Home Blog Page 2060

ಮೂರು ಸೋಲು: ಮಗ ನಿಖಿಲ್ ಬಗ್ಗೆ ಅನಿತಾ ಕುಮಾರಸ್ವಾಮಿ ಭಾವನಾತ್ಮಕ ಪೋಸ್ಟ್!

0

ಬೆಂಗಳೂರು:- ಇತ್ತೀಚೆಗೆ ನಡೆದ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹೀನಾಯ ಸೋಲು ಕಂಡಿದ್ದು, ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಸಹಜವಾಗಿ ಬೇಸರ ಮೂಡಿಸಿದೆ.

ಅಷ್ಟೇ ಅಲ್ಲದೇ ನಿಖಿಲ್ ಗೆ ರಾಜಕೀಯದಲ್ಲಿ ಏಳಿಗೆ ಸಿಗುತ್ತನೇ ಇಲ್ಲವಲ್ಲ ಎಂಬ ನೋವು ಸಹಜವಾಗಿ ಅವರ ಕುಟುಂಬದವರಲ್ಲಿ ಕಾಡಿದೆ. ಇದೀಗ ನಿಖಿಲ್ ಹ್ಯಾಟ್ರಿಕ್​ ಸೋಲಿನ ಬಗ್ಗೆ ಅನಿತಾ ಕುಮಾರಸ್ವಾಮಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್​ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ ಎಂದು ಬರೆದುಕೊಂಡಿದ್ದಾರೆ.

ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ. ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ ಎಂದಿದ್ದಾರೆ.

ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು. ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು ಎಂದು ಭಾವನೆಗಳನ್ನು ಹಂಚಿಕೊಂಡಿದ್ದಾರೆ.

Accident: ಕಾರು ಡಿಕ್ಕಿಯಾಗಿ ಎರಡು ವರ್ಷದ ಮಗು ದುರ್ಮರಣ!

0

ಆನೇಕಲ್:- ಕಾರು ಡಿಕ್ಕಿಯಾಗಿ ಎರಡು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ರಸ್ತೆಯ ಶನೇಶ್ವರ ದೇವಸ್ಥಾನ ಮುಂಭಾಗದಲ್ಲಿ ಜರುಗಿದೆ.

ಮಗು ಸಾವಿಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೇವಾಲಯದ ಮುಂಭಾಗದಲ್ಲೇ ಈ ದುರ್ಘಟನೆ ಸಂಭವಿಸಿದೆ. ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ವೇಳೆ ಮಗು ಸಾವನ್ನಪ್ಪಿದೆ.

ಮಾದಪಟ್ಟಣದ ನಿವಾಸಿ 2 ವರ್ಷದ ಏಕಾಶ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನೇಶ್ವರ ದೇವಸ್ಥಾನದ ಬಳಿ ಕಡ್ಲೆಕಾಯಿ ಜಾತ್ರೆ ನಡೆಯುತ್ತಿತ್ತು. ದೇವರ ದರ್ಶನ ಮುಗಿಸಿಕೊಂಡು ತಾಯಿ-ಮಗು ದೇವಸ್ಥಾನದಿಂದ ಹೊರ ಬಂದಿದ್ದರು.

ಕಾರಿನ ಟೈಯರ್ ಮಗು ಮೇಲೆ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಗುವಿನ ಮೃತ ದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರಿನಲ್ಲಿ ಮಿತಿ ಮೀರಿದ್ಯಾ ಪುಂಡರ ಹಾವಳಿ: ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

0

ತುಮಕೂರು:– ನಗರದ ಬನಶಂಕರಿ ಬಳಿ ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜರುಗಿದೆ.

ಹಲ್ಲೆಗೊಳಗಾದ ಯುವಕನನ್ನು ಕುಶಾಲ್ ಎಂದು ಗುರುತಿಸಲಾಗಿದೆ. ಕುಶಾಲ್ ಬನಶಂಕರಿ 2 ನೇ ಹಂತದ ಮರಳೂರು ದಿಣ್ಣೆ ಬಳಿ ನಿವಾಸಿಯಾಗಿದ್ದಾನೆ. ಬನಶಂಕರಿ ಬಳಿಯಿರುವ ಬಾಬಾ ಕೆಫೆ ಬಳಿ ಟೀ ಕುಡಿಯಲು ಹೋಗಿದ್ದ ವೇಳೆ ಕುಶಾಲ್ ಮೇಲೆ ಸುಮಾರು 15 ಯುವಕರಿದ್ದ ತಂಡ ಏಕಾಏಕಿ ಹಲ್ಲೆ ನಡೆಸಿದೆ. ನವೆಂಬರ್ 21ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೆ ಒಳಗಾದ ಕುಶಾಲ್ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ನಾನು ಟೀ ಕುಡಿಯುತ್ತಿದ್ದ ವೇಳೆ 15 ಜನರು ಹಲ್ಲೆ ಮಾಡಿದ್ದಾರೆ. ಏಕಾಏಕಿ ಬಂದು ಗುರಾಯಿಸುತ್ತೀಯಾ ಎಂದು 15 ಜನರ ಯುವಕರು ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿದ ಅಡ್ಡಪಲ್ಲಕ್ಕಿ ಮಹೋತ್ಸವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಹಿರೇಮಠದಲ್ಲಿ ಸೋಮವಾರ ನಡೆದ ಜಾತ್ರಾ ಮಹೋತ್ಸವ, ಗುರು ಪರಂಪರೆ ಸ್ಮರಣೋತ್ಸವ ಹಾಗೂ 9 ದಿನಗಳಿಂದ ನಡೆದ ಹಾನಗಲ್ ಗುರು ಕುಮಾರ ಶಿವಯೋಗಿಗಳ ಪ್ರವಚನದ ಅಂಗವಾಗಿ ಶಿವಯೋಗಿ ಶಿವಾಚಾರ್ಯ ವಿರಚಿತ ಸಿದ್ಧಾಂತ ಶಿಖಾಮಣಿ ಗ್ರಂಥ, ವಚನಾಮೃತ ಗ್ರಂಥ ಹಾಗೂ ಹಿಂದಿನ ಗುರುಗಳ ಭಾವಚಿತ್ರದ ಅಡ್ಡಪಲ್ಲಕ್ಕಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.

ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅಡ್ಡಪಲಕ್ಕಿಯು ಹಿರೇಮಠದಿಂದ ಪ್ರಾರಂಭವಾಗಿ ಗಣೇಶ ಗುಡಿ, ನಾಗರಕೆರೆ, ಮಾರಿಕಾಂಬಾ ದೇವಸ್ಥಾನ, ಹಳೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣದ ಮೂಲಕ ಮರಳಿ ಹಿರೇಮಠದ ಆವರಣಕ್ಕೆ ಬಂದಿತು.

ಪಲ್ಲಕ್ಕಿ ಮುಂದೆ ಮಹಿಳೆಯರು ಕುಂಭವನ್ನು ಹೊತ್ತು ಸಾಗಿದರು. ಚಂಡೆ-ಮದ್ದಳೆ, ಕರಡಿ ಮಜಲು, ಡೊಳ್ಳು ಕುಣಿತ ಉತ್ಸವಕ್ಕೆ ಇನ್ನಷ್ಟು ಮೆರಗು ನೀಡಿದ್ದವು. ಸಾರೋಟಿನಲ್ಲಿ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ವಿರಾಜಮಾನರಾಗಿದ್ದರು. ನಂತರ ನೆರೆದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.

ನರೇಗಲ್ಲ ಸೇರಿದಂತೆ ದ್ಯಾಂಪೂರ, ಮಲ್ಲಾಪೂರ, ತೋಟಗಂಟಿ, ಕೋಚಲಾಪೂರ, ಕೋಡಿಕೊಪ್ಪ, ಜಕ್ಕಲಿ, ಮಾರನಬಸರಿ, ಬೂದಿಹಾಳ, ನಿಡಗುಂದಿ, ನಿ.ಕೊಪ್ಪ, ಕೋಟುಮಚಗಿ ಹಾಗೂ ಅಬ್ಬಿಗೇರಿ ಗ್ರಾಮದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ನೂತನವಾಗಿ ನಿರ್ಮಾಣಗೊಂಡ ಸದ್ಧರ್ಮ ಧಾಮ ಉದ್ಘಾಟನೆ

0

ನರೇಗಲ್ಲ ಹಿರೇಮಠದಲ್ಲಿ ನೂತನವಾಗಿ ನಿರ್ಮಾಣಗೊಂಡ ಸದ್ಧರ್ಮ ಧಾಮ ಉದ್ಘಾಟನೆಯ ನಿಮಿತ್ತ ಹೋಮ-ಹವನಗಳು ಜರುಗಿದವು. ಹೋಮ ಹಾಗೂ ಗೋ ಪೂಜೆಯನ್ನು ಮಂಜುನಾಥ ಎಸ್.ಅಣಗೌಡ್ರ ದಂಪತಿಗಳು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ಉಪಸ್ಥಿತರಿದ್ದು, ಹೋಮ ಕಾರ್ಯಗಳನ್ನು ನೆರವೇರಿಸಿದರು.

ಶೂಟಿಂಗ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ಬಡ್ನಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನ.21 ಹಾಗೂ 22ರಂದು ಜರುಗಿದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಇಲ್ಲಿನ ಸನ್ಮಾರ್ಗ ಕಾಲೇಜಿನ ಮನ್ವಿತಾ ಬಡ್ನಿ ಹಾಗೂ ಅಮೃತಾ ಕಬಾಡಿ ಆಯ್ಕೆಯಾಗಿದ್ದಲ್ಲದೇ, ಮನ್ವಿತಾ ಬಡ್ನಿ ಏರ್ ರೈಫಲ್ ಪಿಪ್ ಸೈಟ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದದವರು ಶುಭ ಹಾರೈಸಿದ್ದಾರೆ.

ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮನೋರಮಾ ಕಾಲೇಜಿನ ವಿದ್ಯಾರ್ಥಿನಿ

0

ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಅಂತರ ಮಹಾವಿದ್ಯಾಲಯ ಪುರುಷ ಹಾಗೂ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಸ್ಥಳೀಯ ಮನೋರಮಾ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕಾ ಕರಿಗಾರ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಸಾಧನೆಗೈದ ವಿದ್ಯಾರ್ಥಿನಿಗೆ ಹಾಗೂ ಕಾಲೇಜಿನ ದೈಹಿಕ ನಿರ್ದೇಶಕ ಖಯೂಮ ನವಲೂರ ಅವರಿಗೆ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ,  ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಕಾಲೇಜಿನ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಭಾರತ ಸಂವಿಧಾನವು ಜಗತ್ತಿನ ಅತಿ ದೊಡ್ಡ ಹಾಗೂ ಲಿಖಿತ ಸಂವಿಧಾನ

ಭಾರತದ ಸಂವಿಧಾನವು ಒಂದು ಕನಸು, ದೂರದೃಷ್ಟಿ, ದೇಶದ ಜನತೆಗೆ ನೀಡಿದ ಭರವಸೆಗಳ ಗುಚ್ಛವಾಗಿದೆ. ಸಂವಿಧಾನವು ಯಾವುದೇ ಸಂಸ್ಥೆಯನ್ನು ಅಥವಾ ರಾಜಕೀಯ ಸಂಘಟನೆಯನ್ನು ಆಡಳಿತ ಮಾಡಲು ಬೇಕಾಗುವ ಆಯಕಟ್ಟು, ವಿಧಾನಗಳು ಮತ್ತು ಕಾನೂನುಗಳನ್ನು ನಿರೂಪಿಸುವ ವ್ಯವಸ್ಥೆ. ಸಾಮಾನ್ಯವಾಗಿ ಇದು ಲಿಖಿತ ರೂಪದಲ್ಲಿ ಇರುತ್ತದೆ. ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಹಾಗೂ ಲಿಖಿತ ಸಂವಿಧಾನ ಎಂದು ಹೇಳಲಾಗುತ್ತದೆ.

ಒಂದು ದೇಶವು ಅನುಸರಿಸುವ ಮೂಲ ನಿಯಮಗಳ ಒಂದು ಗುಂಪನ್ನು ಸಂವಿಧಾನ ಎಂದು ಕರೆಯಲಾಗುತ್ತದೆ. ಪ್ರತಿಯೊಂದು ರಾಷ್ಟ್ರದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯು ಕೆಲವೊಂದು ನಿಯಮ-ನಿಬಂಧನೆಗಳಿಗೆ ಅನುಗುಣವಾಗಿ ನಡೆಯಬೇಕು. ಇಂತಹ ನಿಯಮಗಳ ಸಮೂಹವೇ ಸಂವಿಧಾನ.

ಭಾರತೀಯ ಸಂವಿಧಾನದ ಇತಿಹಾಸ ಒಂದು ದೇಶದೊಡನೆ, ದೇಶದ ಜನರೊಡನೆ ಬೆಳೆದ ಸಂಕೀರ್ಣ ರಾಜಕೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಯಶಸ್ವಿಯಾಗಿ ಭಟ್ಟಿ ಇಳಿಸಿದ ಸಾಧನೆಯ ಕಥೆಯ ಹೂರಣ. ಭಾರತದ ಸಂವಿಧಾನವು ಡಿಸೆಂಬರ್ 9, 1947ರಿಂದ ನವೆಂಬರ್ 26, 1949ರ ನಡುವೆ ರಚನೆಗೊಂಡಿತು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಲ್ಪಟ್ಟ ಭಾರತದ ಸಂವಿಧಾನವು ಜನವರಿ 26, 1950ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಅಂತೆಯೇ, ನವೆಂಬರ್ 26ನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ.

ನಾಡಿನ ಮೂಲಭೂತ ನಿಯಮವಾಗಿ ಮಾಡಿದ ಹೆಮ್ಮೆಯ ಚರಿತ್ರೆ ಹೊಂದಿರುವ, ಭಾರತೀಯರಿಂದಲೇ ಭಾರತೀಯರಿಗಾಗಿ ನಿರ್ಮಿಸಿದ ಐತಿಹಾಸಿಕ ದಾಖಲೆ ನಮ್ಮ ಭಾರತದ ಸಂವಿಧಾನ. ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳಾ ಸದಸ್ಯರಿದ್ದರು. ಅದರ ಕರಡನ್ನು ೧೯೪೯ರ ನವೆಂಬರ್ ತಿಂಗಳಿನಲ್ಲಿ ಸಲ್ಲಿಸಲಾಯಿತು. ಸಲ್ಲಿಸಿದ ಬಳಿಕವೂ ಸುಮಾರು 2 ವರ್ಷ 11 ತಿಂಗಳು 17 ದಿನಗಳ ಕಾಲ ನೂರಾರು ತಜ್ಞರು ಶ್ರಮವಹಿಸಿದ ಫಲವಾಗಿ ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನ ಸಿದ್ಧವಾಗಿತ್ತು.

ಸಂವಿಧಾನ ಪೂರ್ಣಗೊಂಡ ದಿನವೇ 1949ರ ನವೆಂಬರ್ 26. ಇದಕ್ಕೆ 1930ರಲ್ಲಿ ಅಂದಿನ ಕಾಂಗ್ರೆಸ್‌ನ ಲಾಹೋರ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ಯಕ್ಕೆ ಪಣ ತೊಡಲಾಯಿತು. ಆ ಐತಿಹಾಸಿಕ ದಿನ ಕೂಡ ನವೆಂಬರ 26ಆಗಿದೆ. ಇಡೀ ದೇಶಕ್ಕೆ ಅನ್ವಯವಾಗುವ ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ಅರ್ಥವೂ ಬಂದಿತ್ತು. ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು. ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

ಅಕ್ಟೋಬರ್ 12, 2015ರಂದು ಮುಂಬೈನಲ್ಲಿ ಅಂಬೇಡ್ಕರ್ ಸ್ಮಾರಕಕ್ಕೆ ಶಂಕುಸ್ಥಾಪನನೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು, ನವೆಂಬರ್ 26ನ್ನು ದೇಶದ ಸಂವಿಧಾನ ದಿನವಾಗಿ ಆಚರಿಸುವಂತೆ ಮೊದಲ ಬಾರಿಗೆ ಘೋಷಿಸಿದ್ದರು. ಸಂವಿಧಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವುದು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅಂದಿನಿಂದ ಪ್ರತಿ ವರ್ಷವೂ ನ.26ರಂದು ದೇಶದ ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಅರಿವು ನೀಡಲಾಗುತ್ತಿದೆ.

ಒಟ್ಟಾರೆಯಾಗಿ ಭಾರತದ ಸಂವಿಧಾನ ರಾಷ್ಟçದ ಐಕ್ಯತೆಯ ಹೆಗ್ಗುರುತು. ಇಂದು ಭಾರತದ ಸಂವಿಧಾನ ದಿನ. ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಒಂದು ಮಾದರಿಯಾಗಿದೆ. ರಾಷ್ಟ್ರದ ಎಲ್ಲ ಆಗುಹೋಗುಗಳೂ ಸಂವಿಧಾನವನ್ನು ಅನುಸರಿಸಿ ನಡೆಯುತ್ತವೆ. ಸಂವಿಧಾನವೇ ಭಾರತದ ಮೂಲಭೂತ ಹಾಗೂ ಪರಮೋಚ್ಚ ಕಾಯಿದೆಯೆಂದು ಭಾರತೀಯರು ಒಪ್ಪುತ್ತಾರೆ. ಸಂವಿಧಾನದ ಪಿತಾಮಹರೆನ್ನಿಸಿಕೊಳ್ಳುವ ಅಂಬೇಡ್ಕರರ ನುಡಿಗಳನ್ನು ಇಲ್ಲಿ ಸ್ಮರಿಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ.

ಹೀಗೆ ಸಂವಿಧಾನದ ಕುರಿತು ಹತ್ತು ಹಲವು ಕಾರ್ಯಕ್ರಮಗಳನ್ನು/ಯೋಜನೆಗಳನ್ನು ಹಾಕಿಕೊಂಡಾಗ ಮಾತ್ರ ನವೆಂಬರ್ 26ರ ಸಂವಿಧಾನ ದಿನಾಚರಣೆಗೆ ಮಹತ್ವ. ಸಂವಿಧಾನದ ಆಶಯಗಳಿಗೆ ಶೋಭೆ ತರುವ ಮೂಲಕ ನಾವು-ನೀವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳೋಣ. ಸುಭದ್ರವಾದ, ಬಲಿಷ್ಠವಾದ, ಸಮೃದ್ಧವಾದ ರಾಷ್ಟç ನಿರ್ಮಾಣಕ್ಕಾಗಿ ಶ್ರಮಿಸೋಣ.

– ಬಸವರಾಜ ಎಮ್.ಯರಗುಪ್ಪಿ.

ಬಿಆರ್‌ಪಿ ಶಿರಹಟ್ಟಿ, ಲಕ್ಮೇಶ್ವರ

ಮನುಷ್ಯನ ಬುದ್ಧಿಶಕ್ತಿ ಬೆಳೆದಷ್ಟು ಭಾವನೆಗಳು ಬೆಳೆಯುತ್ತಿಲ್ಲ: ರಂಭಾಪುರಿ ಶ್ರೀಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಚಿಂತನೆಗಳ ಅವಶ್ಯಕತೆಯಿದೆ. ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮ ಚಿಂತನೆಗಳ ಅರಿವು ಅಗತ್ಯ. ತನಗಾಗಿ ಬಯಸುವುದು ಮನುಷ್ಯನ ಗುಣವಾದರೆ ಎಲ್ಲರಿಗಾಗಿ ಬಯಸುವುದು ದೇವಗುಣ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಭಾನುವಾರ ಶ್ರೀ ಹಿರೇಮಠದ ಸಭಾಭವನದಲ್ಲಿ ಜರುಗಿದ ಪುರಾಣ ಪ್ರವಚನ ಮಂಗಲ ಹಾಗೂ ಸದ್ಧರ್ಮ ಧಾಮ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬಹು ಜನ್ಮದ ಪುಣ್ಯದ ಫಲದಿಂದಾಗಿ ಮಾನವರಾಗಿ ಜನಿಸಿ ಬಂದಿದ್ದೇವೆ. ಅರಿವುಳ್ಳ ಜನ್ಮದಲ್ಲಿ ಬಂದ ಬಳಿಕ ಸ್ವಲ್ಪಾದರೂ ಶಿವಜ್ಞಾನ ಪ್ರಾಪ್ತಿಗಾಗಿ ಮತ್ತು ಗುರು ಕಾರುಣ್ಯಕ್ಕಾಗಿ ಶ್ರಮಿಸಬೇಕಾಗುತ್ತದೆ. ಅಧಿಕಾರದ ಅಂತಸ್ತು ಮೇಲೇರಿದಂತೆ ನೀತಿಯ ಅಂತಸ್ತು ಮೇಲೇರಬೇಕು. ಮನುಷ್ಯನ ಬುದ್ಧಿಶಕ್ತಿ ಬೆಳೆದಷ್ಟು ಭಾವನೆಗಳು ಇಂದು ಬೆಳೆಯುತ್ತಿಲ್ಲ. ಮಾತು, ಮನ, ಕೃತಿ ಒಂದಾದಾಗ ಬದುಕು ಸದೃಢಗೊಳ್ಳುತ್ತದೆ. ಬೆಳೆಯುವ ಯುವ ಜನಾಂಗದಲ್ಲಿ ಸಂಸ್ಕಾರ ಸದ್ವಿಚಾರಗಳನ್ನು ಬೆಳೆಸುವ ಕೆಲಸವಾಗಬೇಕಾಗಿದೆ. ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಸಮಾಜಮುಖಿಯಾಗಿ, ಧರ್ಮಮುಖಿಯಾಗಿ ಸದಾ ಶ್ರಮಿಸುತ್ತಿರುವ ಕಾರಣ ಶ್ರೀಮಠದ ಅಭಿವೃದ್ಧಿಯಾಗಿದೆ ಎಂದು ಹರುಷ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ ಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿ, ಜ್ಞಾನ ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಜಾತಿ ಧರ್ಮಗಳ ಸಂಘರ್ಷದಲ್ಲಿ ಆದರ್ಶ ಮೌಲ್ಯಗಳು ನಾಶಗೊಳ್ಳಬಾರದು ಎಂದರು.

ಸಮ್ಮುಖ ವಹಿಸಿದ್ದ ಅಬ್ಬಿಗೇರಿ-ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು ಮಾತನಾಡಿ, ಸಂಪತ್ತು ಬೆಳೆದಂತೆ ಸಭ್ಯತೆ ಸಂಸ್ಕೃತಿ ಮರೆಯಬಾರದು. ದೇವರು, ಧರ್ಮ, ಗುರುವನ್ನು ಆಶ್ರಯಿಸಿ ಆದರ್ಶ ಬದುಕು ಕಟ್ಟಿಕೊಳ್ಳಬೇಕೆಂದರು. ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು.

ಇಳಕಲ್ಲ ಹಿರೇಮಠದ ಅನ್ನದಾನ ಶಾಸ್ತ್ರಿಗಳು ಪುರಾಣ ಮಂಗಲಗೊಳಿಸಿದರು. ಡಾ. ಕೆ.ಬಿ. ಧನ್ನೂರ, ವಿ.ಬಿ. ಸೋಮನಕಟ್ಟಿಮಠ, ಚಂದ್ರು ಬಾಳಿಹಳ್ಳಿಮಠ, ವೀರೇಶ ಕೂಗುಮಠ, ಪ.ಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಎಂ.ಎಸ್. ಧಡೇಸೂರಮಠ. ಬಸವರಾಜ ಕೊಳಕಣ್ಣವರ, ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರು ರಕ್ಷೆ ಸ್ವೀಕರಿಸಿದರು. ಹಿರೇಮಠದ ಸದ್ಭಕ್ತ ಮಂಡಳಿ, ಜಾತ್ರಾ ಮಹೋತ್ಸವ ಸಮಿತಿ, ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ರೇಣುಕಾಚಾರ್ಯ ಶಿಕ್ಷಣ ಸಂಸ್ಥೆಯವರು ಕಾರ್ಯಕ್ರಮವನ್ನು ಸಂಘಟಿಸಿದ್ದರು. ಕೆ.ಎಸ್. ಕಳಕಣ್ಣವರ ನಿರ್ವಹಿಸಿದರು.

Crime News: ಸ್ನಾನಕ್ಕೆಂದು ತೆರಳಿದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವು!

0

ಬೆಂಗಳೂರು: ಸ್ನಾನ ಕೋಣೆಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮಿ ಸಾವನ್ನಪ್ಪಿರು ಮೃತ ದುರ್ದೈವಿಯಾಗಿದ್ದು, ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ,

ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ನೆಲಮಂಗಲ ಟೌನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

error: Content is protected !!