Home Blog Page 2051

ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

0

ಬಳ್ಳಾರಿ: ಸುಮಾರು 15 ದಿನಗಳಿಂದ ಬಾಣಂತಿಯ ಸಾವಿನಿಂದ ಬಳ್ಳಾರಿಯ ಜಿಲ್ಲಾಸ್ಪತ್ರೆ ಮತ್ತು ಬಿಮ್ಸ್ ಗೆ ಸಾರ್ವಜನಿಕರು ಚಿಕಿತ್ಸೆಗೆ ಬರಲು ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮಿ (20) ಸಾವಿಗೀಡಾದ ಮಹಿಳೆ. ಭಾನುವಾರ ನಾರ್ಮಲ್ ಹೆರಿಗೆಯಾಗಿದ್ದ ಮಹಾಲಕ್ಷ್ಮೀಗೆ ಗಂಡು ಮಗುವಿಗೆ ಜನಿಸಿತ್ತು.

ಹೆರಿಗೆ ಬಳಿಕ ಮಹಾಲಕ್ಷ್ಮಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಮುನ್ನ ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ದೂರಿದ್ದಾರೆ.

Tumakuru: ಭ್ರಷ್ಟಾಚಾರ ಆರೋಪ: RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ

0

ತುಮಕೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತುಮಕೂರು ಆರ್ ಟಿ ಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಬಿಎಚ್ ರಸ್ತೆಯಲ್ಲಿರುವ ಆರ್ ಟಿ ಓ ಕಚೇರಿ ಮೇಲೆ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿ ದಾಖಲಾತಿ ಪರಿಶೀಲನೆ ಮಾಡುತ್ತಿದ್ದಾರೆ. ಕಚೇರಿಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ದಾಖಲಾತಿ ಪರಿಶೀಲನೆ ಮಾಡುತ್ತಿದ್ದು, ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

ಇನ್ನೂ ಇಂದು ಬೆಳ್ಳಗೆ ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದರು.

ಕರ್ತವ್ಯಲೋಪ ಹಿನ್ನೆಲೆ: ಚಿಕ್ಕಮಗಳೂರು ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಸ್ಪೆಂಡ್

0

ತುಮಕೂರು: ಕರ್ತವ್ಯಲೋಪ ಹಿನ್ನೆಲೆ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ʼರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್,

ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ ಹಾಗೂ ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತ್ತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್: ಸಿಎಂ ಕುಟುಂಬದ ವಿರುದ್ಧ ಮತ್ತೊಂದು ದೂರು ದಾಖಲು!

0

ಬೆಂಗಳೂರು: ಮುಡಾ ಎಂದೇ ಕರೆಯಲ್ಪಡುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹೆಚ್ಚಿನ ಮೌಲ್ಯ ಹೊಂದಿರುವ ಬಡಾವಣೆಯಲ್ಲಿ ಮುಡಾ ಬದಲಿ ನಿವೇಶನ ನೀಡಿದೆ ಎಂಬ ಆರೋಪ ಕೇಳಿ ಬಂದ ಬಳಿಕ ಇದು ಮತ್ತಷ್ಟು ಜೋರಾಗಿದ್ದು,

ಇದೀಗ ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು.ಹೌದು,

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ದಾವೆ ಹೂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ 12 ಜನರ ಮೇಲೆ ಸಿವಿಲ್ ಕೇಸ್ ದಾಖಲಿಸಿದ್ದಾರೆ.

ನನ್ನ ಚಿಕ್ಕಪ್ಪ ದೇವರಾಜ್ ನಮಗೆ ಮೋಸ ಮಾಡಿದ್ದಾರೆ. ನನ್ನ ತಂದೆಯ ಪಾಲಿನ ಜಾಗವನ್ನು ಮೋಸದಿಂದ ಬರೆಸಿಕೊಂಡು ಈಗ ಬೇರೆಯವರಿಗೆ ಮಾರಿದ್ದಾರೆ. ನಮಗೆ ನ್ಯಾಯ ಬೇಕು ಹೀಗಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ಖಾತೆ ಮಾಡಿಸಿಕೊಡುವ ಹೆಸರಿನಲ್ಲಿ ಸಹಿ ಪಡೆದು ಮೋಸ ಮಾಡಿದ್ದಾರೆ. ನಮಗೆ ಈ ಜಮೀನು ವಿಚಾರ ಮಾಧ್ಯಮದ ಮೂಲಕ ಗೊತ್ತಾಗಿದೆ. ಹೀಗಾಗಿ ಈಗ ಕೇಸ್ ಹಾಕಿದ್ದೇವೆ ಎಂದು ಮೈಲಾರಯ್ಯನ ಮಗಳು ಜಮುನಾ ಹೇಳಿದ್ದಾರೆ.

 

ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು: ಪ್ರಮೋದ್ ಮುತಾಲಿಕ್

0

ಬೆಳಗಾವಿ: ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಹಿಂದು ಮುಖಂಡ ಪ್ರಮೋದ್​ ಮುತಾಲಿಕ್ ಹೇಳಿದ್ದಾರೆ. ಬೆಳಗಾವಿಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಹೀಗಾಗಿ ಕೇಂದ್ರ ಸರ್ಕಾರ ಇದರ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಪ್ರಧಾನಿ ಮೋದಿ, ಗೃಹಮಂತ್ರಿ ಅಮಿತ್ ಷಾ ಮುಂದಾಗಬೇಕು ಹಾಗೂ ಕೇಂದ್ರ ಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಿ ಸ್ವಾಮೀಜಿಯನ್ನು ಆದಷ್ಟು ಬೇಗ ಬಂದ ಮುಕ್ತ ಮಾಡಬೇಕು ಎಂದು ಪ್ರಮೋದ್​ ಮುತಾಲಿಕ್ ಹೇಳಿದರು.

 

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್‌ ಟಚ್‌: ಬೆಂಗಳೂರಲ್ಲಿ ಹೆಣ್ಣು ಮಕ್ಕಳಿಗಿಲ್ಲ ರಕ್ಷಣೆ

0

ಬೆಂಗಳೂರು: ರಾಜಧಾನಿ ಬೆಂಗಳೂರು ಹೆಣ್ಮಕ್ಕಳಿಗೆ ಸೇಫ್‌ ಸಿಟಿ ಎಂಬ ಮಾತಿದೆ. ಆದರೆ ಕೆಲ ಬೀದಿ ಪುಂಡರು ಈ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದೊಮ್ಮೆ ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರಿಗೆ ಬೇಕಂತೆ ಸ್ಪರ್ಶಿಸಿ ವಿಕೃತಿ ಮೆರೆದಿದ್ದರು. ಇದೀಗ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್​ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಸವಾರ ಅರುಣ್ ಎಂಬಾತ ಅಸಭ್ಯ ವರ್ತನೆ ತೋರಿದ್ದು,

ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿ ಅರುಣ್​ನನ್ನು ಪೊಲೀಸರು ಬಂಧಿಸಿದ್ದಾರೆ. ದೂರು ನೀಡಿದ ಎರಡೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂಬೆಳಿಗ್ಗೆ BBMP ಅಧಿಕಾರಿಗಳಿಗೆ ಶಾಕ್‌ ಕೊಟ್ಟ “ಲೋಕಾ” ಅಧಿಕಾರಿಗಳು!

0

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ BBMP ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಬಿಬಿಎಂಪಿ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಮನೆ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ನಿವಾಸ ಮೇಲೆ ದಾಳಿ ಮಾಡಿದ್ದಾರೆ.

ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್​​ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಎಂಟು ತಂಡಗಳು ಏಕಕಾಲಕ್ಕೆ‌ ದಾಳಿ ನಡೆಸಲಾಗಿದೆ.

57 ದಿನಗಳ ಬಳಿಕ ಭೂಮಿಗೆ ವಿದಾಯ ಹೇಳಿದ ‘ಮಿನಿ ಮೂನ್’

ಸುದೀರ್ಘ 57 ದಿನಗಳ ಕಾಲ ಚಂದ್ರನಂತೆಯೇ ಭೂಮಿಯನ್ನು ಸುತ್ತುತ್ತಿದ್ದ `ಮಿನಿ ಮೂನ್’ ನವೆಂಬರ್ 25ರಂದು ಭೂಮಿಗೆ ವಿದಾಯ ಹೇಳಿದೆ. ಇದು ವಿಜ್ಞಾನಿಗಳಿಗೆ ಬೇಸರ ತರಿಸಿದ್ದರು ಜನವರಿಯಲ್ಲಿ ಮತ್ತೆ ಭೂಮಿಗೆ ಬರಲಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ `ನಾಸಾ’ ತಿಳಿಸಿದೆ.

2024 ಪಿಟಿ5 ಎಂದು ಹೆಸರಿನಿಂದ ಕರೆಯಲಾದ ಸುಮಾರು 33 ಅಡಿ ಗಾತ್ರದ ಈ ಕ್ಷುದ್ರಗ್ರಹ ಕುದುರೆಲಾಳದ ಆಕಾರದ ಪಥದ ರೂಪದಲ್ಲಿ ಭೂಮಿಯನ್ನು ಸುತ್ತುತ್ತಿತ್ತು. ಸೂರ್ಯನ ಬಲವಾದ ಗುರುತ್ವಾಕರ್ಷಣೆಯ ಕಾರಣದಿಂದ ಇದೀಗ 57 ದಿನಗಳ ಬಳಿಕ ಭೂಮಿಯಿಂದ ದೂರ ಸರಿಯುತ್ತಿದೆ. 2025ರಲ್ಲಿ ಮತ್ತೆ ಭೂಮಿಗೆ ಬರಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

ಕ್ಷುದ್ರಗ್ರಹವು ಭೂಮಿಗೆ 1.8 ಮಿಲಿಯನ್ ಕಿಲೋಮೀಟರ್‌ಗಳಷ್ಟು ಸಮೀಪದಲ್ಲಿ ಹಾದುಹೋದಾಗ ಅದನ್ನು ವೀಕ್ಷಿಸಲು ರಾಡಾರ್ ಆಂಟೆನಾವನ್ನು ಬಳಸಲು ನಾಸಾ ಯೋಜಿಸುತ್ತಿದೆ. ಮೊಜಾವೆ ಮರುಭೂಮಿಯಲ್ಲಿರುವ ರಾಡಾರ್ ಕ್ಷುದ್ರಗ್ರಹದ ಗಾತ್ರ, ಆಕಾರ ಮತ್ತು ಸಂಯೋಜನೆಯ ಬಗ್ಗೆ ಡೇಟಾವನ್ನು ಒದಗಿಸುತ್ತದೆ. ನಿಕಟ ಆದರೆ ಸುರಕ್ಷಿತ ಹಾರಾಟದ ನಂತರ, ಕ್ಷುದ್ರಗ್ರಹವು ಮತ್ತೆ ಸೌರವ್ಯೂಹಕ್ಕೆ ಜೂಮ್ ಆಗುತ್ತದೆ ಮತ್ತು 2055 ರವರೆಗೆ ಭೂಮಿಯ ಬಳಿ ಹಿಂತಿರುಗುವುದಿಲ್ಲ.

ಕ್ಷುದ್ರಗ್ರಹವನ್ನು ಮೊದಲು ಗುರುತಿಸಿದಾಗಿನಿಂದ, ಅದರ ಮೂಲದ ಬಗ್ಗೆ ವಿವಿಧ ಸಿದ್ಧಾಂತಗಳನ್ನು ಸೂಚಿಸಲಾಗಿದೆ. ಪುರಾತನ ಪ್ರಭಾವದಿಂದ ಇದು ಭೂಮಿಯ ಚಂದ್ರನ ಒಂದು ಭಾಗವಾಗಿರಬಹುದು ಎಂದು NASA ಅಧಿಕಾರಿಗಳು ಊಹಿಸಿದ್ದಾರೆ.

ಆಗಸ್ಟ್ 7ರಂದು `ಪುಟಾಣಿ ಚಂದ್ರ’ನನ್ನು ನಾಸಾದ `ಅಟ್ಲಾಸ್’ ವ್ಯವಸ್ಥೆ ಪತ್ತೆಹಚ್ಚಿದ್ದು ಸೆಪ್ಟಂಬರ್ 29ರಿಂದ ನವೆಂಬರ್ 25ರವರೆಗೆ ಭೂಮಿಯನ್ನು ಸುತ್ತಲಿದೆ ಎಂದು ಮಾಹಿತಿ ನೀಡಿತ್ತು. ಇದನ್ನು ಬರಿಗಣ್ಣಿನಿಂದ ನೋಡಲು ಸಾಧ್ಯವಿಲ್ಲ. ಶಾಶ್ವತ ಚಂದ್ರನು ಭೂಮಿಯನ್ನು ಸ್ಥಿರವಾದ ರೀತಿಯಲ್ಲಿ ಸುತ್ತುತ್ತಿದ್ದರೆ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಪ್ರಭಾವಕ್ಕೆ ಸಿಲುಕಿರುವ ಪುಟಾಣಿ ಚಂದ್ರ ಕುದುರೆಲಾಳದ ಆಕಾರದಲ್ಲಿ ಭೂಮಿಯನ್ನು ಸುತ್ತುತ್ತಿತ್ತು. ಅಂದರೆ ಭೂಮಿಯನ್ನು ಪೂರ್ತಿಯಾಗಿ ಸುತ್ತದೆ, ಸೂರ್ಯನ ಗುರುತ್ವಾಕರ್ಷಣೆಯಿಂದ ಎಳೆಯಲ್ಪಟ್ಟು ಮೇಲ್ಮೈಗೆ ಸಮೀಪದಲ್ಲಿ ಹಾರಿಹೋಗುತ್ತಿತ್ತು.

ಸರ್ಕಾರ ಅನುದಾನ ಕೊಡ್ತಿದೆ, ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ: ಜಿ.ಪರಮೇಶ್ವರ್‌

0

ಬೆಂಗಳೂರು: ಸರ್ಕಾರ ಅನುದಾನ ಕೊಡ್ತಿದೆ, ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ, ತಪ್ಪಿಲ್ಲ, ನಾನೂ ಕೇಳ್ತೀನಿ. ಸರ್ಕಾರ ಅನುದಾನ ಕೊಡ್ತಿದೆ.

ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ. ಹಿಂದಿನ ಸರ್ಕಾರ ಸಾಕಷ್ಟು ಬಿಲ್ ಬಾಕಿ ಉಳಿಸಿಹೋಗಿದ್ರು. ಕೇಂದ್ರವೂ ಸರಿಯಾದ ಅನುದಾನ ಕೊಡ್ತಿಲ್ಲ. ಕೇಂದ್ರದ ಅನುದಾನ ತಂದು, ನಮ್ಮ ಸಪನ್ಮೂಲವೂ ಹೆಚ್ಚಿಸಿಕೊಳ್ತೇವೆ ಎಂದು ಭರವಸೆ ನೀಡಿದರು.

ಇನ್ನೂ ಇಂದಿರಾನಗರ ಕೊಲೆ ಪ್ರಕರಣದ ಕುರಿತು ಮಾಹಿತಿ ನೀಡಿದ ಸಚಿವರು, ತುಂಬಾ ಪರಿಚಯಸ್ಥನೇ ಈ ಕೊಲೆ ಮಾಡಿದ್ದಾನೆ. ಅವರಿಬ್ಬರೂ ಪ್ರೀತಿಸ್ತಿದ್ರು, ಹೊಟೇಲ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಆಕೆ ಕೇರಳದವರು, ಆತ ಅಸ್ಸಾಂ ಮೂಲ, ಈಥರ ಆದಾಗ ನಾವೂ ಗಮನಿಸ್ತಿರ್ತೀವಿ, ತನಿಖೆ ನಡೀತಿದೆ ಎಂದರು.

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!

0

ಗದಗ:- ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಸಿಕಟ್ಟಿ ಗ್ರಾಮದ ಬಳಿ ಜರುಗಿದೆ.

ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ. ಅಪಘಾತವಾದ ನಂತರ ಅಪರಿಚಿತ ವಾಹನದ ಜೊತೆಗೆ ಚಾಲಕ ನಾಪತ್ತೆ ಆಗಿದ್ದು, ನರಗುಂದ ಪೊಲೀಸರಿಂದ ಅಪರಿಚಿತ ವಾಹನದ ಶೋಧ ಕಾರ್ಯ ನಡೆದಿದೆ.

ಘಟನೆ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!