Home Blog Page 2092

ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ವಿಕ್ರಂಗೌಡ ಹತ್ಯೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ!

0

ಬೆಂಗಳೂರು: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ  ಅವರು ಎನ್ ಕೌಂಟರ್ ನಲ್ಲಿ  ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು, ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,

ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ  ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ:-

ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು,  ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ.

ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್: ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಯುವತಿಯ ಕೈಗಳು ಕಟ್!

0

ಬಾಗಲಕೋಟೆ:- ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ ಗಳು ಜೋರಾಗಿದೆ. ಕಡಿಮೆ ಹಣ ಹಾಗೂ ಸಮಯ ಉಳಿತಾಯ ಮಾಡಲು ಇಂದಿನ ಯುವ ಪೀಳಿಗೆ ಹೆಚ್ಚು ಆನ್ಲೈನ್ ಮೊರೆ ಹೋಗುತ್ತಿದ್ದಾರೆ.

ಆದರೆ ಇದರಿಂದಾಗುವ ಎಫೆಕ್ಟ್ ಒಂದೆರಡಲ್ಲ. ಇದೀಗ ಯುವತಿಯೋರ್ವಳು ಇದೇ ಆನ್ಲೈನ್ ನಿಂದ ಆರ್ಡರ್ ಮಾಡಿದ್ದ ಹೇರ್ ಡ್ರೈಯರ್ ನಿಂದ ಸಾವನ್ನಪ್ಪಿದ್ದಾಳೆ.

ಎಸ್, ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಎರಡು ಕೈಗಳು ತುಂಡಾಗಿರುವ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಜಿ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪಾಪಣ್ಣ ಮೃತಪಟ್ಟಿದ್ದರು.

ಶಶಿಕಲಾ ಎಂಬುವರ ಹೆಸರು, ನಂಬರ್ ಹೊಂದಿದ್ದ ಪಾರ್ಸಲ್ ಕೊರಿಯರ್‌ಯೊಂದು ಬಂದಿತ್ತು. ಶಶಿಕಲಾ ಅವರು ಕೂಡ ಮೃತ ಯೋಧನ ಪತ್ನಿಯಾಗಿದ್ದರು. ಕೊರಿಯರ್‌ನವರು ಶಶಿಕಲಾ ಅವರಿಗೆ ಕರೆ ಮಾಡಿದ್ದರು. ಆದರೆ ಅವರು ಊರಲ್ಲಿ ಇರದ ಕಾರಣ ಬಸಮ್ಮನಿಗೆ ಕೊರಿಯರ್ ಅನ್ನು ಪಡೆದು ತೆಗೆದು ನೋಡಲು ತಿಳಿಸಿದ್ದರು.

ತೆಗೆದು ನೋಡಿದಾಗ ಹೇರ್ ಡ್ರೈಯರ್ ಇತ್ತು. ಈ ವೇಳೆ ಪಕ್ಕದ ಮನೆಯವರು ಹೇರ್ ಡ್ರೈಯರ್ ಆನ್ ಮಾಡಲು ತಿಳಿಸಿದ್ದಾರೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಬ್ಲಾಸ್ಟ್ ಆಗಿ ಜೋರಾಗಿ ಸದ್ದಾಯಿತು.

ಬ್ಲಾಸ್ಟ್ ಆದ ಹಿನ್ನೆಲೆ ಎರಡೂ ಕೈಗಳು ತುಂಡಾಗಿದ್ದು, ಬೆರಳುಗಳು ಛಿದ್ರ ಛಿದ್ರವಾಗಿ ತುಂಡಾಗಿದೆ. ಮನೆಯಲ್ಲಿ ರಕ್ತ ಚಿಮ್ಮಿದ್ದು, ಬಸಮ್ಮನನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಅವರನ್ನು ವಿಚಾರಿಸಿದಾಗ ನಾನು ಹೇರ್ ಡ್ರೈಯರ್ ಆರ್ಡರ್ ಮಾಡೇ ಇಲ್ಲ. ಆದರೆ ನನ್ನ ಹೆಸರಲ್ಲಿ ಹೇರ್ ಡ್ರೈಯರ್ ಬಂದಿದೆ. ಆರ್ಡರ್ ಮಾಡಿದವರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂದು ಪೊಲೀಸರಿಂದ ತನಿಖೆ ನಡೆದಿದೆ.

ಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಚೇದನ: ಕೊನೆಗೂ ಬಯಲಾಯ್ತು ಕಾರಣ

ಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಏಕಾಏಕಿ ಡಿವೋರ್ಸ್ ಘೋಷಿಸಿ ಪ್ರತಿಯೊಬ್ಬರಿಗೂ ಶಾಕ್ ನೀಡಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನಕ್ಕೆ ಜೋಡಿ ಕೊನೆ ಹಾಡಿದ್ದಾರೆ. ಬೇರೆ ಬೇರೆಯಾಗುತ್ತಿರುವ ಬಗ್ಗೆ ಆಗುವ ರೆಹಮಾನ್ ಹಾಗೂ ಸೈರಾ ತಿಳಿಸಿದ್ದಾರೆ. ಇದೀಗ ವಿಚ್ಛೇದನಕ್ಕೆ ಕಾರಣ ಏನು ಎಂಬುದು ಬಯಲಾಗಿದೆ.

ಕೈತುಂಬ ಕೆಲಸ ಇರುವ ರೆಹಮಾನ್ ವರ್ಷದ ಎಲ್ಲಾ ದಿನಗಳಲ್ಲೂ ಸಖತ್ ಬ್ಯುಸಿಯಾಗಿರ್ತಾರೆ ಅವರು ತಂಡದ ಜೊತೆ ಕಾನ್ಸರ್ಟ್ ನಡೆಸುತ್ತಾರೆ. ಒಂದೊಮ್ಮೆ ಕಾನ್ಸರ್ಟ್ ಇಲ್ಲ ಎಂದಾದರೆ ಹಾಡಿನ ಕಂಪೋಸ್​ನಲ್ಲಿ ಬ್ಯುಸಿ ಆಗುತ್ತಾರೆ. ಈ ಕಾರಣಕ್ಕೆ ಅವರು ನಿದ್ರಿಸೋದು ಮುಂಜಾನೆ ವೇಳೆಗೆ. ಅವರು ನಿದ್ದೆಯಿಂದ ಎದ್ದೇಳುವಾಗ ಮಧ್ಯಾಹ್ನ ಆಗುತ್ತದೆ. ಇದು ಅವರ ದಿನಚರಿ. ಈ ಕಾರಣಕ್ಕೆ ಕುಟುಂಬಕ್ಕೆ ಅವರು ಹೆಚ್ಚು ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಇದು ವಿಚ್ಛೇದನಕ್ಕೆ ಕಾರಣ ಆಗಿರಬಹುದು ಎಂಬುದು ಕೆಲವರ ವಾದ.

ಸೈರಾ ಬಾನು ಅವರು ವಿಚ್ಛೇದನಕ್ಕೆ ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆ. ‘ಸಂಬಂಧದಲ್ಲಿನ ಭಾವನಾತ್ಮಕ ಒತ್ತಡದಿಂದಾಗಿ ವಿಚ್ಛೇದನ ಪಡೆದಿರುವುದಾಗಿ’ ಸೈರಾ ಹೇಳಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಸ್ಪಷ್ಟ ಹೇಳಿಕೆ ಬಂದಿಲ್ಲ.

ರೆಹಮಾನ್ ಅವರಿಗೆ ಈಗಲೂ ಮಾಜಿ ಪತ್ನಿ ಮೇಲೆ ಗೌರವ ಹಾಗೆಯೇ ಇದೆ ಎನ್ನಲಾಗಿದೆ. ಇವರು ಬರೋಬ್ಬರಿ 29 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದರು. ಕಳೆದ ವರ್ಷ ಕಸ್ತೂರಿ ಶಂಕರ್ ಅವರು ಸೈರಾ ಬಾನು ಬಗ್ಗೆ ಟೀಕೆ ಮಾಡಿದ್ದರು. ಅವರಿಗೆ ತಮಿಳು ಬರುವುದಿಲ್ಲ ಎಂದಿದ್ದರು. ಈ ಸಂದರ್ಭದಲ್ಲಿ ಅವರು ಸೈರಾ ಪರ ಮಾತನಾಡಿದ್ದರು.

ಲೋಕಾಯುಕ್ತ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್: ಠಾಣೆ ಮೆಟ್ಟಿಲೇರಿದ ವಾರ್ತಾ ಇಲಾಖೆ ಉಪ ನಿರ್ದೇಶಕ!

0

ಕಲಬುರ್ಗಿ:- ಲೋಕಾಯುಕ್ತ ಹೆಸರಲ್ಲಿ ವಾರ್ತಾ ಇಲಾಖೆಯ ಉಪ ನಿರ್ದೇಶಕರಿಗೆ ಹಣದ ಬೇಡಿಕೆ ಇಟ್ಟ ಘಟನೆ ಕಲಬುರಗಿಯಲ್ಲಿ ಜರುಗಿದೆ.

ಕಲಬುರಗಿ ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ ಬಿ ಅವರಿಗೆ ವಾಟ್ಸ್ ಆಪ್ ಕಾಲ್‌ ಮಾಡಿದ ಆರೋಪಿಗಳು, ಮೊದಲು ದಯಾನಂದ ಸಿ ಐ ಅಂತ ಪರಿಚಯ ಮಾಡಿಕೊಂಡು ಬಳಿಕ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ.

ನಿಮ್ಮ‌ ವಿರುದ್ಧ ದೂರು ಬಂದಿದೆ , ನಮ್ಮ ಹಂತದಲ್ಲೆ ಬಿ ರಿಪೋರ್ಟ್ ಹಾಕ್ತೇವೆ ಅಂತಾ ದಯಾನಂದ ಹೇಳಿದ್ದಾನೆ. ಕೊನೆಗೆ ಎಸ್ ಪಿ , ಎಡಿಜಿಪಿ ಜೊತೆ ಮಾತಾನಾಡುವಂತೆ ಬೇರೆಯವರಿಗೆ ಕರೆ ಟ್ರಾನ್ಸಫರ್ ಮಾಡಿದ್ದಾನೆ.

ಒಂದು ಲಕ್ಷ ಹಣ ಕೊಡಬೇಕು ಇಲ್ಲದೆ ಹೋದರೆ ಕಲಬುರಗಿ ವಾರ್ತಾ ಇಲಾಖೆಯ ಕಚೇರಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹೀಗಾಗಿ ಲೋಕಾಯುಕ್ತರ ಹೆಸರಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ವಿರುದ್ಧ ವಾರ್ತಾ ಇಲಾಖೆ ಉಪ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿಬಿ ಅವರು, ಸ್ಡೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದು, ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೌತಿ ಖಾತೆಗೆ ಲಂಚಕ್ಕೆ ಬೇಡಿಕೆ: “ಲೋಕಾ” ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

0

ಚಿತ್ರದುರ್ಗ:- ಪೌತಿ ಖಾತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ.

ಇಲ್ಲಿನ ನೆಲಗೇಲತ ಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದೆ. ಗ್ರಾಮದ ಚನ್ನಕೇಶವಯ್ಯ ಎಂಬುವವರು, ಪೌತಿ ಖಾತೆ ಮಾಡಿಸಲು ಬಂದಿದ್ದ ವೇಳೆ ಲೆಕ್ಕಾಧಿಕಾರಿ ಹರೀಶ್ ಅವರು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಲೋಕಾಯುಕ್ತಕ್ಕೆ ದೂರು ದಾಖಲಾಗಿತ್ತು. ದೂರಿನ ಅನ್ವಯ ಲೋಕಾಯುಕ್ತ SP ವಾಸುದೇವ್ ರಾವ್ ನೇತೃತ್ವದಲ್ಲಿ ಕಚೇರಿ ಮೇಲೆ ದಾಳಿ ನಡೆದಿದ್ದು, ಈ ವೇಳೆ ರೆಡ್ ಹ್ಯಾಂಡ್ ಆಗಿ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದಿದ್ದಾರೆ.

ಇನ್ನೂ ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎಂಬುವವನ್ನು ಕೂಡಾ ಅರೆಸ್ಟ್ ಮಾಡಲಾಗಿದೆ.

ಕಾಂಗೋ: ಕುಸಿದು ಬಿದ್ದ ಪರ್ವತದಿಂದ ಭಾರೀ ಪ್ರಮಾಣದ ತಾಮ್ರದ ನಿಕ್ಷೇಪ ಪತ್ತೆ

0

ಆಫ್ರಿಕಾದ ಕಾಂಗೋದಲ್ಲಿ ಪರ್ವತದ ಭಾಗವೊಂದು ಕುಸಿದು ಬಿದ್ದಿದ್ದು ಈ ವೇಳೆ ಭಾರೀ ಪ್ರಮಾಣದ ತಾಮ್ರದ ನಿಕ್ಷೇಪ ಪತ್ತೆಯಾಗಿದೆ. ಇದನ್ನು ನೋಡಿದ ಪ್ರತಿಯೊಬ್ಬರಿಗೂ ಅಚ್ಚರಿ ಆಗಿದೆ. ಕೋಟ್ಯಾಂತರ ಬೆಲೆ ಬಾಳುವ ತಾಮ್ರದ ನಿಕ್ಷೇಪ ಇದಾಗಿದ್ದು ಪರ್ವದ ಕುಸಿದು ಬೀಳುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪರ್ವತ ಕುಸಿಯುರುವ ವಿಡಿಯೋ ವೈರಲ್‌ ಆಗಿದ್ದು, ಇಷ್ಟೊಂದು ತಾಮ್ರ ಇದ್ದರೂ ಕಾಂಗೋ ಬಡ ದೇಶವಾಗಿಯೇ ಉಳಿದುಕೊಂಡಿರುವುದಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ನಿಕ್ಷೇಪದ ವಿಚಾರದಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳು ಮಧ್ಯಪ್ರವೇಶ ಮಾಡಬಾರದು ಎಂದು ಹಲವರು ಒತ್ತಾಯಿಸಿದ್ದಾರೆ.

ಕಾಂಗೋ ದೇಶ ತನ್ನಲ್ಲಿರುವ ನೈಸರ್ಗಿಕ ಸಂಪನ್ಮೂಲದಿಂದಲೇ ಖ್ಯಾತಿ ಪಡೆದುಕೊಂಡಿದೆ. ಸುಮಾರು ಶತಮಾನಗಳ ಕಾಲದಿಂದ ಇಲ್ಲಿ ತಾಮ್ರದ ಗಣಿಗಾರಿಕೆ ನಡೆಯುತ್ತಿದೆ. ಆಫ್ರಿಕಾದ ತಾಮ್ರದ ಬೆಲ್ಟ್ನಲ್ಲಿರುವ ಕಾಂಗೋ ವಿಶ್ವದಲ್ಲಿರುವ ತಾಮ್ರದ ಶೇ.10ರಷ್ಟನ್ನು ಪೂರೈಕೆ ಮಾಡುತಿದೆ.

ನರೇಂದ್ರ ಮೋದಿಗೆ ಗಯಾನಾದಲ್ಲಿ ಅದ್ದೂರಿ ಸ್ವಾಗತ: 56 ವರ್ಷಗಳ ಬಳಿಕ ಪ್ರಧಾನಿ ಮೊದಲ ಭೇಟಿ

0

ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಪ್ರವಾಸದ ಭಾಗವಾಗಿ ಗಯಾನಾದ ಜಾರ್ಜ್‌ಟೌನ್‌ಗೆ ಭೇಟಿ ನೀಡಿದ್ದಾರೆ. ಈ ಮೂಲಕ 56 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈ ದೇಶಕ್ಕೆ ಭೇಟಿ ನೀಡಿದಂತಾಗಿದೆ. ಗಯಾನಾಗೆ ಭೇಟಿ ನೀಡಿದ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ.

ಬ್ರೆಜಿಲ್‌ನಲ್ಲಿ ನಡೆದ 2 ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಮೋದಿ ಅವರು ಇಂದು ಗಯಾನಾದ ಜಾರ್ಜ್‌ಟೌನ್‌ಗೆ ಬಂದಿಳಿದಿದ್ದಾರೆ. ಇದೇ ಸಂದರ್ಭದಲ್ಲಿ ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಸೇರಿದಂತೆ ಇತರೆ ನಾಯಕರು ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಭಾರತ- ಕೆರಿಕಮ್ (ಕೆರಿಬಿಯನ್‌ ಕಮ್ಯುನಿಟಿ) ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಮೋದಿ ಅವರು ಮೊಹಮದ್ ಇರ್ಫಾನ್ ಅಲಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ಗಯಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೋವಿಡ್‌- 19 ಸಾಂಕ್ರಾಮಿಕದ ಅವಧಿಯಲ್ಲಿ ಮೋದಿ ಅವರು ಡೊಮಿನಿಕಾಕ್ಕೆ ನೀಡಿದ ನೆರವು ಮತ್ತು ಉಭಯ ದೇಶಗಳ ಬಾಂಧವ್ಯವನ್ನು ಬಲಪಡಿಸುವಲ್ಲಿ ಅವರು ತೋರಿದ ಬದ್ಧತೆಯನ್ನು ಗುರುತಿಸಿ ಡೊಮಿನಿಕಾ ದೇಶವು ‘ಡೊಮಿನಿಕಾ ಅವಾರ್ಡ್‌ ಆಫ್ ಆನರ್’ ನೀಡಲು ನಿರ್ಧರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ..

ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಭಾರತ- ಕೆರಿಕಮ್ (ಕೆರಿಬಿಯನ್‌ ಕಮ್ಯುನಿಟಿ) ಶೃಂಗಸಭೆಯಲ್ಲಿ ಡೊಮಿನಿಕಾ ದ್ವೀಪ ರಾಷ್ಟ್ರದ ಅಧ್ಯಕ್ಷೆ ಸಿಲ್ವೆನಿ ಬರ್ಟನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಡೊಮಿನಿಕಾ ಪ್ರಧಾನ ಮಂತ್ರಿಯವರ ಕಚೇರಿಯ ಹೇಳಿಕೆ ತಿಳಿಸಿದೆ.

‘ಪ್ರಧಾನಿ ಮೋದಿ ಅವರು 2021ರ ಫೆಬ್ರುವರಿಯಲ್ಲಿ ಡೊಮಿನಿಕಾಕ್ಕೆ 70,000 ಡೋಸ್ ಅಸ್ಟ್ರಾಜೆನೆಕಾ ಕೋವಿಡ್‌-19 ಲಸಿಕೆ ಪೂರೈಸಿದ್ದರು. ಈ ಉದಾರ ಕೊಡುಗೆಯು, ಡೊಮಿನಿಕಾಕ್ಕೆ ಕೆರಿಬಿಯನ್‌ ನಲ್ಲಿರುವ ತನ್ನ ನೆರೆಯ ದೇಶಗಳಿಗೆ ನೆರವು ನೀಡಲು ಅನುವು ಮಾಡಿಕೊಟ್ಟಿತ್ತು’ ಎಂದಿದೆ.

ವಿಕ್ರಂ ಗೌಡ ಎನ್‌ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ಬೇಡ: ಗೃಹ ಸಚಿವ!

0

ಬೆಂಗಳೂರು:- ವಿಕ್ರಂ ಗೌಡ ಎನ್‌ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಗೃಹ ಸಚಿವ ಜಿ ಪರಮೇಶ್ವರ್ ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ವಿಕ್ರಂ ಗೌಡ ಎನ್‌ಕೌಂಟರ್‌ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು.

ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್‌ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.

ಇದೇ ವೇಳೆ ಕಾಂಗ್ರೆಸ್ ಬಂದ ಮೇಲೆ ನಕ್ಸಲ್ ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ.

ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು. ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು.

ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿ, ಮುಂಡರಗಿಯ ತಂದೆ-ಮಗ ದುರ್ಮರಣ!

0

ತುಮಕೂರು/ಗದಗ:- ಜಿಲ್ಲೆ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ರಸ್ತೆಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಂದೆ-ಮಗ ಧಾರುಣ ಸಾವನ್ನಪ್ಪಿದ ಘಟನೆ ಜರುಗಿದೆ.

35 ವರ್ಷದ ಗುರುರಾಜು, 2 ವರ್ಷದ ಪುತ್ರ ರಿಷಾಂಕ್ ಎಂದು ಗುರುತಿಸಲಾಗಿದೆ. ಮುಂಡರಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ.

ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ 28 ವರ್ಷದ ಹರ್ಷಿತಾ ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೆಹಮಾನ್ ಗೆ ಸೈರಾ ಸಿಕ್ಕಿದ್ದು ಹೇಗೆ: ವಿಡಿಯೋ ವೈರಲ್

ಎ ಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಡಿವೋರ್ಸ್ ನೀಡುವ ಮೂಲಕ 29 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಯಾಗಿಸಿದ್ದಾರೆ. ರೆಹಮಾನ್, ಸೈರಾ ವಿಚ್ಚೇದನದ ಸುದ್ದಿ ಪ್ರತಿಯೊಬ್ಬರಿಗೂ ಶಾಕ್ ಆಗಿದೆ. ಈ ಮಧ್ಯೆ ರೆಹಮಾನ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ.

ಸುಮಾರು ಮೂರು ದಶಕಗಳ ಕಾಲ ಸಂಸಾರ ನಡೆಸಿದ್ದ ರೆಹಮಾನ್ ಹಾಗೂ ಸೈರಾ ಮಧ್ಯೆ ಪ್ರೀತಿ ಹಾಗೂ ಹೊಂದಾಣಿಕೆ ಇತ್ತು. ಆದರೆ, ಈ ಹೊಂದಾಣಿಕೆ ಈಗ ಮುರಿದಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ.

‘1994ರಲ್ಲಿ ನಾನು ಸುಮಾರು ಇಪ್ಪತ್ತೇಳು ವರ್ಷದವನಾಗಿದ್ದೆ. ನಾನು ಮದುವೆಯಾಗಲು ನಿರ್ಧರಿಸಿದೆ. ನನಗೆ ವಯಸ್ಸಾಯಿತು ಎಂದು ಅನಿಸುತ್ತಿತ್ತು. ನಾನು ಯಾವಾಗಲೂ ತುಂಬಾ ನಾಚಿಕೆಪಡುತ್ತಿದ್ದೆ ಮತ್ತು ಹುಡುಗಿಯರೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ನಾವು ಕೆಲಸ ಮಾಡುವಾಗ ನನ್ನ ಸ್ಟುಡಿಯೋದಲ್ಲಿ ನಾನು ಅನೇಕ ಯುವ ಮಹಿಳಾ ಗಾಯಿಕಿಯಕರನ್ನು ಭೇಟಿಯಾದೆ. ಅವರ ಬಗ್ಗೆ ನನಗೆ ಅಪಾರ ಗೌರವವಿತ್ತು. ಅಲ್ಲಿ ಇದ್ದ ಯಾರನ್ನೂ ಮದುವೆ ಆಗಬೇಕು ಎಂಬ ದೃಷ್ಟಿಯಿಂದ ನೋಡಿಲ್ಲ. ಹುಡುಗಿಯರ ಬಗ್ಗೆ ಯೋಚಿಸಲು ನನಗೆ ಸಮಯವಿರಲಿಲ್ಲ. ನಾನು ಹಗಲಿರುಳು ಕೆಲಸ ಮಾಡುತ್ತಿದ್ದೆ’ ಎಂದಿದ್ದರು ರೆಹಮಾನ್.

‘ಅವಳು ಸುಂದರ ಮತ್ತು ಸೌಮ್ಯವಾಗಿದ್ದಳು. ನಾವು ಮೊದಲ ಬಾರಿಗೆ 6 ಜನವರಿ 1995ರಂದು ನನ್ನ ಇಪ್ಪತ್ತೆಂಟನೇ ಹುಟ್ಟುಹಬ್ಬದಂದು ಭೇಟಿಯಾದೆವು. ಆ ಬಳಿಕ ನಾವು ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡುತ್ತಿದ್ದೆವು. ನನ್ನನ್ನು ಮದುವೆಯಾಗಲು ಬಯಸುತ್ತೀರಾ ಎಂದು ನಾನು ಅವಳನ್ನು ಇಂಗ್ಲಿಷ್‌ನಲ್ಲಿ ಕೇಳಿದ್ದೆ. ಆ ದಿನಗಳಲ್ಲಿ ಸಾಯಿರಾ ತುಂಬಾ ಶಾಂತವಾಗಿದ್ದಳು. ಈಗಲೂ ಅವಳು ಸುಮ್ಮನಿರುತ್ತಾಳೆ’ ಎಂದಿದ್ದರು ರೆಹಮಾನ್.

ರೆಹಮಾನ್ ಹಾಗೂ ಸೈರಾ 1995ರ ಮಾರ್ಚ್ 12ರಂದು ಮದುವೆ ಆದರು. ಬಹುತೇಕ ಮೂರು ದಶಕಗಳ ಕಾಲ ಹೊಂದಾಣಿಕೆಯಿಂದ ಸಂಸಾರ ಮಾಡಿದ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ಹೀಗೆ ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ಗಾಯಕನಾಗಿಯೂ ಎ.ಆರ್. ರೆಹಮಾನ್ ಅವರಿಗೆ ಬೇಡಿಕೆ ಇದೆ. ತಮಿಳು, ತೆಲುಗು, ಹಿಂದಿ ಮುಂತಾದ ಭಾಷೆಯ ಸಿನಿಮಾಗಳಿಗೆ ರೆಹಮಾನ್ ಬ್ಯುಸಿಯಾಗಿದ್ದಾರೆ.

error: Content is protected !!