Home Blog Page 2190

ಕೊವಿಡ್ ರೋಗಿಗಳನ್ನು ಭೇಟಿ ಮಾಡಿದ ಡಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಕೊವಿಡ್-೧೯ ರೋಗಿಗಳಿಗೆ  ನೀಡುತ್ತಿರುವ ಚಿಕಿತ್ಸೆಯ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ, ನಂತರ ಪಿಪಿ ಕಿಟ್ ಧರಿಸಿ ಸ್ವತಃ ತಾವೇ ಖುದ್ದಾಗಿ ಕೊವಿಡ್ ರೋಗಿಗಳ ವಾರ್ಡಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ. ವೈಜನಾಥ ಇಟಗಿ, ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಕಾಶ ಕಬ್ಬರಗಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಎಮ್ಮೆಗಳ ಕಳ್ಳಸಾಗಣೆ: ಮೂವರ ಬಂಧನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರೊಬ್ಬರಿಗೆ ಸೇರಿದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಎಮ್ಮೆಗಳನ್ನು ಕದ್ದು ಸಾಗಿಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಗಂಗಾವತಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಾನುವಾರು ವ್ಯಾಪಾರಿ ಅಮರ ಭಗತ್‌ಸಿಂಗ್ ನಗರದ ಹುಸೇನಸಾಬ ಖಲಂದರ್, ಜಂಗರಮರ ಕಲ್ಗುಡಿ ಗ್ರಾಮದ ಖಾಸಗಿ ವಾಹನಗಳ ಚಾಲಕ ರಿಜ್ವಾನ್ ಭಾಷಾಸಾಬ್, ಕೂಲಿ ಕಾರ್ಮಿಕ ದಾವೂದ್ ಲಾಲ್‌ಸಾಬ್ ಬಂಧಿತ ಆರೋಪಿಗಳು.

ಜಾನುವಾರುಗಳ ಮಾಲೀಕ ನೀಡಿದ ದೂರಿನ ಹಿನ್ನೆಲೆ, ಸುಳಿವೊಂದನ್ನು ಹಿಡಿದು ಬೆನ್ನು ಹತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳು ಆ. 31ರ ಮಧ್ಯರಾತ್ರಿ ಜಾನುವಾರುಗಳನ್ನು ಕಳ್ಳತನ ಮಾಡಿ ಬಳ್ಳಾರಿಗೆ ಸಾಗಿಸಿದ್ದಾರೆ. ಅಲ್ಲಿ ವಧಾ ಗೃಹಕ್ಕೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ಎರಡುವರೆ ಸಾವಿರ ಜನಸಂಖ್ಯೆ: 30 ಮದ್ಯದ ಅಂಗಡಿಗಳು!

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೇವಲ ಎರಡುವರೆ ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ 30ಕ್ಕೂ ಹೆಚ್ಚು ಮದ್ಯದಂಗಡಿಗಳಿವೆ. ಇದರಿಂದ ಕಲಿಯುಗದ ಕುಡುಕರ ಗ್ರಾಮ ಎಂಬ ಕಳಂಕ ಇದಕ್ಕೆ ಎದುರಾಗಿದ್ದು, ಈ ಬಗ್ಗೆ ಅಕ್ರಮ ಮದ್ಯದಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಗಾಪುರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಬೈಪಾಸ್‌ನಲ್ಲಿರುವ ಅಬಕಾರಿ ಇಲಾಖೆಗೆ ಮಂಗಳವಾರದಂದು ಭೇಟಿ ನೀಡಿದ ಗ್ರಾಮಸ್ಥರು, ಗ್ರಾಮದಲ್ಲಿರುವ ಅನಧಿಕೃತ ಮದ್ಯದಂಗಡಿಗಳಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಯುವಕರು, ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಈ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಗ್ರಾಮದಲ್ಲಿರುವ ಒಂದು ಅಂಗಡಿಯಿಂದ ಕೆಲ ರಾಜಕೀಯ ಪ್ರೇರಿತ ವ್ಯಕ್ತಿಗಳು ಸುತ್ತಲಿನ ಹತ್ತಾರು ಗ್ರಾಮಗಳಿಗೆ ಅನಧಿಕೃತವಾಗಿ ಸರಬರಾಜು ಮಾಡುತ್ತಿದ್ದಾರೆ. ಇದರಿಂದ ನಕಲಿ ಮದ್ಯ ಸರಬರಾಜಿನ ಆತಂಕ ಇದ್ದು, ಕೂಡಲೇ ಜನರ ಆರೋಗ್ಯ ಮತ್ತು ಗ್ರಾಮದ ಸ್ವಾಸ್ಥ್ಯ ಕಾಪಾಡುವ ಉದ್ದೇಶಕ್ಕೆ ಅಕ್ರಮ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಎಟಿಎಂಗೆ ಹೋದಾಗ ಮೊಬೈಲ್ ಜೊತೆಗಿರಲಿ: ಸೆ.18 ರಿಂದ ಹೊಸ ರೂಲ್ಸ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇನ್ನು ಮುಂದೆ ಎಟಿಎಂಗಳಿಗೆ ಹಣ ತೆಗೆಯಲು ಹೋದಾಗ ಜೊತೆಯಲ್ಲಿ ನಿಮ್ಮ ಮೊಬೈಲ್ ಫೋನ್ ಕೂಡ ಇರಲಿ. ಆಗ ಮಾತ್ರ ನೀವು ದುಡ್ಡು ತೆಗೆಯಲು ಸಾಧ್ಯ. ಸೆಪ್ಟೆಂಬರ್ 18ರಿಂದ ಎಸ್‌ಬಿಐ ಈ ನಿಯಮವನ್ನು ಜಾರಿ ಮಾಡಿದೆ.

10 ಸಾವಿರ ರೂ.ಗಿಂತ ಹೆಚ್ಚಿನ ಹಣ ವಿತ್‌ಡ್ರಾ ಮಾಡಲು ಮೊಬೈಲ್ ನಂಬರ್ ದಾಖಲಿಸಬೇಕು. ನಂತರ ಮೊಬೈಲ್‌ಗೆ ಬರುವ ಒಟಿಪಿ ದಾಖಲಿಸಿದ ನಂತರವಷ್ಟೇ ಹಣ ತೆಗೆಯಬಹುದು.
ಎಟಿಎಂ ಕುರಿತಂತೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಪ್ಪಿಸಲು ಈ ಕ್ರಮ ಜಾರಿಗೆ ತರುತ್ತಿರುವುದಾಗಿ ಬ್ಯಾಂಕ್ ಹೇಳಿದೆ. ಮುಂದಿನ ದಿನಗಳಲ್ಲಿ ಉಳಿದ ಬ್ಯಾಂಕ್‌ಗಳೂ ಈ ವಿಧಾನ ಅನುಸರಿಸಲಿವೆ.

ಗೃಹ ಸಚಿವ ಬೊಮ್ಮಾಯಿಗೆ ಕೊವಿಡ್ ದೃಢ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಕೊವಿಡ್ ದೃಢಪಟ್ಟಿದೆ.  ತಮಗೆ ಕೊವಿಡ್ ತಗುಲಿದ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೊವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ. ಆರೋಗ್ಯದಿಂದಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಹೇಳಿದ್ದಾರೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅವರು ಟ್ವೀಟ್ ಮೂಲಕ ವಿನಂತಿಸಿಕೊಂಡಿದ್ದಾರೆ.
ಮಂಗಳವಾರ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅತ್ತ ಮೊನ್ನೆ ಸಂಸತ್‌ನಲ್ಲಿ ಪಾಲ್ಗೊಳ್ಳಲು ಬಂದ 25ಕ್ಕೂ ಹೆಚ್ಚು ಸಂಸದರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.

9 ಕಿಮೀ ಉದ್ದದ ಸುರಂಗ ಮಾರ್ಗ: ಅಟಲ್ ಟನೆಲ್ ಉದ್ಘಾಟನೆಗೆ ಸಿದ್ಧ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ವಿಶ್ವದ ಎತ್ತರ ಪ್ರದೇಶದಲ್ಲಿನ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಎನ್ನಲಾಗಿರುವ ಅಟಲ್ ಸುರಂಗ ಹೆದ್ದಾರಿ ಉದ್ಘಾಟನೆಗೆ ಸಿದ್ಧವಾಗಿದೆ. ಹಿಮಾಚಲ ಪ್ರದೇಶದ ಮನಾಲಿಯಿಂದ ದೇಶದ ಗಡಿಭಾಗದ ಲೇಹ್ ಪ್ರದೇಶಕ್ಕೆ ಸಂಪರ್ಕಿಸುವ ಈ ಹೆದ್ದಾರಿ ನಿರ್ಮಾಣವನ್ನು ಹತ್ತು ವರ್ಷಗಳ ಅವಧಿಯಲ್ಲಿ ಪೂರ್ತಿಗೊಳಿಸಲಾಗಿದೆ.

ಆರಂಭದಲ್ಲಿ 6 ವರ್ಷ ಅವಧಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು.
ಪ್ರತಿ 60 ಮೀ.ಗೆ ಸಿಸಿಟಿವಿಯನ್ನು, ಪ್ರತಿ 500 ಮೀ.ಗೆ ತುರ್ತು ನಿರ್ಗಮನ ದ್ವಾರವನ್ನು ನಿರ್ಮಿಸಲಾಗಿದೆ. ಸುರಂಗದಲ್ಲಿ ಅಗ್ನಿಶಾಮಕ ಉಪಕರಣಗಳನ್ನು ಅಳವಡಿಸಲಾಗಿದೆ.

ಈ ಹೆದ್ದಾರಿಯು ಮನಾಲಿ ಮತ್ತು ಲೇಹ್ ನಡುವಿನ ರಸ್ತೆದೂರವನ್ನು 47 ಕಿಮೀ ಕಡಿಮೆ ಮಾಡುತ್ತದೆ. ಇದರಿಂದ ಪ್ರಯಾಣದ ಅವಧಿ 4 ತಾಸು ತಗ್ಗಲಿದೆ.

ಲಕ್ಷ ರೊಕ್ಕದ ಅಂದರ್-ಬಾಹರ್: 10 ಮಂದಿ ಬಂಧನ, ಗಡಿ ದಾಟಿ ಆಡಲು ಬಂದು ಸಿಕ್ಕವರು ಯಾರು ಗೊತ್ತಾ?

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಲಕ್ಷದ ಲೆಕ್ಕದಲ್ಲಿ ಅಂದರ್-ಬಾಹರ್ ಆಡುತ್ತಿದ್ದ 10 ಜನರನ್ನು ರೋಣ ಪೊಲೀಸರು ಬಂಧಿಸಿ, ಸ್ಟೇಷನ್‌ಬೇಲ್ ಬಿಡುಗಡೆ ಮಾಡಿದ್ದಾರೆ. ಹೊಳೆ ಆಲೂರಿನ ಎಪಿಎಂಸಿ ಆವರಣದಲ್ಲಿ ಬಸವರಾಜ ಹನುಮಂತಪ್ಪ ಸಂಗಟಿಯವರ ದಲಾಲಿ ಅಂಗಡಿ ಮುಂದೆ ನಡೆಯುತ್ತಿದ್ದ ಇಸ್ಪೀಟು ಅಡ್ಡೆಯ ಮೇಲೆ ರೋಣ ಪಿಎಸ್‌ಐ ವಿನೋದ ಪೂಜಾರಿ ನೇತೃತ್ವದಲ್ಲಿ ರೋಣ ಪೊಲೀಸರು ದಾಳಿ ಮಾಡಿ 1 ಲಕ್ಷ 16 ಸಾವಿರ 870 ರೂ. ವಶಪಡಿಸಿಕೊಂಡಿದ್ದಾರೆ.

ಕೆ ಪಿ ಆ್ಯಕ್ಟ್ 87ರ ಕಲಂ ಅಡಿ ಕೇಸು ದಾಖಲಿಸಿದ್ದಾರೆ. ಪಕ್ಕದ ಜಿಲ್ಲೆಯವರು, ದೂರದೂರಿನವರು ಈ ‘ದೊಡ್ಡ ಆಟ’ದಲ್ಲಿ ಅತಿಥಿ ಆಟಗಾರರಾಗಿ ಪಾಲ್ಗೊಂಡಿದ್ದರು. ಸಿಕ್ಕಿರುವ ಮೊತ್ತ ನೋಡಿದರೆ ಇದು ‘ಫಂಡ್’ ಆಟವೇ ಇರಬಹುದು ಎನ್ನಲಾಗಿದೆ.

‘ದೊಡ್ಡಾಟ’ದಲ್ಲಿ
ರೋಣ ತಾಲೂಕಿನ ಕರ್ಕಿಕಟ್ಟಿಯ ಪ್ರಕಾಶ ಶ್ರೀಶೈಲಪ್ಪ ಚಂದಣ್ಣವರ್, ಶರಣಪ್ಪ ಬಸಪ್ಪ ಗೋಡಿ, ಸುಭಾಷಚಂದ್ರ ಬಸಪ್ಪ ಸವದತ್ತಿ, ಹೊಳೆಮಣ್ಣೂರಿನ ಶಿವಾನಂದ ದ್ಯಾಮಪ್ಪ ಹಟ್ಟಿ,  ಹೊಳೆ ಆಲೂರಿನ ಚಂದ್ರಶೇಖರ ಬಸಯ್ಯ ಮುಳಗುಂದಮಠ, ಬಸವರಾಜ ಹನುಮಂತಪ್ಪ ಸಂಗಟಿ, ಅಮರೇಗೌಡ ವೀರನಗೌಡ ಪಾಟೀಲ್, ಶರಣಪ್ಪ ಬಸಪ್ಪ ಕಡಬಲಕಟ್ಟಿ, ನರಗುಂದ ತಾಲೂಕಿನ ಹದ್ಲಿಯ ಹನುಮಂತಗೌಡ ಕಳಕನಗೌಡ ಹಿರೇಗೌಡ್ರ, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೆಬ್ಬಳ್ಳಿಯ ಶಿವನಗೌಡ ಬಸನಗೌಡ ಗಡ್ಡಿಗೌಡ್ರ ಸಿಕ್ಕಿಬಿದ್ದಿದ್ದಾರೆ.

ಲಂಚ ಪಡೆಯುತ್ತಿದ್ದ  ಕೃಷಿ ಅಧಿಕಾರಿ ಎಸಿಬಿ ಬಲೆಗೆ; ಅಪಾರ ಅಕ್ರಮ ಸಂಪತ್ತಿನ ದಾಖಲೆ ಪತ್ತೆ!

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಲಬುರಗಿ: ರೈತನಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ. ಕೃಷಿ ಸಲಕರಣೆಗಳಿಗೆ ರಿಯಾಯತಿ ಬಿಲ್ ಪಾಸ್ ಮಾಡಿಕೊಡಲು 50 ಸಾವಿರ ರೂ. ಲಂಚ ಪಡೆಯುವಾಗ ಜೇವರ್ಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ರೆಡ್‌ಹ್ಯಾಂಡ್ ಆಗಿ ಸಿಕ್ಕುಬಿದ್ದಿದ್ದಾರೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ಸುನೀಲ್ ಕುಮಾರ್ ಯರಗೋಳ್ ಎಸಿಬಿ ಬಲೆಗೆ ಬಿದ್ದವರು. ಕಲಬುರಗಿ ನಗರದ ಕನ್ನಡ ಭವನದ ಬಳಿ ರೈತರಿಂದ ಹಣ ಪಡೆಯುವಾಗಲೇ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಜೇವರ್ಗಿ ನಿವಾಸಿ ರೈತ ಶರಣಗೌಡ ಎನ್ನುವವರಿಗೆ ಸಬ್ಸಿಡಿ ಬಿಲ್ ಪಾಸ್ ಮಾಡಿಕೊಡಲು 1.5 ಲಕ್ಷ ರೂಪಾಯಿ ಲಂಚದ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ಐವತ್ತು ಸಾವಿರ ರೂ. ಹಣ ಪಡೆಯುವಾಗ ಎಸಿಬಿ ಎಸ್‌ಪಿ ಮಹೇಶ್ ಮೇಘಣ್ಣವರ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಯ ಕಲಬುರಗಿ ನಿವಾಸದ ಮೇಲೆ ರೇಡ್ ಮಾಡಿರುವ ಪೊಲೀಸರು 9 ಲಕ್ಷ ರೂಪಾಯಿ ನಗದು ಹಣ, ಅಪಾರ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆದಾಯ ಮೀರಿ ಖರೀದಿಸಿದ ಆಸ್ತಿಪಾಸ್ತಿ ದಾಖಲೆ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  

ಅರ್ಧ ಕೋಟಿ ದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ ಗರಿಷ್ಠ 1,290 ಕೊವಿಡ್ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಳೆದ 24 ತಾಸುಗಳ ಅವಧಿಯಲ್ಲಿ(ಮಂಗಳವಾರ ಮುಂಜಾನೆಯಿಂದ ಬುಧವಾರ ಮುಂಜಾನೆ) 90,123 ಹೊಸ ಕೊವಿಡ್ ಕೇಸುಗಳು ದಾಖಲಾಗಿದ್ದು, ದೈನಂದಿನ ಗರಿಷ್ಠ 1,290 ಕೊವಿಡ್ ಸಾವು ಸಂಭವಿಸಿವೆ. ದೇಶದಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ ಅರ್ಧ ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬುಧವಾರ ಮುಂಜಾನೆ ತಿಳಿಸಿದೆ.

ಸದ್ಯ ಒಟ್ಟು ಸೋಂಕಿತರ ಸಂಖ್ಯೆ 50,20,360 ಇದ್ದು, ಇದರಲ್ಲಿ 9,95,933 ಸಕ್ರಿಯ ಕೇಸ್‌ಗಳಿವೆ. 39,42,361 ಜನರು ಗುಣಮುಖರಾಗಿದ್ದಾರೆ. ಕಳೆದ 20 ದಿನದಲ್ಲಿ 20 ಸಾವಿರಕ್ಕೂ ಹೆಚ್ಚು ಕೊವಿಡ್ ಸಾವು ಸಂಭವಿಸಿವೆ. ಆದರೆ ಒಟ್ಟು ಚೇತರಿಕೆ ಪ್ರಮಾಣ ಶೇ.78 ಇದೆ.

ಬುಧವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 55,040 ರೂ. ಇದೆ. ಮುಂಬೈನಲ್ಲಿ ಕನಿಷ್ಠ ೫೧,೪೬೦ ರೂ. ಇದೆ.

ಬೆಂಗಳೂರು, ಮೈಸೂರು, ಮಂಗಳೂರು: 22 ಕ್ಯಾರಟ್: 49,010 ರೂ.,24 ಕ್ಯಾರಟ್: 53,460 ರೂ.
ಹುಬ್ಬಳ್ಳಿ: 22 ಕ್ಯಾರಟ್: 48,858 ರೂ., 24 ಕ್ಯಾರಟ್: 53,500 ರೂ.

error: Content is protected !!