ಗುಲ್ಮೋಹರ್ ಹೂವಿನ ಸುರಂಗವಾಗಿ ಮಿಂಚಿದ ರಸ್ತೆ!
ಬೆಂಗಳೂರಿನಲ್ಲಿ ಎಬೋಲಾ ಶಂಕಿತ ಪ್ರಕರಣ: ಉಗಾಂಡಾ ಮೂಲದ ಮಹಿಳೆ ಆಸ್ಪತ್ರೆಗೆ ಶಿಫ್ಟ್!
ಬೆಂಗಳೂರು: ರಾಜ್ಯದಲ್ಲಿ ಮೊದಲ ಎಬೋಲಾ ಪ್ರಕರಣ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಉಗಾಂಡಾದಿಂದ ಬೆಂಗಳೂರಿಗೆ ಆಗಮಿಸಿದ್ದ 28 ವರ್ಷದ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಂಡುಬಂದಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಶಂಕಿತ ಮಹಿಳೆಯನ್ನು ನಗರದ ರಾಜೀವ್ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿ ಐಸೋಲೇಷನ್ ವಾರ್ಡ್‌ನಲ್ಲಿ ತೀವ್ರ ನಿಗಾದಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ.
ಮಹಿಳೆಯಿಂದ ರಕ್ತ ಹಾಗೂ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಸೋಂಕಿನ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಹೆಚ್ಚಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ನಿಗಾ ಮತ್ತಷ್ಟು ಕಠಿಣಗೊಳಿಸಲಾಗಿದೆ.
ಸನಾತನ ಸಂರಕ್ಷಣೆಗೆ ಹಿಂದೂ ಸಮಾವೇಶ!
“ಹಿಂದೂ ಸಮಾಜದ ಐಕ್ಯತೆ ಮತ್ತು ಜಾಗೃತಿಯೇ ಸಮಾವೇಶದ ಪ್ರಮುಖ ಉದ್ದೇಶ.”ರಾಜು ಖಾನಪ್ಪನವರ
ರಸ್ತೆ ಅಭಿವೃದ್ಧಿಗೆ ಸಚಿವ ಎಚ್‌ಕೆಪಿ ಚಾಲನೆ
ಗ್ಯಾರಂಟಿ ಯೋಜನೆಗಳಲ್ಲಿ ಗೊಂದಲ ಬೇಡ
“ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿದಾಗಲೇ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ.”ನಾಗರಾಜ ಮಡಿವಾಳರ
ಕರ್ನಾಟಕ ಮಾದರಿ ದೇಶಕ್ಕೆ ಮಾದರಿ!
“ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಸಿಯುತ್ತದೆ ಎಂದವರಿಗೆ ಕರ್ನಾಟಕದ ಸಾಧನೆಗಳೇ ಉತ್ತರವಾಗಿವೆ.”ಅಶೋಕ ಮಂದಾಲಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ
- ಜಿಎಸ್‌ಡಿಪಿ ಬೆಳವಣಿಗೆಯಲ್ಲಿ ದೇಶದಲ್ಲೇ 1ನೇ ಸ್ಥಾನ
- 1.31 ಲಕ್ಷ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವೆಚ್ಚ
- 10.27 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಣೆ
- 6 ಲಕ್ಷ ಉದ್ಯೋಗ ಸೃಷ್ಟಿ ಗುರಿ
- 20 ಸಾವಿರ ಪೌರಕಾರ್ಮಿಕರ ಕಾಯಂಗೊಳಿಸುವಿಕೆ
- 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಲಾಭ
- 17 ಡೆಂಗೀ, ಆರೋಗ್ಯ ಸೇವೆ, ಗೃಹ ಆರೋಗ್ಯ ಯೋಜನೆ ಜಾರಿ
- ರೈತರಿಗೆ ಸಾವಿರಾರು ಕೋಟಿ ರೂ. ಬೆಳೆ ಪರಿಹಾರ ಹಾಗೂ ನೀರಾವರಿ ಯೋಜನೆಗಳು
ಬಸವಾದಿ ಶರಣರ ಹೆಸರಲ್ಲಿ ಹಿಂದೂ ಸಮಾವೇಶ ಯಾಕೆ?
“ಬಸವಾದಿ ಶರಣರ ತತ್ವ ಸಮಾನತೆಗಾಗಿ, ಅದನ್ನು ಹಿಂದೂತ್ವದ ರಾಜಕೀಯಕ್ಕೆ ಬಳಸುವುದು ಸರಿಯಲ್ಲ.”ಬಸವರಾಜ ಸೂಳಿಬಾವಿ, ಬಂಡಾಯ ಸಾಹಿತಿ
ಇಂದು ಅಧಿಕ ಮಾಸದ ಆಧ್ಯಾತ್ಮಿಕ ಸಂಭ್ರಮ
ಅಂಬಾಭವಾನಿ ಸನ್ನಿಧಿಯಲ್ಲಿ 111 ಮುತ್ತೈದೆಯರ ಕುಂಕುಮಾರ್ಚನೆ ವೈಭವ
ಬೆಟಗೇರಿ: ಅಧಿಕ ಮಾಸದ ಪುಣ್ಯಪರ್ವದ ಅಂಗವಾಗಿ ಬೆಟಗೇರಿಯ ಐತಿಹಾಸಿಕ ಶ್ರೀ ಅಂಬಾಭವಾನಿ ದೇವಸ್ಥಾನ ಇಂದು ಭಕ್ತಿಯ ರಂಗಿನಿಂದ ಕಂಗೊಳಿಸಲಿದ್ದು, ಎಸ್‌ಎಸ್‌ಕೆ ಸಮಾಜದ ಆಶ್ರಯದಲ್ಲಿ ವಿಶೇಷ ಕುಂಕುಮಾರ್ಚನೆ ಕಾರ್ಯಕ್ರಮ ಭವ್ಯವಾಗಿ ನಡೆಯಲಿದೆ.
ಮೂರು ವರ್ಷಕ್ಕೊಮ್ಮೆ ಬರುವ ಈ ಪವಿತ್ರ ಅಧಿಕ ಮಾಸದಲ್ಲಿ ದೇವಿ ಆರಾಧನೆ ಮಾಡಿದರೆ ಐಶ್ವರ್ಯ, ಶಾಂತಿ ಮತ್ತು ಸೌಭಾಗ್ಯ ಲಭಿಸುತ್ತದೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರಲ್ಲಿ ಅಪಾರ ಉತ್ಸಾಹ ಮನೆ ಮಾಡಿದೆ.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ 111 ಮುತ್ತೈದೆಯರು ಕೆಂಪು ಸೀರೆ ಧರಿಸಿ ದೇವಿಯ ಸನ್ನಿಧಿಯಲ್ಲಿ ಸಾಲಾಗಿ ಕುಳಿತು ಕುಂಕುಮಾರ್ಚನೆ ನೆರವೇರಿಸಲಿದ್ದಾರೆ. ಕೆಂಪು ಬಣ್ಣವನ್ನು ಶಕ್ತಿ, ಮಂಗಳ ಮತ್ತು ಸೌಭಾಗ್ಯದ ಪ್ರತೀಕವೆಂದು ಪರಿಗಣಿಸಲಾಗಿದ್ದು, 111 ಸಂಖ್ಯೆಯನ್ನು ಶುಭ ಸಂಕೇತವಾಗಿ ಆರಿಸಲಾಗಿದೆ.
ದೇವಿಯ ಸಹಸ್ರ ಅಂಬಾಭವಾನಿ ನಾಮಾವಳಿ ಪಠಣದ ನಡುವೆ ಪ್ರತಿಯೊಂದು ನಾಮಕ್ಕೂ ಮಹಿಳೆಯರು ಭಕ್ತಿಭಾವದಿಂದ ಕುಂಕುಮ ಅರ್ಪಿಸಲಿದ್ದಾರೆ. ದೇವಾಲಯದ ಆಧ್ಯಾತ್ಮಿಕ ವಾತಾವರಣ ಭಕ್ತರನ್ನು ಭಾವಪರವಶಗೊಳಿಸುವ ನಿರೀಕ್ಷೆ ಇದೆ.
ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಭಕ್ತರ ಸಂಚಾರ ಹೆಚ್ಚಾಗಲಿದ್ದು, ನೂರಾರು ಮಂದಿ ಈ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಗಲಿದ್ದಾರೆ.
ಊರಿನ ಸುಖ-ಶಾಂತಿ, ಉತ್ತಮ ಮಳೆ-ಬೆಳೆ ಹಾಗೂ ಜನರ ಸಂಕಲ್ಪ ಸಿದ್ಧಿಯಾಗಲಿ ಎಂಬ ಪ್ರಾರ್ಥನೆಯೊಂದಿಗೆ ನಡೆಯಲಿರುವ ಈ ಕುಂಕುಮಾರ್ಚನೆ ಭಕ್ತಿ, ಪರಂಪರೆ ಮತ್ತು ಸಂಸ್ಕೃತಿಯ ಅದ್ಭುತ ಸಂಗಮವಾಗಿ ಗಮನ ಸೆಳೆಯುತ್ತಿದೆ.
ಜನಸೇವೆಗೆ ಡಾಕ್ಟರೇಟ್ ಗೌರವ!
“ಈ ಗೌರವ ನನ್ನೊಬ್ಬರದ್ದಲ್ಲ; ಗ್ರಾಮಸ್ಥರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಕುಟುಂಬದವರ ಬೆಂಬಲದ ಫಲ ಇದು. ಜನರ ನೋವಿಗೆ ಸ್ಪಂದಿಸುವ ಆಡಳಿತವೇ ನಿಜವಾದ ಸೇವೆ. ಈ ಸನ್ಮಾನ ಇನ್ನಷ್ಟು ಜನಪರ ಸೇವೆ ಮಾಡಲು ಹೊಸ ಪ್ರೇರಣೆ ನೀಡಿದೆ.”ಅಮೀರ ನಾಯಕ, ಪಿಡಿಒ
ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್!? ಗುರುವಾರವೇ ಅಧಿಕಾರ ತೊರೆಯಲಿದ್ದಾರೆ ಸಿಎಂ? ಮುಂದಿನ ಮುಖ್ಯಮಂತ್ರಿ ಡಿಕೆಶಿ!?
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಸಸ್ಪೆನ್ಸ್ ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ದೆಹಲಿಯಲ್ಲಿ ನಡೆದ ಸುದೀರ್ಘ ಹೈಕಮಾಂಡ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸಾಧ್ಯತೆ ವ್ಯಕ್ತವಾಗಿದೆ.
ಮೂಲಗಳ ಪ್ರಕಾರ, ಸುಮಾರು 6 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯತ್ವ ಹಾಗೂ ರಾಷ್ಟ್ರ ರಾಜಕಾರಣಕ್ಕೆ ತೆರಳುವಂತೆ ಹೈಕಮಾಂಡ್ ಆಫರ್ ನೀಡಿದೆ ಎನ್ನಲಾಗಿದೆ. ಆದರೆ ಈ ಪ್ರಸ್ತಾವಕ್ಕೆ ಅವರು ತಕ್ಷಣ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.
ಸಭೆಯ ಬಳಿಕ ಬೆಂಗಳೂರಿಗೆ ವಾಪಸಾದ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಜಾರ್ಜ್ ನಿವಾಸದಲ್ಲಿ ರಹಸ್ಯ ಚರ್ಚೆ ನಡೆಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಈ ವೇಳೆ ಸಿಎಂ ಸ್ಥಾನದಿಂದ ರಾಜೀನಾಮೆ ನೀಡುವ ಕುರಿತು ಚರ್ಚೆ ನಡೆದಿದ್ದು, ಆರಂಭದಲ್ಲಿ ಆಪ್ತರು ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದರೆಂದು ಮೂಲಗಳು ತಿಳಿಸಿವೆ. ನಿಮ್ಮ ಪರವಾಗಿ ಹೈಕಮಾಂಡ್ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಆದರೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಧಾರವನ್ನು ನೇರವಾಗಿ ನಿರಾಕರಿಸಲು ಸಾಧ್ಯವಿಲ್ಲ ಎಂಬ ನಿಲುವು ವ್ಯಕ್ತಪಡಿಸಿ, ಅಗತ್ಯವಿದ್ದರೆ ರಾಜೀನಾಮೆ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಧಿಕೃತ ಸ್ಪಷ್ಟೀಕರಣ ಬಂದಿಲ್ಲ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

