Home Blog Page 2108

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಭಾರೀ ಇಳಿಕೆ!

0

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭಾರೀ ಇಳಿಕೆ ಆಗಿದೆ.

ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 270 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ 35 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,600 ರುಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,600 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ.

ಅಯ್ಯಪ್ಪನ ಭಕ್ತಾದಿಗಳೇ ಇಲ್ಲಿ ಕೇಳಿ: ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ವ್ಯವಸ್ಥೆ!

0

ಹುಬ್ಬಳ್ಳಿ:- ಅಯ್ಯಪ್ಪನ ಭಕ್ತಾದಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.

ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ವಾರಕ್ಕೊಮ್ಮೆ ವಿಶೇಷ ರೈಲು:
ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎಸಿ ಟು ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.

ಪಂಚಾಯಿತಿಯಲ್ಲಿ ರಾಂಗ್ ಆದ ಕಿಚ್ಚ, ಚೈತ್ರಾ ಗಪ್ ಚುಪ್: ಉಸಿರುಗಟ್ಟಿಸೋ ವಾತಾವರಣ ನನಗೆ ಬೇಡ ಎಂದ ಮಾತಿನ ಮಲ್ಲಿ!

0

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದ ಚೈತ್ರಾ ಕುಂದಾಪುರ್ ಅವರಿಗೆ ಕಿಚ್ಚ ಸುದೀಪ್ ಅವರು, ಇಂದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಅವರಿಗೆ ಅನಾರೋಗ್ಯ ಆಗಿದ್ದರಿಂದ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು. ಇದರಿಂದ ಸುದೀಪ್ ಸಖತ್ ಸಿಟ್ಟಾಗಿದ್ದಾರೆ. ಅಲ್ಲದೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಚೈತ್ರಾ ಕ್ಷಮೆ ಕೇಳಿದರು.

ಮನೆ ಬಿಟ್ಟು ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತೀರಿ, ಬೆಳಗ್ಗೆ ಬಂದು ಅದನ್ನು ಸ್ಪರ್ಧಿಗಳಿಗೆ ಹೇಳುವ ಉದ್ದೇಶವೇನು ಅಂತ ಸುದೀಪ್ ಪ್ರಶ್ನೆ ಮಾಡಿದ್ದಾರೆ. ಆಗ ಚೈತ್ರಾ, ನಾನೇ ಡಾಕ್ಟರ್ ಹತ್ತಿರ ಕೆಲವೊಂದು ಕೇಳಿದ್ದೇ, ಅಲ್ಲಿದ್ದ ನರ್ಸ್ ಹೀಗೆ ಹೇಳಿದರು. ಪ್ರತಿಯೊಬ್ಬರ ಮೇಲಿನ ಅಭಿಪ್ರಾಯ ತಿಳಿಸಿದರು. ಅದು ನನ್ನ ಅಭಿಪ್ರಾಯ ಅಲ್ಲ ಎಂದರು.

ತಪ್ಪು ಮಾಡಿ ಮಾತಿನಲ್ಲೇ ಸಮರ್ಥನೆ ಮಾಡಿಕೊಳ್ತಿದ್ದ ಚೈತ್ರಾ ಮೇಲೆ ಸುದೀಪ್ ರಾಂಗ್ ಆದರು. ಬಾಯಿ ಮುಚ್ಚುವಂತೆ ಚೈತ್ರಾಗೆ ಶ್.. ಎಂದು ಸನ್ನೆ ಮಾಡಿದರು. ಸುದೀಪ್ ಕೋಪ ಕಂಡು ಚೈತ್ರಾ ಕುಂದಾಪುರ ಗಪ್ ಚುಪ್ ಆದರು. ಮಾತು ನಿಲ್ಲಿಸಿ ಚೈತ್ರಾ ಕಣ್ಣೀರು ಹಾಕಿದರು. ಆ ನಂತರ ಉಸಿರು ಕಟ್ಟಿಸುವ ವಾತಾವರಣದಲ್ಲಿ ನನಗೆ ಇರೋಕೆ ಆಗಲ್ಲ. ಮನೆಗೆ ಕಳುಹಿಸಿ ಎಂದು ಚೈತ್ರಾ ಬಿಗ್ ಬಾಸ್ ಮನವಿ ಮಾಡಿದ್ದಾರೆ.

ಆದರೆ ಬಿಗ್ ಬಾಸ್ ತೀರ್ಮಾನ ಏನು ಎಂಬುವುದು ಭಾನುವಾರದ ಸಂಚಿಕೆಯಲ್ಲಿ ತಿಳಿದು ಬರಲಿದೆ.

ರಸ್ತೆ ಅಪಘಾತ: ಟ್ರ್ಯಾಕ್ಟರ್, ಬೈಕ್‌ ನಡುವೆ ಡಿಕ್ಕಿ ಹೊಡೆದು ಓರ್ವ ದುರ್ಮರಣ!

0

ಹಾಸನ:- ಹಾಸನದ ಜಯನಗರ ಸರ್ಕಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಮ್‌ಸಿಎಫ್‌ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಜರುಗಿದೆ.

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಬಾಹ್ಯಾಕಾಶ ಮುಖ್ಯ ನಿಯಂತ್ರಣ ಸೌಲಭ್ಯ ಕೇಂದ್ರದ ಸಿಬ್ಬಂದಿಯಾಗಿದ್ದ 51 ವರ್ಷದ ಅರವಿಂದ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು MCFನಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕೆಲಸ ಮುಗಿಸಿ ಸ್ಕೂಟಿಯಲ್ಲಿ ಹಾಸನ ನಗರಕ್ಕೆ ಬಂದಿದ್ದರು. ವಾಪಾಸ್ ಮನೆಗೆ ತೆರಳುವಾಗ ಅಪಘಾತ ನಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Health Tips: ಏನೇ ಸರ್ಕಸ್‌ ಮಾಡಿದ್ರು ಬಿಕ್ಕಳಿಕೆ ಕಡಿಮೆ ಆಗಲ್ವಾ? ಹಾಗಿದ್ರೆ ಹೀಗೆ ಮಾಡಿ!

0

ಸಾಮಾನ್ಯವಾಗಿ ಬಿಕ್ಕಳಿಕೆ ಯಾವಾಗ ಬೇಕಾದರೂ ಬರಬಹುದು. ಸ್ವಲ್ಪ ನೀರು ಕುಡಿದ ತಕ್ಷಣ ಕೆಲವರಿಗೆ ಬಿಕ್ಕಳಿಕೆ ನಿಲ್ಲುತ್ತದೆ. ಆದರೆ ಕೆಲವೊಮ್ಮೆ ಬಿಕ್ಕಳಿಕೆ ತಾನಾಗಿಯೇ ನಿಲ್ಲುವುದಿಲ್ಲ. ಇದು ಕೆಲವು ಸೆಕೆಂಡುಗಳಿಂದ ನಿಮಿಷಗಳವರೆಗೆ ಇರುತ್ತದೆ. ತಿನ್ನುವ ಸಮಯದಲ್ಲಿ ಹೆಚ್ಚಾಗಿ ಬಿಕ್ಕಳಿಕೆ ಬರುತ್ತದೆ. ಇದನ್ನು ತಕ್ಷಣಕ್ಕೆ ನಿಲ್ಲಿಸಲು ಇಲ್ಲಿ ಕೆಲವೊಂದು ಸರಳ ಟಿಪ್ಸ್‌ಗಳಿವೆ.

ಬಿಕ್ಕಳಿಕೆ ಸಮಸ್ಯೆಯು ನೇರವಾಗಿ ಉಸಿರಾಟಕ್ಕೆ ಸಂಬಂಧಿಸಿದೆ. ನಮ್ಮ ಜೀರ್ಣಾಂಗ ಅಥವಾ ಉಸಿರಾಟದ ವ್ಯವಸ್ಥೆಯಲ್ಲಿ ಅಡಚಣೆ ಉಂಟಾದರೆ, ಅತಿಯಾದ ಚಲನೆ ಇದ್ದರೆ, ಕೆಮ್ಮು ಪ್ರಾರಂಭವಾಗುತ್ತದೆ. ಹೊಟ್ಟೆ ಮತ್ತು ಶ್ವಾಸಕೋಶದ ನಡುವಿನ ಡಯಾಫ್ರಾಮ್ ಮತ್ತು ಪಕ್ಕೆಲುಬುಗಳ ಸ್ನಾಯುಗಳ ಸಂಕೋಚನದಿಂದಾಗಿ ಉಬ್ಬಸ ಉಂಟಾಗುತ್ತದೆ.

ಸಾಮಾನ್ಯವಾಗಿ ನೀವು ಉಸಿರಾಡುವಾಗ ಡಯಾಫ್ರಾಮ್ ಅದನ್ನು ಕೆಳಕ್ಕೆ ಎಳೆಯುತ್ತದೆ. ನೀವು ಉಸಿರಾಡುವಾಗ ಅದು ವಿಶ್ರಾಂತಿ ಸ್ಥಾನಕ್ಕೆ ಮರಳುತ್ತದೆ. ಡಯಾಫ್ರಾಮ್ನ ಸಂಕೋಚನದಿಂದಾಗಿ, ಶ್ವಾಸಕೋಶಗಳು ವೇಗವಾಗಿ ಗಾಳಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸುತ್ತವೆ. ಈ ಕಾರಣದಿಂದಾಗಿ ವ್ಯಕ್ತಿಗೆ ಬಿಕ್ಕಳಿಕೆ ಆರಂಭವಾಗುತ್ತದೆ. ಬಿಕ್ಕಳಿಕೆ ಸಮಸ್ಯೆ ಹೊಟ್ಟೆಗೆ ಸಂಬಂಧಿಸಿದೆ.

ನೀವು ಅತಿಯಾಗಿ ತಿಂದರೆ ಹೊಟ್ಟೆ ತುಂಬಾ ಊದಿಕೊಳ್ಳುತ್ತದೆ ಅಥವಾ ಉಬ್ಬುತ್ತದೆ. ನಂತರ ಬಿಕ್ಕಳಿಕೆ ಆರಂಭವಾಗುತ್ತದೆ.

ಎಷ್ಟೋ ಬಾರಿ ನೀವು ಎಷ್ಟೇ ನೀರು ಕುಡಿದರೂ ಕೂಡ ಬಿಕ್ಕಳಿಕೆ ನಿಲ್ಲುವುದಿಲ್ಲ. ಆದರೆ ಕೆಲವು ಮನೆಮದ್ದುಗಳನ್ನು ಉಪಯೋಗಿಸುವ ಮೂಲಕ ಬಿಕ್ಕಳಿಕೆಯನ್ನು ಹೋಗಲಾಡಿಸಬಹುದು. ಅದು ಹೇಗೆ ಎಂದು ತಿಳಿದುಕೊಳ್ಳೋಣ.

ಚಾಕೊಲೇಟ್ ಪೌಡರ್: ಚಾಕೊಲೇಟ್ ಪೌಡರ್ ತಿಂದ ತಕ್ಷಣ ಸ್ಟ್ರಾಂಗ್ ವಾಗಸ್ ನರಕ್ಕೆ ಒಳ್ಳೆಯದಾಗುತ್ತದೆ. ಆದ್ದರಿಂದ ನೀವು ಚಾಕೊಲೇಟ್ ಪುಡಿಯಿಂದ ತ್ವರಿತ ಪರಿಹಾರವನ್ನು ಪಡೆಯಬಹುದು.

ಜೇನು ತುಪ್ಪ: ಜೇನುತುಪ್ಪದ ಸೇವನೆ ಸಹ ಬಿಕ್ಕಳಿಕೆ ನಿಲ್ಲಲು ನೆರವಾಗುತ್ತದೆ. ಅರ್ಧ ಗ್ಲಾಸ್ ನೀರಿಗೆ ಜೇನುತುಪ್ಪವನ್ನು ಸೇರಿಸಿ ಕುಡಿಯಿರಿ. ಜೇನುತುಪ್ಪವು ವಾಗಾಸ್ ನರವನ್ನು ತಂಪುಗೊಳಿಸುತ್ತದೆ. ಇದರಿಂದ ನಿರಂತರ ಬಿಕ್ಕಳಿಕೆಗೆ ಪರಿಹಾರ ಸಿಗುತ್ತದೆ.

ವಿನೆಗರ್: ವಿನೆಗರ್ ಸಹ ಬಿಕ್ಕಳಿಕೆಯನ್ನು ನಿವಾರಿಸಲು ಸಹಾಯಮಾಡುತ್ತದೆ. ಆದರೆ ನೀರು, ಜೇನುತುಪ್ಪ ,ಸಕ್ಕರೆ ರೀತಿ ವಿನೇಗರ್ ಅನ್ನು ನೀವು ನೇರವಾಗಿ ಸೇವಿಸಬಾರದು. ನಿಮ್ಮ ನಾಲಿಗೆ ಮೇಲೆ ಕೆಲವೊಂದು ವಿನೆಗರ್ ಡ್ರಾಪ್ ಗಳನ್ನು ಹಾಕಿ ಅದು ಬಿಕ್ಕಳಿಕೆ ನಿಲ್ಲಿಸಲು ಸಹಾಯ ಮಾಡುತ್ತದೆ.

ಸಕ್ಕರೆ: ಸಕ್ಕರೆಯಲ್ಲಿ ಕ್ಯಾಲೋರಿಗಳು ಹೆಚ್ಚಾಗಿ ಕಂಡುಬರುತ್ತವೆ. ಬಿಕ್ಕಳಿಕೆಯನ್ನು ಪರಿಣಾಮಕಾರಿಯಾಗಿ ಹೋಗಲಾಡಿಸಲು ಇದೊಂದು ಅತ್ಯದ್ಭುತ ಮಾರ್ಗ.1 ಟೀ ಚಮಚ ಸಕ್ಕರೆ ತೆಗೆದುಕೊಂಡು ಅದನ್ನು ಚೆನ್ನಾಗಿ ಜಿಗಿದು ಅರ್ಧ ಲೋಟ ನೀರು ಕುಡಿಯಿರಿ. ಬಿಕ್ಕಳಿಕೆ ತಟ್ಟಂತ ನಿಂತುಹೋಗುತ್ತದೆ.

ಕಡಲೆಕಾಯಿ ಬೆಣ್ಣೆ: ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡಲು ಕಡಲೆಕಾಯಿ ಬೆಣ್ಣೆಯು ಉಪಯುಕ್ತವಾಗಿದೆ. ಕಡಲೆಕಾಯಿ ಬೆಣ್ಣೆಯು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಎಂದು ಅನೇಕ ಅಧ್ಯಯನಗಳು ಬಹಿರಂಗ ಪಡಿಸಿದೆ. ಇದು ವಾಗಸ್ ನರವು ಹೊಸ ಮಾದರಿಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಬಿಕ್ಕಳಿಕೆ ಬಂದಾಗ, ನೇರವಾಗಿ ಒಂದು ಚಮಚದಷ್ಟು ಪೀನಟ್ ಬಟರ್ ಅನ್ನು ಬಾಯಿಗೆ ಹಾಕಿಕೊಂಡು ನಿಧಾನಕ್ಕೆ ನುಂಗುತ್ತಾ ಬಂದರೆ ಈ ಸಮಸ್ಯೆ ದೂರವಾಗುತ್ತದೆ

ನಿಂಬೆಹಣ್ಣು: ಬಿಕ್ಕಳಿಕೆಯನ್ನು ಹೋಗಲಾಡಿಸಲು ಇನ್ನೊಂದು ಸುಲಭ ವಿಧಾನವೆಂದರೆ ನಿಂಬೆ. ತಜ್ಞರ ಪ್ರಕಾರ, ನಿಂಬೆಯಲ್ಲಿರುವ ಹೆಚ್ಚಿನ ಆಮ್ಲ ಅಂಶವು ಅನ್ನನಾಳವನ್ನು ಕೆರಳಿಸುತ್ತದೆ. ಅಲ್ಲದೇ ವಾಗಸ್ ನರವನ್ನು ತಪ್ಪಿಸುತ್ತದೆ. ಸಂಕೋಚನಗಳನ್ನು ಮರುಹೊಂದಿಸಲು ಮತ್ತು ಸ್ನಾಯುಗಳನ್ನು ತೊಡೆದುಹಾಕಲು ಇದು ನಿಮಗೆ ಲಭ್ಯವಿದೆ.

ನನಗೆ ಕುಮಾರಸ್ವಾಮಿಯಂತೆ ಮೀಡಿಯಾ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ!

0

ಮಂಡ್ಯ:- ನನಗೆ ಕುಮಾರಸ್ವಾಮಿಯಂತೆ ಮೀಡಿಯಾ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ. ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದರು.

ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರು? ಎಂದು ಮಂಡ್ಯ ಜಿಲ್ಲೆಯ ಹೊಸಗಾವಿ ಗ್ರಾಮದಲ್ಲಿ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಆಗಿ ಎಚ್​.ಡಿ. ಕುಮಾರಸ್ವಾಮಿ ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಉತ್ತರ ಕೊಡುವುದು ಸೂಕ್ತ ಎಂದರೆ ಕೊಡುತ್ತೇನೆ. ಮಾತಿನಿಂದ ಯಾರೂ ದೊಡ್ಡವರು ಆಗುವುದಿಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು. ಕೇಂದ್ರ ಸಚಿವ ಕುಮಾರಸ್ವಾಮಿಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ.

ಇತಿಹಾಸ ಚರ್ಚೆ ಮಾಡಬೇಕು ಅಂದರೆ ಸದನದಲ್ಲೇ ಚರ್ಚೆ ಮಾಡೋಣ ಎಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಪಂಥಾಹ್ವಾನ ನೀಡಿದ್ದಾರೆ.

20 ವರ್ಷ ಕೊಳಚೆ ಒಳಗೆ ಇದ್ದರು. ಎದುರಿಗೆ ಬಂದರೆ ಅವರ ಇತಿಹಾಸ ಹೇಳ್ತೇನೆ. ನಾನು ಹೇಳಲು ತಯಾರು ಇದ್ದೇನೆ, ನನ್ನ ಸ್ನೇಹಿತರನ್ನೂ ಕರೆದುಕೊಂಡು ಬರುವೆ ಎಂದು ಟಾಂಗ್ ಕೊಟ್ಟರು.

ದರ್ಶನ್ ಫ್ಯಾನ್ಸ್ ಅತಿರೇಕದ ವರ್ತನೆ: ಇವರೆಲ್ಲಾ ಗೂಂಡಾಗಳು ಎಂದು ದೂರು ಕೊಟ್ಟ ಪ್ರಥಮ್!

0

`ಬಿಗ್ ಬಾಸ್’ ಪ್ರಥಮ್ ಅವರು ದರ್ಶನ್ ಫ್ಯಾನ್ಸ್ ಅತಿರೇಕದ ವರ್ತನೆ ಖಂಡಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಾಗಡಿ ರಸ್ತೆಯ ಡಿಸಿಪಿ ಕಚೇರಿಗೆ ಭೇಟಿ ನೀಡಿ ಡಿಸಿಪಿ ಗಿರೀಶ್ ಅವರಿಗೆ ನೇರವಾಗಿ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ್ದಾರೆ.

ದೂರು ಕೊಟ್ಟ ಬಳಿಕ ಮಾತನಾಡಿದ ಪ್ರಥಮ್, ಗೂಂಡಾಗಳ ವಿರುದ್ಧ ದೂರು ದಾಖಲಿಸಿದ್ದೇನೆ. ನಿನ್ನೆ ಹೊಟೇಲ್‌ವೊಂದರಲ್ಲಿ ದರ್ಶನ್ ಅವರ ಕೆಲ ಅಭಿಮಾನಿಗಳ ಅತಿರೇಕ ವರ್ತನೆ ತೋರಿದರು. ಈ ಹಿನ್ನೆಲೆ, ಡಿಸಿಪಿ ಗಿರೀಶ್ ಅವರು ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು. ಇನ್ನು ಕೆಲವೇ ಹೊತ್ತಲ್ಲಿ ತಪ್ಪು ಮಾಡಿದವರು ಒಳಗೆ ಹೋಗುತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬುವುದು ಸುಳ್ಳು ವಿಚಾರ: ಸಚಿವ ಮುನಿಯಪ್ಪ!

0

ಮಂಗಳೂರು:- ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬುವುದು ಸುಳ್ಳು ವಿಚಾರ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಶಾಸಕ ಸುನಿಲ್ ಅವರ ಆರೋಪ ಸತ್ಯಕ್ಕೆ ದೂರವಾದದ್ದು. ಪರಿಷ್ಕರಣೆ ಮಾಡಿದಾಗ ಬಿಪಿಎಲ್​ ಅಲ್ಲದೇ ಇರೋರನ್ನು ಎಪಿಎಲ್​ ಮಾಡಿದ್ದೇವೆ. ಎಪಿಎಲ್​ಗೆ ಹಾಕಿದವರನ್ನು ರದ್ದು ಮಾಡುವುದಿಲ್ಲ ಎಂದರು.

ಅರ್ಹರಿಗೆ ಬಿಪಿಎಲ್​ ಕಾರ್ಡ್​ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್​ನವರಿಗೆ ಸಬ್ಸಿಡಿ ರೇಟ್​ನಲ್ಲಿ ಕೊಡ್ತಿದ್ದೆವು, ಹೆಚ್ಚಿನವರು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ ಸದ್ಯಕ್ಕೆ ಎಪಿಎಲ್​ಗೆ ಸಬ್ಸಿಡಿ ಕೊಡುವುದನ್ನು ನಿಲ್ಲಿಸಿದ್ದೇವೆ. ಪರಿಷ್ಕರಣೆ ಪೂರ್ತಿ ಆದ ಮೇಲೆ ಎಪಿಎಲ್​ನವರು ಬೇಕೆಂದು ಮುಂದೆ ಬಂದ್ದರೆ ಖಂಡಿತಾ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಒಂದೇ ಒಂದು ಎಪಿಎಲ್​ ಕಾರ್ಡ್ ರದ್ದು ಆಗಿಲ್ಲ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದೆ. 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ.

ಇನ್ನೂ ಈ ವಿಚಾರವಾಗಿ ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ. ನನ್ನ ಬಳಿ ಕೇಳಿದರೆ ಹೇಳುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ನೀಡಿದ ಶುಲ್ಕ ಮರುಪಾವತಿ ಮಾಡಲಾಗುವುದು: ನ್ಯಾ.ಮೂ ಬಸವರಾಜ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಡಿಸೆಂಬರ್ ೧೪ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು,  ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರನ್ಸ್ ಹಾಲ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದಾಗಿದೆ. ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ, ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನAತೆ ಒಟ್ಟು ೧೪ ಬೆಂಚ್‌ಗಳನ್ನು ರಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು ೧೯೮೯೬ ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೨೮೨೧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು, ¨ÀsÆಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ  ಎಂದು ತಿಳಿಸಿದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬAದsಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿAದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬAದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬAದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ ೧೪ರಂದು ಜರುಗುವ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ, ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.

Crime News: ಅನುಮಾನಾಸ್ಪದವಾಗಿ ವ್ಯಕ್ತಿ ಸಾವು; ಕಾರಿನಲ್ಲಿ ಸುಟ್ಟು ಕರಕಲಾದ ವ್ಯಕ್ತಿ ದೇಹ!

0

ಬೆಂಗಳೂರು:- ಕಾರಿನಲ್ಲಿದ್ದ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಬ್ಯಾಡರಹಳ್ಳಿ ಠಾಣವ್ಯಾಪ್ತಿಯ ಮುದ್ದಯ್ಯನಪಾಳ್ಯ ಬಳಿ ನಡೆದಿದೆ.

ಕಾರಿನಲ್ಲಿ ಕುಳಿತುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೊ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ 3:30 ಕ್ಕೆ ನಡೆದಿರೋ ಘಟನೆ ನಡೆದಿದ್ದು, ಖಾಲಿ ಲೇಔಟ್ ನಲ್ಲಿ ಕಾರಿಗೆ ಬೆಂಕಿಹೊತ್ತಿಕೊಂಡಿದ್ದನ್ನ ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಹೋಗಿ ನೋಡಿದಾಗ ಕಾರಿನೋಳಗೆ ವ್ಯಕ್ತಿ ಇರೋದು ಪತ್ತೆಯಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ ಬಳಿಕ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸುತ್ತಿದ್ದು, ಸಾವನ್ನಪ್ಪಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

error: Content is protected !!