Home Blog Page 25

ಕೆ.ಆರ್.ಪುರಂ| ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಾಯ; ಮಹಿಳೆ ಸ್ಥಿತಿ ಗಂಭೀರ

0

ಬೆಂಗಳೂರು:- ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ಲೇಔಟ್‌ನಲ್ಲಿ ಇಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಸಿಲಿಂಡರ್ ಬ್ಲಾಸ್ಟ್‌ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಈ ಘಟನೆಯಲ್ಲಿ ಪೂರ್ಣಿಮ (46) ಹಾಗೂ ವೆಂಕಟೇಶ್ (40) ಗಾಯಗೊಂಡಿದ್ದು, ಪೂರ್ಣಿಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿ ಆತಂಕ ಉಂಟಾಯಿತು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರ| ಎಣ್ಣೆ ಮತ್ತಲ್ಲಿ ಕದಿಯಲು ಹೋದವ ಮನೆಯಲ್ಲೇ ಬೆಚ್ಚಗೆ ಮಲಗಿ ತಗ್ಲಾಕ್ಕೊಂಡ!

0

ಚಿಕ್ಕಬಳ್ಳಾಪುರ:- ಖದೀಮನೋರ್ವ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ ಬೆಚ್ಚಗೆ ಮಲಗಿ ತಗಲಾಕಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಜರುಗಿದೆ.

ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು. ಮನೆಯ ಮೇಲಿನ ರೇಕ್ ಕತ್ತರಿಸಿ ಒಳಗೆ ಕೂಡ ನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ನಗದು ದೋಚಿ ಓರ್ವ ಕಳ್ಳ ಪರಾರಿಯಾಗಿದ್ದರೆ, ಮತ್ತೊಬ್ಬ ಅದೇ ಮನೆಯಲ್ಲಿ ನಿದ್ದೆಗೆ ಜಾರಿದ್ದಾನೆ. ಇತ್ತ ಮನೆಗೆ ಕಳ್ಳರು ನುಗ್ಗಿರುವ ಅನುಮಾನದಿಂದ ಮಾಲೀಕ ಪ್ರೇಮನಾಥನಿಗೆ ಕರೆ ಮಾಡಿ ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದ ಅವರು, ರಾತ್ರೋ ರಾತ್ರಿ ಮನೆಗೆ ಹಿಂದಿರುಗಿದ್ದಾರೆ.

ಇನ್ನು ಮನೆಗೆ ಪ್ರೇಮನಾಥ ಎಂಟ್ರಿಯಾಗ್ತಿದ್ದಂತೆ ಅವರಿಗೆ ಆಶ್ಚರ್ಯವಾಗಿದೆ. ಕಳ್ಳತನಕ್ಕೆಂದು ಬಂದಾತ ಮನೆಯಲ್ಲೇ ಮಲಗಿದ್ದನ್ನು ನೋಡಿದ ಅವರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಗೌರಿಬಿದನೂರಿನ ನದಿದಡ ವಾರ್ಡ್​ನ ದೇವರಾಜು ಎಂಬುದು ಗೊತ್ತಾಗಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೆಟ್ರೋ ದರ ಏರಿಕೆ ತಡೆ ಮಾಡಿದ್ದು ರಾಜ್ಯ ಸರ್ಕಾರವೇ ಹೊರತು ಕೆಂದ್ರವಲ್ಲ; DCM ಡಿ.ಕೆ.ಶಿವಕುಮಾರ್

0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಯುವ ನಿರ್ಧಾರವನ್ನು ರಾಜ್ಯ ಸರ್ಕಾರವೇ ತೆಗೆದುಕೊಂಡಿದ್ದು, ಕೇಂದ್ರ ಸರ್ಕಾರದ ಪತ್ರಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರ ನಿಗದಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಹಸ್ತಕ್ಷೇಪ ಮಾಡುವ ಅಧಿಕಾರವಿಲ್ಲ. ದೆಹಲಿ ಮೆಟ್ರೋ ಅನುಸರಿಸುವ ಸೂತ್ರದಂತೆ ಮರು ಲೆಕ್ಕಾಚಾರ ಮಾಡಲು ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಹಳೆಯ ದರ ನಿಗದಿ ಸಮಿತಿ 09-02-2025ರಂದು ಶೇ.5 ದರ ಏರಿಕೆಗೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಜಾರಿಯಾಗಿದೆ. ಹೊಸ ದರ ನಿಗದಿ ಸಮಿತಿ ರಚನೆಯಾಗುವ ತನಕ ದರ ಏರಿಕೆ ತಡೆಯಲು ಸರ್ಕಾರ ನಿರ್ಧರಿಸಿದೆ ಎಂದರು.

ಜನರಿಗೆ ಹಾಗೂ ಮೆಟ್ರೋ ಸಂಸ್ಥೆಗೆ ಭಾರವಾಗದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದು ರಾಜಕೀಯವಲ್ಲ, ಜನರ ಪರವಾದ ಹೋರಾಟ. ರಾಜ್ಯ ಸರ್ಕಾರ ಈಗಾಗಲೇ ಕ್ಯಾಶ್ ಲಾಸ್ ಹಾಗೂ ಸಾಲ ಮರುಪಾವತಿಗೆ ಒಟ್ಟು 5,066.55 ಕೋಟಿ ರೂ. ಪಾವತಿಸಿದೆ ಎಂದರು.

ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ; 8 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ!

0

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸಲಾಗುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಮಿಗ್ರೇಷನ್ ಚೆಕಿಂಗ್ ವೇಳೆ ಅನುಮಾನಾಸ್ಪದವಾಗಿ ವರ್ತಿಸಿದ್ದ ಪ್ರಯಾಣಿಕರ ಲಗೇಜ್ ಪರಿಶೀಲನೆ ನಡೆಸಿದಾಗ, ಬ್ಯಾಗ್‌ನ ತಳಭಾಗದಲ್ಲಿ ಅಕ್ರಮವಾಗಿ ಗಾಂಜಾ ಮರೆಮಾಚಿ ಸಾಗಿಸಲಾಗುತ್ತಿರುವುದು ಪತ್ತೆಯಾಗಿದೆ.

ಈ ಸಂಬಂಧ ಹೆಚ್ಚಿನ ತನಿಖೆಯನ್ನು ಕಸ್ಟಮ್ಸ್ ಅಧಿಕಾರಿಗಳು ಮುಂದುವರಿಸಿದ್ದಾರೆ.

ಬೆಂಗಳೂರಿಗರಿಗೆ ತಪ್ಪದ ಪವರ್ ಸಮಸ್ಯೆ; ಈ ಏರಿಯಾಗಳಲ್ಲಿ ಮಂಗಳವಾರವೂ ಕರೆಂಟ್ ಕಟ್! ಎಲ್ಲೆಲ್ಲಿ?

0

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದ್ದು, ನಗರದ ಹಲವೆಡೆ ನಾಳೆಯೂ ಕರೆಂಟ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕೆಪಿಟಿಸಿಎಲ್ ನಿಂದ ಜಾಲಹಳ್ಳಿ ವಿಭಾಗದ 66/11ಕೆವಿ ಎ೦.ಇ.ಐ ಸಬ್‌ಸ್ಟೇಷನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ನಗರದ ಎಜಿಬಿಜಿ ಲೇಔಟ್, ಶೆಟ್ಟಿಹಳ್ಳಿ, ಮಲ್ಲಸಂದ್ರ, ಜಗದೇಸ್ ಲೇಔಟ್, ನಾಗದೇಸ್ ಲೇಔಟ್, ಬೋನ್‌ವಿಲ್, ಚಿಕ್ಕಸಂದ್ರ ಐರ್‌ಲೇಔಟ್, ಕಾವೇರಿ ಲೇಔಟ್, ಹೇಶ್ರವಿಶ್ರಾವೃತ ಲೇಔಟ್, 8ನೇ ಮೈಲ್, ತುಮಕೂರು ಮುಖ್ಯ ರಸ್ತೆ, ಮಹೇಶ್ವರಿ ನಗರ, ಕೆಂಪೇಗೌಡ ನಗರ, ಟಿ-ದಾಸರಹಳ್ಳಿ ಮೆಟ್ರೋ ಹಿಂಭಾಗ, ಹಳೆಯ ಮಸಿಡಿ, ಹೊಸ ಮಸಿಡಿ, ಪೈಪ್ ಲೈನ್ ರಸ್ತೆ, ಬೃಂದಾವನ ಲೇಔಟ್, ಮರಿಗ್ಮ್ ಅಪಾರ್ಟ್‌ಮೆಂಟ್, ಕಲ್ಯಾಣನಗರ ಬಾಗಲಗುಂಟೆ, ಕಿರ್ಲೋಸ್ಕರ್ ಲೇಔಟ್, ಎನ್‌ಎಂಎಚ್ ಲೇಔಟ್, ಸೌರ್ಯ ಲೇಔಟ್, ಮೀನಾಕ್ಷಿ ಲೇಔಟ್, ಸಿದ್ಧೇಶ್ವರ ಲೇಔಟ್, ಸಹ್ಯಾದ್ರಿ ಬಳಗ, ಸಪ್ತಗಿರಿ ವೈದ್ಯಕೀಯ ಕಾಲೇಜು, ಹೆಸರಘಟ್ಟ ಮುಖ್ಯರಸ್ತೆ, ಚಿಕ್ಕಬಾಣಾವರ, ಸೋಮಶೆಟ್ಟಿಹಳ್ಳಿ, ಕೆರೆಗುಡ್ಡದಹಳ್ಳಿ, ಮೇದರಹಳ್ಳಿ, ಗುಣಿಅಗ್ರಹಾರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ರೈತನ ಬದುಕನ್ನೇ ನಾಶಮಾಡಿದ ಬೇಟೆಗಾಗಿ ಇಟ್ಟ ನಾಡ ಬಾಂಬ್: ಎರಡು ಹೋರಿಗಳು ಸಾವು

0

ಹಾನಗಲ್: ಕಾಡು ಪ್ರಾಣಿಗಳ ಬೇಟೆಗಾಗಿ ಅಕ್ರಮವಾಗಿ ಇಟ್ಟಿದ್ದ ನಾಡ ಬಾಂಬ್‌ ಸ್ಫೋಟಗೊಂಡ ಪರಿಣಾಮ ಎರಡು ಹೋರಿಗಳು ಸಾವನ್ನಪ್ಪಿರುವ ಭೀಕರ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೀರೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಸಿಗಿಗುಂಡಿ ಪ್ರದೇಶದ ಕಾಡಿನಲ್ಲಿ, ವನ್ಯಜೀವಿಗಳು ನೀರು ಕುಡಿಯುವ ಉದ್ದೇಶದಿಂದ ತೋಡಿದ್ದ ನೀರಿನ ಗುಂಡಿಯ ಬಳಿ ಕಿಡಿಗೇಡಿಗಳು ನಾಡ ಬಾಂಬ್‌ ಅಳವಡಿಸಿದ್ದರು. ನೀರು ಕುಡಿಯಲು ಬಂದಿದ್ದ ಎರಡು ಹೋರಿಗಳು ಬಾಂಬ್‌ನ್ನು ಕಚ್ಚಿದ ಕ್ಷಣವೇ ಭಾರೀ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಹೋರಿಗಳ ಬಾಯಿ ಸಂಪೂರ್ಣವಾಗಿ ಛಿದ್ರ-ಛಿದ್ರಗೊಂಡು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿವೆ. ಮೃತ ಹೋರಿಗಳು ಹೀರೂರು ಗ್ರಾಮದ ರೈತ ಶೇಖಪ್ಪ ಮೇಳ್ಳಿಹಳ್ಳಿ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಲಕ್ಷಾಂತರ ರೂ. ಮೌಲ್ಯದ ಹೋರಿಗಳನ್ನು ಕಳೆದುಕೊಂಡ ರೈತ ಶೋಕದಲ್ಲಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಹಾನಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಿನ ನೀರಿನ ಗುಂಡಿಗಳ ಸುತ್ತಮುತ್ತ ಇನ್ನೂ ನಾಡ ಬಾಂಬ್‌ಗಳನ್ನು ಇಟ್ಟಿರುವ ಸಾಧ್ಯತೆ ಇದ್ದು, ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕಾಡು ಪ್ರಾಣಿಗಳ ಬೇಟೆಗಾಗಿ ಇಡಲಾದ ನಾಡ ಬಾಂಬ್‌ಗಳೇ ಈ ದುರ್ಘಟನೆಗೆ ಕಾರಣ ಎಂದು ಶಂಕಿಸಲಾಗಿದ್ದು, ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.

ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ! ಇಬ್ಬರು ಅರೆಸ್ಟ್

0

ಬೆಂಗಳೂರು: ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ ಮಾಡಿಸಿದ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ ಶಬಾಜ್ ಖಾನ್ ಹಾಗೂ ಸೂರಜ್ ಬಿ.ಎನ್ ಅಕ್ಬರ್ ಬಂಧಿತರಾಗಿದ್ದು,

ಅಫ್ರೀದ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಸಮೀರ್ ಎಂಬ ಸಂಬಂಧಿಕನಿಗೆ ಆಸ್ತಿ ಸಂಬಂಧ ಹಣ ಬಂದಿರುವ ಮಾಹಿತಿ ತಿಳಿದಿದ್ದ ಅಫ್ರೀದ್, ತನ್ನ ಸ್ನೇಹಿತರನ್ನು ಕಳುಹಿಸಿ ಮನೆಗೆ ನುಗ್ಗಿಸಿ ರಾಬರಿ ಮಾಡಿಸಿದ್ದಾನೆ.

ಸಮೀರ್ ಪತ್ನಿ ಒಬ್ಬರೇ ಇದ್ದ ವೇಳೆ ಮಚ್ಚು ತೋರಿಸಿ ಬೆದರಿಸಿ ಚಿನ್ನ ಹಾಗೂ 4 ಲಕ್ಷ ನಗದು ಕದ್ದಿದ್ದಾರೆ. ಬಂಧಿತರಿಂದ 2.96 ಲಕ್ಷ ನಗದು ಮತ್ತು ಬಂಗಾರ ಸೇರಿ 7.4 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರೇಮಿಗಳ ದಿನಕ್ಕೆ ಮಹಿಳೆಯರಿಗೆ ಗಿಫ್ಟ್! ಬೆಂಗಳೂರಿನಲ್ಲಿ ‘ಸಖಿ ಆಟೋ’ ಸೇವೆ ಲಾಂಚ್

0

ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರಿನ ಮಹಿಳೆಯರಿಗೆ ವಿಶೇಷ ಮತ್ತು ಅರ್ಥಪೂರ್ಣ ಉಡುಗೊರೆ ಸಿಕ್ಕಿದೆ. ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ವಿನೂತನವಾದ ‘ಸಖಿ ಆಟೋ’ ಸೇವೆ ಇದೇ ಫೆಬ್ರವರಿ 14, 2026ರಿಂದ ನಗರದಲ್ಲಿ ಅಧಿಕೃತವಾಗಿ ಆರಂಭವಾಗಲಿದೆ.

‘ಸಖಿ ಆಟೋ’ ಸಂಪೂರ್ಣವಾಗಿ ಮಹಿಳಾ ಪ್ರಯಾಣಿಕರಿಗಾಗಿ ರೂಪುಗೊಂಡಿರುವ ಸಾರಿಗೆ ವ್ಯವಸ್ಥೆಯಾಗಿದ್ದು, ಮಹಿಳಾ ಚಾಲಕಿಯರೇ ಮಹಿಳಾ ಪ್ರಯಾಣಿಕರನ್ನು ಸಾಗಿಸುವುದು ಈ ಸೇವೆಯ ಪ್ರಮುಖ ವೈಶಿಷ್ಟ್ಯವಾಗಿದೆ. ಆರಂಭದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೇವೆ ಲಭ್ಯವಿರಲಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಿದಂತೆ 24 ಗಂಟೆಗಳ ಸೇವೆ ನೀಡುವ ಯೋಜನೆಯಿದೆ.

ಇತರ ಆಪ್ ಆಧಾರಿತ ಸೇವೆಗಳಂತೆ ಮಳೆ ಅಥವಾ ಟ್ರಾಫಿಕ್ ಹೆಸರಿನಲ್ಲಿ ದರ ಏರಿಕೆ ಇರುವುದಿಲ್ಲ. ಮೊದಲ 2 ಕಿಲೋಮೀಟರ್‌ಗಳಿಗೆ 50 ರೂ ಹಾಗೂ ನಂತರ ಪ್ರತಿ ಕಿಲೋಮೀಟರ್‌ಗೆ 20 ರೂ ನಿಗದಿಪಡಿಸಲಾಗಿದೆ.

ಪ್ರಸ್ತುತ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಹಂತದಲ್ಲಿದ್ದು, ಅಲ್ಲಿಯವರೆಗೆ ride.sakhiwomen.in ವೆಬ್‌ಸೈಟ್ ಅಥವಾ 63619 33364 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ಕಿಂಗ್ ಮಾಡಬಹುದಾಗಿದೆ.

ಭವಿಷ್ಯದಲ್ಲಿ ಟ್ರಾನ್ಸ್ ಮಹಿಳೆಯರನ್ನೂ ಚಾಲಕಿಯರಾಗಿ ನೇಮಿಸಿಕೊಳ್ಳುವ ಗುರಿ ಈ ಸಂಸ್ಥೆ ಹೊಂದಿದ್ದು, ಮಹಿಳಾ ಉದ್ಯೋಗ ಮತ್ತು ಸಾಮಾಜಿಕ ಒಳಗೊಳ್ಳುವಿಕೆಗೆ ಇದು ದೊಡ್ಡ ಹೆಜ್ಜೆಯಾಗಿದೆ.

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ! 10 ದಿನಗಳಲ್ಲಿ 2ನೇ ಇ-ಮೇಲ್ ಅಲರ್ಟ್

0

ಬೆಂಗಳೂರು: ನಗರದಲ್ಲಿರುವ ಜಪಾನ್ ಹಾಗೂ ನೆದರ್‌ಲ್ಯಾಂಡ್ (ಡಚ್) ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಹಾಕಿರುವ ಘಟನೆ ಭದ್ರತಾ ಸಂಸ್ಥೆಗಳಲ್ಲಿ ಆತಂಕ ಮೂಡಿಸಿದೆ. ಕಳೆದ 10 ದಿನಗಳ ಅಂತರದಲ್ಲಿ ವಿದೇಶಿ ದೂತಾವಾಸ ಕಚೇರಿಗಳಿಗೆ ಇದು ಎರಡನೇ ಬಾರಿ ಬಂದ ಬೆದರಿಕೆ ಎನ್ನುವುದು ಗಮನಾರ್ಹವಾಗಿದೆ.

ಬೆಳಗ್ಗೆ 8.40ರ ಸುಮಾರಿಗೆ ಜಪಾನ್ ರಾಯಭಾರಿ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣವೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಸಂಪೂರ್ಣ ತಪಾಸಣೆ ನಡೆಸಿದೆ. ಹಲವು ಗಂಟೆಗಳ ಪರಿಶೀಲನೆಯ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಿದ್ದಾರೆ.

ಇತ್ತೀಚೆಗೆ ಜನವರಿ 29ರಂದು ಆರ್ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಇದೇ ರೀತಿಯ ಇ-ಮೇಲ್ ಮೂಲಕ 5 RDX ಹಾಗೂ IED ಬಳಸಿ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದಕ್ಕೂ ಮುನ್ನ ಹಲಸೂರಿನಲ್ಲಿರುವ ಇಟಾಲಿಯನ್ ಕಾನ್ಸುಲೇಟ್ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕೊ ಮಿಲಾನೋ ಹಲಸೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಸತತವಾಗಿ ವಿದೇಶಿ ದೂತಾವಾಸಗಳನ್ನು ಗುರಿಯಾಗಿಸಿ ಇ-ಮೇಲ್ ಮೂಲಕ ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ, ಸೈಬರ್ ಕ್ರೈಂ ವಿಭಾಗ ಹಾಗೂ ಗುಪ್ತಚರ ಇಲಾಖೆ ಪ್ರಕರಣದ ಮೂಲ ಪತ್ತೆಗೆ ತನಿಖೆ ತೀವ್ರಗೊಳಿಸಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮನ್ನು ಪ್ರೀತಿಸುವ ದೊಡ್ಡ ವರ್ಗ ಇದೆ: ನಿಖಿಲ್ ಕುಮಾರಸ್ವಾಮಿ

0

ಹಾಸನ: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅಭಿಮಾನಿಗಳಿರುವ ದೊಡ್ಡ ವಲಯವಿದ್ದು, ನಮ್ಮನ್ನು ಪ್ರೀತಿಸುವ ಜನರು ಆ ಕ್ಷೇತ್ರದಲ್ಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೆಲಗಳಲೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡರ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ. ಮಹೇಶ್ ಸ್ಪರ್ಧೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

“ಇವತ್ತಿನ ಕಾಲಘಟ್ಟದಲ್ಲಿ ಈ ಎಲ್ಲ ವಿಚಾರಗಳನ್ನು ಚರ್ಚೆ ಮಾಡುವುದು ಅಪ್ರಸ್ತುತ. ಏನು ಆಗಬೇಕೋ ಅದು ಕಾಲ ನಿರ್ಣಯ ಮಾಡುತ್ತದೆ. ಎಲ್ಲಕ್ಕೂ ಸಮಯ ಬರುತ್ತದೆ” ಎಂದು ನಿಖಿಲ್ ಹೇಳಿದರು.

ಸಾರ್ವಜನಿಕ ವಲಯದಲ್ಲಿ ಚುನಾಯಿತ ಪ್ರತಿನಿಧಿಗಳು ಚರ್ಚೆ ನಡೆಸಿದಾಗ ಕಾರ್ಯಕರ್ತರಲ್ಲಿ ಸ್ವಲ್ಪ ಇರುಸುಮುರುಸು ಉಂಟಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಅವರು, “ಇಂತಹ ವಿಚಾರಗಳು ಮಾಧ್ಯಮದ ಮುಂದೆ ಮಾತನಾಡುವುದರಿಂದ ಇತ್ಯರ್ಥವಾಗುವುದಿಲ್ಲ” ಎಂದರು.

ಪಕ್ಷದ ವರಿಷ್ಠರು ಕಾರ್ಯಕರ್ತರ ಗೌರವವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಮತ್ತು ಕ್ಷೇತ್ರವನ್ನು ಉಳಿಸಿಕೊಳ್ಳಲು ಆಯಾ ಸಂದರ್ಭದಲ್ಲಿ ಸೂಕ್ತ ಹಾಗೂ ಉತ್ತಮ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಪಕ್ಷದ ಕಾರ್ಯಕರ್ತನಾಗಿ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!