Home Blog Page 2104

ಕನಕದಾಸರು ವಿಶ್ವ ಮಾನವ, ಸಮಾಜ ಸುಧಾರಕರು: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಯಾದಗಿರಿ: ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಬಾಲಕರು.! ಓರ್ವನ ಶವ ಪತ್ತೆ – ಇನ್ನೋರ್ವನಿಗಾಗಿ ಶೋಧ

0

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ದನ ಮೇಯಿಸಲು ಹೋಗಿ ಇಬ್ಬರು ಬಾಲಕರು ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಓರ್ವನ ಶವ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮೃತ ಬಾಲಕನನ್ನು ಶಂಕರ ಮೇಟಿ (10) ಎಂದು ಗುರುತಿಸಲಾಗಿದ್ದು, ಶ್ರೀಯಣ್ಣ ಚಂದ್ರಕಾಂತ್‌ಗಾಗಿ (8) ಹುಡುಕಾಟ ನಡೆಸುತ್ತಿದ್ದಾರೆ.

ಭಾನುವಾರ ಸ್ಕೂಲ್‌ಗೆ ರಜೆಯಿದ್ದ ಹಿನ್ನೆಲೆ ಇಬ್ಬರು ಬಾಲಕರು ದನ ಮೇಯಿಸಲು ತೆರಳಿದ್ದರು. ಆ ವೇಳೆ ಕಾಲು ಜಾರಿ ಹಿರೇಹಳ್ಳಕ್ಕೆ ಬಿದ್ದಿದ್ದಾರೆ. ನಿನ್ನೆ (ನ.18) ತಡರಾತ್ರಿಯಿಂದ ಸ್ಥಳದಲ್ಲಿ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಬಿಡುಬಿಟ್ಟಿದೆ. ಸದ್ಯ ಶಂಕರನ ಶವ ಪತ್ತೆಯಾಗಿದ್ದು, ಶ್ರೀಯಣ್ಣಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಾಸಕರ ಖರೀದಿಗೆ 50 ಕೋಟಿ ಅಲ್ಲ 100 ಕೋಟಿ ಆಫರ್: ಸ್ಪೋಟಕ ಹೇಳಿಕೆ ಕೊಟ್ಟ ಮಂಡ್ಯ ಶಾಸಕ!

0

ಮಂಡ್ಯ: ಬಿಜೆಪಿಯಿಂದ 50 ಕೋಟಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,  ನಮ್ಮತ್ರ ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ಮಾಧ್ಯಮಗಳ ಮುಂದೆ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.  ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ.

ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದರು.

ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಬಿಜೆಪಿಯವರಿಗೆ ಹಿಂದಿನ ಸರ್ಕಾರದಲ್ಲಿ ಮಾಡಿದ್ದ ಹಗರಣಗಳ ಕಂಟಕ ಸುತ್ತಿಕೊಂಡಿದೆ. ಅದರಿಂದ ಬಚಾವಾಗಲು, ಆ ಅಕ್ರಮದ ದುಡ್ಡನ್ನೇ ಮುಂದಿಟ್ಟುಕೊಂಡು ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಬೆಂಬಲ ಇದೆ. ಇದೀಗ ಜೆಡಿಎಸ್​​ ಕೂಡ ಜತೆಗೂಡಿದೆ ಎಂದು ಗಣಿಗ ಟೀಕಿಸಿದ್ದಾರೆ.

BREAKING.. ಬೆಮಲ್ ಅಧಿಕಾರಿ ಆತ್ಮಹತ್ಯೆ! ಕಾರಣ ನಿಗೂಢ

0

ಮೈಸೂರು: ಬೆಮಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ. ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್(54) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,

ಮೋಹನ್ ಎಂದಿನಂತೆ ಭಾನುವಾರ ಬೆಳಿಗ್ಗೆ ಕರ್ತವ್ಯಕ್ಕೆ ತೆರಳಿದ್ದರು. ಬಳಿಕ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದ ವಾಚ್‌ಮ್ಯಾನ್ ಶೆಡ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುವೆಂಪುನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Breaking News: ಚಿರತೆ ದಾಳಿಗೆ 55 ವರ್ಷದ ಮಹಿಳೆ ಬಲಿ!

0

ನೆಲಮಂಗಲ:- 55 ವರ್ಷದ ಮಹಿಳೆಯೋರ್ವರು ಚಿರತೆ ದಾಳಿಗೆ ಬಲಿ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಜರುಗಿದೆ.

ಮೃತ ಮಹಿಳೆಯನ್ನು ಕರಿಯಮ್ಮ ಎಂದು ಗುರುತಿಸಲಾಗಿದೆ. ರಾತ್ರಿ ಜನಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ವೇಳೆ ಚಿರತೆ ಮಹಿಳೆಯ ಮೇಲೆ ದಾಳಿ ಮಾಡಿದೆ. ಈ ಘಟನೆಯು ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಗೊಲ್ಲರಹಟ್ಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಗ್ರಾಮದಲ್ಲಿ ಚಿರತೆಯು ಆಗಾಗ ಕಾಣಿಸಿಕೊಂಡಿದ್ದು, ಎಚ್ಚೆತ್ತುಕೊಳ್ಳದ ಅರಣ್ಯ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.

ಅಪ್ರಾಪ್ತ ಬಾಲಕಿಗೆ ನೆರೆಮನೆ ಯುವಕರಿಂದ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್!

0

ಆನೇಕಲ್:- ಪಕ್ಕದ ಮನೆ ಯುವಕರಿಂದ ಸುಮಾರು 15 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಹೊರವಲಯದ ಘಟನೆ ಜರುಗಿದೆ.

ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು, ಶ್ರೀಕಂಠ ಮತ್ತು ವಿಜಯ್ ನನ್ನು ಅರೆಸ್ಟ್ ಮಾಡಿದ್ದಾರೆ. ಬಾಲಕಿ, ಕಳೆದ ಶುಕ್ರವಾರ ರಾತ್ರಿ ಊಟ ಮಾಡಿ ಮನೆಯಿಂದ ಹೊರಬಂದಿದ್ದಳು. ಈ ವೇಳೆ ಚಾಕೊಲೇಟ್ ಕೊಡುವುದಾಗಿ ಅಸಾಮಿಗಳು, ಪುಸಲಾಯಿಸಿದ್ದರು.

ಒಪ್ಪದಿದ್ದಾಗ ಸಮೀಪದ ದೇವಸ್ಥಾನದ ಬಳಿ ಎಳೆದೊಯ್ದು ಕಿರುಕುಳ ಕೊಟ್ಟಿದ್ದಾರೆ. ಬಾಲಕಿ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಬಟ್ಟೆ ಬಿಚ್ಚಲು ಯತ್ನಿಸಿದಾಗಿ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ.

ಕೂಡಲೇ ಆತಂಕಗೊಂಡ ಆರೋಪಿಗಳು, ಬಾಲಕಿ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ಬಾಲಕಿ ತಾಯಿಯಿಂದ ದೂರು ನೀಡಲಾಗಿದ್ದು, ದೂರು ಆಧರಿಸಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BBK11: 50ನೇ ದಿನಕ್ಕೆ ಬಿಗ್ ಮನೆಯಿಂದ ಹೊರ ನಡೆದ ಅನುಷಾ ರೈ: ಧರ್ಮ ಬಚಾವ್!

0

ಬಿಗ್ ಬಾಸ್ ಸೀಸನ್ 11 ರಲ್ಲಿ ಸ್ಟ್ರಾಂಗ್ ಕಂಟಸ್ಟಂಟ್ ಎಂದು ಹೇಳಲಾಗುತ್ತಿದ್ದ ಅನುಷಾ ರೈ ಅವರು 50 ದಿನಕ್ಕೆ ತಮ್ಮ ಆಟವನ್ನು ಮುಗಿಸಿ ಬಿಗ್ ಬಾಸ್‌ ಮನೆಯಿಂದ ಆಚೆ ಬಂದಿದ್ದಾರೆ.

ಟಾಸ್ಕ್ ಅಂತ ಬಂದಾಗ ಬೇರೆ ಸ್ಪರ್ಧಿಗಳಿಗೆ ಸೆಡ್ಡು ಹೊಡೆದು ಅನುಷಾ ಆಟ ಆಡುತ್ತಿದ್ದರು. ಅದರೊಂದಿಗೆ ಧರ್ಮ ಅವರ ಜೊತೆಗಿನ ಸ್ನೇಹದ‌ ವಿಚಾರ ನಟಿ ಹೈಲೈಟ್ ಆಗಿದ್ದರು.

ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ರೈ ಅವರು ಪರಿಚಿತರಾಗಿದ್ದರು. ಒಟ್ಟಿಗೆ ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಬಿಗ್ ಬಾಸ್ ಶೋಗೆ ಬರುವಾಗ ಅವರು ಜೋಡಿಯಾಗಿ ಬಂದಿದ್ದರು. ಮನೆಯ ಒಳಗೆ ಕೂಡ ಒಟ್ಟಿಗೆ ಇರುತ್ತಿದ್ದರು. ಕಾಕತಾಳೀಯ ಎಂದರೆ ಎಲಿಮಿನೇಷನ್​ ಪ್ರಕ್ರಿಯೆಯಲ್ಲೂ ಅವರು ಜೊತೆಯಲ್ಲಿ ಕೊನೇ ಹಂತ ತಲುಪಿದ್ದರು.

ಧರ್ಮ ಮತ್ತು ಅನುಷಾ ಇಬ್ಬರೂ ಎಲಿಮಿನೇಟ್ ಆಗಬಹುದು ಅಥವಾ ಒಬ್ಬರೇ ಎಲಿಮಿನೇಟ್ ಆಗಬಹುದು ಎಂದು ಸುದೀಪ್ ಹೇಳಿದಾಗ ಅವರಿಬ್ಬರನ್ನು ಇಷ್ಟಪಡುವ ಪ್ರೇಕ್ಷಕರ ಎದೆಯಲ್ಲಿ ಢವ ಢವ ಶುರುವಾಗಿತ್ತು. ಅಂತಿಮವಾಗಿ ಅನುಷಾ ರೈ ಅವರು ಔಟ್ ಆಗಬೇಕಾಯಿತು. ಧರ್ಮ ಕೀರ್ತಿರಾಜ್ ಅವರು ಅಳುತ್ತಾ ವಾಪಸ್ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ.

ಯುವಕರು ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ ಅಭಿವೃದ್ಧಿಪಡಿಸುವ ಗುರಿ ಹೊಂದಬೇಕು: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ದುಡಿದು ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸಂಭ್ರಮ 50ರ ಅಂಗವಾಗಿ ಪ್ರವಾಸಿ ಟ್ಯಾಕ್ಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆಯ ಯುವಕರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಾರೆ. ಹಾಗಾಗಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕಾಗಿ ಬಳಸುವ ಟ್ಯಾಕ್ಸಿಗಳಲ್ಲಿ ಇಂದು ಟ್ಯಾಕ್ಸಿ ಪಡೆದ ಜಿಲ್ಲೆಯ ಯುವಕರನ್ನು ಪರಿಗಣಿಸಿ ಬಳಸಿಕೊಳ್ಳಬೇಕು ಎಂದು ಮಾನ್ಯನೇಜಿಂಗ್ ಡೈರೆಕ್ಟರ್ ರ‍್ರಾಜೇಂದ್ರ ಅವರಿಗೆ ಸಚಿವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಯುವಕರು ಸ್ವಾವಲಂಬಿಗಳಾಗಬೇಕು ಎನ್ನುವ ಉದ್ದೇಶದಿಂದ ದಾಖಲೆ ರೀತಿಯಲ್ಲಿ ಕಾರುಗಳನ್ನು ವಿತರಣೆ ಮಾಡಿರುವುದು ಸಂತೋಷ ತಂದಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರು ಅಭಿನಂದನಾರ್ಹರು ಎಂದರು.

ಟ್ಯಾಕ್ಸಿಗಳನ್ನು ಪಡೆದ ಯುವಕರು ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ ಅಭಿವೃದ್ಧಿಪಡಿಸುವ ಗುರಿ ಹೊಂದಬೇಕು. ಟ್ಯಾಕ್ಸಿ ಪಡೆದ ಯುವಕರು ಗದಗ ಜಿಲ್ಲೆಗೆ ಸೀಮಿತವಾಗದೆ ರಾಜ್ಯದಲ್ಲಿರುವ ವಿವಿಧ  ದೊಡ್ಡ ದೇವಾಲಯ, ಸ್ಮಾರಕ, ನಿಸರ್ಗಧಾಮ ಅಲ್ಲಿನ ವಸತಿ, ಊಟ ವ್ಯವಸ್ಥೆ, ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಮಾಹಿತಿ ಹೊಂದಿರಬೇಕು ಎಂದರು.

ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕರಾದ ಜಿ.ಎಸ್. ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಕೆಡಿಪಿ ಸದಸ್ಯ ಡಿ.ಆರ್. ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ,  ಐಯ್ಯಸ್ವಾಮಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಜೇಂದ್ರ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.


 

ಒಳ ಮೀಸಲಾತಿಯನ್ನು ಜಾತಿ ಜನಗಣತಿ ಆಧಾರದಲ್ಲಿಯೇ ಕೊಡಲಿ: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನಲ್ಲಿ ನದಾಫ್/ಪಿಂಜಾರ್ ಸಮಾಜಕ್ಕೆ ಈಗಾಗಲೇ 25 ಗುಂಟೆ ಜಾಗವಿದೆ. ಅದನ್ನು ಪೂರ್ಣ ಪ್ರಮಾಣದಲ್ಲಿ ಸಮಾಜಕ್ಕೆ ಹಸ್ತಾಂತರಿಸುವದರೊಂದಿಗೆ ಸರಕಾರ ಮತ್ತು ಶಾಸಕರ ಅನುದಾನದಲ್ಲಿ 2025 ಮಾರ್ಚ್ 31ರ ಒಳಗಾಗಿ 1 ಕೋಟಿ ರೂ. ಒದಗಿಸಲಾಗುವುದು. ಸಂಘಟನೆಯ ಮುಖಂಡರು ಸೂಕ್ತ ನೀಲನಕ್ಷೆಯನ್ನು ಸಿದ್ಧಪಡಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಶನಿವಾರ ನಗರದ ಆಂಗ್ಲೋ ಉರ್ದು ಹೈಸ್ಕೂಲï ಮೈದಾನದಲ್ಲಿ ಕರ್ನಾಟಕ ರಾಜ್ಯ ನದಾಫ್/ ಪಿಂಜಾರ ಸಂಘದ ಗದಗ ಜಿಲ್ಲಾ ಘಟಕದ ಸಹಯೋಗದಲ್ಲಿ, ಆರ್.ಆರ್. ಸಿದ್ನೆಕೊಪ್ಪ, ಐ.ಡಿ. ನದಾಫ್ ವೇದಿಕೆಯಲ್ಲಿ ನಡೆದ ಸಂಘದ 32ನೇ ವರ್ಷದ ಸಂಸ್ಥಾಪನಾ ದಿನಾಚರಣೆ, ರಾಜ್ಯಮಟ್ಟದ ಮಹಿಳಾ ಸಮಾವೇಶ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಸಚಿವರು ಮಾತನಾಡಿದರು.

ನದಾಫ್/ಪಿಂಜಾರ್ ಸಮುದಾಯ ಬಾಂಧವರು ಮುಗ್ಧರು. ಹಳ್ಳಿಗಳಲ್ಲಿಯೇ ಹೆಚ್ಚಾಗಿ ಇರುವ ಜನ. ಆದರೂ ಶಿಕ್ಷಣದಲ್ಲಿ ಮೀಸಲಾತಿ, ನಿಗಮ ಮಂಡಳಿ ಸ್ಥಾಪನೆಯಾಗದಿರುವುದಕ್ಕೆ ಹೋರಾಟದ ಕೊರತೆಯೇ ಕಾರಣ. ನದಾಫ್ ಮತ್ತು ಪಿಂಜಾರ್ ಸಮುದಾಯವು ಶಿಕ್ಷಣಕ್ಕೆ ಆದ್ಯತೆ ಕೊಟ್ಟಿಲ್ಲ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ನಂತರ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದಲ್ಲಿ ನದಾಫ್/ಪಿಂಜಾರ್ ಸಹ ಒಂದಾಗಿದೆ. ರಾಜ್ಯ ಸರಕಾರ ಬಡವರ ಕಲ್ಯಾಣಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗ ಪಡೆದು ಶಿಕ್ಷಣಕ್ಕೆ ಆದ್ಯತೆ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.

ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಮುಸ್ಲಿಂ ಸಮುದಾಯಗಳನ್ನು ಬೇರೆ ಬೇರೆಯಾಗಿ ಭಾವಿಸಿಲ್ಲ. ಆದರೆ ಕೆಲ ಸೌಲಭ್ಯಗಳಿಗಾಗಿ ನದಾಫ್/ಪಿಂಜಾರ್ ಸಮುದಾಯ ಸಮಾವೇಶದ ಮೂಲಕ ಧ್ವನಿ ಎತ್ತಿದೆ. ಆ ಎಲ್ಲ ಬೇಡಿಕೆಗಳನ್ನು ಸಚಿವ ಎಚ್.ಕೆ. ಪಾಟೀಲರು ಸರಕಾರದ ಮೂಲಕ ಈಡೇರಿಸಲಿದ್ದಾರೆ ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಡಿ. ನದಾಫ್ ಪ್ರಾಸ್ತಾವಿಕ ನುಡಿಗಳನ್ನಾಡಿ, ರಾಜ್ಯದಲ್ಲಿ ಸುಮಾರು ೩೦ ಲಕ್ಷ ಜನಸಂಖ್ಯೆ ಹೊಂದಿರುವ ನದಾಫ್-ಪಿಂಜಾರ್ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ಇಸ್ಲಾಂ ಧರ್ಮದ ಅನುಯಾಯಿಗಳಾಗಿದ್ದರೂ ನಮಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ, ನಾವೂ ಒಳಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಒಳಮೀಸಲಾತಿಯನ್ನು ಜಾತಿ ಜನಗಣತಿ ಆಧಾರದಲ್ಲಿಯೇ ಕೊಡಲಿ. ಒಟ್ಟಿನಲ್ಲಿ ನಮಗೂ ಅಲ್ಪ ಪ್ರಮಾಣದ ಮೀಸಲಾತಿ ಸಿಗುವಂತಾಗಲಿ ಎಂದರು.

ಸಂಘದ ರಾಜ್ಯಾಧ್ಯಕ್ಷ ಎಚ್.ಜಲೀಲಸಾಬ ಅಧ್ಯಕ್ಷತೆ ವಹಿಸಿದ್ದರು. ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಸಂಘದ ಜಿಲ್ಲಾಧ್ಯಕ್ಷ ರಬ್ಬಾನಿ ಹುಲಕೋಟಿ ಮುಂತಾದವರು ಉಪಸ್ಥಿತರಿದ್ದರು.

ತಾಂತ್ರಿಕ ಕಾರಣದಿಂದ ಅನುದಾನ ಸರಕಾರಕ್ಕೆ ಹೋಗಿದ್ದು ಮತ್ತೆ ಸಮಾಜಕ್ಕೆ ನೀಡಲಾಗುವುದು: ಸಚಿವ ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಬರುವ ಡಿಸೆಂಬರ್ 5ರಂದು ಚಳಿಗಾಲದ ಅಧಿವೇಶನ ನಡೆಯಲಿದೆ. ಆ ಸಂದರ್ಭದಲ್ಲಿ ನದಾಫ್/ಪಿಂಜಾರ್ ಸಮುದಾಯದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಸಮಾಜದ 15 ಜನ ಪ್ರಮುಖರ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಕರೆದೊಯ್ದು ಚರ್ಚಿಸಿ, ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು.

ಇಲ್ಲಿನ ಆಂಗ್ಲೋ ಉರ್ದು ಶಾಲೆ ಮೈದಾನದಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘದ 32ನೇ ಸಂಸ್ಥಾಪನಾ ದಿನಾಚರಣೆ, ರಾಜ್ಯಮಟ್ಟದ ಮಹಿಳಾ ಸಮಾವೇಶ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಗದಗ-ಬೆಟಗೇರಿಯಲ್ಲಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1 ಕೋಟಿ ರೂ. ಅನುದಾನ ಒದಗಿಸಲಾಗುವುದು. ವಿಜಯನಗರ ಜಿಲ್ಲೆಯಲ್ಲಿ ನದಾಫ್/ಪಿಂಜಾರ್ ಸಮುದಾಯ ಭವನ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ 75 ಲಕ್ಷ ರೂ. ಬಿಡುಗಡೆಯಾಗಿತ್ತು. ತಾಂತ್ರಿಕ ಕಾರಣದಿಂದ ಅನುದಾನ ಮರಳಿ ಸರಕಾರಕ್ಕೆ ಹೋಗಿದ್ದು, ಬರುವ ಡಿಸೆಂಬರ್ ಒಳಗಾಗಿ ಆ ಅನುದಾನವನ್ನು ಮತ್ತೆ ಸಮಾಜಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದರು.

ರೋಣ ಶಾಸಕ ಜಿ.ಎಸ್. ಪಾಟೀಲ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಸಂಘದ ರಾಜ್ಯಾಧ್ಯಕ್ಷ ಎಚ್. ಜಲೀಲಸಾಬ, ಹಿರಿಯ ಸಾಹಿತಿ ಡಾ. ರಜಿಯಾ ಬೇಗಂ, ಸಂಘದ ಜಿಲ್ಲಾಧ್ಯಕ್ಷ ರಬ್ಬಾನಿ ಹುಲಕೋಟಿ ಮುಂತಾದವರು ಉಪಸ್ಥಿತರಿದ್ದರು.

error: Content is protected !!