Home Blog Page 2107

ತಾನೊಬ್ಬ ಸುಳ್ಳುರಾಮಯ್ಯ ಎಂದು ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ: ಆರ್ ಅಶೋಕ್!

0

ಬೆಂಗಳೂರು:- ತಾನೊಬ್ಬ ಸುಳ್ಳುರಾಮಯ್ಯ ಎಂದು ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಆರ್ ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದರು.

ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ ಈ ಸುಳ್ಳಿನ ಮಹಲ್ ಕಟ್ಟಿದ್ದರು ಅದು ಈಗ ಕುಸಿದು ಬಿದ್ದಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ, ತಾವು ಸುಳ್ಳುರಾಮಯ್ಯ ಎಂದು ಖುದ್ದು ಸಿಎಂ ಸಾಬೀತು ಪಡಿಸಿದ್ದಾರೆ.

ತಪ್ಪು ಮಾಡಿಲ್ಲ ಎಂದು ಸೈಟು ವಾಪಸ್ ಕೊಟ್ಟರು. ಈಗ ಅವರು ಮಾಡಿದ 40% ಕಮೀಷನ್ ಆರೋಪವೂ ಸುಳ್ಳಾಗಿದೆ. ಇನ್ಮುಂದೆ ಸಿದ್ದರಾಮಯ್ಯ ತಮ್ಮ ಹೆಸರನ್ನು ಸುಳ್ಳು ರಾಮಯ್ಯ ಎಂದು ಬದಲಾಯಿಸಿಕೊಳ್ಳಲಿ ಎಂದರು.

ನಾನು ಇವತ್ತಿಗೆ ಪ್ರತಿಪಕ್ಷ ನಾಯಕನಾಗಿ ಒಂದು ವರ್ಷವಾಗಿದೆ. ಹಾಗೇ ಇದೇ ಹೊತ್ತಿನಲ್ಲಿ ನಮ್ಮ ಸರ್ಕಾರದ ಮೇಲಿನ 40% ಕಮೀಷನ್ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ. ಕಮೀಷನ್ ಆರೋಪ ಮಾಡಿರುವುದು ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿದೆ.

ಇದುವರೆಗೆ 40% ಕಮೀಷನ್ ಆರೋಪಕ್ಕೆ ಕಾಂಗೆಸ್‌ನವರು ದಾಖಲೆ ಕೊಟ್ಟಿಲ್ಲ. ಆಧಾರರಹಿತ, ಸುಳ್ಳು ಆರೋಪ ಮಾಡಿದ್ದರು. ನಮ್ಮ ಮೇಲಿನ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದಲೇ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ 60% ಕಮೀಷನ್ ಸರ್ಕಾರ ಆಗಿದೆ ಎಂದು ಕಿಡಿಕಾರಿದ್ದಾರೆ.

ಎಚ್‌ಡಿಕೆಗೆ “ಕರಿಯ” ಹೇಳಿಕೆ ವಿವಾದ: ಜಮೀರ್ ವಿರುದ್ಧ ಸ್ವಪಕ್ಷದಿಂದಲೇ ಆಕ್ರೋಶ ವ್ಯಕ್ತ!

0

ಬೆಂಗಳೂರು:- ಜಮೀರ್ ಅಹಮ್ಮದ್ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಮಾತಾಡಿದ್ದು ಸರಿಯಲ್ಲ, ಇದನ್ನ ನಾನು ಕೂಡ ಖಂಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಕುಮಾರಸ್ವಾಮಿ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ. ಜಮೀರ್ ಹೇಳಿಕೆ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹಾಗೆ ಮಾತನಾಡುವುದು ಸರಿಯಲ್ಲ. ಯಾರೂ ವೈಯಕ್ತಿಕವಾಗಿ ನಿಂದನೆ ಮಾಡಬಾರದು ಅಂತ ಹೇಳಿದ್ದಾರೆ ಎಂದರು.

ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತಾಡಿದ್ರು. ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣುತ್ತೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್ ಆಗಿದೆ ಅಂತ ಮಾತಾಡಿದ್ರು. ಆಗ ಯಾಕೆ ಬಿಜೆಪಿ-ಜೆಡಿಎಸ್ ನವರು ಅದನ್ನ ವಿರೋಧ ಮಾಡಲಿಲ್ಲ. ಅರಗ ಜ್ಞಾನೇಂದ್ರ ವಿರುದ್ದ ಏನಾದ್ರು ಮಾಡಿದ್ರಾ? ಇದು ರಾಷ್ಟ್ರೀಯ ಸುದ್ದಿ ಆಯ್ತಾ ಎಂದು ಪ್ರಶ್ನೆ ಮಾಡಿದರು.

ಜಮೀರ್ ಹೇಳಿಕೆಗೆ ನಾನು ಸಮರ್ಥನೆ ಮಾಡುವುದಿಲ್ಲ. ಈಗಾಗಲೇ ಸಿಎಂ, ಡಿಸಿಎಂ, ವರಿಷ್ಠರು ಚರ್ಚೆ ಮಾಡಿದ್ದಾರೆ. ಯಾರು ಕೂಡಾ ಬಣ್ಣದ ಬಗ್ಗೆ, ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

Chitradurga: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೇರಿ: ಸ್ಥಳೀಯರು ನಿರಾಳ!

0

ಚಿತ್ರದುರ್ಗ:- ಚಿತ್ರದುರ್ಗದಲ್ಲಿ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಸೆರೆಯಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಹಲವು ದಿನಗಳಿಂದ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಕಳೆದ ಒಂದು ತಿಂಗಳಿಂದ ಕಡ್ಲೆಗುದ್ದು, ಸಿದ್ದಾಪುರ, ಕುರುಬರ ಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ಚಿರತೆ ಇಂದು ಬೋನಿಗೆ ಬಿದ್ದಿದೆ.

ಈ ಚಿರತೆ ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಸಂಜೆಯಾದರೆ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಹ ಭಯ ಪಡುವ ವಾತಾವರಣ ನಿರ್ಮಾಣವಾಗಿತ್ತು.

ಹೀಗಾಗಿ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನನ್ನು ಇಟ್ಟಿದ್ದರು. ಶನಿವಾರ ತಡರಾತ್ರಿ ಚಿರತೆ ಬೋನಿಗೆ ಬಿದ್ದಿದ್ದು, ಅದನ್ನು ಸುರಕ್ಷಿತವಾಗಿ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಲಾಗಿದೆ.

ಚನ್ನಪಟ್ಟಣದಲ್ಲಿ ನಿರೀಕ್ಷೆಗೂ ಮೀರಿ ನಿಖಿಲ್ ಗೆಲ್ತಾರೆ: ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ!

0

ತುಮಕೂರು:- ಇತ್ತೀಚೆಗೆ ನಡೆದ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು, ನಿರೀಕ್ಷೆಗೂ ಮೀರಿ ಗೆಲ್ತಾರೆ ಎಂದು ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ ನುಡಿದಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ನಿಖಿಲ್ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲ್ತಾರೆ. 2016 ರಲ್ಲಿ ಹೆಚ್ ಡಿ ದೇವೆಗೌಡರು ತುಮಕೂರು ತಾಲೂಕಿನ ಚಿನಗ ಗ್ರಾಮದಲ್ಲಿರುವ ಮುಕಾಬಿಂಕಾ ದೇವಿ ಅಮ್ಮನ ಸನ್ನಿಧಿಯಲ್ಲಿ ಚಂಡಿಕಾಯಾಗ ಮಾಡಿಸಿದ್ದರು. ಅದರ ಫಲ 2024 ಕ್ಕೆ ಲಭಿಸಿದೆ.

ಅಂದೇ ಮುಕಾಬಿಂಕಾ ದೇವಿ ನಿಖಿಲ್ ಕುಮಾರಸ್ವಾಮಿಯವರ ಭವಿಷ್ಯ ನುಡಿದಿತ್ತು. 2023 ರ ನಂತರ ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಅದರಂತೆ ನಿಖಿಲ್ ಕುಮಾರಸ್ವಾಮಿಗೆ 2023 ರಿಂದಲೇ ರಾಜಯೋಗ ಶುರುವಾಗಿದೆ.

ನಿಖಿಲ್ ಕುಮಾರಸ್ವಾಮಿ ಮೇಲೆ ಭಗವತಿಯ ಪರಿಪೂರ್ಣ ಆಶೀರ್ವಾದ ಆಗಿದೆ. ಅಮ್ಮನವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು. ನಿಖಿಲ್ ಕುಮಾರಸ್ವಾಮಿಗೆ ಮುಂದಿನ ದಿನಗಳಲ್ಲಿ ಅಮ್ಮನ ಆಶೀರ್ವಾದ, ಜಯಶೀಲರಾಗುವಂತಹ ಎಲ್ಲಾ ಅನುಗ್ರಹವನ್ನ ಅಮ್ಮನವರು ಮಾಡಿಕೊಟ್ಟಿದ್ದಾರೆ.

ಈ ಬಾರಿ ಅಮ್ಮನವರ ಆಶಿರ್ವಾದ ಆಗಿರೋದ್ರಿಂದ ಖಂಡಿತವಾಗಿ ಗೆಲುವು ಖಚಿತವಾಗಿದೆ. ಅವರ ನಿರೀಕ್ಷೆಗೂ ಮಿರಿದ ಅಂತರದಿಂದ ಗೆಲುವ ಸಾಧಿಸಲಿದ್ದಾರೆ. ಯಾಕಂದ್ರೆ ಚಂಡಿಕಾಯಾಗದಲ್ಲಿ ಅಷ್ಟೊಂದು ರೀತಿಯಾದ ವಿಶೇಷತೆಗಳು ಇರುತ್ತೆ.

ಯಾರು ಅನುಷ್ಠಾನವನ್ನ ಮಾಡಿ ವಿಶೇಷವಾಗಿ ದೇವಿಗೆ ಪೂಜೆಯನ್ನ ಸಲ್ಲಿಸ್ತಾರೋ, ಅವರಿಗೆ ಪರಿಪೂರ್ಣವಾದ ಆಶಿರ್ವಾದ ಪರಿಪಾಪ್ತಿಯಾಗುತ್ತೆ. ಮಹಾಲಕ್ಷ್ಮಿ,ಮಹಾಕಾಳಿ, ಮಹಾ ಸರಸ್ಪತಿಯ ಸ್ವರೂಪಿಣಿಯಾಗಿರುವಂತಹ ಅಮ್ಮನವರ ಆಶಿರ್ವಾದ ಆಗಿರೋದ್ರಿಂದ. ಖಂಡಿತವಾಗಿ ಅವರ ಕುಟುಂಬಕ್ಕೆ ಒಳ್ಳೆಯ ಅನುಗ್ರಹ ಆಗುತ್ತೆ.

ಹಿಂದಿನ ಎಲ್ಲ ನೋವುಗಳನ್ನ ಮರೆಸಿ ಮುಂದಿನ ಜೀವನ ಸುಖಮಯವಾಗಿರುತ್ತೆ. ಪ್ರತಿಯೊಂದು ಅಧಿಕಾರ ಸಿಗಬೇಕಾದರೆ ರಾಜಯೋಗ ಇರಬೇಕು. ರಾಜಯೋಗ ಇಲ್ಲದೇ ಅಧಿಕಾರ ಸಿಗಲಿಕ್ಕೆ ಸಾಧ್ಯವಿಲ್ಲ. ಅದರಂತೆ ಅಮ್ಮನವರ ಆಶಿರ್ವಾದದಿಂದ ಈಗ ನಿಖಿಲ್ ಗೆ ರಾಜಯೋಗ ಸಿಕ್ಕಿದೆ. ಉನ್ನತ ಅಧಿಕಾರಗಳನ್ನ ಅನುಭವಿಸುವ ಅನುಗ್ರಹ ಪ್ರಾಪ್ತಿಯಾಗುತ್ತೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ಇನ್ನೂ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ವಿಚಾರದಲ್ಲೂ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ ನುಡಿದಿದ್ದರು. ಆಶ್ವಯುಜ ಮಾಸ ಅಂತ್ಯ ಕಾರ್ತಿಕ ಮಾಸದ ಪ್ರಾರಂಭದಲ್ಲಿ ದರ್ಶನ್ ಬೆಲ್ ಸಿಗುತ್ತೆ ಅದೇ ರೀತಿ ದರ್ಶನ್ ಜೈಲಿನಿಂದ ಹೊರಬಂದಿದ್ದಾರೆ. ಇದೀಗ ನಿಖಿಲ್ ಕುಮಾರಸ್ವಾಮಿ ಭವಿಷ್ಯವೂ ನಿಜವಾಗಲಿದೆ ಎಂದು ನಂಬಲಾಗಿದೆ.

ನಿಶ್ಚಿತಾರ್ಥದ ಸಂಭ್ರಮದಲ್ಲಿ ಡಾಲಿ: ಫೆ.16ಕ್ಕೆ ಮದುವೆ!

0

ನಟ ಡಾಲಿ ಧನಂಜಯ್‌‌‌ ಮನೆಯಲ್ಲಿ ಮದುವೆ ಶಾಸ್ತ್ರ ಪ್ರಾರಂಭವಾಗಿದೆ. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.

ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನುವುದು ವಿಶೇಷ.

ಧನ್ಯತಾ ಮಿಡಲ್ ಕ್ಲಾಸ್ ಹುಡುಗಿ ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ. ಅಲ್ಲದೆ ಅವರ ವರ್ಕ್ ಎಥಿಕ್ಸ್ ಯೋಚನೆಗಳು ನನಗೆ ಇಷ್ಟ ಆಯ್ತು ಎಂದು ಡಾಲಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಹೇಳಿದ್ದರು.

ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ದುರ್ಮರಣ!

0

ಮಂಗಳೂರು:-ರೆಸಾರ್ಟ್​ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ದುರ್ಮರಣ ಹೊಂದಿದ ಘಟನೆ ಜರುಗಿದೆ.

ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಘಟನೆ ನಡೆದಿದ್ದು, ನಿಶಿತ ಎಂ.ಡಿ, ಪಾರ್ವತಿ ಎಸ್, ಕೀರ್ತನ ಎನ್ ಮೃತ ದುರ್ವೈವಿಗಳು ಎಂದು ಗುರುತಿಸಲಾಗಿದೆ.

ಯುವತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್​ನಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ!

0

ಬೆಂಗಳೂರು:- ಡೇಟಿಂಗ್ ಆಪ್‌ ಬಳಕೆ ಮಾಡುವವರು ತಪ್ಪದೇ ಈ ಸುದ್ದಿ ನೋಡಿ. ಅದರಲ್ಲೂ ಯುವತಿಯರು ಎಷ್ಟು ಎಚ್ಚರದಿಂದ ಇದ್ದರೂ ಸಾಕಾಗಲ್ಲ.

ಅದರಂತೆ ರಾಜಧಾನಿ ಬೆಂಗಳೂರಿನಲ್ಲಿ ಡೇಟಿಂಗ್ ಆಪ್‌ ನಂಬಿ ಮೋಸ ಹೋದ ಸಂತ್ರಸ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಎಸ್, ಡೇಟಿಂಗ್ ಆಪ್‌ನಲ್ಲಿ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಹೀಗಾಗಿ ಸಂತ್ರಸ್ತ ಯುವತಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಯುವಕನ ಮೇಲೆ ದೂರು ದಾಖಲಿಸಿದ್ದು, ಮದುವೆಯಾಗುವುದಾಗಿ ನಂಬಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಸಂತ್ರಸ್ತ ಯುವತಿಗೆ ಡೇಟಿಂಗ್ ಆಪ್‌ನಲ್ಲಿ ನಿಹಾಲ್ ಹುಸೇನ್‌ನ ಪರಿಚಯವಾಗಿತ್ತು. ಬಳಿಕ ಅದೇ ತಿಂಗಳಲ್ಲಿ ನಿಹಾಲ್ ಯುವತಿಯನ್ನು ಪಾರ್ಟಿಗೆಂದು ಹೋಟೆಲ್‌ಗೆ ಕರೆಯಿಸಿದ್ದ.

ಅಲ್ಲಿ ಆಕೆಗೆ ಕೊಟ್ಟ ಜ್ಯೂಸ್‌ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಎಸಗಿದ್ದ. ಬಳಿಕ ಆಕೆ ಗರ್ಭಿಣಿಯಾಗಿದ್ದು, ಮೇ ತಿಂಗಳಲ್ಲಿ ಅಬಾರ್ಷನ್ ಮಾಡಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ವರ್ಷ 2023ರಲ್ಲಿ ಇದೇ ಯುವತಿ ಮತ್ತೊಬ್ಬ ಯುವಕನ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿಯೇ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಭಾರೀ ಇಳಿಕೆ!

0

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭಾರೀ ಇಳಿಕೆ ಆಗಿದೆ.

ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 270 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ 35 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,600 ರುಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,600 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ.

ಅಯ್ಯಪ್ಪನ ಭಕ್ತಾದಿಗಳೇ ಇಲ್ಲಿ ಕೇಳಿ: ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ವ್ಯವಸ್ಥೆ!

0

ಹುಬ್ಬಳ್ಳಿ:- ಅಯ್ಯಪ್ಪನ ಭಕ್ತಾದಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.

ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ವಾರಕ್ಕೊಮ್ಮೆ ವಿಶೇಷ ರೈಲು:
ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎಸಿ ಟು ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.

ಪಂಚಾಯಿತಿಯಲ್ಲಿ ರಾಂಗ್ ಆದ ಕಿಚ್ಚ, ಚೈತ್ರಾ ಗಪ್ ಚುಪ್: ಉಸಿರುಗಟ್ಟಿಸೋ ವಾತಾವರಣ ನನಗೆ ಬೇಡ ಎಂದ ಮಾತಿನ ಮಲ್ಲಿ!

0

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದ ಚೈತ್ರಾ ಕುಂದಾಪುರ್ ಅವರಿಗೆ ಕಿಚ್ಚ ಸುದೀಪ್ ಅವರು, ಇಂದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಅವರಿಗೆ ಅನಾರೋಗ್ಯ ಆಗಿದ್ದರಿಂದ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು. ಇದರಿಂದ ಸುದೀಪ್ ಸಖತ್ ಸಿಟ್ಟಾಗಿದ್ದಾರೆ. ಅಲ್ಲದೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಚೈತ್ರಾ ಕ್ಷಮೆ ಕೇಳಿದರು.

ಮನೆ ಬಿಟ್ಟು ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತೀರಿ, ಬೆಳಗ್ಗೆ ಬಂದು ಅದನ್ನು ಸ್ಪರ್ಧಿಗಳಿಗೆ ಹೇಳುವ ಉದ್ದೇಶವೇನು ಅಂತ ಸುದೀಪ್ ಪ್ರಶ್ನೆ ಮಾಡಿದ್ದಾರೆ. ಆಗ ಚೈತ್ರಾ, ನಾನೇ ಡಾಕ್ಟರ್ ಹತ್ತಿರ ಕೆಲವೊಂದು ಕೇಳಿದ್ದೇ, ಅಲ್ಲಿದ್ದ ನರ್ಸ್ ಹೀಗೆ ಹೇಳಿದರು. ಪ್ರತಿಯೊಬ್ಬರ ಮೇಲಿನ ಅಭಿಪ್ರಾಯ ತಿಳಿಸಿದರು. ಅದು ನನ್ನ ಅಭಿಪ್ರಾಯ ಅಲ್ಲ ಎಂದರು.

ತಪ್ಪು ಮಾಡಿ ಮಾತಿನಲ್ಲೇ ಸಮರ್ಥನೆ ಮಾಡಿಕೊಳ್ತಿದ್ದ ಚೈತ್ರಾ ಮೇಲೆ ಸುದೀಪ್ ರಾಂಗ್ ಆದರು. ಬಾಯಿ ಮುಚ್ಚುವಂತೆ ಚೈತ್ರಾಗೆ ಶ್.. ಎಂದು ಸನ್ನೆ ಮಾಡಿದರು. ಸುದೀಪ್ ಕೋಪ ಕಂಡು ಚೈತ್ರಾ ಕುಂದಾಪುರ ಗಪ್ ಚುಪ್ ಆದರು. ಮಾತು ನಿಲ್ಲಿಸಿ ಚೈತ್ರಾ ಕಣ್ಣೀರು ಹಾಕಿದರು. ಆ ನಂತರ ಉಸಿರು ಕಟ್ಟಿಸುವ ವಾತಾವರಣದಲ್ಲಿ ನನಗೆ ಇರೋಕೆ ಆಗಲ್ಲ. ಮನೆಗೆ ಕಳುಹಿಸಿ ಎಂದು ಚೈತ್ರಾ ಬಿಗ್ ಬಾಸ್ ಮನವಿ ಮಾಡಿದ್ದಾರೆ.

ಆದರೆ ಬಿಗ್ ಬಾಸ್ ತೀರ್ಮಾನ ಏನು ಎಂಬುವುದು ಭಾನುವಾರದ ಸಂಚಿಕೆಯಲ್ಲಿ ತಿಳಿದು ಬರಲಿದೆ.

error: Content is protected !!