Home Blog Page 2082

ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್: ಮೂವರಿಗೆ ಚಾಕುವಿನಿಂದ ಇರಿತ!

0

ಬೆಂಗಳೂರು:- ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಮೂವರಿಗೆ ಚಾಕುವಿನಿಂದ ಇರಿದ ಘಟನೆ ಜರುಗಿದೆ.

ಇಬ್ಬರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿದೆ. ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ಆತನ ಸ್ನೇಹಿತರೊಂದಿಗೆ ಸೇರಿಕೊಂಡು, ಮತ್ತೊಂದು ವಿದ್ಯಾರ್ಥಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಲ್ಮೆಟ್‍ಗಳಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್​ಗೆ ಜಾಮೀನು ನೀಡಬಾರದೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರ್

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ವೈದ್ಯಕೀಯ ಕಾರಣದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ.ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕೋರ್ಟ್ ಆರು ವಾರಗಳ ಕಾಲ ಮಂಧ್ಯಂತರ ಜಾಮೀನು ಮಂಜೂರು ಮಾಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ವಿಚಾರಣೆಯನ್ನು ಮತ್ತೆ ಮುಂದಾಡಲಾಗಿದೆ. ಇತ್ತ ದರ್ಶನ್ಕೇಸ್ ಬಗ್ಗೆ ಮಾತಾಡಿದ ಗೃಹ ಸಚಿವ ಪರಮೇಶ್ವರ್ ದರ್ಶನ್ಗೆ ಬೇಲ್ಕೊಡಬಾರದು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

ನಟ ದರ್ಶನ್​ ಕೇಸ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್​, ದರ್ಶನ್ ಅವರು ಚಿಕಿತ್ಸೆ ಪಡೆಯಲೆಂದು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. 3 ವಾರಗಳ ಕಾಲಾವಕಾಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ದರ್ಶನ್​ ಜೈಲು ಸೇರಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದ್ರು.

ಅದಕ್ಕೂ ಮುನ್ನ ಮತ್ತೆ ದರ್ಶನ್​ ಬೇಲ್ ಕೇಳಬಹುದು, ವಿಚಾರಣೆ ನಡೆಯಬಹುದು.  ನಾವು ಕೂಡ ದರ್ಶನ್​ಗೆ ಬೇಲ್ ಕೊಡಬಾರದು ಅಂತ ಸುಪ್ರೀಂ ಕೋರ್ಟ್​ಗೆ ಅರ್ಜಿ ಹಾಕುತ್ತೇವೆ. ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಕೂಡ ನಡೆದಿದೆ ಎಂದರು.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ಬೇಲ್ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಕೇಸ್ ಹೆಚ್ಚುವರಿ ಆರೋಪ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಲಾಗಿದೆ. ಇದೇ ವೇಳೆ ನಟ ದರ್ಶನ್ ಅವರ ವೈದ್ಯಕೀಯ ವರದಿಯನ್ನು ತಮಗೆ ನೀಡಿಲ್ಲವೆಂದು ಎಸ್ ಪಿಪಿ ವಾದ ಮಂಡಿಸಿದ್ರು. ದರ್ಶನ್ ಪರ ವಕೀಲರಾದ ನಾಗೇಶ್ಅವರು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ರು. ಬಳಿಕ ದರ್ಶನ್ ವೈದ್ಯಕೀಯ ವರದಿ ನ್ಯಾ. ವಿಶ್ವಜಿತ್ ಶೆಟ್ಟಿ ಪರಿಶೀಲಿಸಿದ್ರು. ಇದರ ಒಂದು ಪ್ರತಿಯನ್ನು ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲು  ನ್ಯಾಯ ಮೂರ್ತಿಗಳು ಸೂಚನೆ ನೀಡಿದರು.

ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಗೆ ಆರು ವಾರಗಳ ಮಂಧ್ಯಂತರ ಜಾಮೀನು ನೀಡಲಾಗಿದೆ. ಆದರೆ ಇದುವರೆಗೂ ದರ್ಶನ್ ಯಾವುದೇ ಸರ್ಜರಿಗೆ ಒಳಗಾಗಿಲ್ಲ. ಜೊತೆಗೆ ಸರ್ಜರಿ ದಿನಾಂಕವನ್ನು ತಿಳಿಸಲಿಲ್ಲವೆಂದು ಎಸ್ ಪಿ ಪ್ರಸನ್ನ ಕುಮಾರ್ ದರ್ಶನ್ ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಶ್ನೆ ಮಾಡಿದ್ರು. ಬಳಿಕ ದರ್ಶನ್ ಪರ ವಕೀಲರು ಎಸ್​ಪಿಪಿಗೂ ದರ್ಶನ್ ವೈದ್ಯಕೀಯ ವರದಿಯ ಪ್ರತಿಯನ್ನು ನೀಡಿದ್ರು. ಕೆಲ ಕಾಲ ವಾದ ಆಲಿಸಿದ ನ್ಯಾಯಾದೀಶರು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದ್ದಾರೆ.

ಮಂಗನಬಾವು ಕಾಯಿಲೆ: ಒಂದೇ ದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

0

ಕಾರವಾರ:- ಒಂದೇ ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಂಗನಬಾವು ಕಾಯಿಲೆ ಕಾಣಿಸಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಜರುಗಿದೆ.

ಇನ್ನೂ ಮಕ್ಕಳನ್ನು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ಬೃಂದಾವನ ವಸತಿ ಬಡಾವಣೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿ ಓದುತ್ತಿರುವ 205 ವಿದ್ಯಾರ್ಥಿಗಳಿದ್ದಾರೆ.

ಇವರ ಪೈಕಿ ಬುಧವಾರ 25 ಜನರಲ್ಲಿ ಕಾಣಿಸಿಕೊಂಡಿತ್ತು. ಆದರೆ, ಇದೀಗ ಮಂಗನಬಾವು ಕಾಯಿಲೆ ಇತರೆ ವಿದ್ಯಾರ್ಥಿಗಳಿಗೂ ಹಬ್ಬಿದ್ದು, 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸೋಂಕಿಗೆ ಒಳಗಾಗಿದ್ದಾರೆ.

ಒಟ್ಟು 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಈ ಮಂಗನಬಾವು ಕಾಣಿಸಿಕೊಂಡಿದ್ದು, ಸದ್ಯ ಕೆಲವು ಮಕ್ಕಳಿಗೆ ಮುಂಡಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿ ಡಾ.ಭರತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರಣಿ ಅಪಘಾತ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಟ್ರಾಫಿಕ್ ಜಾಮ್!

0

ಬೆಂಗಳೂರು:- ಸರಣಿ ಅಪಘಾತ ಸಂಭವಿಸಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಇಂದು ರಾತ್ರಿ ಜರುಗಿದೆ.

ಅತಿವೇಗವಾಗಿ ಕಾರು ಬಂದ ಪರಿಣಾಮ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆ ಕಾರು ಇನ್ನೊಂದು ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಘಟನೆಯಲ್ಲಿ ಒಟ್ಟು ಮೂರು ಕಾರುಗಳು ಹಾಗೂ ಬೈಕ್ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಇನ್ನೂ ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

ಸಮವಸ್ತ್ರದಲ್ಲೇ ಕಿರಿಕ್: ಠಾಣೆಯಲ್ಲೇ ಕಚ್ಚಾಡಿಕೊಂಡ ಪೊಲೀಸರು!

0

ಬೆಂಗಳೂರು:- ಪೊಲೀಸ್ರು ಅಂದ್ರೆ ಶಿಸ್ತಿನ ಸಿಪಾಯಿಗಳು ಅಂತಾರೆ. ಆದ್ರೆ ಈ ಪೊಲೀಸ್ರನ್ನ ನೋಡಿದ್ರೆ ಇವ್ರೇನೂ ಪೊಲೀಸ್ರ ಇಲ್ಲ ಪುಂಡರ ಅನ್ನೋ ಅನುಮಾನ ಮೂಡುತ್ತೆ. ಪೊಲೀಸ್ ಠಾಣೆಯಲ್ಲೆ ಅದು ಸಮವಸ್ತ್ರದಲ್ಲೆ ಪೊಲೀಸರು ಗಲಾಟೆ ಮಾಡಿಕೊಂಡಿದ್ದಾರೆ.

ಪೊಲೀಸ್ ಇಲಾಖೆ ತಲೆತಗ್ಗಿಸುವಂತ ಘಟನೆ ಇದಾಗಿದ್ದು, ಈ ಗಲಾಟೆಯಲ್ಲಿ ಇನ್ಸ್ಪೆಕ್ಟರ್, ಎ ಎಸ್ ಐ ಹಾಗೂ ಸಿಬ್ಬಂದಿ ಗಲಾಟೆ ಮಾಡಿಕೊಂಡಿದ್ದಾರೆ. ಅದ್ರಲ್ಲೂ ಹೆಡ್ ಕಾನ್ಸ್‌ಟೇಬಲ್ ಕದಂಬ ಅನ್ನೋ ಸಿಬ್ಬಂದಿ ಮತ್ತೊಬ್ಬ ಸಿಬ್ಬಂದಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಇದೇ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಒಂದಷ್ಟು ಆರೋಪ ಕಮಿಷನರ್ ಗೆ ಕೆಲ ಸಿಬ್ಬಂದಿ ಪತ್ರ ಬರೆದಿದ್ರು. ಸದ್ಯ ಗಲಾಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದಾಶಿವನಗರ ಫೊಲೀಸ್ ಠಾಣೆಯಲ್ಲಿ ಪೊಲೀಸರ ಗಲಾಟೆ ವಿಡಿಯೋ ವೈರಲ್ ಆಗ್ತಿದೆ.

ಇನ್ಸ್ಪೆಕ್ಟರ್ ಗಿರೀಶ್ ,ಹೆಡ್ ಕಾನ್ ಸ್ಟೇಬಲ್ ಕದಂಬ,ASI ರಂಗಸ್ವಾಮಿ, HC ವಸಂತ ನಡುವೆ ಗಲಾಟೆ ಆಗಿದ್ದು, ಬಾಯಿಗೆ ಬಂದಂತೆ ಬೈದಾಡಿಕೊಂಡಿರೋ ಪೊಲೀಸ್ ಸಿಬ್ಬಂದಿ ನಡೆ ಸಾರ್ವಜನಿಕರ ವಲಯದಲ್ಲಿ ನಗೆಪಾಟಲಿಗೀಡಾಗಿದೆ.

ಇನ್ನೂ ಪೊಲೀಸರ ಗಲಾಟೆ ನೋಡಿ ದೂರು ಕೊಡಲು ಬಂದವರೆ ಕಂಗಾಲಾಗಿದ್ದಾರೆ. ಮಹಿಳಾ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದ ಬಳಸಿ ಗಲಾಟೆ ಮಾಡಿಕೊಂಡಿರೋ ಪೊಲೀಸ್ರ ಈ ನಡೆ ಎಷ್ಟು ಸರಿ ಅನ್ನೋದು ಅವರೇ ಹೇಳಬೇಕು.

ಸಂಬಂಧಿಕನಿಂದಲೇ ವೃದ್ಧ ದಂಪತಿ ಕೊಲೆ: ಹಣಕ್ಕಾಗಿ ನಡೀತಾ ಜೋಡಿ ಮರ್ಡರ್!

0

ಚಿಕ್ಕಮಗಳೂರು:- ಹಣಕ್ಕಾಗಿ ಸಂಬಂಧಿಕನಿಂದಲೇ ವೃದ್ಧ ದಂಪತಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ಜರುಗಿದೆ.

ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ತುಮಕೂರು ಜಿಲ್ಲೆ ಗುಬ್ಬಿ ಮೂಲದ ದಂಪತಿಗಳಾದ 65 ವರ್ಷದ ಬಸಪ್ಪ, 58 ವರ್ಷದ ಲಲಿತಮ್ಮ ಮೃತ ದುರ್ದೈವಿಗಳು ಎನ್ನಲಾಗಿದೆ.

ವೃದ್ಧ ದಂಪತಿಯ ಸಂಬಂಧಿಕನೊಬ್ಬ ಆಗಾಗ್ಗೆ ಹಣಕ್ಕೆ ಪೀಡಿಸುತ್ತಿದ್ದ. ಅದೇ ರೀತಿ ಇಂದು ಸಹ ಹಣಕ್ಕಾಗಿ ಪೀಡಿಸಿದ್ದಾನೆ, ಹಣ ಕೊಡದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಇಬ್ಬರನ್ನು ಕೊಂದು ಪರಾರಿಯಾಗಿದ್ದಾನೆ.

ಈ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯ UPI ವಹಿವಾಟು ವಿವರ ಇಲ್ಲಿದೆ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸಿ, ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯಾಚರಣೆಯನ್ನು ಉತ್ತಮಪಡಿಸಲು ನಗದು ರಹಿತ UPI ವಹಿವಾಟುಗಳ ಮೂಲಕ ಟಿಕೆಟ್ ವಿತರಣೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ, ಪೆಬ್ರುವರಿ-2024ರಂದು ಪೂರ್ಣ ಪ್ರಮಾಣದಲ್ಲಿ ಸಂಸ್ಥೆಯ 50 ಘಟಕಗಳಲ್ಲಿ ಅಳವಡಿಸಲಾಗಿದೆ.

ನ.20ರವರೆಗೆ UPI ವಹಿವಾಟಿನಿಂದ ಒಟ್ಟು 65 ಲಕ್ಷ ರೂ ವಹಿವಾಟು (Transaction)ಗಳಿಂದ ರೂ. 60 ಕೋಟಿ ಸಂಗ್ರಹವಾಗಿದೆ. ಪ್ರಸ್ತುತ ಪ್ರತಿ ದಿನ ಸರಾಸರಿ 24000 ವಹಿವಾಟುಗಳಿಂದ ರೂ.25 ಲಕ್ಷಗಳಷ್ಟು ಸಂಗ್ರಹವಾಗುತ್ತಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಭಾ.ಆ.ಸೇ. ರವರು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಾಲೇಜು ವಿದ್ಯಾರ್ಥಿಗಳಿಗಾಗಿ ರಂಗ ತರಬೇತಿ ಕಾರ್ಯಗಾರ’ ಉದ್ಘಾಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಮತ್ತು ನಟರಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ‘ಕಾಲೇಜು ವಿದ್ಯಾರ್ಥಿಗಳಿಗಾಗಿ ರಂಗ ತರಬೇತಿ ಕಾರ್ಯಗಾರ’ವನ್ನು ಹಮ್ಮಿಕೊಂಡಿದೆ.

ಕಾರ್ಯಗಾರದ ಉದ್ಘಾಟನೆಯು ನ. 22ರಂದು ಬೆಳಿಗ್ಗೆ 11 ಗಂಟೆಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ನೆರವೇರುವುದು. ಕಾರ್ಯಾಗಾರದ ಉದ್ಘಾಟಕರಾಗಿ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಗಾಯತ್ರಿ ಹಡಪದ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಡಾ. ಜಿ.ಬಿ. ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಸಾಹಿತಿ ಟಿ.ಎಸ್. ಗೊರವರ, ನಿವೃತ್ತ ಶಿಕ್ಷಕ ಮಹಾಂತೇಶ ಹೂಗಾರ, ನಟರಂಗ ಸಂಸ್ಥೆಯ ಸೋಮು ಚಿಕ್ಕಮಠ ಉಪಸ್ಥಿತರಿರುತ್ತಾರೆ.

ಕಾರ್ಯಾಗಾರದುದ್ದಕ್ಕೂ ನಡೆಯುವ ನಾಟಕ ನಿರ್ದೇಶನವನ್ನು ಮೈಸೂರಿನ ಮಹೇಶ್ ರಂಗಾಯಣ ತರಬೇತಿ ನೀಡಲಿದ್ದಾರೆಂದು ಕಾರ್ಯಾಗಾರದ ಸಂಚಾಲಕರಾದ ಡಾ. ಅಂದಯ್ಯ ಅರವಟಗಿಮಠ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸುಖ ಶಾಂತಿ ಜೀವನ ಪ್ರಾಪ್ತವಾಗಲು ಧರ್ಮಾಚರಣೆ ಮಾಡಬೇಕು: ರಂಭಾಪರಿ ಶ್ರೀ

0

ವಿಜಯಸಾಕ್ಷಿ ಸುದ್ದಿ, ಬಸವಾಪಟ್ಟಣ: ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ ಶಾಂತಿ ಜೀವನ ಪ್ರಾಪ್ತವಾಗಲು ಮೊದಲು ಧರ್ಮಾಚರಣೆಯನ್ನು ಮಾಡಬೇಕಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಗುರುವಾರ ತೊಟ್ಟಿಮನೆ ವಂಶಸ್ಥರು ನಿರ್ಮಿಸಿದ ಶ್ರೀ ಗಂಗಾಧರೇಶ್ವರಸ್ವಾಮಿ ನೂತನ ದೇವಾಲಯ ಉದ್ಘಾಟಿಸಿ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ, ನಂತರ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಬಾಳ ಬದುಕಿಗೆ ಧರ್ಮದ ಬೆಳಕು ಬೇಕು. ಬೆಳಕಿಲ್ಲದ ಬಾಳಿಗೆ ಬೆಲೆ ನೆಲೆಯಿಲ್ಲ. ಬೆಳಕಿದ್ದರೆ ಯಾವುದರ ಭಯವೂ ಮನುಷ್ಯನಿಗೆ ಇರುವುದಿಲ್ಲ. ಇಹ ಪರ ಜೀವನದ ಶ್ರೇಯಸ್ಸಿಗೆ ಧರ್ಮವೇ ಮೂಲವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ್ದಾರೆ. ಅಹಿಂಸಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳು ಬದುಕಿ ಬಾಳುವ ಜನಾಂಗಕ್ಕೆ ದಾರಿ ದೀಪ. ಅರಿವಿನ ದಾರಿಯಲ್ಲಿ ಮುನ್ನಡೆಸುವುದೇ ಗುರುವಿನ ಪರಮ ಧರ್ಮವಾಗಿದೆ. ಒಂದು ನಿಶ್ಚಿತ ಗುರಿ ಮತ್ತು ಒಬ್ಬ ಶ್ರೇಷ್ಠ ಗುರುವಿನ ಸಹಯೋಗದಿಂದ ಬದುಕು ಉಜ್ವಲಗೊಳ್ಳುತ್ತದೆ. ಸುಖ ಬಯಸುವ ಮನುಷ್ಯ ಧರ್ಮಾಚರಣೆ ಮಾಡಲು ಹಿಂಜರಿಯುತ್ತಾನೆ. ರ್ದುಖವನ್ನು ಯಾರೂ ಬಯಸುವುದಿಲ್ಲ. ಆದರೆ ಧರ್ಮ ಪರಿಪಾಲನೆ ಮಾಡಲಾರ. ಸತ್ಯ ಶುದ್ಧ ಸೈದ್ಧಾಂತಿಕ ತಳಹದಿಯ ಮೇಲೆ ಮಾನವ ಜೀವನ ರೂಪಿತಗೊಳ್ಳಬೇಕಾಗಿದೆ ಎಂದರು.

ಕರ್ಪುರವಳ್ಳಿ ಚಂದ್ರಶೇಖರ ಶಿವಾಚಾರ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಿ.ಸಿ. ನಂಜುAಡಶೆಟ್ಟಿ, ಬಿ.ಎಸ್. ಮಹದೇವಪ್ಪ, ಬಿ.ಜಿ. ಕರುಣೇಶ್, ಬಿ.ಜಿ. ಶ್ರೀಕಂಠಶೆಟ್ಟಿ, ಬಿ.ಜಿ. ಷಡಕ್ಷರಶೆಟ್ಟರ ಹಾಗೂ ಬಿ.ಜಿ. ದೊಡ್ಡೇಶ ಬಾಬು ಮೊದಲಾದವರು ಉಪಸ್ಥಿತರಿದ್ದು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು. ತೊಟ್ಟಿಮನೆ ಮಹದೇವಪ್ಪನವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

20 ದಿನದಲ್ಲಿ ಕೆಲಗೇರಿ ಕೆರೆ ಸ್ವಚ್ಛಗೊಳಿಸಿ, ಸುಂದರಗೊಳಿಸದಿದ್ದರೆ ಕಠಿಣ ಕ್ರಮ: ಕೆ.ಎನ್. ಫಣೀಂದ್ರ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರು 1911ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗAಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ ಗಡುವು ನೀಡುತ್ತೇನೆ. ಈ ಕುರಿತು ಆಗಿರುವ ಕರ್ತವ್ಯಲೋಪ ಗುರುತಿಸಿ, ಸೂಕ್ತ ತನಿಖೆ ಕೈಗೊಳ್ಳಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುತ್ತಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ತಿಳಿಸಿದರು.

ಅವರು ಧಾರವಾಡ ನಗರದ ಕೆಲಗೇರಿ ಕೆರೆಗೆ ಭೇಟಿ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಉಪ ಲೋಕಾಯುಕ್ತ ನ್ಯಾಮೂರ್ತಿಗಳು ಸಾರ್ವಜನಿಕರೊಂದಿಗೆ ಸ್ವತಃ ಎರಡು ಕೀ.ಮಿ ನಡೆಯುವ ಮೂಲಕ ಕೆರೆಯ ಅವ್ಯವಸ್ಥೆ ಪರಿಶೀಲಿಸಿದರು.

ಕೆರೆ ನಿರ್ವಹಣೆ ಹಾಗೂ ಕೆರೆ ಮಾಲಿಕತ್ವ ಸೇರಿದಂತೆ ಎಲ್ಲರನ್ನು ಈ ಪ್ರಕರಣದಲ್ಲಿ ಪಾರ್ಟಿ ಮಾಡಲಾಗುತ್ತದೆ. ಕೆರೆಗೆ ಸಂಬAಧಿಸಿದ ಎಲ್ಲ ದಾಖಲೆಗಳನ್ನು ಮತ್ತು ತಾಂತ್ರಿಕ ವರದಿಯನ್ನು ಸಲ್ಲಿಸಬೇಕು. ಮಹಾನಗರಪಾಲಿಕೆಯವರು ಈಗಾಗಲೇ ರೂ. 150 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧಗೊಳಿಸಿರುವದಾಗಿ ತಿಳಿಸಿದ್ದಾರೆ. ಇದನ್ನು ಸಹ ಪಡೆದುಕೊಂಡು ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಕೆರೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಉಪ ಲೋಕಾಯುಕ್ತರು ತಿಳಿಸಿದರು.

ಕೆಲಗೇರಿ ಕೆರೆ ನಿರ್ವಹಣೆ ಮತ್ತು ಮಾಲಿಕತ್ವದ ವಿಚಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಮಹಾನಗರಪಾಲಿಕೆಗಳು ಪರಸ್ಪರ ಬೊಟ್ಟು ತೋರಿಸಿ, ಕೆರೆ ಸ್ವಚ್ಛತೆ, ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೆರೆಯಲ್ಲಿ ಸಾಕಷ್ಟು ಅಂತರಗAಗೆ ಬೆಳೆದಿದೆ. ಕೆರೆ ವಾಕಿಂಗ್ ಪಾಥ್‌ನಲ್ಲಿ ಗಿಡಗಂಟಿ ಬೆಳೆದಿದೆ. ಚರಂಡಿ ನೀರು ಕೆರೆ ಸೇರುತ್ತಿದೆ. ಕೆರೆಯ ಸುತ್ತಲಿನ ಜನ ಮನೆಯ ದಿನಬಳಕೆ ತ್ಯಾಜ್ಯ, ಕಸಕಡ್ಡಿ ತಂದು ಕೆರೆಯಲ್ಲಿ ಹಾಕುತ್ತಿದ್ದಾರೆ. ಇದರ ಬಗ್ಗೆ ಯಾರೂ ಗಮನ ಹರಿಸಿಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ತನಿಖೆ ಕೈಗೊಳ್ಳಲು ಸೋಮೋಟೊ ಕೇಸ್ ದಾಖಲಿಸಲಾಗುತ್ತಿದೆ ಎಂದು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ತಿಳಿಸಿದರಲ್ಲದೆ, ಮುಂದಿನ 20 ದಿನದಲ್ಲಿ ಕೆರೆ ಸ್ವಚ್ಛಗೊಳಿಸಿ, ಸುಂದರಗೊಳಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. 20ದಿನಗಳ ನಂತರ ನಾನೇ ಕೆರೆ ನೋಡಲು ಬರುತ್ತೇನೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಇಲಾಖೆಗಳ ಸಮನ್ವಯ ಸಾಧಿಸಿ, ಕೆರೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿ, ನಾಳೆಯಿಂದ ಕೆರೆ ಸ್ವಚ್ಛತಾ ಕಾರ್ಯ ಆರಂಭಿಸುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಲ್ಲಿನ ವಿವರಣಾ ವಿಭಾಗದ ಅಪರ ನಿಬಂಧಕರಾದ ಪಿ.ಶ್ರೀನಿವಾಸ, ನರಸಿಂಹಸಾ ಎಂ.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಸಿವಿಲ್ ನ್ಯಾಯಾಧೀಶ ಕಿರಣ ಪಿ.ಎಂ.ಪಾಟೀಲ್, ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಹನುಮಂತರಾಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!