Home Blog Page 19

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನ ಸೃಷ್ಟಿಸಿದ ಅನುಮಾನ! ಲಂಚದ ಆರೋಪ ಮಾಡಿದ್ದೇ ಮುಳುವಾಯ್ತಾ?

0

ಮೈಸೂರು/ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ತಮ್ಮ ವಿರುದ್ಧ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ಪ್ರಮುಖ ಆಡಿಯೋ ಹಾಗೂ ಸಂಬಂಧಿತ ದಾಖಲೆಗಳನ್ನು ಸಲ್ಲಿಸಲು ಸಿದ್ಧರಾಗಿದ್ದ ಸಂದರ್ಭದಲ್ಲೇ ಬಂಧನ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ.

ಮೂರು ಪ್ರಮುಖ ಆರೋಪಗಳು

1. ಲಂಚ ಆರೋಪ:
ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಬಡ್ತಿ ಪಡೆಯಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದರು. ಹಣ ಸಾಗಿಸಲಾಯಿತು ಎನ್ನಲಾದ ಕಾರಿನ ಭಾವಚಿತ್ರವನ್ನೂ ಬಿಡುಗಡೆ ಮಾಡಿದ್ದರು.

2. ಆಡಿಯೋ ಬಿಡುಗಡೆ:
ಡಿ.ಬಿ. ನಟೇಶ್ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಬಿಡುಗಡೆ ಮಾಡಿದ್ದರು. ಕೇವಲ ಆರು ಸೆಕೆಂಡ್‌ಗಳ ‘ಟ್ರೈಲರ್’ ಮಾತ್ರ ಬಿಡುಗಡೆ ಮಾಡಿದ್ದಾಗಿ ಹೇಳಿ, ಸಂಪೂರ್ಣ ಆಡಿಯೋವನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದರು.

3. ಸಂಪರ್ಕ ಯತ್ನ ಆರೋಪ:
ಆಡಿಯೋದಲ್ಲಿ ನಟೇಶ್ ಅವರು ಸ್ನೇಹಮಯಿ ಕೃಷ್ಣ ಅವರನ್ನು ಹೇಗಾದರೂ ಸಂಪರ್ಕಕ್ಕೆ ತೆಗೆದುಕೊಳ್ಳುವಂತೆ ವ್ಯಕ್ತಿಯೊಬ್ಬರ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ.

ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರೆಸಿದ್ದಾರೆ. ಆಡಿಯೋಗಳ ಪ್ರಾಮಾಣಿಕತೆ ಹಾಗೂ ಆರೋಪಗಳ ಸತ್ಯಾಸತ್ಯತೆ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ!

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಪರ್ಸನಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದ ಚಂದ್ರು ಅವರ ಪುತ್ರನಾದ ಹೇಮಂತ್, ಸಂಜಯನಗರದಲ್ಲಿನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಲೊಟ್ಟೆಗೊಲ್ಲಹಳ್ಳಿಯ ಮನೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಾಹಿತಿ ತಿಳಿದ ಸಂಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! 

0

ಬೆಳಗಾವಿ: ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಬಂಧಿತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ.

ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಣ ನೀಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

ಪ್ರಕರಣ ಸಂಬಂಧ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತರಾಗಿದ್ದು, ಅವರನ್ನು ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಳಮಾರುತಿ ಠಾಣೆ ಪೊಲೀಸರು ಮೊಬೈಲ್ ಡೇಟಾ ರೀಟ್ರೀವ್ ಮಾಡುವ ವೇಳೆ ಮತ್ತೊಬ್ಬ ಜಿಲ್ಲಾ ಮಟ್ಟದ ಅಧಿಕಾರಿಯ ಖಾಸಗಿ ವಿಡಿಯೋ ಕೂಡ ಪತ್ತೆಯಾಗಿದೆ. ಆ ಅಧಿಕಾರಿಯ ಮನೆಯಲ್ಲಿ ಕೂಡ ಹಿಡನ್ ಕ್ಯಾಮರಾ ಅಳವಡಿಸಿ ದೃಶ್ಯಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಣ ನೀಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಮೊಬೈಲ್‌ಗಳಲ್ಲಿ ಪತ್ತೆಯಾದ ವಿಡಿಯೋಗಳ ಹಿನ್ನೆಲೆ ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ತೀವ್ರಗೊಳಿಸಲಾಗಿದೆ. ಗ್ಯಾಂಗ್ ಇನ್ನಷ್ಟು ಅಧಿಕಾರಿಗಳು ಅಥವಾ ಗಣ್ಯರನ್ನು ಟಾರ್ಗೆಟ್ ಮಾಡಿದ್ದಾರೆಯೇ ಎಂಬ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.

ಈ ಘಟನೆ ಬೆಳಗಾವಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅಧಿಕಾರಿಗಳ ಭದ್ರತೆ ಹಾಗೂ ಖಾಸಗಿತನದ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ವಿವಿಧ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ಸಂಪೂರ್ಣ ಜಾಲವನ್ನು ಪತ್ತೆಹಚ್ಚಲು ಪೊಲೀಸರು ಮುಂದುವರೆದಿದ್ದಾರೆ.

ಹಿಂದಿಯಲ್ಲಿ 2.19 ಕೋಟಿ ವೀಕ್ಷಣೆ – ‘ಟಾಕ್ಸಿಕ್’ ಟೀಸರ್‌ಗೆ ಪ್ಯಾನ್ ಇಂಡಿಯಾ ಕ್ರೇಜ್!

ಯಶ್ ಅಭಿನಯದ ಟಾಕ್ಸಿಕ್ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ ಭಾರೀ ಸದ್ದು ಮಾಡಿದೆ. ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಈ ಟೀಸರ್ ಒಟ್ಟು 5 ಕೋಟಿ ವೀಕ್ಷಣೆಗಳನ್ನು ದಾಟಿದೆ.

ಅತ್ಯಧಿಕ ಪ್ರತಿಕ್ರಿಯೆ ಹಿಂದಿ ಆವೃತ್ತಿಗೆ ಲಭಿಸಿದ್ದು, 2.19 ಕೋಟಿಗೂ ಹೆಚ್ಚು ಜನ ವೀಕ್ಷಿಸಿದ್ದಾರೆ. ತೆಲುಗು ಟೀಸರ್ 1.10 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಎರಡನೇ ಸ್ಥಾನದಲ್ಲಿದೆ. ಕನ್ನಡ ಟೀಸರ್ 74 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು ಹೊಸ ದಾಖಲೆ ನಿರ್ಮಿಸಿದೆ.

ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಮಾಡಿದ ಈ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಮಿಂಚಲಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದು, ಮಾನ್ಸ್ಟರ್ ಮೈಂಡ್ಸ್ ಸಹಭಾಗಿತ್ವ ಹೊಂದಿದೆ.

‘ಟಾಕ್ಸಿಕ್’ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ.

ಕಾಲೇಜು ಸ್ಟೇಜ್‌ನಿಂದ ‘ಟಾಕ್ಸಿಕ್’ ವರೆಗೆ – ಯಶ್ ಡಾನ್ಸ್ ಸ್ಟೆಪ್ ವೈರಲ್!

ಯಶ್ ಅಭಿನಯದ ಟಾಕ್ಸಿಕ್ ಟೀಸರ್ ರಿಲೀಸ್ ಆಗುತ್ತಿದ್ದಂತೆಯೇ ಮಿಲಿಯನ್ ವೀಕ್ಷಣೆ ದಾಟಿ ದೂಳೆಬ್ಬಿಸಿದೆ. 4 ವರ್ಷಗಳ ಬಳಿಕ ತೆರೆಗೆ ಮರಳಿದ ಯಶ್ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

ಟೀಸರ್ ಹಿಟ್ ಆಗುತ್ತಿದ್ದಂತೆಯೇ ಯಶ್ ಅವರ ಹಳೆಯ ಕಾಲೇಜು ವಿಡಿಯೋ ಮತ್ತೆ ಟ್ರೆಂಡ್ ಆಗುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ವೇದಿಕೆಯಲ್ಲಿ ಕುಣಿದಿದ್ದ ಸ್ಟೆಪ್‌ನ್ನು ಯಶ್ ಈಗ ‘ಟಾಕ್ಸಿಕ್’ ಟೀಸರ್‌ನಲ್ಲೂ ಬಳಸಿರುವುದು ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಟೀಸರ್ ಕೊನೆಯಲ್ಲಿ ಯಂಗ್ ಲುಕ್‌ನಲ್ಲಿ ಕಾಣಿಸಿಕೊಂಡ ಯಶ್ ತಮ್ಮದೇ ಸ್ಟೈಲ್‌ನಲ್ಲಿ ಡಾನ್ಸ್ ಮಾಡುವ ದೃಶ್ಯ ವಿಶೇಷ ಗಮನ ಸೆಳೆದಿದೆ. ಇದು ಕಥೆಯೊಂದಿಗಿನ ಸಂಕೇತವೇ ಎಂಬ ಕುತೂಹಲ ಹೆಚ್ಚಾಗಿದೆ.

ಅಪ್ಪ–ಮಗನ ಶೇಡ್ ತೋರಿಸುವ ಈ ಟೀಸರ್‌ನಲ್ಲಿ “ಡ್ಯಾಡಿ ಆ್ಯಮ್ ಹೋಮ್” ಡೈಲಾಗ್ ಹೊಸ ಟ್ವಿಸ್ಟ್ ನೀಡಿದೆ. ಒಟ್ಟಿನಲ್ಲಿ ‘ಟಾಕ್ಸಿಕ್’ ಈಗ ಇಂಟರ್ನೆಟ್ ಲೋಕವನ್ನೇ ಆವರಿಸಿಕೊಂಡಿದೆ.

ಗುಟ್ಟಿನ ಮದುವೆಗೆ ಕಟ್ಟು ನಿಟ್ಟಿನ ಭದ್ರತೆ: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಿವಾಹಕ್ಕೆ ವಿದೇಶಿ ಸೆಕ್ಯೂರಿಟಿ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ಖಾಸಗಿ ಜೀವನದ ಬಗ್ಗೆ ಸದಾ ಮೌನವಾಗಿದ್ದರೂ, ಇದೀಗ ಅವರ ಮದುವೆ ಸುದ್ದಿ ಭಾರೀ ಸಂಚಲನ ಸೃಷ್ಟಿಸಿದೆ. ಫೆಬ್ರವರಿ 26ರಂದು ಉದಯಪುರ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಶಾಸ್ತ್ರಗಳು ನೆರವೇರಲಿವೆ ಎಂದು ಹೇಳಲಾಗುತ್ತಿದೆ.

ಮದುವೆ ಆಹ್ವಾನ ಪತ್ರಿಕೆ ಲೀಕ್ ಆದ ಹಿನ್ನೆಲೆಯಲ್ಲಿ, ಜೋಡಿ ವಿದೇಶಿ ಭದ್ರತಾ ಸಂಸ್ಥೆಯನ್ನು ನೇಮಿಸಿಕೊಂಡಿದೆ. ಮದುವೆ ಸ್ಥಳದಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಆಯ್ದ ಅತಿಥಿಗಳಿಗೆ ಮಾತ್ರ ಪ್ರವೇಶ, ಸಿಬ್ಬಂದಿಗಳಿಂದ ಎನ್‌ಡಿಎ ಒಪ್ಪಂದ—ಎಲ್ಲವೂ ಕಟ್ಟು ನಿಟ್ಟಿನ ವ್ಯವಸ್ಥೆಯ ಭಾಗವಾಗಿದೆ.

ಮಾರ್ಚ್ 4ರಂದು ತಾಜ್ ಕೃಷ್ಣ ನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದ್ದು, ತೆಲುಗು ಹಾಗೂ ಬಾಲಿವುಡ್ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರೂ ಭಾಗವಹಿಸುವ ಸಾಧ್ಯತೆ ಇದೆ.

ಗೀತ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಮೂಲಕ ಪ್ರೇಕ್ಷಕರ ಮನ ಗೆದ್ದ ಈ ಜೋಡಿ, ಈಗ ನಿಜ ಜೀವನದಲ್ಲೂ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದೆ.

ಎಟಿಎಂಗೆ 3.40 ಕೋಟಿ ಹಣ ಹಾಕದೇ ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಪ್ರಕರಣ ದಾಖಲು

0

ಹಾಸನ: ಎಟಿಎಂಗಳಿಗೆ ಹಣ ಹಾಕದೇ ವಂಚನೆ ಮಾಡಿದ ಆರೋಪದಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬೂವನಹಳ್ಳಿ ಗ್ರಾಮದ ನಂದೀಶ್ ಬಿ.ಎಲ್ ಹಾಗೂ ದಾಸರಕೊಪ್ಪಲಿನ ಮಧುಕುಮಾರ್ ಎಂ.ಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು, 3,40,28,200 ರೂ. ಹಣವನ್ನು ಹದಿನೈದು ಎಟಿಎಂಗಳಿಗೆ ಹಂಚದೆ ದುರುಪಯೋಗ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಸಂಬಂಧ ಬಿಎನ್‌ಎಸ್ 316(4), 318(4), 3(5) ಅಡಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಕೈಗೊಂಡಿದ್ದಾರೆ.

ಏಪ್ರಿಲ್ 1ರಿಂದ ಟೋಲ್‌ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ!

0

ನವದೆಹಲಿ:- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಟೋಲ್‌ ಪ್ಲಾಜಾಗಳಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಯೋಜನೆ ಮಾಡುತ್ತಿದೆ.

ಹೊಸ ನಿಯಮ ಜಾರಿಯಾದರೆ, ಟೋಲ್ ಪಾವತಿ ಸಂಪೂರ್ಣ ಡಿಜಿಟಲ್ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರುತ್ತದೆ. ಫಾಸ್ಟ್‌ಟ್ಯಾಗ್ ಇಲ್ಲದ ಬಳಕೆದಾರರು ಯುಪಿಐ ಮೂಲಕ ಪಾವತಿಸಿದರೆ 1.25% ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಈ ಹೊಸ ಕ್ರಮವು ದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಟೋಲ್ ವಹಿವಾಟಿನಲ್ಲಿ ಹೆಚ್ಚು ಪಾರದರ್ಶಕತೆ ಮತ್ತು ಸುಗಮತೆ ಒದಗಿಸುವುದಾಗಿ NHAI ತಿಳಿಸಿದೆ. ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಮೂಲಕ ಹೆದ್ದಾರಿ ಬಳಕೆದಾರರಿಗೆ ಸುಗಮ, ವೇಗದ ಪ್ರಯಾಣಕ್ಕೆ ಸಹಾಯಕವಾಗಲಿದೆ.

ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ!

0

ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಯಾರು ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ ಅಳವಡಿಸಿತ್ತು. ಇದೀಗ ಶಿವರಾತ್ರಿ ಜಾತ್ರೆ ಕೂಡ ಮುಕ್ತಾಯವಾದ ಹಿನ್ನೆಲೆ ಪಾದಯಾತ್ರೆಯ ಮೂಲಕ ಹೋಗುವವರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ.

ಅನೈತಿಕ ಸಂಬಂಧ ಶಂಕೆ; ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದ ಗಂಡ!

0

ರಾಮನಗರ:- ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಜರುಗಿದೆ.

21 ವರ್ಷದ ಸಿಂಚನ ಕೊಲೆಯಾದ ಮಹಿಳೆ. ರೇಣುಕಯ್ಯ ಕೊಲೆಗೈದ ಪಾಪಿ ಪತಿ. ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ ಗಲಾಟೆ ನಡೆಸಿ ಮನೆಮುಂದೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!