Home Blog Page 2086

ಅನ್ನ ಕೊಡಬೇಕಾದ ಸರ್ಕಾರ ಅನ್ನವನ್ನು ಕದಿಯುವ ಕೆಲಸ ಮಾಡಿದೆ: ಆರ್ ಅಶೋಕ್

0

ಬೆಂಗಳೂರು: ಅನ್ನ ಕೊಡಬೇಕಾದ ಸರ್ಕಾರ ಅನ್ನವನ್ನು ಕದಿಯುವ ಕೆಲಸ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಮಾಡಲಾಗಿದೆ ಎಂದು ಸಿಎಂ ಹೇಳುತ್ತಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 250 ಸರ್ಕಾರಿ ನೌಕರರ ಬಳಿ ಕಾರ್ಡ್ ಇತ್ತು ಎಂದರೂ ಅದ್ಹೇಗೆ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಎಂದು ಅಶೋಕ್ ಪ್ರಶ್ನಿಸಿದರು.

ಹೊಸದಾಗಿ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಸಚಿವರು ಹೇಳುತ್ತಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡುವಾಗ ಅರ್ಜಿ ಕೊಟ್ಟಿದ್ದೀರಾ? ನೋಟಿಸ್ ಕೊಟ್ಟಿದ್ದೀರಾ? ನೀವು ಮಾಡಿರುವ ತಪ್ಪಿಗೆ ಬಡವರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅಶೋಕ್ ಕಿಡಿಕಾರಿದರು. ಅಲ್ಲದೆ, ಬಡವರಿಗೆ ಉಣ್ಣಲು ಅನ್ನ ಕೊಡಬೇಕಾದ ಸರ್ಕಾರ ಅನ್ನವನ್ನು ಕದಿಯುವ ಕೆಲಸ ಮಾಡಿದೆ ಎಂದು ಟೀಕಿಸಿದರು.

ಬಿಪಿಎಲ್ ಕಾರ್ಡ್ ರದ್ದಾದರೆ ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ: ಸಂಸದ ಬೊಮ್ಮಾಯಿ

0

ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ.

ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಮುಡಾ ಎಂದು ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಇದೇನು ಮುಖ್ಯಮಂತ್ರಿಗಳೆ? ಇದು ಅತ್ಯಂತ ಜನ ವಿರೋಧಿ ಸರ್ಕಾರ. ಇದು ಯೂಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾರ್ಡ್ ರದ್ದು ಮಾಡಿರುವುದನ್ನು ವಿರೋಧಿಸಿದ ಮೇಲೆ ಈಗ ವಾಪಸ್ ತೆಗೆದುಕೊಳ್ಳುವ ಕೆಲಸ ಮಾಡುತ್ತಾರೆ. ರೇಷನ್ ಕಾರ್ಡ್ ರದ್ದಾದವರು ಅರ್ಜಿ ಹಾಕಿದರೆ ತಕ್ಷಣ ವಾಪಸ್ ಕೊಡಲಾಗುವುದು ಎಂದು ಹೇಳುತ್ತಾರೆ. ಅರ್ಜಿ ಹಾಕಿದ ಮೇಲೆ ಕಾರ್ಡ್ ಬರುವುದು ಯಾವಾಗ? ಅಲ್ಲಿಯ ತನಕ ಕಾರ್ಡ್ ರದ್ದಾಗಿರುವ ಬಡವರು ಏನು ತಿನ್ನಬೇಕು ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಯಾವುದೇ BPL ಹಾಗೂ APL ಕಾರ್ಡ್ʼ ಗಳನ್ನು ರದ್ದು ಮಾಡಿಲ್ಲ: ಕೆ ಎಚ್ ಮುನಿಯಪ್ಪ

0

ಬೆಂಗಳೂರು: ರಾಜ್ಯದಲ್ಲಿ ಯಾವುದೇ BPL ಹಾಗೂ APL ಕಾರ್ಡ್ʼ ಗಳನ್ನು ರದ್ದು ಮಾಡಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ  ಕೆ ಎಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಅನರ್ಹರ ಕಾರ್ಡ್ ಪತ್ತೆಗೆ ಅಗತ್ಯ ಕ್ರಮ ಜರುಗಿಸಲಾಗಿದೆ.

ಸಿಎಂ ಆದೇಶದಂತೆ ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಲಾಗಿದೆ ಅಷ್ಟೇ. ಅದಲ್ಲದೆ ರಾಜ್ಯದಲ್ಲಿ ಯಾವುದೇ BPL ಹಾಗೂ APL ಕಾರ್ಡ್ʼ ಗಳನ್ನು ರದ್ದು ಮಾಡಿಲ್ಲ ಎಂದು ಹೇಳಿದರು.ಇನ್ನೂ ಬಿಪಿಎಲ್ ಗೆ ಅರ್ಹರಿದ್ದು ಅಂತಹವರನ್ನ ಎಪಿಎಲ್ ಗೆ ಸೇರಿಸಿದ ಕಾರ್ಡ್ ಗಳನ್ನ ಮರು ಸ್ಥಾಪನೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬಿಪಿಎಲ್ ಮಾನದಂಡ ಮೀರಿದ ಒಂದು ಲಕ್ಷದ ಐನೂರು ಕಾರ್ಡ್ ಗಳು ಮಾತ್ರ ರದ್ದಾಗಿವೆ. ಬಿಪಿಎಲ್ ಒಂದು ಕೋಟಿ ಹನ್ನೆರಡು ಲಕ್ಷ ಕಾರ್ಡ್ ಗಳು ಚಾಲ್ತಿಯಲ್ಲಿವೆ. ಒಂದುವಾರದಲ್ಲಿ ಬಿಪಿಎಲ್ ಮಾನ್ಯತೆ ಪಡೆದವರಿಗೆ ಮತ್ತೆ ಹಿಂದಿನಂತೆಯೆ ಸೌಲಭ್ಯ ಸಿಗಲಿದೆ. ಲಾಗಿನ್ ಪ್ರಕ್ರಿಯೆಯನ್ನ ಮುಗಿಸಿ ಶೀಘ್ರವೇ ಅವರಿಗೂ ಬಿಪಿಎಲ್ ದೊರಕುವಂತೆ ಮಾಡಿಕೊಡುತ್ತೇವೆ‌ ಎಂದು ಹೇಳಿದರು.

ಕೋಟಿ-ಕೋಟಿ ಒಡೆಯ ಮಾದಪ್ಪ: 27 ದಿನಗಳಲ್ಲೆ 2.43 ಕೋಟಿ ಕಾಣಿಕೆ ಸಂಗ್ರಹ!

0

ಚಾಮರಾಜನಗರ:- ಎಪ್ಪತ್ತೇಳು ಮಲೆಯ ಒಡೆಯ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಮತ್ತೆ ಕೋಟ್ಯಧೀಶನಾಗಿದ್ದಾನೆ. ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ.

ಮಾದಪ್ಪನ ಸನ್ನಿಧಿಗೆ ಬರುವ ಲಕ್ಷಾಂತರ ಭಕ್ತರು, ಆತನ ಹುಂಡಿಗೆ ಉದಾರವಾಗಿ ಕಾಣಿಕೆ ಸಲ್ಲಿಸುತ್ತಿದ್ದಾರೆ. ಅದರಂತೆ ಹನೂರು ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ.

63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ. ಹಾಗೇ ಅರ್ಧ ಕೆಜಿ ಬೆಳ್ಳಿ ಸಂಗ್ರಹವಾಗಿದೆ.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್‌ ಸರಗೂರು ಮಹದೇವಸ್ವಾಮಿ ಹಣಕಾಸು ಲೆಕ್ಕ ಪತ್ರ ಸಲಹೆಗಾರ ಜಿಲ್ಲಾಡಳಿತ ಕಛೇರಿ ಸಂಗೀತ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಪೊಲೀಸ್‌‍ ಅಧಿಕಾರಿಗಳು ಮತ್ತು ಕೊಳ್ಳೇಗಾಲ ಬ್ಯಾಂಕ್‌ ಅಪ್‌ ಬರೋಡ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ತನ್ನದೇ ತಂಡದ ಹುಡುಗಿಯ ಜೊತೆ ಕೇಳಿ ಬಂತು ರೆಹಮಾನ್ ಹೆಸರು: ಸ್ಪಷ್ಟನೆ ನೀಡಿದ ಸೈರಾ ಭಾನು

ಸಂಗೀತಾ ಮಾಂತ್ರಕ ಎ.ಆರ್.ರೆಹಮಾನ್ ಹಾಗೂ ಪತ್ನಿ ಸೈರಾ ಭಾನು 29 ವರ್ಷಗಳ ಸುಧೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇಬ್ಬರು ಬೇರೆ ಬೇರೆಯಾಗುತ್ತಿರುವ ಸುದ್ದಿಯಲ್ಲಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸೈರಾ ಭಾನು ಡಿವೋರ್ಸ್ ಕುರಿತು ಮಾಹಿತಿ ನೀಡಿದ ಕೆಲವೇ ಗಂಟೆಗಳಲ್ಲಿ ರೆಹಮಾನ್ ತಂಡದ ಸದಸ್ಯೆ ಮೋಹಿನಿ ಡೇ ಕೂಡ ತಮ್ಮ ಪತಿಗೆ ವಿಚ್ಚೇದನ ನೀಡಿದ್ದಾಗಿ ಹೇಳಿದ್ದಾರೆ. ಅನೇಕರು ಈ ಎರಡು ಪ್ರಕರಣಗಳನ್ನು ಮಧ್ಯೆ ಲಿಂಕ್ ಮಾಡಿದ್ದರು. ಇದೀಗ ಈ ಬಗ್ಗೆ ಸೈರಾ ಭಾನು ವಕೀಲರ ಮೂಲಕ ಸ್ಪಷ್ಟನೆ ನೀಡಿದ್ದಾರೆ.

‘ಈ ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಕನೆಕ್ಷನ್ ಇಲ್ಲ. ಸೈರಾ ಹಾಗೂ ರೆಹಮಾನ್ ಅವರದ್ದು ಇದು ಸ್ವಂತ ನಿರ್ಧಾರ’ ಎಂದು ಹೇಳಿದ್ದಾರೆ ಸೈರಾ ಪರ ವಕೀಲೆ ವಂದನಾ. ‘ಮದುವೆ ಆಗಿ ಹಲವು ವರ್ಷಗಳ ಬಳಿಕ ಜೀವನದಲ್ಲಿ ಏರಿಳಿತ ಇದ್ದೇ ಇರುತ್ತದೆ. ಇಬ್ಬರೂ ಒಳ್ಳೆಯ ರೀತಿಯಲ್ಲಿ ಸಂಬಂಧ ಕೊನೆ ಮಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಬೆಂಬಲ ನೀಡಿಕೊಳ್ಳುವುದಾಗಿ ಹೇಳಿದ್ದಾರೆ’ ಎಂದಿದ್ದಾರೆ ಸೈರಾ.

ಸದ್ಯ ವಂದನಾ ಅವರು ಸೈರಾ ಹಾಗೂ ರೆಹಮಾನ್ ಅವರ ಸಂಬಂಧ ಕೊನೆ ಆಗಲು ಕಾರಣ ಏನು ಎಂಬುದನ್ನು ರಿವೀಲ್ ಮಾಡಿಲ್ಲ. ‘ಅವರ ವಿಚ್ಛೇದನವು ಸೌಹಾರ್ದಯುತವಾಗಿದೆ ಮತ್ತು ಸದ್ಯಕ್ಕೆ ಹಣಕಾಸಿನ ಅಂಶದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನೂ ರೆಹಮಾನ್ ತಂಡದ ಜೊತೆ ಗುರುತಿಸಿಕೊಂಡಿರುವ ಕೋಲ್ಕತ್ತಾ ಮೂಲಕ 29 ವರ್ಷದ ಮೋಹಿನಿ ಬಾಸಿಸ್ಟ್ ಪ್ಲೇಯರ್ ಆಗಿದ್ದು, ಗಾನ್ ಬಾಂಗ್ಲಾ ಅವರ ವಿಂಡ್ ಆಫ್ ಚೇಂಜ್‌ನಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ. ವಿಶ್ವಾದ್ಯಂತ 40 ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ರೆಹಮಾನ್ ಅವರೊಂದಿಗೆ ಮೋಹಿನಿ ನೀಡಿದ್ದಾರೆ.   ಆಗಸ್ಟ್ 2023 ರಲ್ಲಿ ಅವರ ಚೊಚ್ಚಲ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯದ ಬೈ ಎಲೆಕ್ಷನ್ʼನಲ್ಲಿ ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್

0

ಬೆಂಗಳೂರು: ರಾಜ್ಯದ ಬೈ ಎಲೆಕ್ಷನ್ʼನಲ್ಲಿ ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು  ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲಬೇಕು ಅಂತಿದ್ದೇವೆ. ಆ ವಾತಾವರಣ ನಮ್ಮ ರಾಜ್ಯದಲ್ಲಿದೆ. ಹಿಂದೆ ಬೊಮ್ಮಾಯಿ 36 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

ಈಗ 10 ಸಾವಿರಕ್ಕೆ ಬಂದಿದ್ದಾರೆ ಅಂತಿದೆ. ಅಷ್ಟು ಕಡಿಮೆ ಅಂದ್ರೆ ನೆಗೆಟಿವ್ ಇದೆ ಅಂತ ತಾನೇ. ಆ ಸೀಟನ್ನು ನಾವು ಗೆಲ್ಲಬೇಕು. ಮೂರು ಸೀಟ್​ಗಳನ್ನೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನೂ ವಿಕ್ರಂ ಗೌಡ ಅವರದ್ದು ನಕಲಿ ಎನ್​ಕೌಂಟರ್ ಎಂಬ ಟೀಕೆಗೆ ಪ್ರತಿಕ್ರಿಯಿಸಿ, ನ್ಯಾಯಯುತ ಪ್ರತಿಭಟನೆಗೆ ಅವಕಾಶವಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕೈಜೋಡಿಸಿ. ಪಾವಗಡದಲ್ಲೂ ನಕ್ಸಲರು ಜನರನ್ನು ಕೊಂದಿದ್ದರು. ಆಗಲೂ ನಾವು ಮನವಿ ಮಾಡಿಕೊಂಡೆವು. ನೂರು ಜನ ಶಸ್ತ್ರ ತ್ಯಜಿಸಿ ಶರಣಾದರು ಎಂದು ಹೇಳಿದರು.

ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸೂಸೈಡ್: ವ್ಯಕ್ತಿಯ ಸಾವಿಗೆ ಕೌಟುಂಬಿಕ ಕಲಹ ಕಾರಣವಾಯ್ತಾ!?

0

ಹಾಸನ:- ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ಜರುಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. 40 ವರ್ಷದ ಕರುಣಾಕರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಕಾಫಿ ಬೆಳೆಗಾರನಾಗಿದ್ದ ಕರುಣಾಕರಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದ್ದು ಪತ್ನಿ ಹಾಗೂ ಅತ್ತೆ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ.

ಇದರಿಂದಾಗಿ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಅತ್ತೆ-ಸೊಸೆ ಜಗಳದಿಂದ ಕರುಣಾಕರ ಮನನೊಂದಿದ್ದ. ಇಂದು ಬೆಳಗ್ಗೆ ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟೌನ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಮನೆಯಲ್ಲಿ ಲೋಕಾ ರೈಡ್! ರಾಶಿ, ರಾಶಿ ಚಿನ್ನಾಭರಣಗಳು ಪತ್ತೆ.!

0

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಸೇರಿ ಇತರೆ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ ನಿವಾಸ ಹಾಗೂ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ವೇಳೆ 28 ಕ್ಕೂ ಹೆಚ್ಚು ಜೊತೆ ಓಲೆ, ಎಂಟಕ್ಕೂ ಹೆಚ್ಚು ಐಷಾರಾಮಿ ವಾಚ್‌ಗಳು, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಪಂಡೆಂಟ್ ಇರೊ ಸರ ಪತ್ತೆಯಾಗಿದ್ದು, ಜೊತೆಯಲ್ಲಿ ಕೆಜಿಗಟ್ಟಲೆ ಬೆಳ್ಳಿ ವಸ್ತುಗಳು, ನಗದು, ಉಂಗುರ, ಆಸ್ತಿಪತ್ರ ಪತ್ತೆಯಾಗಿದೆ. ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ.

ನಿಂತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ಗೆ ಗೂಡ್ಸ್ ವಾಹನ ಡಿಕ್ಕಿ: ಕ್ಲಿನರ್ʼಗೆ ಗಂಭೀರ ಗಾಯ!

0

ಬೆಳಗಾವಿ: ನಿಂತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಕ್ಲಿನರ್ʼಗೆ ಗಂಭೀರಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ  ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ.

ಧಾರವಾಡದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ನಿಂತಿದ್ದ ಟ್ರಾಕ್ಟರ್ ಗೆ ಹಿಂದಿನಿಂದ ಬಂದು ಗೂಡ್ಸ್ ವಾಹನ ಚಾಲಕ ಗುದ್ದಿದ್ದಾನೆ. ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,

ಇನ್ನೂ ವಾಹನದಲ್ಲಿ ಸಿಲುಕಿಕೊಂಡಿದ್ದ ಕ್ಲಿನರ್ ರವಿಕುಮಾರ ಕಾಲಿನ ಮೂಳೆ ಮುರಿತಗೊಂಡಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

2A ಮೀಸಲಾತಿಗೆ ಆಗ್ರಹಿಸಿ ಡಿ. 10ರಂದು ಸುವರ್ಣ ಸೌಧ ಮುತ್ತಿಗೆ: ಜಯ ಮೃತ್ಯುಂಜಯ ಶ್ರೀ ಕರೆ!

0

ವಿಜಯನಗರ:- ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಡಿ. 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋಣ ಎಂದು ಜಯ ಮೃತ್ಯುಂಜಯ ಶ್ರೀ ಕರೆ ಕೊಟ್ಟಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ಶ್ರೀಗಳು, ನಮ್ಮ ಸಮಾಜದ ಋಣ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲಿದೆ. ಹೀಗಾಗಿ ಆ ಋಣ ತೀರಿಸಲು ಮೀಸಲಾತಿ ಜಾರಿ ಮಾಡಲಿ ಎಂದರು.

ವಿಜಯನಗರದ ರಾಜಧಾನಿ ಹೊಸಪೇಟೆಯಿಂದಲೇ ನಮ್ಮ ಸಮಾಜಕ್ಕೆ ನಾನು ಕರೆ ನೀಡುವೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಹೋರಾಟಕ್ಕೆ ಕೈ ಜೋಡಿಸಿ. ಡಿ. 10ರಂದು ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋಣ. ಲಕ್ಷ, ಲಕ್ಷ ಪಂಚಮಸಾಲಿಗಳು ಬೆಳಗಾವಿಗೆ ಬರ್ತಾರೆ, 5 ಸಾವಿರ ಟ್ರಾಕ್ಟರ್ ಗಳು ಸೌಧಕ್ಕೆ ತರ್ತಾರೆ. ಹೀಗಾಗಿ ನೀವು ಬೆಂಬಲಿಸಿ ಎಂದು ಶ್ರೀಗಳು ಮನವಿ ಮಾಡಿದ್ದಾರೆ.

ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ಮೀಸಲಾತಿ ಹೋರಾಟ ಮಾಡ್ತಾನೆ ಇದ್ದೇವೆ. 7ನೇ ಹಂತದ ಹೋರಾಟ ಮಾಡ್ತಿದ್ದೇವೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೀಸಲಾತಿ ಜಾರಿ ಮಾಡುತ್ತದೆ ಅನ್ನೋ ನಂಬಿಕೆ ಇತ್ತು. ಆದ್ರೆ ಆ ನಂಬಿಕೆ ಹುಸಿಯಾಗಿದೆ,

ಈ ಹಿಂದೆ ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿಯೂ ಮುತ್ತಿಗೆ ಹಾಕಿದ್ದೇವೆ. ಸರಕಾರ ಮೀಸಲಾತಿ ಭರವಸೆ ಕೊಡಲಿ. ನೀತಿ ಸಂಹಿತೆ ನೆಪ ಮಾಡಿ ಬೇಸರವಾಗುವಂತೆ ಸಭೆ‌ ಮಾಡಿದರು. ಪಂಚಮಸಾಲಿ ಮೀಸಲಾತಿ ಹೋರಾಟದ ಫಲವಾಗಿ ಸರ್ಕಾರ ಬಂದಿದೆ‌.

ಮಕ್ಕಳು, ಸಮಾಜದ ಪರವಾದ ಹೋರಾಟ ಇದು. ಯಾರ ಲಾಬಿಗೂ ಮಣಿಯದೇ ಪ್ರಾಮಾಣಿಕ ಹೋರಾಟ ಮಾಡುತ್ತೇವೆ. ಸಿಎಂ ಮೀಸಲಾತಿ ಸ್ಪಷ್ಟತೆ ಕೊಡುವವರೆಗೆ ಹೊರಾಟ ಮಾಡಲಾಗುತ್ತದೆ. ಕುತಂತ್ರಗಳಿಗೆ ಮಣಿಯಬೇಡಿ ಎಂದು ಸಮಾಜಕ್ಕೆ ಶ್ರೀಗಳು ಕರೆ ಕೊಟ್ಟಿದ್ದಾರೆ.

ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ, ಹೋರಾಟಕ್ಕೆ ಬೆಂಬಲ ಕೊಡಬೇಕು‌‌. ಪಕ್ಷಾತೀತವಾಗಿ ಸಮಾಜದ ಪರವಾಗಿ ಹೋರಾಟ ಮಾಡಿ. ನಮ್ಮ ಜೊತೆ ಬಂದರೆ ನಿಮ್ಮ ಅಧಿಕಾರಕ್ಕೆ ಕುತ್ತು ಬರುವುದಾದರೆ ಬಹಿರಂಗವಾಗಿ ಬರದೆ ಅಧಿವೇಶನದಲ್ಲಿ ಸಮಾಜದ ಪರವಾಗಿ ಧ್ವನಿ ಎತ್ತಿ ಎಂದು ಕರೆ ಕೊಟ್ಟಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ವಕ್ಪ್ ಆಸ್ತಿ ವಿವಾದ ವಿಚಾರವಾಗಿ ಮಾತನಾಡಿದ ಶ್ರೀಗಳು, ವಕ್ಫ್ ವಿಚಾರ- ಆಯಾ ಧರ್ಮದ ಅಭಿವೃದ್ಧಿ ಮಂಡಳಿ. ಆ ಧರ್ಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕೆಲಸ ಮಾಡಲಿ. ಅನ್ನ ಕೊಡುವ ಅಮಾಯಕ ರೈತರ ಭೂಮಿ ಕಸಿಯುವ ಹುನ್ನಾರ ಮಾಡಬೇಡಿ.

ಅನ್ಯಾಯದ ಅಕ್ರಮ ಭೂಮಿ ಒಡೆತನಕ್ಕೆ ವಿರೋಧವಿದೆ. ರೈತರಿಗೆ ಅನ್ಯಾಯವಾದಾಗ ಅವರ ಪರವಾಗಿಯೇ ಇರುತ್ತೇವೆ ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿಕೆ ಕೊಟ್ಟಿದ್ದಾರೆ.

error: Content is protected !!