Home Blog Page 2

‘ಪುಲಿಗೆರೆ ಉತ್ಸವ’ದ ಮೊದಲ ದಿನದ ಕಾರ್ಯಕ್ರಮಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ, ಇನ್ಫೋಸಿಸ್ ಪ್ರತಿಷ್ಠಾನ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಭಾರತೀಯ ವಿಧ್ಯಾಭವನ ಬೆಂಗಳೂರು ಇವರ ಸಹಕಾರದಲ್ಲಿ ಏಪ್ರಿಲ್ 19, 20 ಮತ್ತು 21ರಂದು ಪುಲಿಗೆರೆ ಉತ್ಸವ ನಡೆಯಲಿದೆ.

utsava

ದಿ.19ರಂದು ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಉದಯ ರಾಗ-1ರಲ್ಲಿ ಖ್ಯಾತ ಕಲಾವಿದ ಸರ್ಪರಾಜ್ ಖಾನ್ ಇವರಿಂದ ಸಾರಂಗಿ ವಾದನದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7 ಗಂಟೆಗೆ ಖ್ಯಾತ ಹಿಂದುಸ್ಥಾನಿ ಸಂಗೀತ ಕಲಾವಿದೆ ಕುಮಟಾದ ರೇಷ್ಮಾಭಟ್ ಅವರಿಂದ ಹಿಂದೂಸ್ಥಾನಿ ಗಾಯನ ಜರುಗುವುದು.

ಸಂಜೆ 4 ಗಂಟೆಗೆ ವಿವಿಧ ವಾದ್ಯ ವೈಭವ, ಭಕ್ತರ ಸಮ್ಮಿಲನದೊಂದಿಗೆ ಅಲಂಕೃತ ಶ್ರೀ ಸೋಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ 6 ಗಂಟೆಗೆ ಸಿದ್ದಾಪುರದ ಕೊಳಗಿ ಕೇಶವ ಹೆಗಡೆ ಮತ್ತು ತಂಡದವರಿಂದ ಯಕ್ಷಗಾನ ಜರುಗಲಿದೆ. ಸಂಜೆ 7 ಗಂಟೆಗೆ ಹಿರಿಯ ಸಂಗೀತ ಕಲಾವಿದ ಗಾಯಕ ಡಾ.ಅಶೋಕ ಹುಗ್ಗಣ್ಣವರ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಲಿದೆ. ಬಳಿಕ 8.30ಕ್ಕೆ ಬೆಂಗಳೂರಿನ ವಿ.ಕಾವ್ಯಾ ಕಾಶಿನಾಥನ್ ಮತ್ತು ಶಶಾಂಕ್ ಕಿರೋಣ ನಾಯರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದು ವಿದ್ಯಾಭವನದ ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಕೆ.ರಾವ್ ತಿಳಿಸಿದ್ದಾರೆ.

ಅಕ್ಕನ ವಚನಗಳಿಂದ ಜೀವನೋನ್ನತಿ : ತೋಂಟದ ಮಹಾಸ್ವಾಮಿಗಳು

0
ವಿಜಯಸಾಕ್ಷಿ ಸುದ್ದಿ, ಗದಗ : ಮನುಷ್ಯನ ದುಃಖಕ್ಕೆ ಮನಸ್ಸೇ ಕಾರಣ. ಎಲ್ಲಾ ಇಂದ್ರಿಯಗಳಿಗೂ ಚೇತನ ನೀಡುವುದರ ಮೂಲಕ ಮನಸ್ಸೇ ಇಂದ್ರಿಯಗಳಿಗೆ ಮೂಲವಾಗಿದೆ. ನಮ್ಮಲ್ಲಿರುವ ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸಬೇಕು. ಭಗವಂತನ ಚಿಂತನೆಯನ್ನು ಮಾಡುತ್ತ, ಶರಣಾಗತಿ ಭಾವವನ್ನು ಹೊಂದಿದಾಗ ಮಾತ್ರ ಮೋಕ್ಷವನ್ನು ಸಂಪಾದಿಸಬಹುದು. ಅಕ್ಕನ ವಚನಗಳನ್ನು ಮತ್ತೆ ಮತ್ತೆ ಓದುವುದರ ಜೊತೆಯಲ್ಲಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಜೀವನ ಉನ್ನತಿ ಪಡೆಯಬಹುದೆಂದು ಶ್ರೀ ಮ.ನಿ.ಪ್ರ. ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.
ಅಕ್ಕನ ಬಳಗದಲ್ಲಿ ಅಕ್ಕನ ಜಯಂತಿ ಉತ್ಸವದ ನಿಮಿತ್ತ ನಡೆಯುತ್ತಿರುವ ಮೊದಲನೇ ದಿನದ ಕಾರ್ಯಕ್ರಮದಲ್ಲಿ ಷಟ್‌ಸ್ಥಲ್ ಧ್ವಜಾರೋಹಣ ನೆರವೇರಿಸಿ ಶ್ರೀಗಳು ಆಶೀರ್ವಚನದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶೀವಲೀಲಾ ಹಿರೇಮಠ ಪ್ರಾರ್ಥಿಸಿದರು. ಅಕ್ಕನ ಬಳಗದ ಅಧ್ಯಕ್ಷೆ ಲಲಿತಾ ವಿ.ಬಾಳಿಹಳ್ಳಿಮಠ ಸ್ವಾಗತಸಿದರು.
ಕಾರ್ಯದರ್ಶಿ ರೇಣುಕಾ ಎಲ್.ಅಮಾತ್ಯ ವಂದಿಸಿದರು. ಜಯಲಕ್ಷ್ಮಿ ವಿ.ಬಳ್ಳಾರಿ ಕಾರ್ಯಕ್ರಮ ಸಂಯೋಜಿಸಿದರು. ಪ್ರೇಮಾ ಬಿ.ಮೇಟಿ ನಿರೂಪಿಸಿದರು. ಖ್ಯಾತ ಹಿಂದೂಸ್ತಾನಿ ಗಾಯಕಿ ಪಾರ್ವತಿ ವಿ.ಮಾಳೆಕೊಪ್ಪಮಠ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅನ್ನಪೂರ್ಣ ಮಾಳೆಕೊಪ್ಪಮಠ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪವಿತ್ರಾ ಬಿರಾದಾರ ಪ್ರಸಾದದ ಭಕ್ತಿ ಸೇವೆಯನ್ನು ವಹಿಸಿಕೊಂಡಿದ್ದರು.
ಶಿವಲೀಲಾ ಕುರುಡಗಿ, ಕಸ್ತೂರಿ ಹಿರೇಗೌಡರ, ಸುಜಾತಾ ಮಾನ್ವಿ, ಶಾರದಾ ಹಿರೇಮಠ, ರೇಖಾ ಶಿಗ್ಲಿಮಠ, ದೀಪಾ ಪಟ್ಟಣಶೆಟ್ಟಿ, ಶ್ರೇಯಾ ಪವಾಡಶೆಟ್ಟರ್, ಸರೋಜಕ್ಕ ಮಾನ್ವಿ, ಜಯಶ್ರೀ ಬಾಳಿಹಳ್ಳಿಮಠ, ವಿದ್ಯಾ ಧಡಿ, ಸುಜಾತಾ ಹಿರೇಮಠ, ಶಶಿಕಲಾ ಹಿರೇಮಠ, ಸುವರ್ಣ ಮದರಿಮಠ ಮುಂತಾದವರು ಪಾಲ್ಗೊಂಡಿದ್ದರು.
12ನೇ ಶತಮಾನದಲ್ಲಿ ದೊರೆತ ಸ್ವಾತಂತ್ರ್ಯವನ್ನು ಅನುಭವಿಸಿದ ಮಹಿಳಾ ಶ್ರೇಷ್ಠ ಶಿವಶರಣೆ ಅಕ್ಕಮಹಾದೇವಿ, ಮಹಿಳಾ ಸಾಧಕರಲ್ಲಿ ಶ್ರೇಷ್ಠ ಸ್ಥಾನವನ್ನು ಪಡೆದ ಮಹಿಳೆ ತನ್ನ ಬದುಕನ್ನು ಮಾತ್ರ ಸಾರ್ಥಕಪಡಿಸಿಕೊಳ್ಳದೇ ಆತ್ಮಕಲ್ಯಾಣದ ಜೊತೆಗೆ ಸಮಾಜದ ಕಲ್ಯಾಣ ಸಾಧಿಸಿರುವ ಮಹಾಜ್ಞಾನಿ, ಚಿಕ್ಕವಯಸ್ಸಿನಲ್ಲಿಯೇ ಹೆಚ್ಚಿನ ಜ್ಞಾನವನ್ನು ಪಡೆದ ಮಹಿಳೆ, ಅದ್ಭುತವಾದ ಕವಿತಾ ಶಕ್ತಿ ಇರುವ, ಭಾರತ ಭೂಮಿಯ ಮೊಟ್ಟ ಮೊದಲ ಮಹಿಳಾ ಕವಿಯತ್ರಿಯೂ ಹೌದು. ಅಕ್ಕನ ವಚನಗಳಲ್ಲಿ ಮೌಲ್ಯ ತುಂಬಿರುತ್ತಿತ್ತು ಎಂದು ಶ್ರೀಗಳು ತಿಳಿಸಿದರು.

ಶ್ರೀ ಭೀಮಾಂಬಿಕಾ ತಾಯಿ ನಾಡಿನ ಶ್ರೇಷ್ಠ ಶಿವಶರಣೆ

0

ವಿಜಯಸಾಕ್ಷಿ ಸುದ್ದಿ, ಗದಗ : ಈ ನಾಡಿನ ಶ್ರೇಷ್ಠ ಶಿವಶರಣೆ ಇಟಗಿಯ ಶ್ರೀ ಭೀಮಾಂಬಿಕಾ ತಾಯಿಯ ಪವಾಡಗಳು ಇಂದಿಗೂ ಭಕ್ತರ ಮನದಲ್ಲಿ ಅಚ್ಚಳಿಯದೆ ಉಳಿದಿವೆ. ಶ್ರೀ ಭೀಮಾಂಬಿಕಾ ತಾಯಿಯ ಆಶೀರ್ವಾದ ಭಕ್ತರ ಮೇಲೆ ಸದಾ ಇರುತ್ತದೆ ಎಂದು ಸುಕ್ಷೇತ್ರ ಬಳಗಾನೂರಿನ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಹೇಳಿದರು.

ತಾಲೂಕಿನ ಸುಕ್ಷೇತ್ರ ಬಳಗಾನೂರಿನಲ್ಲಿ ಮೌನ ತಪಸ್ವಿ, ಘನ ಮೌನಿ ಲಿಂ.ಶ್ರೀ ಚನ್ನವೀರ ಶರಣರ ಕೃಪಾಶೀರ್ವಾದಿಂದ ಶ್ರೀ ಶಿವಶರಣೆ ಇಟಗಿ ಭೀಮಾಂಬಿಕಾ ತಾಯಿಯ ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನ ಉದ್ಘಾಟನೆ, ಕಳಸಾರೋಹಣ, ನವಗ್ರಹ ಮೂರ್ತಿಗಳ ಪ್ರತಿಷ್ಠಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಶಿವಕುಮಾರ ಸ್ವಾಮಿಜಿ, ಕರ್ಜಗಿಯ ಶಂಕರ ಕಾರಡಗಿ, ವೇ.ಮೂ. ಚನ್ನಯ್ಯ ಶಾಂತಯ್ಯನಮಠ, ನಿವೃತ್ತ ಶಿಕ್ಷಕ ಕೆ.ಬಿ. ಕಂಬಳಿ, ಕುರಡಗಿಯ ರುದ್ರಮುನಿ ಶಾಸ್ತ್ರೀಗಳು, ಮಲ್ಲಾಪುರ ಗ್ರಾಮದ ಬಸಯ್ಯ ಶಾಸ್ತಿçÃಗಳು, ಡಾ.ಹನುಮಂತಗೌಡ ಆರ್.ಕಲ್ಮನಿ, ಶ್ರೀ ಭೀಮಾಂಬಿಕಾ ತಾಯಿ ಸೇವಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಶಿಕ್ಷಕ ಎಸ್.ಎಸ್. ಚಟ್ರಿ ಸ್ವಾಗತಿಸಿದರು. ವಿ.ಬಿ. ಕರಮುಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಶಿವಲಿಂಗಯ್ಯ ಶಾಸ್ತ್ರೀ ಕಾರ್ಯಕ್ರಮ ನಿರೂಪಿಸಿದರು. ಗ್ರಾಮದ ನಾಗರಿಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಉಪಸ್ಥಿತರಿದ್ದರು.

ಕಡ್ಡಾಯ ಮತದಾನ ನಮ್ಮೆಲ್ಲರ ಜವಾಬ್ದಾರಿ : ವಿಶ್ವನಾಥ ಹೊಸಮನಿ

0

ವಿಜಯಸಾಕ್ಷಿ ಸುದ್ದಿ, ಡಂಬಳ : ಮತದಾನ ಸಂವಿಧಾನ ನಮಗೆ ನೀಡಿದ ವರದಾನ. ಅಂತಹ ಅತ್ಯಮೂಲ್ಯ ಹಕ್ಕನ್ನು ತಪ್ಪದೇ ಚಲಾಯಿಸುವುದು ಎಲ್ಲರ ಜವಾಬ್ದಾರಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಸಮನಿ ಹೇಳಿದರು.

ಡಂಬಳ ಗ್ರಾಮದ ಹೊರವಲಯದಲ್ಲಿನ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದ ನಂತರ ಮತದಾನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸ್ವಯಂ ಪ್ರೇರಣೆಯಿಂದ ಎಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರಲ್ಲೂ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ನರೇಗಾ ಕೂಲಿ ಮೊತ್ತ ಈಗ 349 ರೂ.ಗೆ ಹೆಚ್ಚಳವಾಗಿದೆ. ಅಳತೆಗೆ ತಕ್ಕಂತೆ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕು. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಿಂದ ಮಣ್ಣಿನ ಫಲವತ್ತತೆ ಹೆಚ್ಚಳವಾಗಿ, ಮಣ್ಣಿನ ಸವಕಳಿ ತಡೆಗಟ್ಟಲು ನೆರವಾಗುತ್ತದೆ.

ಇದರಿಂದ ರೈತರಿಗೆ ಅನುಕೂಲ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ ತುಂಬಳ, ಪಿಡಿಓ ಶಶಿಧರ ಹೊಂಬಳ, ಟಿಸಿ ಹರೀಶ ಸೊಬರದ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ತಾಲೂಕಾಧ್ಯಕ್ಷ ಮಹೇಶ ಕಲಘಟಗಿ ಹೇಳಿದರು.

ಈ ಬಗ್ಗೆ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿ ಮಾತನಾಡುತ್ತ, ಏಪ್ರಿಲ್ 17ರ ಸಂಜೆ ಮಾರುಕಟ್ಟೆಯಲ್ಲಿ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಸಂಚಾರಿದಳ ಅಧಿಕಾರಿ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಜೊತೆಯಾಗಿ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ. ಈ ಇಬ್ಬರೂ ಜಿಲ್ಲೆಯ ಅಧಿಕಾರಿಗಳಾಗಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅಪರಾಧವಾಗಿರುತ್ತದೆ. ಈ ಇಬ್ಬರೂ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶ್ರೇಯಾಂಕ ಹಿರೇಮಠ, ನವೀನ ಗುರಿಕಾರ, ಪ್ರವೀಣ ದಶಮನಿ, ಮಂಜುನಾಥ ಗಾಂಜಿ, ಅಂಬರೀಶ ಗಾಂಜಿ, ಮಹಾಂತೇಶ ಗುರಿಕಾರ, ಚಂದ್ರು ಪಾಣಿಗಟ್ಟಿ, ಈಶ್ವರಗೌಡ ಪಾಣಿಗಟ್ಟಿ, ಬಸನಗೌಡ ಮನ್ನಂಗಿ, ತೇಜು ರವಿ ಗುರಿಕಾರ, ಮಲ್ಲನಗೌಡ ಪಾಟೀಲ, ಶಿವರಾಜ್ ಬಾಳಿಹಳ್ಳಿಮಠ, ವೀರೇಶ ಹಗ್ಗರದ, ಬಸನಗೌಡ ಅಡರಕಟ್ಟಿ ಮುಂತಾದವರಿದ್ದರು.

ತರಬೇತಿಯೊಂದಿಗೆ ಭವಿಷ್ಯವನ್ನು ರೂಪಿಸಿಕೊಳ್ಳಿ : ಅರುಣ ಬಿ.ಕುಲಕರ್ಣಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಬೆಂಗಳೂರಿನ ಬಿಡದಿಯ ಟೊಯೋಟಾ ಕಂಪನಿಯವರು ಧಾರವಾಡದ ಕನೆಕ್ಟ್ ಸಂಸ್ಥೆಯ ಮೂಲಕ ನಿಮಗೆ ಕೌಶಲ್ಯ ಪರಿಣಿತಿಯನ್ನು ನೀಡಲು ಬಂದಿದ್ದಾರೆ. ಮನೆ ಬಾಗಿಲಿಗೆ ಬಂದಿರುವ ಈ ಅವಕಾಶವನ್ನು ನೀವು ಸದುಪಯೋಗಪಡಿಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಪಟ್ಟಣದ ಶ್ರೀ ಕೊಟ್ಟೂರುಸ್ವಾಮಿ ಐಟಿಐ ಕಾಲೇಜಿನ ಚೇರಮನ್ ವಿ.ಬಿ. ಸೋಮನಕಟ್ಟಿಮಠ ಹೇಳಿದರು.

ಗುರುವಾರ ಕಾಲೇಜಿನಲ್ಲಿ ಧಾರವಾಡದ ಕನೆಕ್ಟ್ ಸಂಸ್ಥೆಯವರು ನಡೆಸಿದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಇಂತಹ ಸೌಲಭ್ಯಗಳು ಇರಲಿಲ್ಲ. ಈಗ ಅನೇಕ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ನಿಮ್ಮ ಮನೆ ಬಾಗಿಲಿಗೆ ಬರುತ್ತಿವೆ. ನಮ್ಮ ಶ್ರೀ ಕೊಟ್ಟೂರು ಸ್ವಾಮಿ ಐಟಿಐನ ಪ್ರಾಚಾರ್ಯರು ಮತ್ತು ಸಿಬ್ಬಂದಿಯವರು ನಿಮಗೆ ಇಂಥದ್ದೊಂದು ಅವಕಾಶವನ್ನು ಒದಗಿಸಿಕೊಟ್ಟಿದ್ದು, ಈ ಮೂಲಕ ನಿಮ್ಮ ಜೀವನದ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

ಬರುವ ಜೂನ್ ತಿಂಗಳಲ್ಲಿ ಇನ್ನಷ್ಟು ಹೆಚ್ಚಿನ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಮಾಡಿ, ಸಹಸ್ರಾರು ಜನರಿಗೆ ಉದ್ಯೋಗ ದೊರಕುವಂತೆ ಮಾಡುವುದು ನಮ್ಮ ಗುರಿಯಾಗಿದೆ. ಇದಕ್ಕೆ ನಮ್ಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ಆಶೀರ್ವಾದವೂ ಇದೆ ಎಂದು ಸೋಮನಕಟ್ಟಿ ತಿಳಿಸಿದರು.

ನಿವೃತ್ತ ಮುಖ್ಯ ಶಿಕ್ಷಕ ಅರುಣ ಬಿ.ಕುಲಕರ್ಣಿ ಮಾತನಾಡಿ, ನೀವು ಪಡೆದ ತರಬೇತಿ ಫಲಪ್ರದವಾಗಬೇಕಾದರೆ ಇಂತಹ ಕೌಶಲ್ಯಾಧಾರಿತ ಪ್ರಾಯೋಗಿಕ ತರಬೇತಿನಿಮಗೆ ಅವಶ್ಯಕ. ನಿಮ್ಮ ಮನೆತನವನ್ನು ಆರ್ಥಿಕವಾಗಿ ಸಬಲಪಡಿಸಲು ನೀವು ಈ ತರಬೇತಿಯನ್ನು ಪಡೆದುಕೊಳ್ಳಿ. ಸಿಕ್ಕ ಅವಕಾಶವನ್ನು ಬಳಸಿಕೊಂಡು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.

ಪ್ರಾಚಾರ್ಯ ಬಸವರಾಜ ಜೋಳದ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಐಟಿಐನಲ್ಲಿ ಒಟ್ಟು ಫಿಟ್ಟರ್, ಇಲೆಕ್ರ್ಟಿಶಿಯನ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್, ಹೊಲಿಗೆ, ವೈರ್‌ಮನ್ ಹಾಗೂ ಪ್ಲಂಬರ್ ಹೀಗೆ ಆರು ಟ್ರೇಡ್‌ಗಳಿದ್ದು, ನಿಮಗೆ ಇಷ್ಟವಾಗುವ ಟ್ರೇಡ್‌ನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದರು.
ಎಸ್.ಎಂ. ಕಮ್ಮಾರ ಸ್ವಾಗತಿಸಿದರು. ಸುಮಾ ಸೋಮನಕಟ್ಟಿಮಠ ನಿರೂಪಿಸಿದರು. ನಾಗರಾಜ ಗುಡದಾರಿ ವಂದಿಸಿದರು.

ಕನೆಕ್ಟ್ ಸಂಸ್ಥೆಯ ಎಚ್.ಆರ್ ಮಲ್ಲಿಕಾರ್ಜುನ ಗೊಂಡಬಾಳ ಮಾತನಾಡಿ, ಈ ಅಪ್ರೆಂಟಿಸ್ ತರಬೇತಿಯು ಒಂದು ವರ್ಷದ್ದಾಗಿದ್ದು, ಈ ಸಮಯದಲ್ಲಿ ಕಂಪನಿಯ ವತಿಯಿಂದ ನೀವು 16875 ರೂ.ಗಳ ಸ್ಟೆöಪೆಂಡ್‌ನ್ನು ಪಡೆಯುತ್ತೀರಿ. ನೀವು ನಿಗದಿತ ಸಮಯಕ್ಕಿಂತ ಹೆಚ್ಚಿನ ಅವಧಿ ದುಡಿದರೆ ನಿಮಗೆ ಬೋನಸ್ ರೂಪದಲ್ಲಿ ಹೆಚ್ಚಿನ ವೇತನ ದೊರೆಯಲಿದೆ. ತರಬೇತಿ ಸಮಯದಲ್ಲಿ ಉಚಿತ ಸಾರಿಗೆ, ಊಟ, ಸಮವಸ್ತç ಮುಂತಾದವುಗಳನ್ನು ನೀಡಲಾಗುತ್ತಿದೆ ಎಂದರು.

ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 2024ರ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್‌ಎಮ್‌ಆರ್‌ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 13ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಪಂಚ ಗ್ಯಾರಂಟಿಯಿಂದ ಮಹಿಳೆಯರಿಗೆ ಬಲ:ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಮಹಿಳೆಯರಿಗೆ ಬಲ ಬಂದಿದ್ದು, ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿ ಮಾಡಲು ಕೇಂದ್ರದಿಂದ ವರ್ಷಕ್ಕೆ 1 ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಿ ಮತ್ತಷ್ಟು ಬಲ ತುಂಬಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು.

ಇಲ್ಲಿಯ ಬಜಾರ ರಸ್ತೆಯಲ್ಲಿ ಬಾಗಲಕೋಟ ಲೋಕಸಭಾ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಪರ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.

ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ತಿಂಗಳು 2000 ರೂ. ಜಮಾ ಮಾಡುತ್ತಿದ್ದೇವೆ. ಪ್ರತಿ ಬಡ ಕುಟುಂಬದ ಮಹಿಳೆಯರನ್ನು ಪ್ರಾಮಾಣಿಕವಾಗಿ ತಲುಪಲು ಅನುಷ್ಠಾನ ಸಮಿತಿ ರಚಿಸಲಾಗಿದ್ದು, ಜಿಲ್ಲೆಯ ಶೇ 99.16 ಮಹಿಳೆಯರಿಗೆ ಈವರೆಗೆ ಯೋಜನೆ ತಲುಪಿದೆ. ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿಸಲು ರಾಹುಲ್ ಗಾಂಧಿ ಕೇಂದ್ರದಿಂದ ಪ್ರತಿ ವರ್ಷ 1 ಲಕ್ಷ ರೂ ನೀಡುವುದಾಗಿ ಗ್ಯಾರಂಟಿ ಘೋಷಿಸಿದ್ದಾರೆ. ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳೆಯರಲ್ಲಿ ಬಲ ತುಂಬಿದೆ ಎಂದರು.

ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಾತನಾಡಿ, ಇದು ರಾಜ್ಯದ ರೈತರ, ಮಹಿಳೆಯರ ಪ್ರತಿಷ್ಠೆಯ ಚುನಾವಣೆಯಾಗಿದ್ದು, 2 ಬರಗಾಲದ ಸನ್ನಿವೇಶದಲ್ಲಿ ಸುಮಾರು 35 ಸಾವಿರ ಕೋಟಿ ರೂ ಹಾನಿಯಾಗಿದೆ.

ಇದರಲ್ಲಿ 18 ಸಾವಿರ ಕೋಟಿ ರೂ ಕೊಡಬೇಕು ಎಂದು ಮನವಿ ಮಾಡಿದರೂ ಸಹ ಕೇಂದ್ರ ಸರಕಾರ ಯಾವುದೇ ಅನುದಾನ ನೀಡದೇ ರೈತ ವಿರೋಧಿ ನೀತಿಯನ್ನು ಅನುಸರಿಸಿದೆ. 2014ರಿಂದ 2024ರವರೆಗೆ ದೇಶದ ಉದ್ದಿಮೆಗಳ 14 ಲಕ್ಷ ಕೋಟಿ ರೂ ಸಾಲವನ್ನು ಮನ್ನಾ ಮಾಡಿದ್ದರೂ, ಈ ದೇಶದ ಬೆನ್ನೆಲುಬಾಗಿರುವ ರೈತರ ಸಾಲ ಮನ್ನಾ ಮಾಡಲಿಲ್ಲ. 4 ವರ್ಗದ ಬಗ್ಗೆ ಮಾತನಾಡುವ ಕೇಂದ್ರ ಸರಕಾರ ರೈತ, ಯುವಕ, ಮಹಿಳೆ ಮತ್ತು ಬಡವರ ಬಗ್ಗೆ ನಿಷ್ಕಾಳಜಿ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

pancha

ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ಕೇಂದ್ರ ಸರಕಾರದ ಬಡವರ ವಿರೋಧಿ ನೀತಿಯನ್ನು ಖಂಡಿಸಿದರು. ಬಿಜೆಪಿ ಮುಖಂಡರಾದ ಅಜ್ಜಪ್ಪಗೌಡ ಪಾಟೀಲ, ಗ್ರಾ.ಪಂ ಮಾಜಿ ಸದಸ್ಯ ಶಿವನಗೌಡ ಗೌಡ್ರ, ಶ್ರೀಶೈಲಪ್ಪ ಹಗರಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಲಕ್ಕುಂಡಿ ಯುವ ಕಾಂಗ್ರೆಸ್ ವತಿಯಿಂದ ಸಂಯುಕ್ತಾ ಪಾಟೀಲರನ್ನು ಸನ್ಮಾನಿಸಲಾಯಿತು. ಹಾಲುಮತ ಸಮಾಜದಿಂದ ಕಂಬಳಿಯನ್ನು ಹೊದೆಸಿ ಗೌರವಿಸಿದರು.

ಇದಕ್ಕೂ ಮುನ್ನ ಅತ್ತಿಮಬ್ಬೆ ಮಹಾದ್ವಾರದಿಂದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸಚಿವ ಎಚ್.ಕೆ. ಪಾಟೀಲ, ಸಿದ್ದು ಪಾಟೀಲ ಅವರು ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ವಿವೇಕ ಯಾವಗಲ್, ವಿಧ್ಯಾಧರ ದೊಡ್ಡಮನಿ, ಪ್ರಕಾಶ ಕರಿ, ನೀಲಮ್ಮ ಬೋಳನವರ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಸ್ವಾಗತಿಸಿದರು. ನಜೀರಅಹ್ಮದ ಕಿರೀಟಗೇರಿ ನಿರೂಪಿಸಿ ವಂದಿಸಿದರು.

ಪಂಚ ಉಚಿತ ಯೋಜನೆಗಳು ಅನುಷ್ಠಾನಗೊಂಡರೆ ದೇಶ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದರು. ಆದರೆ ಶ್ರೀಮಂತರ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿಯಾಗುತ್ತದೆ ಎಂದ ಸಚಿವರು, ಎನ್‌ಡಿಎ ಸರಕಾರ 10 ವರ್ಷ ಸುಳ್ಳು ಹೇಳಿ ಅಧಿಕಾರ ನಡೆಸಿದೆ. ಇದೆಲ್ಲವನ್ನೂ ಮತದಾರರು ಅರಿತು, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರಿಗೆ ಮತ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ವಿನಂತಿಸಿಕೊಂಡರು.

 

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು..!

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಧಾರುಣ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.

ಗದಗ ನಗರದ ದಾಸರ ಓಣಿಯಲ್ಲಿ ಇರುವ ನಗರಸಭೆ ಉಪಾಧ್ಯಕ್ಷೆ ಸುನಂದಾ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ (27) ಕೊಪ್ಪಳ ಮೂಲದ ಪರಶುರಾಮ (55) ಲಕ್ಷ್ಮೀ (45) ಪುತ್ರಿ ಆಕಾಂಕ್ಷ(17) ಹತ್ಯೆಗೊಳಗಾದವರು.

ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.

https://youtu.be/fERzRYa8rMQ

ಸದ್ದು ಕೇಳುತ್ತಿದ್ದಂತೆಯೇ ಅನುಮಾನಗೊಂಡ ಸಂಬಂಧಿಕರು ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆ ಕುರಿತು ಪ್ರಕಾಶ್ ಬಾಕಳೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು, ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ‌ ಎಮ್. ಬಿ. ಸಂಕದ, ಡಿವೈಎಸ್ಪಿ ಜೆ.ಎಚ್. ಇನಾಮದಾರ, ನಗರಠಾಣೆಯ ಇನ್ಸ್‌ಪೆಕ್ಟರ್ ಡಿ.ಬಿ.ಪಾಟೀಲ, ಪಿಎಸ್ ಐ ಎಚ್.ಕೆ. ಪಾಟೀಲ ಸೇರಿದಂತೆ ಶ್ವಾನದಳ, ಫಾರಿನ್ ಸಿಕ್ ತಂಡಗಳು ಆಗಮಿಸಿದ್ದು, ಇಂಚಿಂಚೂ ಪರಿಶೀಲನೆ ನಡೆಸಿದೆ.

ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

ಮನೆಯ ಹಿಂಬಾಗದ ಚರಂಡಿಯಲ್ಲಿ ಜಂಬೆ, ಚಿನ್ನದ ಬಳೆ ಪತ್ತೆಯಾಗಿದೆ, ಒಂದು ಜೊತೆ ಶೋ ಕೂಡ ಪತ್ತೆಯಾಗಿದ್ದು, ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಸಧ್ಯಕ್ಕೆ ಗೊತ್ತಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ : ಸಿದ್ದರಾಯ ಕಟ್ಟಿಮನಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : 18 ವರ್ಷ ಮೇಲ್ಪಟ್ಟ, ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆನ್ನುವ ಉದ್ದೇಶದಿಂದ ಅವರಲ್ಲಿ ಮತದಾನದ ಮಹತ್ವವನ್ನು ತಿಳಿಸುವುದಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಹೇಳಿದರು.

ಅವರು ಗುರುವಾರ ಪ.ಪಂ ವತಿಯಿಂದ ಎಲ್ಲ ಸಿಬ್ಬಂದಿಗಳೊಂದಿಗೆ ಕಚೇರಿಯ ಪ್ರಚಾರ ವಾಹನದ ಮೂಲಕ ಜನದಟ್ಟಣೆಯಿರುವ ಪ್ರದೇಶ ಹಾಗೂ ಪ್ರಮುಖ ಬೀದಿಗಳಲ್ಲಿ ಜಾಗೃತಿಯನ್ನು ಮೂಡಿಸಿ ಮಾತನಾಡಿದರು.

ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ನಮ್ಮದಾಗಿದ್ದು, ಈ ಸಂವಿಧಾನವು ನಮಗೆ ನೀಡಿದ ಮತದಾನದ ಅಧಿಕಾರವನ್ನು ಚಲಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಒಂದೊಂದು ಮತವು ಕೂಡಾ ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ. ಆದ್ದರಿಂದ ಯಾವುದೇ ಆಮಿಷಗಳಿಗೆ ಒಳಪಡದೇ ನಿರ್ಭಯವಾಗಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಅರ್ಹರೂ ಮತದಾನ ಮಾಡಬೇಕು. ಈ ಬಗ್ಗೆ ಜಿಲ್ಲಾ ಹಾಗೂ ತಾಲೂಕಾಡಳಿತದ ಹಂತದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಮುಖ್ಯೋಪಾಧ್ಯಾಯ ಜಿ.ಡಿ. ಈರಕ್ಕನವರ ಮತ್ತು ಪ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!