Home Blog Page 2054

ಜಿಎಂಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

0

ಬೆಂಗಳೂರಿನ ಎಪ್ಸಾನ್ ಕಂಪನಿಯವರು ಲಕ್ಮೇಶ್ವರ ತಾಲೂಕಿನ ಶಿಗ್ಲಿಯ ಜಿಎಂಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ 25 ಸಾವಿರ ರೂ ಮೌಲ್ಯದ ಸ್ಕೂಲ್ ಬ್ಯಾಗ್ ವಿತರಿಸಿದರು. ಈ ಸಂದರ್ಭದಲ್ಲಿ ಎನ್.ವಿ. ಕುಲಕರ್ಣಿ, ಆರ್.ಡಿ. ಕಾಲಾಯಗರ, ಎಸ್.ಬಿ. ಅಣ್ಣಿಗೇರಿ, ಆರ್.ಎಫ್. ಕಪ್ಪತ್ತನವರ, ಎಲ್. ತಿಪ್ಪನಾಯಕ್, ದೀಪಾ ಬಿ, ನೇತ್ರಾ ಬದಾಮಿ ಸೇರಿದಂತೆ ವಿದ್ಯಾರ್ಥಿಗಳಿದ್ದರು.

ಗಣಿತ ಕಲಿಕಾ ಆಂದೋಲನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸಿ: ಜಿ.ಪಂ ಸಿಇಓ ಭರತ್ ಎಸ್

0

ವಿಜಯಸಾಕ್ಷಿ ಸುದ್ದಿ, ಗದಗ: ಗಣಿತ ಕಲಿಕಾ ಆಂದೋಲನದ ಮೂಲಕ ಗ್ರಾಮ ಮಟ್ಟದ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಹೇಳಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಅಕ್ಷರ ಫೌಂಡೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲಕ್ಕುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಚಪ್ಪ ಎಸ್.ಪೂಜಾರ್ ಮಾತನಾಡಿ, ಗಣಿತ ಕಲಿಕಾ ಆಂದೋಲನ ಮತ್ತು ಗಣಿತ ಸ್ಪರ್ಧೆಗಳ ಬಗ್ಗೆ ಮುಂಚಿತವಾಗಿ ಸಮಯ ನಿಗದಿ ಮಾಡಬೇಕು. ಅಂದಾಗ ಸ್ವಯಂ ಸೇವಕರ ನಿಯೋಜನೆ ಸೇರಿದಂತೆ ಉಳಿದ ಕಾರ್ಯಗಳನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ. ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಶಾಲೆಗಳಲ್ಲಿ ಶಿಕ್ಷಕರು ಉತ್ತಮವಾಗಿ ಬೋಧಿಸುತ್ತಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಶೇಷ ಗಮನಹರಿಸಿ ಶಾಲೆಗಳಿಗೆ ಭೇಟಿ ನೀಡಿದಲ್ಲಿ ಶಾಲೆಗಳಲ್ಲಿ ಶಿಕ್ಷಕರು ಮನೋಬಲದಿಂದ ಬೋಧಿಸುತ್ತಾರೆ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಶಾಲೆಗಳಿಗೆ ಮೊದಲು ವಿದ್ಯಾರ್ಥಿಗಳು ದಾಖಲಾಗಬೇಕು. ದಾಖಲಾದ ಮಗು ನಿಯಮಿತವಾಗಿ ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು. ನಂತರ ಮಕ್ಕಳಿಗೆ ಗುಣಮಟ್ಟದ ಕಲಿಕೆಯಾಗಬೇಕು. ಗಣಿತ ಕಲಿಕಾ ಅಂದೋಲನವನ್ನು ಪ್ರತಿ ವರ್ಷ ಆಯೋಜಿಸಿ ಗಣಿತ ಸ್ಪರ್ಧೆ, ಕಾರ್ಯಾಗಾರ ಕೈಗೊಳ್ಳಲಾಗಿದೆ. ಗ್ರಾ.ಪಂ ಮಟ್ಟದ ಶಾಲೆಗಳಲ್ಲಿ ಅಕ್ಷರ ಫೌಂಡೇಶನ್ ನೀಡಿದ ಗಣಿತ ಕಿಟ್‌ಗಳನ್ನು ಬಳಸಿಕೊಂಡು ಮಕ್ಕಳಿಗೆ ಗಣಿತದ ಸಮಗ್ರ ಮಾಹಿತಿಯನ್ನು ಕಲಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ಉತ್ತಮ ಫಲಿತಾಂಶವನ್ನು ಪಡೆದ ೨೫ ಶಾಲೆಗಳು ಮತ್ತು ೨೫ ಗ್ರಾಮ ಪಂಚಾಯಿತಿಗಳನ್ನು ಅಭಿನಂದಿಸಿ, ಗಣಿತ ಸ್ಪರ್ಧೆಗಳ ಗದಗ ಜಿಲ್ಲೆಯ ವರದಿಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಅಭಿವೃದ್ಧಿ) ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಅಕ್ಷರ ಫೌಂಡೇಶನ್ ವಿಭಾಗೀಯ ವ್ಯವಸ್ಥಾಪಕರಾದ ಅಂಜಲೀನಾ ಗ್ರೇಗರಿ, ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಅಶ್ವಿನಿ ಕುರಡಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹೀರೆಮಠ, ಎ.ಎನ್. ನಾಗರಳ್ಳಿ, ಮಾರುತಿ ಮಲ್ಲಾಪುರ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಿಡಿಓಗಳು, ಶಾಲಾ ಶಿಕ್ಷಕರು ಹಾಜರಿದ್ದರು.

ಭಾರತದ ಸಂವಿಧಾನ ವಿಶ್ವಕ್ಕೇ ಮಾದರಿ ಸಂವಿಧಾನವಾಗಿದೆ: ಆರ್.ಎಂ. ಕಲ್ಲನಗೌಡರ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಡಾ. ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವು ವಿಶ್ವಕ್ಕೇ ಮಾದರಿ ಸಂವಿಧಾನವಾಗಿದೆ ಎಂದು ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ಹೇಳಿದರು.

ಅವರು ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪಿಠಿಕೆ ಪ್ರತಿಜ್ಞಾವಿದಿ ಭೋದಿಸಿ ಮಾತನಾಡಿ, ಈ ದಿನ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದ್ದು, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲವಾಗಿದೆ ಎಂದರು.

ಅನುಪಮಾ, ಕೆ.ಎಂ. ಶಿರೂರ, ಎನ್.ಕೆ. ಕಡೆಮನಿ, ಶಿಂದೂರ, ವಿಠಲ ಪವಾರ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಅವಿರೋಧ ಆಯ್ಕೆಯಾದ ಶೋಭಾ ಬಸವರಾಜ ಮೆಣಸಿನಕಾಯಿ

0

ಲಕ್ಮೇಶ್ವರ ಪಟ್ಟಣದ ಪುರಸಭೆಯ ವಾರ್ಡ್ ನಂ.13ರ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಶೋಭಾ ಬಸವರಾಜ ಮೆಣಸಿನಕಾಯಿ ಅವರಿಗೆ ತಹಸೀಲ್ದಾರರು ಸದಸ್ಯತ್ವ ಪ್ರಮಾಣಪತ್ರ ನೀಡಿದರು. ಚುನಾವಣಾಧಿಕಾರಿ ಚಂದ್ರಶೇಖರ ನರಸಮ್ಮನವರ, ಪುರಸಭೆ ಸದಸ್ಯರಾದ ಅಶ್ವಿನಿ ಅಂಕಲಕೋಟಿ, ವಾಣಿ ಹತ್ತಿ, ಮಂಜುಳಾ ಗುಂಜಳ, ವಿಜಯ ಹತ್ತಿಕಾಳ, ಸಿದ್ದನಗೌಡ ಬಳ್ಳೊಳ್ಳಿ, ನವೀನ ಬೆಳ್ಳಟ್ಟಿ, ಭರಮಪ್ಪ ಕೊಡ್ಲಿ, ಬಂಗಾರೆಪ್ಪ ಮುಳಗುಂದ ಮುಂತಾದವರಿದ್ದರು.

ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ರಾಷ್ಟ್ರವಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು. 

ಸಂವಿಧಾನ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ  ಸಲ್ಲಿಸಿ ಮಾತನಾಡಿದರು.

ದೇಶದ ಸಂವಿಧಾನದ ಪೀಠಿಕೆಯಲ್ಲಿ ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆ, ಶಕ್ತಿ ಹಾಗೂ ಅದರ ಶ್ರೇಷ್ಠ ಗುಣಗಳು ಅಡಗಿವೆ. ಸರ್ವಧರ್ಮಗಳಿಗೂ ಸಮಭಾವ ಎಂಬ ಸದಾಶಯ ಸಂವಿದಾನದ ಮುಖ್ಯ ಧ್ಯೇಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ -ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟçದ ಏಕತೆಯನ್ನು ಮತ್ತು ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವ ಸಂಕಲ್ಪ ಮಾಡುವ ಕುರಿತು ಸಂವಿಧಾನದ ಪೀಠಿಕೆಯನ್ನು ಓದಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದವರು, ಗಣ್ಯರು, ಸಾರ್ವಜನಿಕರು ಹಾಜರಿದ್ದರು

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳನ್ನು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಿ: ಭರತ್ ಎಸ್

0

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕ ಹಾಗೂ ಎಲ್ಲ ಅಂಶಗಳನ್ನು ನಮೂದಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಸೂಚನೆ ನೀಡಿದರು.

ತಾಲೂಕಿನ ಅಡರಕಟ್ಟಿ ಮತ್ತು ಹುಲ್ಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯ ಉದ್ಯೋಗ ಖಾತ್ರಿ ಯೋಜನೆಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಅವರು ಮಾತನಾಡಿದರು.

ಉದ್ಯೋಗ ಖಾತ್ರಿ ನಾಮಫಲಕದಲ್ಲಿ ಕಡ್ಡಾಯವಾಗಿ ಆಯುಕ್ತಾಲಯದ ಏಕೀಕೃತ ಉಚಿತ ಸಹಾಯವಾಣಿ ಸಂಖ್ಯೆ (8277506000) ದಾಖಲಿಸುವಂತೆ ಸೂಚನೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ, ನರೇಗಾ ಯೋಜನೆಯಡಿ ಕೈಗೊಂಡ ಸಿಸಿ ರಸ್ತೆ ಕಾಮಗಾರಿ, ಸಿಸಿ ಗಟಾರ, ಸಿಡಿ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.

ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳ ಮೇಲೆ ನಿಗಾವಹಿಸಿ ಗುಣಮಟ್ಟದ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕಾ ನರೇಗಾ ಸಿಬ್ಬಂದಿಗಳಿದ್ದರು.

ಅನ್ಯ ಧರ್ಮಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ದಾಖಲಾಯ್ತು FIR!

0

ತುಮಕೂರು:- ಅನ್ಯ ಧರ್ಮಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ BJP ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ FIR ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು, ಸಾಮಾಜಿಕ ಜಾಲತಾಣದಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದೂರು ಕೊಡಲಾಗಿದೆ.

ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ.

ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿದೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಹರಾಜಿನಲ್ಲಿ ಮುಂಬೈ ಜೊತೆ ಒಳ ಒಪ್ಪಂದ ಮಾಡಿಕೊಂಡಿತಾ RCB!? ಫ್ಯಾನ್ಸ್ ಆರೋಪಕ್ಕೆ ಇಲ್ಲಿದೆ ಸ್ಟ್ರಾಂಗ್ ರೀಸನ್!

0

ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆದ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಆರ್​ಸಿಬಿ, ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದೆ. ತಂಡಕ್ಕೆ ಯಾವ್ಯಾವ ಆಟಗಾರರು ಬರಬೇಕೆಂದು ಅಭಿಮಾನಿಗಳು ಬಯಸಿದ್ದರೋ, ಆ ಯಾವ ಆಟಗಾರರನ್ನು ಆರ್​​ಸಿಬಿ ಖರೀದಿಸಿಲ್ಲ.

ಈ ಮೂಲಕ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಒಳ ಒಪ್ಪಂದ ಆಗಿತ್ತಾ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ಪ್ರಾಂಚೈಸಿ ನಿರ್ಧಾರಕ್ಕೆ RCB ಅಭಿಮಾನಿಗಳು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ ಸೀಸನ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಸ್ಟಾರ್​ ಆಲ್​ರೌಂಡರ್​ ವಿಲ್​ ಜಾಕ್ಸ್​ ಮಿಂಚಿದ್ರು. ಆರ್​​ಸಿಬಿ ತಂಡ ಪ್ಲೇ ಆಫ್​​ಗೆ ಹೋಗಲು ತಂಡದಲ್ಲಿ ಪ್ರಮುಖ ಪಾತ್ರವಹಿಸಿದ್ರು.

ಮೆಗಾ ಹರಾಜಿಗೆ ಮುನ್ನ ಆರ್​ಸಿಬಿ ಇವರನ್ನು ತಂಡದಿಂದ ರಿಲೀಸ್​ ಮಾಡಿತ್ತು. ಮೆಗಾ ಹರಾಜಿನಲ್ಲಿ ಆರ್​ಟಿಎಂ ಕಾರ್ಡ್​ ಬಳಸಬಹುದು ಎಂದು ಹೇಳಲಾಗಿತ್ತು. ಆದರೆ, ಆರ್​​ಸಿಬಿ ಫ್ಯಾನ್ಸ್​ ಕನಸಿಗೆ ತಣ್ಣೀರೆರಚಿದ ಫ್ರಾಂಚೈಸಿ ಮುಂಬೈ ಇಂಡಿಯನ್ಸ್​ಗೆ ವಿಲ್​ ಜಾಕ್ಸ್​ ಅವರನ್ನು ಆರ್​ಟಿಎಂ ಕಾರ್ಡ್​ ಬಳಸದೆ ಬಿಟ್ಟುಕೊಟ್ಟಿದೆ.

ಇನ್ನು ವಿಲ್‌ ಜ್ಯಾಕ್ಸ್‌ ಖರೀದಿ ಮಾಡುತ್ತಿದ್ದಂತೆ ಮುಂಬೈ ಇಂಡಿಯನ್ಸ್‌ ಮಾಲೀಕ ಆಕಾಶ್ ಅಂಬಾನಿ ಎದ್ದು ಹೋಗಿ ಆರ್‌ಸಿಬಿ ತಂಡದ ಅಧ್ಯಕ್ಷ ಪ್ರಥಮೇಶ್‌ ಮಿಶ್ರಾರ ಕೈ ಕುಲುಕಿ ಧನ್ಯವಾದ ಹೇಳಿದ್ರು. ಇದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ. ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ಮಾಲಿಕರ ನಡುವೆ ಒಳ ಒಪ್ಪಂದ ಆಗಿದೆಯೇ ಎನ್ನುವ ಅನುಮಾನ ಮೂಡಿದೆ.

ಟೋಲ್ ಸಂಗ್ರಹಣೆ ರದ್ದುಗೊಳಿಸಲು ಶಾಸಕ ಜಿ.ಎಸ್. ಪಾಟೀಲರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ-ಮುಂಡರಗಿ ತಾಲೂಕುಗಳ ಮಾರ್ಗಮಧ್ಯೆ ಕೇವಲ 60 ಕಿ.ಮೀ. ಅಂತರದಲ್ಲಿ ಪಾಪನಾಶಿ ಟೋಲ್, ಕೊರ್ಲಹಳ್ಳಿ ಟೋಲ್ ಸಂಗ್ರಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಈ ಟೋಲ್ ಸಂಗ್ರಹಣೆಯಿಂದ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ. ಈ ಟೋಲ್ ಸಂಗ್ರಹಣೆಯನ್ನು ಸ್ಥಗಿತಗೊಳಿಸಬೇಕು ಎಂದು ಸ್ಥಳೀಯ ವಾಹನ ಮಾಲೀಕರ ಮತ್ತು ಚಾಲಕರ ಪರವಾಗಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಲಾರಿ ಚಾಲಕರ ಮಾಲೀಕರ ಸಂಘ ಹೊಸ ಡಂಬಳ ವತಿಯಿಂದ ಶಾಸಕ ಜಿ.ಎಸ್. ಪಾಟೀಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಟೋಲ್ ಸಂಗ್ರಹಣೆ ಲಾರಿ ಮಾಲೀಕರಿಗೆ, ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಈಗಾಗಲೇ ವಾಹನ ಮಾಲೀಕರು ರಾಜ್ಯ ಸರ್ಕಾರಕ್ಕೆ ಸಾಕಷ್ಟು ತೆರಿಗೆಗಳನ್ನು ನೀಡುತ್ತಿದ್ದಾರೆ. ವಾಹನಗಳ ಖರ್ಚುಗಳನ್ನು ನಿಭಾಯಿಸುವುದೇ ಕಷ್ಟಕರವಾಗಿದೆ. ಈ ಎರಡು ಟೋಲ್ ಸಂಗ್ರಹಣೆಯಿಂದ ಬಸ್ ದರಗಳಲ್ಲಿ ಹೆಚ್ಚಿಗೆ ಮಾಡಲಾಗಿದ್ದು ಇದು ಸಹ ಸಾರ್ವಜನಿಕರಿಗೆ ಹೊರೆಯಾಗಿದೆ. ಪಾಪನಾಶಿ ಮತ್ತು ಕೊರ್ಲಹಳ್ಳಿ ಟೋಲ್ ಸಂಗ್ರಹಣೆ ಮಾಡುವುದನ್ನು ತಕ್ಷಣ ರದ್ದುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ವಿನಂತಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಚ್.ಡಿ. ದೊಡ್ಡಮನಿ, ಹುಚ್ಚುಸಾಬ ಅಮರಾವತಿ ಸೇರಿದಂತೆ ಸ್ಥಳೀಯ ಲಾರಿ ಮಾಲಕರು ಮತ್ತು ಚಾಲಕರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕನಕದಾಸರ ತತ್ವಾದರ್ಶಗಳನ್ನು ಮಕ್ಕಳಿಗೆ ತಿಳಿಸಿ: ಪೂಜ್ಯಶ್ರೀ ಮಾಳಿಂಗರಾಯ ಮಹಾರಾಯರು

0

ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬಕ್ಕಾಗಿ ಬದುಕಿದವರನ್ನು ಮರೆಯುತ್ತಾರೆ. ಸಮಾಜಕ್ಕಾಗಿ ಬದುಕಿದವರನ್ನು ಎಲ್ಲರೂ ಸ್ಮರಿಸುತ್ತಾರೆ ಎಂದು ಹುಲಿಜಂತಿಯ ಪೂಜ್ಯಶ್ರೀ ಮಾಳಿಂಗರಾಯ ಮಹಾರಾಯರು ಹೇಳಿದರು.

ಅವರು ನಗರದ ಕನಕಭವನದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಸಮಾಜದ ಸಹಯೋಗದಲ್ಲಿ ಮಂಗಳವಾರ ನಡೆದ ದಾಸಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ, ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರದ ಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.

ಕನಕದಾಸರ ಹೆಸರಿನಲ್ಲಿ ಜಯಂತಿ ಆಚರಿಸಿದರೆ ಸಾಲದು, ಅವರ ತತ್ವಾದರ್ಶ ಹಾಗೂ ಸಂಸ್ಕಾರವನ್ನು ಮಕ್ಕಳಿಗೆ ತಿಳಿಸಿಕೊಡಬೇಕಾಗಿದೆ. ಹಾಲುಮತ ಸಮಾಜ ಕಲ್ಮಶವಿಲ್ಲದ ಶುದ್ಧ ಹಾಲಿನಂತಹ ಸಮಾಜವಾಗಿದೆ. ಆದರೆ, ಇಲ್ಲಿ ಹೆಪ್ಪು ಹಾಕುವದಕ್ಕಿಂತ ಉಪ್ಪು ಹಾಕುವವರೇ ಹೆಚ್ಚಾಗಿದ್ದು, ಅಂತವರಿಂದ ಎಚ್ಚರವಹಿಸಿ ಸಮಾಜವನ್ನು ಸಂಘಟಿಸಬೇಕು ಎಂದು ಹೇಳಿದರು.

ಧಾರವಾಡ ಮನಸೂರ ಶ್ರೀಮಠದ ಪೂಜ್ಯಶ್ರೀ ಬಸವರಾಜ ದೇವರು ಮಾತನಾಡಿ, ಕನಕದಾಸರು ಮನಸ್ಸು ಮಾಡಿದ್ದರೆ ವಿಜಯನಗರ ಸಾಮ್ರಾಜ್ಯದಲ್ಲಿ ಅಧಿಪತಿಯಾಗುತ್ತಿದ್ದರು. ಆದರೆ, ಅಲ್ಲಿನ ಜಾತೀಯತೆಯಿಂದ ಅವರಿಗೆ ಯೋಗ ಸಿಗಲಿಲ್ಲ. ನಂತರ ಹಕ್ಕ-ಬುಕ್ಕರು ಹಾಲುಮತ ಸಮಾಜದವರಿಗೆ ಸ್ಥಾನಮಾನ ಒದಗಿಸಿಕೊಟ್ಟರು. ಅದ್ದರಿಂದ ನಮ್ಮ ಹಕ್ಕುಗಳಿಗಾಗಿ ಜಾತಿವಾದಿಗಳಿಗೆ ಒಗ್ಗಟ್ಟಿನ ಮೂಲಕ ನಮ್ಮ ಶಕ್ತಿ ತೋರಿಸಬೇಕಾಗಿದೆ ಎಂದು ಹೇಳಿದರು.

ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ೧೯೮೩ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅಂದು ಸಚಿವರಾಗಿದ್ದ ಸಿದ್ದರಾಮಯ್ಯ ಅವರು ಕನಕದಾಸರ ಜಯಂತಿ ಆಚರಣೆಗೆ ಚಾಲನೆ ನೀಡಿದರು. ಅಂದಿನಿAದ ಇಂದಿನವರೆಗೆ ಕನಕದಾಸರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಗದುಗಿನ ಕನಕಭವನ ಸಮಾಜದ ಆಸ್ತಿಯಾಗಿದೆ. ಇಂದಿನ ಯುವಕರು ಸಮಾಜವನ್ನು ಸಂಘಟಿಸಿ ಇನ್ನಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ  ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ರವಿ ದಂಡಿನ, ಡಾ. ಗೋವಿಂದಪ್ಪನವರ, ಬೆಟಗೇರಿ ಪಿಎಸ್‌ಐ ಲಕ್ಷ್ಮಣ ಅರಿ, ಪ್ರಕಾಶ ಕರಿ, ಶರಣಪ್ಪ ದೊಣ್ಣೆಗುಡ್ಡ ಮುಂತಾದವರು ಮಾತನಾಡಿದರು. ಪ್ರೊ. ಕರಿಯಪ್ಪ ಕೊಡವಳ್ಳಿ ಕನಕದಾಸರ ಜೀವನ ಕುರಿತು ಉಪನ್ಯಾಸ ನೀಡಿದರು.

ವೇದಿಕೆ ಮೇಲೆ ಬಿ.ಎಫ್. ದಂಡಿನ, ಡಾ. ಜಿ.ಬಿ. ಬಿಡಿನಹಾಳ, ಶಂಕುAತಲಾ ದಂಡಿನ, ಸುರೇಖಾ ಕುರಿ, ನಾಗಪ್ಪ ಗುಗ್ಗರಿ, ನಾಗರಾಜ ಮೆಣಸಗಿ, ರಾಮಕೃಷ್ಣ ರೊಳ್ಳಿ, ಎಸ್.ಕೆ. ಪಾಟೀಲ, ರಾಜು ಕಲ್ಲೂರ, ರಾಮಣ್ಣ ಹೂವಣ್ಣವರ, ಪ್ರಲ್ಹಾದ ಹೊಸಳ್ಳಿ, ಚನ್ನಮ್ಮ ಹುಳಕಣ್ಣವರ, ಉಮಾ ದ್ಯಾವನೂರ, ನೇತ್ರಾವತಿ ಗುಂಡಿಕೇರಿ, ಮಂಜುನಾಥ ಜಡಿ, ಹೇಮಂತ ಎಸ್.ಜಿ., ಕುಮಾರ ಮಾರನಬಸರಿ, ಬಸವರಾಜ ಕುರಿ, ರವಿ ವಗ್ಗನವರ,  ಶೇಖಣ್ಣ ಕಾಳೆ, ಮಂಜುನಾಥ ಮುಂಡವಾಡ, ರವಿ ಜೋಗಿನ, ಶಿವಣ್ಣ ಶಿಂಗಟಾಲಕೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ರೇಖಾ ಜಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಮಾರುತಿ ಮಡ್ಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

error: Content is protected !!