ಗೋಲ್ಡ್ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಮತ್ತೆ ಹೆಚ್ಚಳವಾಗಿದೆ.
ನಿನ್ನೆ ಗ್ರಾಮ್ಗೆ 145 ರೂ ಏರಿದ್ದ ಚಿನ್ನದ ಬೆಲೆ ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಹೆಚ್ಚಳ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದ್ದ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,27,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,100 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 6ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,882 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,725 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,412 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 253 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,882 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,725 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 253 ರೂ.

