Home Blog Page 2101

ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ: ಡಾ. ಸೂರಜ್ ರೇವಣ್ಣ

0

ಹಾಸನ: ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನದಲ್ಲಿ ಉಪ ಚುನಾವಣೆ ಫಲಿತಾಂಶ ಬರುತ್ತಿದೆ. ನಿಖಿಲ್ ಕುಮಾರಸ್ವಾಮಿ ಅವರು ನೂರಕ್ಕೆ ನೂರು ಗೆದ್ದು ಶಾಸಕರಾಗಿ ಆಯ್ಕೆಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ.

ಭಗವಂತನ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರುತ್ತದೆ. ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರ ಆಶೀರ್ವಾದ ಮುಂದಿನ ದಿನಗಳಲ್ಲಿ ನಮ್ಮ ಮೇಲೆ ಹೆಚ್ಚು ಇರುತ್ತದೆ. ಇನ್ನು ನಮ್ಮ ಅಜ್ಜಿ ಚೆನ್ನಮ್ಮ ಅವರ ಆರೋಗ್ಯ ಸ್ವಲ್ಪ ಪರ್ವಾಗಿಲ್ಲ. ಅವರು ಎದ್ದು ಓಡಾಡಬೇಕಿದೆ, ಶ್ವಾಸಕೋಶದಲ್ಲಿ ಸೋಂಕಿತ್ತು, ಅದೆಲ್ಲ ಕ್ಲಿಯರ್ ಆಗಿದೆ. ಒಂದು ರೀತಿ ಬೆಟ್ಟರ್ ಆಗಿ ಇದ್ದಾರೆ ಎಂದು ತಿಳಿಸಿದರು.

ಬಿಜೆಪಿಗೆ ಸರ್ಕಾರ ರಚಿಸಲು ಕೆಲ ಶಾಸಕರನ್ನು ಸಿದ್ದರಾಮಯ್ಯನವರೇ ಕಳುಹಿಸಿದ್ದರು: ಸಚಿವ ಪ್ರಹ್ಲಾದ್ ಜೋಶಿ

0

ಹುಬ್ಬಳ್ಳಿ: ಬಿಜೆಪಿಗೆ ಸರ್ಕಾರ ರಚಿಸಲು ಕೆಲ ಶಾಸಕರನ್ನು ಸಿದ್ದರಾಮಯ್ಯನವರೇ ಕಳುಹಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸರ್ಕಾರ ಮಾಡಲು ಸಿದ್ದರಾಮಯ್ಯರಿಗೆ ನೈತಿಕತೆ ಇರಲಿಲ್ಲ. ಹೀಗಾಗಿ ಕೆಲ ಶಾಸಕರನ್ನು ಸಿದ್ದರಾಮಯ್ಯನವರೆ ಬಿಜೆಪಿಗೆ ಕಳುಹಿಸಿದ್ದರು, ಹೀಗಾಗಿ ನಾವು ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಹೇಳಿದರು.

ಇನ್ನೂ ಈ ಬಾರಿ ಕಾಂಗ್ರೆಸ್​​​ ಸರ್ಕಾರಕ್ಕೆ ಬಹುಮತ ಬಂದಿದೆ ಅದಕ್ಕೆ ಅವರು ಅಧಿಕಾರದಲ್ಲಿದ್ದಾರೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡೋಣ ಎಂದು ನಿರ್ಧರಿಸಿದ್ದೇವೆ. ಕಳೆದ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದರು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್!

0

ಬೆಂಗಳೂರು:- ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ 40 ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75 ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

ತಾಂತ್ರಿಕ ಕಾರಣದಿಂದ ಟೆಂಡರ್​ ವಿಳಂಬವಾಗಿದೆ ಎಂದ ಅವರು, ಈ ವರ್ಷವೂ ಇಂಡೆಂಟ್​ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ, ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧ ಇದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂಥವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ವಿಚಾರ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

0

ಬೆಂಗಳೂರು: ಬಿಪಿಎಲ್ ಮಾನದಂಡವು ಕೇಂದ್ರ ಸರ್ಕಾರದ ‌ಮಾನದಂಡವಾಗಿದೆ‌‌ ಎಂದು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್‌ ಮಾನದಂಡದ ಪ್ರಕಾರ ಕ್ರಮ ಆಗಿದೆ. ಬಿಪಿಎಲ್ ಮಾನದಂಡವು ಕೇಂದ್ರ ಸರ್ಕಾರದ ‌ಮಾನದಂಡವಾಗಿದೆ‌‌. ಅರ್ಹರಿಗೆ ನ್ಯಾಯ ಸಿಗಬೇಕಲ್ಲವೇ, ಅರ್ಹರಿಗೆ ಅಕ್ಕಿ ಸಿಗುವ ಕೆಲಸ ಮಾಡಲಾಗಿದೆ. ಬಡವರ ದುಡ್ಡು ಬಡವರಿಗೆ ಹೋಗಲಿದೆ. ಮಾನದಂಡ‌ ಬದಲಾವಣೆ ಕೇಂದ್ರ ಸರ್ಕಾರ ಮಾಡಿದರೆ ಮಾಡಲಿ. ಅದನ್ನು ಅನುಸರಿಸುತ್ತೇವೆ ಎಂದರು.

ಇನ್ನೂ 40 ಪರ್ಸೆಂಟ್ ಆರೋಪ ನಿರಾಧಾರ ಎಂದು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ”40% ನಿರಾಧಾರ ಅನ್ನುವುದಾದರೆ ಕುನ್ಹಾ ಅವರ ಆಯೋಗ ಕ್ರಮಕ್ಕೆ ಯಾಕೆ ಸೂಚಿಸಿದೆ. 300 ರೂ. ಕಿಟ್​​ಗೆ 2 ಸಾವಿರ ರೂ. ಕೊಟ್ಟು ಖರೀದಿಸಿದ್ದಾರೆ. ಅದು 40% ಸರ್ಕಾರ ಅಲ್ಲ, 400% ಸರ್ಕಾರ.

ಒಂದು ಕೇಸ್​​ನಲ್ಲಿ ಎಫ್​ಐಆರ್ ದಾಖಲಿಸಲು ಆಯೋಗ ಸೂಚಿಸಿದೆ. ಬಿಜೆಪಿಯವರಿಗೆ ಜೈಲಿಗೆ ಹೋಗಲು ಯಾಕಿಷ್ಟು ಅವಸರ. ಉಪಸಮಿತಿ ವರದಿ ಬಂದ ಮೇಲೆ ಕ್ರಮ ಆಗಲಿದೆ. ಈ ಸಂಬಂಧ ಎಸ್ಐಟಿ ರಚನೆಯನ್ನು ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು ಮಾಡುತ್ತಾರೆ. ಒಳ್ಳೆಯ ಅಧಿಕಾರಿಯನ್ನು ನೇಮಕ ಮಾಡಿ ಎಸ್ಐಟಿ ರಚಿಸುತ್ತಾರೆ’ ಎಂದು ಹೇಳಿದರು.

ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ: ಸಚಿವ ವಿ.ಸೋಮಣ್ಣ

0

ಬೆಂಗಳೂರು: ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್​ಪೋರ್ಟ್​ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್​ಪೋರ್ಟ್​ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಇಂಗ್ಲೀಷ್ ಅನಿವಾರ್ಯವಾಗಿದ್ದರೂ ಪ್ರಥಮ ಆದ್ಯತೆ ಕನ್ನಡವಾಗಿರಲಿ: ಡಾ. ತೋಂಟದ ಸಿದ್ಧರಾಮ

0

ವಿಜಯಸಾಕ್ಷಿ ಸುದ್ದಿ, ಗದಗ: ಕುವೆಂಪು ಅವರು ಹೇಳುವಂತೆ ಕನ್ನಡವೆನ್ನುವುದು ಮನೆಯ ಬಾಗಿಲಾದರೆ, ಇತರ ಭಾಷೆಗಳು ಮನೆಯ ಕಿಡಕಿಗಳಂತಿರಲಿ. ಎಲ್ಲ ದಿಕ್ಕಿನಿಂದಲೂ ಜ್ಞಾನದ ಬೆಳಕು ಹರಿದು ಬಂದಾಗ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಪ್ರತಿಯೊಬ್ಬರು ಆಡುವ ಭಾಷೆಗಳು ಭಿನ್ನವಾದರೂ ಆಲೋಚಿಸುವುದು ಮಾತೃಭಾಷೆಯಲ್ಲಿಯೇ ಎನ್ನುವುದು ವಿಶೇಷ. ಕನ್ನಡಿಗರಾಗಿರುವ ನಾವು ಪ್ರತಿಯೊಬ್ಬರೂ ಕನ್ನಡವನ್ನು ಹೆತ್ತ ತಾಯಿಯಂತೆ ಗೌರವಿಸಬೇಕು. ಇಂಗ್ಲೀಷ್ ಅನಿವಾರ್ಯವಾಗಿದ್ದರೂ ನಮ್ಮ ಪ್ರಥಮ ಆದ್ಯತೆ ಕನ್ನಡವಾಗಿರಲಿ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.

೨೭೧೯ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಮಾತನಾಡುವಾಗ, ವ್ಯವಹರಿಸುವಾಗ ವಿಶೇಷವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ಕನ್ನಡದಲ್ಲಿ ಅಧ್ಯಯನ ಮಾಡುವದರಿಂದ ನಮ್ಮ ಬೌದ್ಧಿಕ ಶಕ್ತಿ ಹೆಚ್ಚಿ ವಿಕಾಸಗೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ಭಾಷೆ ನಮ್ಮ ತಾಯಿ. ಪ್ರತಿಯೊಬ್ಬರೂ ಮಾತೃಭಾಷೆಯ ಬಗ್ಗೆ ಅಭಿಮಾನ ಮತ್ತು ಪ್ರೀತಿಯನ್ನು ಹೊಂದಬೇಕು. ಬಸವಾದಿ ಶಿವಶರಣರು, ದಾಸರು, ಪಂಪ, ರನ್ನ ರಾಘವಾಂಕ, ಚಾಮರಸನಂತಹ ಅನೇಕ ಶ್ರೇಷ್ಠ ಕವಿಗಳು ಕನ್ನಡ ಭಾಷೆಯನ್ನು ಸಮೃದ್ಧಗೊಳಿಸಿದ್ದಾರೆ. ಬಸವಾದಿ ಶಿವಶರಣರು ಕನ್ನಡದಲ್ಲಿ ವಚನಸಾಹಿತ್ಯವನ್ನು ರಚಿಸಿ ಕನ್ನಡ ಭಾಷೆಯ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ ಕೆ.ವಿ.ಎಸ್.ಆರ್. ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಆರ್. ಜಾಲಿಹಾಳ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯುವುದರ ಜೊತೆಗೆ ನಮ್ಮ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದೋಣ. ನಮ್ಮ ಭಾಷೆಯನ್ನು ಮರೆಯಬಾರದು. ಜನರಿಗೆ ಬದುಕಿನ ಭಾಷೆ ಬೇಗ ಅರ್ಥವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಲ್ಲಮಪ್ರಭು ಬೆಟ್ಟದೂರು ಇವರನ್ನು ಹಾಗೂ ಗದಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತ ಪುರಸ್ಕೃತರಾದ ಬಾಲಚಂದ್ರ ಭರಮಗೌಡ್ರ ಇವರುಗಳನ್ನು ಸಂಮಾನಿಸಲಾಯಿತು.

ಧರ್ಮಗ್ರಂಥ ಪಠಣವನ್ನು ವೈಭವ ಸಿ.ಗಾಣಿಗೇರ, ವಚನ ಚಿಂತನೆಯನ್ನು ಖುಷಿ ಏ. ಖಟವಟೆ ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಎಸ್.ಆರ್. ನರೆಗಲ್ ಗದಗ ವಹಿಸಿಕೊಂಡಿದ್ದರು. ಗುರುಬಸವ ಸಿಬಿಎಎಸ್‌ಇ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು. ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ನಡೆಸಿಕೊಟ್ಟರು. ಮಂಜುಳಾ ಹಾಸಲಕರ ನಿರೂಪಿಸಿದರು. ಸಮಿತಿಯ ಚೇರ್ಮನ್ ಐ.ಬಿ. ಬೆನಕೊಪ್ಪ ಸಂಮಾನಿತರನ್ನು ಪರಿಚಯಿಸಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸದಸ್ಯರಾದ ಸೋಮಶೇಖರ ಪುರಾಣಿಕ, ವಿದ್ಯಾ ಗಂಜಿಹಾಳ, ಮಹೇಶ್ ಗಾಣಿಗೇರ, ನಾಗರಾಜ್ ಹಿರೇಮಠ, ಬಸವರಾಜ ಕಾಡಪ್ಪನವರ ಹಾಗೂ ಶಿವಾನಂದ ಹೊಂಬಳ ಉಪಸ್ಥಿತರಿದ್ದರು.

ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ: ಶ್ರೀ ರಂಭಾಪುರಿ ಜಗದ್ಗುರುಗಳು

0

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ. ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ. ಬದುಕು ಇರುವುದು ಬಾಳುವುದಕ್ಕೆ ಹೊರತು ಬಳಲುವುದಕ್ಕಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಹುಣ್ಣಿಮೆ ದಿನ ಕಾರ್ತೀಕ ದೀಪೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಜ್ಞಾನವೆಂಬ ಸಂಪತ್ತು, ತಾಳ್ಮೆಯೆಂಬ ಆಯುಧ, ಜೊತೆಗೆ ನಗುವಿನಂಥ ಶಕ್ತಿ ಹೊಂದಿರುವವರನ್ನು ಯಶಸ್ಸು ತಾನಾಗಿಯೇ ಬೆನ್ನತ್ತಿ ಬರುತ್ತದೆ. ಒಳ್ಳೆಯ ನಿರ್ಧಾರ ಅರ್ಧ ಗೆಲ್ಲಿಸಿದರೆ ಇನ್ನರ್ಧ ಪ್ರಯತ್ನ ಮತ್ತು ಪರಿಶ್ರಮ ಗೆಲ್ಲಿಸುತ್ತದೆ ಎಂಬುದನ್ನು ನೆನಪಿಡಬೇಕಾಗುತ್ತದೆ. ಸಲಹೆ ಕೊಡುವವರೆಲ್ಲರೂ ಇನ್ನೊಬ್ಬರಿಗೆ ಸಹಾಯ ಮಾಡುವುದಿಲ್ಲ. ಬಳಸಿಕೊಂಡವರನ್ನು ಮರೆತು ಬಿಡಬೇಕು. ಆದರೆ ಬೆಳೆಸಿದವರನ್ನು ಯಾವತ್ತೂ ಮರೆಯಬಾರದು. ಮನುಷ್ಯ ವಿಚಾರಗಳನ್ನು ಬಿತ್ತರಿಸಬೇಕೇ ಹೊರತು ಧ್ವನಿಯನ್ನಲ್ಲ. ಏಕೆಂದರೆ ಮಳೆ ನೀರಿನಿಂದ ಮರಗಳು ಬೆಳೆಯುತ್ತವೆ ಹೊರತು ಗುಡುಗು-ಸಿಡಿಲಿನಿಂದಲ್ಲ. ಜೀವನದ ಕೆಟ್ಟ ಘಟನೆಗಳನ್ನು ಮರೆಯಬೇಕು. ಆದರೆ ಅದರಿಂದ ಕಲಿತ ಪಾಠವನ್ನು ಯಾವತ್ತೂ ಮರೆಯಬಾರದು ಎಂದರು.

ಈ ಪವಿತ್ರ ಸಮಾರಂಭದಲ್ಲಿ ಕೊಟ್ಟೂರು ಯೋಗಿರಾಜೇಂದ್ರ ಶಿವಾಚಾರ್ಯರು, ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ತೆಂಡೆಕೆರೆ ಗಂಗಾಧರ ಶಿವಾಚಾರ್ಯರು, ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.

ಶ್ರೀ ಪೀಠದ ಆಡಳಿತಾಧಿಕಾರಿ ಎಸ್.ಬಿ. ಹಿರೇಮಠ, ಸಂಪರ್ಕಾಧಿಕಾರಿ ಪ್ರಭುದೇವ ಕಲ್ಮಠ, ವೀರೇಶ ಪಾಟೀಲ, ಸಿದ್ಧು ಪಾಟೀಲ, ಶಶಿಧರ ಸುರಗಿಮಠ, ಲಿಂಗಸುಗೂರಿನ ವಾರದ ಮಲ್ಲಪ್ಪ, ಬಸವರಾಜ ನಂದಿಕೋಲಮಠ, ಆಲ್ದೂರು ರಾಜೇಶ ಚಿಕ್ಕಮಗಳೂರಿನ ಎಸ್.ಎಂ. ದೇವಣ್ಣಗೌಡ, ಪ್ರಭುಲಿಂಗ ಶಾಸ್ತಿç, ಕಡವಂತಿ ಹಣ್ಣೇಗೌಡರು, ಜಿ.ಪಂ ಮಾಜಿ ಉಪಾಧ್ಯಕ್ಷ ಎಮ್.ಎಸ್. ಚನ್ನಕೇಶವ್, ಇಳೆಖಾನ್ ಉಮೇಶ, ಆಲ್ದೂರು ವೀರಶೈವ ಸಮಾಜದ ಅಧ್ಯಕ್ಷ ಮಹೇಶ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಬೆಳಿಗ್ಗೆ ಕ್ಷೇತ್ರದ ಎಲ್ಲಾ ದೈವಗಳಿಗೆ ಕಾರ್ತೀಕ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು. ಚಿಕ್ಕಮಗಳೂರಿನ ತರಕಾರಿ ವ್ಯಾಪಾರಸ್ಥರಾದ ಶಾಂತಮ್ಮ ಮತ್ತು ಮಕ್ಕಳು ದಾಸೋಹ ಸೇವೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಹಯೋಗದಲ್ಲಿ ವಿಜೃಂಭಣೆಯಿಂದ ಜರುಗಿತು.

ಇಂಡೋ-ಬಾಲಿ ವಚನ ಸಾಂಸ್ಕೃತಿಕ ಉತ್ಸವದಲ್ಲಿ ಪ್ರೊ.ಸಿದ್ದು ಯಾಪಲಪರವಿ ಉಪನ್ಯಾಸ

0

ವಿಜಯಸಾಕ್ಷಿ ಸುದ್ದಿ, ಗದಗ: ಬಸವಾದಿ ಶರಣರ ಮೌಲ್ಯಗಳ ಮತ್ತು ವಚನಗಳ ನಿಜಾಚರಣೆಯ ಪ್ರಚಾರದ ಉದ್ದೇಶ ಇಟ್ಟುಕೊಂಡು ಆರಂಭವಾದ ಸಂಸ್ಥೆ ರಾಷ್ಟ್ರೀಯ ಬಸವ ಪ್ರತಿಷ್ಠಾನ. ಸಾಣೆಹಳ್ಳಿಯ ಪರಮಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ, ಎಸ್.ಎಂ. ಸುರೇಶ ಅವರ ಅಧ್ಯಕ್ಷತೆಯಲ್ಲಿ ಸಂಸ್ಥೆಯು ರಾಷ್ಟ್ರೀಯ , ಅಂತಾರಾಷ್ಟ್ರೀಯ ಸಮಾವೇಶಗಳನ್ನು ಆಯೋಜನೆ ಮಾಡುತ್ತ ಜಾಗತಿಕ ಪರ್ಯಟನೆಯಲ್ಲಿ ತೊಡಗಿದೆ.ಈ ವರ್ಷ ಬಾಲಿ, ಮಲೇಷಿಯಾ ಹಾಗೂ ಥೈಲ್ಯಾಂಡ್ ರಾಷ್ಟçಗಳಲ್ಲಿ ಹನ್ನೊಂದು ದಿನಗಳ ಕಾಲ ‘ಭಾರತ ವಚನ ಸಂಸ್ಕೃತಿ ಯಾತ್ರೆ’ಯನ್ನು ಆಯೋಜಿಸಿದೆ. ನ.೨೧ರಂದು ಇಂಡೋನೇಷ್ಯಾದ ಬಾಲಿಯಲ್ಲಿ ‘ಇಂಡಿಯಾ-ಬಾಲಿ ಸಾಂಸ್ಕೃತಿಕ ಸಮಾವೇಶ’ ಸಾಯಂಕಾಲ 7 ಗಂಟೆಗೆ ಜರುಗಲಿದೆ.ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಬೆಟ್ಟಳ್ಳಿ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.ಮಾಜಿ ಮುಖ್ಯಮಂತ್ರಿ ಡಾ.ಡಿ.ವಿ.ಸದಾನಂದಗೌಡರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಾ.ವಿ.ಗೋಪಾಲಗೌಡರು ಹಾಗೂ ಇಸ್ರೋದ ಮಾಜಿ ಚೇರಮನ್ ಡಾ. ಎ.ಎಸ್. ಕಿರಣಕುಮಾರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಈ ಯಾತ್ರೆಯಲ್ಲಿ ಗದಗ ಜಿಲ್ಲೆಯ ಕದಳಿ ವೇದಿಕೆ ಅಧ್ಯಕ್ಷರು, ಸಾಹಿತಿಗಳಾದ ಪ್ರೊ. ಸುಧಾ ಹುಚ್ಚಣ್ಣವರ, ಗದುಗಿನ ರೇಖಾ ಯಾಪಲಪರವಿ, ಲಕ್ಷ್ಮೇಶ್ವರ ಮೂಲದ ಪ್ರೊ.ಸಂಪದಾ ಕೆರಿಮನಿ ಪಾಲ್ಗೊಳ್ಳಲಿದ್ದಾರೆ.ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಎಫ್. ದಂಡಿನ, ರವಿ ದಂಡಿನ, ಡಾ. ಪುನೀತ್, ಶಿರಹಟ್ಟಿಯ ಡಬಾಲಿ ಶಿಕ್ಷಣ ಸಮಿತಿಯ ಚೇರಮನ್ ಡಿ.ಎನ್. ಡಬಾಲಿ, ಅನ್ನಪೂರ್ಣಮ್ಮ ತಾಯಿ ಡಬಾಲಿ, ಗಿರೀಶ್ ಎಂ.ಡಬಾಲಿ, ಸುರೇಶ್ ಎಂ.ಡಬಾಲಿ, ಕಾರ್ಯದರ್ಶಿ ಎನ್.ಆರ್. ಕುಲಕರ್ಣಿ, ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಸೋಮಣ್ಣವರ, ಸರ್ವ ಸದಸ್ಯರು, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಡಾ. ಜಿ.ಬಿ. ಪಾಟೀಲ, ಆರೋಗ್ಯ ಇಲಾಖೆಯ ಎನ್.ಟಿ. ಅಶ್ವಥ್ ರೆಡ್ಡಿ, ಶರಣ ಸಾಹಿತ್ಯ ಪರಿಷತ್ತಿನ ಚನ್ನಬಸಪ್ಪ ಕಂಠಿ, ಡಾ. ರಾಜಶೇಖರ ದಾನರಡ್ಡಿ, ಪ್ರಕಾಶ ಅಸುಂಡಿ, ಕೆ.ಎ. ಬಳಿಗೇರ, ಕದಳಿ ವೇದಿಕೆಯ ಪ್ರೇಮಾ ಗುಳಗೌಡರ, ಶಶಿಕಲಾ ಪಾಟೀಲ್, ಪ್ರೊ. ವೀಣಾ ತಿರ್ಲಾಪುರ್, ಪ್ರೇಮಾ ಮೇಟಿ, ಪುಷ್ಪಾ ಭಂಡಾರಿ, ನಾಗರತ್ನ ಪಾಟೀಲ, ಸುಲೋಚನ ಐಹೊಳೆ, ಹಾಗೂ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆಯ ಶರಣ ಚಿಂತಕರು ಅಭಿನಂದಿಸಿದ್ದಾರೆ.

ಬಿಜೆಪಿ 100 ಕೋಟಿ ರೂ. ಆಫರ್ ವಿಚಾರ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು!?

0

ಬೀದರ್:- ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು.

ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿ ಕಾರ್ಡ್ ರದ್ದು ವಿಚಾರವಾಗಿ ಬಹಳಷ್ಟು ದೂರುಗಳಿವೆ. ಸಾಹುಕಾರರು, ಮನೆ ಇದ್ದವರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ತೆಗೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಜೆಪಿ ಕೊಡಬೇಕು ಎಂಬ ನಿಯಮವಿದೆ.

ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದರು.

ಐಪಿಲ್ ಮಾದರಿಯಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

0

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿ ಐಪಿಎಲ್ ಮಾದರಿಯಲ್ಲಿ ರಾಜ್ಯಮಟ್ಟದ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ಜಿಲ್ಲೆಯ ಗದಗ ಪಾವರ್ಸ್ ತಂಡ ನ. 24ರಂದು ಮೊದಲ ಲೀಗ್ ಪಂದ್ಯ ಆಡಲಿದೆ ಎಂದು ತಂಡದ ಒಡತಿ ಶ್ವೇತಾ ಗೌಡ ತಿಳಿಸಿದರು.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಈ ಟೂರ್ನಮೆಂಟ್ ಆಯೋಜಿಸಿದೆ. ಗಂಗಾಧರ ರಾಜು ಅವರ ಕನಸಿನ ಟೂರ್ನಮೆಂಟ್ ಇದಾಗಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲು ಅಸೋಸಿಯೇಶನ್ ಮುಂದಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ತಂಡ ಸೇರಿದಂತೆ ಒಟ್ಟು ೩೨ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಟೂರ್ನಿಯ ವಿಜೇತ ತಂಡಕ್ಕೆ ಗರಿಷ್ಠ 25 ಲಕ್ಷ ರೂ. ಬಹುಮಾನ ಘೋಷಣೆಯಾಗಿದೆ. ಆದ್ದರಿಂದ, ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾವಂತರನ್ನೊಳಗೊಂಡ ತಂಡವನ್ನು ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೆ.ಎಂ. ಸಯ್ಯದ, ಶಿವು ಕರಡಿ, ಕಾವೇರಿ ಬಡಿಗೇರ, ಮಹೇಶ್ವರಾನಂದ ಗುರುಜಿ, ಸಯ್ಯದ ಕೊಪ್ಪಳ, ಶ್ರೀಧರ ವಜ್ರಬಂಡಿ, ಶ್ರೀಕಾಂತ ಪೆರೂರ, ರವಿ, ಸರ್ಫರಾಜ ಕೌತಾಳ, ಶಂಕರ ಗೌಡಕಿ, ರಮೇಶ ಬೆನಹಾಳ, ವೀರೇಶ ವಡ್ಡರ್, ವಿಜಯ ಮುಳಗುಂದ ಮುಂತಾದವರು ಉಪಸ್ಥಿತರಿದ್ದರು.

error: Content is protected !!