ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸಾವಿರಾರು ಕಾರ್ಮಿಕರಿಗೆ ಬಹುಕಾಲದ ನಿರೀಕ್ಷೆ ಇಂದು ಕೊನೆಗೂ ನೆರವೇರಿದೆ. ಮೂರು ವರ್ಷಗಳ ವಿಳಂಬದ ನಂತರ ನೂತನ ಇಎಸ್‌ಐ ಆಸ್ಪತ್ರೆ ಅಧಿಕೃತವಾಗಿ ಕಾರ್ಯಾರಂಭಗೊಂಡಿದೆ.
ಸುಮಾರು ₹101.14 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರ“ಕಾರ್ಮಿಕರಿಗೆ ದೊಡ್ಡ ಉಡುಗೊರೆ: ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ಆರಂಭ” ನಿರ್ಮಿಸಿರುವ ಈ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ತುರ್ತು ವೈದ್ಯಕೀಯ ಸೇವೆ ಒದಗಿಸುವ ಗುರಿಯನ್ನು ಹೊಂದಿದೆ. ಇನ್ನು ಮುಂದೆ ಚಿಕಿತ್ಸೆಗಾಗಿ ಬೆಂಗಳೂರಿನತ್ತ ಓಡಬೇಕಾದ ಅನಿವಾರ್ಯತೆ ಇಲ್ಲ.
ಕೇಂದ್ರ ಕಾರ್ಮಿಕ ಸಚಿವ ಮನ್ಸುಕ್ ಮಾಂಡವೀಯ ಅವರಿಂದ ಉದ್ಘಾಟನೆಗೊಂಡ ಈ ಆಸ್ಪತ್ರೆ, ಕೈಗಾರಿಕಾ ಕಾರ್ಮಿಕರ ಆರೋಗ್ಯ ಭದ್ರತೆಗೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಾ. ಕೆ. ಸುಧಾಕರ್ ಹಾಗೂ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಆದರೆ ಮೂರು ವರ್ಷಗಳ ತಡದ ನಂತರ ಆರಂಭವಾದ ಈ ಯೋಜನೆ ಈಗ ನಿಜವಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆಯೇ ಎಂಬುದೇ ಮುಂದಿನ ದೊಡ್ಡ ಪ್ರಶ್ನೆ.

