Home Blog Page 23

ಎಣ್ಣೆಪ್ರಿಯರೇ ಹುಷಾರ್| ಅವಧಿ ಮೀರಿದ ಮದ್ಯ ಮಾರಾಟ, ಅಧಿಕಾರಿಗಳೇ ಶಾಮೀಲು| ಸೂಪರ್ ವೈಸರ್ ಅರೆಸ್ಟ್

ರಾಮನಗರ: ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಮದ್ಯ ಮಾರಾಟ ವಿಚಾರವಾಗಿ ಕಳ್ಳಾಟ ಆಡುತ್ತಿರುವ ಪ್ರಸಂಗವೊಂದು ರಾಮನಗರದಲ್ಲಿ ಬೆಳಕಿಗೆ ಬಂದಿದೆ.

ಐಜೂರು ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಹಣದಾಸೆಗೆ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ ನಡೆಯುತ್ತಿರೋದು ಆಘಾತ ಮೂಡಿಸಿದೆ. ನಿಗಮದ ಸೂಪರ್ ವೈಸರ್ ಸುರೇಶ್ ಮನೆಯಲ್ಲಿಯೇ ಇವು ಪತ್ತೆಯಾಗಿದ್ದು, ವಿವಿಧ ಕಂಪನಿಗಳ 20 ಬಾಕ್ಸ್​ ಮದ್ಯ ಕಂಡುಬಂದಿದೆ. ಹಲವೆಡೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅವಧಿಮೀರಿದ ಮದ್ಯವನ್ನು ನಾಶಪಡಿಸುವ ಬದಲು ಕರ್ನಾಟಕ ಪಾನೀಯ ನಿಗಮದ ಗೋದಾಮಿನಿಂದ ಅವನ್ನು ತಂದು ಮನೆಯಲ್ಲಿ ಸಂಗ್ರಹ ಮಾಡಲಾಗಿತ್ತು. ಇವನ್ನು ಗ್ರಾಮೀಣ ಭಾಗದಲ್ಲಿ ಮಾರಲು ಪ್ಲ್ಯಾನ್ ನಡೆದಿತ್ತು ಎನ್ನಲಾಗಿದೆ.

ಅವಧಿಮೀರಿದ ಯುಬಿ ಎಕ್ಸ್ಪರ್ಟ್ ಪ್ರಿಮಿಯಂ ಸ್ಟ್ರಾಂಗ್ ಬಿಯರ್, ಕಿಂಗ್ ಫಿಶರ್, ಆಲ್ಟ್ರಾ ಪ್ರಿಮಿಯಂ ಸ್ಟ್ರಾಂಗ್ ಬಿಯರ್ ಹಾಗೂ ಮ್ಯಾಜಿಕ್ ಮೂಮೆಂಟ್ ವೋಡ್ಕಾ ಕಾಕೈಟ್​ನ ಸಿಬ್ಬಂದಿ ಸೀಜ್ ಮಾಡಿದ್ದರು. ಈಗಾಗಲೇ ಮದ್ಯದ ಅವಧಿಮೀರಿ ಮೂರ್ನಾಲ್ಕು ತಿಂಗಳು ಕಳೆದಿದ್ದು, ಸೀಜ್ ಮಾಡಿದ್ದ ಅವನ್ನು ನಾಶಪಡಿಸಲು ಅಬಕಾರಿ ಡಿಸಿ ಸೂಚಿಸಿದ್ದರು. ಹೀಗಿದ್ದರೂ ಗೋದಾಮಿನ ಸಿಸಿಟಿವಿ ಆಫ್ ಮಾಡಿಸಿ 640 ಬಾಕ್ಸ್​ಗಳಲ್ಲಿ 20 ಬಾಕ್ಸ್​ಗಳನ್ನು ನಾಶಪಡಿಸದೇ ತಂದು ಸಂಗ್ರಹ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ.

ರಾಮನಗರದ ಅರ್ಚಕರಹಳ್ಳಿ ಬಳಿಯಿರುವ ಪಾನೀಯ ನಿಗಮದ ಗೋದಾಮಿನಿಂದ ಮದ್ಯ ಸಾಗಾಟದ ವೇಳೆ ಸೂಪರ್​ ವೈಸರ್​ ಸುರೇಶ್​ಗೆ ಗೋದಾಮು ಅಧಿಕಾರಿಗಳು, ಸಿಬ್ಬಂದಿ ಸಾಥ್ ನೀಡಿದ್ದರು. ಹಣದಾಸೆಗೆ ಕಳೆದ ಹಲವು ವರ್ಷಗಳಿಂದ ಅಕ್ರಮ ದಂಧೆ ನಡೆಯುತ್ತಿದ್ದು, ಐಜೂರು ಪೊಲೀಸರಿಂದ ಸೂಪರ್ ವೈಸರ್​ ಸುರೇಶ್(52) ಬಂಧಿಸಲಾಗಿದೆ. ಬಳಿಕ ಸ್ಟೇಷನ್ ಬೇಲ್ ನೀಡಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಪ್ರಕರಣದ ಬಗ್ಗೆ ಐಜೂರು ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

IPL 2026: ತವರಿನಲ್ಲಿ ಹೈದರಾಬಾದ್ ಮಣಿಸಿ RCB ಶುಭಾರಂಭ: ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ!

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಸುಲಭವಾಗಿ ಮಣಿಸಿದ RCB ಗೆಲುವಿನ ಶುಭಾರಂಭ ಮಾಡಿದೆ.

ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ, ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಸುಲಭ ಜಯ ದಾಖಲಿಸಿತು. ಈ ಮೂಲಕ ಆರ್​ಸಿಬಿ ಮೊದಲ ಪಂದ್ಯದಲ್ಲೇ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200 ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬರೆಯಿತು.

ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿ ಮಿಂಚಿದ್ದರು. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಪಾಕಿಸ್ತಾನದ ಬ್ಯಾಟರ್ ಶೊಯೆಬ್ ಮಲಿಕ್ ಕಾಣಿಸಿಕೊಂಡಿದ್ದರು. ಇದೀಗ ಮಲಿಕ್ ಅವರನ್ನು ಹಿಂದಿಕ್ಕುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದಾರೆ. ಶೊಯೆಬ್ ಮಲಿಕ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 515 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 10665 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 13571 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿ ಪಾಕ್ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಇದೀಗ ಕೇವಲ 398 ಟಿ20 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 13,612 ರನ್​ಗಳಿಸಿದ್ದಾರೆ. ಈ ಮೂಲಕ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿದ ವಿಶ್ವ ದಾಖಲೆ ಬರೆಯಲು ಮುನ್ನುಗ್ಗುತ್ತಿದ್ದಾರೆ.

ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಭರ್ಜರಿ ಏರಿಕೆ, ಇಂದಿನ ದರಪಟ್ಟಿ ಇಲ್ಲಿದೆ!

0

ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆಯಾಗಿದೆ.

ಕಳೆದ 3–4 ದಿನಗಳಿಂದ ಚಿನ್ನದ ಬೆಲೆ ಸತತವಾಗಿ ಹೆಚ್ಚುತ್ತಿದ್ದು, ವಾರಾಂತ್ಯದಲ್ಲಿ ಗ್ರಾಂಗೆ ಸುಮಾರು 310 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ 5 ರೂ. ಏರಿಕೆ ಕಂಡು ಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ: 

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,107 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಹಾವಳಿ – ವೈರಲ್ ವಿಡಿಯೋ ಬೆನ್ನಲ್ಲೇ ಅಧಿಕಾರಿಗಳ ಕ್ರಮ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ಭದ್ರತಾ ಲೋಪ ಬಹಿರಂಗವಾಗಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಡಿಜಿಪಿ ಅಲೋಕ್ ಕುಮಾರ್ ಅವರ ಕಟ್ಟುನಿಟ್ಟಿನ ಕ್ರಮಗಳಿಂದ ಜೈಲಿನೊಳಗಿನ ಅಕ್ರಮಗಳಿಗೆ ಕಡಿವಾಣ ಬೀಳುವ ನಿರೀಕ್ಷೆಯಿದ್ದರೂ, ಈ ಘಟನೆ ಮತ್ತೆ ಆತಂಕ ಹುಟ್ಟಿಸಿದೆ. ವೈರಲ್ ವಿಡಿಯೋದಲ್ಲಿ ಜೈಲಿನೊಳಗೆ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್ ಸೌಲಭ್ಯಗಳಿರುವುದಾಗಿ ಹೇಳಲಾಗಿದೆ.

ವಿಡಿಯೋ ವೈರಲ್ ಆದ ತಕ್ಷಣ ಅಧಿಕಾರಿಗಳು ಜೈಲಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, 9ನೇ ಬ್ಯಾರಕ್‌ನ ಡ್ರೈನೇಜ್ ಮಾರ್ಗದಲ್ಲಿ ಹಾಲಿನ ಪ್ಯಾಕೆಟ್‌ಗಳಲ್ಲಿ ಅಡಗಿಸಿಡಲಾಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಿದ್ದಾರೆ.

ತನಿಖೆಯಲ್ಲಿ ದರ್ಶನ್, ಅಭಿಷೇಕ್ ಮತ್ತು ಎಂಡ್ರೋಸ್ ಎಂಬ ವಿಚಾರಣಾಧೀನ ಕೈದಿಗಳು ವಿಡಿಯೋ ಚಿತ್ರೀಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಇವರು ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಅಸಮಾಧಾನದಿಂದ ಉದ್ದೇಶಪೂರ್ವಕವಾಗಿ ಡಿಜಿಪಿ ಹೆಸರನ್ನು ಬಳಸಿಕೊಂಡು ವಿಡಿಯೋ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನೂ ಕ್ವಾರಂಟೈನ್ ಸೆಲ್‌ಗೆ ಸ್ಥಳಾಂತರಿಸಲಾಗಿದೆ.

ಘಟನೆ ಬೆನ್ನಲ್ಲೇ ವಾರ್ಡರ್‌ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ ಎ. ಕಾಮತ್ ಮತ್ತು ಹನುಮಂತಪ್ಪ ಹಡಪದ್ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಜೈಲರ್ ವಿರುದ್ಧವೂ ಶಿಸ್ತು ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಕಾರ್ಕಳ-ಶಿರ್ವದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಗ್ಯಾಂಗ್ ಬಯಲು – ಪೊಲೀಸರ ಮೇಲೆಯೇ ದಾಳಿ ಯತ್ನ

ಉಡುಪಿ: ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ನಡೆದ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಐವರನ್ನು ಬಂಧಿಸುವ ಮೂಲಕ ದೊಡ್ಡ ಜಾಲವನ್ನು ಪೊಲೀಸರು ಬಯಲು ಮಾಡಿದ್ದಾರೆ.

ಕಾರ್ಕಳದ ಹಂಚಿಕಟ್ಟೆ ಸಮೀಪ ಸಂಶಯಾಸ್ಪದ ಕಾರನ್ನು ತಡೆಹಿಡಿಯಲು ಯತ್ನಿಸಿದ ವೇಳೆ, ಆರೋಪಿಗಳು ವಾಹನವನ್ನು ನಿಲ್ಲಿಸದೆ ಪೊಲೀಸರ ಮೇಲೆಯೇ ಹರಿಸಲು ಯತ್ನಿಸಿದ್ದು ಗಂಭೀರ ಆರೋಪವಾಗಿದೆ.

ನಂತರ ಶಿರ್ವ ಪ್ರದೇಶದಲ್ಲಿ ಅದೇ ಕಾರನ್ನು ತಡೆಹಿಡಿಯಲು ಪೊಲೀಸರು ಪ್ರಯತ್ನಿಸಿದಾಗ ಚಾಲಕ ಅಧಿಕಾರಿಯನ್ನು ತಳ್ಳಿ ಪರಾರಿಯಾಗಲು ಯತ್ನಿಸಿದ್ದಾನೆ. ಕೊನೆಗೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸುಧರ್ಷನ್ ಶೆಟ್ಟಿ (29), ಕಾರ್ತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ತನಿಖೆಯಲ್ಲಿ ಇವರು ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ಮೂಲಕ ಜನರನ್ನು ವಂಚಿಸುತ್ತಿದ್ದ ಅಂಶ ಬಹಿರಂಗವಾಗಿದೆ.

ಈ ಪ್ರಕರಣವು ಅಕ್ರಮ ಬೆಟ್ಟಿಂಗ್ ಜಾಲದ ವಿರುದ್ಧ ಪೊಲೀಸರ ಕಠಿಣ ಕ್ರಮಕ್ಕೆ ಉದಾಹರಣೆಯಾಗಿದೆ.

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಉಗ್ರ ಚಟುವಟಿಕೆ ಬಯಲು: ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಮಂಗಳೂರು: ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಶಾರೀಕ್ ತನ್ನ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಎನ್‌ಐಎ ವಿಶೇಷ ನ್ಯಾಯಾಲಯವು ಆತನ ತಪ್ಪೊಪ್ಪಿಗೆ ಅರ್ಜಿಯನ್ನು ಅಂಗೀಕರಿಸಿದೆ.

2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಟೈಮರ್ ದೋಷದಿಂದ ಶಾರೀಕ್ ಮಡಿಲಲ್ಲೇ ಸ್ಫೋಟಗೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದ. ಈ ಘಟನೆಯಲ್ಲಿ ಆಟೋ ಚಾಲಕನಿಗೂ ಗಾಯಗಳಾಗಿದ್ದವು.

ಮೊದಲಿಗೆ ತನ್ನ ನಿರಪರಾಧಿತ್ವವನ್ನು ಹೇಳಿದ್ದ ಶಾರೀಕ್, ಬಳಿಕ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ, “ನಾನು ಐಇಡಿ ಬಳಸಿ ಸ್ಫೋಟ ಮಾಡಿದ್ದೇನೆ” ಎಂದು ಒಪ್ಪಿಕೊಂಡಿದ್ದಾನೆ.

ಎನ್‌ಐಎ ತನಿಖೆ ಶಾರೀಕ್ ಐಸಿಸ್ ಪ್ರೇರಿತ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬುದನ್ನು ಬಹಿರಂಗಪಡಿಸಿದೆ. 2020ರಿಂದಲೇ ಆತ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು, ಶಿವಮೊಗ್ಗ ಐಇಡಿ ಪರೀಕ್ಷೆ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇದಲ್ಲದೆ, ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಸ್ಫೋಟ ಪ್ರಕರಣದಲ್ಲೂ ಆತನ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯಕ್ಕೆ ಆತ ಕುಕ್ಕರ್ ಬಾಂಬ್ ಪ್ರಕರಣದಲ್ಲಷ್ಟೇ ತಪ್ಪೊಪ್ಪಿಕೊಂಡಿದ್ದಾನೆ.

ಗದಗ|ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ-ಕುಟುಂಬಸ್ಥರ ಆಕ್ರಂದನ

ಮಂಗಳವಾರ ನಾಪತ್ತೆಯಾಗಿದ್ದ ಯುವಕ-ಶನಿವಾರ ಸುಟ್ಟ ಸ್ಥಿತಿಯಲ್ಲಿ  ಪತ್ತೆ!

ಗದಗ: ಜಿಲ್ಲೆಯ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಯುವಕನೊಬ್ಬನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

27 ವರ್ಷದ ಚಂದ್ರು ಕುರಿ ಎಂಬ ಯುವಕ ಮಂಗಳವಾರ ರಾತ್ರಿ ಮನೆಯಿಂದ ಹೊರಟಿದ್ದಾನೆ. ಆದರೆ, ಮುಂದಿನ ದಿನ ಗ್ರಾಮ ಹೊರವಲಯದ ಬ್ರಿಡ್ಜ್ ಕೆಳಗೆ ಅವನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಕುಟುಂಬಸ್ಥರನ್ನು ದುಃಖದ ಸಾಗರಕ್ಕೆ ತಳ್ಳಿದೆ.

ಕುಟುಂಬಸ್ಥರ ಆರೋಪ – ಕೊಲೆ ಮಾಡಿ ಸುಟ್ಟಿದ್ದಾರೆ

ಮೃತನ ಕುಟುಂಬದವರು ಇದೊಂದು ಪೂರ್ವ ಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ. ಎದುರು ಮನೆಯ ಕುಟುಂಬದವರ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ.

ಚಂದ್ರು ಎದುರು ಮನೆಯ ಹೆಣ್ಣುಮಕ್ಕಳನ್ನು ನೋಡುತ್ತಿದ್ದನೆಂಬ ಅನುಮಾನದಿಂದಾಗಿ ಹಿಂದಿನಿಂದಲೂ ಜಗಳಗಳು ನಡೆದಿದ್ದವು ಎಂದು ಕುಟುಂಬಸ್ಥರು ಹೇಳಿದ್ದಾರೆ. ಕೆಲವೊಮ್ಮೆ ಬೈಕ್ ಹತ್ತಿಸಲು ಪ್ರಯತ್ನಿಸಿದ ಘಟನೆಗಳೂ ನಡೆದಿದ್ದವು ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಆ ಕುಟುಂಬದವರೇ ಕೊಲೆ ಮಾಡಿ ನಂತರ ಶವವನ್ನು ಸುಟ್ಟಿದ್ದಾರೆ ಎಂದು ಮೃತನ ಕುಟುಂಬದವರು ದೂರಿದ್ದಾರೆ.

ತಂದೆಯ ಆಕ್ರೋಶ – “ಕೊಲೆ ಮಾಡಿದವರನ್ನು ಬಿಡಲ್ಲ”

ಮೃತ ಚಂದ್ರುವಿನ ತಂದೆ ಬಸವರಾಜ್ ದುಃಖ ಮತ್ತು ಆಕ್ರೋಶದಲ್ಲಿ ಮಾತನಾಡಿ, “ನನ್ನ ಮಗ ಒಳ್ಳೆಯ ಹುಡುಗ. ಯಾರ ಜೊತೆಗೂ ತಕರಾರು ಮಾಡಲಿಲ್ಲ. ದಿನವೂ ಕೆಲಸಕ್ಕೆ ಹೋಗುವಾಗ 100 ರೂಪಾಯಿ ಕೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದೇನೆ. ಕೊಲೆ ಮಾಡಿದವರನ್ನು ಬಿಡುವುದಿಲ್ಲ, ಸೇಡು ತೀರಿಸಿಕೊಳ್ಳುತ್ತೇನೆ” ಎಂದು ಕಣ್ಣೀರಿನಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ಇನ್ನೂ ಅವರು, “ನನ್ನ ಬಳಿ ಮೂರು ಎಕರೆ ಹೊಲ ಇದೆ. ಅದು ಹೋದರೂ ಪರವಾಗಿಲ್ಲ, ಆದರೆ ನನ್ನ ಮಗನ ಸಾವಿಗೆ ನ್ಯಾಯ ತರುತ್ತೇನೆ” ಎಂದು ಹೇಳಿದ್ದಾರೆ.

ಮದುವೆ ಕನಸು ನುಚ್ಚುನೂರು!

ಚಂದ್ರು ಮನೆಯ ಹಿರಿಯ ಮಗನಾಗಿದ್ದು, ಅವನ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದರು. ಬೀಳಲಿಂಗೇಶ್ವರ ಜಾತ್ರೆಯ ಬಳಿಕ ಹುಡುಗಿ ನೋಡಿ ಮದುವೆ ಮಾಡಲು ಯೋಜನೆ ಹಾಕಿಕೊಂಡಿದ್ದರು. ಆದರೆ ಈ ದುರ್ಘಟನೆ ಅವರ ಕನಸುಗಳನ್ನು ಭಗ್ನಗೊಳಿಸಿದೆ.

ಪೊಲೀಸರ ತನಿಖೆ ಆರಂಭ

 

ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ.
ಸಮಗ್ರ ತನಿಖೆಯ ಬಳಿಕವೇ ನಿಜಾಂಶ ಹೊರಬರುವ ನಿರೀಕ್ಷೆ ಇದೆ.

IPL 2026: ನಮ್ಮ ಸಿಂಹಗಳ ದಿನ ಬಂತು! ಪಂದ್ಯಕ್ಕೂ ಮುನ್ನ RCBಗೆ ವಿಶ್‌ ಮಾಡಿದ ವಿಜಯ್‌ ಮಲ್ಯ!

0

ಬೆಂಗಳೂರು: ಐಪಿಎಲ್ 2026ರ ಸೀಸನ್‌ಗೆ ಇಂದು ಚಾಲನೆ ದೊರೆಯುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.

ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಮಾಡಿದ ಟ್ವೀಟ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ಮಲ್ಯ ಅವರು ಆರ್‌ಸಿಬಿ ತಂಡಕ್ಕೆ ಶುಭಹಾರೈಸಿ, “ಬೆಂಗಳೂರಿನ ನಮ್ಮ ಸಿಂಹಗಳಿಗೆ ಆ ದಿನ ಬಂದಿದೆ… ನಮ್ಮ ಸಿಂಹಗಳು ಐಪಿಎಲ್ ಚಾಂಪಿಯನ್ಸ್ ಆಗಲಿ. ಗುಡ್ ಲಕ್, ಪ್ಲೇ ಬೋಲ್ಡ್… ಧೈರ್ಯದಿಂದ ಆಟವಾಡಿ” ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಈ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಭಾರೀ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. “ಪ್ಲೇ ಬೋಲ್ಡ್, ವಿನ್ ಬಿಗ್” ಎಂದು ಕೆಲವರು ಬರೆದರೆ, “ಇದು ನಮ್ಮ ಸಮಯ” ಎಂದು ಮತ್ತಷ್ಟು ಅಭಿಮಾನಿಗಳು ಉತ್ಸಾಹ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಮಲ್ಯ ಅವರು ಆರ್‌ಸಿಬಿ ತಂಡದ ಕುರಿತು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. 2008ರಲ್ಲಿ 450 ಕೋಟಿ ರೂಪಾಯಿಗೆ ತಂಡವನ್ನು ಖರೀದಿಸಿದ ವಿಚಾರವನ್ನು ನೆನಪಿಸಿಕೊಂಡ ಅವರು, ಇಂದು ಅದರ ಮೌಲ್ಯ 16,500 ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಹಾಗೇ ವಿರಾಟ್ ಕೊಹ್ಲಿ ಅವರನ್ನು ಯುವಕರಾಗಿದ್ದಾಗಲೇ ತಂಡಕ್ಕೆ ಸೇರಿಸಿಕೊಂಡಿದ್ದೆ ಎಂದು ತಿಳಿಸಿದ್ದಾರೆ. “ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎ ಭಾಗವಾಗಿರುತ್ತದೆ” ಎಂದೂ ಹೇಳಿದ್ದಾರೆ.

ಪ್ರಸ್ತುತ ಆರ್‌ಸಿಬಿ ತಂಡದ ಮಾಲೀಕತ್ವವು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲ್ಯಾಕ್‌ಸ್ಟೋನ್ ಸೇರಿರುವ ಒಕ್ಕೂಟದ ಕೈಯಲ್ಲಿದೆ. ಈ ಒಕ್ಕೂಟವು ತಂಡವನ್ನು ಸುಮಾರು 1.78 ಬಿಲಿಯನ್ ಡಾಲರ್‌ಗೆ ಖರೀದಿಸಿದೆ.

Fake Doctor: ನಕಲಿ ವೈದ್ಯನ ಇಂಜೆಕ್ಷನ್ʼ​ಗೆ​​​​​​​​​​ 9ನೇ ತರಗತಿ ಬಾಲಕಿ ಬಲಿ!

ರಾಯಚೂರು: ನಕಲಿ ವೈದ್ಯ ನೀಡಿದ ಇಂಜೆಕ್ಷನ್ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದುರ್ಘಟನೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಬಿಂದು (14) ಎಂದು ಗುರುತಿಸಲಾಗಿದೆ. ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ನಕಲಿ ವೈದ್ಯನ ಬಳಿ ಇಂಜೆಕ್ಷನ್ ಪಡೆದಿದ್ದಳು.

ಇಂಜೆಕ್ಷನ್‌ಗೆ ರಿಯಾಕ್ಷನ್ ಉಂಟಾಗಿ ಆರೋಗ್ಯ ತೀವ್ರವಾಗಿ ಹದಗೆಟ್ಟ ಪರಿಣಾಮ ಬಿಂದು ಮೃತಪಟ್ಟಿದ್ದಾಳೆ. ಘಟನೆಯ ನಂತರ ನಕಲಿ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕವಿತಾಳ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸ ಅವಕಾಶಗಳು: ಪ್ರಧಾನಿ ಮೋದಿ

0

ನವದೆಹಲಿ: ಉತ್ತರ ಪ್ರದೇಶದ ಜೇವರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಯೋಜನೆ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಮಾನ ನಿಲ್ದಾಣವು ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಪರ್ಕ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇದು ಭಾರತದ ಹೊಸ ಚೈತನ್ಯದ ಸಂಕೇತವಾಗಿದ್ದು, ಉತ್ತರ ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದು ಹೇಳಿದರು.

ಈ ಯೋಜನೆ ಪಶ್ಚಿಮ ಉತ್ತರ ಪ್ರದೇಶದ ರೈತರು ಮತ್ತು ಯುವಜನರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಿದೆ. ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಹೊಸ ಗುರುತು ತರುವುದಾಗಿ ಮೋದಿ ಹೇಳಿದರು.

ಅಲ್ಲದೆ, ನೋಯ್ಡಾ ವಿಮಾನ ನಿಲ್ದಾಣದಿಂದ ಆಗ್ರಾ, ಮಥುರಾ, ಗಾಜಿಯಾಬಾದ್, ಮೀರತ್, ಇಟಾವಾ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!