Home Blog Page 2097

ಹಣಕಾಸಿನ ವಿಚಾರದಲ್ಲಿ ತಾಂಡವ್, ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು: ಕಮಿಷನರ್ ದಯಾನಂದ್

ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದರು ಎಂಬ ಕಾರಣಕ್ಕೆ ‘ಜೋಡಿಹಕ್ಕಿ’ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್ ನಿರ್ದೇಶಕ ಭರತ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಭರತ್ ನೀಡಿದ ದೂರಿನ ಮೇರೆಗೆ ನಟ ತಾಂಡವ್ ರಾಮ್ ನನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇದೀಗ ಘಟನೆ ಕುರಿತು ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆ (ನ.18) ಸಂಜೆ ಈ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ತಾಂಡವ್‌ರನ್ನು ಈಗಾಗಲೇ ಬಂಧಿಸಿದ್ದೇವೆ. ಕೃತ್ಯಕ್ಕೆ ಬಳಸಿದ ಗನ್ ಸೀಜ್ ಮಾಡಲಾಗಿದೆ. ಸಿನಿಮಾಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರದಲ್ಲಿ ತಾಂಡವ್ ಮತ್ತು ನಿರ್ದೇಶಕ ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂಬುದು ಪ್ರಾರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ. ಗುಂಡು ಹಾರಿಸಬೇಕು ಎಂಬ ದೃಷ್ಟಿಕೋನದಲ್ಲಿ ಹೀಗೆ ಮಾಡಿದ್ದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ.

‘ದೇವನಾಂಪ್ರಿಯ’ ಸಿನಿಮಾದಲ್ಲಿ ತಾಂಡವ್ ಹೀರೋ ಆಗಿ ನಟಿಸುತ್ತಿದ್ದರು. ಈ ಚಿತ್ರಕ್ಕೆ ಭರತ್ ನಿರ್ದೇಶನ ಮಾಡುತ್ತಿದ್ದರು. ಕಳೆದ 2 ವರ್ಷಗಳಿಂದ ನಡೆಯುತ್ತಿದ್ದ ಸಿನಿಮಾ ಶೂಟಿಂಗ್, ನಿರ್ಮಾಪಕರು ಸಿಗದ ಹಿನ್ನೆಲೆ ಹಂತ ಹಂತವಾಗಿ ನಟ ತಾಂಡವ್ 6 ಲಕ್ಷ ಚಿತ್ರಕ್ಕೆ ಹೂಡಿಕೆ ಮಾಡಿದರು. ಪ್ರಸ್ತುತ ಹಾಸನದ ಕುಮಾರಸ್ವಾಮಿ ಎಂಬುವವರು ಚಿತ್ರಕ್ಕೆ ಹೂಡಿಕೆ ಮಾಡಿದ್ದಾರೆ.

ಬೇರೆ ನಿರ್ಮಾಪಕರು ಸಿಕ್ಕಿದರು ಕೂಡ ಸಿನಿಮಾ ಶೂಟಿಂಗ್ ಅನ್ನು ನಿರ್ದೇಶಕ ಭರತ್ ನಿಲ್ಲಿಸಿದರು. ಈ ಹಿನ್ನೆಲೆ ತಾವು ಕೊಟ್ಟಿದ್ದ 6 ಲಕ್ಷ ರೂ. ತಾಂಡವ್ ವಾಪಸ್ ಕೇಳಿದರು. ಹಣಕಾಸಿನ ವಿಚಾರ ಚರ್ಚಿಸುವ ವೇಳೆ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ನಟ ತಾಂಡವ್ ಗನ್ ಹಿಡಿದು ಭರತ್ ಕಡೆ ಗುಂಡು ಹಾರಿಸಿದ್ದಾರೆ. ಆದರೆ ಆ ಗುಂಡಿನ ದಾಳಿಯಿಂದ ಭರತ್ ತಪ್ಪಿಸಿಕೊಂಡಿದ್ದಾರೆ. ಇದೀಗ ಭರತ್ ದೂರಿನ ಮೇರೆಗೆ ತಾಂಡವ್‌ರನ್ನು ಚಂದ್ರಲೇಔಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Cricketer Suryakumar Yadav: ಕುಕ್ಕೆ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ!

0

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ  ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ ನೀಡಿದ್ದಾರೆ. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಿದರು.

ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದರಂತೆ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದರು.

ಬಾಲ್ಯ ಸ್ನೇಹಿತನ ಕೈ ಹಿಡಿಯುತ್ತಿರುವ ನಟಿ ಕೀರ್ತಿ ಸುರೇಶ್: ಮದುವೆ ಯಾವಾಗ ಗೊತ್ತಾ?

ಬಹುಭಾಷಾ ನಟಿ ಕೀರ್ತಿ ಸುರೇಶ್ ಮದುವೆ ನಿಶ್ಚಯವಾಗಿದೆ. ಈ ಹಿಂದೆ ಹಲವು ಭಾರಿ ನಟಿಯ ಮದುವೆ ವದಂತಿಗಳು ಹರಿದಾಡಿತ್ತು. ಆದ್ರೆ ಇದೀಗ ಆಲ್ ಮೋಸ್ಟ್ ಕನ್ಪಾರ್ಮ್ ಆಗಿದೆ. ಮುಂದಿನ ತಿಂಗಳು ಗೋವಾದಲ್ಲಿ ಅದ್ಧೂರಿಯಾಗಿ ಮದುವೆಗೆ ಸಿದ್ಧತೆ ನಡೆಯಲಿದ್ದು ಆಪ್ತರಿಗಷ್ಟೇ ಆಹ್ವಾನ ನೀಡಲಾಗುತ್ತಿದೆ.

ಮಹಾನಟಿ ಖ್ಯಾತಿಯ ನಟಿ ಕೀರ್ತಿ ಸುರೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಬಾಲಿವುಡ್ ​ಗೆ ಎಂಟ್ರಿಕೊಟ್ಟಿದ್ದಾರೆ. ಈ ಬೆನ್ನಲ್ಲೇ ನಟಿ ಹಸೆಮಣೆ ಏರಲು ಸಜ್ಜಾಗಿದ್ದು ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಈ ಹಿಂದೆ ಕೀರ್ತಿ ಸುರೇಶ್, ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಂಚಂದ್ರನ್ ಅವರನ್ನು ವಿವಾಹವಾಗಲಿದ್ದಾರೆ ಎನ್ನಲಾಗಿತ್ತು. ಮಾತ್ರವಲ್ಲ ಇನ್ನೂ ಕೆಲವು ನಟ, ಕೆಲ ನಿರ್ದೇಶಕರ ಜೊತೆಗೂ ಸಹ ಕೀರ್ತಿ ಸುರೇಶ್ ಹೆಸರು ಕೇಳಿ ಬಂದಿತ್ತು. ಇದೀಗ ಕೊನೆಗೂ ಕೀರ್ತಿ ಸುರೇಶ್ ಮದುವೆ ಫಿಕ್ಸ್ ಆಗಿದೆ.

ಕೀರ್ತಿ ಸುರೇಶ್ ತಮ್ಮ ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಅವರನ್ನು ವಿವಾಹವಾಗಲಿದ್ದಾರೆ. ಆಂಟೊನಿ ಹಾಗೂ ಕೀರ್ತಿ ಸುರೇಶ್ ಸಹಪಾಠಿಗಳಾಗಿದ್ದು, ಒಟ್ಟಿಗೆ ಹೈಸ್ಕೂಲ್ ಶಿಕ್ಷಣವನ್ನು ಮಾಡಿದವರು. ಆಗಿನಿಂದಲೂ ಇವರು ಪ್ರೀತಿಯಲ್ಲಿದ್ದರಂತೆ. ಇದೀಗ ಮನೆಯವರ ಒಪ್ಪಿಗೆ ಪಡೆದು ವಿವಾಹವಾಗುತ್ತಿದ್ದಾರೆ. ಈ ಜೋಡಿಯ ವಿವಾಹ ಡಿಸೆಂಬರ್ 11-12 ರಂದು ಗೋವಾನಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಕುಟುಂಬಸ್ಥರು ಮತ್ತು ಕೆಲವೇ ಆತ್ಮೀಯರ ಸಮ್ಮುಖದಲ್ಲಿ ಈ ಜೋಡಿ ವಿವಾಹವಾಗಲಿದೆ. ಆ ನಂತರ ಕೊಚ್ಚಿ ಹಾಗೂ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಆಂಟೊನಿ ತಟ್ಟಿಲ್ ಕೊಚ್ಚಿಯವರಾಗಿದ್ದು, ದುಬೈನಲ್ಲಿ ನೆಲೆಗೊಂಡಿದ್ದಾರೆ. ದುಬೈನಲ್ಲಿ ಕೆಲ ಉದ್ಯಮಗಳನ್ನು ಆಂಟೊನಿ ಹೊಂದಿದ್ದು ಇದೀಗ ಆಂಟೊನಿ ಹಾಗೂ ಕೀರ್ತಿ ವಿವಾಹವಾಗಲಿದ್ದಾರೆ.

ವೈದ್ಯರ ನಿರ್ಲಕ್ಷಕ್ಕೆ ಮಹಿಳೆ ಸಾವು.! ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

0

ಬೀದರ್:‌ ವೈದ್ಯರ ನಿರ್ಲಕ್ಷಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ನರಸಪ್ಪ (63) ಮೃತ ಮಹಿಳೆಯಾಗಿದ್ದು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ ಪರಿಣಾಮ,

ಬಲಿಯಾಗಿದ್ದಾರೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿ ಆಸ್ಪತ್ರೆ ಮುಂದೆ ಪ್ರತಿಭಟನಾ ಧರಣಿ ಮಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.ಈ ಕುರಿತು ಹಳ್ಳಿಖೇಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Winter Session: ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ!

0

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ.

ಇತ್ತೀಚೆಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಂತಿಮ ದಿನಾಂಕ ನಿಗದಿಯಾಗುತ್ತಿದ್ದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸಜ್ಜಾಗುತ್ತಿದ್ದಾರೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ.

ನನ್ನೇಕೆ ವಿಡಿಯೋ ಮಾಡ್ತಿದ್ದೀರಾ, ನಾನೇನು ಡ್ಯಾನ್ಸ್ ಮಾಡ್ತಾ ಇದ್ದೀನಾ: Media ಮೇಲೆ MUDA ಮಾಜಿ ಆಯುಕ್ತ ಗರಂ

0

ಮೈಸೂರು: ನನ್ನೇಕೆ ವಿಡಿಯೋ ಮಾಡ್ತಿದ್ದೀರಾ, ನಾನೇನು ಡ್ಯಾನ್ಸ್ ಮಾಡ್ತಾ ಇದ್ದೀನಾ ಎಂದು ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್‌ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತದ ಮುಂದೆ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಡಿಬಿ ನಟೇಶ್ ಹಾಜರಾಗಿದ್ದಾರೆ.

ಈ ವೇಳೆ ಮಾಧ್ಯಮ ಪ್ರತಿನಿಧಿಗಳು ನಟೇಶ್‌ ಅವರ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಸಿಟ್ಟಾದ ನಟೇಶ್‌, ನನ್ನ ವಿಡಿಯೋ ಯಾಕೆ ಮಾಡ್ತೀದ್ದೀರಾ? ನಾನೇನು ಡ್ಯಾನ್ಸ್ ಮಾಡ್ತಾ ಇದ್ದೀನಾ ಅಂತಾ ಇಂಗ್ಲೀಷ್‌ನಲ್ಲಿ ಪ್ರಶ್ನಿಸಿ ಸಿಟ್ಟು ಹೊರಹಾಕಿದರು. ಅಷ್ಟೇ ಅಲ್ಲದೇ ಕೈಯಲ್ಲಿ ತಂದಿದ್ದ ದಾಖಲೆಗಳನ್ನ ಟೇಬಲ್ ಮೇಲೆ ಕುಕ್ಕಿದ್ದಾರೆ.

ಮುಡಾ ನಿವೇಶನಗಳನ್ನು 50:50 ಅನುಪಾತದಲ್ಲಿ ಕಾನೂನು ಬಾಹಿರ ಸೈಟು ಹಂಚಿಕೆ ಮಾಡಿರುವ ಆರೋಪ ನಟೇಶ್ ಅವರ ಮೇಲಿದೆ. ಖುದ್ದು ಲೋಕಾಯುಕ್ತಕ್ಕೆ ವಿಚಾರಣೆಗೆ ಬರುವಂತೆ ಲೋಕ ಎಸ್ಪಿ ಉದೇಶ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

‘ಮುಗಿಲ್ ಪೇಟೆ’ ಚಿತ್ರದ ನಿರ್ದೇಶಕ ಭರತ್ ಮೇಲೆ ಗುಂಡಿನ ದಾಳಿ: ನಟ ತಾಂಡವ್ ರಾಮ್ ಬಂಧನ

ಜೋಡಿಹಕ್ಕಿ ಸೀರಿಯಲ್ಮೂಲಕ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟ ತಾಂಡವ್ರಾಮ್ನಿರ್ದೇಶಕನಿಗೆ ಗುಂಡು ಹಾರಿಸಿ ಕೊಲೆಗೆ ಯತ್ನ ಮಾಡಿದ್ದಾರೆ.  ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್‌‌ ಅವರ ಮೇಲೆ ನಟ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಚಂದ್ರಲೇಔಟನ್ ಘಟನೆ ಸಂಭವಿಸಿದೆ. ಲೈಸೆನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಭರತ್ ನಿರ್ದೇಶನದ ಸಿನಿಮಾದಲ್ಲಿ ನಾಯಕನಾಗಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಭರತ್ ಆ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್​ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ.

‘ಮುಗಿಲ್ ಪೇಟೆ’ ಸಿನಿಮಾವನ್ನು ಭರತ್ ನಿರ್ದೇಶನ ಮಾಡಿದ್ದರು. ಇನ್ನು ತಾಂಡವ್ ರಾಮ್, ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಕೆಎಂ ಚೈತನ್ಯ ಅವರ ‘ಅಬ್ಬಬ್ಬ’ ಸಿನಿಮಾದಲ್ಲಿಯೂ ನಟಿಸಿದ್ದರು. ಇದೀಗ ತಾಂಡವ್ ರಾಮ್ ಅನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪರವಾನಗಿ ಹೊಂದಿದ್ದ ಅವರ ಬಂದೂಕನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಂಡವ್ ರಾಮ್ ನಾಯಕನಾಗಿ ನಟಿಸುತ್ತಿದ್ದ ‘ದೇವನಾಂಪ್ರಿಯ’ ಹೆಸರಿನ ಸಿನಿಮಾ ಸೆಟ್ಟೇರಿತ್ತು, ಸಿನಿಮಾ ಅನ್ನು ನಿರ್ದೇಶಕ ಭರತ್ ನಾವುಂಡ ನಿರ್ದೇಶನ ಮಾಡುತ್ತಿದ್ದರು. ಸಿನಿಮಾ ಪ್ರಾರಂಭ ಆಗಿ ಎರಡು ವರ್ಷಗಳಾಗಿತ್ತು. ಆದರೆ ಸಿನಿಮಾವನ್ನು ಭರತ್ ನಿಲ್ಲಿಸಿಬಿಟ್ಟಿದ್ದರಂತೆ. ಸಿನಿಮಾ ನಿರ್ದೇಶನಕ್ಕೆಂದು ಭರತ್​ಗೆ ಆರು ಲಕ್ಷ ರೂಪಾಯಿ ಹಣವನ್ನು ತಾಂಡವ್ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದರು ತಾಂಡವ್, ನಿನ್ನೆ (ನವೆಂಬರ್ 18) ‘ದೇವನಾಂಪ್ರಿಯ’ ಸಿನಿಮಾದ ನಿರ್ಮಾಪಕ ಕುಮಾರಸ್ವಾಮಿ ಎಂಬುವರ ಚಂದ್ರಾಲೇಔಟ್​ನ ಕಚೇರಿಯಲ್ಲಿ ಭರತ್ ಅನ್ನು ಕರೆಸಿ ಮೀಟಿಂಗ್ ಮಾಡಲಾಗಿತ್ತು. ಈ ವೇಳೆ ತಾಂಡವ್, ನಿರ್ದೇಶಕ ಭರತ್ ಬಳಿ ಹಣ ವಾಪಸ್ ಕೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ತಾಂಡವ್ ಬೆದರಿಕೆ ಹಾಕಿದ್ದು ಇದೇ ವೇಳೆ ಗುಂಡು ಹಾರಿಸಿ ಹತ್ಯೆಗೂ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

0

ಬೆಂಗಳೂರು: ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದೆ.

ಲೋಕಾಯುಕ್ತ ತನಿಖೆ ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ. ಅದಲ್ಲದೆ ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಇನ್ನೂ ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ. 100 ಕೋಟಿ ಇರಲಿ, 500 ಕೋಟಿ ಇರಲಿ, ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ. ಯಾರೂ ನಿಮ್ಮನ್ನು ತಡೆಯುತ್ತಿಲ್ಲ ಎಂದರು.

ಗುಂಡು ಹಾರಿಸಿ ಸಿನಿಮಾ ನಿರ್ದೇಶಕನ ಕೊಲೆಗೆ ಯತ್ನ: ನಟ ತಾಂಡವ ರಾಮ್ ಅರೆಸ್ಟ್.!

0

ಬೆಂಗಳೂರು: ಜೋಡಿಹಕ್ಕಿ, ಭೂಮಿಗೆ ಬಂದ ಭಗವಂತ ಧಾರವಾಹಿಗಳಲ್ಲಿ ನಟಿಸಿರುವ ನಟ ತಾಂಡವ್ ರಾಮ್ ಅನ್ನು ಚಂದ್ರಾ ಲೇಔಟ್ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಹೌದು ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪ ತಾಂಡವ್ ಮೇಲೆ ನಟಿಸಿರುವ ನಟ ತಾಂಡವ್ ರಾಮ್ ಅನ್ನು ಬಂಧಿಸಿದ್ದಾರೆ. ಮುಗಿಲ್ ಪೇಟೆ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಲಾಗಿತ್ತು.

ಈ ಹಿನ್ನೆಲೆ ಚಂದ್ರಲೇಔಟ್‌ನ ಕಚೇರಿಯಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು. ಈ ವೇಳೆ, ತಾಂಡವ್‌ಗೂ ಚಿತ್ರದ ನಿರ್ದೇಶಕ ಭರತ್‌ಗೂ ವಾಗ್ವಾದ ನಡೆದಿದೆ. ಈ ವೇಳೆ, ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್‌ಗೆ ತಗುಲದೆ ಗೋಡೆಗೆ ಬಿದ್ದಿದೆ. ಇದೀಗ ಭರತ್ ದೂರಿನ ಮೇರೆಗೆ ನಟ ತಾಂಡವ್ ಅವರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ: ಸುನೀಲ್ ಕುಮಾರ್

0

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ. ನಗರ ನಕ್ಸಲ್‌ಗಳು ಸಹ ಇದ್ದಾರೆ.

ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿ ಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್‌ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿ ಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.

error: Content is protected !!