Home Blog Page 22

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಾಪತ್ತೆ: ಗೈಡ್, ಏಜೆನ್ಸಿ ಸಿಬ್ಬಂದಿ ವಶಕ್ಕೆ

ಡೆಹ್ರಾಡೂನ್: ಉತ್ತರಾಖಂಡದ ಗಡ್ವಾಲ್ ಹಿಮಾಲಯ ಪ್ರದೇಶದಲ್ಲಿ ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸುರಕ್ಷತಾ ಲೋಪದ ಆರೋಪದಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಬಬಿತಾ ಎಂಬ ವಿದ್ಯಾರ್ಥಿನಿ ಸ್ನೇಹಿತರ ತಂಡದೊಂದಿಗೆ ಖಾಸಗಿ ಟ್ರೆಕ್ಕಿಂಗ್ ಏಜೆನ್ಸಿ ಮೂಲಕ ಉತ್ತರಾಖಂಡದ ದುರ್ಗಮ ಪರ್ವತ ಪ್ರದೇಶಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ವೇಳೆ ಕ್ಯಾಂಪ್ ಪ್ರದೇಶದಿಂದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಹಲವು ದಿನಗಳಾದರೂ ಯಾವುದೇ ಸುಳಿವು ಪತ್ತೆಯಾಗಿಲ್ಲ.

ವಿದ್ಯಾರ್ಥಿನಿಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಡ್ರೋನ್ ಮತ್ತು ಹೆಲಿಕಾಪ್ಟರ್ ಸಹಾಯದಿಂದ ವ್ಯಾಪಕ ಹುಡುಕಾಟ ನಡೆಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರೆಕ್ಕಿಂಗ್ ತಂಡದ ಸ್ಥಳೀಯ ಗೈಡ್ ಹಾಗೂ ಏಜೆನ್ಸಿಯ ಒಬ್ಬ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಕಾಣೆಯಾದ ತಕ್ಷಣ ಆಡಳಿತಕ್ಕೆ ಮಾಹಿತಿ ನೀಡದೆ ವಿಳಂಬ ಮಾಡಿರುವ ಆರೋಪವೂ ಕೇಳಿಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಟ್ರೆಕ್ಕಿಂಗ್ ಏಜೆನ್ಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಿರಲಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಅನುಮತಿ ಇಲ್ಲದ ಅಥವಾ ಅಪಾಯಕಾರಿ ಮಾರ್ಗದಲ್ಲಿ ತಂಡವನ್ನು ಕರೆದೊಯ್ದಿರುವ ಸಾಧ್ಯತೆಗಳನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆರೋಪ ಸಾಬೀತಾದರೆ ಏಜೆನ್ಸಿಯ ಪರವಾನಗಿ ರದ್ದುಗೊಳಿಸುವ ಸಾಧ್ಯತೆ ಇದೆ.

ಈ ಘಟನೆಯ ಬೆನ್ನಲ್ಲೇ ಉತ್ತರಾಖಂಡ ಸರ್ಕಾರ ಹಿಮಾಲಯನ್ ಟ್ರೆಕ್ಕಿಂಗ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೆ ತರುವ ಸೂಚನೆ ನೀಡಿದೆ. ಇನ್ನು ಮುಂದೆ ಪ್ರತಿಯೊಬ್ಬ ಟ್ರೆಕ್ಕರ್‌ಗೆ ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಕಡ್ಡಾಯಗೊಳಿಸುವ ಜೊತೆಗೆ, ನೋಂದಾಯಿತ ಮಾರ್ಗದರ್ಶಿಗಳಿಲ್ಲದೆ ಟ್ರೆಕ್ಕಿಂಗ್‌ಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಏರ್ಪೋರ್ಟ್ ಮೆಟ್ರೋಗೆ ಮೊದಲ ರೈಲು ಎಂಟ್ರಿ: ಬೈಯಪ್ಪನಹಳ್ಳಿ ಡಿಪೋ ತಲುಪಿದ ಬ್ಲೂ ಲೈನ್ ಟ್ರೈನ್

ಬೆಂಗಳೂರು: ನಗರದ ಬಹುನಿರೀಕ್ಷಿತ ಬ್ಲೂ ಲೈನ್ ಮೆಟ್ರೋ ಯೋಜನೆಗೆ ಮಹತ್ವದ ಮೈಲುಗಲ್ಲು ಸಿಕ್ಕಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮಾರ್ಗಕ್ಕಾಗಿ ತಯಾರಿಸಲಾದ ಮೊದಲ ಮೆಟ್ರೋ ರೈಲು ಬುಧವಾರ ಬೈಯಪ್ಪನಹಳ್ಳಿ ಡಿಪೋಗೆ ತಲುಪಿದೆ.

ಬಿಎಂಆರ್‌ಸಿಎಲ್ ಡಿಸೆಂಬರ್ ವೇಳೆಗೆ ಬ್ಲೂ ಲೈನ್ ಮೊದಲ ಹಂತವನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಮೊದಲ ರೈಲು ಆಗಮನ ಯೋಜನೆಗೆ ಮತ್ತಷ್ಟು ವೇಗ ನೀಡಿದೆ. ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರಂವರೆಗೆ ಸಂಪರ್ಕ ಕಲ್ಪಿಸುವ ಮೊದಲ ಹಂತವನ್ನು ಈ ವರ್ಷಾಂತ್ಯದಲ್ಲಿ ಆರಂಭಿಸುವ ಗುರಿ ಹೊಂದಲಾಗಿದೆ.

58.19 ಕಿಲೋಮೀಟರ್ ಉದ್ದದ ಬ್ಲೂ ಲೈನ್ ಮಾರ್ಗವು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಗಾಗಿ ಒಟ್ಟು 38 ಡ್ರೈವರ್‌ಲೆಸ್ ರೈಲುಗಳ ಖರೀದಿಗೆ ಆದೇಶ ನೀಡಲಾಗಿದ್ದು, ಅವುಗಳನ್ನು ಬೆಂಗಳೂರು ಮೂಲದ ಬೆಮಲ್ ಸಂಸ್ಥೆ ನಿರ್ಮಿಸುತ್ತಿದೆ.

ಮೊದಲ ಹಂತದ 19.75 ಕಿಲೋಮೀಟರ್ ಉದ್ದದ ಸಿಲ್ಕ್ ಬೋರ್ಡ್–ಕೆ.ಆರ್.ಪುರಂ ಮಾರ್ಗದಲ್ಲಿ 13 ನಿಲ್ದಾಣಗಳು ನಿರ್ಮಾಣವಾಗಲಿವೆ. ಎರಡನೇ ಹಂತದ ಕೆ.ಆರ್.ಪುರಂ–ವಿಮಾನ ನಿಲ್ದಾಣ ಮಾರ್ಗವು 38.44 ಕಿಲೋಮೀಟರ್ ಉದ್ದವಿದ್ದು, 17 ನಿಲ್ದಾಣಗಳನ್ನು ಒಳಗೊಂಡಿರಲಿದೆ.

ಒಟ್ಟು 30 ನಿಲ್ದಾಣಗಳನ್ನು ಹೊಂದಿರುವ ಬ್ಲೂ ಲೈನ್ ಯೋಜನೆಯನ್ನು ಸುಮಾರು 14,788 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ವೇಗವಾದ ಮತ್ತು ಸುಗಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕೈಗೆತ್ತಿಕೊಂಡಿರುವ ಈ ಯೋಜನೆ, ಪೂರ್ಣಗೊಂಡ ಬಳಿಕ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಿದೆ.

ಆಟವಾಡುತ್ತಾ ಕಾರಿನೊಳಗೆ ಸಿಲುಕಿದ 3 ವರ್ಷದ ಮಗು: ಉಸಿರುಗಟ್ಟಿ ದಾರುಣ ಸಾವು

ಕಲಬುರಗಿ: ಕಾರಿನೊಳಗೆ ಸಿಲುಕಿ ಉಸಿರುಗಟ್ಟಿದ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕೊಟ್ಟುರೇಶ್ವರ ಅವರ ಪುತ್ರ ಬಸವಪ್ರಭು (3) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಪೋಷಕರು ಮಗುವನ್ನು ಕರೆದುಕೊಂಡು ಶಾಲೆಗೆ ಕಾರಿನಲ್ಲಿ ತೆರಳಿದ್ದರು. ಶಾಲೆ ಬಳಿ ಕಾರನ್ನು ನಿಲ್ಲಿಸಿ ಹೊರಬಂದ ವೇಳೆ ವಾಹನವನ್ನು ಸಂಪೂರ್ಣ ಲಾಕ್ ಮಾಡದೆ ತೆರಳಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಆಟವಾಡುತ್ತಿದ್ದ ಬಸವಪ್ರಭು ಕಾರಿನೊಳಗೆ ಪ್ರವೇಶಿಸಿದ್ದಾನೆ. ಬಳಿಕ ಆಕಸ್ಮಿಕವಾಗಿ ಕಾರಿನ ಬಾಗಿಲುಗಳು ಲಾಕ್ ಆಗಿದ್ದು, ಮಗು ವಾಹನದೊಳಗೆ ಸಿಲುಕಿಕೊಂಡಿದೆ. ಹೊರಬರಲು ಸಾಧ್ಯವಾಗದೇ ಕಾರಿನೊಳಗೆ ಬಹಳ ಸಮಯ ಕಳೆದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮಗು ಕಾಣೆಯಾಗಿರುವುದನ್ನು ಗಮನಿಸಿದ ಪೋಷಕರು ಮತ್ತು ಕುಟುಂಬಸ್ಥರು ಬೆಳಗ್ಗೆಯಿಂದಲೇ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಎಲ್ಲಿಯೂ ಮಗು ಪತ್ತೆಯಾಗಿರಲಿಲ್ಲ.

ಮಧ್ಯಾಹ್ನದ ವೇಳೆಗೆ ಕಾರನ್ನು ಪರಿಶೀಲಿಸಿದಾಗ ಮಗುವು ಅದರೊಳಗೆ ಅಚೇತನ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಹೊರತೆಗೆದರೂ ಆಗಲೇ ಮಗು ಮೃತಪಟ್ಟಿರುವುದು ಗೊತ್ತಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಶಹಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಗಳೂರಿನಲ್ಲಿ ಗುರುವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

​ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ.

ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.

​ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

ಆಸ್ತಿ ಹಕ್ಕು ವಿವಾದಗಳ ವಿಚಾರಣೆ ಕುಟುಂಬ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ: ಹೈಕೋರ್ಟ್

ಬೆಂಗಳೂರು: ಆಸ್ತಿ ಹಕ್ಕು ಹಾಗೂ ಉತ್ತರಾಧಿಕಾರಕ್ಕೆ ಸಂಬಂಧಿಸಿದ ಸಿವಿಲ್ ವ್ಯಾಜ್ಯಗಳನ್ನು ಕೌಟುಂಬಿಕ ನ್ಯಾಯಾಲಯದ ವ್ಯಾಪ್ತಿಗೆ ವಿಸ್ತರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಕುಟುಂಬ ನ್ಯಾಯಾಲಯಗಳ ಅಧಿಕಾರವನ್ನು ಪ್ರತಿಯೊಂದು ಆಸ್ತಿ ಹಕ್ಕು ಅಥವಾ ಉತ್ತರಾಧಿಕಾರ ವಿವಾದಕ್ಕೂ ಅನ್ವಯಿಸಿದರೆ, ಅವುಗಳ ಸ್ಥಾಪನೆಯ ಮೂಲ ಉದ್ದೇಶವೇ ದುರ್ಬಲಗೊಳ್ಳುವುದಲ್ಲದೆ, ಸಿವಿಲ್ ನ್ಯಾಯಾಲಯಗಳ ನಿಗದಿತ ಅಧಿಕಾರ ವ್ಯಾಪ್ತಿಯ ಮೇಲೆಯೂ ಅತಿಕ್ರಮಣವಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಮೃತ ಜೆ.ಪಿ. ನಾರಾಯಣಸ್ವಾಮಿ ಅವರ ಆಸ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಮೃತರ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಅವರ ಪತ್ನಿ ಹೆಚ್.ಬಿ. ಶೋಭಾ ಹಾಗೂ ಮಕ್ಕಳು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಧ ರಾವ್ ಅವರಿದ್ದ ಏಕಸದಸ್ಯ ಪೀಠವು ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ತೀರ್ಪಿನಲ್ಲಿ ನ್ಯಾಯಾಲಯ, ಕುಟುಂಬ ನ್ಯಾಯಾಲಯಗಳ ಕಾಯ್ದೆ ಕುಟುಂಬ ಸಂಬಂಧಿತ ವಿವಾದಗಳನ್ನು ತ್ವರಿತವಾಗಿ ಹಾಗೂ ಸಂಧಾನದ ಮೂಲಕ ಬಗೆಹರಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂದು ತಿಳಿಸಿದೆ. ಆದರೆ ಸಂಕೀರ್ಣ ಸ್ವರೂಪದ ನಾಗರಿಕ ವ್ಯಾಜ್ಯಗಳು ಮತ್ತು ಆಸ್ತಿ ಹಕ್ಕು ಸಂಬಂಧಿತ ಪ್ರಕರಣಗಳ ವಿಚಾರಣೆಗೆ ಅದರ ಅಧಿಕಾರವನ್ನು ವಿಸ್ತರಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಸ್ತುತ ಪ್ರಕರಣದಲ್ಲಿ ದಾಂಪತ್ಯ ಕಲಹ ಅಥವಾ ಕುಟುಂಬ ಸಂಬಂಧಿತ ವಿವಾದವಿಲ್ಲ. ಬದಲಾಗಿ, ಮೃತ ವ್ಯಕ್ತಿಯ ಆಸ್ತಿಯ ಮೇಲಿನ ಹಕ್ಕು ಹಾಗೂ ಸಂಬಂಧಿತ ವ್ಯಕ್ತಿಗಳ ಕಾನೂನು ಸ್ಥಾನಮಾನವನ್ನು ನಿರ್ಧರಿಸುವುದೇ ಮುಖ್ಯ ವಿಚಾರವಾಗಿದೆ. ಹೀಗಾಗಿ ಇದು ಕೌಟುಂಬಿಕ ವಿವಾದವಲ್ಲದೆ, ಸಿವಿಲ್ ಸ್ವರೂಪದ ಸಂಕೀರ್ಣ ವ್ಯಾಜ್ಯವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಿವಿಲ್ ನ್ಯಾಯಾಲಯಕ್ಕೆ ಹೋಗಲು ಅವಕಾಶ

ಈ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್, ಪ್ರತಿವಾದಿಗಳ ಕಾನೂನು ಪ್ರತಿನಿಧಿಗಳು ತಮ್ಮ ಹಕ್ಕುಗಳಿಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಹಕ್ಕು ಪ್ರತಿಪಾದನೆ ಹೊಂದಿದ್ದರೆ, ಸಂಬಂಧಿತ ಸಿವಿಲ್ ನ್ಯಾಯಾಲಯದ ಮುಂದೆ ಹೊಸದಾಗಿ ದಾವೆ ಹೂಡುವ ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಸೂಚಿಸಿದೆ.

ಪ್ರಕರಣದ ಹಿನ್ನೆಲೆ

ಮೃತ ಜೆ.ಪಿ. ನಾರಾಯಣಸ್ವಾಮಿ ಅವರ ಆಸ್ತಿಗೆ ಸಂಬಂಧಿಸಿದ ವಿವಾದದಲ್ಲಿ, ಅವರ ತಾಯಿ ಪಾರ್ವತಮ್ಮ ಅವರು ಅರ್ಜಿ ಸಲ್ಲಿಸಿ, ಹೆಚ್.ಬಿ. ಶೋಭಾ ಅವರು ನಾರಾಯಣಸ್ವಾಮಿ ಅವರ ಕಾನೂನುಬದ್ಧ ಪತ್ನಿಯಲ್ಲ ಹಾಗೂ ಅವರಿಬ್ಬರು ಮಕ್ಕಳು ಮೃತರ ವಾರಸುದಾರರಲ್ಲ ಎಂದು ಘೋಷಣೆ ನೀಡುವಂತೆ ಕೋರಿದ್ದರು. ಜೊತೆಗೆ, ನಾರಾಯಣಸ್ವಾಮಿ ಅವರ ಆಸ್ತಿಯಲ್ಲಿ ಯಾವುದೇ ಹಕ್ಕು ಕೋರುವುದನ್ನು ತಡೆಯಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು.

ಈ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ಕುಟುಂಬ ನ್ಯಾಯಾಲಯಗಳ ಕಾಯ್ದೆಯ ಸೆಕ್ಷನ್ 7(1)(a) ಮತ್ತು 7(1)(b) ಅಡಿಯಲ್ಲಿ ವಿಚಾರಣೆಗೆ ಸ್ವೀಕರಿಸಿತ್ತು. ಇದನ್ನು ಪ್ರಶ್ನಿಸಿ ಶೋಭಾ ಹಾಗೂ ಮಕ್ಕಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಪಾರ್ವತಮ್ಮ ಅವರು 2020ರ ಫೆಬ್ರವರಿ 24ರಂದು ನಿಧನರಾಗಿದ್ದು, ಬಳಿಕ ಅವರ ಕಾನೂನು ವಾರಸುದಾರರು ಪ್ರಕರಣವನ್ನು ಮುಂದುವರಿಸಿದ್ದರು.

ಅರ್ಜಿದಾರರ ಪರ ವಕೀಲರು, ಇದು ಮೂಲತಃ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ಸಿವಿಲ್ ವ್ಯಾಜ್ಯವಾಗಿದ್ದು, ಕೌಟುಂಬಿಕ ನ್ಯಾಯಾಲಯಕ್ಕೆ ಇಂತಹ ಪ್ರಕರಣದ ವಿಚಾರಣೆ ನಡೆಸುವ ಅಧಿಕಾರವಿಲ್ಲ ಎಂದು ವಾದಿಸಿದ್ದರು. ಈ ವಾದವನ್ನು ಪರಿಗಣಿಸಿದ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ಮಹತ್ವದ ಸ್ಪಷ್ಟನೆ ನೀಡಿದೆ.

ಜನರಿಗೆ ಹೊಸದೇನೂ ಸಿಕ್ಕಿಲ್ಲ. ಭಾರತ್ ಜೋಡೋ ಕಾರ್ಯಕ್ರಮದಿಂದ ಕಾಂಗ್ರೆಸ್ ನಿರಾಶ್ರಿತರಿಗೆ ಲಾಭ: ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು ಹಳೆ ಸಿನಿಮಾದ ಪೋಸ್ಟರ್‌ ಬದಲಾದಂತಿದೆ. ಮುಖ್ಯಮಂತ್ರಿ ನಿವಾಸದ ಮುಂಭಾಗದ ಫಲಕದಲ್ಲಿ ಹೆಸರು ಬದಲಾಗಿದೆಯೇ ಹೊರತು ಜನರ ಕಷ್ಟಗಳು ನೀಗಿಲ್ಲ. ರಾಜ್ಯಕ್ಕೆ ಹೊಸ ಸಚಿವರು ಸಿಗುತ್ತಾರೆ ಎಂಬ ನಿರೀಕ್ಷೆ ಇದ್ದರೂ, ಹೊಸ ಮುಖಗಳು ಕಂಡಿಲ್ಲ. ಸಿದ್ದರಾಮಯ್ಯನವರ ಮಗ ಯತೀಂದ್ರ ಸಚಿವರಾಗಿ ಬಂದಿದ್ದಾರೆಯೇ ಹೊರತು ಹೊಸದೇನೂ ಇಲ್ಲ ಎಂದರು.

ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿದೆ. ಐಪಿಎಲ್‌ ಸಂಭ್ರಮಾಚರಣೆಯಲ್ಲಿ ಹನ್ನೊಂದು ಅಮಾಯಕರ ಹತ್ಯೆಯಾಯಿತು. ಭ್ರಷ್ಟಾಚಾರದ ನೋವಿನಿಂದ ಅಧಿಕಾರಿಗಳ ಸಾವು, ಸರ್ಕಾರದ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವು,

ಮೈಕ್ರೋ ಫೈನಾನ್ಸ್‌ ಒತ್ತಡದಿಂದ ಜನರ ಸಾವು, ಸಂಬಳ ಸಿಗದೆ ನೌಕರರ ಸಾವು, ಆಸ್ಪತ್ರೆ ಗೋಡೆ ಕುಸಿದು ಬೀದಿ ಬದಿ ವ್ಯಾಪಾರಿಗಳ ಸಾವು, ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಸ್ತೆಗಳಲ್ಲಿ ಗುಂಡಿಗಳ ಹಾವಳಿ ಹೀಗೆ ಅನೇಕ ಸಮಸ್ಯೆಗಳು ಇನ್ನೂ ಇದೆ. ಜನರು ಉತ್ತಮ ಆಡಳಿತ ಕೇಳಿದರೆ, ಕಾಂಗ್ರೆಸ್‌ ಪಕ್ಷ ಕುರ್ಚಿಯ ಬದಲಾವಣೆ ಮಾತ್ರ ಮಾಡಿದೆ ಎಂದರು.

ಬೆಂಗಳೂರಿನಲ್ಲಿ ನೂರಾರು ಕಟೌಟ್‌ಗಳನ್ನು ಅಳವಡಿಸಲಾಗಿದೆ. ಫಲಕ ಹಾಕಬೇಡಿ ಎಂದು ಸಿಎಂ
ಹೇಳಿದರೂ ಅವುಗಳನ್ನು ಅಳವಡಿಸಲಾಗಿದೆ. ಅಂದರೆ ಮುಖ್ಯಮಂತ್ರಿ ಏನೇ ಹೇಳಿದರೂ ಅದು ಅನುಷ್ಠಾನವಾಗುವುದಿಲ್ಲ ಎಂಬುದು ಸಾಬೀತಾಗಿದೆ.

ಮಹಿಳಾ ವಿರೋಧಿ ಕಾಂಗ್ರೆಸ್

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್‌ ವಿರೋಧಿಸಿದೆ. ನಿನ್ನೆ ನಡೆದ ಪದಗ್ರಹಣ ಸಮಾರಂಭದಲ್ಲಿ ಒಬ್ಬರೇ ಒಬ್ಬ ಮಹಿಳೆಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್‌ ಮಹಿಳೆಯರಿಗೆ ಮೋಸ ಮಾಡಿದೆ ಎಂದರು.

ಸಂವಿಧಾನದ ಪುಸ್ತಕ ಏಕೆ?

ಪ್ರಮಾಣವಚನದ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಸಂವಿಧಾನದ ಪುಸ್ತಕ ಹಿಡಿದುಕೊಂಡಿದ್ದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಸಿಎಂಗೆ ಎಲ್ಲ ಅಧಿಕಾರ ನೀಡಿದ್ದಾರೆ. ಆದರೆ ಸಚಿವ ಸಂಪುಟದಲ್ಲಿ ಡಿ.ಕೆ.ಶಿ ಕಡೆಗಿನ ಯಾವುದೇ ಶಾಸಕರು ಇಲ್ಲ. ಅಂದರೆ ಎಲ್ಲವನ್ನೂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್‌ ತೀರ್ಮಾನ ಮಾಡಿದೆ. ಡಿ.ಕೆ.ಶಿ ಅವರಿಗೆ ಯಾವುದೇ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ ಈಗಾಗಲೇ ಇ-ಖಾತಾ ಹೆಸರಲ್ಲಿ ದಂಧೆ ನಡೆಯುತ್ತಿದೆ. ಇದನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿದರೆ ಇನ್ನಷ್ಟು ದಂಧೆ ನಡೆಯುತ್ತದೆ. ಸರ್ವರ್‌ ಡೌನ್‌ ಎಂದು ಹೇಳಿ ಜನರನ್ನು ವಂಚಿಸಲಾಗುತ್ತಿದೆ. ಲಂಚ ಕೊಟ್ಟರೆ ಮಾತ್ರ ಸರ್ವರ್‌ ಕೆಲಸ ಮಾಡುತ್ತದೆ ಎಂದು ಹರಿಹಾಯ್ದರು.

ನೇಮಕದ ಬಗ್ಗೆ ಸುಳ್ಳು ಭರವಸೆ

56,000 ಹುದ್ದೆಗಳ ಸರ್ಕಾರಿ ನೇಮಕಾತಿ ಬಗ್ಗೆಯೂ ಸುಳ್ಳು ಹೇಳಲಾಗಿದೆ. ಈ ಹಿಂದೆಯೇ ಇದರ ಬಗ್ಗೆ ತೀರ್ಮಾನವಾಗಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ. ಇಷ್ಟೊಂದು ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಹಣಕಾಸು ಕೊರತೆ ಇದೆ. ಇಂತಹ ಸ್ಥಿತಿಯಲ್ಲಿ ಹೊಸ ನೇಮಕಾತಿ ಮಾಡಲು ಸಾಧ್ಯವೇ ಇಲ್ಲ ಎಂದರು.

ಕಾಂಗ್ರೆಸ್ ನಿರಾಶ್ರಿತರಿಗೆ ಭಾರತ್ ಜೋಡೊ ಸಂಘಟನೆ

ಭಾರತ್‌ ಜೋಡೋಗೂ ಸರ್ಕಾರಕ್ಕೂ ಏನು ಸಂಬಂಧವಿದೆ? ಇದರಿಂದ ಕಾಂಗ್ರೆಸ್‌ನ ನಿರಾಶ್ರಿತರಿಗೆ ಪ್ರಯೋಜನವಾಗಲಿದೆಯೇ ಹೊರತು ಯುವಜನರಿಗೆ ಉಪಯೋಗವಿಲ್ಲ. ಈಗಾಗಲೇ ಗುತ್ತಿಗೆದಾರರಿಗೆ ಬಾಕಿ ಕೊಡಬೇಕಿದೆ. ಆ ಹಣವನ್ನು ಕೊಟ್ಟರೆ ಸಾಕಿತ್ತು. ಉತ್ತರ ಕರ್ನಾಟಕದಲ್ಲಿ ಮಕ್ಕಳು ಶಾಲೆಯ ಒಳಗೆ ಹೋಗದಂತಹ ಸ್ಥಿತಿ ಇದೆ. ಇಂತಹ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಸಾಕಾಗಿದೆ.

ಸುಖಾಸುಮ್ಮನೆ ಘೋಷಣೆಗಳನ್ನು ಮಾಡಿದರೆ ಸಾಲುವುದಿಲ್ಲ. ಅಬಕಾರಿ ಬಿಟ್ಟರೆ ಎಲ್ಲ ಇಲಾಖೆಗಳಲ್ಲಿ ಆದಾಯ ಕಡಿಮೆಯಾಗಿದೆ. ಯೋಜನೆಗಳನ್ನು ಘೋಷಣೆ ಮಾಡಿ, ಅದನ್ನು ಜಾರಿ ಮಾಡದೆ ನಂತರ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪ ಮಾಡುತ್ತಾರೆ ಎಂದು ದೂರಿದರು.

ಹಣಕಾಸು ಶ್ವೇತಪತ್ರ ಮಂಡಿಸಿ

ಕೇರಳಂನ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್‌ ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿ- ಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅಶೋಕ್ ಅವರು ಟ್ವೀಟ್‌ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಬಿಟ್ಟುಹೋಗಿರುವ ಆರ್ಥಿಕ ಬಳುವಳಿ ಏನು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನರಿಗಿದೆ. ರಾಜ್ಯದ ಸಾಲ ಎಷ್ಟು ಹೆಚ್ಚಾಗಿದೆ? ಸರ್ಕಾರದ ಖಜಾನೆಯ ನಿಜವಾದ ಸ್ಥಿತಿಗತಿ ಏನು? ಅವೈಜ್ಞಾನಿಕ ಯೋಜನೆಗಳು, ಮತಬ್ಯಾಂಕ್ ರಾಜಕಾರಣ ಮತ್ತು ದುಂದುವೆಚ್ಚಗಳಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ಹಾನಿಯಾಗಿದೆ? ಮುಂದಿನ ಪೀಳಿಗೆಯ ಹೆಗಲ ಮೇಲೆ ಎಷ್ಟು ಸಾಲದ ಹೊರೆ ಹಾಕಲಾಗಿದೆ ಎಂದು ತಿಳಿಯಬೇಕಿದೆ.

ಮುಚ್ಚಿಡಲು, ಮರೆಮಾಚಲು ಏನೂ ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ವಿಧಾನಸಭೆಯಲ್ಲಿ ಹಣಕಾಸು ಶ್ವೇತಪತ್ರ ಮಂಡಿಸಬೇಕು. ಸತ್ಯವನ್ನು ಹೊರಗೆ ಬರಲು ಬಿಡಬೇಕು. ಕರ್ನಾಟಕಕ್ಕೆ ಪಾರದರ್ಶಕತೆ ಬೇಕು. ಕನ್ನಡಿಗರಿಗೆ ಉತ್ತರದಾಯಿತ್ವ ಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಸಿದ್ದರಾಮಯ್ಯ ಸರ್ಕಾರ ರಾಜ್ಯಕ್ಕೆ ಬಿಟ್ಟುಹೋಗಿರುವ ನಿಜವಾದ “ಸಾಕ್ಷಿಗುಡ್ಡೆ” ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, 3 ಕೋಟಿ ರೂಪಾಯಿ ಸುಲಿಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಅಪಹರಣಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯರಾತ್ರಿ ವೇಳೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ದಯಾನಂದ ರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಬಳಿ ತಡೆದ ಆರೋಪಿಗಳು, ಉಡುಗೊರೆ ನೀಡುವ ನೆಪದಲ್ಲಿ ಕಾರಿನ ಬಾಗಿಲು ತೆರೆಯುವಂತೆ ಮಾಡಿದ್ದಾರೆ. ಇದೇ ವೇಳೆ ಕಾರಿನೊಳಗೆ ನುಗ್ಗಿದ ಆರೋಪಿ ಗನ್ ತೋರಿಸಿ ಬೆದರಿಕೆ ಹಾಕಿ ವಾಹನವನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದಾನೆ.

ನಂತರ ಅತ್ತಿಬೆಲೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ‘ನಿಮ್ಮ ಹತ್ಯೆಗೆ 10 ಕೋಟಿ ರೂಪಾಯಿ ಸುಪಾರಿ ಬಂದಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಉಳಿಸಿಕೊಳ್ಳಲು ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಮಾಡಿಕೊಂಡಾಗ, ಆರೋಪಿಗಳು 3 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬಳಿಕ 2 ಕೋಟಿ ರೂಪಾಯಿಗೆ ಇಳಿದಿದ್ದರು.

ಬೆಳಗ್ಗೆ ಬ್ಯಾಂಕ್‌ನಿಂದ ಹಣ ತೆಗೆಯುವುದಾಗಿ ಹೇಳಿದ ದಯಾನಂದ ರೆಡ್ಡಿ ಅವರನ್ನು ಆರೋಪಿಗಳು ಬಿಡುಗಡೆ ಮಾಡಿದ್ದರು. ಬಳಿಕ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, 3 ಕೋಟಿ ರೂಪಾಯಿ ಸುಲಿಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಅಪಹರಣಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯರಾತ್ರಿ ವೇಳೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ದಯಾನಂದ ರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಬಳಿ ತಡೆದ ಆರೋಪಿಗಳು, ಉಡುಗೊರೆ ನೀಡುವ ನೆಪದಲ್ಲಿ ಕಾರಿನ ಬಾಗಿಲು ತೆರೆಯುವಂತೆ ಮಾಡಿದ್ದಾರೆ. ಇದೇ ವೇಳೆ ಕಾರಿನೊಳಗೆ ನುಗ್ಗಿದ ಆರೋಪಿ ಗನ್ ತೋರಿಸಿ ಬೆದರಿಕೆ ಹಾಕಿ ವಾಹನವನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದಾನೆ.

ನಂತರ ಅತ್ತಿಬೆಲೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ‘ನಿಮ್ಮ ಹತ್ಯೆಗೆ 10 ಕೋಟಿ ರೂಪಾಯಿ ಸುಪಾರಿ ಬಂದಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಉಳಿಸಿಕೊಳ್ಳಲು ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಮಾಡಿಕೊಂಡಾಗ, ಆರೋಪಿಗಳು 3 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬಳಿಕ 2 ಕೋಟಿ ರೂಪಾಯಿಗೆ ಇಳಿದಿದ್ದರು.

ಬೆಳಗ್ಗೆ ಬ್ಯಾಂಕ್‌ನಿಂದ ಹಣ ತೆಗೆಯುವುದಾಗಿ ಹೇಳಿದ ದಯಾನಂದ ರೆಡ್ಡಿ ಅವರನ್ನು ಆರೋಪಿಗಳು ಬಿಡುಗಡೆ ಮಾಡಿದ್ದರು. ಬಳಿಕ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಯುವಕನನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಂಧಿತನನ್ನು ಸೈಪುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ಜೂನ್ 2ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೈಪುಲ್ ಮೊಂಡಲ್ ವೈಟ್‌ಫೀಲ್ಡ್ ಪ್ರದೇಶದಲ್ಲಿ ರಸ್ತೆ ಬದಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಜೂನ್ 2ರ ಮುಂಜಾನೆ ವಿದ್ಯಾರ್ಥಿನಿಯೊಬ್ಬರು ಟೀ ಕುಡಿದು ತಮ್ಮ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆಕೆಯನ್ನು ಗಮನಿಸಿದ ಆರೋಪಿ ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದು, ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳೀಯರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಘಟನೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ; ಇಂದು ಸಂಜೆಯೊಳಗೆ ಖಾತೆ ಹಂಚಿಕೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಗೃಹ ಸಚಿವ ಸ್ಥಾನದ ರೇಸ್‌ನಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಪಕ್ಷ ಅಥವಾ ಸರ್ಕಾರ ಯಾವ ಜವಾಬ್ದಾರಿಯನ್ನು ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಕರ್ನಾಟಕದ ಜನರಿಗೆ ಸೇವೆ ಸಲ್ಲಿಸುವುದೇ ಮುಖ್ಯ. ಅದಕ್ಕಾಗಿ ಯಾವುದೇ ಸ್ಥಾನಮಾನ ದೊಡ್ಡದು ಅಥವಾ ಚಿಕ್ಕದು ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಈಗಾಗಲೇ ಚರ್ಚೆ ನಡೆಸಿದ್ದು, ಇಂದು ಸಂಜೆಯೊಳಗೆ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗೃಹ ಸಚಿವ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಮಾತನಾಡಿದ ಅವರು, ಯಾರು ಗೃಹ ಸಚಿವರಾದರೂ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಅದನ್ನು ಮೀರಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಮರ್ಪಕ ಅವಕಾಶ ನೀಡಿಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಅವರಿಗೆ ಇಷ್ಟ ಬಂದಂತೆ ಮಾತನಾಡಲಿ. ಮೊದಲು ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ತಮ್ಮ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಿ. ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರನ್ನು ಸಹಸಂಚಾಲಕರನ್ನಾಗಿ ನೇಮಿಸಲಿ. ನಂತರ ಈ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ತಿರುಗೇಟು ನೀಡಿದರು.

error: Content is protected !!