Home Blog Page 2111

ಸಮೃದ್ಧ ಸಮಾಜ ಕಟ್ಟುವಲ್ಲಿ ಪ್ರಜಾಪ್ರತಿನಿಧಿಗಳಿಗೆ ಚಾರಿತ್ರಿಕ ನಡೆ ಅತ್ಯಂತ ಮಹತ್ವದ್ದು: ಸಭಾಪತಿ ಬಸವರಾಜ ಹೊರಟ್ಟಿ

0

ವಿಜಯಸಾಕ್ಷಿ ಸುದ್ದಿ, ಮೈಸೂರು: ಜಗತ್ತಿಗೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪರಿಚಯಿಸಿದ್ದು ನಮ್ಮ ಹೆಮ್ಮೆಯ ಭಾರತ ಎಂದು ಹೇಳಲು ಅತ್ಯಂತ ಸಂತಸ ಎನಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ವದ್ದು. ದೇಶದ ಕಟ್ಟ ಕಡೆಯ ಪ್ರಜೆಗಳಿಗೆ ಪ್ರತಿಯೊಂದು ಸೌಲಭ್ಯಗಳನ್ನು ನಾಗರಿಕ ಹಕ್ಕುಗಳನ್ನು ತಲುಪಿಸುವ ದೊಡ್ಡ ಹೊಣೆಗಾರಿಕೆ ಪ್ರಜಾಪ್ರತಿನಿಧಿಗಳಿಗೆ ಇರುತ್ತದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದಡಿ ಪ್ರಜಾಪ್ರತಿನಿಧಿಗಳು ಕೆಲಸ ಮಾಡಿದರೆ ದೇಶ ಅತ್ಯಂತ ಸಂಪದ್ಭರಿತವಾಗುವುದರಲ್ಲಿ ಸಂಶಯ ಇಲ್ಲ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

ಮೈಸೂರಿನ ಜೆ.ಎಸ್.ಎಸ್ ಮಹಾ ವಿದ್ಯಾಪೀಠದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾ ವಿದ್ಯಾಲಯ, ರಾಜ್ಯ ಪತ್ರಗಾರ ಇಲಾಖೆ ಹಾಗೂ ಮೈಸೂರು ವಿಭಾಗೀಯ ಪತ್ರಗಾರ ಇಲಾಖೆ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಜಾಪ್ರತಿನಿಧಿ ಸಭೆ ಹಾಗೂ ಚಾರಿತ್ರಿಕ ಅವಲೋಕನ ಕುರಿತ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ದೊಡ್ಡ ಹೊಣೆಗಾರಿಕೆ ಸಿಕ್ಕಾಗ ಪ್ರಜಾಪ್ರತಿನಿಧಿಗಳು ತಮ್ಮ ಚಾರಿತ್ರಿಕ ನಡೆಯನ್ನು ಕೂಡ ಕಾಪಾಡಿಕೊಂಡು ಕೆಲಸ ಮಾಡಬೇಕು. ನಮ್ಮ ನಡೆ-ನುಡಿ, ಆಚಾರ-ವಿಚಾರಗಳನ್ನು ಸಮಾಜ ನೋಡುತ್ತಿರುತ್ತದೆ. ಸುಂದರ, ಶಾಂತಿಯುತ, ಸಮೃದ್ಧ ಸಮಾಜ ಕಟ್ಟುವಲ್ಲಿ ಪ್ರಜಾಪ್ರತಿನಿಧಿಗಳಿಗೆ ಚಾರಿತ್ರಿಕ ನಡೆ ಅತ್ಯಂತ ಮಹತ್ವದ್ದು. ಆ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕ ಬದುಕಿನಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುವ ಪರಿಪಾಠವನ್ನ ಬೆಳೆಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಾಗೂ ವಿಭಾಗೀಯ ಪತ್ರಗಾರ ಇಲಾಖೆ ಹಿರಿಯ ಅಧಿಕಾರಿಗಳು, ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಮರಿಯಮ್ಮ ದೇವಿಯ ಅಗ್ನಿ ಮಹೋತ್ಸವ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ ನಗರದಲ್ಲಿನ ಶ್ರೀ ಮರಿಯಮ್ಮದೇವಿ ಹಾಗೂ ಶ್ರೀ ಸ್ವಾರೆಮ್ಮದೇವಿಯ 70ನೇ ವರ್ಷದ ಅಗ್ನಿ ಮಹೋತ್ಸವವು ಗೌರಿ ಹುಣ್ಣಿಮೆಯ ದಿನವಾದ ನ.15ರಂದು ಸಡಗರ ಸಂಭ್ರಮದಿಂದ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಜರುಗಿತು.

ಅಗ್ನಿ ಮಹೋತ್ಸವದ ನಿಮಿತ್ತ ಬೆಳಿಗ್ಗೆ ಹೊರದುರಗಮ್ಮನ ದೇವಸ್ಥಾನದಿಂದ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತ ಪಲ್ಲಕ್ಕಿಯ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನ ಎದುರುಗಡೆ ನಿರ್ಮಿಸಿದ ಅಗ್ನಿಕುಂಡದಲ್ಲಿ ಭಕ್ತರು ಅಗ್ನಿ ಹಾಯುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು.

ಪಲ್ಲಕ್ಕಿ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ದೇವಿಗೆ ಜಯಘೋಷವನ್ನು ಮಾಡಿ, ತಮ್ಮ ಮನೆಯ ಮುಂದೆ ನೀರು ಹಾಕಿ ದೇವಿಗೆ ತಮ್ಮ ಕಾಣಿಕೆಯನ್ನು ಸಮರ್ಪಿಸಿದರು. ಡೊಳ್ಳಿನ ಮಜಲು ಸೇರಿದಂತೆ ಸಕಲ ವಾದ್ಯಗೋಷ್ಠಿಗಳೊಂದಿಗೆ ಭವ್ಯ ಮೆರವಣಿಗೆಯು ನಡೆಯಿತು. ಕಾರ್ಯಕ್ರಮದ ನಂತರ ಅನ್ನದಾಸೋಹ ನೆರವೇರಿತು.

ಒಕ್ಕಲು ಮಾಡಿ ಒಣ ಹಾಕಿದ ಫಸಲಿಗೆ ಮಳೆರಾಯನ ಭೀತಿ: ಬೆಳೆ ಸಂರಕ್ಷಣೆಗೆ ಪರದಾಡುತ್ತಿರುವ ರೈತರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಳೆದ ೨ ದಿನಗಳಿಂದ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದ ಮಳೆಯಿಂದ ಬೆಳೆ ಸಂರಕ್ಷಣೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿ ರೈತ ಸಮುದಾಯ ಮತ್ತೆ ಆತಂಕಕ್ಕೀಡಾಗಿದೆ.

ಹಿಂಗಾರಿನ ಅತಿವೃಷ್ಟಿಯಿಂದ ಚೇತರಿಸಿಕೊಳ್ಳುತ್ತಾ ಕಳೆದ ಎರಡು ವಾರಗಳಿಂದ ಬಿತ್ತನೆ ಕಾರ್ಯ ಪೂರ್ಣಗೊಳಿಸಿ ಗೋವಿನ ಜೋಳ, ಶೇಂಗಾ ಒಕ್ಕಲಿ, ಹತ್ತಿ, ಮೆಣಸಿನಕಾಯಿ ಬಿಡಿಸುವುದು ಸೇರಿ ಕಾರ್ಯಗಳಿಗೆ ಮರಳಿದ್ದಾರೆ. ಆದರೆ ಅಕಾಲಿಕ ಮಳೆಯಿಂದ ಒಕ್ಕಲಿ ಕಾರ್ಯದಲ್ಲಿ ತಲ್ಲೀನರಾಗಿರುವ ರೈತರು ಬೆಳೆ ರಕ್ಷಣೆಗೆ ಪರದಾಡುವಂತಾಗಿದೆ.

ಮುಖ್ಯವಾಗಿ ಹಿಂಗಾರಿನಲ್ಲಿ ಅತಿಯಾದ ಮಳೆಯಿಂದ ಒಕ್ಕಲಿ ಕಾರ್ಯಕ್ಕೆ ತಡವಾಗಿದೆ ಮತ್ತು ಒಕ್ಕಲಿಗೆ ಯಂತ್ರೋಪಕರಣ ಬಳಕೆಗೆ ಅಡ್ಡಿಯಾಗಿದೆ. ಏಕಕಾಲಕ್ಕೆ ಒಕ್ಕಲಿ ಕಾರ್ಯ ಪ್ರಾರಂಭಗೊAಡು ಕೃಷಿ ಕೂಲಿ ಕಾರ್ಮಿಕರ ಕೊರತೆ ರೈತರನ್ನು ಕಾಡುತ್ತಿದೆ. ಈ ನಡುವೆ ಹರಸಾಹಸ ಪಟ್ಟು ಒಕ್ಕಲಿ ಮಾಡಿ ಒಣ ಹಾಕಿದ ಫಸಲಿಗೆ ಮಳೆರಾಯನ ಭೀತಿ ಕಾಡುತ್ತಿದೆ.

ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವ ಹತ್ತಿ, ಶೇಂಗಾ, ಮೆಣಸಿನಕಾಯಿ ಬೆಳೆಗಳು ಜತೆಗೆ  ಜಾನುವಾರುಗಳ ಪ್ರಮುಖ ಆಹಾರ ಶೇಂಗಾ ಹೊಟ್ಟು ಹಾಳಾಗುತ್ತಿರುವುದು ರೈತರಿಗೆ ಬರಸಿಡಿಲು ಬಡಿದಂತಾಗಿದೆ. ಈ ವರ್ಷ ತಾಲೂಕಿನಲ್ಲಿ ಬಹುತೇಕ ರೈತರು ಗೋವಿನ ಜೋಳ ಬೆಳೆದಿದ್ದು, ಹೆಚ್ಚಿನ ರೈತರು ಒಕ್ಕಲಿ ಮಾಡಿ ಒಣ ಹಾಕಿದ್ದಾರೆ. ಗೋವಿನ ಜೋಳದ ಖರೀದಿಗೆ ವ್ಯಾಪಾರಸ್ಥರು ಮುಂದೆ ಬಾರದ್ದರಿಂದ ರೈತರು ಹಲವು ದಿನಗಳಿಂದ ಫಸಲು ಕಾಯುವ, ರಕ್ಷಿಸುವ ಕಾರ್ಯದಿಂದ ತತ್ತರಿಸಿದ್ದಾರೆ. ಕೂಲಿ ಆಳುಗಳಿಗೆ ಭಾರೀ ಡಿಮ್ಯಾಂಡ್ ಬಂದಿದ್ದು, ಕೂಲಿಯೂ ದುಪ್ಪಟ್ಟಾಗಿದೆ.

ಹಿಂಗಾರಿನ ಬಿತ್ತನೆ ಈಗಾಗಲೇ ತಡವಾಗಿದ್ದು, ಈಗ 10-15 ದಿನದ ಅವಧಿಯ ಹವಾಮಾನ ಆಧಾರಿತ ಕಡಲೆ, ಜೋಳ, ಗೋದಿ, ಕುಸಬಿ ಬೆಳೆಗಳು ಅಕಾಲಿಕ ಮಳೆಯಿಂದ ರೋಗ ಬಾಧೆಗೆ ತುತ್ತಾಗಲಿವೆ ಎಂಬ ಆತಂಕ ಕಾಡುತ್ತಿದೆ.

ಮುಂಗಾರಿನಲ್ಲಿ ಅಸಮರ್ಪಕ ಮಳೆ, ಹಿಂಗಾರಿನಲ್ಲಿ ಅತಿಯಾದ ಮಳೆಯಿಂದ ಅಳಿದುಳಿದ ಹತ್ತಿ, ಗೋವಿನಜೋಳ, ಶೇಂಗಾ, ಮೆಣಸಿನಕಾಯಿ ಒಕ್ಕಲಿಯ ಸುಗ್ಗಿ ಕಾಲದಲ್ಲಿ ಅಕಾಲಿಕ ಮಳೆಯಿಂದ ಬೆಳೆ ಸಂರಕ್ಷಣೆ ಪರದಾಟದ ಜತೆಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಹಿಂಗಾರಿನ ಬೆಳೆಗಳಿಗೂ ಹಿನ್ನಡೆಯಾಗಲಿದೆ. ಸ್ವಾತಿ ಮಳೆಯಾದ ಮೇಲೆ ಇನ್ಯಾತರ ಮಳೆ ಎಂಬ ಹಿರಿಯರ ಮಾತು ಸುಳ್ಳಾಗಿ ರೈತರು ಕೃಷಿಯಿಂದ ಖುಷಿ ಪಡದಂತಾಗಿದೆ. ಸರ್ಕಾರ ರೈತರ ಬೆಳೆಗಳಿಗೆ ಯೋಗ್ಯ ಬೆಲೆ, ಮಾರುಕಟ್ಟೆ ಕಲ್ಪಿಸಬೇಕು. ಬೆಳೆವಿಮೆ, ಬೆಳೆಹಾನಿ ಪರಿಹಾರ ಕಲ್ಪಿಸಬೇಕು ಎಂದು ರೈತ ಬಾಪೂಗೌಡ ಭರಮಗೌಡ್ರ ಆಗ್ರಹಿಸಿದರು.

ಅತಿಯಾದ ಮಳೆಯಿಂದ ರೈತರ ಬೆಳೆಗಳು ಹಾಳಾಗಿರುವುದು ಮತ್ತು ಇಳುವರಿ ಸಂಪೂರ್ಣ ಕುಂಠಿತವಾಗಿರುವ ಬಗ್ಗೆ ಜಂಟಿ ಸಮೀಕ್ಷೆ ಮಾಡಿ ವರದಿ ಸಲ್ಲಿಸಲಾಗುತ್ತಿದೆ. ಹಿಂಗಾರಿನ ಬೆಳೆವಿಮೆ ದೃಢೀಕರಣ ಮತ್ತು ಬೆಳೆವಿಮೆ ಪಾವತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ರೈತರು ಬೆಳೆ ದೃಢೀಕರಣದೊಂದಿಗೆ ಬೆಳೆವಿಮೆ ಪಾವತಿಸಬೇಕು ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ತಿಳಿಸಿದರು.

IPL 2025: ಹರಾಜಿನಲ್ಲಿ ಹರ್ಷದೀಪ್: ಯಂಗ್ ಬೌಲರ್ ಖರೀದಿಸಲು RCB ಪ್ಲ್ಯಾನ್, ಪೈಪೋಟಿಯಲ್ಲಿ LSG!

0

ಪಂಜಾಬ್ ಕಿಂಗ್ಸ್ ನಿಂದ ಹೊರ ಬಂದಿರುವ ಟೀಂ ಇಂಡಿಯಾದ ಸ್ಟಾರ್​ ವೇಗಿ ಅರ್ಷದೀಪ್ ಅವರನ್ನು ಖರೀದಿಸಲು ಆರ್​​ಸಿಬಿ ಪ್ಲಾನ್ ಮಾಡಿಕೊಂಡಿದ್ಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ಆದರೆ ಆರ್​ಸಿಬಿ ಯುವ ವೇಗಿಯನ್ನು ಖರೀದಿಸಲಿದೆ. ಆದರೆ ಅರ್ಷದೀಪ್​​ರನ್ನು ಖರೀದಿಸಲು ಎಲ್​​ಎಸ್​ಜಿ ಕೂಡ ಹೊಂಚು ಹಾಕಿದೆ ಎನ್ನಲಾಗಿದೆ.

ಒಂದು ವೇಳೆ ಹಾಗೇನಾದರು ಆದರೆ ಅರ್ಷದೀಪ್ ಸಿಂಗ್ ದಾಖಲೆಯ ಮೊತ್ತಕ್ಕೆ ಬಿಡ್ ಆಗಲಿದ್ದಾರೆ. ಅರ್ಷದೀಪ್ ಅವರು, 2024ರ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡುತ್ತಿದ್ದರು. ಪಂಜಾಬ್ ಇಬ್ಬರನ್ನು ಮಾತ್ರ ಉಳಿಸಿಕೊಂಡಿದೆ. ಶಶಾಂಕ್ ಸಿಂಗ್, ಪ್ರಭ್ ಸಿಮ್ರಾನ್ ಸಿಂಗ್​​ರನ್ನು ರಿಟೈನ್ಡ್ ಮಾಡಿಕೊಂಡಿದೆ. ಅರ್ಷದೀಪ್ ಸಿಂಗ್​, ಹರ್ಷಲ್ ಪಟೇಲ್​​ರನ್ನೂ ಕೈಬಿಟ್ಟಿದೆ.

Bangalore Crime: ಮೊಬೈಲ್ ಕೊಡಿಸು ಎಂದು ಹಠ ಮಾಡುತ್ತಿದ್ದ ಮಗನನ್ನೆ ಕೊಂದ ಅಪ್ಪ.!

0

ಬೆಂಗಳೂರು: ತಂದೆಯಿಂದಲೇ ಮಗನ ಕೊಲೆಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ತೇಜಸ್ (14)ಮೃತ ಮಗನಾಗಿದ್ದು, 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌, ವೀಡಿಯೋ ಗೇಮ್‌ ಆಡುತ್ತಿದ್ದ.

ಅಲ್ಲದೇ ಹೊಸ ಮೊಬೈಲ್‌ ಕೊಡಿಸುವಂತೆ ತಂದೆಯೊಂದಿಗೆ ಜಗಳವಾಡಿದ್ದ. ಕುಡಿದು ಮನೆಗೆ ಬಂದಿದ್ದ ತಂದೆ ರವಿಕುಮಾರ್ ಮಗ ಮೊಬೈಲ್ ನೋಡುತ್ತಿರುವುದನ್ನು ಕಂಡು ಕೋಪಗೊಂಡು ಕ್ರಿಕೆಟ್ ಬ್ಯಾಟ್‌ನಿಂದ ಆತನ ತಲೆಗೆ ಹಲ್ಲೆ ನಡೆಸಿದ್ದಾನೆ.

ಪರಿಣಾಮ ಗಂಭೀರ ಗಾಯಗೊಂಡ ತೇಜಸ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಂದೆ ರವಿಕುಮಾರ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಯೋಗೇಶ್ವರ್ 18 ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ ಬರೆದಿಟ್ಟುಕೊಳ್ಳಿ: ಸಚಿವ ಜಮೀರ್ ಅಹ್ಮದ್

0

ಮಂಗಳೂರು: ಯೋಗೇಶ್ವರ್ 18 ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ ಬರೆದಿಟ್ಟುಕೊಳ್ಳಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಜಮೀರ್ ಬಂದಿದ್ದು ಪ್ಲಸ್ ಆಗಿದೆ ಸ್ವಲ್ಪ. ಹೇಳಿಕೆಯಿಂದ ಅನಾನುಕೂಲ ಆಗಿದೆ ಅಂತ ಯೋಗಿಶ್ವರ್ ಹೇಳಿದ್ದಾರೆ.

ಬರೆದಿಟ್ಟುಕೊಳ್ಳಿ, ಚನ್ನಪಟ್ಟಣದಲ್ಲಿ ಏನೇನು ಆಗುವುದಿಲ್ಲ. ಚನ್ನಪಟ್ಟಣದಲ್ಲಿ ಮೂರು ದಿನ ಪ್ರಚಾರ ಮಾಡಿದ್ದೇನೆ. ಯೋಗೇಶ್ವರ್ 18 ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ ಬರೆದಿಟ್ಟುಕೊಳ್ಳಿ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಲೋಕಾಯುಕ್ತ ನೋಟಿಸ್ ಬಗ್ಗೆ ಮಾತನಾಡಿ, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ರೊಟೀನ್. ಇ.ಡಿಯವರು ಎಸಿಬಿಗೆ ಫಾರ್ವಡ್ ಮಾಡಿದ್ದಾರೆ. ಅಲ್ಲಿಂದ ಲೋಕಯುಕ್ತಗೆ ಕೇಸ್ ಬಂದಿದೆ. ನೋಟಿಸ್ ಬಂದ ಮೇಲೆ ಹೋಗಲೇಬೇಕು ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ: ಸ್ನೇಹಮಯಿ ಕೃಷ್ಣ

0

ಮೈಸೂರು: ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಸ್ನೇಹಮಯಿ ಕೃಷ್ಣ  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಕಾನೂನುಬದ್ಧವಾದ ಹೋರಾಟ ಮಾಡುತ್ತಿದ್ದೇನೆ. ಸಮಾಜಕ್ಕೆ ನ್ಯಾಯ ಕೊಡಿಸಲು ನಾನು ಹೋರಾಡುತ್ತಿದ್ದೇನೆ.

ನನ್ನ ಗಡಿಪಾರು ಮಾಡಲು ಅವಕಾಶವಿಲ್ಲ. ಸಿದ್ದರಾಮಯ್ಯರನ್ನ ಗಡಿಪಾರು ಮಾಡಲು ಸಾಕಷ್ಟು ಅವಕಾಶಗಳಿವೆ. ಸುಳ್ಳು ಭಾಷಣ ಮಾಡಿ ರಾಜ್ಯದ ಜನರನ್ನ ಪ್ರಚೋದಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ. ಹೋರಾಟ ಮಾಡಬೇಕು ಎಂದು ಅವರು ಕರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ‘ಸ್ನಹಮಯಿ ಕೃಷ್ಣ ರೌಡಿಶೀಟರ್, ಆತನ ವಿರುದ್ಧ 44 ಕೇಸ್​​ಗಳಿವೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾನೆ’ ಎಂದು ಲಕ್ಷ್ಮಣ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಸ್ನೇಹಮಯಿ ಕೃಷ್ಣನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದರು.

ಕಾರ್ಯದಕ್ಷತಾ ಇಲಾಖೆಯಲ್ಲಿ ಕೆಲಸದ ಅಫರ್ ನೀಡಿದ ಮಸ್ಕ್: ವಾರಕ್ಕೆ 80 ಗಂಟೆ ಕೆಲಸ ಮಾಡುವವರಿಗೆ ಮಾತ್ರ ಅವಕಾಶ

0

ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಗೆ ಅಭ್ಯರ್ಥಿಗಳ ಅಗತ್ಯ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದೆ. ಹಾಗಿದ್ರೆ ನೀವು ಈಗಲೇ ಅರ್ಜಿ ಸಲ್ಲಿಸಬಹುದು. ಆದ್ರೆ ಕೆಲವೊಂದು ಶರತ್ತುಗಳನ್ನು ವಿಧಿಸಲಾಗಿದ್ದು ಅವುಗಳಿಗೆ ಓಕೆ ಅನಿಸಿದ್ರೆ ನೀವು DOGE ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಅಪಾರ ಬುದ್ಧಿಮತ್ತೆಯ, ಸರ್ಕಾರಿ ಯಂತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹಾಗೂ ವಾರಕ್ಕೆ 80 ಗಂಟೆಗಳ ಕಾಲ ದುಡಿಯಲು ಮನಸ್ಸಿರುವವರಿಗೆ ಅವಕಾಶ ನೀಡಲಾಗುವುದು ಎಂದು ಇಲಾಖೆಯ ಮುಖ್ಯಸ್ಥರೂ ಆಗಿರುವ ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಹಾಗೂ ವಿವೇಕ್ ರಾಮಸ್ವಾಮಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ನೇಮಕಾತಿಗೆ ಜಾಹೀರಾತು ಪ್ರಕಟಿಸುತ್ತಿದ್ದಂತೆ DOGEನ ಸಾಮಾಜಿಕ ಮಾಧ್ಯಮ ಅನುಸರಿಸುವವರ ಸಂಖ್ಯೆ 14 ಲಕ್ಷಕ್ಕೆ ಏರಿಕೆಯಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಸ್ಕ್, ‘DOGEಗೆ ನೆರವಾಗಲು ನಮ್ಮ ಮೇಲೆ ನಂಬಿಕೆ ಇಟ್ಟ ಸಾವಿರಾರು ಅಮೆರಿಕನ್ನರು ಆಸಕ್ತಿ ತೋರಿಸಿದ್ದಾರೆ. ಹೊಸ ಆಲೋಚನೆಯುಳ್ಳ ತಾತ್ಕಾಲಿಕ ಆಸಕ್ತರು ನಮಗೆ ಬೇಡ. ವಾರಕ್ಕೆ 80 ಗಂಟೆಗೂ ಹೆಚ್ಚು ಕಾಲ ಕೆಲಸ ಮಾಡಬಲ್ಲ ಮತ್ತು ಸರ್ಕಾರಿ ಯಂತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹಾಗೂ ವೆಚ್ಚಕ್ಕೆ ಕಡಿವಾಣ ಹಾಕಬಲ್ಲವರನ್ನು ಮಾತ್ರ ನೇಮಿಸಿಕೊಳ್ಳಲಾಗುವುದು. ಆಸಕ್ತರು ಎಕ್ಸ್‌ನ ತಮ್ಮ ಖಾತೆಗಳ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು’ ಎಂದಿದ್ದಾರೆ.

ಈ ಉದ್ಯೋಗಕ್ಕೆ ನಿರ್ದಿಷ್ಟ ವಿದ್ಯಾರ್ಹತೆ ಹಾಗೂ ಅನುಭವವನ್ನು ಕೇಳಿಲ್ಲ. ಬದಲಿಗೆ ದೀರ್ಘ ಕಾಲ ದುಡಿಯಲು ಮನಸ್ಸಿರುವವರೆಗೆ ಮಾತ್ರ ಅವಕಾಶ ಎಂದೆನ್ನಲಾಗಿದೆ. ಅರ್ಜಿ ಸಲ್ಲಿಸುವವರು ಮಾಸಿಕ 8 ಅಮೆರಿಕನ್ ಡಾಲರ್‌ ನೀಡಿ ಚಂದಾದಾರರಾಗಿರುವ ಎಕ್ಸ್‌ನ ಅಧಿಕೃತ ಖಾತೆಗಳನ್ನು ಹೊಂದಿರಬೇಕು ಎಂದು ಹೇಳಲಾಗಿದೆ.

‘ಇದು ಅತ್ಯಂತ ಕಷ್ಟಕರ ಕೆಲಸ ಬೇಡುವ ಹುದ್ದೆಯಾಗಿದೆ. ಸಾಕಷ್ಟು ಶತ್ರುತ್ವ ಕಟ್ಟಿಕೊಳ್ಳಬೇಕಾಗುತ್ತದೆ. ಆದರೆ ಅದಕ್ಕೆ ಯಾವುದೇ ಪರಿಹಾರ ಸಿಗದು’ ಎಂದು ಮಸ್ಕ್ ವಿವರಿಸಿದ್ದಾರೆ.

ಮತ್ತೊಂದೆಡೆ ವಿವೇಕ್ ರಾಮಸ್ವಾಮಿ ಅವರು ಟ್ವೀಟ್ ಮಾಡಿ, ‘ಇದು ಸರ್ಕಾರಿ ಹುದ್ದೆಗಳಿಗೆ ವ್ಯತಿರಿಕ್ತವಾದದ್ದು. ಎ) ಕಡಿಮೆ ಅಥವಾ ಯಾವುದೇ ಕೆಲಸವಿಲ್ಲ, ಬಿ) ಜನರು ಏನನ್ನು ಕೇಳಬಯಸುತ್ತಾರೋ ಅದಷ್ಟನ್ನೇ ಹೇಳಿ, ಸಿ) ಅವರು ಗಳಿಸುವ ಹಣಕ್ಕಿಂತ ಹೆಚ್ಚಿನ ಹಣವನ್ನು ಗಳಿಸಿ’ ಎಂದು ಬರೆದುಕೊಂಡಿದ್ದಾರೆ.

ಮುಂದಿನ 2 ತಿಂಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ: ಸಚಿವ ರಾಮಲಿಂಗಾರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಾರಿಗೆ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಕಳೆದ 7-8 ವರ್ಷಗಳಿಂದ ನಡೆದಿದಿಲ್ಲ. 9 ಸಾವಿರ ಜನರ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರನ್ನು ಅನುಕಂಪದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಶುಕ್ರವಾರಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ. 1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ವಹಿಸಲಾಗುವುದು. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್‌ಗಳನ್ನು ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಉಳಿದ ಬಸ್‌ಗಳು ಬರಲಿವೆ. ಶಕ್ತಿ ಯೋಜನೆಯು ಭಾರತ ದೇಶದಲ್ಲಿ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ ಎಂದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಭರಮಗೌಡ (ರಾಜು) ಅಲಗೌಡ ಕಾಗೆ ಮಾತನಾಡಿ, ಪ್ರತಿದಿನ 5 ಸಾವಿರ ಸಾರಿಗೆ ಬಸ್‌ಗಳಲ್ಲಿ 25 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದು, ಪ್ರತಿದಿನ ಬಸ್‌ಗಳು 16 ಲಕ್ಷ ಕಿ.ಮೀ. ಸಂಚಾರ ಮಾಡುತ್ತಿವೆ. ಬಡವರಿಗೆ ಸಾರಿಗೆ ಬಸ್‌ಗಳು ಅನುಕೂಲಕರವಾಗಿವೆ. ನೌಕರರು ಕ್ರೀಡೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದು, ಅವರಿಗೂ ಸಹ ಪ್ರೋತ್ಸಾಹ ನೀಡಬೇಕು. ಅವರು ಸಹ ಅಂತಾರಾಷ್ಟಿçÃಯ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಂ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೀಪಾವಳಿ ಸಂದರ್ಭದಲ್ಲಿ ರೂ.8.69 ಕೋಟಿ ಆದಾಯವನ್ನು ಗಳಿಸಲಾಗಿದ್ದು, ಸಂಸ್ಥೆಗೆ ಉನ್ನತ ಸೇವೆ ಮಾಡುವ ನಿಟ್ಟಿನಲ್ಲಿ ನೌಕರರು ಮುಂದಾಗಬೇಕು ಎಂದು ತಿಳಿಸಿದರು.

ನಾನು ಆನ್ ರೆಕಾರ್ಡ್ ಹೇಳ್ತೇನೆ ಸಚಿವ ಜಮೀರ್ ಹೇಳಿಕೆ ಸರಿಯಲ್ಲ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ನಾನು ಆನ್ ರೆಕಾರ್ಡ್ ಹೇಳ್ತೇನೆ  ಸಚಿವ ಜಮೀರ್ ಹೇಳಿಕೆ ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದು ತಪ್ಪು ಅಂತ ಹೇಳಿದ್ದಾರೆ. ಹೌದು ನಾನು ಆ ಹೇಳಿಕೆಯನ್ನು ಒಪ್ಪುವುದಿಲ್ಲ.

ಅದನ್ನು ನಾನು ಖಂಡಿಸ್ತೇನೆ. ಜಮೀರ್ ಅವರು ಏನು ಬೇಕಾದ್ರೂ ಕರೆದುಕೊಳ್ಳಲಿ. ಕರಿಯ ಅಂತಾದ್ರೂ ಅನ್ನಲಿ, ಕೊಚ್ಚೆ ಅಂತಾದ್ರೂ ಕರೆಯಲಿ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತೇನೆ. ನಾನು ಆನ್ ರೆಕಾರ್ಡ್ ಹೇಳ್ತೇನೆ ಆ ಹೇಳಿಕೆ ಸರಿಯಲ್ಲ. ಜಮೀರ್ ವಿರುದ್ಧ ಕ್ರಮದ ಬಗ್ಗೆ ಆಮೇಲೆ ನೋಡೋಣ ಎಂದರು.

ಇನ್ನೂ ವಕ್ಫ್ ನೋಟಿಸ್​ ಸಂಬಂಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಬಿಜೆಪಿಯವರ ಮೂರ್ಖತನ. ಅವರ ಕಾಲದಲ್ಲೇ ಪಹಣಿಗಳು ಬರುತ್ತಿವೆ. ಅದನ್ನ ನಮ್ಮವರು ನೋಡಿಲ್ಲ. ಈಗ ಅದರ ಬಗ್ಗೆ ಮಾತನಾಡ್ತಿದ್ದಾರೆ. ನಾವು ಮಾತಾಡಿದ್ರೆ ಮಾಧ್ಯಮದವರು ಕವರ್ ಮಾಡಲ್ಲ ಎಂದು ತಿಳಿಸಿದರು.

error: Content is protected !!