Home Blog Page 20

ಕಲಬುರಗಿಯಲ್ಲಿ ಘೋರ ದುರಂತ: 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ!

0

ಕಲಬುರಗಿ: ಕಲಬುರಗಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಸೂಯಾ ಆತ್ಮಹತ್ಯೆಗೆ ಮಾಡಿಕೊಂಡ ದುರ್ಧೈವಿಯಾಗಿದ್ದು,

ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದಾಳೆ. ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ  ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.

ಆದರೆ ಮದುವೆಯ ನಂತರ ಅನಸೂಯಾಗೆ ತಮ್ಮ ಮೂವರು ಸಹೋದರಿಯರು ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸಿಸುತ್ತಿದ್ದು, ನಾನು ಮಾತ್ರ ಹಳ್ಳಿಯಲ್ಲಿ ಜೀವನ ನಡೆಸಬೇಕಾಗಿರುವುದರಿಂದ ಮಾನಸಿಕ ಅಸಮಾಧಾನ ಕಾಡುತ್ತಿತ್ತು ಎನ್ನಲಾಗಿದೆ. ಈ ವೇಳೆ ಪೋಷಕರು ಬುದ್ದಿಮಾತು ಹೇಳಿ ಕಳುಹಿಸಿದ್ದಾರೆ. ಆದರೆ, ಅನಸೂಯಾಗೆ ಇದೇ ಮಾನಸಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮದುವೆಗೆ ಮುನ್ನ ಅನಸೂಯಾ ಬೆಂಗಳೂರಿನಲ್ಲಿ ಒಂದು ವರ್ಷ ಉದ್ಯೋಗ ಮಾಡಿಕೊಂಡು ವಾಸವಾಗಿದ್ದರು. ಮದುವೆಯ ನಂತರ ಮತ್ತೆ ಮಹಾನಗರದಲ್ಲಿ ಜೀವನ ನಡೆಸಬೇಕೆಂಬ ಆಸೆ ಹೆಚ್ಚಾಗಿದ್ದು, ಅದೇ ಮಾನಸಿಕ ಒತ್ತಡಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಪ್ರೀತಿಸಿದ್ದ ಪತಿ ಅವಿನಾಶ್ ರನ್ನು ಬಿಟ್ಟು ದೂರ ಹೋಗಲು ಮನಸ್ಸಿಲ್ಲದೆ, ಕಲಬುರಗಿಯಲ್ಲೇ ಗಂಡನ ಮನೆಯಲ್ಲಿಯೇ ವಾಸ ಮುಂದುವರಿಸಿದ್ದರು.

ಈ ಮಾನಸಿಕ ಒತ್ತಡದ ನಡುವೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅನಸೂಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮದರಕಲ್ ಗ್ರಾಮದಲ್ಲಿ ಭೀಕರ ಅಪಘಾತ: ಬಸ್ ಚಕ್ರದಡಿಗೆ ಸಿಲುಕಿ 4 ವರ್ಷದ ಮಗು ಸಾವು

0

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಕಂದಮ್ಮ ಜೀವ ಕಳೆದುಕೊಂಡಿದೆ.

ಮೃತ ಬಾಲಕಿ ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಎಂದು ಗುರುತಿಸಲಾಗಿದೆ. ಗೂಗಲ್‌ನಿಂದ ದೇವದುರ್ಗಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್, ಮದರಕಲ್ ಗ್ರಾಮ ಬಳಿ ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ರಸ್ತೆ ದಾಟಲು ಮುಂದಾದ ಮಗು ಬಸ್ ಬರುವುದನ್ನು ಗಮನಿಸದೆ ಅಚಾನಕ್ಕಾಗಿ ಮುಂದೆ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಚಕ್ರದಡಿಗೆ ಮಗು ಸಿಲುಕಿ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದೆ.

ಘಟನೆಯ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ರೋದನ ಕಣ್ಣೀರು ತರಿಸಿದೆ. ಪ್ರಕರಣ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಸ್ತೆ ದಾಟುವ ವೇಳೆ ದುರಂತ: KSRTC ಬಸ್ ಹರಿದು 4 ವರ್ಷದ ಕಂದಮ್ಮ ಸಾವು!

0

ರಾಯಚೂರು: KSRTC ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಸಂಭವಿಸಿದೆ.

ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಬಾಲಕಿ. ಗೂಗಲ್‌ನಿಂದ ದೇವದುರ್ಗದ ಕಡೆಗೆ ಸಾಗುತ್ತಿದ್ದ ಸಾರಿಗೆ ಬಸ್, ಅಚಾನಕ್ ರಸ್ತೆಗೆ ಅಡ್ಡ ಬಂದ ಮಗುವಿನ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ನಡೆದಿದೆ.

ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ಸಂಭವಿಸಿದ್ದು, ತಕ್ಷಣವೇ ಬಸ್ಸಿನ ಚಕ್ರದಡಿಗೆ ಸಿಲುಕಿದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಈ ಘಟನೆ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಿರುಚಂದೂರ್ ಪ್ರವಾಸದಲ್ಲಿ ನಾಪತ್ತೆಯಾದ ಕೋಲಾರದ ವ್ಯಕ್ತಿ: ಕುಟುಂಬಸ್ಥರಲ್ಲಿ ಗಂಭೀರ ಆತಂಕ

0

ಕೋಲಾರ: ಶಬರಿಮಲೆ ಯಾತ್ರೆಗಾಗಿ ಹೊರಟಿದ್ದ ಕೋಲಾರ ಜಿಲ್ಲೆಯ ವ್ಯಕ್ತಿಯೊಬ್ಬರು ತಮಿಳುನಾಡಿನಲ್ಲಿ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿಯ ನಿವಾಸಿ ರವಿ (40) ಕಾಣೆಯಾದ ವ್ಯಕ್ತಿ.

ಮಂಗಳವಾರ ತಿರುಚಂದೂರ್ ಪ್ರವಾಸಕ್ಕೆ ತೆರಳಿದ್ದ ರವಿ, ಅಂದಿನಿಂದ ಕುಟುಂಬದವರ ಸಂಪರ್ಕಕ್ಕೆ ಲಭ್ಯವಾಗಿಲ್ಲ. ನಾಪತ್ತೆಯಾಗಿ 4 ದಿನಗಳು ಕಳೆದರೂ ಯಾವುದೇ ಸುಳಿವು ಸಿಕ್ಕಿಲ್ಲ ಎಂಬುದು ಕುಟುಂಬದ ನೋವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಸಂಬಂಧ ತಿರುಚಂದೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳೀಯ ಪೊಲೀಸ್ ತಂಡಗಳು ಹಾಗೂ ಕುಟುಂಬಸ್ಥರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ರವಿಯ ಪತ್ತೆಗಾಗಿ ತೀವ್ರ ಪ್ರಯತ್ನ ನಡೆಯುತ್ತಿದ್ದು, ಯಾವುದೇ ಮಾಹಿತಿ ದೊರೆತರೆ ಪೊಲೀಸರಿಗೆ ತಿಳಿಸಲು ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಶಬರಿಮಲೆಯಿಂದ 900 ಕಿ.ಮೀ ಹಾರಾಟ: ಮರಳಿ ಗೂಡು ಸೇರಿದ ಪಾರಿವಾಳ

0

ಚಿತ್ರದುರ್ಗ:ಶಬರಿಮಲೆಯಲ್ಲಿಹಾರಿಬಿಟ್ಟ ಪಾರಿವಾಳವೊಂದು ಸುಮಾರು900 ಕಿಲೋಮೀಟರ್ ದೂರ ಕ್ರಮಿಸಿ, 21 ದಿನಗಳ ಬಳಿಕ ಮರಳಿ ತನ್ನ ಗೂಡಿಗೆ ಸೇರಿರುವ ಅಚ್ಚರಿಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ.

ಗ್ರಾಮದ ರಾಜು ಎಂಬವರು ಸಾಕಿದ್ದಮದಕರಿಎಂಬ ಪಾರಿವಾಳವನ್ನು ಶಬರಿಮಲೆಗೆ ತೆರಳಿದ್ದ ಮಾಲಾಧಾರಿಗೆ ನೀಡಿದ್ದರು. ಶಬರಿಮಲೆಯಲ್ಲಿ ಪಾರಿವಾಳವನ್ನು ಹಾರಿಬಿಡುವಂತೆ ಸೂಚಿಸಿದ್ದರು. ಅದರಂತೆ, ಡಿಸೆಂಬರ್ 31ರಂದು ಶಬರಿಮಲೆಯಲ್ಲಿ ಪಾರಿವಾಳವನ್ನು ಹಾರಿಬಿಡಲಾಗಿದ್ದು, ಜನವರಿ 21ರಂದು ಅದು ಮರಳಿ ತಳವಾರಹಟ್ಟಿಯಲ್ಲಿರುವ ತನ್ನ ಗೂಡಿಗೆ ಸೇರಿದೆ.

ಸುಮಾರು 900 ಕಿಲೋಮೀಟರ್ ದೂರವನ್ನು ಕ್ರಮಿಸಿ 21 ದಿನಗಳ ಬಳಿಕ ಮರಳಿ ಗೂಡಿಗೆ ಸೇರಿರುವ ಪಾರಿವಾಳದ ದಿಕ್ಕು ಪತ್ತೆ ಸಾಮರ್ಥ್ಯ, ತೀಕ್ಷ್ಣ ದೃಷ್ಟಿ ಮತ್ತು ನೆನಪಿನ ಶಕ್ತಿ ಗ್ರಾಮಸ್ಥರಲ್ಲಿ ಭಾರೀ ಅಚ್ಚರಿ ಮೂಡಿಸಿದೆ.

ಗದಗ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಸ್ಥಳಕ್ಕೆ ಫ್ರಾನ್ಸ್ ಪ್ರವಾಸಿಗರ ಭೇಟಿ – ‘ಪ್ರಜ್ವಲ್ ಪ್ರಾಮಾಣಿಕತೆ ಮಿರಾಕಲ್’ ಎಂದ ವಿದೇಶಿಗರು

0

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಸಿಕ್ಕ ಸ್ಥಳಕ್ಕೆ ಇದೀಗ ವಿದೇಶಿಗರ ಗಮನ ಸೆಳೆಯುತ್ತಿದೆ. ನಿಧಿ ಪತ್ತೆಯಾದ ಜಾಗವನ್ನು ವೀಕ್ಷಿಸಲು ಫ್ರಾನ್ಸ್ ಮೂಲದ ಹದಿನೈದು ಪ್ರವಾಸಿಗರ ತಂಡ ಲಕ್ಕುಂಡಿಗೆ ಭೇಟಿ ನೀಡಿದೆ.

ನಿಧಿ ಸಿಕ್ಕ ಸ್ಥಳವನ್ನು ಸಮೀಪದಿಂದ ವೀಕ್ಷಿಸಿದ ವಿದೇಶಿ ಪ್ರವಾಸಿಗರು, ಈ ಘಟನೆಯಿಂದ ಬಹಳಷ್ಟು ಖುಷಿಪಟ್ಟಿದ್ದು, ಪ್ರಜ್ವಲ್ ರಿತ್ತಿ ಅವರ ಪ್ರಾಮಾಣಿಕತೆಯನ್ನು “ಮಿರಾಕಲ್” ಎಂದು ಶ್ಲಾಘಿಸಿದ್ದಾರೆ. ವಿದೇಶಿಗರ ಪ್ರಕಾರ, ಇಂತಹ ಪ್ರಾಮಾಣಿಕತೆ ಜಗತ್ತಿನಲ್ಲಿಯೇ ಅಪರೂಪವಾಗಿದ್ದು, ಇದು ಎಲ್ಲರಿಗೂ ಮಾದರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಕಸ್ತೂರಿ ರಿತ್ತಿ ಕುಟುಂಬದ ಪ್ರಾಮಾಣಿಕತೆಗೆ ವಿದೇಶಿಗರು ವಿಶೇಷ ಗೌರವ ಸೂಚಿಸಿದ್ದಾರೆ. ಕೆಲ ವಿದೇಶಿಗರು ಕಸ್ತೂರಿ ರಿತ್ತಿಗೆ ಸೆಲ್ಫಿ ತೆಗೆದುಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಗಮನಾರ್ಹವೆಂದರೆ, ಲಕ್ಕುಂಡಿ ಗ್ರಾಮದ ನಿವಾಸಿ ಪ್ರಜ್ವಲ್ ರಿತ್ತಿ ಅವರು ಸಿಕ್ಕಿದ್ದ ನಾಲ್ಕು ನೂರು ಅರವತ್ತೊಂದು ಗ್ರಾಂ ಚಿನ್ನವನ್ನು ಸಂಪೂರ್ಣವಾಗಿ ಸರ್ಕಾರಕ್ಕೆ ಹಸ್ತಾಂತರಿಸಿದ್ದರು. ಈ ಪ್ರಾಮಾಣಿಕತೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿದ ಸಿದ್ದರಾಮಯ್ಯ

0

ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಣ್ಯಾತಿಗಣ್ಯರ ಸಾಕ್ಷಿ:
ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತು ಗೌರಿಗದ್ದೆಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಸಾನ್ನಿಧ್ಯ ವಹಿಸಿದ್ದರು.

ನಾಲ್ಕನೇ ತಲೆಮಾರಿನ ಸಾರಥ್ಯ:

1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‌ಬಾದ್‌ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು. ಡಾ. ರಾಜ್‌ಕುಮಾರ್‌ರಿಂದ ಹಿಡಿದು ಸಚಿನ್ ತೆಂಡೂಲ್ಕರ್‌ವರೆಗೆ ಮತ್ತು ಬಿಬಿಸಿ (BBC) ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್, ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

0

ಬೆಂಗಳೂರು: ರಾಜ್ಯದಲ್ಲಿ ನಿಯಮ ರಚನೆ ಇಲ್ಲದೆ ಬೈಕ್ ಟ್ಯಾಕ್ಸಿಗಳನ್ನು ಬಳಸಲು ಅನುಮತಿಸದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ (ಟ್ಯಾಕ್ಸಿ)ಗಳಾಗಿ ಬಳಸಲು ಅವಕಾಶ ನೀಡಲಾಗಿದೆ.

ಇದಕ್ಕಾಗಿ, ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್ ಸಂಸ್ಥೆಗಳು ಸೇವೆ ಬಳಸಲು ಅನುಮತಿ ಕೋರಿ ಸಾರಿಗೆ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಸರ್ಕಾರಿ ನಿಯಮಾನುಸಾರ, ಕಾನೂನಿನ ಪ್ರಕಾರ ಸರ್ಕಾರ ಪರವಾನಿಗೆ ನೀಡಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ರಾಜ್ಯ ಸರ್ಕಾರವು ರೈಡ್ ಶೇರಿಂಗ್ ಕಂಪನಿಗಳಾದ ಓಲಾ, ಉಬರ್ ಹಾಗೂ ಬೈಕ್ ಟ್ಯಾಕ್ಸಿ ಮಾಲೀಕರಿಗೆ ನಿಷೇಧ ಹೊರಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರದ್ದು ಮಾಡಲು ಸಂಸ್ಥೆಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ ಅರ್ಜಿಗಳನ್ನು ಮಾನ್ಯ ಮಾಡಿ, ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಮಾರ್ಗ ತೆರೆಯುವಂತೆ ಆದೇಶ ಹೊರಡಿಸಿದೆ.

ಹೆಂಡತಿಯನ್ನು ಅಕ್ಕ ಎಂದೇ ಪರಿಚಯಿಸಿ ಕೋಟಿ ಕೋಟಿ ವಂಚನೆ: ಮ್ಯಾಟ್ರಿಮೋನಿ ಮೋಸಗಾರನ ಕರಾಳ ಮುಖ ಬಹಿರಂಗ

0

ಬೆಂಗಳೂರು: ನಗರದಲ್ಲಿ ವೈವಾಹಿಕ ಜಾಲತಾಣದ ಮೂಲಕ ಯುವತಿಯರನ್ನು ಮೋಸಗೊಳಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಭಾರೀ ಪ್ರಕರಣ ಬೆಳಕಿಗೆ ಬಂದಿದೆ. ಹೆಂಡತಿಯನ್ನು ತನ್ನ ಅಕ್ಕ ಎಂದು ಪರಿಚಯಿಸಿಕೊಂಡು ಯುವತಿಯ ವಿಶ್ವಾಸ ಗೆದ್ದ ಆರೋಪಿ ವಿಜಯ್ ರಾಜ್ ಗೌಡ ಇದೀಗ ಪೊಲೀಸರ ಬಂಧನದಲ್ಲಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇರೆಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸ್ಥಳಾಧಿಕಾರದ ಆಧಾರದಲ್ಲಿ ಪ್ರಕರಣವನ್ನು ಕೆಂಗೇರಿ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ವೇಳೆ ೨೦೧೯ರಿಂದ ಹಲವಾರು ಮಹಿಳೆಯರನ್ನು ಇದೇ ರೀತಿಯಲ್ಲಿ ಮೋಸಗೊಳಿಸಿರುವುದು ಬಹಿರಂಗವಾಗಿದೆ.

ಕುಣಿಗಲ್, ಅತ್ತಿಬೆಲೆ, ಶಿವಮೊಗ್ಗ, ಆನೇಕಲ್, ಕಾಡುಗೋಡಿ ಸೇರಿದಂತೆ ಹಲವು ಠಾಣೆಗಳಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿವೆ. ದೊಡ್ಡ ಉದ್ಯಮಿ ಎಂದು ತಾನು ಬಿಂಬಿಸಿಕೊಂಡು, ಹಣ ಪ್ರೀಜ್ ಆಗಿದೆ ಎಂದು ನಕಲಿ ದಾಖಲೆ ತೋರಿಸಿ ಹಣ ಪಡೆದುಕೊಳ್ಳುತ್ತಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಇತ್ತೀಚಿನ ಪ್ರಕರಣದಲ್ಲಿ ಯುವತಿಯೊಬ್ಬಳಿಂದ ೧ ಕೋಟಿ ೫೩ ಲಕ್ಷ ರೂಪಾಯಿ ವಂಚಿಸಿರುವುದು ದೃಢಪಟ್ಟಿದೆ. ಮಾಜಿ ಸಂಸದರ ಹೆಸರು ಬಳಸಿ ಟೆಂಡರ್ ಕೊಡಿಸುವುದಾಗಿ ನಂಬಿಸಿ, ನಕಲಿ ಸಹಿ-ಮುದ್ರೆಗಳ ಮೂಲಕ ಕೂಡ ವಂಚನೆ ನಡೆಸಿರುವ ಆರೋಪವೂ ಇದೆ. ಈ ಬಗ್ಗೆ ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ಮಾಹಿತಿ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಶಿಕ್ಷೆ ಕೊಡಿಸಿದ ಪೊಲೀಸ್ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!

0

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸೇರಿದಂತೆ ವಿವಿಧ ಮಹತ್ವದ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯ ಉತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ ಒಟ್ಟು ₹35 ಲಕ್ಷ ನಗದು ಬಹುಮಾನ ಮಂಜೂರು ಮಾಡಲಾಗಿದೆ.

ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ ₹20,000, ಒಟ್ಟು ₹25 ಲಕ್ಷ, ಡಿಜಿಪಿ, ಎಡಿಜಿಪಿ ಮತ್ತು ರಾಜ್ಯ ವ್ಯಾಪ್ತಿಯ ಐಜಿಪಿ ಅಧಿಕಾರಿಗಳಿಗೆ ತಲಾ ₹8,000, ಒಟ್ಟು ₹3 ಲಕ್ಷ, ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಲಾ ₹5,000, ಒಟ್ಟು ₹2 ಲಕ್ಷ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ ₹5,000, ಒಟ್ಟು ₹1 ಲಕ್ಷ ನಗದು ಬಹುಮಾನವಾಗಿ ನೀಡಲಾಗಿದೆ.

ಈ ಬಹುಮಾನವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸೇರಿದಂತೆ ಇತರ ಪ್ರಕರಣಗಳಲ್ಲಿ ನ್ಯಾಯಸಮ್ಮತ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡಿದ ಪ್ರಮುಖ ಕಾರ್ಯಕ್ಕೆ ಗೌರವ ಸೂಚಿಸುತ್ತದೆ.

ಪ್ರಜ್ವಲ್ ರೇವಣ್ಣರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಮತ್ತು ₹11.6 ಲಕ್ಷ ದಂಡ ವಿಧಿಸಲಾಗಿದೆ. ಪ್ರಜ್ವಲ್ ರೇವಣ್ಣ ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರೂ, ಜಾಮೀನು ಮತ್ತು ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಿರಾಕರಿಸಿದೆ.

ನಗದು ಬಹುಮಾನ ಪಡೆದ ಅಧಿಕಾರಿಗಳಲ್ಲಿ ಎಸ್ ಐ ಟಿ ಮುಖ್ಯಸ್ಥ ಬಿಕೆ ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ ಪಿ ಸುಮನ್ ಡಿ. ಪೆನ್ನೇಕರ್, ಎಸ್ ಪಿ ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ಇನ್ಸ್ಪೆಕ್ಟರ್ ಶೋಭಾ ಜಿ, ಸುಮಾರಾಣಿ ಮತ್ತು ಹೇಮಂತ್ ಕುಮಾರ್ ಸೇರಿದ್ದಾರೆ.

error: Content is protected !!