Home Blog Page 21

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ: ಹೆತ್ತ ಮಕ್ಕಳನ್ನೇ ಕೊಂದನಾ ತಂದೆ?

ಕಾಮರೆಡ್ಡಿ: ತೆಲಂಗಾಣಕಾಮರೆಡ್ಡಿ ಜಿಲ್ಲೆಯಲ್ಲಿ ಮೂವರು ಬಾಲಕಿಯರು ನೀರಿನ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮೃತರಾದ ಬಾಲಕಿಯರು 8, 7 ಮತ್ತು 5 ವರ್ಷದ ಸಹೋದರಿಯರು ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳು ಬೆಳಿಗ್ಗೆ ತಮ್ಮ ತಂದೆಯೊಂದಿಗೆ ಮನೆ ಹೊರಗೆ ಹೋಗಿದ್ದು, ಬಳಿಕ ಮನೆಗೆ ಮರಳಲಿಲ್ಲ.

ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದರು. ನಂತರ ಶೋಧ ಕಾರ್ಯಾಚರಣೆ ವೇಳೆ ನೀರಿನ ಟ್ಯಾಂಕ್‌ನಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆಯಾಯಿತು. ಬಳಿಕ ಮುಂದುವರೆದ ಹುಡುಕಾಟದಲ್ಲಿ ಮೂರನೇ ಬಾಲಕಿಯ ಶವವೂ ಪತ್ತೆಯಾಗಿದೆ.

ಮಕ್ಕಳ ತಂದೆಯ ಮೇಲೆಯೇ ಅನುಮಾನ ವ್ಯಕ್ತವಾಗಿದ್ದು, ಮಕ್ಕಳನ್ನು ನೀರಿಗೆ ತಳ್ಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಘಟನೆ ಬಳಿಕ ಕಾಮರೆಡ್ಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ರಾಮನಗರದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ: ಕುದೂರು ಪೊಲೀಸರ ಬಲೆಗೆ ಬಿದ್ದ ಖದೀಮರು

0

ರಾಮನಗರ: ವಿಳಾಸ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ನಡೆಸಿದ್ದ ಮೂವರು ಆರೋಪಿಗಳನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಭು, ವಸಂತಿ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ ಸಂಚರಿಸಿ ಜನರ ಬಳಿ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿ, ಅವರ ಗಮನ ಬೇರೆಡೆ ಸೆಳೆದು ಸರಗಳನ್ನು ಕದ್ದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 3ರಂದು ಕಳ್ಳಿಪಾಳ್ಯ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಕಳ್ಳತನ ನಡೆದಿತ್ತು. ಅಲ್ಲದೆ ಮುನೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವಕ್ಕೆ ತೆರಳುತ್ತಿದ್ದ ಭಕ್ತರನ್ನೂ ಗುರಿಯಾಗಿಸಿಕೊಂಡಿದ್ದರು.

ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ಮಾರುತಿ ವ್ಯಾಗನಾರ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ತಂಡ ಒಟ್ಟು ಏಳು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು–ಕನಕಪುರ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ಯುವಕರ ಸಾವು!

ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು–ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23) ಹಾಗೂ ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಅವನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕಗ್ಗಲೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಲೀಟರ್‌ಗೆ 50 ಪೈಸೆ ಹೆಚ್ಚಳ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘವು ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಸಿಹಿ ಸುದ್ದಿ ನೀಡಿದೆ.

ಲೀಟರ್ ಹಾಲಿನ ದರದಲ್ಲಿ 50 ಪೈಸೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಹೈನುಗಾರರಿಗೆ ಲಾಭವಾಗಲಿದೆ.

ಹೊಸ ವರ್ಷದ ಆರಂಭದಲ್ಲಿ ಜನವರಿ 1ರಂದು ಲೀಟರ್‌ಗೆ 1 ರೂಪಾಯಿ ಹೆಚ್ಚಳ ಮಾಡಿದ್ದ ಸಂಘವು ಇದೀಗ ಮತ್ತೊಮ್ಮೆ 50 ಪೈಸೆ ಹೆಚ್ಚಳ ಮಾಡಿದೆ. ಇದರ ಫಲವಾಗಿ ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ 36 ರೂಪಾಯಿ 40 ಪೈಸೆ ಲಭ್ಯವಾಗಲಿದೆ.

ಈ ಹೆಚ್ಚುವರಿ ದರ ಮೇ ತಿಂಗಳ ಅಂತ್ಯದವರೆಗೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಲಾಭಾಂಶವನ್ನು ಪರಿಗಣಿಸಿ ದರ ಹೆಚ್ಚಳವನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿಗೆ ಬಂದ ಜ್ಯೂ. ಎನ್‌ಟಿಆರ್‌ ನೋಡಲು ಮುಗಿಬಿದ್ದ ಫ್ಯಾನ್ಸ್:‌ ಎಸ್ಕಲೇಟರ್ ಹಾನಿ

ಬೆಂಗಳೂರು: ತೆಲುಗು ನಟ ಜ್ಯೂ.ಎನ್‌ಟಿಆರ್ ಅವರಿಗಾಗಿ ಅಭಿಮಾನಿಗಳ ಕ್ರೇಜ್ ಮತ್ತೊಮ್ಮೆ ಗೋಚರಿಸಿದ್ದು, ಬೆಂಗಳೂರುದಲ್ಲಿ ಭಾರೀ ಜನಸ್ತೋಮ ಕಂಡುಬಂದಿದೆ.

ನಗರದ ಮಹದೇವಪುರದಲ್ಲಿರುವ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಜ್ಯೂ.ಎನ್‌ಟಿಆರ್ ಭಾಗವಹಿಸಿದ್ದರು. ಈ ವೇಳೆ ಸಾವಿರಾರು ಅಭಿಮಾನಿಗಳು ನಟನನ್ನು ನೋಡಲು ಆಸ್ಪತ್ರೆಗೆ ಧಾವಿಸಿದರು.

ಅಭಿಮಾನಿಗಳ ನೂಕುನುಗ್ಗಲಿನಿಂದ ಆಸ್ಪತ್ರೆಯೊಳಗೆ ಗೊಂದಲ ಉಂಟಾಗಿ, ಎಸ್ಕಲೇಟರ್ ಮುರಿದು ಹಾನಿಗೊಳಗಾಗಿದೆ.

ಜನಸ್ತೋಮ ಹೆಚ್ಚಾಗುತ್ತಿದ್ದಂತೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ನಿಯಂತ್ರಣಕ್ಕೆ ಬರದಿದ್ದರಿಂದ ಲಘು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.

ದಾವಣಗೆರೆಯಲ್ಲಿ ತೋಟಕ್ಕೆ ಬೆಂಕಿ: 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಭಸ್ಮ!

ದಾವಣಗೆರೆ: ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

ಓಬಳೇಶ್ ಎಂಬ ರೈತನಿಗೆ ಸೇರಿದ ಅಡಿಕೆ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಅಡಿಕೆ ಗಿಡಗಳ ಜೊತೆಗೆ ಎರಡು ಲೋಡ್ ಮೆಕ್ಕೆಜೋಳದ ತೆನೆ ಕೂಡ ಸುಟ್ಟು ಭಸ್ಮವಾಗಿದೆ. ಇದರಿಂದ ರೈತನಿಗೆ ಭಾರೀ ನಷ್ಟ ಉಂಟಾಗಿದೆ.

ಸಾಲ ಮಾಡಿ ಅಡಿಕೆ ಗಿಡಗಳನ್ನು ನೆಟ್ಟಿದ್ದ ರೈತನಿಗೆ ಈ ಘಟನೆ ದೊಡ್ಡ ಆಘಾತ ತಂದಿದೆ. ತೋಟ ಸುಟ್ಟ ಪರಿಣಾಮ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಹಾಗೂ ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಗ್ರಾಮದಲ್ಲೇ ನಾಲ್ಕೈದು ಅಡಿಕೆ ತೋಟಗಳಿಗೆ ಇದೇ ರೀತಿಯಾಗಿ ಬೆಂಕಿ ಹಚ್ಚಿರುವ ಘಟನೆಗಳು ನಡೆದಿವೆ ಎಂಬ ಆರೋಪವೂ ಕೇಳಿಬಂದಿದೆ.

ಘಟನಾ ಸ್ಥಳಕ್ಕೆ ಜಗಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ರಥೋತ್ಸವಕ್ಕೆ ಬಂದ ಭಕ್ತರ ಸರ ಕಸಿದು ಪರಾರಿ: ಮೂವರು ಅಂದರ್‌!

ರಾಮನಗರ: ವಿಳಾಸ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರ ಕಳವು ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಹಾಗೂ ಜ್ಯೋತಿ (32) ಎಂದು ಗುರುತಿಸಲಾಗಿದೆ. ಮಾರ್ಚ್ 3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಕಾರಿನಲ್ಲಿ ಬಂದಿದ್ದ ಈ ಮೂವರು, ವಿಳಾಸ ಕೇಳುವ ನೆಪದಲ್ಲಿ ಜನರನ್ನು ಮಾತಿನಲ್ಲಿ ತೊಡಗಿಸಿ ಅವರ ಚಿನ್ನದ ಸರಗಳನ್ನು ಕದ್ದು ಪರಾರಿಯಾಗಿದ್ದರು.

ಮುನೇಶ್ವರಸ್ವಾಮಿ ರಥೋತ್ಸವಕ್ಕೆ ತೆರಳುತ್ತಿದ್ದ ಭಕ್ತರ ಬಳಿ ದೇವಾಲಯದ ದಾರಿ ಕೇಳಿ, ಅವರ ಗಮನ ಬೇರೆಡೆ ಸೆಳೆದು ಸರಗಳನ್ನು ಕಸಿದುಕೊಂಡು ಆರೋಪಿಗಳು ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಒಟ್ಟು 112 ಗ್ರಾಂ ತೂಕದ ಮೂರು ಚಿನ್ನದ ಸರಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಒಟ್ಟು ಏಳು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಕುದೂರು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

 

ವಾರದ ಕೊನೆಯಲ್ಲಿ ಏರಿದ ಚಿನ್ನದ ಬೆಲೆ: 10 ಗ್ರಾಂಗೆ 1.50 ಲಕ್ಷ!

ಚಿನ್ನದ ಬೆಲೆಯಲ್ಲಿ ಇತ್ತೀಚೆಗೆ ತುಸು ಏರಿಳಿತ ಕಾಣಿಸುತ್ತಿದೆ. ಈ ವಾರದ ಮೊದಲ ಐದು ದಿನಗಳಲ್ಲಿ ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಮತ್ತೆ ಏರಿಕೆ ಕಂಡು ಸುಮಾರು 230 ರೂಪಾಯಿ ಹೆಚ್ಚಾಗಿದೆ.

ಆಭರಣ ಚಿನ್ನದ ಬೆಲೆ ಇದೀಗ 10 ಗ್ರಾಂಗೆ ಸುಮಾರು 1,50,000 ರೂಪಾಯಿಗೆ ತಲುಪಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಕೂಡ ಚಿನ್ನದ ಬೆಲೆಯಲ್ಲಿ ಇದೇ ರೀತಿಯ ಏರಿಳಿತ ಕಂಡುಬರುತ್ತಿದೆ. ಇಸ್ರೇಲ್–ಇರಾನ್ ನಡುವಿನ ಸಂಘರ್ಷ ಹಾಗೂ ತೈಲ ಬಿಕ್ಕಟ್ಟುಗಳ ನಡುವೆಯೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲೇ ಮುಂದುವರಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಸುಮಾರು 1,50,000 ರೂಪಾಯಿ ಇದೆ. 24 ಕ್ಯಾರಟ್ ಚಿನ್ನದ ಬೆಲೆ 1,63,640 ರೂಪಾಯಿಗೆ ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 28,500 ರೂಪಾಯಿ ದಾಖಲಾಗಿದೆ.

ಬೆಂಗಳೂರು ನಗರದಲ್ಲಿಯೂ ಚಿನ್ನ ಮತ್ತು ಬೆಳ್ಳಿ ಬೆಲೆ ಇದೇ ಮಟ್ಟದಲ್ಲಿದ್ದು, 10 ಗ್ರಾಂ ಚಿನ್ನದ ಬೆಲೆ 1,50,000 ರೂಪಾಯಿ ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 28,500 ರೂಪಾಯಿಯಲ್ಲಿದೆ. ತಮಿಳುನಾಡು ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ 29,000 ರೂಪಾಯಿಯವರೆಗೆ ದಾಖಲಾಗಿದೆ.

ಮಾರ್ಚ್ 8ರ ಚಿನ್ನ, ಬೆಳ್ಳಿ ಬೆಲೆ (ಭಾರತದಲ್ಲಿ):

  • 24 ಕ್ಯಾರಟ್ ಚಿನ್ನ 1 ಗ್ರಾಂ – 16,364 ರೂಪಾಯಿ
  • 22 ಕ್ಯಾರಟ್ ಚಿನ್ನ 1 ಗ್ರಾಂ – 15,000 ರೂಪಾಯಿ
  • 18 ಕ್ಯಾರಟ್ ಚಿನ್ನ 1 ಗ್ರಾಂ – 12,273 ರೂಪಾಯಿ
  • ಬೆಳ್ಳಿ 1 ಗ್ರಾಂ – 285 ರೂಪಾಯಿ

ಬೆಂಗಳೂರು ನಗರದಲ್ಲಿ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್ ಚಿನ್ನ 1 ಗ್ರಾಂ – 16,364 ರೂಪಾಯಿ
  • 22 ಕ್ಯಾರಟ್ ಚಿನ್ನ 1 ಗ್ರಾಂ – 15,000 ರೂಪಾಯಿ
  • ಬೆಳ್ಳಿ 1 ಗ್ರಾಂ – 285 ರೂಪಾಯಿ.

 

ಗದಗ: ಅಕ್ರಮ ಮಣ್ಣು ಗಣಿಗಾರಿಕೆ ಹೊಂಡದಲ್ಲಿ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಸಾವು

0

ಗದಗ: ಅಕ್ರಮ ಮಣ್ಣು ಗಣಿಗಾರಿಕೆಯಿಂದ ಉಂಟಾದ ಹೊಂಡದಲ್ಲಿ ಬಿದ್ದು ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಸಮೀಪದ ಕಣಗಿನಾಳ ರಸ್ತೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಆದಿತ್ಯ ಮೃತ ವಿದ್ಯಾರ್ಥಿ. ಅವರು ನರ್ಸಿಂಗ್ ಅಂತಿಮ ವರ್ಷದಲ್ಲಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, ಪದವಿ ಮುಗಿಸಿ ಮನೆಗೆ ತೆರಳಬೇಕಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ನಿನ್ನೆ ರಂಗಪಂಚಮಿ ಹಬ್ಬದ ಅಂಗವಾಗಿ ಬಣ್ಣ ಆಡಿದ ಬಳಿಕ ಸ್ನಾನ ಮಾಡಲು ಸುಮಾರು ಆರು–ಏಳು ಗೆಳೆಯರೊಂದಿಗೆ ಹೊಂಡಕ್ಕೆ ಇಳಿದಾಗ ಆದಿತ್ಯ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಕ್ರಮ ಮಣ್ಣು ಗಣಿಗಾರಿಕೆಯಿಂದ ನಿರ್ಮಾಣವಾದ ಹೊಂಡಗಳೇ ಈ ದುರ್ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಗದಗ ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಇದಕ್ಕೂ ಮೊದಲು ಶ್ಯಾಗೋಟಿ, ಚಿಕ್ಕಹಂದಿಗೋಳ ಹಾಗೂ ಕಳಸಾಪೂರ ಗ್ರಾಮಗಳಲ್ಲಿ ಇಂತಹ ಹೊಂಡಗಳಲ್ಲಿ ಬಿದ್ದು ಮಕ್ಕಳು ಹಾಗೂ ಯುವಕರು ಸಾವನ್ನಪ್ಪಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ಆದರೂ ಅಕ್ರಮ ಗಣಿಗಾರಿಕೆಗೆ ಜಿಲ್ಲಾಡಳಿತ ಹಾಗೂ ಗಣಿ ಇಲಾಖೆ ಕ್ರಮ ಕೈಗೊಳ್ಳದೇ ಇರುವುದರಿಂದ ಈ ಸಾವಿಗೆ ಅಧಿಕಾರಿಗಳೇ ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬನೇ ಮಗನನ್ನು ಕಳೆದುಕೊಂಡ ಪೋಷಕರು ದುಃಖದಲ್ಲಿ ಮುಳುಗಿದ್ದು, ಮಗನ ಬಗ್ಗೆ ಹಲವು ಕನಸು ಕಂಡಿದ್ದ ಕುಟುಂಬಕ್ಕೆ ಈ ಘಟನೆ ದೊಡ್ಡ ಆಘಾತ ತಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದ್ದು, ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಳ್ಳಾರಿ ಹಾಸ್ಟೆಲ್‌ನಲ್ಲಿ ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ: ಒರ್ವ ಸಾವು, ಏಳು ಮಂದಿಗೆ ಗಾಯ

0

ಬಳ್ಳಾರಿ: ರಾಜ್ಯದಲ್ಲಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳಿಗೆ ಮತ್ತೊಂದು ಉದಾಹರಣೆ ಬಳ್ಳಾರಿ ಜಿಲ್ಲೆಯ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ಬೆಳಕಿಗೆ ಬಂದಿದೆ. 9ನೇ ತರಗತಿ ವಿದ್ಯಾರ್ಥಿಯೊಬ್ಬನು ಸಹಪಾಠಿಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿ ವೇಳೆ ಹಾಸ್ಟೆಲ್ ವಾರ್ಡನ್ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ನಂತರ ದಾಳಿ ನಡೆಸಿದ ವಿದ್ಯಾರ್ಥಿ ಪರಾರಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತ ವಿದ್ಯಾರ್ಥಿಯ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, “ಹಾಸ್ಟೆಲ್ ಆಡಳಿತದ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ. ನಮ್ಮ ಮಕ್ಕಳನ್ನು ನಂಬಿ ಇಲ್ಲಿ ಬಿಟ್ಟಿದ್ದೇವೆ. ಆದರೆ ವಿದ್ಯಾರ್ಥಿಯ ಕೈಗೆ ಮಾರಕಾಸ್ತ್ರ ಸಿಕ್ಕಿದ್ದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ, ದಾಳಿ ನಡೆಸಿದ ವಿದ್ಯಾರ್ಥಿಗೆ ಮಾನಸಿಕ ಸಮಸ್ಯೆಗಳಿತ್ತಾ ಅಥವಾ ಮಾದಕ ವಸ್ತುಗಳಿಗೆ ಅಡಿಕ್ಟ್ ಆಗಿದ್ದಾನೆಯೇ ಎಂಬುದರ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!