Home Blog Page 2070

ಪ್ರಾಚ್ಯಾವಶೇಷಗಳ ಅನ್ವೇಷಣೆಯಲ್ಲಿ ಪಾಲ್ಗೊಳ್ಳುವಂತೆ ಲಕ್ಕುಂಡಿ ಗ್ರಾಮಸ್ಥರಿಗೆ ಸಚಿವ ಡಾ. ಎಚ್.ಕೆ. ಪಾಟೀಲ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ನಿಮ್ಮೆಲ್ಲರ ಹೆಮ್ಮೆಯ ಲಕ್ಕುಂಡಿ ಗ್ರಾಮದ ಮೊದಲ ಹೆಸರು ‘ಲೊಕ್ಕಿ ಗುಂಡಿ’, ಎಂದರೆ ಸಾಕ್ಷಾತ್ ಲಕ್ಷ್ಮಿ ನೆಲೆ ಎಂದರ್ಥ. ಈ ಗ್ರಾಮವು ‘ದೇವಾಲಯಗಳ ಸ್ವರ್ಗ’ವೆಂದು ಹೆಸರಾಗಿದೆ. ಲಕ್ಕುಂಡಿ ಕನ್ನಡದ ರತ್ನತ್ರಯರಲ್ಲಿ ಒಬ್ಬರಾದ ರನ್ನ ಕವಿಗೆ ಆಶ್ರಯ ನೀಡಿದ್ದ ಕವಿವರ ಕಾಮಧೇನು, ದಾನಚಿಂತಾಮಣಿ ಎಂದು ಪ್ರಸಿದ್ಧಳಾದ ಅತ್ತಿಮಬ್ಬೆಗೆ ಉಸಿರಿತ್ತು ಹೆಸರಾದ ಪಾವನ ಭೂಮಿ. ಶರಣ ಸಹೋದರ-ಸಹೋದರಿಯರಾದ ಮುಕ್ತಾಯಿಯಕ್ಕ ಮತ್ತು ಅಜಗಣ್ಣನವರ ಜನ್ಮಭೂಮಿಯಾಗಿದೆ. ಇಂತಹ ಲಕ್ಕುಂಡಿಯ ಗತವೈಭವವನ್ನು ಪುನಃ ಸ್ಥಾಪಿಸಲು ಸಾರ್ವಜನಿಕರು ಕೈಜೋಡಿಸಿ ಎಂದು ಕಾನೂನು, ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವೆಚ್.ಕೆ. ಪಾಟೀಲ ಮನವಿ ಮಾಡಿದ್ದಾರೆ.

ಕಲ್ಯಾಣ ಚಾಳುಕ್ಯರು, ಹೊಯ್ಸಳರು, ಕಲಚುರ್ಯ ಅರಸರು ಸಾವಿರ ವರ್ಷಗಳ ಹಿಂದೆ ಹಾಕಿಸಿರುವ ಶಾಸನಗಳ ಪ್ರಕಾರ ಲಕ್ಕುಂಡಿ ಸಾಕ್ಷಾತ್ ಶ್ರೀರಾಮನಿಂದ ನಿರ್ಮಿತವಾದ ಮಹಾ ಅಗ್ರಹಾರ, ಪಾವನ ಚರಿತ್ರಳಾದ ದಾನಚಿಂತಾಮಣಿ ಅತ್ತಿಮಬ್ಬೆಯ ಕರ್ಮಭೂಮಿ. ಒಳ್ಳೆಯತನಕ್ಕೆ, ಧರ್ಮಕ್ಕೆ, ಲಕ್ಷ್ಮಿ ನಮಗೆ ತವರು ಮನೆಯಂತಿದ್ದ ಲಕ್ಕುಂಡಿ ಗ್ರಾಮವು ಇಂದ್ರನ ಅಮರಾವತಿಗಿಂತಲೂ ಶ್ರೇಷ್ಠವಾಗಿದ್ದು, ಅಮರಾವತಿಯನ್ನು ಮತ್ತು ಲಕ್ಕುಂಡಿಯನ್ನು ತಕ್ಕಡಿಯಲ್ಲಿಟ್ಟು ತೂಗಿದಾಗ ಲಕ್ಕುಂಡಿಯ ತೂಕವೇ ಹೆಚ್ಚಾಗಿತ್ತೆಂದು ಶಾಸನದಲ್ಲಿ ಹೇಳಲಾಗಿದೆ.

ಹೊಯ್ಸಳರ ರಾಜಧಾನಿಯಾಗಿದ್ದ ಲಕ್ಕುಂಡಿಯಲ್ಲಿ, 101 ದೇವಾಲಯಗಳು, 101ಬಾವಿಗಳು ಇದ್ದವೆಂಬುದು ಪ್ರತೀತಿ. ಇವು ವೈವಿಧ್ಯಮಯವಾದ ವಾಸ್ತು ಶೈಲಿಯನ್ನು ಹೊಂದಿದ್ದು, ಆ ಕಾಲದಲ್ಲಿ ಕರ್ನಾಟಕದ ಶಿಲ್ಪಕಲಾ ಚಟುವಟಿಕೆಗಳ ಕಾರ್ಯಾಗಾರವಾಗಿತ್ತು. ಪ್ರಮುಖ ವ್ಯಾಪಾರಿ ಕೇಂದ್ರವೂ ಆಗಿದ್ದ ಲಕ್ಕುಂಡಿಯಲ್ಲಿ ಟಂಕಸಾಲೆ ಇದ್ದು, ಇಲ್ಲಿ ಮುದ್ರಿಸುತ್ತಿದ್ದ ನಾಣ್ಯಗಳು ರಾಜಮಾನ್ಯತೆಯನ್ನು ಪಡೆದಿತ್ತು. ನಮ್ಮ ಪೂರ್ವಜರು ದೇವಾಲಯಗಳನ್ನು ನಿರ್ಮಿಸಿ ಶಾಸನಗಳನ್ನು ಹಾಕಿಸುವಾಗ, ಸೂರ್ಯ ಚಂದ್ರ, ಆಕಾಶ, ಸಾಗರ, ಪರ್ವತಗಳಿರುವವರೆಗೂ ಅವುಗಳನ್ನು ರಕ್ಷಿಸಬೇಕೆಂದು ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ಲಕ್ಕುಂಡಿ ಇಂದು ತನ್ನ ಗತವೈಭವವನ್ನು ಸಾರುತ್ತಿದೆ. ಆದರೆ, ಇಂದು ಕಾಲನ ಹೊಡೆತಕ್ಕೆ, ನಮ್ಮ ಆಲಕ್ಷ್ಯಕ್ಕೆ ಸಿಕ್ಕಿ ಕಣ್ಮರೆಯಾಗುತ್ತಿವೆ. ದೇವಾಲಯದ ಅವಶೇಷಗಳು ಎಲ್ಲೆಂದರಲ್ಲಿ ಚದುರಿ ಬಿದ್ದಿವೆ. ಇದು ನನಗೆ ಮಾತ್ರವಲ್ಲ, ನಮ್ಮೆಲ್ಲರಿಗೆ ತುಂಬಾ ನೋವನ್ನು ತಂದಿದೆ. ಹೀಗಾಗಿ ನಮ್ಮ ಪ್ರಾಚೀನ ಇತಿಹಾಸ ಮತ್ತು ಪರಂಪರೆಯನ್ನು ಸಂರಕ್ಷಿಸುವ ದಿಸೆಯಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ.

ಅದರ ಫಲಿತವಾಗಿ, ಲಕ್ಕುಂಡಿ ಗ್ರಾಮವನ್ನು ಪುನರುತ್ಥಾನ ಮಾಡಲು ಗತವೈಭವ ಮರಳಿಸಲು ಮುಂದಡಿ ಇಟ್ಟಿದೆ. ನಿಮ್ಮ ಮನೆಗಳ ಬಳಿ ಚದುರಿ ಬಿದ್ದಿರುವ ಕಂಬಗಳು, ಭಗ್ನಗೊಂಡಿರುವ ಶಿಲ್ಪಗಳು, ಮನೆಯ ಮೆಟ್ಟಿಲಾಗಿರುವ ಶಾಸನಗಳು, ನಿರ್ಲಕ್ಷ್ಯಯಕ್ಕೊಳಗಾಗಿರುವ ತಾಳೆಗರಿಯ ಹಸ್ತಪ್ರತಿಗಳು ಇನ್ನೂ ಮುಂತಾದ ಐತಿಹಾಸಿಕ ಮಹತ್ವದ ಪ್ರಾಚ್ಯಾವಶೇಷಗಳನ್ನು ನೀಡುವಂತೆ ಕೋರಿ ನ.24ರಂದು ನಿಮ್ಮ ಮನೆಯ ಬಾಗಿಲಿಗೆ ಬಂದು ಸ್ವೀಕರಿಸುತ್ತೇವೆ. ನೀವು ಕೊಡುವ ಪ್ರಾಚ್ಯಾವಶೇಷಗಳನ್ನು ಅತ್ಯಂತ ವಿಶೇಷವಾದವುಗಳೆಂದು ಭಾವಿಸಿ, ಅವುಗಳನ್ನು ಸೂಕ್ತ ಸಂರಕ್ಷಣೆ ಮಾಡುತ್ತೇವೆ.

ವಿಶ್ವ ಭೂಪಟದಲ್ಲಿ ಹಂಪಿಯಂತೆಯೇ ಲಕ್ಕುಂಡಿಗೂ ಜಾಗತಿಕ ಮನ್ನಣೆ ತರುವ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ತುಂಬಾ ಅಗತ್ಯವಿದೆ. ಅಲಕ್ಷ್ಯಕ್ಕೊಳಗಾದ ಇತರ ಉದ್ದೇಶಗಳಿಗೆ ಬಳಸಲ್ಪಟ್ಟ ಪ್ರಾಚ್ಯಾವಶೇಷಗಳನ್ನು ಒಂದೆಡೆ ಕ್ರೋಢೀಕರಿಸಿ, ದೇವಾಲಯಗಳ ಅತಿಕ್ರಮಣವನ್ನು ತೆರವುಗೊಳಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತೋರುವ ಕಾಳಜಿಯೂ ಮಹತ್ತರವಾದ ಕಾಯಕವಾಗುತ್ತದೆ. ಆ ಮೂಲಕ ನಾವೆಲ್ಲರೂ ಸೇರಿ ಮತ್ತೆ ಲಕ್ಕುಂಡಿಯ ಚರಿತ್ರೆಯನ್ನು ಪುನರ್ನಿರ್ಮಾಣ ಮಾಡಿ, ಉಳಿಸಿ-ಬೆಳೆಸಲು ಸಾಧ್ಯವಾಗುತ್ತದೆ.

ನಮ್ಮ ಈ ಮಹತ್ತರ ಕಾರ್ಯದಲ್ಲಿ ನೀವೂ ಭಾಗಿಗಳಾಗಿ. ಲಕ್ಕುಂಡಿಯ ವೈಭವವನ್ನು ಪುನರ್‌ಸ್ಥಾಪಿಸುವ ನಮ್ಮ ನವೀನ ಪ್ರಯತ್ನದ ಭಾಗವಾಗಿ ಮನೆ-ಮನೆಯಿಂದ, ಹೊಳಗಟ್ಟಿಗಳಿಂದ ನಿಮ್ಮ ಪರಿಸರದ ಕಟ್ಟಿಗಟ್ಟಿಯಲ್ಲಿನ ಸ್ಮಾರಕಗಳ, ಸುಂದರ ಶಿಲ್ಪಕಲಾ ಕಲಾಕೃತಿಗಳ, ಪ್ರಾಚ್ಯಾವಶೇಷಗಳ ಅನ್ವೇಷಣೆಗೆ ನೀವೂ ಕೈಜೋಡಿಸಬೇಕೆಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ವಿನಂತಿಸಿದ್ದಾರೆ.

ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಲು ತಹಸೀಲ್ದಾರರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಪಟ್ಟಣದಲ್ಲಿ ಇರುವ ಏಕೈಕ ದೊಡ್ಡ ಆಟದ ಮೈದಾನವು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು, ಅಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳನ್ನು ಕೂಡಲೇ ನಿಯಂತ್ರಿಸಲು ಕ್ರಮ ಕೈಗೊಳ್ಳುವುದರ ಜೊತೆ ತಾಲೂಕಾ ಕ್ರೀಡಾಂಗಣವನ್ನು ಮಾಡಲು ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ಕ್ರೀಡಾಪ್ರೇಮಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಮನವಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಮೋಹನ ನಂದೆಣ್ಣವರ ಮಾತನಾಡಿ, ಮರಸಭೆಯ ಉಮಾ ವಿದ್ಯಾಲಯ ಮೈದಾನವು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮೈದಾನದಲ್ಲಿ ಕುಳಿತು ಮದ್ಯಪಾನ ಮಾಡುವುದಲ್ಲದೆ, ಕುಡಿದ ಬಾಟಲಿಗಳನ್ನು ಮೈದಾನದಲ್ಲಿಯೇ ಒಡೆದು ಹೋಗುತ್ತಿದ್ದಾರೆ. ಇದರಿಂದ ಬೆಳಗ್ಗೆ ಮೈದಾನಕ್ಕೆ ವಾಯುವಿಹಾರಕ್ಕೆಂದು ಬರುವ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಒಡೆದ ಗಾಜುಗಳು ಕಾಲಿಗೆ ಚುಚ್ಚಿದ ಸಾಕಷ್ಟು ಉದಾಹರಣೆಗಳಿವೆ. ಮೈದಾನದ ಪಕ್ಷದಲ್ಲಿ ವಾಸವಾಗಿರುವ ನಿವಾಸಿಗಳು ಮಲ-ಮೂತ್ರ ವಿಸರ್ಜನೆಯನ್ನು ಮೈದಾನದ ಒಳ ಬದಿಯಲ್ಲಿ ಮಾಡುತ್ತಿರುವುದರಿಂದ ಮೈದಾನಕ್ಕೆ ಬರುವ ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ಮುಜುಗುರವಾಗುತ್ತಿದ್ದು, ಸಂಬAಧಪಟ್ಟ ಇಲಾಖೆ ಕೂಡಲೇ ಈ ಅನೈತಿಕ ಚಟುವಟಿಕೆಯನ್ನು ನಿಲ್ಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರರು ಈ ಕುರಿತಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳುವದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸದಾನಂದ ನಂದೆಣ್ಣವರ, ಮಹಾಂತೇಶ ಗುಡಿಸಲಮನಿ, ರಬ್ಬಾನಿ ಶಿರಹಟ್ಟಿ, ಮುಜಮಿಲ್ ಮಕಾನದಾರ, ಮಲ್ಲಿಕಾರ್ಜುನ ಸಾಲ್ಮನಿ, ಸಂತೋಷ ಹಾದಿಮನಿ, ಸಂತೋಷ ನಂದೆಣ್ಣವರ, ನಿಂಗಪ್ಪ ಬಾಲಣ್ಣವರ, ಹನುಮಂತಪ್ಪ ನಡವಲಕೇರಿ, ವಿಷ್ಣು ಕೆ, ಆದಿತ್ಯ ಗಡದವರ, ಚೇತನ ಗೋಡಕೆ, ಆನಂದ ನರೇಗಲ್, ಬಸವರಾಜ ಗಡದವರ ಮುಂತಾದವರಿದ್ದರು.

ಜಿಲ್ಲಾ ಕಸಾಪ ವತಿಯಿಂದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ದೇಸಾಯಿ ದತ್ತಿ ಪ್ರಶಸ್ತಿ ಪ್ರದಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗದಗ ವತಿಯಿಂದ ನ.23ರಂದು ಸಂಜೆ ೬ ಗಂಟೆಗೆ ಇಲ್ಲಿನ ಸಾಹಿತ್ಯ ಪರಿಷತ್ ಕಾರ್ಯಾಲಯದ ತೋಂಟದ ಸಿದ್ಧಲಿಂಗಶ್ರೀಗಳ ಕನ್ನಡ ಭವನದಲ್ಲಿ ಶ್ರೀಮತಿ ಶೇಕುಬಾಯಿ ಎಲ್.ದೇಸಾಯಿ ಸ್ಮರಣಾರ್ಥ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಹೆಸರಾಂತ ವೈದ್ಯರಾದ ಡಾ. ಕೆ.ಡಿ. ಗೋಡಖಿಂಡಿ ಇವರು ಬಾಳೆಹಣ್ಣು ವ್ಯಾಪಾರಿಗಳಾದ ಮಮತಾಜಬಿ ಬಾಬುಸಾಬ ಕುಸುಗಲ್‌ಗಿಗೆ ಪ್ರಶಸ್ತಿ ಪ್ರದಾನವನ್ನು ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು.

ಇದೇ ಸಂದರ್ಭದಲ್ಲಿ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಚಂದ್ರಶೇಖರ ವಸ್ತçದ, ಶ್ರೇಷ್ಠ ಅಧ್ಯಾಪಕ ಪ್ರಶಸ್ತಿ ಪುರಸ್ಕೃತರಾದ ಡಾ. ಉಮೇಶ ಪುರದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುರೇಶ ಟಾಕರೆಪ್ಪ ಲಮಾಣಿ ಕಳಸಾಪೂರ, ಕರ್ಕಾಟಕ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದ ಅಧ್ಯಕ್ಷರಾದ ಜಗದೀಶ ಪೂಜಾರ, ರೋಣದ ನಿವೃತ್ತ ಅಧ್ಯಾಪಕ ಪಿ.ಎಚ್. ಕಡಿವಾಲ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ರತ್ನಾ ಬದಿ ಶಿರಹಟ್ಟಿ, ‘ಕನಕ ಗೌರವ ಪ್ರಶಸ್ತಿ’ ಪುರಸ್ಕೃತರಾದ ಡಾ. ಎಂ.ಎನ್. ಅಂಬಲಿಯವರ ಗದಗ, ಗದುಗಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎ. ಬಳಿಗೇರ, ಸಮಾಜ ಸೇವಕರಾದ ಬಾಲಚಂದ್ರ ಭರಮಗೌಡರ ಗದಗ, ರೈತಸ್ನೇಹಿ ನಿವೃತ್ತ ಅಧಿಕಾರಿಗಳಾದ ಸುರೇಶ ಕುಂಬಾರ ಗದಗ ಇವರಿಗೆ ಸನ್ಮಾನ ಜರುಗಲಿದೆ.

ಪ್ರಸಾದ ಸುತಾರ ಹಾಗೂ ಗುರುನಾಥ ಸುತಾರ ಇವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಸಾಹಿತಿಗಳು, ಕನ್ನಡಾಭಿಮಾನಿಗಳು, ಪರಿಷತ್ತಿನ ಸದಸ್ಯರು ಭಾಗವಹಿಸಬೇಕೆಂದು ಕಾರ್ಯದರ್ಶಿ ಶಿವಾನಂದ ಗಿಡ್ನಂದಿ, ಕಿಶೋರಬಾಬು ನಾಗರಕಟ್ಟಿ, ಡಿ.ಎಸ್. ಬಾಪುರಿ, ದತ್ತಪ್ರಸನ್ನ ಪಾಟೀಲ, ಶ್ರೀಕಾಂತ ಬಡ್ಡೂರ ಪ್ರಕಟನೆಯಲ್ಲಿ ಕೋರಿದ್ದಾರೆ.

ಜಮೀರ್ ಎನ್ನುವ ‘420’ ಸಚಿವನನ್ನು ಇಟ್ಟುಕೊಂಡು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ ಕಾಂಗ್ರೆಸ್: ಜನಾರ್ದನ ರೆಡ್ಡಿ!

0

ಕೊಪ್ಪಳ: ಜಮೀರ್ ಎನ್ನುವ ‘420’ ಸಚಿವನನ್ನು ಇಟ್ಟುಕೊಂಡು ರೈತರನ್ನು ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ವಕ್ಫ್ ಮಸೂದೆ ದುರುಪಯೋಗ ಮಾಡಿಕೊಂಡ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಂಗ್ರೆಸ್ ದುರಾಡಳಿತದ ವಿರುದ್ಧ ಈ ಪ್ರತಿಭಟನೆ ನಡೆಯುತ್ತಿದೆ. ಈ ಸರ್ಕಾರ ಜಮೀರ್ ಎನ್ನುವ ‘420’ ಸಚಿವನನ್ನು ಇಟ್ಟುಕೊಂಡು ಎಲ್ಲಾ ಭೂಮಿ ವಶಪಡಿಸಿಕೊಳ್ಳಲು ತರಾತುರಿಯಲ್ಲಿ ಸಾವಿರಾರು ಎಕರೆಗೆ ವಕ್ಫ್ ಹೆಸರು ಸೇರಿಸಿದ್ದಾರೆ ಎಂದು ಕಿಡಿಕಾರಿದರು.

ಚುನಾವಣೆಯಲ್ಲಿ ಹೊಡೆತ ಬೀಳುವ ಭಯದಲ್ಲಿ ಸಿಎಂ ಅವರು ಮೌಖಿಕವಾಗಿ ನೋಟಿಸ್ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ. ಅದರಿಂದ ಏನೂ ಆಗಲ್ಲ, ಕೂಡಲೇ ಎಮರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಮಾಡಿ ರದ್ದುಗೊಳಿಸಬೇಕಿತ್ತು. ಆದರೆ ಮೌಖಿಕವಾಗಿ ಹೇಳುವ ಮೂಲಕ ರೈತರ ಶಾಪಕ್ಕೆ ಗುರಿಯಾಗುತ್ತಾರೆ. ಅಹಿಂದ ಹೆಸರಲ್ಲಿ ಸಿಎಂ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ವಿನಾಶಕಾಲಕ್ಕೆ ವಿಪರೀತ ಬುದ್ಧಿ ಬಂದಿದೆ. ಇದು ಕೇವಲ ಹೋರಾಟದ ಪ್ರಾರಂಭ. ಕೂಡಲೇ ಹಿಂಪಡೆಯದೆ ಹೋದಲ್ಲಿ ಉಗ್ರರೂಪ ಪಡೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prahlad Joshi: ನ್ಯಾ.ಡಿ’ಕುನ್ಹಾ ವರದಿ; ವಿವಾದದ ಹೇಳಿಕೆಗೆ ಸಚಿವ ಜೋಶಿ ಕ್ಷಮೆ!

0

ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ “ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ” ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು ಹಾಕಿತ್ತು.

ನ್ಯಾಯಮೂರ್ತಿ ಅವರಲ್ಲಿ ಕ್ಷಮೆ:
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ವಾಸ್ತವದಲ್ಲಿ ತಾವೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ವಿವರಿಸಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ, ವಿವಾದಾತ್ಮಕ ಹೇಳಿಕೆಯಿಂದ ತಮ್ಮ ಮನಸ್ಸಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇಂತಿದೆ ಪತ್ರದ ಸಾರಾಂಶ:”ನನ್ನ ಸುದೀರ್ಘ ವರ್ಷಗಳ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಯಾವತ್ತೂ ಪ್ರತ್ಯಕ್ಷ-ಪರೋಕ್ಷವಾಗಿ ನ್ಯಾಯಾಂಗದ ಸದಸ್ಯರ ಖ್ಯಾತಿಗೆ ಚ್ಯುತಿ ಬರುವಂತೆ ನಡೆದುಕೊಂಡಿಲ್ಲ ಮತ್ತು ಹೇಳಿಕೆಯನ್ನೂ ನೀಡಿಲ್ಲ”. ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ನ್ಯಾಯಾಂಗ ಮತ್ತು ನ್ಯಾ.ಕುನ್ಹಾ ಅವರಲ್ಲಿ ಗೌರವವಿದೆ: ನಾನು ಇತ್ತೀಚೆಗೆ ನೀಡಿದ ಹೇಳಿಕೆ ಮೇಲ್ನೋಟಕ್ಕೆ ವಿವಾದ ಹುಟ್ಟುಹಾಕಿದೆ. ಆದರೆ, ಯಾವತ್ತೂ ನ್ಯಾಯಾಂಗದ ಸದಸ್ಯರ ಖ್ಯಾತಿ ತಗ್ಗಿಸುವ ಪ್ರವೃತ್ತಿ ತೋರಿಲ್ಲ. ನ್ಯಾಯಾಂಗ ಮತ್ತು ತಮ್ಮ ಬಗ್ಗೆ ಈಗಲೂ ಗೌರವವಿದೆ ಎಂದು ಜೋಶಿ ಪ್ರತಿಪಾದಿಸಿದ್ದಾರೆ.

ನ್ಯಾಯಾಂಗ ಮತ್ತು ಗೌರವಾನ್ವಿತ ನ್ಯಾಯಾಧೀಶರು ಸಂವಿಧಾನದ ಕವಚವಾಗಿದ್ದಾರೆ. ನ್ಯಾಯದಾನದ ಪವಿತ್ರ ಕರ್ತವ್ಯದಲ್ಲಿ ಪ್ರಮುಖ ಪಾತ್ರ ಹೊಂದಿದವರೆಂದು ನಂಬಿದವನಾಗಿದ್ದೇನೆ. ಆದರೆ, ತಮ್ಮ ನೇತೃತ್ವದ ಸಮಿತಿ ವರದಿ ಉಲ್ಲೇಖಿಸಿ ಇತ್ತೀಚೆಗೆ ನೀಡಿದ ಹೇಳಿಕೆ ಅವಹೇಳನದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕಾಗಿ ತಮ್ಮಲ್ಲಿ ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಖ್ಯಾತಿ ಕುಗ್ಗಿಸುವ ಯತ್ನ ನನ್ನದಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿ’ ಕುನ್ಹಾ ಅವರಿಂದ ವರದಿ ತರಿಸಿಕೊಂಡಿದೆ ಎಂದು ಹೇಳಿದ್ದೇನೆ ಹೊರತು ತಮ್ಮ ಮೇಲೆ ಯಾವುದೇ ವೈಯಕ್ತಿಕ ಹೇಳಿಕೆ ನೀಡಿಲ್ಲ. ತಮಗೆ ಮತ್ತು ಆಯೋಗಕ್ಕೆ ಅಪಕೀರ್ತಿ ತರಲು ಅಥವಾ ಜನರ ಮನಸ್ಸಿನಲ್ಲಿ ನಿಮ್ಮ ಇಮೇಜ್ ಕಡಿಮೆ ಮಾಡುವ ಉದ್ದೇಶದ್ದೂ ಅಲ್ಲ ಎಂದು ಸಚಿವ ಜೋಶಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ತಿಳಿಸಿದ್ದಾರೆ.

ಆಯೋಗದ ಸದಸ್ಯರಾಗಿ ತಮ್ಮ ಕರ್ತವ್ಯ ನಿರ್ವಹಣೆ ಮತ್ತು ನಿಷ್ಪಕ್ಷಪಾತವನ್ನು ಅನುಮಾನಿಸಲು ನನಗೆ ಯಾವುದೇ ಕಾರಣವಿಲ್ಲ ಎಂಬುದನ್ನು ಈ ಮೂಲಕ ನೇರವಾಗಿ ತಮ್ಮ ಗಮನಕ್ಕೆ ತರಬಯಸಿದ್ದೇನೆ. ನನ್ನ ಹೇಳಿಕೆಗಳು ತಮಗೆ ಯಾವುದೇ ನೋವು ಅಥವಾ ಅನುಮಾನ ಉಂಟುಮಾಡಿದ್ದರೆ ಅದಕ್ಕೆ ವಿಷಾದಿಸುತ್ತೇನೆ ಮತ್ತು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಸಚಿವ ಜೋಶಿ ಅವರು ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ ಅವರಲ್ಲಿ ಕೋರಿದ್ದಾರೆ.

ಸಾರ್ಜನಿಕರ ಸಮಸ್ಯೆಗಳ ಪರಿಹಾರವೇ ಕರ್ನಾಟಕ ಲೋಕಾಯುಕ್ತದ ಮೊದಲ ಆದ್ಯತೆ: ಕೆ.ಎಂ. ಫಣೀಂದ್ರ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಸಾರ್ಜನಿಕರ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಲೋಕಾಯುಕ್ತ ಮೊದಲ ಆದ್ಯತೆ ನೀಡುತ್ತದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಮೂರ್ತಿ ಕೆ.ಎಂ. ಫಣೀಂದ್ರ ಹೇಳಿದರು.

ಅವರು ಧಾರವಾಡ ಜಿಲ್ಲಾ ಪಂವಾಯತ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭೆ ಉದ್ಘಾಟಿಸಿ ಮಾತನಾಡಿದರು.

ಜೀವಿಸುವ ಹಕ್ಕು ಮೂಲಭೂತ ಹಕ್ಕಾಗಿದೆ. ಅದು ಪ್ರತಿಯೊಬ್ಬರು ಗೌರವಯುತವಾಗಿ ಬದುಕುವ ಅವಕಾಶ ಮತ್ತು ಹಕ್ಕನ್ನು ಪ್ರತಿನಿಧಿಸುತ್ತದೆ. ಉತ್ತಮ ಪ್ರಕೃತಿ, ನೆಲ, ಜಲ, ಮಣ್ಣು, ಪರಿಸರ ಕಾಪಾಡುವುದು ಮತ್ತು ಪಡೆಯುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಭಾರತದ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು ಮತ್ತು ರಾಜ್ಯ ನೀತಿ ನಿರ್ದೇಶಕ ತತ್ವಗಳು ಪರಸ್ಪರ ಸಂಬಂಧ ಹೊಂದಿವೆ ಎಂದು ನ್ಯಾಯಮೂರ್ತಿ ಫಣೀಂದ್ರ ತಿಳಿಸಿದರು.

ಆಧುನಿಕ ಸರಕಾರಗಳು ಉತ್ತಮವಾದ ಜೀವನ ಮಾಡಲು ಸವಲತ್ತುಗಳನ್ನು ನೀಡುತ್ತದೆ. ಪ್ರತಿಯೊಂದು ವ್ಯವಸ್ಥೆಯಲ್ಲಿ ಕಾನೂನಿನ ರಚನೆ ಇದೆ. ಮನುಷ್ಯನು ಆಸ್ತಿ-ಪಾಸ್ತಿಗಳನ್ನು ಕಾಪಾಡಿಕೊಳ್ಳುವಂತಹ ಕಾನೂನು ವ್ಯವಸ್ಥೆ ನಮ್ಮಲ್ಲಿ ಇದೆ. ಆಸ್ತಿ ಅಂತಸ್ತುಗಳ ಮೇಲೆ ವಿಲ್ ಮಾಡುವ ಮೂಲಕ ಆಸ್ತಿ ಹಕ್ಕುಗಳನ್ನು ಚಲಾಯಿಸಬಹುದು ಎಂದು ಅವರು ಹೇಳಿದರು.

ಕರ್ನಾಟಕ ಲೋಕಾಯುಕ್ತವು ನಿಯಮಾನುಸಾರ ಕರ್ತವ್ಯ ನಿರ್ವಹಿಸುವ ಸರಕಾರಿ ನೌಕರರಿಗೆ ಸಹಾಯ ಮಾಡುತ್ತದೆ. ಸುಳ್ಳು ದೂರು, ಕರ್ತವ್ಯ ನಿರ್ವಹಣೆಗೆ ಅಡಚಣೆ ಉಂಟಾದರೆ ತನಿಖೆ ಮಾಡಿ, ಸೂಕ್ತ ರಕ್ಷಣೆ ನೀಡುತ್ತದೆ. ಕರ್ತವ್ಯ ಲೋಪ ಮಾಡುವ ಅಧಿಕಾರಿ, ನೌಕರರ ವಿರುದ್ಧ ಲೋಕಾಯುಕ್ತ ಕಾಯ್ದೆ ಪ್ರಕಾರ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡುತ್ತದೆ ಎಂದು ತಿಳಿಸಿದರು.

ಸಾರ್ವಜನಿಕ ಸೇವೆಯೇ ನಮ್ಮ ಗುರಿ. ವಿನಾಕಾರಣ ವಿಳಂಬ, ತಪ್ಪು ಮಾಹಿತಿ, ನಿಧಾನಗತಿ ಅನುಸರಿಸುವ ಮೂಲಕ ಕರ್ತವ್ಯ ಲೋಪ ಮಾಡಬೇಡಿ. ಎಚ್ಚರಿಕೆಯಿಂದ ಮತ್ತು ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿ. ಪ್ರತಿಯೊಬ್ಬರಿಗೂ ಇರುವ ಹಕ್ಕುಗಳನ್ನು ಗೌರವಿಸಬೇಕು. ಮೂಲಭೂತ ಕರ್ತವ್ಯಗಳನ್ನು ಸಂರಕ್ಷಣೆ ಮಾಡಿಕೊಳ್ಳಬೇಕು. ನೀರು, ಗಾಳಿ ಸೇರಿದಂತೆ ಮೂಲಭೂತ ಸಂಪತ್ತುಗಳನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಯಾವುದೇ ರೀತಿಯ ಭ್ರಷ್ಟಾಚಾರ, ಪಕ್ಷಪಾತಗಳನ್ನು ಸರ್ಕಾರದ ಅಧೀನದಲ್ಲಿರುವ ಅಧಿಕಾರಿಗಳು ಮಾಡಬಾರದು. ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕರ್ತವ್ಯ ಲೋಪವಾದರೆ ಸಾರ್ವಜನಿಕರ ಹಕ್ಕು ಉಲ್ಲಂಘನೆ ಆಗುತ್ತದೆ. ಸಂಬAಧಿಸಿದ ಅಧಿಕಾರಿಗಳು, ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಸರಿಪಡಿಸಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಕಚೇರಿಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು. ಲೋಕಾಯುಕ್ತದ 7, 8 ಮತ್ತು 9 ನೇ ಕಲಂಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹೈಕೋರ್ಟ್ಗಳಿಗೆ ಇರುವ ಅಧಿಕಾರವನ್ನು ಕಲಂ 17ರಡಿಯಲ್ಲಿ ಲೋಕಾಯುಕ್ತವು ಕೂಡ ಹೊಂದಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.

ವೇದಿಕೆಯಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತರಾದ ಸಿ.ಆರ್. ರವೀಶ, ಮಾನಿಂಗ ನಂದಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಲ್ಲಿನ ವಿವಾರಣಾ ವಿಭಾಗದ ಅಪರ ನಿಬಂಧಕರಾದ ಪಿ.ಶ್ರೀನಿವಾಸ, ನರಸಿಂಹಸಾ ಎಂ.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಸಿವಿಲ್ ನ್ಯಾಯಾಧೀಶ ಕಿರಣ ಪಿ.ಎಂ. ಪಾಟೀಲ್, ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಹನುಮಂತರಾಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ರಿಯಾಶೀಲ ಬದುಕು ಜೀವನದ ಶ್ರೇಯಸ್ಸಿಗೆ ಅಡಿಪಾಯವೆಂದು: ರಂಭಾಪುರಿ ಶ್ರೀ

0

ವಿಜಯಸಾಕ್ಷಿ ಸುದ್ದಿ, ತರೀಕೆರೆ: ಮಾನವ ಜೀವನ ನಿಂತ ನೀರಾಗಬಾರದು. ಸದಾ ಹರಿಯುವ ಪವಿತ್ರ ಗಂಗಾಜಲವಾಗಬೇಕು. ಕಷ್ಟದ ಜೀವನ ಶಿಸ್ತನ್ನು ಕಲಿಸುವ ಪಾಠಶಾಲೆ. ಕ್ರಿಯಾಶೀಲ ಬದುಕು ಜೀವನದ ಶ್ರೇಯಸ್ಸಿಗೆ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶುಕ್ರÀವಾರ ತಾಲೂಕಿನ ಹುಣಸಘಟ್ಟ ಹಾಲುಸ್ವಾಮಿ ಮಠದಲ್ಲಿ ಕಾರ್ತೀಕ ದೀಪೋತ್ಸವ ಹಾಗೂ ಗುರುಮೂರ್ತಿ ಶಿವಾಚಾರ್ಯರ 62ನೇ ಜನ್ಮ ದಿನೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ. ಸಾರ್ಥಕ ಬದುಕಿಗೆ ಧರ್ಮಾಚರಣೆಯ ಮೌಲ್ಯಗಳು ಅವಶ್ಯಕ. ಧರ್ಮದ ದಿಕ್ಸೂಚಿ ಇಲ್ಲದೆ ಇದ್ದರೆ ಜೀವನ ಬೆಳೆಯಲಾಗದು. ಧರ್ಮ ಅರ್ಥ ಕಾಮ ಮೋಕ್ಷ ಇವುಗಳಲ್ಲಿ ಒಂದನ್ನಾದರೂ ಸಾಧಿಸದಿದ್ದಲ್ಲಿ ಜೀವನ ಸಾರ್ಥಕಗೊಳ್ಳುವುದಿಲ್ಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಮಾನವ ಜೀವನ ವಿಕಾಸಕ್ಕಾಗಿ ನಿರೂಪಿಸಿದ ಅಹಿಂಸಾ, ಸತ್ಯ, ಅಸ್ತೇಯ ಬ್ರಹ್ಮಚರ್ಯ, ದಯಾ, ಕ್ಷಮಾ, ದಾನ, ಪೂಜಾ, ಜಪ ಮತ್ತು ಧ್ಯಾನ ಎಂಬ ದಶವಿಧ ಸೂತ್ರಗಳ ಪರಿಪಾಲನೆ ಬಹಳಷ್ಟು ಮುಖ್ಯ.

ಬಾಳಿಗೆ ಬೆಳಕು ಬೇಕು. ಬೆಳಕಿಲ್ಲದಿದ್ದರೆ ಬಾಳಲ್ಲಿ ಕತ್ತಲು ಆವರಿಸುತ್ತದೆ. ಹೊರಗಿನ ಕತ್ತಲೆಯನ್ನು ದೀಪದಿಂದ ಕಳೆಯಬಹುದು. ಒಳಗಿರುವ ಅಜ್ಞಾನ ಅನ್ನುವ ಕತ್ತಲೆಯನ್ನು ಕಳೆಯಲು ಗುರು ಮಾತ್ರ ಸಮರ್ಥನಾಗಿದ್ದಾನೆ. ಹಾಲುಸ್ವಾಮಿ ಮಠದ ಗುರುಮೂರ್ತಿ ಶಿವಾಚಾರ್ಯ ಸ್ವಾಮಿಗಳು ೬೨ನೇ ವರ್ಷದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಶ್ರೀಗಳವರ ಚಲನಶೀಲ ವ್ಯಕ್ತಿತ್ವ ಮಠದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಭಕ್ತ ಸಂಕುಲದ ಪ್ರೀತ್ಯಾದರಗಳಿಗೆ ಪಾತ್ರರಾಗಿದ್ದಾರೆ ಎಂದು ಹರುಷ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಜೀವನ ಮೌಲ್ಯಗಳನ್ನು ಸಂರಕ್ಷಿಸಿಕೊAಡು ಬರುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಧಾರ್ಮಿಕ ಮೌಲ್ಯಗಳನ್ನು ನಿರ್ಲಕ್ಷ ಮಾಡುವ ಕಾರಣ ಜನ ಸಮುದಾಯದಲ್ಲಿ ಹಲವಾರು ಸಮಸ್ಯೆಗಳು ತಲೆದೋರುತ್ತಿವೆ. ಗುರುಮೂರ್ತಿ ಶ್ರೀಗಳು ಶಿವಾಚಾರ್ಯ ಸಂಕುಲದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿ ಭಕ್ತರ ಬಾಳಿಗೆ ಬೆಳಕು ತೋರಿದ್ದಾರೆ. ಭಗವಂತ ಅವರಿಗೆ ಆರೋಗ್ಯ ಭಾಗ್ಯ ಕರುಣಿಸಲೆಂದರು.

ಈ ಪವಿತ್ರ ಸಮಾರಂಭದಲ್ಲಿ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶ್ರೀಗಳು, ಹಣ್ಣೆ ಮಠದ ಮರುಳಸಿದ್ಧ ಪಂಡಿತಾರಾಧ್ಯ ಶ್ರೀಗಳು, ನಂದಿಪುರ ನಂದೀಶ್ವರ ಶ್ರೀಗಳು, ಬೀರೂರಿನ ರುದ್ರಮುನಿ ಶ್ರೀಗಳು, ಶಂಕರದೇವರ ಮಠದ ಚಂದ್ರಶೇಖರ ಶ್ರೀಗಳು, ಬಿಳಕಿ ಹಿರೇಮಠದ ರಾಚೋಟೇಶ್ವರ ಶ್ರೀಗಳು, ಕೆ.ಬಿದರೆ ದೊಡ್ಡಮಠದ ಪ್ರಭುಕುಮಾರ ಶ್ರೀಗಳು, ತಾವರೆಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶ್ರೀಗಳು, ಹಾರನಹಳ್ಳಿ ಶಿವಯೋಗಿ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.

ಶಿರಹಟ್ಟಿ ಘಟಕಕ್ಕೆ 4 ನೂತನ ಬಸ್ ಸಂಚಾರಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಜನತೆಯ, ವಿವಿಧ ಸಂಘಟನೆಗಳ ಬಹುದಿನಗಳ ಒತ್ತಾಯದ ಪ್ರಯತ್ನವಾಗಿ ಶುಕ್ರವಾರ ಶಿರಹಟ್ಟಿ ಸಾರಿಗೆ ಘಟಕಕ್ಕೆ ಮಂಜೂರಾದ 4 ಹೊಸ ಬಸ್‌ಗಳ ಸಂಚಾರಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಬಸ್‌ಗಳು ಸಹಕಾರಿಯಾಗಲಿದ್ದು, ಶಿರಹಟ್ಟಿಯಿಂದ ರಾಣೆಬೆನ್ನೂರ, ಬೆಳ್ಳಟ್ಟಿ ಮಾರ್ಗವಾಗಿ ಶ್ರೀ ಕ್ಷೇತ್ರ ಸಿಂಗಟಾಲೂರ ಸೇರಿದಂತೆ ರಾತ್ರಿ ಸಮಯದಲ್ಲಿ ಗದಗ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು.

¸ಶಿರಹಟ್ಟಿ ಪಟ್ಟಣದ ಸ್ಮಶಾನದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಡಿಪೋದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿ ಹಾಗೂ ಬೀದಿ ದೀಪ ಅಳವಡಿಸುವ ಕುರಿತು ಸ್ಥಳೀಯ ಕುಂದುಕೊರತೆ ನಿವಾರಣಾ ಸಮಿತಿ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಿತಿ ಅಧ್ಯಕ್ಷ ಅಕ್ಬರಸಾಬ ಯಾದಗಿರಿ, ಪ.ಪಂ ಸದಸ್ಯ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಅಶೋಕ ವರವಿ, ಶ್ರೀನಿವಾಸ ಬಾರಬರ, ರಾಮಣ್ಣ ಕಂಬಳಿ, ಪರಶುರಾಮ ಡೊಂಕಬಳ್ಳಿ, ಬಸವರಾಜ ವಡವಿ, ಮುನ್ನಾ ಢಾಲಾಯತ, ರಫೀಕ ಕೆರಿಮನಿ, ಶ್ರೀನಿವಾಸ ಕಪಟಕರ, ಜಾಕೀರ ಕೋಳಿವಾಡ, ಇಂತಿಯಾಜ ಶಿಗ್ಲಿ, ಸಂಜೀವರೆಡ್ಡಿ ಹಸರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಗೋಡಂಬಿ ತಿಂದ್ರೆ ತೂಕ ಹೆಚ್ಚಾಗುತ್ತಾ!? ನಿಮಗೆ ತಿಳಿಯದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ!

0

ಡ್ರೈ ಫ್ರೂಟ್ಸ್ ಗಳಲ್ಲಿ ಒಂದಾದ ಗೋಡಂಬಿ ತಿಂದರೆ ತೂಕ ಹೆಚ್ಚಾಗುತ್ತದೆ ಎಂದು ಹಲವರು ಭಾವಿಸಿದ್ದಾರೆ. ಆದರೆ ಈ ಮಾತು ಸತ್ಯವಲ್ಲ. ಗೋಡಂಬಿ ಅದರ ವಿಶಿಷ್ಟ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಬಹಳ ಜನಪ್ರಿಯವಾಗಿದೆ.

ಗೋಡಂಬಿಯನ್ನು ಪ್ರತಿನಿತ್ಯ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಗೋಡಂಬಿಯಲ್ಲಿ ಪ್ರೋಟೀನ್, ಖನಿಜಗಳು ಮತ್ತು ಆರೋಗ್ಯಕರ ಕೊಬ್ಬುಗಳಿವೆ ಎಂದು ತಜ್ಞರು ಹೇಳುತ್ತಾರೆ. ಇದನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಮತ್ತು ಜೀರ್ಣಕ್ರಿಯೆಯು ಆರೋಗ್ಯಕರವಾಗಿರುತ್ತದೆ.

ಗೋಡಂಬಿ ತಿಂದರೆ ತೂಕ ಹೆಚ್ಚುತ್ತದೆ ಎಂದು ಹೇಳುವುದು ಸಂಪೂರ್ಣ ತಪ್ಪು. ಗೋಡಂಬಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ, ಅದು ತೂಕವನ್ನು ಹೆಚ್ಚಿಸುವುದಿಲ್ಲ ಆದರೆ ಅದನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದಾಗ್ಯೂ, ಹೆಚ್ಚು ಗೋಡಂಬಿ ತಿನ್ನುವುದು ತೂಕ ಹೆಚ್ಚಾಗಲು ಕಾರಣವಾಗಬಹುದು.

ಗೋಡಂಬಿಯಲ್ಲಿ ವಿಟಮಿನ್‌ಗಳು ಮತ್ತು ಮೆಗ್ನೀಸಿಯಮ್‌ನಂತಹ ಅನೇಕ ರೀತಿಯ ಪೋಷಕಾಂಶಗಳಿವೆ, ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಅವರು ಗ್ಲೂಕೋಸ್ ಚಯಾಪಚಯ ಕ್ರಿಯೆಯಲ್ಲಿ ಸಹ ಸಹಾಯ ಮಾಡುತ್ತಾರೆ.

ಇದರಲ್ಲಿರುವ ಮೆಗ್ನೀಸಿಯಮ್ ತೂಕವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಗೋಡಂಬಿಯನ್ನು ತಿನ್ನುವುದು ದೀರ್ಘಕಾಲದವರೆಗೆ ಹಸಿವನ್ನು ಅನುಭವಿಸದಂತೆ ಮಾಡುತ್ತದೆ ಮತ್ತು ಹಸಿವನ್ನು ನಿಯಂತ್ರಣದಲ್ಲಿಡುತ್ತದೆ, ತನ್ಮೂಲಕ ತೂಕವನ್ನು ಕಾಪಾಡಿಕೊಳ್ಳುತ್ತದೆ. ಗೋಡಂಬಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಇದರಲ್ಲಿ ಕಂಡುಬರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ತೂಕವನ್ನು ಹೆಚ್ಚಿಸಲು ಅನುಮತಿಸುವುದಿಲ್ಲ ಎನ್ನಲಾಗಿದೆ.

ಅವಳಿ ಬಾಳೆಹಣ್ಣಿಗೂ, ಟ್ವಿನ್ಸ್ ಮಕ್ಕಳಾಗೋದಕ್ಕೂ ಏನು ಸಂಬಂಧ! ಈ ಇಂಟ್ರೆಸ್ಟಿಂಗ್ ವಿಚಾರ ನೀವು ತಿಳಿಯಲೇಬೇಕು!

0

ಸಹಜವಾಗಿ ಎಲ್ಲರೂ ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಈ ಬಾಳೆಹಣ್ಣು ವರ್ಷವಿಡೀ ನಮಗೆ ಲಭ್ಯ. ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲದೆ ಆಧ್ಯಾತ್ಮಿಕವಾಗಿಯೂ ಅನೇಕ ಪ್ರಯೋಜನಗಳಿವೆ. ನಾವು ಬಾಳೆಹಣ್ಣು ಖರೀದಿಸಿದಾಗ, ಕೆಲವೊಮ್ಮೆ ಅವಳಿ ಬಾಳೆಹಣ್ಣುಗಳು ಸಿಗುತ್ತವೆ. ಅಂದರೆ ಒಂದು ಬಾಳೆಹಣ್ಣು ಮತ್ತೊಂದು ಬಾಳೆಗೆ ಅಂಟಿಕೊಂಡಿರುತ್ತದೆ. ಇದನ್ನು ಅವಳಿ ಬಾಳೆಹಣ್ಣು ಎಂದೂ ಕರೆಯುತ್ತಾರೆ..

ಕೆಲವು ದಂಪತಿಗಳಿಗೆ ಅವಳಿ ಮಕ್ಕಳಾಗಬೇಕು ಎಂಬ ಆಸೆಯಿರುತ್ತದೆ. ಆದಕ್ಕಾಗಿ ಔಷಧಿಗಳ ಮೊರೆ ಹೋಗುವವರು ಇದ್ದಾರೆ. ಇನ್ನು ಕೆಲವರು ಜಂಟಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತೆ ಎಂಬ ನಂಬಿಕೆ ಮೇಲೆ ಸೇವಿಸುತ್ತಾರೆ. ಆದರೆ ಇದು ಸತ್ಯವೇ? ಇದರ ಅಸಲಿಯತ್ತೇನು? ಇಲ್ಲಿದೆ ಉತ್ತರ.

ಅವಳಿ ಬಾಳಿಹಣ್ಣುಗಳನ್ನು ತಿನ್ನುವುದರಿಂದ ಅವಳಿ ಮಕ್ಕಳು ಜನಿಸುತ್ತಾರೆ ಎಂದು ಹಲವು ಜನರು ಅಂದುಕೊಂಡಿದ್ದಾರೆ. ಹಾಗಾದರೆ ಇದು ನಿಜಾನ ಎಂಬ ಪ್ರಶ್ನೆಗೆ, ಇಲ್ಲ ಎಂಬ ಉತ್ತರ ಬರುತ್ತದೆ. ಬಾಳೆಹಣ್ಣು ತಿನ್ನುವುದಕ್ಕೂ ಅವಳಿ ಮಕ್ಕಳಾಗುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತದೆ

ಇದು ಕೇವಲ ವದಂತಿ ಮತ್ತು ಮೂಢನಂಬಿಕೆ ಬಿಟ್ಟರೆ ಬೇರೇನೂ ಇಲ್ಲ. ಆದರೆ, ಈ ಕಥೆಯು ಪೂರ್ವಜರ ಪುರಾಣಗಳಾಗಿದೆ. ಪೂರ್ವಜರೊಂದಿಗೆ, ಶಿಕ್ಷಕರು ಸಹ ಅವಳಿ ಬಾಳೆಹಣ್ಣುಗಳನ್ನು ತಿನ್ನಲು ಕೇಳಿಕೊಳ್ಳುವುದರಿಂದ ಹುಟ್ಟಿಕೊಂಡ ಪುರಾಣವಾಗಿದೆ.

ಅದರೊಂದಿಗೆ ದೇವರಿಗೆ ಅವಳಿ ಬಾಳೆ ಹಣ್ಣನ್ನು ಕೊಡಬಾರದು ಎಂಬ ನಂಬಿಕೆಗಳಿವೆ. ಅದಕ್ಕಾಗಿಯೇ ನಾವು ಅವಳಿ ಬಾಳೆಹಣ್ಣುಗಳನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ಎಷ್ಟೋ ಸಲ ನಾವು ಖರೀದಿಸಿದ ಬಾಳೆಹಣ್ಣಿನಲ್ಲಿ ನಮಗೆ ತಿಳಿಯದೆ ಅವಳಿ ಬಾಳೆಹಣ್ಣುಗಳಿರುತ್ತವೆ. ಅವುಗಳನ್ನು ಮಕ್ಕಳು ಮತ್ತು ದೇವರ ಬದಲಿಗೆ ದೊಡ್ಡವರು ತಿನ್ನುತ್ತಾರೆ. ಹಾಗಾಗಿ ಅವಳಿ ಬಾಳೆಹಣ್ಣನ್ನು ಮಕ್ಕಳಿಗೆ ಕೊಟ್ಟರೆ ಅದರಲ್ಲೂ ಅವಿವಾಹಿತರು ತಿಂದರೆ ಅವಳಿ ಮಕ್ಕಳು ಹುಟ್ಟುತ್ತಾರೆ ಎಂಬುದು ಭಾರತೀಯರ ನಂಬಿಕೆಯಾದರೂ ವೈಜ್ಞಾನಿಕವಾಗಿ ಎಲ್ಲಿಯೂ ಸಾಬೀತಾಗಿಲ್ಲ.

ಭಾರತೀಯರಷ್ಟೇ ಅಲ್ಲ ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ದೇಶದವರೂ ಕೂಡ ಜೋಡಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತದೆ ಎಂಬ ನಂಬಿಕೆ ಹೊಂದಿದ್ದಾರೆ. ಈ ದೇಶಗಳಲ್ಲಿ ದಂಪತಿಗಳಿಬ್ಬರು ಅವಳಿ ಬಾಳೆಹಣ್ಣು ತಿಂದರೆ ಖಚಿತವಾಗಿ ಅವಳಿ ಮಕ್ಕಳಾಗುತ್ತದೆ ಎಂಬ ನಂಬಿಕೆ ಹೊಂದಿದ್ದಾರೆ.

ಆದರೆ ನಿಜಕ್ಕೂ ಅವಳಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತದೆ ಎಂಬ ವಿಚಾರ ವೈಜ್ಞಾನಿಕವಾಗಿ ಎಲ್ಲೂ ಸಾಬೀತಾಗಿಲ್ಲ. ಬಾಳೆಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದೇ ವಿನಃ, ಯಾವದೇ ರೀತಿಯ ತೊಂದರೆ ಇಲ್ಲ. ಇದರಿಂದ ದೇಹಕ್ಕೆ ನಾನಾ ಪ್ರಯೋಜನಗಳು ಸಿಗುತ್ತದೆ. ಬಾಳೆ ಹಣ್ಣಿನಲ್ಲಿ ಸಾಕಷ್ಟು ಪೊಟ್ಯಾಸಿಯಂ ಲಭ್ಯವಿದೆ. ಇದು ಗರ್ಭಿಣಿ ಮಹಿಳೆಯರೆಗೆ ಪೊಟ್ಯಾಸಿಯಂ ಅತ್ಯ ಅಗತ್ಯ. ಅಂದ ಮಾತ್ರಕ್ಕೆ ಬಾಳೆಹಣ್ಣನ್ನು ಹೆಚ್ಚು ತಿನ್ನಬಾರದು.

ಸಾಮಾನ್ಯವಾಗಿ ಒಂದು ಬಾಳೆಹಣ್ಣಿನಲ್ಲಿ 450 ಮಿಗ್ರಾಂ ಪೊಟ್ಯಾಷಿಯಂ ಇರುತ್ತದೆ. ಅಂದರೆ ಅವಳಿ ಬಾಳೆ ಹಣ್ಣಿನಲ್ಲಿ ಬರೋಬ್ಬರಿ 900 ಎಂಜಿ ಪೊಟ್ಯಾಷಿಯಂ ಇರುತ್ತದೆ. ಆದ್ದರಿಂದ ಇದನ್ನು ತಿಂದರೆ ಒಳ್ಳೆಯದು. ಯಾಕೆಂದರೆ ಒಂದು ದಿನಕ್ಕೆ ಮನುಷ್ಯನ ದೇಹಕ್ಕೆ ಶೇ40ರಷ್ಟು ಪೊಟ್ಯಾಷಿಯಂ ಅವಶ್ಯವಿರುತ್ತದೆ. ಆದ್ದರಿಂದ ಗರ್ಭಿಣಿಯರು ಹೆಚ್ಚು ಬಾಳೆಹಣ್ಣು, ಅದರಲ್ಲಿಯೂ ಅವಳಿ ಬಾಳೆ ಹಣ್ಣು ತಿನ್ನಬಾರದು ಎನ್ನಲಾಗುತ್ತದೆ.

error: Content is protected !!