಿಎಗೆ ಪಾವತಿಸಬೇಕಿತ್ತು. ಆದರೆ ತೆರಿಗೆ ಪಾವತಿ ಇಲ್ಲದ ಕಾರಣ, ನೌಕರರು ಬೆಳಿಗ್ಗೆಯಿಂದಲೇ ರೋಡ್‌ನಲ್ಲಿ ನಿಂತು ಕಾಯಬೇಕಾಯಿತು.

ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್​ ಅಭಿಷೇಕ್ ಡೆವೆಲಪರ್ಸ್ ತಾರಿಗೆ ಅವರ ಒಡೆತನದ್ದಾಗಿದೆ. ಮಾಲ್ ಮಾಲೀಕರಿ ಜಿಬಿಎಗೆ ಕಟ್ಟಬೇಕಾಗಿರುವ ತೆರಿಗೆಯನ್ನ ಸರಿಯಾಗಿ ಪಾವತಿ ಮಾಡಿಲ್ಲ. ಇವ್ರು 30 ಕೋಟಿ 81 ಲಕ್ಷದ 45 ಸಾವಿರದ 600 ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕೆ ಮಂತ್ರಿ ಮಾಲ್​​ಗೆ ಬೀಗ ಹಾಗಿ ಸೀಜ್ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್ , “ಗಾಂಧಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಂತ್ರಿ ಮಾಲ್ ಸೇರಿದ್ದು, ಆಸ್ತಿ ತೆರಿಗೆ ಪಾವತಿಸದ ಕಾರಣ ಸೀಜ್ ಮಾಡಲಾಗಿದೆ. ಹಲವಾರು ಬಾರಿ ನೋಟಿಸ್ ನೀಡಿದ್ದೇವೆ. ಮಂತ್ರಿ ಮಾಲ್ ನಷ್ಟದಲ್ಲಿ ಇರಲಿಕ್ಕಿಲ್ಲ. ನಿಯಮದ ಪ್ರಕಾರ ತೆರಿಗೆ ಪಾವತಿಸಬೇಕು” ಎಂದು ತಿಳಿಸಿದ್ದಾರೆ.

ಗಂಡನನ್ನು ಬಿಟ್ಟು ತವರಿಗೆ ಬಂದ ಮಗಳನ್ನು ಮಚ್ಚಿನಿಂದ ಕೊಚ್ಚಿದ ತಾಯಿ.!

0

ಬೆಂಗಳೂರು: ಗಂಡನ ಜೊತೆ ಜಗಳವಾಡಿಕೊಂಡು ತಾಯಿ ಮನೆ ಸೇರುತ್ತಿದ್ದ ಕಾರಣಕ್ಕೆ  ತಾಯಿಯೊಬ್ಬಳು ಮಚ್ಚು ಬೀಸಿದ ಘಟನೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ನಡೆದಿದೆ. ರಮ್ಯಾ (22) ಹಲ್ಲೆಗೊಳಗಾದ ಮಗಳಾಗಿದ್ದು, ಸರೋಜಮ್ಮ ಮಚ್ಚಿನಿಂದ ಮಗಳ ಕುತ್ತಿಗೆಯನ್ನೇ ಕೊಚ್ಚಿರುವ ತಾಯಿಯಾಗಿದ್ದಾಳೆ. ಸದ್ಯ ಗಾಯಾಳು ರಮ್ಯಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ

ಪದೇ ಪದೇ ರಮ್ಯಾ ತನ್ನ ಗಂಡನ ಜೊತೆ ಜಗಳವಾಡಿಕೊಂಡು ತಾಯಿ ಮನೆ ಸೇರುತ್ತಿದ್ದಳಂತೆ. ಇದೇ ವಿಚಾರ ಇವತ್ತು ಬೆಳಗ್ಗೆ ತಾಯಿ ಹಾಗೂ ಮಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು, ಜಗಳ ಅತಿರೇಕಕ್ಕೆ ತಿರುಗಿದೆ. ಕೋಪಗೊಂಡ ತಾಯಿ ಸರೋಜಮ್ಮ ಮಚ್ಚಿಂದ ಮಗಳ ಕುತ್ತಿಗೆಯನ್ನೇ ಇರಿದಿದ್ದಾರೆ ಎನ್ನಲಾಗ್ತಿದೆ.

ಬೆಳಗಿನ ಜಾವ ನಾಲ್ಕು ಗಂಟೆಗೆ ಪೂಜೆಗೆ ಅಂತಾ ಕರೆದುಕೊಂಡು ಬಂದಿದ್ದ ತಾಯಿ, ಬೆಳಗ್ಗೆ ಪೂಜೆ ಮಾಡುವಾಗ ತಲೆಬಾಗಿ ನಮಸ್ಕರಿಸ್ತಿದ್ದವೇಳೆ ಮಚ್ಚಿನಿಂದ ಮಗಳ ಕುತ್ತಿಗೆ ಕತ್ತರಿಸಿದ್ದಾಳೆ. ನಂತರ ಘಟನೆ ಸ್ಥಳದಿಂದ ಎಸ್ಕೇಪ್ ಆಗಿದ್ದಾಳೆ. ಸದ್ಯ ಘಟನೆ ಸ್ಥಳದಲ್ಲಿ ಪೊಲೀಸ್ರಿಂದ ಪರಿಶೀಲನೆ ನಡೆಸಿದ್ದು, ಸಂಪಿಗೆಹಳ್ಳಿ ಪೊಲೀಸರಿಂದ ಆರೋಪಿತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪ್ರತ್ಯೇಕ ರಾಜ್ಯ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ: ಬಸವರಾಜ ಹೊರಟ್ಟಿ

0

ಹಾವೇರಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಶಾಸಕ ರಾಜು ಕಾಗೆ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಹಾವೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,

ಪ್ರತ್ಯೇಕ ರಾಜ್ಯ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕರ್ನಾಟಕದ ಏಕೀಕರಣಕ್ಕಾಗಿ ಬಹಳಷ್ಟು ಜನರು ಹೋರಾಟ ಮಾಡಿದ್ದಾರೆ. ಅಖಂಡ ಕರ್ನಾಟಕ ಇರಬೇಕು. ಪ್ರತ್ಯೇಕತೆಗೆ ನನ್ನ ಸಹಮತ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸದನದಲ್ಲಿ ಭಾಗವಹಿಸುವಂತೆ ಈಗಾಗಲೇ 38 ಜನರಿಗೆ ಮಾತನಾಡಿದ್ದೇನೆ. ಉಳಿದವರ ಜೊತೆಯೂ ಮಾತನಾಡುತ್ತೇನೆ. ಎಲ್ಲರೂ ಅಧಿವೇಶನದಲ್ಲಿ ಭಾಗವಹಿಸಿ ಸದನದ ಗೌರವ ಹೆಚ್ಚಿಸಬೇಕು ಎಂದು ಹೊರಟ್ಟಿ ಮನವಿ ಮಾಡಿದರು.

ಸಭಾಪತಿ ಹುದ್ದೆಯಿಂದ ಕೆಳಗಡೆ ಇಳಿಸುವ ವಿಚಾರದ ಕುರಿತು ಮಾತನಾಡಿದ ಅವರು, ನಾನು ಒಂದು ಸಲ ಪರಿಷತ್ ಸಭಾಪತಿ ಆಗಿದ್ದೇನೆ. ಎಷ್ಟು ವರ್ಷ ಆಗಿದ್ದರೂ ಮಾಜಿ ಆಗಲೇಬೇಕು. ವಿಧಾನ ಪರಿಷತ್ ಸಭಾಪತಿ ಹುದ್ದೆ ಬಗ್ಗೆ ನಾನು ತಲೆ ಕೆಡೆಸಿಕೊಳ್ಳುವುದಿಲ್ಲ. ಸರ್ಕಾರ ಮತ್ತು ಶಾಸಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದರು.

error: Content is protected !!