Home Blog Page 2102

ಇಂಗ್ಲೀಷ್ ಅನಿವಾರ್ಯವಾಗಿದ್ದರೂ ಪ್ರಥಮ ಆದ್ಯತೆ ಕನ್ನಡವಾಗಿರಲಿ: ಡಾ. ತೋಂಟದ ಸಿದ್ಧರಾಮ

0

ವಿಜಯಸಾಕ್ಷಿ ಸುದ್ದಿ, ಗದಗ: ಕುವೆಂಪು ಅವರು ಹೇಳುವಂತೆ ಕನ್ನಡವೆನ್ನುವುದು ಮನೆಯ ಬಾಗಿಲಾದರೆ, ಇತರ ಭಾಷೆಗಳು ಮನೆಯ ಕಿಡಕಿಗಳಂತಿರಲಿ. ಎಲ್ಲ ದಿಕ್ಕಿನಿಂದಲೂ ಜ್ಞಾನದ ಬೆಳಕು ಹರಿದು ಬಂದಾಗ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಪ್ರತಿಯೊಬ್ಬರು ಆಡುವ ಭಾಷೆಗಳು ಭಿನ್ನವಾದರೂ ಆಲೋಚಿಸುವುದು ಮಾತೃಭಾಷೆಯಲ್ಲಿಯೇ ಎನ್ನುವುದು ವಿಶೇಷ. ಕನ್ನಡಿಗರಾಗಿರುವ ನಾವು ಪ್ರತಿಯೊಬ್ಬರೂ ಕನ್ನಡವನ್ನು ಹೆತ್ತ ತಾಯಿಯಂತೆ ಗೌರವಿಸಬೇಕು. ಇಂಗ್ಲೀಷ್ ಅನಿವಾರ್ಯವಾಗಿದ್ದರೂ ನಮ್ಮ ಪ್ರಥಮ ಆದ್ಯತೆ ಕನ್ನಡವಾಗಿರಲಿ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.

೨೭೧೯ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಮಾತನಾಡುವಾಗ, ವ್ಯವಹರಿಸುವಾಗ ವಿಶೇಷವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ಕನ್ನಡದಲ್ಲಿ ಅಧ್ಯಯನ ಮಾಡುವದರಿಂದ ನಮ್ಮ ಬೌದ್ಧಿಕ ಶಕ್ತಿ ಹೆಚ್ಚಿ ವಿಕಾಸಗೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ಭಾಷೆ ನಮ್ಮ ತಾಯಿ. ಪ್ರತಿಯೊಬ್ಬರೂ ಮಾತೃಭಾಷೆಯ ಬಗ್ಗೆ ಅಭಿಮಾನ ಮತ್ತು ಪ್ರೀತಿಯನ್ನು ಹೊಂದಬೇಕು. ಬಸವಾದಿ ಶಿವಶರಣರು, ದಾಸರು, ಪಂಪ, ರನ್ನ ರಾಘವಾಂಕ, ಚಾಮರಸನಂತಹ ಅನೇಕ ಶ್ರೇಷ್ಠ ಕವಿಗಳು ಕನ್ನಡ ಭಾಷೆಯನ್ನು ಸಮೃದ್ಧಗೊಳಿಸಿದ್ದಾರೆ. ಬಸವಾದಿ ಶಿವಶರಣರು ಕನ್ನಡದಲ್ಲಿ ವಚನಸಾಹಿತ್ಯವನ್ನು ರಚಿಸಿ ಕನ್ನಡ ಭಾಷೆಯ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ ಕೆ.ವಿ.ಎಸ್.ಆರ್. ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಆರ್. ಜಾಲಿಹಾಳ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯುವುದರ ಜೊತೆಗೆ ನಮ್ಮ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದೋಣ. ನಮ್ಮ ಭಾಷೆಯನ್ನು ಮರೆಯಬಾರದು. ಜನರಿಗೆ ಬದುಕಿನ ಭಾಷೆ ಬೇಗ ಅರ್ಥವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಲ್ಲಮಪ್ರಭು ಬೆಟ್ಟದೂರು ಇವರನ್ನು ಹಾಗೂ ಗದಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತ ಪುರಸ್ಕೃತರಾದ ಬಾಲಚಂದ್ರ ಭರಮಗೌಡ್ರ ಇವರುಗಳನ್ನು ಸಂಮಾನಿಸಲಾಯಿತು.

ಧರ್ಮಗ್ರಂಥ ಪಠಣವನ್ನು ವೈಭವ ಸಿ.ಗಾಣಿಗೇರ, ವಚನ ಚಿಂತನೆಯನ್ನು ಖುಷಿ ಏ. ಖಟವಟೆ ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಎಸ್.ಆರ್. ನರೆಗಲ್ ಗದಗ ವಹಿಸಿಕೊಂಡಿದ್ದರು. ಗುರುಬಸವ ಸಿಬಿಎಎಸ್‌ಇ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು. ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ನಡೆಸಿಕೊಟ್ಟರು. ಮಂಜುಳಾ ಹಾಸಲಕರ ನಿರೂಪಿಸಿದರು. ಸಮಿತಿಯ ಚೇರ್ಮನ್ ಐ.ಬಿ. ಬೆನಕೊಪ್ಪ ಸಂಮಾನಿತರನ್ನು ಪರಿಚಯಿಸಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸದಸ್ಯರಾದ ಸೋಮಶೇಖರ ಪುರಾಣಿಕ, ವಿದ್ಯಾ ಗಂಜಿಹಾಳ, ಮಹೇಶ್ ಗಾಣಿಗೇರ, ನಾಗರಾಜ್ ಹಿರೇಮಠ, ಬಸವರಾಜ ಕಾಡಪ್ಪನವರ ಹಾಗೂ ಶಿವಾನಂದ ಹೊಂಬಳ ಉಪಸ್ಥಿತರಿದ್ದರು.

ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ: ಶ್ರೀ ರಂಭಾಪುರಿ ಜಗದ್ಗುರುಗಳು

0

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ. ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ. ಬದುಕು ಇರುವುದು ಬಾಳುವುದಕ್ಕೆ ಹೊರತು ಬಳಲುವುದಕ್ಕಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಹುಣ್ಣಿಮೆ ದಿನ ಕಾರ್ತೀಕ ದೀಪೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಜ್ಞಾನವೆಂಬ ಸಂಪತ್ತು, ತಾಳ್ಮೆಯೆಂಬ ಆಯುಧ, ಜೊತೆಗೆ ನಗುವಿನಂಥ ಶಕ್ತಿ ಹೊಂದಿರುವವರನ್ನು ಯಶಸ್ಸು ತಾನಾಗಿಯೇ ಬೆನ್ನತ್ತಿ ಬರುತ್ತದೆ. ಒಳ್ಳೆಯ ನಿರ್ಧಾರ ಅರ್ಧ ಗೆಲ್ಲಿಸಿದರೆ ಇನ್ನರ್ಧ ಪ್ರಯತ್ನ ಮತ್ತು ಪರಿಶ್ರಮ ಗೆಲ್ಲಿಸುತ್ತದೆ ಎಂಬುದನ್ನು ನೆನಪಿಡಬೇಕಾಗುತ್ತದೆ. ಸಲಹೆ ಕೊಡುವವರೆಲ್ಲರೂ ಇನ್ನೊಬ್ಬರಿಗೆ ಸಹಾಯ ಮಾಡುವುದಿಲ್ಲ. ಬಳಸಿಕೊಂಡವರನ್ನು ಮರೆತು ಬಿಡಬೇಕು. ಆದರೆ ಬೆಳೆಸಿದವರನ್ನು ಯಾವತ್ತೂ ಮರೆಯಬಾರದು. ಮನುಷ್ಯ ವಿಚಾರಗಳನ್ನು ಬಿತ್ತರಿಸಬೇಕೇ ಹೊರತು ಧ್ವನಿಯನ್ನಲ್ಲ. ಏಕೆಂದರೆ ಮಳೆ ನೀರಿನಿಂದ ಮರಗಳು ಬೆಳೆಯುತ್ತವೆ ಹೊರತು ಗುಡುಗು-ಸಿಡಿಲಿನಿಂದಲ್ಲ. ಜೀವನದ ಕೆಟ್ಟ ಘಟನೆಗಳನ್ನು ಮರೆಯಬೇಕು. ಆದರೆ ಅದರಿಂದ ಕಲಿತ ಪಾಠವನ್ನು ಯಾವತ್ತೂ ಮರೆಯಬಾರದು ಎಂದರು.

ಈ ಪವಿತ್ರ ಸಮಾರಂಭದಲ್ಲಿ ಕೊಟ್ಟೂರು ಯೋಗಿರಾಜೇಂದ್ರ ಶಿವಾಚಾರ್ಯರು, ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ತೆಂಡೆಕೆರೆ ಗಂಗಾಧರ ಶಿವಾಚಾರ್ಯರು, ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.

ಶ್ರೀ ಪೀಠದ ಆಡಳಿತಾಧಿಕಾರಿ ಎಸ್.ಬಿ. ಹಿರೇಮಠ, ಸಂಪರ್ಕಾಧಿಕಾರಿ ಪ್ರಭುದೇವ ಕಲ್ಮಠ, ವೀರೇಶ ಪಾಟೀಲ, ಸಿದ್ಧು ಪಾಟೀಲ, ಶಶಿಧರ ಸುರಗಿಮಠ, ಲಿಂಗಸುಗೂರಿನ ವಾರದ ಮಲ್ಲಪ್ಪ, ಬಸವರಾಜ ನಂದಿಕೋಲಮಠ, ಆಲ್ದೂರು ರಾಜೇಶ ಚಿಕ್ಕಮಗಳೂರಿನ ಎಸ್.ಎಂ. ದೇವಣ್ಣಗೌಡ, ಪ್ರಭುಲಿಂಗ ಶಾಸ್ತಿç, ಕಡವಂತಿ ಹಣ್ಣೇಗೌಡರು, ಜಿ.ಪಂ ಮಾಜಿ ಉಪಾಧ್ಯಕ್ಷ ಎಮ್.ಎಸ್. ಚನ್ನಕೇಶವ್, ಇಳೆಖಾನ್ ಉಮೇಶ, ಆಲ್ದೂರು ವೀರಶೈವ ಸಮಾಜದ ಅಧ್ಯಕ್ಷ ಮಹೇಶ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಬೆಳಿಗ್ಗೆ ಕ್ಷೇತ್ರದ ಎಲ್ಲಾ ದೈವಗಳಿಗೆ ಕಾರ್ತೀಕ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು. ಚಿಕ್ಕಮಗಳೂರಿನ ತರಕಾರಿ ವ್ಯಾಪಾರಸ್ಥರಾದ ಶಾಂತಮ್ಮ ಮತ್ತು ಮಕ್ಕಳು ದಾಸೋಹ ಸೇವೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಹಯೋಗದಲ್ಲಿ ವಿಜೃಂಭಣೆಯಿಂದ ಜರುಗಿತು.

ಇಂಡೋ-ಬಾಲಿ ವಚನ ಸಾಂಸ್ಕೃತಿಕ ಉತ್ಸವದಲ್ಲಿ ಪ್ರೊ.ಸಿದ್ದು ಯಾಪಲಪರವಿ ಉಪನ್ಯಾಸ

0

ವಿಜಯಸಾಕ್ಷಿ ಸುದ್ದಿ, ಗದಗ: ಬಸವಾದಿ ಶರಣರ ಮೌಲ್ಯಗಳ ಮತ್ತು ವಚನಗಳ ನಿಜಾಚರಣೆಯ ಪ್ರಚಾರದ ಉದ್ದೇಶ ಇಟ್ಟುಕೊಂಡು ಆರಂಭವಾದ ಸಂಸ್ಥೆ ರಾಷ್ಟ್ರೀಯ ಬಸವ ಪ್ರತಿಷ್ಠಾನ. ಸಾಣೆಹಳ್ಳಿಯ ಪರಮಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ, ಎಸ್.ಎಂ. ಸುರೇಶ ಅವರ ಅಧ್ಯಕ್ಷತೆಯಲ್ಲಿ ಸಂಸ್ಥೆಯು ರಾಷ್ಟ್ರೀಯ , ಅಂತಾರಾಷ್ಟ್ರೀಯ ಸಮಾವೇಶಗಳನ್ನು ಆಯೋಜನೆ ಮಾಡುತ್ತ ಜಾಗತಿಕ ಪರ್ಯಟನೆಯಲ್ಲಿ ತೊಡಗಿದೆ.ಈ ವರ್ಷ ಬಾಲಿ, ಮಲೇಷಿಯಾ ಹಾಗೂ ಥೈಲ್ಯಾಂಡ್ ರಾಷ್ಟçಗಳಲ್ಲಿ ಹನ್ನೊಂದು ದಿನಗಳ ಕಾಲ ‘ಭಾರತ ವಚನ ಸಂಸ್ಕೃತಿ ಯಾತ್ರೆ’ಯನ್ನು ಆಯೋಜಿಸಿದೆ. ನ.೨೧ರಂದು ಇಂಡೋನೇಷ್ಯಾದ ಬಾಲಿಯಲ್ಲಿ ‘ಇಂಡಿಯಾ-ಬಾಲಿ ಸಾಂಸ್ಕೃತಿಕ ಸಮಾವೇಶ’ ಸಾಯಂಕಾಲ 7 ಗಂಟೆಗೆ ಜರುಗಲಿದೆ.ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಬೆಟ್ಟಳ್ಳಿ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.ಮಾಜಿ ಮುಖ್ಯಮಂತ್ರಿ ಡಾ.ಡಿ.ವಿ.ಸದಾನಂದಗೌಡರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಾ.ವಿ.ಗೋಪಾಲಗೌಡರು ಹಾಗೂ ಇಸ್ರೋದ ಮಾಜಿ ಚೇರಮನ್ ಡಾ. ಎ.ಎಸ್. ಕಿರಣಕುಮಾರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಈ ಯಾತ್ರೆಯಲ್ಲಿ ಗದಗ ಜಿಲ್ಲೆಯ ಕದಳಿ ವೇದಿಕೆ ಅಧ್ಯಕ್ಷರು, ಸಾಹಿತಿಗಳಾದ ಪ್ರೊ. ಸುಧಾ ಹುಚ್ಚಣ್ಣವರ, ಗದುಗಿನ ರೇಖಾ ಯಾಪಲಪರವಿ, ಲಕ್ಷ್ಮೇಶ್ವರ ಮೂಲದ ಪ್ರೊ.ಸಂಪದಾ ಕೆರಿಮನಿ ಪಾಲ್ಗೊಳ್ಳಲಿದ್ದಾರೆ.ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಎಫ್. ದಂಡಿನ, ರವಿ ದಂಡಿನ, ಡಾ. ಪುನೀತ್, ಶಿರಹಟ್ಟಿಯ ಡಬಾಲಿ ಶಿಕ್ಷಣ ಸಮಿತಿಯ ಚೇರಮನ್ ಡಿ.ಎನ್. ಡಬಾಲಿ, ಅನ್ನಪೂರ್ಣಮ್ಮ ತಾಯಿ ಡಬಾಲಿ, ಗಿರೀಶ್ ಎಂ.ಡಬಾಲಿ, ಸುರೇಶ್ ಎಂ.ಡಬಾಲಿ, ಕಾರ್ಯದರ್ಶಿ ಎನ್.ಆರ್. ಕುಲಕರ್ಣಿ, ಕರ್ನಾಟಕ ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಸೋಮಣ್ಣವರ, ಸರ್ವ ಸದಸ್ಯರು, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಡಾ. ಜಿ.ಬಿ. ಪಾಟೀಲ, ಆರೋಗ್ಯ ಇಲಾಖೆಯ ಎನ್.ಟಿ. ಅಶ್ವಥ್ ರೆಡ್ಡಿ, ಶರಣ ಸಾಹಿತ್ಯ ಪರಿಷತ್ತಿನ ಚನ್ನಬಸಪ್ಪ ಕಂಠಿ, ಡಾ. ರಾಜಶೇಖರ ದಾನರಡ್ಡಿ, ಪ್ರಕಾಶ ಅಸುಂಡಿ, ಕೆ.ಎ. ಬಳಿಗೇರ, ಕದಳಿ ವೇದಿಕೆಯ ಪ್ರೇಮಾ ಗುಳಗೌಡರ, ಶಶಿಕಲಾ ಪಾಟೀಲ್, ಪ್ರೊ. ವೀಣಾ ತಿರ್ಲಾಪುರ್, ಪ್ರೇಮಾ ಮೇಟಿ, ಪುಷ್ಪಾ ಭಂಡಾರಿ, ನಾಗರತ್ನ ಪಾಟೀಲ, ಸುಲೋಚನ ಐಹೊಳೆ, ಹಾಗೂ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆಯ ಶರಣ ಚಿಂತಕರು ಅಭಿನಂದಿಸಿದ್ದಾರೆ.

ಬಿಜೆಪಿ 100 ಕೋಟಿ ರೂ. ಆಫರ್ ವಿಚಾರ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು!?

0

ಬೀದರ್:- ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು.

ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿ ಕಾರ್ಡ್ ರದ್ದು ವಿಚಾರವಾಗಿ ಬಹಳಷ್ಟು ದೂರುಗಳಿವೆ. ಸಾಹುಕಾರರು, ಮನೆ ಇದ್ದವರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ತೆಗೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಜೆಪಿ ಕೊಡಬೇಕು ಎಂಬ ನಿಯಮವಿದೆ.

ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದರು.

ಐಪಿಲ್ ಮಾದರಿಯಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

0

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿ ಐಪಿಎಲ್ ಮಾದರಿಯಲ್ಲಿ ರಾಜ್ಯಮಟ್ಟದ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ಜಿಲ್ಲೆಯ ಗದಗ ಪಾವರ್ಸ್ ತಂಡ ನ. 24ರಂದು ಮೊದಲ ಲೀಗ್ ಪಂದ್ಯ ಆಡಲಿದೆ ಎಂದು ತಂಡದ ಒಡತಿ ಶ್ವೇತಾ ಗೌಡ ತಿಳಿಸಿದರು.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಈ ಟೂರ್ನಮೆಂಟ್ ಆಯೋಜಿಸಿದೆ. ಗಂಗಾಧರ ರಾಜು ಅವರ ಕನಸಿನ ಟೂರ್ನಮೆಂಟ್ ಇದಾಗಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲು ಅಸೋಸಿಯೇಶನ್ ಮುಂದಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ತಂಡ ಸೇರಿದಂತೆ ಒಟ್ಟು ೩೨ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಟೂರ್ನಿಯ ವಿಜೇತ ತಂಡಕ್ಕೆ ಗರಿಷ್ಠ 25 ಲಕ್ಷ ರೂ. ಬಹುಮಾನ ಘೋಷಣೆಯಾಗಿದೆ. ಆದ್ದರಿಂದ, ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾವಂತರನ್ನೊಳಗೊಂಡ ತಂಡವನ್ನು ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೆ.ಎಂ. ಸಯ್ಯದ, ಶಿವು ಕರಡಿ, ಕಾವೇರಿ ಬಡಿಗೇರ, ಮಹೇಶ್ವರಾನಂದ ಗುರುಜಿ, ಸಯ್ಯದ ಕೊಪ್ಪಳ, ಶ್ರೀಧರ ವಜ್ರಬಂಡಿ, ಶ್ರೀಕಾಂತ ಪೆರೂರ, ರವಿ, ಸರ್ಫರಾಜ ಕೌತಾಳ, ಶಂಕರ ಗೌಡಕಿ, ರಮೇಶ ಬೆನಹಾಳ, ವೀರೇಶ ವಡ್ಡರ್, ವಿಜಯ ಮುಳಗುಂದ ಮುಂತಾದವರು ಉಪಸ್ಥಿತರಿದ್ದರು.

`ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ  ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದಲ್ಲಿ ತೆರೆದ ವಾಹನದ ಮುಖಾಂತರ ಸ್ತಬ್ಧ ಚಿತ್ರದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹಾಗೂ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಧಾ ಮಣ್ಣೂರ   ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ನೂತನ ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನ್ಯಾ.ಮೂ ವಿ.ಶ್ರೀಶಾನಂದ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಶ್ರೇಷ್ಠ ಹಾಗೂ ನೈಜ ನ್ಯಾಯವು ನೊಂದವರ ಕಣ್ಣೀರು ಒರೆಸುವ ಕಾರ್ಯ ಮಾಡುವಂತಾಗಲಿ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಗದಗ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಅಭಿಪ್ರಾಯಪಟ್ಟರು.

ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಶಾಲೆಯ ಹಿಂಭಾಗದಲ್ಲಿ  ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಲ್ಲಿರುವ ಆತ್ಮಸಾಕ್ಷಿಯು ನ್ಯಾಯಾಧೀಶರಾಗಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಆತ್ಮಸಾಕ್ಷಿಗೆ ಸರಿ ಎನಿಸಿದ್ದನ್ನು ಮಾತ್ರವೇ ಮಾಡಬೇಕು. ಆಸೆಯು ದುರಾಸೆಯಾದಾಗ ಮನುಷ್ಯರು ಕೆಟ್ಟ ದಾರಿ ಹಿಡಿಯುವಂತೆ ಆಗುತ್ತದೆ ಎಂದರು.

ಸ್ವಾತಂತ್ರö್ಯ ಬಂದ ನಂತರ ದೇಶಕ್ಕೆ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲ್ಪಟ್ಟ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ನಮ್ಮೆಲ್ಲರಿಗೂ ಸಂವಿಧಾನವೇ ಶ್ರೇಷ್ಠ ಗ್ರಂಥ. ಸಂವಿಧಾನಕ್ಕೆ ತನ್ನದೇ ಆದ ಘನತೆ, ಗೌರವ ಇದ್ದು ಸರ್ವರೂ ಸಂವಿಧಾನ ಹಾಗೂ ದೇಶದ ಕಾನೂನುಗಳನ್ನು ಗೌರವಿಸಬೇಕು ಎಂದರು.

ನಾವು ಜೀವಿಸುವ ಪ್ರದೇಶದಲ್ಲಿ ಆಸ್ಪತ್ರೆ ಹಾಗೂ ನ್ಯಾಯಾಲಯ ಕಟ್ಟಡಗಳು ಇರಬೇಕು. ಅವುಗಳು ಅನಿವಾರ್ಯ ಸಂದರ್ಭದಲ್ಲಿ ಮಾತ್ರವೇ ಬಳಕೆಯಾಗಬೇಕು. ಅಂದರೆ ಆರೋಗ್ಯ ಹದಗೆಟ್ಟಾಗ ಮಾತ್ರ ಆಸ್ಪತ್ರೆಗಳಿಗೆ ತೆರಳುತ್ತೇವೆ, ಅದರಂತೆ ಅನ್ಯಾಯವಾದಾಗ ಮಾತ್ರವೇ ನ್ಯಾಯದ ಮೊರೆ ಹೋಗುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಾಜ್ಯಮುಕ್ತ ಗ್ರಾಮ ಪ್ರತಿಯೊಬ್ಬರ ಆಶಯವಾಗಬೇಕು. ಗದಗ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ತರಹದ ಪೊಲೀಸ್ ಪ್ರಕರಣ ದಾಖಲಾತಿಗಳಾಗದ ೫೮ ಗ್ರಾಮಗಳಿದ್ದು, ವ್ಯಾಜ್ಯಮುಕ್ತ ಗ್ರಾಮದ ಪರಿಕಲ್ಪನೆಗೆ ಮಾದರಿಯಾಗಿವೆ. ೧೦೦ ಗ್ರಾಮಗಳನ್ನಾದರೂ ವ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿ ಘೋಷಿಸುವ ಯೋಜನೆ ಸಾಕಾರವಾಗಲು ಸಾರ್ವಜನಿಕರು ಸಹಕಾರ ನೀಡಬೇಕೆಂದರು.

ಬಡವರ ಪ್ರಕರಣಗಳಿಗೆ ಆರು ತಿಂಗಳೊಳಗಾಗಿ ನ್ಯಾಯಾಲಯಗಳಲ್ಲಿ ಬಗೆಹರಿದರೆ ಅದೊಂದು ದೊಡ್ಡ ಸಾಧನೆಯಾಗಲಿದೆ. ಸರ್ಕಾರ ಜನಪರ ಕಾರ್ಯಕ್ಕೆ ಹಾಗೂ ಜನಪರ ಕಾನೂನು ಜಾರಿಗೊಳಿಸಲು ಸದಾ ಸಿದ್ಧ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ವೇದಿಕೆಯಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್. ಪಾಟೀಲ, ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಎಸ್. ಮಿಟ್ಟಲಕೋಡ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲಾ ್ಲ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ರೋಣ ವಕೀಲರ ಸಂಘದ ಅಧ್ಯಕ್ಷ ವಿ.ಎಸ್. ಬಂಗಾರಿ, ರೋಣ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಐ.ಎ. ಫಾರೂಕಿ, ಗದಗ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವಿ.ಎನ್. ಪಾಟೀಲ ಉಪಸ್ಥಿತರಿದ್ದರು.

ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ಎಂ.ವೈ. ಗೋಣೇಕರ್ ಪ್ರಾರ್ಥಿಸಿದರು. ರಾಘವೇಂದ್ರ ಅಂಬೋಡೇಕರ್ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ವಕೀಲರಾದ ಬಿ.ಎ. ಸಜ್ಜನರ ಪ್ರಾಸ್ತಾವಿಕ ಮಾತನಾಡಿದರು.

ಸಮಾರಂಭದಲ್ಲಿ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ  ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು, ಸಾರ್ವಜನಿಕರು ಹಾಜರಿದ್ದರು.

ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ: ಡಾ.ಜಿ‌.ಪರಮೇಶ್ವರ್ ಟೀಕೆ

0

ಮೈಸೂರು: ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರ ಖರೀದಿಗೆ ಬಿಜೆಪಿ ಈಗಲೂ ಪ್ರಯತ್ನ ಮಾಡುತ್ತಿದೆ. ಆದರೆ ಎಷ್ಟು ಕೋಟಿ ಎಂಬುದು ಗೊತ್ತಿಲ್ಲ. ಪ್ರಯತ್ನವನ್ನಂತೂ ಮಾಡುತ್ತಲೇ ಇರುತ್ತಾರೆ.

ಮುಖ್ಯಮಂತ್ರಿಗಳೇ ಕೋಟಿ ವಿಚಾರ ಹೇಳಿದ ಮೇಲೆ ಅದು ಸತ್ಯ ಇರಬಹುದು. ಈ ವಿಚಾರವಾಗಿ ಸರಿಯಾದ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಟೀಕಿಸಿದ್ದಾರೆ.

ಇನ್ನೂ 40% ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಿದ್ದೆವು. ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎನ್ನುತ್ತಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯಬಿದ್ದರೆ ಮರುತನಿಖೆಗೆ ಒಳಪಡಿಸಲು ನಾವು ಸಿದ್ಧ ಎಂದರು.

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

0

ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.

ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.

ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ .ಕುಮಾರಸ್ವಾಮಿ ಯವರಿಗೆ ಯಾವ ನೈತಿಕ ಹಕ್ಕಿದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ

ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.

ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ?

ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ. 15 ಲಕ್ಷದವರೆಗೆ ಶೇಕಡಾ 3% ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಬರುವುದು ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.‌

2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ. ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು. ಇದನ್ನು ನೀವು ಕೇಳುವುದಿಲ್ಲ ಎಂದರು. 56000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಗಳಲ್ಲಿ ಏಕೆ ಕೊಡುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ

ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ಹಸೆಮಣೆ ಏರಲು ರೆಡಿಯಾದ್ರಾ ಕೀರ್ತಿ ಸುರೇಶ್‌..? ಹುಡುಗ ಯಾರು ಗೊತ್ತಾ..?

0

ನಟ-ನಟಿಯರು ಯಾರದ್ದಾದರೂ ಜೊತೆ ಸುತ್ತಾಟ ನಡೆಸಿದರೆ ಸಾಕು, ಡೇಟಿಂಗ್ ವಿಚಾರ ಹುಟ್ಟಿಕೊಳ್ಳುತ್ತದೆ. ಪ್ರೀತಿ-ಪ್ರೇಮದ ರೆಕ್ಕೆ ಪಡೆದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ಪೈಕಿ ಕೆಲವು ನಿಜವಾದರೆ ಇನ್ನೂ ಕೆಲವು ಸುಳ್ಳಾಗಿದೆ. ಇದೀಗ ಕೀರ್ತಿ ಸುರೇಶ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಯ ಮದುವೆ ಮ್ಯಾಟರ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಮೂಲಗಳ ಪ್ರಕಾರ, ಕುಟುಂಬಸ್ಥರು ನೋಡಿದ ಹುಡುಗನ ಜೊತೆ ಕೀರ್ತಿ ಮದುವೆಯಾಗಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಡಿಸೆಂಬರ್‌ನಲ್ಲಿ ಗೋವಾದಲ್ಲಿ ಕೀರ್ತಿ ಸುರೇಶ್ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ವರ ಕೂಡ ನಟಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಇದು ವಿಚಾರ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಕಾದುನೋಡಬೇಕಿದೆ.

ಕೀರ್ತಿ ಸುರೇಶ್ ಅವರ ಹೆಸರು ಅನೇಕರೊಂದಿಗೆ ತಳುಕು ಹಾಕಿಕೊಂಡಿದೆ. ಈ ಹಿಂದೆ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಜೊತೆ ಕೂಡ ತಳುಕು ಹಾಕಿಕೊಂಡಿತ್ತು. ಆ ನಂತರ ನಟಿ ಇದು ಸುಳ್ಳು ಸುದ್ದಿ. ನಾವಿಬ್ಬರೂ ಫ್ರೆಂಡ್ಸ್ ಎಂದು ಪ್ರತಿಕ್ರಿಯೆ ನೀಡಿದರು. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಮದುವೆ ವಿಚಾರಕ್ಕೆ ನಟಿ ಏನು ಹೇಳ್ತಾರೋ? ಕಾಯಬೇಕಿದೆ. ಇನ್ನೂ `ಬೇಬಿ ಜಾನ್’ ಸಿನಿಮಾ ಮೂಲಕ ನಟಿ ಕೀರ್ತಿ ಸುರೇಶ್ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.

 

error: Content is protected !!