Home Blog Page 225

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ರೂ. ನಷ್ಟ: ಟಿ20 ವಿಶ್ವಕಪ್‌ʼನಲ್ಲಿ ICCಗೆ ಭಾರೀ ಹೊಡೆತ

0

ದುಬೈ: ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ಸುಮಾರು 2,200 ಕೋಟಿ ರೂ. ಆರ್ಥಿಕ ನಷ್ಟ ಸಂಭವಿಸುವ ಸಾಧ್ಯತೆಯಿದೆ. ಈ ನಷ್ಟವು ಕೇವಲ ಐಸಿಸಿಗೆ ಮಾತ್ರವಲ್ಲದೆ ಪಾಕಿಸ್ತಾನ ಕ್ರಿಕೆಟ್, ಬಿಸಿಸಿಐ, ಶ್ರೀಲಂಕಾ ಕ್ರಿಕೆಟ್ ಮಂಡಳಿ, ಟೂರ್ನಿ ಪ್ರಾಯೋಜಕರು, ಪ್ರಸಾರಕರು ಹಾಗೂ ಜಾಹೀರಾತುದಾರರಿಗೂ ಅನ್ವಯವಾಗಲಿದೆ ಎಂದು ವರದಿಯಾಗಿದೆ.

ಕ್ರಿಕೆಟ್‌ನಲ್ಲಿ ಭಾರತ–ಪಾಕಿಸ್ತಾನ ಪಂದ್ಯವು ಪ್ರಸಾರ ಹಕ್ಕು, ಟಿಕೆಟ್ ಮಾರಾಟ, ಜಾಹೀರಾತು, ಪ್ರಾಯೋಜಕತ್ವ ಹಾಗೂ (ಭಾರತದ ಹೊರಗಡೆ) ಕಾನೂನುಬದ್ದ ಬೆಟ್ಟಿಂಗ್ ಸೇರಿದಂತೆ ಹಲವು ಮೂಲಗಳಿಂದ ಅಪಾರ ಆದಾಯ ತರುತ್ತದೆ. ಈ ಪಂದ್ಯ ರದ್ದಾದರೆ ಆ ಎಲ್ಲಾ ಆದಾಯ ಮಾರ್ಗಗಳಿಗೆ ಭಾರೀ ಹೊಡೆತ ಬೀಳಲಿದೆ.

ಎಷ್ಟು ನಷ್ಟವಾಗಲಿದೆ?

– ಭಾರತ–ಪಾಕಿಸ್ತಾನ ಐಸಿಸಿ ಪಂದ್ಯದ ಅಂದಾಜು ಮೌಲ್ಯ: 250 ಮಿಲಿಯನ್ ಯುಎಸ್ ಡಾಲರ್ (2,200 ಕೋಟಿ ರೂ.ಕ್ಕಿಂತ ಹೆಚ್ಚು)

– ಜಾಹೀರಾತು ಆದಾಯ: 200–250 ಕೋಟಿ ರೂ.

– 10 ಸೆಕೆಂಡ್ ಜಾಹೀರಾತು ಸ್ಲಾಟ್ ವೆಚ್ಚ: 20–40 ಲಕ್ಷ ರೂ.

– ಭಾರತದ ಮಾಧ್ಯಮ ಹಕ್ಕುಗಳ ಒಪ್ಪಂದ (ಜಿಯೋಸ್ಟಾರ್–ಐಸಿಸಿ): 3 ಬಿಲಿಯನ್ ಡಾಲರ್

ಪಂದ್ಯ ನಡೆಯದೇ ಹೋದರೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳು ತಲಾ ಸುಮಾರು 200 ಕೋಟಿ ರೂ. ನಷ್ಟವನ್ನು ಎದುರಿಸಬೇಕಾಗುತ್ತದೆ. ಜೊತೆಗೆ, ಪಂದ್ಯ ರದ್ದಾದರೆ ಐಸಿಸಿಯು ಪ್ರಾಯೋಜಕರು ಮತ್ತು ಪ್ರಸಾರಕರಿಗೆ ನಷ್ಟ ಪರಿಹಾರ ನೀಡಬೇಕಾದ ಪರಿಸ್ಥಿತಿ ಎದುರಾಗಬಹುದು.

ಐಸಿಸಿಗೆ ಅತ್ಯಧಿಕ ಆದಾಯ ದೊರೆಯುವುದು ಪ್ರಸಾರ ಹಕ್ಕುಗಳಿಂದಾಗಿದ್ದು, ಈ ಆದಾಯವನ್ನು ಪ್ರತಿವರ್ಷ ವಿವಿಧ ದೇಶಗಳಲ್ಲಿ ಕ್ರಿಕೆಟ್ ಅಭಿವೃದ್ಧಿಗಾಗಿ ವಿವಿಧ ಕ್ರಿಕೆಟ್ ಮಂಡಳಿಗಳಿಗೆ ಹಂಚಲಾಗುತ್ತದೆ. ಆದರೆ ಪ್ರಮುಖ ಪಂದ್ಯ ರದ್ದಾದರೆ ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್, ಜಿಂಬಾಬ್ವೆ, ನಮೀಬಿಯಾ, ಅಫ್ಘಾನಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳ ಕ್ರಿಕೆಟ್ ಮಂಡಳಿಗಳಿಗೆ ನೀಡಬೇಕಿದ್ದ ಆದಾಯ ಕಡಿತಗೊಳ್ಳುವ ಸಾಧ್ಯತೆಯಿದೆ.

2024–2027ರ ಅವಧಿಯ ಐಸಿಸಿ ಪಂದ್ಯಗಳ ಭಾರತದ ಪ್ರಸಾರ ಹಕ್ಕನ್ನು ಡಿಸ್ನಿ ಸ್ಟಾರ್ ಸಂಸ್ಥೆ 2022ರಲ್ಲಿ 3 ಬಿಲಿಯನ್ ಡಾಲರ್‌ಗಳಿಗೆ (ಸುಮಾರು 25 ಸಾವಿರ ಕೋಟಿ ರೂ.) ಖರೀದಿಸಿತ್ತು. ಈ ಒಪ್ಪಂದದಲ್ಲಿ ಅತಿ ಹೆಚ್ಚು ಆದಾಯ ತರುವ ಪಂದ್ಯವೆಂದರೆ ಭಾರತ–ಪಾಕಿಸ್ತಾನ ಮುಖಾಮುಖಿ. ಈ ಪ್ರಮುಖ ಪಂದ್ಯ ನಡೆಯದೇ ಹೋದರೆ ಜಿಯೋ ಹಾಟ್‌ಸ್ಟಾರ್‌ಗೆ ಭಾರೀ ಆರ್ಥಿಕ ನಷ್ಟವಾಗುವ ಸಾಧ್ಯತೆಯಿದೆ. ಹೀಗಾಗಿ ಈ ಪ್ರಸಾರ ಹಕ್ಕುಗಳ ಒಪ್ಪಂದವನ್ನು ಮರುಪರಿಶೀಲಿಸುವಂತೆ ಜಿಯೋ ಹಾಟ್‌ಸ್ಟಾರ್ ಐಸಿಸಿಗೆ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಒಂದೇ ದಿನ ಎರಡು ದೇವಾಲಯಗಳಲ್ಲಿ ಕಳ್ಳತನ; ದೇವನಹಳ್ಳಿಯ ಪೊಮ್ಮಸಂದ್ರದಲ್ಲಿ ಆತಂಕ!

0

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಪೊಮ್ಮಸಂದ್ರ ಗ್ರಾಮದಲ್ಲಿ ಒಂದೇ ದಿನ ಎರಡು ದೇವಾಲಯಗಳಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರಲ್ಲಿ ಭಾರೀ ಆತಂಕ ಮೂಡಿಸಿದೆ.

ಚಂದ್ರಮೌಳೇಶ್ವರ ದೇವಾಲಯ ಹಾಗೂ ಓಶಕ್ತಿ ದೇವಾಲಯಗಳನ್ನು ಗುರಿಯಾಗಿಸಿಕೊಂಡ ಕಳ್ಳರು, ಆರೆಕೋಲು ಬಳಸಿ ಬಾಗಿಲುಗಳನ್ನು ಮೀಟಿ ಒಳನುಗ್ಗಿದ್ದಾರೆ. ಕಳ್ಳರು ಎರಡೂ ದೇವಾಲಯಗಳಲ್ಲಿದ್ದ ಹುಂಡಿಗಳನ್ನು ಒಡೆದು ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಶಂಕೆ ವ್ಯಕ್ತವಾಗಿದೆ.

ಜೊತೆಗೆ ಓಶಕ್ತಿ ದೇವಾಲಯದಿಂದ ಎರಡು ಮಾಂಗಲ್ಯ ಸರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಓಶಕ್ತಿ ದೇವಾಲಯದಲ್ಲಿ ಇದು ಎರಡನೇ ಬಾರಿ ಕಳ್ಳತನವಾಗಿದ್ದು, ಕಳೆದ ಬಾರಿ ಸುಮಾರು ₹2 ಲಕ್ಷ ಮೌಲ್ಯದ ಪಂಚಲೋಹ ವಿಗ್ರಹವನ್ನು ಕಳ್ಳರು ಅಪಹರಿಸಿದ್ದ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಸಿಯಾಗಿ ಉಳಿದಿದೆ. ಪದೇಪದೇ ನಡೆಯುತ್ತಿರುವ ಇಂತಹ ಘಟನೆಗಳು ಭಕ್ತರು ಹಾಗೂ ಸಾರ್ವಜನಿಕರಲ್ಲಿ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.

ಈ ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಆರಂಭಿಸಲಾಗಿದೆ.
ಪೊಮ್ಮಸಂದ್ರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ದೇವಾಲಯಗಳ ಭದ್ರತೆ ಹೆಚ್ಚಿಸಬೇಕೆಂಬ ಒತ್ತಾಯ ಇದೀಗ ಮತ್ತಷ್ಟು ಜೋರಾಗಿದೆ.

ದೆಹಲಿ ಪೊಲೀಸರ ವೇಷದಲ್ಲಿ ದರೋಡೆ! ಕಲಬುರಗಿಯಲ್ಲಿ ಇರಾನಿ ಗ್ಯಾಂಗ್ ಅರೆಸ್ಟ್ – 15 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ

0

ಕಲಬುರಗಿ: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನ ತಪಾಸಣೆ ನೆಪದಲ್ಲಿ ಜನರನ್ನು ತಡೆದು ಚಿನ್ನಾಭರಣ ದೋಚುತ್ತಿದ್ದ ಈ ಗ್ಯಾಂಗ್, ಕಲಬುರಗಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದೆ.

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್ ಐಡಿ ಕಾರ್ಡ್ ಸೃಷ್ಟಿಸಿಕೊಂಡು, ಇಬ್ಬರು ಸದಸ್ಯರು ಪೊಲೀಸ್ ಅಧಿಕಾರಿಗಳಂತೆ ವರ್ತಿಸುತ್ತಿದ್ದರು. ಉಳಿದವರು ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದರು. ಈ ಗ್ಯಾಂಗ್ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು, ಪ್ರತಿ ಬಾರಿ ದರೋಡೆಗೆ ಇಳಿಯುವಾಗ ಹೊಸ ಮೊಬೈಲ್, ಹೊಸ ಸಿಮ್ ಹಾಗೂ ನಂಬರ್ ಪ್ಲೇಟ್ ಬದಲಾಯಿಸುತ್ತಿದ್ದರು.
ಬಂಧಿತ ಆರೋಪಿಗಳನ್ನು ಜಹೀರ್ ಅಬ್ಬಾಸ್, ಅಲಿ ರಜಾಕ್, ಲಾಲ ಸಮೀರ್, ಖಸಿಂ ಜಾಫ್ರಿ, ಅಲಿಮಿರ್ಜಾ, ಜಾಫರ್ ಅಲಿ ಸೈಯದ್ ಹಾಗೂ ಜಾಫರ್ ಸೈಯದ್ ಎಂದು ಗುರುತಿಸಲಾಗಿದೆ.

ಬಂಧಿತರು ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳ ಮೂಲದವರಾಗಿದ್ದಾರೆ.
ಪ್ರಮುಖ ಆರೋಪಿ ಜಹೀರ್ ಅಬ್ಬಾಸ್ ಪರಳಿ ಮೂಲದವನಾಗಿದ್ದು, ಈ ಹಿಂದೆ 15 ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನಿಗೆ ಶಿಕ್ಷೆಯೂ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಲಾಲ್ ಸಲೀಮ್ ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ.
ಲಾಲ್ ಸಲೀಮ್‌ನ ಮಗಳಿಗೆ ಕಲಬುರಗಿಯಲ್ಲಿ ಮದುವೆ ಮಾಡಿಕೊಟ್ಟಿದ್ದ ಕಾರಣ ಗ್ಯಾಂಗ್ ಕಲಬುರಗಿಗೆ ಆಗಮಿಸಿತ್ತು. ಈ ವೇಳೆ ಮಹಬೂಬ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ದರೋಡೆ ನಡೆಸಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಏಳು ಜನರ ಗ್ಯಾಂಗ್ ಅನ್ನು ಬಂಧಿಸಿ, 15 ಲಕ್ಷ ರೂಪಾಯಿ ಮೌಲ್ಯದ 90 ಗ್ರಾಂ ಚಿನ್ನಾಭರಣ, ದರೋಡೆಗೆ ಬಳಸಿದ್ದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಿಲನ’ ನಟಿ ಪಾರ್ವತಿಗೆ ಮತ್ತೆ ಬಾಡಿ ಶೇಮಿಂಗ್ ಕಾಟ

ಚಿತ್ರರಂಗದಲ್ಲಿ ಪ್ರತಿಭೆಯಷ್ಟೇ ಅಲ್ಲ, ಲುಕ್ ಕೂಡ ದೊಡ್ಡ ಮಾನದಂಡ. ದೇಹದಲ್ಲಿ ಸ್ವಲ್ಪ ಬದಲಾವಣೆ ಆದರೂ ನಟ–ನಟಿಯರು ಸಾರ್ವಜನಿಕ ಟೀಕೆಗೆ ಗುರಿಯಾಗುವುದು ಸಾಮಾನ್ಯ. ಇದೇ ವಾಸ್ತವಕ್ಕೆ ಇದೀಗ ಕನ್ನಡದ ‘ಮಿಲನ’ ಸಿನಿಮಾ ಮೂಲಕ ಜನಮನ ಗೆದ್ದ ನಟಿ ಪಾರ್ವತಿ (Parvathy) ಮತ್ತೆ ಸಾಕ್ಷಿಯಾಗಿದ್ದಾರೆ.

ಕೇರಳದ ಕೋಳಿಕ್ಕೋಡಿನವರಾದ ಪಾರ್ವತಿ, 37ನೇ ವಯಸ್ಸಿನಲ್ಲೂ ತಮ್ಮದೇ ಶರತ್ತುಗಳೊಂದಿಗೆ ಬದುಕುತ್ತಿರುವ ನಟಿ. ವಿವಾಹದ ಬಗ್ಗೆ ಅವರು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. 2006ರಲ್ಲಿ, 17ನೇ ವಯಸ್ಸಿನಲ್ಲಿ ಚಿತ್ರರಂಗ ಪ್ರವೇಶಿಸಿದ ಅವರು, 2007ರ ‘ಮಿಲನ’ ಸಿನಿಮಾದ ಮೂಲಕ ಕರ್ನಾಟಕದಲ್ಲೂ ಭಾರಿ ಅಭಿಮಾನಿಗಳನ್ನು ಸಂಪಾದಿಸಿದರು.

ಪುನೀತ್ ರಾಜ್‌ಕುಮಾರ್ ಜೊತೆಗಿನ ಅವರ ಜೋಡಿ ಪ್ರೇಕ್ಷಕರಿಗೆ ತುಂಬಾ ಇಷ್ಟವಾಯಿತು. ‘ಪೃಥ್ವಿ’ ಸಿನಿಮಾದಲ್ಲಿ ಈ ಹಿಟ್ ಜೋಡಿ ಮತ್ತೆ ಒಂದಾಗಿತ್ತು. ಆದರೆ ‘ಅಂದರ್ ಬಾಹರ್’ ಬಳಿಕ ಪಾರ್ವತಿ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿಲ್ಲ.

ಈಗ ಮಲಯಾಳಂ ಚಿತ್ರರಂಗದಲ್ಲಿ ಚ್ಯೂಸಿ ಆಗಿ ಸಿನಿಮಾಗಳನ್ನು ಮಾಡುತ್ತಿರುವ ಪಾರ್ವತಿ, ಇತ್ತೀಚೆಗೆ ಬಾಡಿ ಶೇಮಿಂಗ್‌ಗೆ ಗುರಿಯಾಗಿದ್ದಾರೆ. ವೈರಲ್ ಆದ ವಿಡಿಯೋವೊಂದರಲ್ಲಿ ಅವರು ಮೊದಲಿಗಿಂತ ದಪ್ಪ ಕಾಣಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಕೇರಳಿಗರಿಂದಲೇ ತೀವ್ರ ಟೀಕೆ, ಹೇಟ್ ಕಾಮೆಂಟ್‌ಗಳು ಹರಿದು ಬರುತ್ತಿವೆ.

ಈ ಬೆಳವಣಿಗೆ ಪಾರ್ವತಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ. ನಟಿಯರ ದೇಹ, ಲುಕ್ ವಿಚಾರ ಇಟ್ಟುಕೊಂಡು ಟೀಕೆ ಮಾಡುವುದು ಯಾವ ಮಟ್ಟಿಗೆ ಸರಿ ಎಂಬ ಪ್ರಶ್ನೆ ಮತ್ತೆ ಎದ್ದಿದೆ. ಇದು ಪಾರ್ವತಿ ಎದುರಿಸುತ್ತಿರುವ ಮೊದಲ ಅನುಭವವಲ್ಲ. ಈ ಹಿಂದೆ ಕೂಡ ಅವರು ಇಂತಹ ಟೀಕೆಗಳನ್ನು ಎದುರಿಸಿದ್ದಾರೆ. ಆದರೆ ಪ್ರತೀ ಬಾರಿ ಅದನ್ನು ಧೈರ್ಯದಿಂದಲೇ ಎದುರಿಸಿದ್ದಾರೆ.

ಒಟ್ಟಾರೆ, ಈ ಘಟನೆ ಚಿತ್ರರಂಗದಲ್ಲಿ ಬಾಡಿ ಶೇಮಿಂಗ್ ಎಂಬ ಸಮಸ್ಯೆ ಇನ್ನೂ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ನಟಿಯರನ್ನು ಅವರ ಪ್ರತಿಭೆ ಆಧಾರದ ಮೇಲೆ ಮೌಲ್ಯಮಾಪನ ಮಾಡಬೇಕೆಂಬ ಚರ್ಚೆಗೆ ಮತ್ತೆ ವೇದಿಕೆ ಒದಗಿಸಿದೆ.

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್: ಗರಂ ಆದ ಕೆ. ಮಂಜು

ಒಂದು ಯೂಟ್ಯೂಬ್ ಹೇಳಿಕೆ ಇದೀಗ ಸಂಪೂರ್ಣ ಕನ್ನಡ ಚಿತ್ರರಂಗವನ್ನೇ ಒಂದೇ ವೇದಿಕೆಗೆ ತಂದಿದೆ. ನಟ–ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಅವರು ‘ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ’ ಎಂದು ಹೇಳಿರುವುದು ನಿರ್ಮಾಪಕರ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿ, ಪೊಲೀಸ್ ದೂರು ದಾಖಲಾಗುವ ಹಂತಕ್ಕೆ ತಲುಪಿದೆ.

ಈ ವಿವಾದದ ಕುರಿತು ಪ್ರತಿಕ್ರಿಯಿಸಿದ ಹಿರಿಯ ನಿರ್ಮಾಪಕ ಕೆ. ಮಂಜು, ಚಂದ್ರಚೂಡ್ ಹೇಳಿಕೆ ಚಿತ್ರರಂಗದ ಘನತೆಗೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ.

‘ನಿರ್ಮಾಪಕರ ಸಂಘದ ಅನೇಕರು ನನಗೆ ಕರೆ ಮಾಡಿ ಈ ವಿಡಿಯೋ ಬಗ್ಗೆ ಗಮನ ಸೆಳೆದರು. ಸಂಪೂರ್ಣ ವಿಡಿಯೋ ನೋಡಿದ ಮೇಲೆ ಶಾಕ್ ಆಯಿತು. ಕೆವಿಎನ್ ಸಂಸ್ಥೆ, ಸೆನ್ಸಾರ್ ಮಂಡಳಿ, ನ್ಯಾಯಾಲಯದ ಬಗ್ಗೆ ಕೂಡ ಅಸಂಬದ್ಧವಾಗಿ ಮಾತನಾಡಿದ್ದಾರೆ. ಗೊತ್ತಿಲ್ಲದೇ ಮಾತನಾಡುವುದು ಅಪಾಯಕಾರಿ’ ಎಂದು ಮಂಜು ಹೇಳಿದರು.

‘ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎನ್ನುವ ಆರೋಪ ಅತ್ಯಂತ ಅಸಭ್ಯ. ಅಂಥ ನಿರ್ಮಾಪಕ ಯಾರು ಅನ್ನೋದನ್ನು ಸ್ಪಷ್ಟವಾಗಿ ಹೇಳಲಿ. ಇಲ್ಲದಿದ್ದರೆ ಇದು ಚಿತ್ರರಂಗದ ಮೇಲೆ ಮಾಡಿದ ದಾಳಿ’ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿತ್ರರಂಗ ಭಾರೀ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಮಂಜು ವಿವರಿಸಿದರು. ‘ಕಳೆದ ಮೂರು ತಿಂಗಳಲ್ಲಿ 200 ಕೋಟಿ ರೂಪಾಯಿ ನಷ್ಟವಾಗಿದೆ. ನಿರ್ಮಾಪಕರು ಜೀವ ಉಳಿಸಿಕೊಳ್ಳುವ ಹಂತದಲ್ಲಿದ್ದಾರೆ. ಈ ಸಮಯದಲ್ಲಿ ಈ ರೀತಿ ಹೇಳಿಕೆ ನೀಡುವುದು ನೈತಿಕತೆಯ ಕೊರತೆ’ ಎಂದರು.

‘ಬಂದ ತಕ್ಷಣ ದುಡ್ಡು ಬೇಕು ಎನ್ನುವವರಿಂದ ನಿರ್ಮಾಪಕರು ಎಲ್ಲಿಂದ ಹಣ ತರುತ್ತಾರೆ? ಚಿತ್ರರಂಗಕ್ಕೆ ಒಳ್ಳೆಯ ಕಥೆ, ಒಳ್ಳೆಯ ಸಿನಿಮಾ ಬೇಕು. ನಿಂದನೆ ಅಲ್ಲ’ ಎಂದು ಕಿಡಿಕಾರಿದರು.

ಈ ವಿವಾದದಿಂದ ಚಿತ್ರರಂಗದಲ್ಲಿ ಶಿಸ್ತು ಮತ್ತು ಹೊಣೆಗಾರಿಕೆ ಕುರಿತು ಚರ್ಚೆ ಆರಂಭವಾಗಿದೆ. ‘ಯಾರೇ ಆಗಲಿ, ಇನ್ನು ಮುಂದೆ ಈ ರೀತಿ ಮಾತನಾಡಬಾರದು ಎಂಬ ಸಂದೇಶ ನೀಡುವುದಕ್ಕಾಗಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ’ ಎಂದು ಮಂಜು ಸ್ಪಷ್ಟಪಡಿಸಿದ್ದಾರೆ.

ಸುದೀಪ್ ಬಗ್ಗೆ ಮಾತನಾಡುತ್ತಾ, ‘ಅವರು ಕ್ಲೀನ್ ವ್ಯಕ್ತಿ. ಈ ರೀತಿ ವರ್ತಿಸುವವರನ್ನು ಅವರು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ’ ಎಂದು ಹೇಳಿದರು.

ಒಟ್ಟಾರೆ, ಒಂದು ವಿವಾದಾತ್ಮಕ ಹೇಳಿಕೆ ಈಗ ಚಿತ್ರರಂಗದ ಆತ್ಮಗೌರವ, ಹೊಣೆಗಾರಿಕೆ ಮತ್ತು ಕಾನೂನು ಮಿತಿಗಳ ಕುರಿತು ದೊಡ್ಡ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಬೆಂಗಳೂರಿನಲ್ಲಿ ನಿಲ್ಲದ ಪುಡಿ ರೌಡಿಗಳ ಅಟ್ಟಹಾಸ: ಜಗಳ ತಡೆಯಲು ಹೋದ ಆಟೋ ಚಾಲಕನ ಕುತ್ತಿಗೆಗೆ ಚಾಕುವಿನಿಂದ ಇರಿತ!

0

ಬೆಂಗಳೂರು;- ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ದಿನೇದಿನೇ ಹೆಚ್ಚಾಗುತ್ತಿದ್ದು, ಕೆಆರ್ ಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಜಗಳವನ್ನು ತಡೆಯಲು ಮುಂದಾದ ಆಟೋ ಚಾಲಕನ ಮೇಲೆ ಪುಂಡರ ಗುಂಪು ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 1ರ ರಾತ್ರಿ ಸುಮಾರು 8.15ರ ವೇಳೆಗೆ ಕೆಆರ್ ಪುರದ ದೇವಸಂದ್ರ ಸಮೀಪದ ಮದೀನಾ ಮಸೀದಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಮಾಜ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಆಟೋ ಚಾಲಕ ರೋಷನ್, ತನ್ನ ಗೆಳೆಯ ಶೋಯಬ್ ಜೊತೆ ಮಾತನಾಡುತ್ತಿದ್ದಾಗ ಕೆಲವರ ನಡುವೆ ಜಗಳ ಉಂಟಾಗಿದೆ. ಈ ಜಗಳವನ್ನು ತಡೆಯಲು ಮುಂದಾದ ರೋಷನ್ ಮೇಲೆ ವಾಸಿಂ, ಯಾಸಿಫ್, ಖಲೀಮ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಆಟೋ ಚಾಲಕ ರೋಷನ್ ಅವರ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಷನ್ ಅವರ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ಪಡೆದ ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು| ಪಾರ್ಕ್ ಗಳೇ ಖದೀಮರ ಟಾರ್ಗೆಟ್; ವಾಕ್ ಮಾಡುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಸರಗಳ್ಳತನ!

0

ಬೆಂಗಳೂರು: ನಗರದಲ್ಲಿ ಸರಗಳ್ಳತನ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಈಗ ಪಾರ್ಕ್‌ಗಳನ್ನೇ ಅಪರಾಧಿಗಳು ಟಾರ್ಗೆಟ್ ಮಾಡುತ್ತಿರುವುದು ನಾಗರಿಕರಲ್ಲಿ ಭೀತಿಯನ್ನುಂಟು ಮಾಡಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿಯಲ್ಲಿ ಇರುವ ಪಾರ್ಕ್ ನಲ್ಲಿ ನಿನ್ನೆ ಸಂಜೆ ಭೀಕರ ಸರಗಳ್ಳತನ ನಡೆದಿದೆ. ಸಂಜೆ ಸುಮಾರು 5.30ರ ವೇಳೆಗೆ ವೃಕ್ಷೋದ್ಯಾನದಲ್ಲಿ ವಾಕ್ ಮಾಡುತ್ತಿದ್ದ 54 ವರ್ಷದ ಮಹಿಳೆಯನ್ನು ಗಮನಿಸಿದ ಆರೋಪಿಯು, ಸುತ್ತಮುತ್ತ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡಿದ್ದಾನೆ. ಬಳಿಕ ಮಹಿಳೆಗೆ ಚಾಕು ತೋರಿಸಿ ಬೆದರಿಸಿ, ಕುತ್ತಿಗೆಗೆ ಕೈ ಹಾಕಿ ಸುಮಾರು 5 ಲಕ್ಷ ರೂ. ಮೌಲ್ಯದ 36 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಮಹಿಳೆಯ ಕುತ್ತಿಗೆಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಭದ್ರತಾ ಕ್ರಮವಾಗಿ ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ವೃಕ್ಷೋದ್ಯಾನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮೊದಲು ಬೈಕ್‌ನಲ್ಲಿ ಬಂದು ರಸ್ತೆಯಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು, ಇದೀಗ ಪಾರ್ಕ್‌ಗಳಲ್ಲಿ ನಡೆದುಕೊಂಡು ಬರುವ ಮಹಿಳೆಯರನ್ನೇ ಗುರಿಯಾಗಿಸುತ್ತಿರುವುದು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.

ಪೊಲೀಸರ ಮೇಲೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ‘ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್!

0

ದಾವಣಗೆರೆ:- ಚಿಗಟೇರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಇನ್ನಿಬ್ಬರು ಪುತ್ರರಾದ ಹುಸೇನ್ ಮತ್ತು ಹಮ್ಝಾರನ್ನು ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮೊಬೈಲ್ ಲೊಕೇಷನ್ ಹಾಗೂ ಸಿಡಿಆರ್ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಕಳೆದ ಶನಿವಾರ ಆರೋಪಿಗಳನ್ನು ಬಂಧಿಸಲು ಬಡಾವಣೆ ಠಾಣೆಯ ಸಿಪಿಐ ಗಾಯಿತ್ರಿ ಹಾಗೂ ಕಾನ್ಸ್‌ಟೇಬಲ್‌ಗಳಾದ ಹರೀಶ್ ಮತ್ತು ಕೆಂಚಪ್ಪ, ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಯೂಬ್ ಪೈಲ್ವಾನ್ ಅವರ ಮತ್ತೊಬ್ಬ ಪುತ್ರ ಹಸೇನ್‌ ನನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಗಳ ಬಂಧನಕ್ಕಾಗಿ ಸಿಟಿ ಡಿವೈಎಸ್ಪಿ ಶರಣಬಸವೇಶ್ವರ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲದ ವಿಚಾರಕ್ಕೆ ಜಗಳ; ಪತ್ನಿಯ ಕತ್ತು ಸೀಳಿ ಕೊಲೆಗೈದ ಗಂಡ!

0

ಹುಬ್ಬಳ್ಳಿ: ಸಾಲದ ವಿಷಯವನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನುಷ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ.

ಗಾರೆ ಕೆಲಸ ಮಾಡುತ್ತಿದ್ದ ಇರ್ಫಾನ್ ಎಂಬಾತ ತನ್ನ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮಾಸಬ್ಬಿ–ಇರ್ಫಾನ್ ದಂಪತಿಗೆ ಇಬ್ಬರು ಚಿಕ್ಕ ಮಕ್ಕಳು ಇದ್ದರೂ, ಮನೆಯೊಳಗಿನ ಸಾಲದ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಇರ್ಫಾನ್ ಸಾಲ ತೀರಿಸಲು ಪತ್ನಿಯ ಚಿನ್ನಾಭರಣಗಳನ್ನು ಅಡವಿಟ್ಟಿದ್ದನು. ಇದೇ ವಿಚಾರಕ್ಕೆ ದಂಪತಿಯ ನಡುವೆ ನಿರಂತರವಾಗಿ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಇತ್ತೀಚೆಗೆ ಮಾಸಬ್ಬಿಯ ಸಹೋದರ 20 ಸಾವಿರ ರೂ. ಹಣ ನೀಡಿದ್ದರೂ ಸಹ, ಇನ್ನಷ್ಟು ಹಣ ತರಬೇಕು ಎಂದು ಇರ್ಫಾನ್ ಪತ್ನಿಗೆ ಒತ್ತಡ ಹಾಕುತ್ತಿದ್ದನು. ಸೋಮವಾರ ಈ ವಿಚಾರಕ್ಕೆ ಮತ್ತೆ ಜಗಳ ಉಂಟಾಗಿ, ಆಕ್ರೋಶಗೊಂಡ ಇರ್ಫಾನ್ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ದಾಳಿ ನಡೆಸಿದ್ದಾನೆ. ಪ್ರಾಣ ಉಳಿಸಿಕೊಳ್ಳಲು ಮಾಸಬ್ಬಿ ರಕ್ತಸ್ರಾವವಾಗುತ್ತಿದ್ದಂತೆಯೇ ಮನೆ ಹೊರಗೆ ಓಡಿ ಬಂದಿದ್ದಾಳೆ. ಆದರೆ ಹಿಂಬಾಲಿಸಿದ ಇರ್ಫಾನ್, ಮನೆಯ ಎದುರಲ್ಲೇ ಮತ್ತೆ ಚಾಕುವಿನಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತದೇಹದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ದೃಶ್ಯಗಳು ಮನಕಲಕುವಂತಿದ್ದವು. ಘಟನೆ ಬಳಿಕ ಇರ್ಫಾನ್ ಸ್ವತಃ ಕೇಶ್ವಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ನಂತರ ಆತನನ್ನು ಗೋಕುಲ್ ರೋಡ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯಿಂದ ಒಂದೆಡೆ ತಂದೆ ಜೈಲು ಪಾಲಾದರೆ, ಮತ್ತೊಂದೆಡೆ ತಾಯಿ ಮೃತಳಾಗಿದ್ದಾಳೆ. ಪ್ರಪಂಚದ ಅರಿವು ಇಲ್ಲದ ಇಬ್ಬರು ಮುದ್ದಾದ ಮಕ್ಕಳು ಅನಾಥರಾಗಿದ್ದು, ಅವರ ಭವಿಷ್ಯವೇ ಇದೀಗ ಪ್ರಶ್ನಾರ್ಥಕವಾಗಿದೆ.

ಚುನಾವಣೆಗೆ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಲೆಗೈದ ಪಾಪಿ ತಂದೆ!

0

ಮುಂಬೈ:- ಪಾಪಿ ತಂದೆಯೋರ್ವ ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಲೆಗೈದಿರುವ ಆಘಾತಕಾರಿ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಜರುಗಿದೆ.

ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.

ಕೊಲೆಯಾದ ಬಾಲಕಿಯ ಹೆಸರು ಪ್ರಾಚಿ (6), ಮತ್ತು ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ.

ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

ಅಲ್ಲಿಯೇ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ನೀರಿಗೆ ಏನೋ ಬಿದ್ದ ಶಬ್ಧ ಕೇಳಿ, ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಫೋಟೋ ವೈರಲ್‌ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಪಾಪಿ ತಂದೆಯನ್ನು ಬಂಧಿಸಿದ್ದಾರೆ.

error: Content is protected !!