Home Blog Page 219

ಬ್ಯಾನರ್ ಗಲಾಟೆ ಹಿಂದೆ ದೊಣ್ಣೆ ರಾಜಕಾರಣ? ಜನಾರ್ದನ ರೆಡ್ಡಿ ಮನೆ ಆವರಣದಲ್ಲಿ ದೊಣ್ಣೆಗಳ ರಾಶಿ ಪತ್ತೆ

0

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ರಾಜಕೀಯ ಹಿಂಸಾಚಾರದ ಮತ್ತೊಂದು ಮುಖ ಬಹಿರಂಗವಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.

ಗಲಾಟೆಯ ವೇಳೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಇದೀಗ ರೆಡ್ಡಿ ಮನೆ ಆವರಣದಲ್ಲೇ ದೊಣ್ಣೆಗಳ ರಾಶಿ ಪತ್ತೆಯಾಗಿರುವುದು, ಹಲ್ಲೆಗೆ ಪೂರ್ವಸಿದ್ಧತೆ ನಡೆದಿತ್ತೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಘಟನೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ಮಾತ್ರವಲ್ಲದೆ, ಜನಾರ್ದನ ರೆಡ್ಡಿ ಪರ ಬೆಂಬಲಿಗರಿಂದಲೂ ಹಲ್ಲೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಾಂಗ್ರೆಸ್ ಕಾರ್ಯಕರ್ತರು ಕಲ್ಲೆಸೆದರೆ, ಬಿಜೆಪಿ ಬೆಂಬಲಿಗರು ದೊಣ್ಣೆ ಹಿಡಿದು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪಗಳು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ.

ಪತ್ತೆಯಾದ ದೊಣ್ಣೆಗಳ ಮೂಲ, ಬಳಕೆಯ ಉದ್ದೇಶ ಹಾಗೂ ಯಾರ ನಿರ್ದೇಶನದ ಮೇರೆಗೆ ಅವುಗಳನ್ನು ಸಂಗ್ರಹಿಸಲಾಗಿತ್ತು ಎಂಬುದರ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಮತ್ತಷ್ಟು ಸದ್ದು ಮಾಡುವ ಸಾಧ್ಯತೆ ಇದೆ.

ಪ್ರೀತಿ ವಿಚಾರದಲ್ಲಿ ಯುವಕನ ಕಿರಿಕ್: ಮನನೊಂದು ಬಾಲಕಿ ನೇಣಿಗೆ ಶರಣು

0

ಬೆಂಗಳೂರು ಉತ್ತರ: ಪ್ರೀತಿ ವಿಚಾರದಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಅಂಚೇಪಾಳ್ಯ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತೇಜಸ್ವಿನಿ (17) ಎಂದು ಗುರುತಿಸಲಾಗಿದ್ದು, ಪ್ರೀತಿಸುವ ವಿಷಯದಲ್ಲಿ ನಡೆದ ಕಿರುಕುಳದಿಂದ ತೀವ್ರ ಮನಸ್ತಾಪಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿ ಅನುಭವಿಸುತ್ತಿದ್ದ ಮಾನಸಿಕ ಒತ್ತಡವೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಗಾರಕ್ಕೆ ಕಳುಹಿಸಲಾಗಿದೆ.

ಬಾಲಕಿಯ ಪೋಷಕರು, ಯುವಕನೊಬ್ಬ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಕಾರಣವೇ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿತನ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!

0

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದು ನಿಯಮಿತ ತಪಾಸಣೆಯ ಭಾಗವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿಗೆ ದೀರ್ಘಕಾಲದಿಂದ ಕೆಮ್ಮಿನ ಸಮಸ್ಯೆ ಇದ್ದು, ಅದರ ತಪಾಸಣೆಗಾಗಿ ಅವರು ಸಮಯಾವಕಾಶಕ್ಕೆ ಆಸ್ಪತ್ರೆಗೆ ಭೇಟಿ ನೀಡುತ್ತಿರುತ್ತಾರೆ.

ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ನಿಗಾ ವಹಿಸಿಕೊಂಡಿದ್ದಾರೆ. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

ರಾಜಕಾರಣ ತೃಪ್ತಿ ತಂದಿದೆ

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

ಬಜೆಟ್ ನಲ್ಲಿ ವಿಶೇಷ ಘೋಷಣೆ: ಕಾದು ನೋಡಿ
ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು.

ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ
ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.

ಎಚ್. ಡಿ ಕುಮಾರಸ್ವಾಮಿ ರಾಜಕೀಯವಾಗಿ ಮಾತನಾಡುತ್ತಾರೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.

ಬೆಂಗಳೂರಿನಲ್ಲಿ ಲ್ಯಾಪ್ʼಟಾಪ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್.!

0

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ರಾಜದೋರೈ ಹಾಗೂ ಗೌತಮ್ ಬಂಧಿತ ಆರೋಪಿಗಲಾಗಿದ್ದು, ತಮಿಳುನಾಡು ಮೂಲದ ಗೌತಮ್ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದನು.

ಗೌತಮ್, ತಮಿಳುನಾಡು ಮೂಲದ ಡಾಟಾ ಅನಾಲಿಸ್ಟ್ ಹಾಗೂ ಲ್ಯಾಪ್‌ಟಾಪ್ ಶಾಪ್ ಮಾಲೀಕನಾಗಿದ್ದು, ರಾಜದೋರೈ ಮೂಲಕ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿಸಿ ಮಾರಾಟ ಮಾಡುತ್ತಿದ್ದನು. ರಾಜದೊರೈ ಪಿಜಿ ಗಳನ್ನ ಗುರುತಿಸಿ ಕಳ್ಳತನ ಮಾಡುತ್ತಿದ್ದನು. ಸದ್ಯ ಸಿಸಿಟಿವಿ ಆದರಿಸಿ ಆರೋಪಿ ಬಂಧಿಸಿದ್ದು,

ಆರೋಪಿ ಕೊಟ್ಟ ಮಾಹಿತಿ ಮೇರೆಗೆ ರಿಸೀವರ್ ಗೌತಮ್ ನನ್ನು ಬಂಧಿಸಲಾಗಿದೆ. ಬಂಧಿತರಿಂದ 40 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 48 ಲ್ಯಾಪ್ ಟ್ಯಾಪ್ ಗಳು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯಕ್ಕೆ ಕೈಗಾರಿಕೆ ತನ್ನಿ: HD ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು

0

ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಕೈಗಾರಿಕೆ ತರಿಸುವ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ಲಭ್ಯವಿದ್ದು, ನೀವು ಕೈಗಾರಿಕೆ ತೆಗೆದುಕೊಂಡು ಬನ್ನಿ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೈಗಾರಿಕೆ ತರಲು ಸಹಕಾರ ನೀಡುತ್ತಿಲ್ಲ, ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗವೇ ಇಲ್ಲ ಎಂದು ಹೆಚ್ಡಿಕೆ ಹೇಳಿದ್ದ ಹಿನ್ನೆಲೆಯಲ್ಲಿ, ಶಾಸಕ ಗಣಿಗ ರವಿಕುಮಾರ್ ಜಿಲ್ಲಾಧಿಕಾರಿಗಳೊಂದಿಗೆ ತೆರಳಿ ಕೈಗಾರಿಕೆ ಸ್ಥಾಪನೆಗೆ ಸೂಕ್ತ ಜಾಗವನ್ನು ಗುರುತಿಸಿದ್ದಾರೆ. ಕೈಗಾರಿಕೆ ಸ್ಥಾಪನೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇವೆ. ಮಂಡ್ಯಕ್ಕೆ ಕೈಗಾರಿಕೆ ತರಬೇಕು ಎಂಬುದೇ ನಮ್ಮ ಗುರಿ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳವಣಿಗೆಯೊಂದಿಗೆ ಮಂಡ್ಯದಲ್ಲಿ ಕೈಗಾರಿಕೆ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವಿನ ರಾಜಕೀಯ ಕದನ ಮತ್ತೊಂದು ಹಂತಕ್ಕೆ ತಲುಪಿದೆ.

ಆದಿತ್ಯ ಧಾರ್‌ ಕೊಂಡಾಡಿದ ವಿವೇಕ್ ಅಗ್ನಿಹೋತ್ರಿ: ‘ದೇವರ ಮಗ’ ಎಂದ ನಿರ್ದೇಶಕ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ಈಗ ಕೇವಲ ಬಾಕ್ಸ್ ಆಫೀಸ್ ಸಕ್ಸಸ್ ಮಾತ್ರವಲ್ಲ, ಚಿತ್ರರಂಗದ ದಿಗ್ಗಜರ ಮೆಚ್ಚುಗೆಗೂ ಪಾತ್ರವಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ‘ಧುರಂಧರ್’ ಸಿನಿಮಾವನ್ನು ವೀಕ್ಷಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವುಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಎರಡು ತಿಂಗಳ ಬಳಿಕ ಭಾರತಕ್ಕೆ ವಾಪಸ್ ಬಂದೆ. ನಾನು ಮಾಡಿದ ಮೊದಲ ಕೆಲಸ ‘ಧುರಂಧರ್’ ಸಿನಿಮಾ ನೋಡುವುದು. ಅದ್ಭುತ, ಹೆಮ್ಮೆ – ಈ ಎರಡೇ ಭಾವನೆಗಳು ನನ್ನಲ್ಲಿ ಮೂಡಿವೆ. ಇಂತಹ ಸಿನಿಮಾ ತಾನೇ ತಾನಾಗಿ ಆಗುವುದಿಲ್ಲ” ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.

ಸಿನಿಮಾದ ಪ್ರೊಡಕ್ಷನ್ ಡಿಸೈನ್, ಸಂಗೀತ ಹಾಗೂ ತಂತ್ರಜ್ಞರ ಕೆಲಸವನ್ನು ಅವರು ಎತ್ತಿ ಹಿಡಿದಿದ್ದಾರೆ. ಛಾಯಾಗ್ರಾಹಕ ವೀಕಾಸ್ ನೌಲಂಕಾ ಅವರ ಕೆಲಸವನ್ನು ಹೊಸ ತಲೆಮಾರಿನ ಛಾಯಾಗ್ರಾಹಕರಿಗೆ ಮಾರ್ಗದರ್ಶಕ ಎಂದು ಬಣ್ಣಿಸಿದ್ದಾರೆ. ಪ್ರತಿಯೊಂದು ವಿಭಾಗವೂ ಪರಸ್ಪರ ಸಿಂಕ್ ಆಗಿರುವುದು ಈ ಸಿನಿಮಾದ ದೊಡ್ಡ ಶಕ್ತಿ ಎಂದಿದ್ದಾರೆ.

“ಇದು ಸಂಪೂರ್ಣವಾಗಿ ನಿರ್ದೇಶಕ ಮತ್ತು ಬರಹಗಾರರ ಸಿನಿಮಾ. ಆದಿತ್ಯ ಧಾರ್ ಅವರೇ, ನಿಮ್ಮ ಸಿನಿಮಾ ಮಾಡುವ ಸ್ಕೇಲ್ ಮತ್ತು ಡಿಸೈನ್ ಯಾವಾಗಲೂ ದೊಡ್ಡದು. ಇದು ಇನ್ನೊಂದು ಲೆವೆಲ್. ನಾನು ಹೆಮ್ಮೆಯಿಂದ ಈ ಸಿನಿಮಾ ನೋಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನೂ ಮುಂದೆ ಹೋಗಿ, “ನೀವು ನಿಜಕ್ಕೂ ಧನ್ಯ. ನೀವು ದೇವರ ಮಗ. ನಿಮಗೆ ಇನ್ನಷ್ಟು ಶಕ್ತಿ ಸಿಗಲಿ. ಹೀಗೆ ಮುಂದುವರಿಯಿರಿ. ಯುವ ಜನತೆ ಇಂಥ ಸಿನಿಮಾ ಮಾಡಿದಾಗಲೇ ಭಾರತೀಯ ಚಿತ್ರರಂಗ ಬೆಳೆಯುತ್ತದೆ” ಎಂದು ಆದಿತ್ಯ ಧಾರ್‌ಗೆ ಭಾವುಕ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್’ ಸಿನಿಮಾ ಈಗಾಗಲೇ 774 ಕೋಟಿ ರೂಪಾಯಿ ಮೀರಿದ ಕಲೆಕ್ಷನ್ ಮಾಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

ಪೊಲೀಸರ ಕಾರ್ಯಾಚರಣೆ: ₹3.16 ಕೋಟಿ ಮೌಲ್ಯದ MDMA ಸೀಜ್, ಇಬ್ಬರು ಬಂಧನ

0

ಬೆಂಗಳೂರು: ಹೊಸ ವರ್ಷದ ದಿನ ಅಶೋಕ್ ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹3.16 ಕೋಟಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಸೈಯದ್ ತಾರಿಕ್ ಇಕ್ಬಾಲ್ ಹಾಗೂ ಶೇಖ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರಿಂದ 3 ಕೆಜಿ 169 ಗ್ರಾಂ MDMA ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬೆಂಗಳೂರು ಮೂಲದವರಾಗಿದ್ದು, ಡ್ರಗ್ಸ್ ಅನ್ನು ನೈಜೀರಿಯಾ ಮೂಲದ ವ್ಯಕ್ತಿಯಿಂದ ತರಿಸಿಕೊಂಡಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಸದ್ಯ ನೈಜೀರಿಯಾ ಮೂಲದ ಪ್ರಮುಖ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ಗಾಯದಿಂದ ಚೇತರಿಸಿಕೊಂಡ ಶ್ರೇಯಸ್ ಅಯ್ಯರ್: ವಿಜಯ ಹಝಾರೆ ಟ್ರೋಫಿ ಗೆ ಕಂಬ್ಯಾಕ್

0

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ವಿಶೇಷವೆಂದರೆ, ಅವರು ವಿಜಯ ಹಝಾರೆ ಟ್ರೋಫಿ ಮೂಲಕ ಕ್ರಿಕೆಟ್‌ಗೆ ಮರಳುತ್ತಿದ್ದಾರೆ.

ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿರುವ ಕಾರಣ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ನಾಯಕತ್ವವನ್ನು ಶ್ರೇಯಸ್ ಅಯ್ಯರ್ ಅವರಿಗೆ ವಹಿಸಲಾಗಿದೆ. ಇಂದು (ಜನವರಿ 6) ನಡೆಯಲಿರುವ ಹಿಮಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ.

ಅಲ್ಲದೆ, ಜನವರಿ 8ರಂದು ಪಂಜಾಬ್ ವಿರುದ್ಧ ನಡೆಯುವ ಪಂದ್ಯದಲ್ಲೂ ಅವರು ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಎರಡು ಪಂದ್ಯಗಳ ಮೂಲಕ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾಗಿದೆ. ಇದಾದ ಬಳಿಕವೇ ಅವರು ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದ್ದರೂ, ಗಾಯದ ಹಿನ್ನೆಲೆಯಲ್ಲಿ ದೇಶೀಯ ಪಂದ್ಯಗಳ ಮೂಲಕ ಫಿಟ್ನೆಸ್ ತೋರಿಸಲು ಸೂಚಿಸಲಾಗಿದೆ. ಜನವರಿ 8ರ ಬಳಿಕವೇ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವ ಕುರಿತು ಅಂತಿಮ ತೀರ್ಮಾನವಾಗಲಿದೆ.

 

ಧಾರವಾಡ| ಭೀಕರ ಅಗ್ನಿ ದುರಂತ; ಮೂರು ಅಂಗಡಿಗಳು ಸುಟ್ಟು ಕರಕಲು!

0

ಧಾರವಾಡ:- ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿದೆ‌. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ.

ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!