Home Blog Page 2080

50 ಲಕ್ಷ ಹಣಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಬುಡಾ ಆಯುಕ್ತರು ಹಾಗೂ ಸದಸ್ಯ!

0

ಬೀದರ್:‌ ಲೇಔಟ್ ವಿನ್ಯಾಸ‌ ಪೂರ್ಣ ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯನ್ಬಿಟ್ಟಿದ್ದ ಬುಡಾ ಆಯುಕ್ತರು ಹಾಗೂ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ ಹಾಗೂ ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು,

ಬುಡಾದಿಂದ ಲೇಔಟ್ ವಿನ್ಯಾಸ‌ ಪೂರ್ಣ ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯನ್ನಿಟ್ಟು 10 ಲಕ್ಷ ರೂ. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ದಾಳಿ ಮಾಡಿದ್ದಾರೆ.

ಬುಡಾ ಆಯುಕ್ತರ ಆದೇಶದ ಮೇರೆಗೆ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಆಪ್ತ ಸಿದ್ದು ಹೂಗಾರ ರೆಡ್ ಹ್ಯಾಂಡಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಂತರ ಬೀದರ್‌ ನಗರದ ಸ್ವಪ್ನಾ ಹೋಟೆಲ್ ಬಳಿ ಆಯುಕ್ತರ‌ ಬಂಧನ ಮಾಡಲಾಗಿದ್ದು, ನಗರದ ಬಾಲಭವನದ ಬಳಿ ಇರುವ ಲೋಕಾಯುಕ್ತ ಪೊಲೀಸ್ ಠಾಣೆಗೆ ಮೂವರನ್ನು ಬಂಧಿಸಿ ಕರೆದೊಯ್ಯಲಾಗಿದೆ.

ಕೇವಲ ಒಂದು ಧರ್ಮ ಓಲೈಕೆಗಾಗಿ ವಕ್ಫ್ ಬಳಕೆ ಮಾಡಲಾಗಿದೆ: ಸಚಿವೆ ಶೋಭಾ ಕರಂದ್ಲಾಜೆ

0

ಬೆಂಗಳೂರು: ಕೇವಲ ಒಂದು ಧರ್ಮ ಓಲೈಕೆಗಾಗಿ ವಕ್ಫ್ ಬಳಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಖಾನ್ ಗೆ ಕಾನೂನು ಪ್ರಕಾರ ವಕ್ಫ್ ಅದಾಲತ್ ಮಾಡಲು ಅವಕಾಶ ಇಲ್ಲ. ಒತ್ತಡದ ಮೂಲಕ ಆಸ್ತಿಗೆ ನೋಟಿಸ್ ಕೊಡಲಾಗುತ್ತಿದೆ. ವಕ್ಫ್ ಟ್ರಿಬ್ಯೂನಲ್ ನಲ್ಲಿ ಯಾರಿಗೂ ನ್ಯಾಯ ಸಿಗುವುದಿಲ್ಲ. ಕೇವಲ ಒಂದು ಧರ್ಮ ಓಲೈಕೆಗಾಗಿ ವಕ್ಫ್ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು.

ರಾಜರಾಜ ಚೋಳನ ದೇವಸ್ಥಾನ ವಕ್ಫ್ ಆಸ್ತಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಊರಿಗೆ ಊರೇ ವಕ್ಫ್ ಆಗಿದೆ. ಹೊಯ್ಸಳ, ಚಾಲುಕ್ಯರು ಕಟ್ಟಿದ ದೇವಸ್ಥಾನ ವಕ್ಫ್ ಆಗಿದೆ. ಈ ಹಿನ್ನೆಲೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಯಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ಸಂಸದರ ಮನೆ ಮುಂದೆ ಹೋಗಿ ವಕ್ಫ್ ಬಿಲ್ ಪಾರ್ಲಿಮೆಂಟ್ ನಲ್ಲಿ ಬಂದಾಗ ಬೆಂಬಲ ಕೊಡಲು ಸೂಚಿಸಬೇಕು. ವಕ್ಫ್ ಗೆಜೆಟ್ ನೋಟಿಫಿಕೇಷನ್ ರದ್ದಾಗಬೇಕು ಎಂದು ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿದ ಹೈಕೋರ್ಟ್!

0

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ ಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ನನ್ನು ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್‌ಐಟಿ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿತ್ತು. ಪ್ರಕರಣ ಸಂಬಂಧ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.

 

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು: ಓಡೋಡಿ ಬಂದು ಚಿಕಿತ್ಸೆ ಕೊಟ್ಟ ವೈದ್ಯೆ!

0

ಚಿಕ್ಕಮಗಳೂರು:- ವೈದ್ಯರೋರ್ವರು ಕಾರು ಹರಿದು ಗಾಯಗೊಂಡಿದ್ದ ನಾಗರಹಾವಿಗೆ ಚಿಕಿತ್ಸೆ ನೀಡಿದ ಒಂದು  ಅಮೂಲ್ಯ ದೃಶ್ಯ ಕಂಡು ಬಂದಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಜರುಗಿದೆ.

ಹಾವೊಂದರ ಮೇಲೆ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹರಿದಿದೆ. ಪರಿಣಾಮ ಹಾವು ಹಾಗೂ ಅದರ ಮರಿ ಗಂಭೀರವಾಗಿ ಗಾಯಗೊಂಡಿದ್ದವು. ಎರಡೂ ಹಾವನ್ನು ಉರಗ ತಜ್ಞ ಆರೀಫ್ ಪಶು ಆಸ್ಪತ್ರೆಗೆ ತಂದಿದ್ದರು. ಹಾವಿಗೆ ಪಶುವೈದ್ಯಾಧಿಕಾರಿ ಚೈತ್ರ ಅವರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೈದ್ಯರು ನೀಡಿದ ಔಷಧಿಯನ್ನು ಆರೀಫ್ ಹಚ್ಚಿದ್ದಾರೆ. ಬಳಿಕ ಹಾವುಗಳು ಚೇತರಿಸಿಕೊಂಡಿದ್ದು, ಅವನ್ನು ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ: ಆರ್ ಅಶೋಕ್

0

ಬೆಂಗಳೂರು: ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಂದರೆ ನಕ್ಸಲರಿಗೆ, ಲವ್ ಜಿಹಾದಿಗಳಿಗೆ ಹಬ್ಬ. ವಕ್ಫ್ ಬೋರ್ಡ್ ಗೆ ನ್ಯಾಯಾಂಗದ ಅಧಿಕಾರ ಕೊಡಲಾಗಿದೆ. ರಾಜ್ಯದಲ್ಲಿ ತಮ್ಮ ಜಮೀನನ್ನು ರೈತರು ಹುಡುಕುತ್ತಿದ್ದಾರೆ ಎಂದು ಹೇಳಿದರು.

ವಕ್ಫ್ ಬೋರ್ಡ್ ಕ್ಯಾನ್ಸರ್, ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಲಾಲ್ ಬಾಗ್, ವಿಧಾನಸೌಧ ನಮ್ಮದು ಎಂದು ಹೇಳುತ್ತಿದ್ದಾರೆ‌. ಒಳ್ಳೊಳ್ಳೆ ಜಮೀನು ಇರುತ್ತದೆ ಅದು ವಕ್ಫ್ ಬೋರ್ಡ್ ಆಗಿದೆ. ಬಡವರು, ರೈತರು ಕಂಗಾಲಾಗಿದ್ದಾರೆ‌. ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌. ಸಿದ್ದರಾಮಯ್ಯ ಮುಸ್ಲಿಮರ ಚಾಂಪಿಯನ್ ಆಗಲು ಹೊರಟಿದ್ದಾರೆ ಎಂದರು.

Crime News: ಪೊಲೀಸರ ಕಾರ್ಯಾಚರಣೆ: ಇಬ್ಬರು ಮೊಬೈಲ್ ಕಳ್ಳರ ಬಂಧನ

0

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಪೊಲೀಸರ ಕಾರ್ಯಾಚರಣೆ ನಡೆಸಿ ಇಬ್ಬರು ಮೊಬೈಲ್ ಕಳ್ಳರನ್ನು ಅರೆಸ್ಟ್‌ ಮಾಡಿದ್ದಾರೆ. ಚಾಕಾಲಿ ಮನೋಹರ(24) ಮತ್ತು ಕೊಮ್ಮು ಪ್ರಶಾಂತ್ (24) ಬಂಧಿತ ಆರೋಪಿಗಳಾಗಿದ್ದು, ಬಿಎಂಟಿಸಿ ಬಸ್ ಗಳ ಪ್ರಯಾಣಿಕರನ್ನು ಟಾರ್ಗೆಟ್‌ ಮಾಡಿ 10 ರಿಂದ 20 ಸಾವಿರ ಬೆಲೆಯ ಮೊಬೈಲ್ ಗಳನ್ನೇ ಕದಿಯುತ್ತಿದ್ದರು.

ಮೊಬೈಲ್ ಕದ್ದು ಆಂಧ್ರಕ್ಕೆ ಹೊರಟಿದ್ದ ವೇಳೆ ಯಶವಂತಪುರ ರೈಲ್ವೇ ಸ್ಟೇಷನ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಒಟ್ಟು 15 ಲಕ್ಷ ಮೌಲ್ಯದ 60 ಮೊಬೈಲ್ ಫೋನ್ ವಶಕ್ಕೆ ಪಡೆದು, ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು: ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ: ಸಿಎಂ

0

ಮೈಸೂರು ನ 22: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಶಿಕ್ಷಣ ಸಿಕ್ಕರೆ ಸಾಲದು. ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದು, ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ತಾನೇ? ಸಾಮಾಜಿಕ ತಾರತಮ್ಯ ಹೋಗಬೇಕೂ ತಾನೇ ಎಂದು ಪ್ರಶ್ನಿಸಿದರು. ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ ಎಂದು ಪ್ರಶ್ನಿಸಿದರು.

ಬಸವಣ್ಣನವರು ಜಾತಿ ವ್ಯವಸ್ಥೆ ವಿರುದ್ಧ ಸಂದೇಶ ಕೊಟ್ಟು 850 ವರ್ಷ ಆಯ್ತು. ಆದರೆ ಇವತ್ತೂ ಅವರೆಲ್ಲಾ ಜಾತಿ ಮಾಡ್ತಾನೇ ಇದಾರೆ. ಇದು ತಪ್ಪಲ್ವಾ ಎಂದು ಪ್ರಶ್ನಿಸಿದರು.ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಹಣೆಬರಹ ಅನ್ನೋದನ್ನೆಲ್ಲಾ ಧಿಕ್ಕರಿಸಿದ್ದರು. ಆದರೂ ಈಗಲೂ ಬಸವಣ್ಣನವರ ಹೆಸರಲ್ಲಿ ಕರ್ಮಸಿದ್ಧಾಂತ ಪಾಲಿಸುವ ಶಿಕ್ಷಿತರಿದ್ದಾರೆ. ಇಂಥಾ ಶಿಕ್ಷಣ ಬೇಡವೇ ಬೇಡ ಎಂದರು.

ನಮ್ ಜಾತಿಯವನು ಅದ್ಕೆ ಓಟು ಹಾಕಿ: ಸಿ.ಎಂ ವ್ಯಂಗ್ಯ

ಹೇಳಿಕೊಳ್ಳೋಕೆ ವಿದ್ಯಾವಂತರು. ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಶಾಸಕರೊಬ್ಬರ ಮಾತನ್ನು ಸ್ಮರಿಸಿದ ಸಿಎಂ, ಅವರು ರಾತ್ರಿ ಮಲಗುವಾಗಲೂ ಕೈ ಮುಗಿಯುತ್ತಲೇ ಮಲಗೋದಂತೆ. ಕೈ ಮುಗಿಯೋದು ರೂಢಿ ಆಗೋಗಿತ್ತು. ಇಂಥವರೆಲ್ಲಾ ಈಗ ರಾಜಕಾರಣಕ್ಕೆ ಬರ್ತಿದ್ದಾರೆ. ವಿದ್ಯಾವಂತ ಜಾತಿವಾದಿಗಳಿಂದ ಇಂಥವರು ಬರ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ಧಾರ್ಥ ಸಂಸ್ಥೆಯ ಅಧ್ಯಕ್ಷರಾದ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ , ಶಾಸಕರಾದ ತನ್ವೀರ್ ಸೇಠ್ , ಕೃಷ್ಣಮೂರ್ತಿ, ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ: ಮಧು ಬಂಗಾರಪ್ಪ

0

ಬೆಂಗಳೂರು: ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಲೋಕಲ್‌ನಲ್ಲಿ ಇರುವವರು ಕೆಲಸ ಮಾಡಿದ್ದಾರೆ. ಜನರು ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್‌ಗೆ ಬಂದಿದ್ದಕ್ಕೆ ಯಾರ ವಿರೋಧವೂ ಇಲ್ಲ.

ಯೋಗೇಶ್ವರ್ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ. ಸೋತರೂ ಗೆದ್ದರೂ ಯಾರು ಜನರ ಜೊತೆ ಇರುತ್ತಾರೋ ಅವರನ್ನ ಜನ ಗೆಲ್ಲಿಸುತ್ತಾರೆ ಎನ್ನುವ0 ವಿಶ್ವಾಸವಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ. ಸಂಡೂರಿನಲ್ಲಿ ತುಕಾರಾಂ ಪತ್ನಿ ಕೂಡಾ ಗೆಲ್ಲುತ್ತಾರೆ ಎಂದರು.

ಇನ್ನೂ ಉಪಚುನಾವಣೆ ರಾಜ್ಯ ರಾಜಕೀಯಕ್ಕೆ ದಿಕ್ಸೂಚಿ ಎಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಕಿಡಿಕಾರಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏನು ಚಾಳಿ ಇದೆ ಗೊತ್ತಿಲ್ಲ. 136 ಜನ ಗೆದ್ದು ಹಳೆ ಚಾಳಿನಾ ಮತ್ತೆ ತರಲು ವ್ಯವಸ್ಥೆ ಮಾಡಿದರೆ ಅವರನ್ನು ಎಷ್ಟು ದಡ್ಡರು ಎಂದು ಹೇಳಬೇಕು ಗೊತ್ತಿಲ್ಲ. 136 ಜನರನ್ನ ಈ ರಾಜ್ಯದ ಜನರು ಮತ ಹಾಕಿ ಗೆಲ್ಲಿಸಿದ್ದಾರೆ. ಬಿಜೆಪಿಯನ್ನ ಹೀನಾಯವಾಗಿ ಸೋಲಿಸಿ ಗೆಲ್ಲಿಸಿದ್ದಾರೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ನಿಮಗೆ ಅಚ್ಚರಿ ಆಗುವಂತಹ ಫಲಿತಾಂಶ ಬರುತ್ತದೆ: ಸಚಿವ ಪರಮೇಶ್ವರ್

0

ಮೈಸೂರು: ಉಪ ಚುನಾವಣೆಯಲ್ಲಿ ನಿಮಗೆ ಅಚ್ಚರಿ ಆಗುವಂತಹ ಫಲಿತಾಂಶ ಬರುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಳೆ ಉಪಚುನಾವಣೆಯ ಮೂರೂ ಕ್ಷೇತ್ರಗಳ ಫಲಿತಾಂಶ ಬರಲಿದೆ.

ಉಪ ಚುನಾವಣೆಯಲ್ಲಿ ನಿಮಗೆ ಅಚ್ಚರಿ ಆಗುವಂತಹ ಫಲಿತಾಂಶ ಬರುತ್ತದೆ. ಮೂರಕ್ಕೆ ಮೂರು ಸ್ಥಾನವನ್ನ ಕಾಂಗ್ರೆಸ್ ಗೆಲ್ಲಲ್ಲಿದೆ ಎಂದು ಗೃಹ ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಮಹಾರಾಷ್ಟ್ರದಲ್ಲೂ ನಮ್ಮದೇ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಎಕ್ಸಿಟ್ ಪೋಲ್ ಕೂಡಾ ನಮ್ಮ ಪರವಾಗಿ ಹೇಳಿದ್ದಾರೆ. ಅದರ ಮೇಲೆ ಫಲಿತಾಂಶ ನಿರ್ಧಾರವಾಗುವುದಿಲ್ಲ, ಆದರೆ ಎರಡು ಸಂಸ್ಥೆಗಳು ನಮ್ಮ ಮೈತ್ರಿ ಗೆಲ್ಲುತ್ತೆ ಅಂತ ಹೇಳಿದೆ ಎಂದರು.

ಹಳೇ ದ್ವೇಷ; ಮಚ್ಚಿನಿಂದ ಕೊಚ್ಚಿ ಸೆಕ್ಯೂರಿಟಿ ಗಾರ್ಡ್ ಹತ್ಯೆ!

0

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕು ಹೆಗ್ಗನಹಳ್ಳಿ ಗ್ರಾಮದ ಬಳಿ ನಡೆದಿದೆ. ದೇವನಹಳ್ಳಿ ತಾಲ್ಲೂಕು ಬೋವಿ ಪಾಳ್ಯ ಗ್ರಾಮದ ಶ್ರೀನಿವಾಸ್ (32) ಕೊಲೆಯಾದ ವ್ಯಕ್ತಿಯಾಗಿದ್ದು,

ಬೋವಿಪಾಳ್ಯ ಗ್ರಾಮದ ಗೋವಿಂದರಾಜು, ಮನೋಜ್, ತಿಮ್ಮರಾಜು ಮತ್ತು ಮಂಜುನಾಥ್ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಮಚ್ಚು, ಚಾಕು & ಕಬ್ಬಿಣದ ರಾಡ್ ನಿಂದ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಗಣೇಶ ವಿಸರ್ಜನೆ ವೇಳೆಯಲ್ಲಿ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ಆದ್ದರಿಂದ ನಾಲ್ವರು ಸ್ನೇಹಿತರು ಸೇರಿ ಬೋವಿಪಾಳ್ಯ ಹೊರವಲಯದ ಎಂಬಾಸಿ ಕಂಪನಿ ಜಾಗದಲ್ಲಿ ಚಾಕು, ಮಚ್ಚಿನಿಂದ ಚುಚ್ಚಿ ಬರ್ಬರವಾಗಿ ಕೊಲೆಮಾಡಿದ್ದಾರೆ. ನಂತರ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!