Home Blog Page 2049

ಬಾಯಿಗೆ ಬಟ್ಟೆ ತುರುಕಿ 15 ವರ್ಷದ ಬಾಲಕಿ ಮೇಲೆ ರೇಪ್: ವೃದ್ಧನಿಗೆ ಥಳಿಸಿದ ಗ್ರಾಮಸ್ಥರು!

0

ನೆಲಮಂಗಲ:- ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಹೆಣ್ಣು ಮಕ್ಕಳ ಪೋಷಕರು ಆತಂಕಕ್ಕೀಡುಮಾಡಿದೆ.

ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಆತಂಕಕಾರಿ ಘಟನೆ ಒಂದು ನಡೆದಿದ್ದು, 15 ವರ್ಷದ ಬಾಲಕಿ ಮೇಲೆ 70 ವರ್ಷದ ರೇಪ್ ಮಾಡಿದ್ದಾನೆ.

ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಿ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

IPL 2025: ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ: ಫ್ಯಾನ್ಸ್ ಗೆ ಭಾವನಾತ್ಮಕ ಪತ್ರ ಬರೆದ ಫಾಫ್!

0

ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ ಎಂದು ಫ್ಯಾನ್ಸ್ ಗೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಹೀಗಾಗಿ ಉಳಿದ ಮೂವರನ್ನು ಹರಾಜಿನಲ್ಲಿ ಆರ್​ಟಿಎಮ್ ಬಳಸಿ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ಭಾವಿಸಿದ್ದರು. ಆ ಮೂವರು ಆಟಗಾರರಲ್ಲಿ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್, ಮೊಹಮ್ಮದ್ ಸಿರಾಜ್ ಹಾಗೂ ವಿಲ್ ಜ್ಯಾಕ್ಸ್ ಸೇರಿದ್ದರು. ಆದರೆ ಹರಾಜಿನ ವೇಳೆ ಆರ್​ಸಿಬಿ, ಈ ಮೂವರ ಮೇಲೆ ಆರ್​ಟಿಎಮ್ ಬಳಸಲಿಲ್ಲ.

ಇದೀಗ ಡೆಲ್ಲಿ ಪಾಲಾಗಿರುವ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ RCB ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಆರ್‌ಸಿಬಿ ಜೊತೆ ಕಳೆದ ಮೂರು ವರ್ಷಗಳನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. ‘ ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ. ಆರ್​ಸಿಬಿ ಜೊತೆಗಿನ ಈ ಮೂರು ವರ್ಷಗಳ ಪ್ರಯಾಣ ಅದ್ಭುತವಾಗಿತ್ತು. ನಾನು ಮೂರು ವರ್ಷಗಳ ಹಿಂದೆ ಆರ್‌ಸಿಬಿಗೆ ಸೇರಿದಾಗ, ಈ ಪ್ರಯಾಣವು ಇಷ್ಟು ಅದ್ಭುತವಾಗಿ ಆರಂಭವಾಗುತ್ತದೆ ಎಂದು ನನಗೆ ತಿಳಿದಿರಲಿಲ್ಲ.

ಬೆಂಗಳೂರು ನಗರ ಮತ್ತು ಆರ್‌ಸಿಬಿಯ ಅಭಿಮಾನಿಗಳೆಂದರೆ ನನಗೆ ತುಂಬಾ ಅಚ್ಚುಮೆಚ್ಚು. ಬೆಂಗಳೂರು ಮತ್ತು ಬೆಂಗಳೂರಿನ ಜನರು ನನ್ನ ವ್ಯಕ್ತಿತ್ವದ ಭಾಗವಾಗಿದ್ದಾರೆ. ನಾನು ಯಾವಾಗಲೂ ಈ ನೆನಪುಗಳನ್ನು ಮತ್ತು ಒಡನಾಟವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಈ ಮೂರು ವರ್ಷಗಳನ್ನು ತುಂಬಾ ವಿಶೇಷವಾಗಿಸಿದ್ದಕ್ಕಾಗಿ ಧನ್ಯವಾದಗಳು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವುದು ನನ್ನ ವೃತ್ತಿಜೀವನದ ಶ್ರೇಷ್ಠ ಅನುಭವಗಳಲ್ಲಿ ಒಂದಾಗಿದೆ. ಅಭಿಮಾನಿಗಳ ಶಕ್ತಿ, ಉತ್ಸಾಹ ಮತ್ತು ಬೆಂಬಲವು ಅದನ್ನು ನಿಜವಾಗಿಯೂ ಅನನ್ಯಗೊಳಿಸುತ್ತದೆ. ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಅಲ್ಲಿನ ವಾತಾವರಣ ಮಾಂತ್ರಿಕತೆಯಿಂದ ಕೂಡಿರುತ್ತಿತ್ತು.

ವಿದಾಯ ಹೇಳುವುದಕ್ಕೂ ಮುನ್ನ ನಾನು, ಅಭಿಮಾನಿಗಳು, ನನ್ನ ತಂಡದ ಸದಸ್ಯರು, ಸಿಬ್ಬಂದಿ, ತರಬೇತುದಾರರು ಮತ್ತು ಮಾಲೀಕರು ಸೇರಿದಂತೆ ಎಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಿಮ್ಮೊಂದಿಗೆ ಈ ಪ್ರಯಾಣದ ಭಾಗವಾಗಿದಿದ್ದು ನನಗೆ ಗೌರವವಾಗಿದೆ ಎಂದು ಬರೆದುಕೊಂಡಿದ್ದಾರೆ.

ಅನುಮೋದಿತ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ: ರಮಣದೀಪ್ ಚೌಧರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಅನುಮೋದನೆಕೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದೊಂದಿಗೆ  ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವು ಇಲಾಖೆಯ ಕಾಮಗಾರಿಗಳ ಕ್ರಿಯಾ ಯೋಜನೆಗಳು ಬದಲಾವಣೆಗೊಂಡಿದ್ದು, ಬದಲಾವಣೆಗೊಂಡ ಕಾಮಗಾರಿಗಳನ್ನು ಒಳಗೊಂಡಂತೆ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಕೃಷಿ ಬೆಳೆಗಳ ವಿಮೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಕಡಲೆ, ಜೋಳ, ಗೋದಿ ಬೆಳೆಗಳ ಬೆತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಅಭಾವವಿಲ್ಲ. ರೈತರಿಗೆ ಈಗಾಗಲೇ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಲಾಗಿದೆ  ಎಂದು ಸಭೆಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 42 ವಸತಿ ನಿಲಯಗಳಿದ್ದು, ಅದರಲ್ಲಿ 35 ವಸತಿ ನಿಲಯಗಳಿಗೆ ಸ್ವಂತ ಕಟ್ಟಡವಿದೆ. ಉಳಿದ ವಸತಿ ನಿಲಯಗಳಿಗೆ ಜಾಗ ಲಭ್ಯವಿದ್ದು, ಈಗಾಗಲೇ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ   ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಆರ್.ಎಸ್. ಬುರಡಿ ಮಾತನಾಡಿ, ಎಲ್ಲಾ ಶಾಲೆಗಳಲ್ಲಿ ಉತ್ತಮ ಭೋದನೆ ನಡೆಯುತ್ತಿದ್ದು, ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ವಿವೇಕ ಯೋಜನೆಯಡಿ 95ಶಾಲೆಗಳಲ್ಲಿ 124 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೇಷ್ಮೆ, ಪಶು ಸಂಗೋಪನೆ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತಿ ಕೋಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಇಲಾಖೆಯ ಮಾಹಿತಿ ಒದಗಿಸಿದರು.

ಆಭರಣ ಕಳ್ಳಿಯರ ಬಂಧನ: 55ಗ್ರಾಂ ಬಂಗಾರದ ಆಭರಣ ಪತ್ತೆ

0

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಬಂಗಾರದ ಆಭರಣಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸುವಲ್ಲಿ ಲಕ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಭದ್ರಾವತಿಯ ಶಾಂತಿ ವಡ್ಡರ, ಸುಶೀಲಮ್ಮಾ ವಡ್ಡರ ಎಂಬ ಆರೋಪಿಗಳಿಂದ ಒಟ್ಟು 2.60 ಲಕ್ಷ ರೂ ಮೌಲ್ಯದ 55ಗ್ರಾಂ ಬಂಗಾರದ ಆಭರಣಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ನಾಗರಾಜ ಗಡಾದ, ಕ್ರೈಂ ಪಿಎಸ್‌ಐ ಟಿ.ಕೆ. ರಾಠೋಡ, ಎಎಸ್‌ಐ ಎನ್.ಎ. ಮೌಲ್ವಿ, ಗುರು ಬೂದಿಹಾಳ, ಎಂ.ಎಂ, ಶೀಗಿಹಳ್ಳಿ, ಆರ್.ಎಸ್ ಯರಗಟ್ಟಿ, ಎಂ.ಎ ಶೇಖ್, ಎಂ.ಎಸ್ ಬಳ್ಳಾರಿ, ಎ.ಆರ್. ಕಮ್ಮಾರ, ಎಚ್.ಐ. ಕಲ್ಲಣ್ಣವರ, ಪಾಂಡುರಂಗರಾವ್ ಸೇರಿ ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡಿದ್ದರು.

ಬೀಚಿ ಬಳಗವು ಜಿಲ್ಲೆಯ ಎಲ್ಲ ಸಾಹಿತ್ಯ ಪ್ರಿಯರ ಮನಸ್ಸನ್ನು ಗೆದ್ದಿದೆ: ಮಲ್ಲಿಕಾರ್ಜುನ ಶ್ರೀಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಅಕ್ಟೋಬರ್ ತಿಂಗಳಿನಲ್ಲಿ ಅಬ್ಬಿಗೇರಿಯಲ್ಲಿ ನಡೆದ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಮಹೋತ್ಸವದಲ್ಲಿ ಜಗದ್ಗುರು ಪೀಠದಿಂದ `ಸಾಧನ ಸಿರಿ’ ಪ್ರಶಸ್ತಿಯನ್ನು ಪಡೆದ ಪಟ್ಟಣದ ಹಿರೇಮಠ ಸ್ವಾಮೀಜಿಯವರನ್ನು ಬೀಚಿ ಬಳಗದಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಮಲ್ಲಿಕಾರ್ಜುನ ಶ್ರೀಗಳು, ನಮ್ಮ ಮಠದ ಆವರಣದಲ್ಲಿ ಕಳೆದ ಹತ್ತು ವರ್ಷಗಳಿಂದ ಬೀಚಿ ಬಳಗದ ಕಾರ್ಯಗಳು ನಡೆಯುತ್ತ ಬಂದಿದ್ದನ್ನು ನೋಡಿದ್ದೇವೆ. ನರೇಗಲ್ಲ ಹೋಬಳಿಯಲ್ಲಿ ಸಾಹಿತ್ತಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಬೀಚಿ ಬಳಗವು ಈ ಭಾಗದ ಅಷ್ಟೇ ಅಲ್ಲದೆ ಜಿಲ್ಲೆಯ ಎಲ್ಲ ಸಾಹಿತ್ಯ ಪ್ರಿಯರ ಮನಸ್ಸನ್ನು ಗೆದ್ದಿದೆ. ನಾನು ಕಂಡಿರುವAತೆ ಬರೀ ಗದಗ ಜಿಲ್ಲೆಯಲ್ಲಷ್ಟೇ ಅಲ್ಲದೆ ನಾನು ಹೋದೆಡೆಯಲ್ಲೆಲ್ಲ ಈ ಬೀಚಿ ಬಳಗದ ಮಾತು ಬಂದೇ ಬರುತ್ತದೆ. ಅಂದರೆ ಬೀಚಿ ಬಳಗ ಅಷ್ಟೊಂದು ಪ್ರಸಿದ್ಧಿಯನ್ನು ಪಡೆದಿದೆ ಎಂದರು.

ಇಂದು ಬೀಚಿ ಬಳಗದವರು ನಮ್ಮನ್ನು ಸನ್ಮಾನಿಸಿದ್ದು ನಮಗೆ ಅತ್ಯಂತ ಸಂತಸವಾಗಿದೆ. ಬೀಚಿ ಬಳಗದ ಕಾರ್ಯಕ್ರಮದ ನಿಮಿತ್ತ ನಮ್ಮ ನರೇಗಲ್ಲಿಗೆ ನಾಡಿನ ಹಾಸ್ಯ ದಿಗ್ಗಜರಾದ ಗಂಗಾವತಿ ಪ್ರಾಣೇಶ್, ಬಸವರಾಜ ಮಹಾಮನಿ, ನರಸಿಂಹ ಜೋಷಿ, ಅನಿಲ ವೈದ್ಯ ಅವರಲ್ಲದೆ, ಹರಟೆಯ ಮಲ್ಲ, ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಂತಹವರನ್ನು ಕಾಣುವ, ಅವರ ಮಾತುಗಳನ್ನು ಕೇಳುವ ಸೌಭಾಗ್ಯ ನಮ್ಮೆಲ್ಲರದ್ದಾಗಿದೆ. ಇಂತಹ ಅಪರೂಪದ ಸಾಹಿತ್ತಿಕ ರಸದೌತಣ ನೀಡುತ್ತಿರುವ ಬೀಚಿ ಬಳಗವು ಇನ್ನೂ ಉನ್ನತವಾಗಿ ಬೆಳೆದು ಈ ಭಾಗದ ಸಾಹಿತಿಗಳನ್ನು ಬೆಳೆಸುವಂತಾಗಲಿ ಎಂದು ಹಾರೈಸಿದರು.

ಅರುಣ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಎಂ.ಎಸ್. ದಢೇಸೂರಮಠ, ಸುರೇಶ ಹಳ್ಳಿಕೇರಿ, ಡಾ. ಆರ್.ಕೆ. ಗಚ್ಚಿನಮಠ, ಎಂ.ಕೆ. ಬೇವಿನಕಟ್ಟಿ, ಭಾರತಿ ಶಿರ್ಸಿ, ನಿರ್ಮಲಾ ಹಿರೇಮಠ ಮಾತನಾಡಿದರು. ವೇದಿಕೆಯ ಮೇಲೆ ಪಂ. ಅನ್ನದಾನಶಾಸ್ತಿçಗಳು, ಸಿದ್ದಿ, ಆದರ್ಶ ಕುಲಕರ್ಣಿ, ಹುಚ್ಚೀರಪ್ಪ ಈಟಿ, ಶಿವಯೋಗಿ ಜಕ್ಕಲಿ ಇನ್ನೂ ಮುಂತಾದವರಿದ್ದರು. ಬಿ.ಬಿ. ಕುರಿ ನಿರೂಪಿಸಿದರು. ಸಂಚಾಲಕ ಈಶ್ವರ ಬೆಟಗೇರಿ ವಂದಿಸಿದರು.

ಸಂವಿಧಾನ ಜನರ ಬದುಕಿನ ದಾರಿದೀಪವಾಗಿದೆ: ಬಿ.ಎಸ್. ಹಿರೇಮಠ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಸಂವಿಧಾನ ಸರ್ವರಿಗೂ ಸಮಾನತೆ ಒದಗಿಸಿ ಪ್ರಜಾಪ್ರಭುತ್ವ ಆಧಾರದ ಮೇಲೆ ಜನರ ಬದುಕಿನ ದಾರಿ ದೀಪವಾಗಿದೆ ಎಂದು ಮನೋರಮಾ ಕಾಲೇಜಿನ ಪ್ರಾಚಾರ್ಯ ಬಿ.ಎಸ್. ಹಿರೇಮಠ ಹೇಳಿದರು. 

ನಗರದ ಮನೋರಮಾ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಭಾರತೀಯರ ಜೀವಾಳ. ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಬಾಳಿ ಬದುಕಿದರೆ ಜೀವನ ಸಿಹಿ ಜೇನಿನಂತೆ ಎಂದರು.

ಕನ್ನಡ ಉಪನ್ಯಾಸಕ ಪ್ರೊ. ಸಂಗಮೇಶ ಹಾದಿಮನಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಕಾಲೇಜಿನ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನಿಮ್ಮ ಪಕ್ಷದಲ್ಲೇ ಒಡಕು ತರಬಹುದು, ಯೋಗೇಶ್ವರ್ ಬಗ್ಗೆ ಎಚ್ಚರ ವಹಿಸಿ: ಕಾಂಗ್ರೆಸ್ ಗೆ ಎಚ್ಚರಿಕೆ ಕೊಟ್ಟ ಸುರೇಶ್ ಬಾಬು!

0

ಬೆಂಗಳೂರು:- ನಿಮ್ಮ ಪಕ್ಷದಲ್ಲೇ ಒಡಕು ತರಬಹುದು, ಯೋಗೇಶ್ವರ್ ಬಗ್ಗೆ ಎಚ್ಚರ ವಹಿಸಿ ಎಂದು ಕಾಂಗ್ರೆಸ್ ಗೆ ಜೆಡಿಎಸ್ ಮುಖಂಡ ಸುರೇಶ್ ಬಾಬು ಎಚ್ಚರಿಕೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷದಲ್ಲೇ ಒಡಕು ತರುತ್ತಾರೆ ಹುಷಾರ್ ಎಂದರು.

ನಮ್ಮ ಶಾಸಕರು ಯಾರು ಮಾರಾಟ ಆಗಲ್ಲ. ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಮಾಡುತ್ತೇನೆ ಎಂದು ಹೇಳಿದ್ದು ಯಾರು? 30 ಜನರನ್ನು ಆಪರೇಷನ್ ಮಾಡುತ್ತೇನೆ ಎಂದು ಇದೇ ಯೋಗೇಶ್ವರ್ ಹೇಳಿದ್ದರು. ಕಾಂಗ್ರೆಸ್ ಅಧ್ಯಕ್ಷರಿಗೆ ಯೋಗೇಶ್ವರ್ ಬಗ್ಗೆ ಎಚ್ಚರಿಕೆ ಇರಲಿ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ. ನಮ್ಮ ಶಾಸಕರು ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳು ಅಲ್ಲ. ನಮ್ಮ ಶಾಸಕರು ಸಿದ್ಧಾಂತದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರು ಪಕ್ಷ ಬಿಟ್ಟು ಹೋಗಲ್ಲ ಎಂದು ತಿರುಗೇಟು ಕೊಟ್ಟರು.

ಅನೇಕರು ಜೆಡಿಎಸ್ ಮುಗಿದೇ ಹೋಯಿತು ಎಂದು ಹೇಳಿದರು. ಮತ್ತೆ ಫಿನಿಕ್ಸ್ನಂತೆ ಎದ್ದು ಬಂತು. ರಾಜ್ಯದಲ್ಲಿ ಜೆಡಿಎಸ್ ಮುಗಿಸೋಕೆ ಎಂದು ಯೋಗೇಶ್ವರ್ ಹೀಗೆ ಹೇಳುತ್ತಿದ್ದಾರೆ. ಜೆಡಿಎಸ್ ಅನ್ನು ತೆಗೆಯೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದರು.

ಸಂಘರ್ಷಗಳ ಶಾಂತತೆಗೆ ಯೋಗ ಶಿಕ್ಷಣ ಸಹಕಾರಿಯಾಗಿದೆ: ಆರ್.ಎಸ್. ಬುರಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣವು ವಿವೇಕಯುಕ್ತ ಧ್ಯೇಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ನೆರವಾಗುವ ಉತ್ತಮ ಸಾಧನವಾಗಿದೆ. ಅದರಲ್ಲೂ ಯೋಗ ಶಿಕ್ಷಣವ ಅತ್ಯುತ್ತಮ ಸಾಧನವಾಗಿದೆ. ಈ ಸಾಧನದ ಬಳಕೆ ಇಲ್ಲದ್ದಕ್ಕೆ ಇಂದು ವಯಕ್ತಿಕ, ಕೌಟುಂಬಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅನೇಕ ರೀತಿಯ ಸಂಘರ್ಷಗಳಿಂದ ಎಲ್ಲೆಡೆ ಶಾಂತಿ ಇಲ್ಲದಾಗಿದೆ ಎಂದು ಗದಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಅಭಿಪ್ರಾಯಪಟ್ಟರು.

ಇಲ್ಲಿನ ಎಸ್.ವಾಯ್.ಬಿ.ಎಂ.ಎಸ್. ಯೋಗಪಾಠಶಾಲೆಯ ಬಸವ ಯೋಗ ಕೇಂದ್ರದ ಬೆಳ್ಳಿಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡುತ್ತಿದ್ದರು.

ಯೋಗ ಸಾಧನೆಯಿಂದ ವ್ಯಕ್ತಿಯು ದೈಹಿಕ, ಮಾನಸಿಕ, ನೈತಿಕ, ಆಧ್ಯಾತ್ಮಿಕವಾಗಿ ಒಂದು ಶಕ್ತಿಯಾಗಿ ಬೆಳೆದು ಅವನಲ್ಲಿ ವಿವೇಕ ಮತ್ತು ಆಲೋಚನೆಗಳು ಅಂಕುರಿಸುವವು. ಸರಿ-ತಪ್ಪುಗಳ ಅರಿವು ಮೂಡಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯುತ್ತಾನೆ ಹಾಗೂ ತಾನಿರುವ ಸಮಾಜವನ್ನು ಬೆಳೆಸುತ್ತಾನೆ. ಈ ನಿಟ್ಟಿನಲ್ಲಿ ಸಂಘರ್ಷಗಳ ಶಾಂತತೆಗೆ ಯೋಗ ಶಿಕ್ಷಣ ಸಹಕಾರಿಯಾಗಿದೆ ಎಂದರು.

ದೇಶದಲ್ಲಿ ಮಹಾವಿದ್ಯಾಲಯಗಳು ಸಾವಿರಾರು ಸಂಖ್ಯೆಯಲ್ಲಿವೆ. ಇವೆಲ್ಲವುಗಳಿಗಿಂತ ಬಸವ ಯೋಗ ಮಹಾವಿದ್ಯಾಲಯ ಭಿನ್ನವಾಗಿದೆ. ಕಾರಣ ರಾಷ್ಟ್ರೋನ್ನತಿಗಾಗಿ ಸತ್ಪ್ರಜೆಗಳನ್ನು ರೂಪಿಸುವ ವಿದ್ಯಾಲಯವಾಗಿದೆ. ಬಸವ ಯೋಗ ಮಹಾವಿದ್ಯಾಲಯ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಯಶಸ್ಸು ಸಾಧಿಸಲೆಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ರೋಣದ ರಾಜೀವಗಾಂಧಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ ಪ್ರಾಚಾರ್ಯ ಡಾ. ಆಯ್.ಬಿ. ಕೊಟ್ಟೂರಶೆಟ್ಟಿ ಮಾತನಾಡಿ, ಯೋಗವು ದಿನಚರಿಯನ್ನು ಪರಿಪಾಲಿಸಲು ದೈಹಿಕ, ಮಾನಸಿಕ ಶಕ್ತಿಯನ್ನು ನೀಡುತ್ತದೆ. ವಿದ್ಯಾರ್ಥಿ ಹಂತದಿಂದಲೇ ಯೋಗ ಸಾಧನೆ ಮಾಡಿದರೆ ಅವರು ಸದಾ ನಿರೋಗಿಯಾಗಿರಲು ಸಾಧ್ಯವಾಗುವುದು. ಇಂದು ನಾವೆಲ್ಲ ಸಮಾಜೋನ್ನತಿಗಾಗಿ ಸೇವಾ ಮನೋಭಾವ ಬೆಳೆಸಿಕೊಳ್ಳುವದು ಅಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕೆ.ಸಿ. ಪಟ್ಟಣಶೆಟ್ಟಿಯವರನ್ನು, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ. ನಿಂಬನಗೌಡರ, ಯೋಗ ಶಿಕ್ಷಕಿ ಸುಮಂಗಲಾ ಹದ್ಲಿ ಇವರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿP್ಷÀಕರಾದ ಜಿ.ಪಿ. ಕಟ್ಟಿಮನಿ ಅನಿಸಿಕೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಯೋಗ ಪಾಠಶಾಲೆಯ ಯೋಗ ಸಾಧಕ ವೃಂದ, ಬಸವ ಯೋಗ ಕೇಂದ್ರದ ವಿದ್ಯಾರ್ಥಿ ವೃಂದ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಸುನಂದಾ ಜ್ಯಾನೋಪಂತರ ಪ್ರಾರ್ಥನೆ ಹೇಳಿದರು. ಡಾ. ಎಂ.ವಿ. ಐಹೊಳ್ಳಿ ಸ್ವಾಗತಿಸಿದರು. ಬಸವ ಯೋಗ ಕೇಂದ್ರದ ಪ್ರಾಚಾರ್ಯರಾದ ಕೆ.ಎಸ್. ಪಲ್ಲೇದ ಕಾರ್ಯಕ್ರಮ ನಿರೂಪಿಸಿದರು. ವಿಜಯಾ ಚನ್ನಶೆಟ್ಟಿ ವಂದಿಸಿದರು.

ಲಕ್ಕುಂಡಿಯ ಪೂರ್ಣ ವೈಭವವನ್ನು ಮರಳಿ ತಂದು ಜಾಗತಿಕ ಮನ್ನಣೆ ತರುವ ಪ್ರಯತ್ನವಾಗಬೇಕು: ರಮಣದೀಪ್ ಚೌಧರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಬುಧವಾರ ಜಿಲ್ಲೆಯ ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದರು.

ಲಕ್ಕುಂಡಿಯ ಪಾರಂಪರಿಕ, ಗತಕಾಲದ, ಐತಿಹಾಸಿಕ ವೈಭವನ್ನು ಪುನಃ ಸ್ಥಾಪಿಸುವ ಉದ್ದೇಶದಿಂದ ಲಕ್ಕುಂಡಿ ಗ್ರಾಮದಲ್ಲಿ ಸ್ಮಾರಕಗಳ, ಸುಂದರ ಶಿಲ್ಪ ಕಾಲಕೃತಿಗಳ, ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಲ್ಲಿ ಸಂಗ್ರಹಣೆ ಮಾಡಲಾದ ಪ್ರಾಚ್ಯಾವಶೇಷಗಳನ್ನು ವೀಕ್ಷಣೆ ಮಾಡಿದರು.

ಪ್ರಾಚ್ಯಾವಶೇಷಗಳನ್ನು ಒಂದೆಡೆ ಕ್ರೋಢೀಕರಿಸಿ ಆ ಪ್ರದೇಶದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಕ್ರಮ ವಹಿಸಬೇಕು. ಲಕ್ಕುಂಡಿಯ ಪೂರ್ಣ ವೈಭವವನ್ನು ಮರಳಿ ತಂದು ಜಾಗತಿಕ ಮನ್ನಣೆ ತರುವ ಪ್ರಯತ್ನವಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಅಯುಕ್ತ ಡಾ. ಶರಣು ಗೋಗೇರಿ, ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಅ.ದ. ಕಟ್ಟಿಮನಿ ಮತ್ತಿತರರು ಇದ್ದರು.

ಸ್ವಾಮೀಜಿಗಳ ಹೇಳಿಕೆ ಅಸಾಂವಿಧಾನಿಕ: ಅಡ್ವೋಕೇಟ್ ತಾಹೇರ್ ಹುಸೇನ್

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಮುಸ್ಲಿಮರ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು, ವಕ್ಫ್ ಮಂಡಳಿಯನ್ನೇ ರದ್ದುಪಡಿಸಬೇಕು ಎಂದು ಚಂದ್ರಶೇಖರ ಸ್ವಾಮೀಜಿಯವರ ಹೇಳಿಕೆ ಅತ್ಯಂತ ಖಂಡನೀಯ. ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಪ್ರಚೋದಕ ಹೇಳಿಕೆಯಾಗಿದೆ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ವಾಮೀಜಿಗಳ ಈ ಹೇಳಿಕೆ ಮುಸ್ಲಿಮರ ಭಾವನೆಯನ್ನು ಘಾಸಿಗೊಳಿಸಿದೆ. ಇದು ಅವರ ಸ್ಥಾನಮಾನಕ್ಕೆ ವಿರುದ್ಧವಾದ ಮಾತು. ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಅರಳಿಸುವ ಮಾತುಗಳನ್ನಾಡಬೇಕಾದ ಸ್ವಾಮೀಜಿಯವರು ಸಮಾಜವನ್ನು ಕೆರಳಿಸುವ ಪ್ರಯತ್ನ ಮಾಡಿದ್ದಾರೆ. ಧರ್ಮಗುರುಗಳು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವ ಕೆಲಸ ಮಾಡಬೇಕೇ ಹೊರತು ಸಮಾಜದಲ್ಲಿ ಒಡಕು ಮತ್ತು ದ್ವೇಷ ಹರಡಿಸಲು ಕಾರಣರಾಗಬಾರದು. ಸ್ವಾಮೀಜಿಗಳ ಇಂತಹ ಹೇಳಿಕೆಗಳು ಅವರ ಘನತೆಗೆ ಧಕ್ಕೆ ತರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

error: Content is protected !!