Home Blog Page 2087

ವಿದ್ಯುತ್ ಶಾರ್ಟ್ ಸರ್ಕ್ಯೂಟ್ʼನಿಂದ ಕಬ್ಬಿನ ಗದ್ದೆಗೆ ಬೆಂಕಿ: 4 ಎಕರೆ ಬೆಳೆ ಸುಟ್ಟು ಕರಕಲು

0

ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ʼನಿಂದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು ಬೆಂಕಿಗೆ ಸುಟ್ಟು ಕರಕಲಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಪುತ್ರ ಎಂಬ ರೈತನಿಗೆ ಸೇರಿದ ಕಬ್ಬಿನ ಬೆಳೆಯಾಗಿದೆ.

ಜಮೀನಿನಲ್ಲಿರುವ ಪಂಪ್ ಸೆಟ್ ನ ವಿದ್ಯುತ್ ವೈಯರ್ ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ದುರ್ಘಟನೆ ನಡೆದಿದೆ. ಬೆಂಕಿ ನಂದಿಸಲು ಗ್ರಾಮಸ್ಥರಿಂದ ಹರಸಾಹಸ ಪಟ್ಟಿದ್ದಾರೆ. ಆದ್ರೆ ಬೆಂಕಿ‌ ನಂದಿಸುವಷ್ಟರಲ್ಲಿ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದೆ. ಇನ್ನೂ ಬೆಳೆ ಕಳೆದುಕೊಂಡು ಅನ್ನದಾತ‌ ಶಿವಪುತ್ರಪ್ಪ ಕಂಗಲಾಗಿದ್ದು, ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆದ ‘ಕಂಗುವ’: ವಿಮರ್ಶಕರಿಗೆ ನಿಷೇಧ ಹೇರಿದ ತಮಿಳುನಾಡು ನಿರ್ಮಾಪಕರ ಸಂಘ

ಸೋಷಿಯಲ್ ಮೀಡಿಯಾ ಯುಗದಲ್ಲಿ ಪ್ರತಿಯೊಂದು ಕೂಡ ಜನರಿಗೆ ತಲುಪುತ್ತಿದೆ. ಈ ಹಿಂದೆ ಸಿನಿಮಾ ಹೇಗಿದೆ ಎಂಬುದನ್ನು ತಿಳಿಯಲು ಥಿಯೇಟರ್ ಗೆ ಹೋಗಬೇಕಿತ್ತು. ಆದರೆ ಇದೀಗ ಕೆಲವರು ಸಿನಿಮಾ ನೋಡಿ ಬಂದು ಸೋಷಿಯಲ್ ಮೀಡಿಯಾದಲ್ಲಿ ಆ ಸಿನಿಮಾದ ವಿಮರ್ಶೆ ಮಾಡುತ್ತಾರೆ. ಈ ವಿಮರ್ಶೆಗಳನ್ನು ನೋಡಿ ಸಾಕಷ್ಟು ಜನ ಥಿಯೇಟರ್ ಗೆ ಹೋಗ್ತಿದ್ದಾರೆ. ಆದರಂತೆ ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳಿಗೆ ಕೆಟ್ಟ ವಿಮರ್ಶೆ ಸಿಕ್ಕಿದ್ದ ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ನೆಲಕಚ್ಚಿತ್ತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.

ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್​ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ. ಇದರ ಪ್ರಕಾರ ಯಾರೂ ಥಿಯೇಟರ್ ಬಳಿ ಮೈಕ್ ಹಿಡಿದು ಬರುವಂತಿಲ್ಲ.

‘ಈ ರೀತಿಯ ವಿಮರ್ಶೆಗಳು ಸಿನಿಮಾಗೆ ತೊಂದರೆ ಮಾಡುತ್ತವೆ. ಈ ಕಾರಣಕ್ಕೆ ಬ್ಯಾನ್ ಮಾಡಲಾಗಿದೆ’ ಎನ್ನುವ ಅಭಿಪ್ರಾಯವನ್ನು ನಿರ್ಮಾಪಕರ ಕೌನ್ಸಿಲ್ ನೀಡಿದೆ. ಇದಕ್ಕೆ ಯೂಟ್ಯೂಬರ್​ಗಳು ವಿರೋಧ ವ್ಯಕ್ತಪಡಿಸಿದ್ದಾರೆ.

‘ಪುಷ್ಪ 2’ ಸಿನಿಮಾಗಾಗಿ ಕಾಯ್ತಿದ್ದವರಿಗೆ ಬಿಗ್ ಶಾಕ್: ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ 2 ಸಿನಿಮಾ ರಿಲೀಸ್ ಗೆ ಇನ್ನೂ 15 ದಿನಗಳು ಮಾತ್ರವೇ ಭಾಕಿ ಇದೆ. ಪುಷ್ಪ ಸಿನಿಮಾ ನೋಡಿದ ಪ್ರತಿಯೊಬ್ಬರು ಪುಷ್ಪ 2 ಗಾಗಿ ಎದುರು ನೋಡ್ತಿದ್ದಾರೆ. ಆದ್ರೆ ಈ ಮಧ್ಯೆ ಸಿನಿಮಾಗಾಗಿ ಕಾದು ಕೂತವರಿಗೆ ಚಿತ್ರತಂಡ ಬಿಗ್ ಶಾಕ್ ನೀಡಿದೆ. ಸುಮಾರು 500 ಕೋಟಿ ಬಜೆಟ್ ನಲ್ಲಿ ರೆಡಿಯಾಗಿರುವ ಪುಷ್ಪ 2 ಸಿನಿಮಾದ ಹೂಡಿಕೆಯನ್ನು ವಾಪಸ್ ಪಡೆಯಲು ಟಿಕೆಟ್ ದರಗಳನ್ನು ಹೆಚ್ಚಿಸಲು ಚಿತ್ರತಂಡ ಮುಂದಾಗಿದೆ. ಆದರೆ ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರಲಾಗಿದೆ. ಒಂದೊಮ್ಮೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದ ಬಳಿಕವಷ್ಟೆ ಟಿಕೆಟ್ ದರಗಳನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಟಿಕೆಟ್ ದರ ಎಷ್ಟು ಹೆಚ್ಚಿಸಬೇಕು, ಎಷ್ಟು ದಿನಗಳ ಕಾಲ ಟಿಕೆಟ್ ದರ ಹೆಚ್ಚಿಗೆ ಇರಬೇಕು ಎಂಬಿತ್ಯಾದಿಯನ್ನು ಸರ್ಕಾರವೇ ಸೂಚಿಸುತ್ತದೆ. ಇದೀಗ ‘ಪುಷ್ಪ 2’ ಸಿನಿಮಾದ ಟಿಕೆಟ್ ದರ ಹೆಚ್ಚಳ ಹಾಗೂ ಹೆಚ್ಚುವರಿ ಶೋ ಪ್ರದರ್ಶಿಸಲು ಚಿತ್ರತಂಡ ಸರ್ಕಾರದ ಅನುಮತಿ ಕೋರಲು ಮುಂದಾಗಿದ್ದು ಇದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿಂದೆ ‘ಆರ್​ಆರ್​ಆರ್’, ‘ಕಲ್ಕಿ 2898 ಎಡಿ’ ಸಿನಿಮಾಗಳಿಗೆಲ್ಲ ಆಂಧ್ರ, ತೆಲಂಗಾಣಗಳಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳು ಭಾರಿ ಮೊತ್ತದಲ್ಲಿ ಹೆಚ್ಚಾಗಿದ್ದವು. ಮಲ್ಟಿಪ್ಲೆಕ್ಸ್​ನಲ್ಲಿ ನಿಗದಿತ ದರ 150 ರೂಪಾಯಿಗಳಿದ್ದು, ‘ಕಲ್ಕಿ’, ‘ಆರ್​ಆರ್​ಆರ್’ ಇನ್ನು ಕೆಲ ಸಿನಿಮಾಗಳಿಗೆ ಈ ಬೆಲೆ 450 ರೂಪಾಯಿ ವರೆಗೆ ಏರಿತ್ತು. ಆದರೆ ‘ಪುಷ್ಪ 2’ ಸಿನಿಮಾಕ್ಕೆ ಟಿಕೆಟ್ ಬೆಲೆ ಇನ್ನಷ್ಟು ಏರಿಕೆ ಆಗಲಿದೆ ಎಂದು ಊಹಿಸಲಾಗಿದೆ.

‘ಪುಷ್ಪ 2’ ಸಿನಿಮಾದ ಟಿಕೆಟ್ ಬೆಲೆ ಆಂಧ್ರ-ತೆಲಂಗಾಣದ ಮಲ್ಟಿಪ್ಲೆಕ್ಸ್​ಗಳಲ್ಲಿ 700 ರೂಪಾಯಿ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸುಮಾರು 350 ರಿಂದ 450 ರೂಪಾಯಿ ವರೆಗೆ ಇರಲಿದೆಯಂತೆ. ಹೀಗಾಗಿ ಸಿನಿಮಾನೋಡ್ಬೇಕು ಎಂದುಕೊಂಡವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಿದೆ.

‘ಪುಷ್ಪ 2’ ಸಿನಿಮಾದ ಟಿಕೆಟ್ ಬೆಲೆ 1000 ರೂಪಾಯಿಗೆ ಮಾರಾಟವಾಗುವ ಸಾಧ್ಯತೆ ದಟ್ಟವಾಗಿದ್ದು, ಕೆಲವು ಹೈಕೆಟ್ ಮಲ್ಟಿಪ್ಲೆಕ್ಸ್​ಗಳಲ್ಲಿ 2000 ದಾಟಲಿದೆ ಎನ್ನಲಾಗುತ್ತಿದೆ.

 

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೆ ಸಾವು

0

ಬೆಳಗಾವಿ: ಭೀಕರ ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮಹೇಶ ಕರಿಕಟ್ಟಿ (32) ಮೃತ ದುರ್ಧೈವಿಯಾಗಿದ್ದು,

ನಿನ್ನೆ ತಡರಾತ್ರಿ ಬೈಕ್ ಮೇಲೆ ಸಂಚರಿಸುವಾಗ ಬುಲೇರೋ ವಾಹನ ಓವರ್ ಟೇಕ್ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ವಾಹನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನ ಮೃತದೇಹ ಚಿದ್ರ ಚಿದ್ರವಾಗಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ಬೆಂಗಳೂರು: ಸರಣಿ ಅಪಘಾತ, ಮೂವರು ಯುವಕರು ಗಂಭೀರ!

0

ಬೆಂಗಳೂರು:- ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಜರುಗಿದೆ.

ರ್ಯಾಪಿಡೋ ಸವಾರನು, ರೈಲ್ವೆ ನಿಲ್ದಾಣದಿಂದ ಇಬ್ಬರು ಯುವಕರನ್ನ ಪಿಕ್‌ ಅಪ್ ಮಾಡಿದ್ದರು. ಸ್ವಲ್ಪ ಮುಂದೆ ಬರ್ತಿದ್ದಂತೆ ಮೊದಲು ಟ್ಯಾಂಕರ್ ಗೆ ಡಿಕ್ಕಿ ಹೊಡೆದು, ಬಳಿಕ ಆಟೋಗೂ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಮೂವರು ಬೈಕ್ ಸವಾರರು, ಕೆಳಗೆ ಬಿದ್ದಿದ್ದಾರೆ. ಹೆಲ್ಮೆಟ್ ಇಲ್ಲದೆ ಕಾರಣ ಮೂವರ ತಲೆಗೂ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೂವರು ಯುವಕರು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಚಾಮರಾಜಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ!

0

ಹಾವೇರಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ 80 ವರ್ಷದ ಮನೋಹರ್ ತಹಶೀಲ್ದಾರ್ ಅವರು ಇಂದು ವಿಧಿವಶರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್​ನ ಎನ್​​ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಇತ್ತಿಚಿಗೆ ಸಂಸದ ಬಸವರಾಜ್ ಬೊಮ್ಮಾಯಿ ಅವರು ಮನೋಹರ್ ಅವರು ಆಸ್ಪತ್ರೆಗೆ ಬೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಆದರೆ ದುರಾದೃಷ್ಟವಶಾತ್ ಮಧ್ಯ ರಾತ್ರಿ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಬೆಳ್ಳಂಬೆಳಗ್ಗೆ 25 ಕಡೆ ಲೋಕಾಯುಕ್ತ ದಾಳಿ!

0

ಬೆಂಗಳೂರು:- ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿರುವ ಲೋಕಾಯುಕ್ತ ಅಧಿಕಾರಿಗಳು, ಬೆಳ್ಳಂಬೆಳಗ್ಗೆ ಸುಮಾರು 25 ಕಡೆ ದಾಳಿ ಮಾಡಿದೆ.

ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದ್ದು, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರ ಮೇಲೂ ದಾಳಿ ನಡೆದಿದೆ. ಅದರಂತೆ ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಸೇರಿ ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್​​ಪಿ ಮಹೇಶ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದ್ದು, ಹಲವು ದಾಖಲೆ ಪರಿಶೀಲಿಸಿದ್ದಾರೆ.

ಎ.ಆರ್. ರೆಹಮಾನ್ ತಂಡದ ಸದಸ್ಯೆ ಮೋಹಿನಿ ಡೇ ಡಿವೋರ್ಸ್ ಘೋಷಣೆ

ಖ್ಯಾತ ಸಂಗೀತ ಮಾಂತ್ರಿಕ ಎಆರ್‌‌ ರೆಹಮಾನ್ಪತ್ನಿ ಸೈರಾ ಬಾನು ಅವರಿಂದ ದೂರವಾಗಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನವನ್ನು ರೆಹಮಾನ್ ಹಾಗೂ ಸೈರಾ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರು ಅಧಿಕೃತ ಹೇಳಿಕೆ ನೀಡಿದ್ದಾರೆ. ರೆಹಮಾನ್ ಡಿವೋರ್ಸ್ ಘೋಷಿಸಿದ ಬೆನ್ನಲೇ ರೆಹಮಾನ್ ತಂಡದ ಸದಸ್ಯರಾದ ಬಾಸಿಸ್ಟ್ ವಾದಕಿ ಮೋಹಿನಿ ಡೇ ತಮ್ಮ ಪತಿ, ಸಂಯೋಜಕ ಮಾರ್ಕ್ ಹಾರ್ಟ್ಸುಚ್ನಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ.

ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಸುದ್ದಿಯನ್ನು ಮೋಹಿನಿ ಡೇ ಸ್ಪಷ್ಟಪಡಿಸಿದ್ದಾರೆ. ರೆಹಮಾನ್ ತಮ್ಮದೇ ಟ್ರೂಫ್ ಹೊಂದಿದ್ದು, ಈ ಟ್ರೂಫ್ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬರೆದುಕೊಂಡಿರುವ ಮೋಹಿನಿ, “ಭಾರವಾದ ಹೃದಯದಿಂದ, ಮಾರ್ಕ್ ಮತ್ತು ನಾನು ಬೇರ್ಪಟ್ಟಿದ್ದೇವೆ ಎಂದು ಘೋಷಿಸುತ್ತೇವೆ. ಮೊದಲನೆಯದಾಗಿ, ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ, ಇದು ನಮ್ಮ ನಡುವಿನ ಪರಸ್ಪರ ನಿರ್ಧಾರ. ನಾವು ಉತ್ತಮ ಸ್ನೇಹಿತರಾಗಿದ್ದರೂ, ನಮ್ಮ ಜೀವನದಲ್ಲಿ ಇಬ್ಬರಿಗೂ ಬೇರೆ ಬೇರೆ ಅಂಶಗಳು ಬೇಕಾಗಿವೆ. ಪರಸ್ಪರ ಒಪ್ಪಂದ ಪಡೆದು ಬೇರೆ ಆಗುತ್ತಿದ್ದೇವೆ. ಖಾಸಗಿತನಕ್ಕೆ ಆದ್ಯತೆ ನೀಡಿ ಎಂದಿದ್ದಾರೆ.

ಡಿವೋರ್ಸ್‌ ಜತೆಗೆ ಮುಂದೆ ಅನೇಕ ಹೊಸ ಯೋಜನೆಗಳ ಮೂಲಕ ಕನ್‌ಬ್ಯಾಕ್‌ ಆಗುವುದಾಗಿ ಹೇಳಿಕೊಂಡಿದ್ದಾರೆ ಮೋಹಿನಿ.   ಮೋಹಿನಿ ಮತ್ತು ಮಾರ್ಕ್ ತಮ್ಮ ಅಭಿಮಾನಿಗಳಿಗೆ  ಹಲವು ಯೋಜನೆಗಳ ಭರವಸೆ ನೀಡಿದ್ದಾರೆ.

ಕೋಲ್ಕತ್ತಾ ಮೂಲಕ 29 ವರ್ಷದ ಮೋಹಿನಿ ಬಾಸಿಸ್ಟ್ ಪ್ಲೇಯರ್ ಆಗಿದ್ದು, ಗಾನ್ ಬಾಂಗ್ಲಾ ಅವರ ವಿಂಡ್ ಆಫ್ ಚೇಂಜ್‌ನಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ. ವಿಶ್ವಾದ್ಯಂತ 40 ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ರೆಹಮಾನ್ ಅವರೊಂದಿಗೆ ಮೋಹಿನಿ ನೀಡಿದ್ದಾರೆ.   ಆಗಸ್ಟ್ 2023 ರಲ್ಲಿ ಅವರ ಚೊಚ್ಚಲ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಕಳೆದ ಐದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಹಲವು ಭಾರೀ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಇಂದು ಮತ್ತೆ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಇಂದಾದ್ರು ಹೊರ ಬರ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್​ ಸಿಗುವ ಭರವಸೆಯಲ್ಲಿದ್ದಾರೆ ಪವಿತ್ರಾ ಗೌಡ.

ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಈವರೆಗೂ ಸರ್ಜರಿ ಮಾಡಿಸಿಲ್ಲ. ಆ ಬಗ್ಗೆ ಅವರು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ.

ಇನ್ನೂ ಯಾಕೆ ಸರ್ಜರಿ ಮಾಡಿಸಿಲ್ಲ, ಬೆನ್ನು ನೋವಿಗೆ ಚಿಕಿತ್ಸೆ ಯಾವ ಹಂತದಲ್ಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಇಂದು ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್​ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಜಾಮೀನು ಪಡೆದು ಅವರು ಬೆಂಗಳೂರಿಗೆ ಬಂದಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದರ್ಶನ್ ಗೆ ಆರು ವಾರಗಳ ಮಧ್ಯಂತರ ಜಾಮೀನು ಅರ್ಜಿ ಮಂಜೂರು ಮಾಡಲಾಗಿದ್ದು ಅದರಲ್ಲಿ ನಾಲ್ಕು ವಾರಗಳು ಮುಗಿದೇ ಹೋಗಿದೆ. ಹೀಗಾಗಿ ದರ್ಶನ್ ಮುಂದಿನ ನಡೆ ಏನು ಎಂಬ ಕುತೂಹಲ ಶುರುವಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳಲ್ಲಿ ಕೆಲವರೀಗೆ ಮಾತ್ರ ಜಾಮೀನು ಸಿಕ್ಕಿದೆ. ಪವನ್, ನಂದೀಶ್​ ಅವರ ಜಾಮೀನು ಅರ್ಜಿ ನ.20ರಂದು ವಜಾ ಆಗಿದೆ. ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಸಿಸಿಹೆಚ್ 57ರ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಧನರಾಜ್ ಜಾಮೀನು ಅರ್ಜಿ ಬಗ್ಗೆ ಇಂದು ಆದೇಶ ಪ್ರಕಟ ಆಗಲಿದೆ.

 

ಜನಾಕ್ರೋಶಕ್ಕೆ ಎಚ್ಚೆತ್ತ ಸರ್ಕಾರ: ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧ ಕ್ರಮ ಎಂದ ಸಿದ್ದರಾಮಯ್ಯ!

0

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

error: Content is protected !!