Home Blog Page 243

ಉನ್ನತಿ ಗ್ರಾಮೀಣ ಜನರ ಆಶಾಕಿರಣ: ಸಿ.ಆರ್. ಮುಂಡರಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನರ ಕೌಶಲ್ಯ ಗುರುತಿಸಿ, ಜೀವನೋಪಾಯಕ್ಕೆ ಅಗತ್ಯವಾದ ತರಬೇತಿ ನೀಡಲು ಉನ್ನತಿ ಯೋಜನೆ ಮಹತ್ತರ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.

ತಾಲೂಕಿನ ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಎಸ್‌ಬಿಐ- ಎಎಸ್‌ಎಫ್-ಆರ್ ಸೆಟಿ ಹುಲಕೋಟಿ ಇವುಗಳ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ 60 ದಿನಗಳಿಗೂ ಹೆಚ್ಚು ಅಕುಶಲ ದಿನಗಳನ್ನು ಪೂರೈಸಿದವರಿಗಾಗಿ ಹಮ್ಮಿಕೊಂಡ 30 ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜಿ.ಪಂ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ ಮಾತನಾಡಿ, ಉನ್ನತಿ ಯೋಜನೆಯು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾರ್ಮಿಕರ ಕೌಶಲ್ಯದ ನೆಲೆಯನ್ನು ನವೀಕರಿಸಿ, ಅವರ ಜೀವನೋಪಾಯ ಸುಧಾರಿಸುವ ಮಹತ್ತರ ಕಾರ್ಯ ಈ ತರಬೇತಿಯ ಆಶಯವಾಗಿದೆ ಎಂದರು.

ಲೀಡ್ ಬ್ಯಾಂಕ್ ಜಿಲ್ಲಾ ಮ್ಯಾನೇಜರ್ ಸಂತೋಷ ಎಂ.ವಿ ಮಾತನಾಡಿ, ಅಂಕ ಪಟ್ಟಿಯನ್ನು ನೋಡಿ ಉದ್ಯೋಗ ನೀಡುವ ಕಾಲ ಇದಲ್ಲ. ಇಂದಿನ ಆಧುನಿಕ ಕಾಲದಲ್ಲಿ ಯಾವುದೇ ಕೆಲಸ ಸಣ್ಣದು ಸಹ ಅಲ್ಲ. ಮಾಡುವ ಕೆಲಸದಲ್ಲಿ ನೈಪುಣ್ಯತೆ ಇದ್ದು, ಅದರಲ್ಲಿ ಉತ್ತಮ ಕೌಶಲ್ಯವಂತರಾಗಿದ್ದರೆ ಕೆಲಸ ನೀಡಲು ಅನೇಕ ಸಂಘ-ಸಂಸ್ಥೆಗಳು ಮುಂದೆ ಬರುತ್ತವೆ. ಕೌಶಲ್ಯ ಉಳ್ಳವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಬ್ಯಾಂಕ್‌ಗಳು ಸನ್ನದ್ಧವಾಗಿವೆ. ದೇಶದ ಪ್ರಗತಿಗೆ ಕೌಶಲ್ಯ ಹೊಂದಿದ ಯುವ ಜನರ ಅಗತ್ಯವಿದೆ. ಸರ್ಕಾರದ ಹಲವು ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕೌಶಲ್ಯ ಪಡೆದು ಉತ್ತಮ ಸಾಧನೆ ಮಾಡಿದ ಹಲವು ಜನರು ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಿ, ನೂರಾರು ಜನರಿಗೆ ಉದ್ಯೋಗ ನೀಡಿ ನೌಕರರ ಆರ್ಥಿಕ ಸ್ಥಿತಿ ವೃದ್ಧಿಸಿದ್ದಾರೆ ಎಂದು ತಿಳಿಸಿದರು.

ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ ಕಿರಣ ಕುಮಾರ ಎಸ್.ಎಚ್ ಮತ್ತು ಎನ್‌ಆರ್‌ಎಲ್‌ಎಂ ಕಾರ್ಯಕ್ರಮ ವ್ಯವಸ್ಥಾಪಕ ರಘುನಾಥಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರೇಶ ಬಸನಗೌಡ್ರ, ಅನಿಲಕುಮಾರ ಕೆ, ಸಹನಾ ಕೋಟೆಕಲ್ಲ, ಮಲ್ಲಮ್ಮ ರಡ್ಡೆರ, ರೇಣುಕಾ ಪಲ್ಲೆದ, ನೀಲಾ ಸಂಗನಾಳ ಇತರರಿದ್ದರು. ಹುಲಕೋಟಿ ಆರ್-ಸೆಟಿ ತರಬೇತುದಾರ ನವೀನ ಹಿರೇಗೌಡ್ರ ನಿರೂಪಿಸಿ, ವಂದಿಸಿದರು.

ಜೀವನದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಮುಂದೆ ಬರಲು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಉಚಿತ ಊಟ, ವಸತಿ ಹಾಗೂ ಸಹಾಯಧನ ನೀಡುವ ಮೂಲಕ ಕೌಶಲ್ಯ ಮತ್ತು ಜ್ಞಾನ ಹೆಚ್ಚಿಸಲು ಉನ್ನತಿ ತರಬೇತಿ ಕಾರ್ಯಕ್ರಮ ರೂಪಿಸಿರುವುದು ಗ್ರಾಮೀಣ ಜನರಿಗೆ ಆಶಾಕಿರಣವಾಗಿದೆ ಎಂದು ಸಿ.ಆರ್. ಮುಂಡರಗಿ ಅಭಿಪ್ರಾಯಪಟ್ಟರು.

ರೈತ ಬಂಧುಗಳ ಸಮಾಗಮ `ಕೃಷಿ ಮೇಳ’

0

ಉತ್ತರ ಕರ್ನಾಟಕದ ಅತ್ಯಂತ ಪ್ರಮುಖವಾದ ಅರೆ-ಶುಷ್ಕ ಪ್ರದೇಶಗಳಲ್ಲಿ ಒಂದಾದ ವಿಜಯಪುರ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ವಿರಳ, ಅನಿಶ್ಚಿತ, ಅನಿಯಮಿತ ಮಳೆ, ಬರಗಾಲ ಮತ್ತು ಭಾರೀ ಮಳೆಯಿಂದ ತತ್ತರಿಸುವದರಿಂದ ರೈತರು ತೀವ್ರ ಬೆಳೆ ಆರ್ಥಿಕ ನಷ್ಟವನ್ನು ಎದುರಿಸುವಂತೆ ಮಾಡಿದೆ.

ಇಂತಹ ಬದಲಾಗುತ್ತಿರುವ ಹವಾಮಾನ ಸನ್ನಿವೇಶದ ಏರಿಳಿತಗಳನ್ನು ನಿಭಾಯಿಸಲು ನಿರಂತರ ಕೃಷಿ ಸಂಶೋಧನೆ ಮತ್ತು ವಿಸ್ತರಣೆಯ ಮೂಲಕ ರೈತರಿಗೆ ಉತ್ತಮ ತಾಂತ್ರಿಕ ಬೆಂಬಲ ಹಾಗೂ ಆಧುನಿಕ ಕೃಷಿ ತಂತ್ರಜ್ಞಾನದ ಅಗತ್ಯವಿದೆ. ಈ ದಿಶೆಯಲ್ಲಿ ವಿಜಯಪುರದ ಕೃಷಿ ಸಂಶೋಧನಾ ಕೇಂದ್ರವು ಒಣ ಭೂಮಿ ಕೃಷಿಯ ಸಂಶೋಧನೆಯ ಉದ್ದೇಶಕ್ಕಾಗಿ ಸ್ಥಾಪಿಸಿತು. ಈ ಕೇಂದ್ರವು ಪ್ರಸ್ತುತ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರವೆಂದು ಈಗ ಮರುನಾಮಕರಣಗೊಂಡಿತು. ವಿಜ್ಞಾನಿಗಳ ಸತತ ವೈಜ್ಞಾನಿಕ ಸಂಶೋಧನೆಗಳಿಂದ ಸಂಶೋಧನಾ ಕೇಂದ್ರವು ಅನೇಕ ರಾಷ್ಟ್ರೀಯ ಮನ್ನಣೆಗಳನ್ನು ಪಡೆದಿದೆ.

ರೈತ ಸಮುದಾಯದ ಆಕಾಂಕ್ಷೆಗಳು, ದಾರ್ಶನಿಕರು, ಸ್ಥಳೀಯ ರಾಜಕೀಯ ನಾಯಕರು ನೀತಿ ನಿರೂಪಕರು ಹಾಗೂ ಸರ್ಕಾರ ಮಾಡಿದ ಪ್ರಯತ್ನಗಳ ಫಲವಾಗಿ ಈ ಪ್ರದೇಶದಲ್ಲಿ ರೈತ ಮಕ್ಕಳಿಗೆ ಕೃಷಿ ಶಿಕ್ಷಣವನ್ನು ನೀಡುವ ಪರಿಣಾಮವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಕೃಷಿ ಕಾಲೇಜನ್ನು 25ನೇ ಅಕ್ಟೋಬರ್ 1990ರಂದು ವರದನ್ ಸಮಿತಿಯ ಶಿಫಾರಸ್ಸು ಪ್ರಕಾರ ಸ್ಥಾಪನೆಯಾಯಿತು. ರೈತರಿಗೆ ಅಗತ್ಯವಿರುವ ಕೃಷಿ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುತ್ತಿವೆ ಮತ್ತು ಇದೇ ಆವರಣದಲ್ಲಿ ಕೃಷಿ ವಿಜ್ಞಾನ ಕೇಂದ್ರವಿರುವದರಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪಣೆಯಲ್ಲಿ ತರಬೇತಿಗಳನ್ನು ಆಯೋಜಿಸುವುದು, ಉತ್ತಮ ಪ್ರಾತ್ಯಕ್ಷಿಕೆಗಳನ್ನು ಕೈಗೊಂಡು ರೈತರ ಅನುಕೂಲಕ್ಕಾಗಿ ತಂತ್ರಜ್ಞಾನಗಳನ್ನು ತ್ವರಿತಗತಿಯಲ್ಲಿ ನೀಡುತ್ತಿವೆ. ಇದಲ್ಲದೆ ಆವರಣದಲ್ಲಿ ರಾಜ್ಯ ಕೃಷಿ ಇಲಾಖೆ ಕಚೇರಿಯನ್ನು ಸಹ ಒಳಗೊಂಡಿದೆ ಮತ್ತು ತಂತ್ರಜ್ಞಾನ ವರ್ಗಾವಣೆಯನ್ನು ನೀಡುವ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ಸಹ ಹೊಂದಿದೆ.

ಇಂತಹ ಉತ್ತಮವಾಗಿ ಅಭಿವೃದ್ಧಿ ಹೊಂದಿದ ಸಂಸ್ಥೆಯಲ್ಲಿ ಪ್ರತಿ ವರ್ಷ ಹಿಂಗಾರು ಹಂಗಾಮಿನ ಕೊನೆಯ ಡಿಸೆಂಬರ್‌ನಲ್ಲಿ ಅತೀ ದೊಡ್ಡ `ಕೃಷಿಮೇಳ’ವನ್ನು ನಡೆಸಲಾಗುತ್ತದೆ. ಈ ಮೇಳದಲ್ಲಿ ಕೃಷಿ ಸಮುದಾಯಕ್ಕೆ ಬೇಕಾದ ಆಧುನಿಕ ಕೃಷಿ ತಂತ್ರಜ್ಞಾನ, ಇದು ಕೃಷಿ ಕ್ಷೇತ್ರದಲ್ಲಿ ಆದ ನಾವೀನ್ಯತೆಗಳು ಪ್ರದರ್ಶಿಸಲು ಮತ್ತು ಪ್ರಸಾರ ಮಾಡಲು ಅನೇಕ ಸಾರ್ವಜನಿಕ ಹಾಗೂ ಖಾಸಗಿ ವಲಯಗಳ ಕೃಷಿ ಉದ್ಯಮಿಗಳು, ಕೃಷಿ ವೃತ್ತಿಪರರು ಮತ್ತು ಸಂಬಂಧಿತ ಸಂಸ್ಥೆಗಳು ಭಾಗವಹಿಸುವದರಿಂದ ಅನೇಕ ಪ್ರಯೋಜನಗಳಾಗುತ್ತಿವೆ.

ಈ ವರ್ಷ ವಿಜಯಪುರ ಕೃಷಿ ಕಾಲೇಜಿನ ಆವರಣದಲ್ಲಿ `ಕೃಷಿಯಲ್ಲಿ ನಾವೀನ್ಯತೆಗಳು ಮತ್ತು ನವೋದ್ಯಮಗಳು’ ಎಂಬ ಘೋಷವಾಕ್ಯದ ಅಡಿಯಲ್ಲಿ 2026ರ ಜನವರಿ 4ರಿಂದ 6ರವರೆಗೆ ಕೃಷಿಮೇಳವನ್ನು ಆಯೋಜಿಸಲಾಗಿದೆ. ಆವರಣದಲ್ಲಿ ಕೈಗೊಳ್ಳಲಾದ ಸಂಶೋಧನೆ, ವಿಸ್ತರಣೆ ಮತ್ತು ಬೋಧನಾ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ರೈತ ಸಮುದಾಯಕ್ಕೆ ತಿಳಿಸಲಾಗುತ್ತದೆ. ವಿವಿಧ ಕ್ಷೇತ್ರ ಪ್ರಯೋಗಗಳು ಮತ್ತು ಪ್ರದರ್ಶನಗಳ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಲು ಬಿಡುಗಡೆಯಾದ/ಬಿಡುಗಡೆಯಾಗಲಿರುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುತ್ತದೆ.

ಒಟ್ಟಾರೆಯಾಗಿ 2026ರ ಕೃಷಿಮೇಳವು ಉತ್ತರ ಕರ್ನಾಟಕದ ಹೆಚ್ಚಿನ ಸಂಖ್ಯೆಯ ರೈತರಿಗೆ ಇಂದಿನ ಕೃಷಿಯಲ್ಲಿನ ಹೊಸ ಅವಿಷ್ಕಾರಗಳ ಮೇಲೆ ಹೆಚ್ಚಿನ ಒತ್ತು ನೀಡುವ ಮೂಲಕ ವ್ಯಾಪಕ ಮಾಹಿತಿಯನ್ನು ವಿಜಯಪುರ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ಕೃಷಿಮೇಳದಲ್ಲಿ ಒದಗಿಸುವ ನಿರೀಕ್ಷೆಯಿದೆ. ಹಿಂದಿನ ವರ್ಷಗಳಂತೆ ಈ ಕೃಷಿಮೇಳದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಂರಕ್ಷಣೆ, ಉತ್ತಮ ಬೆಳೆ ಕಾಲುವೆ ಪದ್ಧತಿಗಳು, ಜಾನುವಾರಗಳನ್ನು ಒಳಗೊಂಡ ಸಮಗ್ರ ಕೃಷಿ ಪದ್ಧತಿಗಳು, ಸಾವಯವ, ನೈಸರ್ಗಿಕ ಕೃಷಿ ಪದ್ಧತಿ, ಕೃಷಿಯಲ್ಲಿ ಯಾಂತ್ರೀಕರಣ (ಡ್ರೋನ್ ತಂತ್ರಜ್ಞಾನ ಸೇರಿದಂತೆ), ಹವಾಮಾನ ವೈಪರೀತ್ಯಗಳ ನಿರ್ವಹಣೆ ಮತ್ತು ಅದರ ಪ್ರಕೋಪಗಳ ತಗ್ಗಿಸುವಿಕೆ, ಮಾರುಕಟ್ಟೆ ಬುದ್ಧಿಮತ್ತೆ ಮತ್ತು ಆರ್ಥಿಕ ಭದ್ರತೆ ಇತ್ಯಾದಿಗಳ ಕುರಿತು ಕೃಷಿ ತಂತ್ರಜ್ಞಾನಗಳನ್ನು ಪಡೆಯಲು ಮತ್ತು ನವೀಕರಿಸಲು ಈ ಪ್ರದೇಶದ ಹೆಚ್ಚಿನ ರೈತರನ್ನು ಆಕರ್ಷಿಸುವ ನಿರೀಕ್ಷೆ ಇದೆ.

ಕೃಷಿ ಮೇಳವನ್ನು ಜ. 4ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕೃಷಿ ವಸ್ತುಪ್ರದರ್ಶನ ಉದ್ಘಾಟಿಸಲಿದ್ದು, ಕೃಷಿ ಪ್ರಕಟಣೆಗಳ ಬಿಡುಗಡೆಯನ್ನು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ನೇರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾನ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಬಿ.ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಡಾ. ಸುಧಾ ಮೂರ್ತಿ, ಜಿಲ್ಲೆಯ ಎಲ್ಲ ವಿಧಾನಸಭೆ ಶಾಸಕರು ಮತ್ತು ವಿಧಾನ ಪರಿಷತ್ ಶಾಸಕರು ಭಾಗವಹಿಸಲಿದ್ದಾರೆ. ಧಾರವಾಡ ಕೃಷಿ ವಿ.ವಿ ಕುಲಪತಿ ಡಾ. ಪಿ.ಎಲ್. ಪಾಟೀಲ, ಧಾರವಾಡ ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ, ಸಿ.ಇ.ಓ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಆಗಮಿಸಲಿದ್ದಾರೆ.

ಕೆಲಸದ ಒತ್ತಡ ನಿವಾರಣೆಗೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿ: ಡಾ. ಬಸವರಾಜ ಬಳ್ಳಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ವರ್ಷ ಪೂರ್ತಿ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರ ಒತ್ತಡ ನಿವಾರಣೆಗೆ ಜ. 3ರಂದು ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಹೇಳಿದರು.

ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿಯಿದೆ. ಕಾರಣ, ಪ್ರಸ್ತುತ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಸಾಕಷ್ಟು ಒತ್ತಡವಿರುತ್ತದೆ. ಹಾಗಾಗಿ ವರ್ಷ ಪೂರ್ತಿ ಕೆಲಸದ ಒತ್ತಡದಲ್ಲಿರುವ ಸರ್ಕಾರಿ ನೌಕರರು ಕೆಲಸದ ಹೊರತಾಗಿ ರಾಜ್ಯ ಸರ್ಕಾರಿ ನೌಕರ ಸಂಘದ ವತಿಯಿಂದ ಏರ್ಪಡಿಸಿರುವ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ತಿಳಿಸಿದರು.

ಈಗಾಗಲೇ ಕ್ರೀಡಾಕೂಟಕ್ಕೆ 1500ಕ್ಕೂ ಹೆಚ್ಚು ನೌಕರರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ನೌಕರರಿಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಉತ್ಸಾಹದಿಂದ ನೌಕರರು ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ 2026ರ ವಿಶೇಷ ಕ್ಯಾಲೆಂಡರ್ ಬಿಡುಗಡೆಗೊಳಿಸಿ, ಜಿಲ್ಲೆಯಲ್ಲಿರುವ 9600 ಸರ್ಕಾರಿ ನೌಕರರಿಗೂ ಈ ವರ್ಷದ ಕ್ಯಾಲೆಂಡರ್ ತಲುಪಿಸಿ ಸಂಘ ಸದಾ ನೌಕರರ ನೋವು, ನಲಿವುಗಳಿಗೆ ಸ್ಪಂದಿಸುವುದೆಂದು ಭರವಸೆ ನೀಡಲಾಗವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ವಾಯ್. ಮಲಕಶೆಟ್ಟಿ, ಮಹಾಂತೇಶ ನಿಟ್ಟಾಲಿ, ಡಿ.ಎಸ್. ತಳವಾರ, ಸಿದ್ಧಪ್ಪ ಲಿಂಗದಾಳ, ದೇವಪ್ಪ ದುರಗಣ್ಣವರ, ಹನಮಂತರಾಜು ಕಂಟಿಗೊರ್ಣಣನವರ, ಆತ್ ಗಾಡಗೋಳಿ ಮುಂತಾದವರು ಹಾಜರಿದ್ದರು.

ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿ ಗುಂಜಿಕರ ಮಾತನಾಡಿ, ಸರ್ಕಾರಿ ನೌಕರರ ಸಂಘ ಏರ್ಪಡಿಸುವ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಹಾಜರಾಗಿ ನಿತ್ಯದ ಒತ್ತಡದಿಂದ ಹೊರಬರಬೇಕು ಎಂದು ಹೇಳಿದರು.

ಬಸವೇಶ್ವರ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮಿಲನ

0

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸಿದ್ದಲಿಂಗ ನಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ 2014-15ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಬಿ. ಗೌಡರ ವಹಿಸಿಕೊಂಡಿದ್ದರು. ಎಮ್.ಎಮ್. ಪಿಯು ಕಾಲೇಜು ಉಪನ್ಯಾಸಕ ಎಸ್.ಬಿ. ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಮುಖ್ಯೋಪಾಧ್ಯಾಯ ಕೆ.ವಿ. ಕೋರಡ್ಡಿ, ಅಲಿ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಖಾಲಿದಾ ಸಬೀನ್ ಎಸ್.ಗುಳೇದಗುಡ್ಡ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಬಿ.ಕೆ. ನಿಂಬನಗೌಡರ, ಎಚ್.ಎಸ್. ಕರಕಣ್ಣವರ, ಬಿ.ಬಿ. ಸಂಕನೂರ, ಸಿ.ಎಸ್. ಮಾನ್ವಿ, ಎಂ.ಎಸ್. ರಾಮಣ್ಣವರ, ಬಿ.ಬಿ. ಇಬ್ರಾಹಿಂಪೂರ, ಎಸ್.ಎಚ್. ಭಜಂತ್ರಿ, ಆರ್.ಕೆ. ಶಿವನಗೌಡರ, ಆರ್.ಐ. ಆದ್ವಾನಿ, ಬಿ.ಎಸ್. ಬೇವಿನಮರದ ಮುಂತಾದವರು ಭಾಗವಹಿಸಿದ್ದರು.

ಆರ್ ಸಿಬಿಗೆ ದೊಡ್ಡ ಆಘಾತ; ಈ ಬಾರಿ ಬೆಂಗಳೂರು ಪರ ಆಡಲ್ಲ ಎಲ್ಲಿಸ್ ಪೆರ‍್ರಿ!

0

ನವದೆಹಲಿ: 2026ರ ಮಹಿಳಾ ಪ್ರೀಮಿಯರ್ ಲೀಗ್‌ ಪಂದ್ಯಾವಳಿ ಜನವರಿ 9ರಿಂದ ಫೆಬ್ರವರಿ 5ರವರೆಗೆ ನಡೆಯಲಿದ್ದು, ಆರ್ ಸಿಬಿ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ.

ಎಸ್, ಈ ಟೂರ್ನಿಯಿಂದ ಆರ್‌ಸಿಬಿಯ ಎಲ್ಲಿಸ್ ಪೆರ್ರಿ, ಯುಪಿ ವಾರಿಯರ್ಸ್‌ನ ತಾರಾ ನರ್ರಿಸ್ ಹಾಗೂ ದೆಹಲಿ ಕ್ಯಾಪಿಟಲ್ಸ್‌ನ ಅನ್ನಾಬೆಲ್ ಸದರ್ಲ್ಯಾಂಡ್ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್‌ಗಳಾದ ಪೆರ್ರಿ ಮತ್ತು ಸದರ್ಲ್ಯಾಂಡ್ ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದು, ಪೆರ್ರಿ ಬದಲಾಗಿ ಆರ್‌ಸಿಬಿ ಸಯಾಲಿ ಸತ್‌ಘರೆ ಅವರನ್ನು ಹಾಗೂ ದೆಹಲಿ ಕ್ಯಾಪಿಟಲ್ಸ್ ಸದರ್ಲ್ಯಾಂಡ್ ಬದಲಿಗೆ ಅಲಾನಾ ಕಿಂಗ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಇನ್ನು 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಪಂದ್ಯಗಳು ಜನವರಿ 18ರಿಂದ ಫೆಬ್ರವರಿ 1ರವರೆಗೆ ನೇಪಾಳದಲ್ಲಿ ನಡೆಯಲಿದ್ದು, ಯುಎಸ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಕಾರಣ ತಾರಾ ನರ್ರಿಸ್ WPLನಲ್ಲಿ ಭಾಗವಹಿಸುವುದಿಲ್ಲ. ಅವರ ಸ್ಥಾನಕ್ಕೆ ಯುಪಿ ವಾರಿಯರ್ಸ್ ತಂಡವು ಆಸ್ಟ್ರೇಲಿಯಾದ ಆಲ್‌ರೌಂಡರ್ ಚಾರ್ಲಿ ನಾಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

ಸುಜ್ಞಾನದ ಬೆಳಕು ಕೊಟ್ಟವರು ಗುರು: ಮಲ್ಲಿಕಾರ್ಜುನ ಮಾಹಾಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ವಿದ್ಯಾರ್ಥಿ ಜೀವನದಲ್ಲಿ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ಬೆಳಕು ನೀಡಿದವರು ಗುರು. ಅವರನ್ನು ಎಂದೂ ಮರೆಯದಿರಿ ಎಂದು ಮುರುಘಾಮಠ ಧಾರವಾಡ ಹಾಗೂ ಗವಿಮಠ ಮುಳಗುಂದದ ಮಲ್ಲಿಕಾರ್ಜುನ ಮಾಹಾಸ್ವಾಮೀಜಿ ಹೇಳಿದರು.

ಅವರು ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಶಿಕ್ಷಣ ಸಮಿತಿಯ ಎಸ್‌ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ 2001-02ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಗುರುಗಳನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಂದು ಕಾರ್ಯಕ್ಕೂ ಗುರು ಬೇಕು. ಅದರಂತೆ ವಿದ್ಯಾರ್ಥಿ ಜೀವನಕ್ಕೆ ಗುರು ತುಂಬಾ ಅವಶ್ಯವಾಗಿದ್ದು, ಗುರುವಿನ ಮಾರ್ಗದಲ್ಲಿ ನಡೆದರೆ ಸನ್ಮಾರ್ಗ ಪ್ರಾಪ್ತಿಯಾಗುವುದರ ಜೊತೆಯಲ್ಲಿ ಸಮಾಜದಲ್ಲಿ ಸನ್ಮಾರ್ಗದ ಹಾದಿಯಲ್ಲಿ ಸಾಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು, ಹೆತ್ತ ತಂದೆ-ತಾಯಿಗಳನ್ನು ಎಂದೆಂದಿಗೂ ಮರೆಯಬಾರದು ಎಂದರು.

ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಬದುಕಿನುದ್ದಕ್ಕೂ ಗುರು ಅವಶ್ಯಕವಾಗಿದ್ದು, ಗುರಿಯನ್ನು ತಲುಪಲು ಗುರುವಿನ ಕೃಪೆ ಪಡೆದುಕೊಂಡಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯಶಸ್ಸು ಹೊಂದಲು ಸಾಧ್ಯವಾಗುತ್ತದೆ ಎಂದರು.

ಕಲಿಸಿದ ಗುರುಗಳನ್ನು ಬಾಲಲೀಲಾ ಮಹಾಂತ ಶಿವಯೋಗಿ ಗವಿಮಠದಿಂದ ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದವರೆಗೂ ವಿಶೇಷವಾಗಿ ಹೂವಿನ ಸುರಿಮಳೆಯೊಂದಿಗೆ ಗೌರವದಿಂದ ಬರಮಾಡಿಕೊಂಡರು. ಕಲಿಸಿದ ಗುರುಗಳನ್ನು ಹಾಗೂ ಸಂಸ್ಥೆಯ ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು. ಅಗಲಿದ ಗುರುಗಳಿಗೆ, ಹಾಗೂ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಅರ್ಪಿಸಿ ಮೌನಾಚರಣೆ ಮಾಡಲಾಯಿತು.

ಎಸ್‌ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ನಾಮ ಫಲಕವನ್ನು ಹಾಗೂ ಅಡುಗೆ ಕೋಣೆಗೆ ಫಲಕಗಳನ್ನು ಕೊಡುಗೆಯಾಗಿ ನೀಡಿದರು. ಸಂಸ್ಥೆ ನಡೆದುಬಂದ ದಾರಿ, ಗವಿಮಠದ ಬಾಲಲೀಲಾ ಮಹಾಂತ ಶಿವಯೋಗಿಗಳ ಹಾಗೂ ಮಲ್ಲಿಕಾರ್ಜುನ ಮಾಹಾಸ್ವಾಮಿಗಳ ಸಂಪೂರ್ಣ ವಿಡಿಯೋ ಮಾಹಿತಿ ಹಾಗೂ ದಿ. ಸಿ.ಬಿ. ಬಡ್ನಿ, ದಿ. ಆರ್.ಎನ್. ದೇಶಪಾಂಡೆ ಅವರು ನಡೆದುಬಂದ ಹಾದಿಯ ಕುರಿತು ವಿಡಿಯೋಗಳು ಮೂಡಿಬಂದವು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಧಾರವಾಡ ಮುರುಘಾಮಠ ಹಾಗೂ ಗವಿಮಠದ ಮಲ್ಲಿಕಾರ್ಜುನ ಮಾಹಾಸ್ವಾಮೀಜಿ ವಹಿಸಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಚೇರ್ಮನ್ ಎಂ.ಡಿ. ಬಟ್ಟೂರ ವಹಿಸಿದ್ದರು. ಉದ್ಘಾಟಕರಾಗಿ ಎಸ್.ಎಂ. ನೀಲಗುಂದ, ಮುಖ್ಯ ಅತಿಥಿಗಳಾಗಿ ಡಾ. ಎಸ್.ಸಿ. ಚವಡಿ, ಬಿ.ಸಿ. ಬಡ್ನಿ, ಎಫ್.ಎಸ್. ಅಮೋಘಿಮಠ, ಎಸ್.ಸಿ. ಕುರ್ತಕೋಟಿ, ವಿಜಯ ನೀಲಗುಂದ, ಕೆ.ಎಲ್. ಕರಿಗೌಡರ, ಪಿ.ಎ. ವಂಟಕರ, ಕಾಲೇಜಿನ ಪ್ರಾಚಾರ್ಯ ಎ.ಎಂ. ಅಂಗಡಿ, ಮುಖ್ಯೋಪಾಧ್ಯಾಯ ಇ.ಎಂ. ಗುಳೇದಗುಡ್ಡ, ಬಿ.ಜಿ. ಯಳವತ್ತಿ, ವಾಯ್.ಎಚ್. ಚಲವಾದಿ, ಎಚ್.ಎಂ. ಮಜ್ಜಿಗುಡ್ಡ, ಎಸ್.ಎಫ್. ಮುದ್ದಿನಗೌಡ್ರ ಸೇರಿದಂತೆ 2001/02ನೇ ಸಾಲಿನ ವಿದ್ಯಾರ್ಥಿಗಳು ಇದ್ದರು.

ಅಧ್ಯಕ್ಷತೆ ವಹಿಸಿದ್ದ ಎಂ.ಡಿ. ಬಟ್ಟೂರ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯುನ್ನತವಾದ ಸ್ಥಾನ ನೀಡಲಾಗಿದೆ. ಪ್ರತಿಯೊಬ್ಬರಿಗೂ ಗುರುವಿನ ಮಾರ್ಗದರ್ಶನ ಅವಶ್ಯವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಗುರುವಿಗೆ ಮಹತ್ವವಾದ ಪಾತ್ರ ವಹಿಸಿರುತ್ತಾರೆ. ಗುರುವಿನ ಮಾರ್ಗದರ್ಶನದಲ್ಲಿ ಸಾಗಿದಾಗ ಬದುಕು ಹಸನಾಗುತ್ತದೆ ಎಂದರು.

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ಪೊಲೀಸರಿಂದ ಹೈ ಅಲರ್ಟ್, ಎಂ.ಜಿ ರೋಡ್–ಚರ್ಚ್ ಸ್ಟ್ರೀಟ್‌ನಲ್ಲಿ ಬಂದೋಬಸ್ತ್!

0

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಹೊಸ ವರ್ಷದ ಸಂಭ್ರಮಕ್ಕೆ ಸಂಪೂರ್ಣ ಸಜ್ಜಾಗಿದೆ.

ರಾಜಧಾನಿಯ ಇಂದಿರಾನಗರ, ಕೋರಮಂಗಲ, ಎಂ.ಜಿ ರೋಡ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದ್ದು, ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸ್ವತಃ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ನಲ್ಲಿ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ, ಡಿಸಿಪಿ ಅಕ್ಷಯ್ ಎಂ. ಹಾಕೆ ಹಾಗೂ ಟ್ರಾಫಿಕ್ ಡಿಸಿಪಿ ಅನೂಪ್ ಶೆಟ್ಟಿ ಪರಿಶೀಲನೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಿಸಿಟಿವಿ ಕ್ಯಾಮೆರಾಗಳು, ಮಹಿಳಾ ಭದ್ರತೆಗೆ ವಿಶೇಷ ಐಲ್ಯಾಂಡ್‌ಗಳು, ವಾಚ್ ಟವರ್‌ಗಳು, ಬ್ಯಾರಿಕೇಡ್‌ಗಳು ಹಾಗೂ ಹೊಸದಾಗಿ ಅಳವಡಿಸಿದ ಕ್ಯೂಆರ್ ಕೋಡ್‌ಗಳ ಮೂಲಕ ಟ್ರಾಫಿಕ್, ಪೊಲೀಸ್ ಠಾಣೆ ಮತ್ತು ತುರ್ತು ಸೇವೆಗಳ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ತಾತ್ಕಾಲಿಕವಾಗಿ ಹೆಚ್ಚುವರಿ 360 ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಕೇಂದ್ರ ವಿಭಾಗದಲ್ಲೇ ಸುಮಾರು ಆರು ಸಾವಿರ ಸಿಸಿಟಿವಿಗಳ ಮೂಲಕ ನಿಗಾ ವಹಿಸಲಾಗಿದೆ.

ಕರ್ನಾಟಕ ವಿಚಾರದಲ್ಲಿ ಕೇರಳ-ಪಾಕಿಸ್ತಾನ ಮೂಗು ತೂರಿಸುವ ಅಗತ್ಯವಿಲ್ಲ: ವಿ.ಸೋಮಣ್ಣ

0

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯಲ್ಲಿ ನಡೆದ ಅಕ್ರಮ ಮನೆಗಳ ತೆರವು ವಿಚಾರವಾಗಿ ಕೇರಳ ಮತ್ತು ಪಾಕಿಸ್ತಾನ ಮೂಗು ತೂರಿಸಿರೋದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಗರಂ ಆಗಿದ್ದಾರೆ.

ಎಸ್, ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವುಗೊಳಿಸಿದ ಕ್ರಮದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು, ಈ ವಿಷಯದಲ್ಲಿ ಕೇರಳ ಹಾಗೂ ಪಾಕಿಸ್ತಾನ ಟೀಕೆ ಮಾಡಿರುವುದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮದೇ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲಾಗದ ಕೇರಳ ಸರ್ಕಾರ ಮತ್ತು ಪಾಕಿಸ್ತಾನಕ್ಕೆ ಕರ್ನಾಟಕದ ವಿಚಾರದಲ್ಲಿ ಮಾತನಾಡುವ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ. ಅಕ್ರಮವಾಗಿ ಒತ್ತುವರಿ ಮಾಡಿದ್ದ ಮನೆಗಳನ್ನು ತೆರವು ಮಾಡಿದ ಬಳಿಕ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಭರವಸೆ ನೀಡಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನಾಸ್ಪದವಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಇಂದಿಗೂ ಸೂರಿಲ್ಲದೆ ಬದುಕುತ್ತಿರುವ ನಿಜವಾದ ನಿರಾಶ್ರಿತರ ಕಡೆ ಸರ್ಕಾರ ಗಮನಹರಿಸಿಲ್ಲ ಎಂದು ಸೋಮಣ್ಣ ಪ್ರಶ್ನಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು!

0

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾರಿ ನಿರ್ದೇಶನಾಲಯ ಬಂಧಿಸಿದ್ದ ಪಪ್ಪಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಂದು ಷರತ್ತುಬದ್ಧವಾಗಿ ಬಿಡುಗಡೆಗೆ ಆದೇಶ ನೀಡಿದೆ. ಇಡಿ ತನಿಖೆಯ ವೇಳೆ ಪಪ್ಪಿ ಅವರ 9 ಬ್ಯಾಂಕ್ ಖಾತೆಗಳಲ್ಲಿ ಸುಮಾರು 40.69 ಕೋಟಿ ರೂ. ನಗದು ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಅಂದಾಜು 14.46 ಕೋಟಿ ರೂ. ಸೇರಿದಂತೆ ಒಟ್ಟು 55 ಕೋಟಿ ರೂ. ಹಣವನ್ನು ಫ್ರೀಜ್ ಮಾಡಲಾಗಿದೆ.

ಜೊತೆಗೆ ಐದು ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿತ್ತು.

ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಗೋವಿಂದ ಕಾರಜೋಳ ವ್ಯಂಗ್ಯ

0

ಬೆಂಗಳೂರು: ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಒಬ್ಬರು ದೆಹಲಿಯಲ್ಲಿ ಇದ್ದಾರೆ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರು ಅವರ ಆದೇಶವನ್ನು ಪಾಲಿಸಲಿಕ್ಕೆ ಕರ್ನಾಟಕದಲ್ಲಿ ಸಿಎಂ ಸ್ಥಾನದಲ್ಲಿದ್ದಾರೆ ಎಂಬುದು ಈ ಮೂರು ದಿನದೊಳಗೆ ನಮಗೆ ಗೊತ್ತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಹತ್ವದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇರಳ ಸರಕಾರದ ಆದೇಶಗಳು ಜಾರಿ ಆಗುತ್ತಿವೆ ಎಂದು ಸುದ್ದಿಯಾಗುತ್ತಿದೆ ಎಂಬುದಾಗಿ ಆಕ್ಷೇಪಿಸಿದರು. ನಾನು ಬಡವರ ಬಗ್ಗೆ ವಿರೋಧ ಅಲ್ಲ. ಯಾರು ನಿಜವಾಗಿಯೂ ನಮ್ಮ ನಾಡಿನವರು ಬಡವರಿದ್ದಾರೋ ಅಂತವರಿಗೆ ಸೂರು ಕಟ್ಟಿಕೊಡಲಿಕ್ಕೆ ನಮ್ಮ್ದ ವಿರೋಧ ಇಲ್ಲ. ಆದರೆ ಸಿದ್ದರಾಮಯ್ಯನವರ ಸರ್ಕಾರ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರು ಹಿಂದುಳಿದವರ ಹೆಸರು ಮೇಲೆ ಅಧಿಕಾರಕ್ಕೆ ಬಂದಂತ ಒಬ್ಬ ಅಹಿಂದ ನಾಯಕ ಸ್ವಂತ ವಿವೇಚನೆಯಿಂದ ಅಧಿಕಾರ ನಡೆಸುತ್ತಿಲ್ಲವೆಂದರೆ, ಅವರು ಯಾವ ಸೀಮೆ ಮುಖ್ಯಮಂತ್ರಿಗಳು ಎಂದು ಕೇಳಿದರು.

ದೆಹಲಿಯಲ್ಲಿ ಕೂತವರು ಟಮ್ರ್ಸ್ ಡಿಕ್ಟೇಟ್ ಮಾಡುತ್ತಾರೆ. ಅವರು ಹೇಳಿದಂತೆ ಅವರ ಅಣತಿಯಂತೆ ನಡೆಯುತ್ತದೆ. ಬೆಂಗಳೂರಿನವರು, ನಮ್ಮವರೇ ಕಲ್ಯಾಣ ನಗರ ಕಮ್ಮನಹಳ್ಳಿ ಒಳಗೆ ಎಸ್ಸಿ ಜನಾಂಗದವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಅನೇಕ ವರ್ಷಗಳಿಂದ ಇದ್ದರು. ಅವರನ್ನು ಬುಲ್ಡೋಜರ್ ಬಳಸಿ ಸಿದ್ದರಾಮಯ್ಯನವರ ಸರ್ಕಾರ ಖಾಲಿ ಮಾಡಿಸಿತು. ಅವರ ಬಗ್ಗೆ ಯಾರೂ ಸಹಾನುಭೂತಿ ವ್ಯಕ್ತ ಮಾಡಲಿಲ್ಲ. ಅವರಿಗೊಂದು ಮನೆ ಕೊಡುವುದಾಗಿ ಹೇಳಲಿಲ್ಲ. ಆದರೆ ಇವತ್ತು ಕೋಗಿಲು ಕ್ರಾಸ್ನಲ್ಲಿ ಇರುವವರಲ್ಲಿ ಹೊರಗಿನವರು ಎಷ್ಟು, ಹೊರಗಿನ ದೇಶದವರು ಎಷ್ಟು ಎಂಬ ಬಗ್ಗೆ ನಗರದಲ್ಲಿ ಬಹಳ ದೊಡ್ಡ ಸುದ್ದಿಯಾಗಿ ಚರ್ಚೆ ನಡೆದಿದೆ ಎಂದು ತಿಳಿಸಿದರು.

error: Content is protected !!