Home Blog Page 220

ಬೆಂಗಳೂರು| ಬೆಂಕಿ ಅವಘಡ; ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

0

ಬೆಂಗಳೂರು:- ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು ಮೂಲದವರಾದ ಶರ್ಮಿಳಾ (34) ಮೃತ ದುರ್ದೈವಿ. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ ವೇರ್ ಕಂಪನಿಯಲ್ಲಿ ಎಂಜಿನಿಯರ್ ಕೆಲಸ ಮಾಡ್ತಿದ್ದರು.

ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಮೊನ್ನೆ ರಾತ್ರಿ 10.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದೆ. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್ ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು.

ಬೆಂಕಿ ಬಿದ್ದಿದ್ದ ಪರಿಣಾಮ ರೂಮಿನಿಂದ ಹೊರ ಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ‌ ವ್ಯಕ್ತವಾಗಿದೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಳ್ಳಾರಿ ಫೈರಿಂಗ್ ಕೇಸ್: ಜನಾರ್ದನ ರೆಡ್ಡಿ ಮನೆ ಬಳಿ ಮತ್ತೊಂದು ಬುಲೆಟ್ ಪತ್ತೆ!

0

ಬಳ್ಳಾರಿ:- ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಘಟನೆ ನಡೆದ ಐದು ದಿನಗಳ ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಸೋಕೋ ತಂಡಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ 9 ಎಂಎಂ ಬುಲೆಟ್ ಪತ್ತೆಯಾಗಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಿಂದ ಆಗಮಿಸಿದ ವಿಶೇಷ ತನಿಖಾ ತಂಡಗಳು ಫೈರಿಂಗ್ ನಡೆದ ಸ್ಥಳ ಮತ್ತು ರೆಡ್ಡಿ ನಿವಾಸದ ಸುತ್ತಮುತ್ತಲ ಪ್ರದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಬುಲೆಟ್ ಎಷ್ಟು ದೂರದಿಂದ ಹಾರಿಸಲಾಗಿದೆ ಎಂಬುದರ ಬಗ್ಗೆ ಅಳತೆ ನಡೆಸಿವೆ.

ಗಲಾಟೆ ಪೂರ್ವ ನಿಯೋಜಿತ ಕೃತಿಯೇ ಎಂಬುದನ್ನು ದೃಢಪಡಿಸುವಂತೆ ಎರಡೂ ಕಡೆಯವರಿಂದ ಕಲ್ಲು, ದೊಣ್ಣೆಗಳ ಬಳಕೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇತ್ತ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಕಾಂಗ್ರೆಸ್ ಈ ವಿಚಾರದಲ್ಲಿ ಮೌನ ವಹಿಸಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಸೋಮನಾಥ ದೇವಸ್ಥಾನಕ್ಕೆ ಜ.11ರಂದು ಪ್ರಧಾನಿ ಮೋದಿ ಭೇಟಿ!

0

ನವದೆಹಲಿ:- ಜನವರಿ 11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ‘ಸೋಮನಾಥ ಸ್ವಾಭಿಮಾನ ಪರ್ವ’ದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜನವರಿ 8ರಿಂದ 11ರವರೆಗೆ ನಡೆಯಲಿರುವ ಈ ಪರ್ವವು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಒಳಗೊಂಡಿದ್ದು, ಭಾರತದ ಪ್ರಾಚೀನ ಸಾಂಸ್ಕೃತಿಕ ಪರಂಪರೆ ಮತ್ತು ರಾಷ್ಟ್ರೀಯ ಸ್ವಾಭಿಮಾನವನ್ನು ಬಲಪಡಿಸುವ ಉದ್ದೇಶ ಹೊಂದಿದೆ. ಧಾರ್ಮಿಕ ಅನುಷ್ಠಾನಗಳು, ಆಧ್ಯಾತ್ಮಿಕ ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಜಾಗೃತಿ ಅಭಿಯಾನಗಳು ಈ ಅವಧಿಯಲ್ಲಿ ನಡೆಯಲಿವೆ.

ಮೊಹಮ್ಮದ್ ಘಜನಿ ಸೋಮನಾಥ ದೇವಾಲಯವನ್ನು ಧ್ವಂಸಗೊಳಿಸಿದ 1000 ವರ್ಷಗಳನ್ನು ಸ್ಮರಿಸುವ ಈ ಕಾರ್ಯಕ್ರಮವು, ಅನೇಕ ಆಕ್ರಮಣಗಳ ನಡುವೆಯೂ ಪುನಃಪುನಃ ನಿರ್ಮಾಣಗೊಂಡು ನಿಂತಿರುವ ಸೋಮನಾಥ ದೇವಾಲಯದ ಸನಾತನ ಪರಂಪರೆ ಮತ್ತು ಆಸ್ತಿಕತೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿಯಲಿದೆ.

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮನೆ ಮೇಲೆ ಗುಂಡಿನ ದಾಳಿ; ಶಂಕಿತ ಅರೆಸ್ಟ್

0

ವಾಷಿಂಗ್ಟನ್‌: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರ ಓಹಿಯೊ ರಾಜ್ಯದ ಸಿನ್ಸಿನಾಟಿಯಲ್ಲಿರುವ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ವರದಿಯಾಗಿದೆ.

ದಾಳಿಯಲ್ಲಿ ಮನೆಯ ಕಿಟಕಿ ಗಾಜುಗಳು ಒಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ನಡೆದ ವೇಳೆ ವ್ಯಾನ್ಸ್ ಹಾಗೂ ಅವರ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ನಡೆದ ನಂತರ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿ ತೀವ್ರ ವಿಚಾರಣೆ ಆರಂಭಿಸಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆದ ಸಭೆಯ ಬಳಿಕ ವ್ಯಾನ್ಸ್ ವೆಸ್ಟ್ ಪಾಮ್ ಬೀಚ್‌ನಲ್ಲಿದ್ದ ಗಾಲ್ಫ್ ಕ್ಲಬ್‌ನಲ್ಲಿ ಇದ್ದರು ಎನ್ನಲಾಗಿದೆ. ಬಳಿಕ ಅವರು ತಮ್ಮ ಸಿನ್ಸಿನಾಟಿ ನಿವಾಸಕ್ಕೆ ಮರಳಿದ್ದಾರೆ. ಶಂಕಿತ ವ್ಯಕ್ತಿ ಮನೆಯ ಒಳಗೆ ಪ್ರವೇಶಿಸದೆ ದೂರದಿಂದಲೇ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಇದು ವ್ಯಾನ್ಸ್ ಕುಟುಂಬದ ವಿರುದ್ಧ ಉದ್ದೇಶಿತ ದಾಳಿಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂಬಂಧ ಅಮೆರಿಕದ ಸೀಕ್ರೆಟ್ ಸರ್ವೀಸ್ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ.

ಇನ್ಮುಂದೆ IRCTC ಟಿಕೆಟ್ ಬುಕ್ ಮಾಡಲು ಆಧಾರ್ ಲಿಂಕ್ ಕಡ್ಡಾಯ! 3 ಹಂತಗಳಲ್ಲಿ ನಿಯಮ ಜಾರಿ

0

ನವದೆಹಲಿ: ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾಗೂ ಟಿಕೆಟ್ ದಲ್ಲಾಳಿಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್ಸಿಟಿಸಿ (IRCTC) ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಆನ್‌ಲೈನ್ ರೈಲ್ವೇ ಟಿಕೆಟ್ ಬುಕ್ ಮಾಡುವಲ್ಲಿ ನಿರ್ಬಂಧ ಎದುರಾಗಲಿದೆ.

ಈ ನಿಯಮವನ್ನು ಮೂರು ಹಂತಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಮೊದಲ ಹಂತವು 2025ರ ಡಿಸೆಂಬರ್ 29ರಂದು ಜಾರಿಯಾಗಿದ್ದು, ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಕೇವಲ ಆಧಾರ್ ಲಿಂಕ್ ಆಗಿರುವ ಖಾತೆಗಳಿಂದಲೇ ಟಿಕೆಟ್ ಬುಕ್ ಮಾಡಲು ಅವಕಾಶ ನೀಡಲಾಗಿತ್ತು. ಆಧಾರ್ ಲಿಂಕ್ ಇಲ್ಲದವರು ಮಧ್ಯಾಹ್ನ 12 ಗಂಟೆಯ ನಂತರ ಬುಕಿಂಗ್ ಮಾಡಬಹುದಾಗಿತ್ತು.

ಎರಡನೇ ಹಂತವು ಜನವರಿ 5ರಿಂದ ಜಾರಿಯಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೇವಲ ಆಧಾರ್ ಲಿಂಕ್ ಮಾಡಿದ ಐಆರ್ಸಿಟಿಸಿ ಖಾತೆಗಳಿಂದ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಆಧಾರ್ ಲಿಂಕ್ ಮಾಡದ ಖಾತೆದಾರರು ಸಂಜೆ 4 ಗಂಟೆಯ ನಂತರ ಮಾತ್ರ ಬುಕಿಂಗ್ ಮಾಡಬಹುದು.

ಮೂರನೇ ಮತ್ತು ಅಂತಿಮ ಹಂತವು ಜನವರಿ 12ರಿಂದ ಜಾರಿಯಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಅಂದರೆ ಇಡೀ ದಿನ ಕೇವಲ ಆಧಾರ್ ಲಿಂಕ್ ಮಾಡಿದ ಖಾತೆಗಳಿಂದಲೇ ಆನ್‌ಲೈನ್ ಟಿಕೆಟ್ ಬುಕ್ ಮಾಡಲು ಅವಕಾಶ ನೀಡಲಾಗುತ್ತದೆ.

ಈ ಹೊಸ ನಿಯಮವು ಕೇವಲ ಆನ್‌ಲೈನ್ ಬುಕಿಂಗ್‌ಗೆ ಮಾತ್ರ ಅನ್ವಯವಾಗುತ್ತದೆ. ಐಆರ್ಸಿಟಿಸಿ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಟಿಕೆಟ್ ಕಾಯ್ದಿರಿಸುವವರಿಗೆ ಈ ನಿರ್ಬಂಧ ಇರುತ್ತದೆ. ಆದರೆ ರೈಲು ನಿಲ್ದಾಣಗಳ ಕೌಂಟರ್‌ಗಳಲ್ಲಿ ಟಿಕೆಟ್ ಖರೀದಿಸುವ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಈ ಕ್ರಮದಿಂದ ಫೇಕ್ ಖಾತೆಗಳು ಹಾಗೂ ದಲ್ಲಾಳಿಗಳ ಮೂಲಕ ನಡೆಯುವ ಬೃಹತ್ ಟಿಕೆಟ್ ಬುಕಿಂಗ್ ನಿಯಂತ್ರಣಕ್ಕೆ ಬರಲಿದ್ದು, ನಿಜವಾದ ಪ್ರಯಾಣಿಕರಿಗೆ ಕನ್ಫರ್ಮ್ ಟಿಕೆಟ್ ಪಡೆಯುವ ಅವಕಾಶ ಹೆಚ್ಚಾಗಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಆಧಾರ್ ಲಿಂಕ್ ಮಾಡುವ ವಿಧಾನ:
ಐಆರ್ಸಿಟಿಸಿ ವೆಬ್‌ಸೈಟ್ ಅಥವಾ ಆಪ್‌ನಲ್ಲಿ ಲಾಗಿನ್ ಆಗಿ, ‘My Profile’ ವಿಭಾಗಕ್ಕೆ ಹೋಗಿ ‘Aadhaar KYC’ ಆಯ್ಕೆಯನ್ನು ಆಯ್ಕೆ ಮಾಡಬೇಕು. ನಂತರ ಆಧಾರ್ ಸಂಖ್ಯೆಯನ್ನು ನಮೂದಿಸಿ, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್‌ಗೆ ಬರುವ OTP ಮೂಲಕ ಪರಿಶೀಲನೆ ಪೂರ್ಣಗೊಳಿಸಬಹುದು.

ಪ್ರಯಾಣಿಕರು ಯಾವುದೇ ತೊಂದರೆ ತಪ್ಪಿಸಲು ಶೀಘ್ರದಲ್ಲೇ ತಮ್ಮ ಐಆರ್ಸಿಟಿಸಿ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿಕೊಳ್ಳುವಂತೆ ರೈಲ್ವೇ ಇಲಾಖೆ ಸಲಹೆ ನೀಡಿದೆ. ಇದರಿಂದ ಟಿಕೆಟ್ ಬುಕಿಂಗ್ ಇನ್ನಷ್ಟು ಸುಲಭ ಹಾಗೂ ಸುರಕ್ಷಿತವಾಗಲಿದೆ.

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ: ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು

0

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಮೃತರಾದ ಗಗನ್ (27) ಚನ್ನರಾಯಪಟ್ಟಣ ಮೂಲದವರಾಗಿದ್ದು, ಮಾದನಾಯಕನಹಳ್ಳಿಯ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಮೃತ ದರ್ಶನ್ (26) ಕೋಳಿ ಸಪ್ಲೈ ಮಾಡುವ ವಾಹನದ ಚಾಲಕರಾಗಿದ್ದರು.

ಇಬ್ಬರೂ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿರುವ ಸ್ನೇಹಿತನ ರೂಮ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ಎದುರಿನಿಂದ ಬಂದ ಬೊಲೆರೋ ವಾಹನವು ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಡಾಲಿ ಧನಂಜಯ್ ಹೊಸ ಇನಿಂಗ್ಸ್: ನಿರ್ಮಾಪಕನಾಗಿ ‘ಹೆಗ್ಗಣ ಮುದ್ದು’ ಘೋಷಣೆ

ಡಾಲಿ ಧನಂಜಯ್ ಮದುವೆಯಾದ ಬಳಿಕ ನಾಯಕನಾಗಿ ತೆರೆಮೇಲೆ ಕಾಣೆಯಾಗಿದ್ದಾರೆ ಎಂಬ ಚರ್ಚೆ ಅಭಿಮಾನಿಗಳ ವಲಯದಲ್ಲಿ ಹೆಚ್ಚಾಗಿದೆ. ವಾಸ್ತವವಾಗಿ, ಡಾಲಿ ನಾಯಕನಾಗಿ ನಟಿಸಿದ ಕೊನೆಯ ಕನ್ನಡ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದೆ. ಅವರು ಈಗ ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದರೂ, ಯಾವ ಚಿತ್ರವೂ ಇನ್ನೂ ಬಿಡುಗಡೆಯ ಹಂತ ತಲುಪಿಲ್ಲ.

ಈ ಹಿನ್ನಲೆಯಲ್ಲಿ ಡಾಲಿ ಧನಂಜಯ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ಈ ಬಾರಿ ಅವರು ನಟನಾಗಿ ಅಲ್ಲ, ನಿರ್ಮಾಪಕನಾಗಿ ಮುಂದಾಗಿದ್ದಾರೆ. ‘ಡಾಲಿ ಪಿಕ್ಚರ್ಸ್’ ಬ್ಯಾನರ್ ಮೂಲಕ ಈಗಾಗಲೇ ವಿಭಿನ್ನ ಹಾಗೂ ಕಥಾ ಪ್ರಧಾನ ಸಿನಿಮಾಗಳನ್ನು ನಿರ್ಮಿಸಿರುವ ಡಾಲಿ, ಮತ್ತೆ ಅದೇ ಹಾದಿಯಲ್ಲಿ ಸಾಗಿದ್ದಾರೆ.

ಡಾಲಿ ಪಿಕ್ಚರ್ಸ್‌ನ ಸಿನಿಮಾಗಳು ಮಾಸ್ ಅಥವಾ ಕಮರ್ಷಿಯಲ್ ಸೂತ್ರಗಳಿಗೆ ಸೀಮಿತವಾಗದೆ, ಸಾಮಾನ್ಯ ಪ್ರೇಕ್ಷಕರಿಗೆ ತಟ್ಟುವ ಕಥೆಗಳಿಗೆ ಆದ್ಯತೆ ನೀಡುತ್ತಿವೆ. ಜೊತೆಗೆ ಹೊಸ ನಿರ್ದೇಶಕರು, ಹೊಸ ಕಲಾವಿದರಿಗೆ ವೇದಿಕೆ ನೀಡುತ್ತಿರುವುದು ಈ ಸಂಸ್ಥೆಯ ಮತ್ತೊಂದು ವಿಶೇಷತೆ.

ಇದೀಗ ಡಾಲಿ ಪಿಕ್ಚರ್ಸ್‌ನಿಂದ ‘ಹೆಗ್ಗಣ ಮುದ್ದು’ ಹೆಸರಿನ ಹೊಸ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಡಾಲಿಯ ಆಪ್ತ ಮಿತ್ರ ಮೈಸೂರು ಪೂರ್ಣ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಟ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಂಡಿದ್ದಾರೆ. ‘ವೇದ’ ಸಿನಿಮಾದಲ್ಲಿ ಅಭಿನಯಿಸಿ ಗಮನ ಸೆಳೆದಿದ್ದ ಅದಿತಿ ಸಾಗರ್‌ಗೆ ಇದು ಮತ್ತೊಂದು ಪ್ರಮುಖ ಅವಕಾಶವಾಗಿದೆ.

‘ಹೆತ್ತವರಿಗೆ ಹೆಗ್ಗಣ ಮುದ್ದು’ ಎಂಬ ಗಾದೆಯಿಂದ ಪ್ರೇರಣೆ ಪಡೆದ ಈ ಸಿನಿಮಾದಲ್ಲಿ, ವ್ಯಕ್ತಿಯ ಅಂತರಂಗದ ಮೌಲ್ಯಗಳನ್ನು ಪ್ರಶ್ನಿಸುವ ಕಥಾಹಂದರ ಇದೆ. ಕುದುರೆಯೋ ಅಥವಾ ಹೆಗ್ಗಣವೋ ಎಂಬ ಜಿಜ್ಞಾಸೆಯೇ ಸಿನಿಮಾದ ಕೇಂದ್ರಬಿಂದು. ಅವಿನಾಶ್ ಬಳೆಕ್ಕಳ ನಿರ್ದೇಶನ ಮಾಡಿರುವ ಈ ಚಿತ್ರ, ಅವರ ಮೊದಲ ನಿರ್ದೇಶನದ ಪ್ರಯತ್ನವಾಗಿದೆ.

ಚಿತ್ರೀಕರಣ ಬಹುತೇಕ ಮುಗಿದಿದ್ದು, ‘ಹೆಗ್ಗಣ ಮುದ್ದು’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದು ಡಾಲಿ ಧನಂಜಯ್ ನಿರ್ಮಾಣದ ಆರನೇ ಸಿನಿಮಾ. ತಮ್ಮ ನಿರ್ಮಾಣದ ಚಿತ್ರಗಳಲ್ಲಿ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿರುವ ಡಾಲಿ, ಈ ಸಿನಿಮಾದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇತ್ತ ನಟನಾಗಿ ಡಾಲಿ ‘ಜಿಂಗೊ’, ‘ಹಲಗಲಿ’, ‘ಅಣ್ಣ ಫ್ರಂ ಮೆಕ್ಸಿಕೊ’, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಮತ್ತು ‘ಉತ್ತರಕಾಂಡ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಸರ್ಕಾರದಿಂದ ಶೂಟೌಟ್ ಮುಚ್ಚಿ ಹಾಕಲು ಷಡ್ಯಂತ್ರ: ಹೆಚ್.ಡಿ. ಕುಮಾರಸ್ವಾಮಿ ಆರೋಪ

0

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಕಾರ್ಯಕರ್ತ ರಾಜಶೇಖರ್ ಹತ್ಯೆ ಒಂದೆಡೆ, ಆದರೆ ಸ್ವಪಕ್ಷದ ಕಾರ್ಯಕರ್ತನ ಕೊಲೆಯನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದು ನಾಚುಗೇಡು. ಅದಕ್ಕಾಗಿ ಆ ನತದೃಷ್ಟ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಏನು ಫಲಿತಾಂಶ ಹೊರಬಂತು? ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಏನು ಮಾಹಿತಿ ಇದೆ? ಎಂಬುದನ್ನು ಸರಕಾರ ಹೇಳಬೇಕು. ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜಶೇಖರ ಅವರ ದೇಹವನ್ನು ಎರಡು ಸಲ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಅವರು ಹೇಳಿದರು.

2ನೇ ಬಾರಿ ಪೋಸ್ಟ್ ಮಾರ್ಟಮ್ ಯಾಕೆ ಮಾಡಿದಿರಿ? 2ನೇ ಬಾರಿ ಪೋಸ್ಟ್ ಮಾರ್ಟಮ್ ಮಾಡಲಿಕ್ಕೆ ಯಾರು ಒತ್ತಡ ಹೇರಿದರು? ಮತ್ತೊಂದು ಬಾರಿ ಪರೀಕ್ಷೆಗೆ ಯಾರು ಆದೇಶ ಮಾಡಿದರು? ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ತಮಗೆ ಅನುಕೂಲಕರ ವರದಿ ಬರಲಿಲ್ಲ ಎಂದು ಅಲ್ಲಿಗೆ ‘ಸೂರ್ಯನ ಬೆಳಕು’ ಏನಾದರೂ ಬಿದ್ದಿತ್ತಾ? ಎಂದು ಸಚಿವ ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನೀವು ಸತ್ಯವಂತರಲ್ಲವೇ? ದಿನನಿತ್ಯ ಜಾಹೀರಾತುಗಳಲ್ಲಿ ‘ಸತ್ಯಮೆಯ ಜಯತೇ’ ಎಂದು ಕೊಚ್ಚಿಕೊಳ್ಳುತ್ತೀರಿ. ಈಗ ಸತ್ಯ ಹೇಳಿ. ರಾಜ್ಯದ ಜನತೆಗೆ ಸತ್ಯ ಏನೆಂದು ತಿಳಿಸಬೇಕಲ್ಲವೇ? ಎರಡನೇ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ ಎಂಬುದನ್ನು ಹೇಳಿ? ಮುಖ್ಯಮಂತ್ರಿಗಳೇ ಜನತೆಗೆ ಸತ್ಯವನ್ನು ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ದೇಹದಲ್ಲಿ ಸಣ್ಣಪುಟ್ಟ ಚೂರು ಪತ್ತೆಯಾಯಿತು ಎಂಬ ಮಾಹಿತಿ ಇದೆ. ಎರಡನೇ ಶವ ಪರೀಕ್ಷೆಯನ್ನು ಮಾಡಿಸುವ ಮೂಲಕ ಸ್ವತಃ ಜನಾರ್ದನ ರೆಡ್ಡಿ ಅವರೇ ಗುಂಡು ಹೊಡೆದಿದ್ದು ಆರೋಪ ಮಾಡಿ ಕಥೆ ಅವರನ್ನು ಫಿಕ್ಸ್ ಮಾಡಲು ಷಡ್ಯಂತ್ರ್ಯ ಮಾಡಿದ್ದಾರೆ. ಆದರೆ, ಎರಡನೇ ಮರಣೋತ್ತರ ಪರೀಕ್ಷೆ ಈ ಸರಕಾರಕ್ಕೆ, ಸೂರ್ಯನ ಬೆಳಕು ಬೀಳಿಸಲು ಹೋದವರಿಗೆ ಉಲ್ಟಾ ಹೊಡೆದಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಸರಕಾರದ ತನಿಖೆ ನಿರುಪಯುಕ್ತ:

ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಹೀಗೆ ಹೀಗೆ ಆಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ನಮ್ಮ ಪಕ್ಷ ಶಾಸಕ ಭರತ್ ರೆಡ್ಡಿ ಪರ ನಿಲ್ಲುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳುತ್ತಾರೆ. ಸತೀಶ್‌ರೆಡ್ಡಿ ಗನ್ ಮ್ಯಾನ್ ಗನ್‌ನಿಂದ ಫೈಯರ್ ಆಗಿದೆ ಅಂತ ಸ್ವತಃ ಸಿಎಂ ಅವರೇ ಹೇಳಿದ್ದಾರೆ.

ಆದರೆ ಗೃಹ ಸಚಿವರು ಆತನ ಬಂಧನಕ್ಕೆ ಆದೇಶ ಮಾಡದೇ ಹೇಳಿಕೆಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಹೀಗಿರುವಾಗ ಈ ಸರ್ಕಾರ ಯಾವ ರೀತಿ ತನಿಖೆ ಮಾಡುತ್ತದೆ? ಇವರ ತನಿಖೆಯಿಂದ ಸತ್ಯಾಂಶ ಹೊರಕ್ಕೆ ಬರಲು ಸಾಧ್ಯವೇ ಎಂದು ಸಚಿವರು ಪ್ರಶ್ನಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಬಳ್ಳಾರಿ ಶೂಟೌಟ್ ಪ್ರಕರಣಕ್ಕೆ ಸಮಾಧಿ ಕಟ್ಟಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದ ಕುಮಾರಸ್ವಾಮಿ ಅವರು; ಜನಾರ್ದನ ರೆಡ್ಡಿ ಅವರು ಭದ್ರತೆ ಕೊಡಿ ಎಂದು ಕೇಂದ್ರದ ಗೃಹ ಸಚಿವರಿಗೆ ಪತ್ರ ಬರೆದರೆ ಅದನ್ನು ಈ ಡಿಸಿಎಂ ಲೇವಡಿ ಮಾಡುತ್ತಾರೆ.

ಬೇಕಾದರೆ ಅಮೆರಿಕ, ಇರಾನ್‌‌ನಿಂದ ಭದ್ರತೆ ಮಾಡಿಸಿಕೊಳ್ಳಲಿ ಅಥವಾ ನೂರು ಜನ ಬಿಜೆಪಿ ಕಾರ್ಯಕರ್ತರನ್ನು ಭದ್ರತೆಗೆ ನಿಯೋಜಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಬಾಯಲ್ಲಿ ಬರುವ ಮಾತೇ ಇದು ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಸಚಿವ ಈಶ್ವರ ಖಂಡ್ರೆ ಮುಂದೆಯೇ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್ಸಿ!

0

ಬೀದರ್:ಜಿಲ್ಲಾತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ವೇಳೆ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿದ್ದ ವೇಳೆ, ಸಭೆಯ ಆರಂಭದಲ್ಲೇ ಲೇಔಟ್ ವಿಚಾರವಾಗಿ ಹುಮನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಪರಿಷತ್ ಬಿಜೆಪಿ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಮಾತಿನ ಚಕಮಕಿ ಆರಂಭವಾಯಿತು.

ವಾಗ್ವಾದ ತೀವ್ರಗೊಂಡಾಗ ಪರಸ್ಪರ ಅವಾಚ್ಯ ಪದ ಬಳಸಿ ನಿಂದನೆ ನಡೆಸಿದ್ದು, ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಹರಸಾಹಸ ಪಟ್ಟರು. ವೇಳೆ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಮಧ್ಯಪ್ರವೇಶಿಸಿ ಭೀಮರಾವ್ ಪಾಟೀಲ್ ಬೆಂಬಲಕ್ಕೆ ನಿಂತರು. ಬಳಿಕ ಸಭೆಯನ್ನು ಶಾಂತಗೊಳಿಸಿ ಮುಂದುವರಿಸಲಾಯಿತು.

ಕುಡಿಯುವ ನೀರಿಗೆ ಚರಂಡಿ ನೀರಿನ ಮಿಶ್ರಣ: ಇಂದೋರ್‌ʼನಲ್ಲಿ ಆತಂಕ, 42 ಮಂದಿ ಆಸ್ಪತ್ರೆಗೆ ದಾಖಲು

0

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಆರೋಗ್ಯ ದುರಂತ ಮತ್ತೊಮ್ಮೆ ಆತಂಕ ಮೂಡಿಸಿದೆ. ಭಾಗೀರಥಪುರ ಪ್ರದೇಶದಲ್ಲಿ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣಗೊಂಡ ಪರಿಣಾಮ ಅತಿಸಾರ ಹರಡಿದ್ದು, 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 11 ಮಂದಿಯ ಸ್ಥಿತಿ ಗಂಭೀರವಾಗಿದೆ.

ಈ ಘಟನೆ ಇಂದೋರ್‌ಗೆ ಹೊಸದಲ್ಲ. ಸುಮಾರು 30 ವರ್ಷಗಳ ಹಿಂದೆ ಸುಭಾಷ್ ಚೌಕ್‌ನ ನೀರಿನ ಟ್ಯಾಂಕ್‌ನಲ್ಲಿ ಕೊಳೆತ ಶವ ಪತ್ತೆಯಾಗಿದ್ದ ಘಟನೆ ಇಡೀ ನಗರವನ್ನೇ ಬೆಚ್ಚಿಬೀಳಿಸಿತ್ತು. ಆ ಟ್ಯಾಂಕ್‌ನಿಂದ ಪಶ್ಚಿಮ ಇಂದೋರ್‌ನ ಸಾವಿರಾರು ಮನೆಗಳಿಗೆ ನೀರು ಪೂರೈಕೆಯಾಗುತ್ತಿತ್ತು. ಜನರು ನಿರಂತರವಾಗಿ ಅಸ್ವಸ್ಥರಾಗುತ್ತಿದ್ದರೂ, ನೀರಿನ ಮೂಲವೇ ಸಮಸ್ಯೆಯೆಂಬುದು ತಡವಾಗಿ ಬೆಳಕಿಗೆ ಬಂದಿತ್ತು.

ಇಂದಿನ ಸ್ಥಿತಿಯೂ ಅದಕ್ಕಿಂತ ಕಡಿಮೆಯಿಲ್ಲ. ಭಾಗೀರಥಪುರದಲ್ಲಿ ಆರೋಗ್ಯ ಇಲಾಖೆ ನಡೆಸುತ್ತಿರುವ ಸಮೀಕ್ಷೆಯ ವೇಳೆ 2,354 ಮನೆಗಳ 9,416 ಜನರನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ 20 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾಂಕ್ರಾಮಿಕ ರೋಗ ಹರಡಿದ ನಂತರ ಇದುವರೆಗೆ 398 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದರೆ ಸೋಂಕಿನ ಮೂಲ ಇನ್ನೂ ಸ್ಪಷ್ಟವಾಗಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ತುರ್ತು ಕ್ರಮ ಕೈಗೊಂಡಿವೆ.

error: Content is protected !!