Home Blog Page 259

ಕೆ.ಎಚ್. ಪಾಟೀಲರ ಕನಸು ನನಸಾಗಿದೆ: ಡಾ. ನಾಗನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಯಶಸ್ವಿ ಕಿಡ್ನಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಕೆ.ಎಚ್. ಪಾಟೀಲರ ಕನಸು ನನಸು ಮಾಡಿದ್ದೇವೆ. ದೇಶದಲ್ಲೇ ಮೊದಲ ಬಾರಿಗೆ ಹಳ್ಳಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಸ್ಥಳಾಂತರಿಸಿ ಯಶಸ್ವಿಯಾಗಿದ್ದೇವೆ. ಕೆ.ಎಚ್. ಪಾಟೀಲ ಆಸ್ಪತ್ರೆಯ ಯುವ ತಜ್ಞ ವೈದ್ಯರ ತಂಡದ ಸಹಕಾರದಿಂದ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಡಾ. ನಾಗನೂರ ಹೇಳಿದರು.

ಹುಲಕೋಟಿಯ ಹೊರ ವಲಯದಲ್ಲಿರುವ ಕೆ.ಎಚ್. ಪಾಟೀಲ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಮೊದಲ ಕಿಡ್ನಿ ಟ್ರಾನ್ಸ್‌ಫರ್ ಮಾಡುವಾಗ ಸ್ವಲ್ಪ ಚಿಂತೆ ಕಾಡುತ್ತಿತ್ತು. ಆದರೆ, ಈಗ ಯಶಸ್ವಿಯಾಗಿ ಮಾಡಲಾಗುತ್ತಿದೆ. ಕಿಡ್ನಿ ದಾನಿಗಳನ್ನು ಮೂರು ದಿನಕ್ಕೆ ಹಾಗೂ ಕಿಡ್ನಿ ಕಸಿ ಚಿಕಿತ್ಸೆಗೊಳಗಾದವರನ್ನು 5 ದಿನಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಡಾ. ದೀಪಕ್ ಮತ್ತು ಡಾ. ನಿಯಾಜ್ ಸೇರಿದಂತೆ ಹಲವು ತಜ್ಞ ವೈದ್ಯರ ತಂಡ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಮೂಲೆ-ಮೂಲೆಗಳಿಂದ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದು ಸಂತೃಪ್ತರಾಗುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಡಾ. ದೀಪಕ್ ಕುರ್ಹಟ್ಟಿ, ಡಾ. ಭುವನೇಶ್ ಎನ್, ಡಾ. ಪವನ್ ಕೋಳಿವಾಡ್, ಡಾ. ನಿಯಾಜ್ ಅಹ್ಮದ್, ಡಾ. ವಿಶಾಲ್ ಕೆ, ಡಾ. ವಂದನಾ ಸೇರಿದಂತೆ ತಂಡದವರು ಉಪಸ್ಥಿತರಿದ್ದರು.

ಡಾ. ಅವಿನಾಶ್ ಓದುಗೌಡ್ರ ಮಾತನಾಡಿ, ದೇಶದಲ್ಲೇ ಮೊದಲ ಬಾರಿ ಗ್ರಾಮೀಣ ಭಾಗಕ್ಕೆ ಕಿಡ್ನಿ ಸ್ಥಳಾಂತರಿಸಿದ್ದೇವೆ. ಇದಕ್ಕೆ ಕೆ.ಎಚ್. ಪಾಟೀಲ ಹಾಗೂ ಡಿ.ಆರ್. ಪಾಟೀಲರ ಸಹಕಾರ ಬಹಳಷ್ಟಿದೆ. ಹಲವಾರು ಆಸ್ಪತ್ರೆಗಳಲ್ಲಿ ಸಾವಿರಾರು ಕಿಡ್ನಿ ಟ್ರಾನ್ಸ್‌ಫರ್ ಮಾಡುತ್ತಾರೆ. ಆದರೆ, ನಾವು ಮೂಲಸೌಲಭ್ಯವಿಲ್ಲದ ಹಳ್ಳಿ ಭಾಗಕ್ಕೆ ಸ್ಥಳಾಂತರಿಸಿದ್ದಕ್ಕೆ ಹೆಮ್ಮೆಯಾಗಿದೆ. ಸಾವಿನ ನಂತರವೂ ದೇಹದ ಭಾಗಗಳನ್ನು ಜೋಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರತಿ ದಿನ ಕಿಡ್ನಿ ವೈಫಲ್ಯದಿಂದ ಭಾರತದಲ್ಲಿ ಕನಿಷ್ಠ 20 ಜನ ಸಾವನ್ನಪ್ಪುತ್ತಿದ್ದಾರೆ. ಈ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದೆ ಎಂದರು.

ಲಾರಿ, ಟಿಪ್ಪರ್‌ಗಳ ಬ್ಯಾಟರಿ, ಟೈರ್ ಕಳ್ಳತನ; ಚಿಂತೆಯ ಸುಳಿಯಲ್ಲಿ ಗ್ರಾಮಸ್ಥರು

0

ವಿಜಯಸಾಕ್ಷಿ ಸುದ್ದಿ, ಡಂಬಳ: ಡಂಬಳ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಡಿಸೆಂಬರ್ ತಿಂಗಳಲ್ಲಿ ಸರಣಿಯಾಗಿ ನಡೆದ ಲಾರಿ, ಟಿಪ್ಪರ್, ಟ್ರ‍್ಯಾಕ್ಟರ್‌ಗಳ ಬ್ಯಾಟರಿಗಳ ಕಳವು, ಬೈಕ್, ರೈತರ ಪರಿಕರಗಳ ಕಳವು ಪ್ರಕರಣಗಳು ಜನತೆಯನ್ನು ಬೆಚ್ಚಿ ಬೀಳಿಸಿದೆ.

ಘಟನೆಯಿಂದ ಗ್ರಾಮೀಣ ಭಾಗದಲ್ಲಿ ಜಮೀನುಗಳಿಗೆ ತೆರಳಲು ರೈತ ಮಹಿಳೆಯರು ಅಂಜುವ ಸ್ಥಿತಿ ಉಂಟಾಗಿದೆ. ಗ್ರಾಮಗಳಲ್ಲಿ ಯಾವಾಗ, ಎಲ್ಲಿ, ಏನಾಗುತ್ತದೆಯೋ ಎಂಬ ಭಯ ಡಂಬಳ ಗ್ರಾಮದ ಜನರನ್ನು ಅವರಿಸಿದೆ. ಮಾರಕ ಅಸ್ತ್ರಗಳನ್ನು ಹಿಡಿದುಕೊಂಡು ಬರುವ ದರೋಡೆಕೋರರಿಂದ ಅಂಜಿರುವ ಜನರು ತಮ್ಮ ರಕ್ಷಣೆಗೆ ತಾವೇ ಸ್ವಯಂ ತಂಡಗಳನ್ನು ಮಾಡಿಕೊಳ್ಳಬೇಕು ಎನ್ನುವ ಮಾತುಗಳು ಗ್ರಾಮದಲ್ಲಿ ಕೇಳಿಬರುತ್ತಿದೆ.

ಸೋಲಾರ್ ಕೆಲಸಕ್ಕೆ, ಗಾಳಿ ವಿದ್ಯುತ್ ಯಂತ್ರಗಳನ್ನು ಅಳವಡಿಸಲು ಬಂದಿರುವ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಕೆಲಸ ಮುಗಿಸಿಕೊಂಡು ತಡರಾತ್ರಿ ಮನೆಗೆ ತೆರಳುವವರನ್ನೂ ಜನ ಕಳ್ಳರೆಂದು ಅನುಮಾನಿಸತೊಡಗಿದ್ದಾರೆ. ಸಾಕು ಪ್ರಾಣಿಗಳಾದ ಕುರಿ, ಆಡು, ಆಕಳುಗಳ ಕಳ್ಳತನ ಸಾಮಾನ್ಯವಾಗಿದೆ. ಬಸ್ ನಿಲ್ದಾಣದ ಪಕ್ಕದ ಪೆಟ್ಟಿಗೆ ಅಂಗಡಿಗಳಲ್ಲಿಯೂ ಕಳ್ಳತನ ಜರುಗುತ್ತಿದ್ದು, ದರೋಡೆಕೋರರನ್ನು ಮಟ್ಟಹಾಕುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎನ್ನುವ ಮಾತುಗಳು ಗ್ರಾಮದಲ್ಲಿ ಹರಡುತ್ತಿದೆ.

ಟ್ರ‍್ಯಾಕ್ಟರ್, ಟಿಪ್ಪರ್, ಲಾರಿಗಳ ಬ್ಯಾಟರಿ, ಬೊಲೆರೊ ಗಾಡಿಯ ಟೈರ್ ಕಳ್ಳತನ ಮಾಡಿರುವ ಕಳ್ಳರನ್ನು ಹಿಡಿದು ನ್ಯಾಯ ಒದಗಿಸಬೇಕು. ಗ್ರಾಮ ಪಂಚಾಯಿತಿ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎನ್ನುತ್ತಾರೆ ಗ್ರಾಮಸ್ಥರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಶೀಘ್ರದಲ್ಲಿಯೇ ಕಳ್ಳರನ್ನು ಪತ್ತೆಹಚ್ಚಲಾಗುವುದು. ಜನರು ಭಯ ಬೀಳುವ ಅವಶ್ಯಕತೆ ಇಲ್ಲ. ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಿದೆ ಎಂದಿದ್ದಾರೆ.

ಎಂಟು ದಿನಗಳ ಹಿಂದೆ ಅನ್ನಭಾಗ್ಯ ಅಕ್ಕಿ ಲಾರಿಗಳ, ಟಿಪ್ಪರ್‌ಗಳ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದರು. ಸಾಲ ಮಾಡಿ ನಾನು ನಡೆಸುವ ಲಾರಿಗೆ ಹೊಸ ಬ್ಯಾಟರಿ ತಂದು ಹಾಕಿದ್ದೆ. ಇದೀಗ ಪುನಃ ಬ್ಯಾಟರಿ ಕಳ್ಳತನ ಮಾಡಿದ್ದಾರೆ. ಇದರಿಂದ ಬಹಳ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದೇನೆ. ಪೊಲೀಸರು ನನಗೆ ನ್ಯಾಯ ಒದಗಿಸಿಕೊಡಬೇಕು.

  • ಫಕೀರಪ್ಪ ತಳವಾರ.
    ಅನ್ನಭಾಗ್ಯ ಅಕ್ಕಿ ಲಾರಿ ಚಾಲಕ.

ಪರಿಸರ ಉಳಿಯದಿದ್ದರೆ ನಮಗೂ ಉಳಿಗಾಲವಿಲ್ಲ: ಪರಿಸರ ಕವಿ ಗಂಗಾಧರ ಖಾನಾಪೂರ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸಿರುವ ಬಲ್ಡೋಟಾ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ-ಸುಮಿ, ಎಕ್ಸ್ ಇಂಡಿಯಾ, ವನ್ಯಾ, ಹರೇಕೃಷ್ಣ ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಬಳಸಲು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ, ತುಂಗಭದ್ರಾ ನೀರು ವಿಷಗೊಳಿಸುವ ಕಾರ್ಖಾನೆಗಳನ್ನು ಸೀಜ್ ಮಾಡಲು ಒತ್ತಾಯಿಸಿ, ಮುಖ್ಯಮಂತ್ರಿಗಳು, ಕೈಗಾರಿಕಾ ಮಂತ್ರಿ ಎಂ.ಬಿ. ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕಾರ್ಖಾನೆ ಬಾಧಿತ ಹಳ್ಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಜನರ ಅಹವಾಲು ಆಲಿಸಬೇಕೆಂದು ಅನಿರ್ದಿಷ್ಟ ಧರಣಿ ನಡೆಸಿ ಒತ್ತಾಯಿಸಿದರು.

57ನೇ ದಿನದ ಧರಣಿಯಲ್ಲಿ ಪರಿಸರ ಕವಿ ಗಂಗಾಧರ ಖಾನಾಪೂರ ತಮ್ಮ ಪರಿಸರ ಕಾಳಜಿಯ ಕವನ ವಾಚಿಸಿ ಮಾತನಾಡಿ, ನಮಗೆ ಜೀವ ಕೊಡಲು ಆಧಾರವಾದದ್ದು ಈ ಪರಿಸರ. ಪರಿಸರ ಉಳಿಯದಿದ್ದರೆ ಯಾವ ಜೀವವೂ ಬದುಕುಳಿಯುವುದಿಲ್ಲ. ಇದು ಗೊತ್ತಿದ್ದೂ ಸರ್ಕಾರ ಮತ್ತು ಕಂಪನಿಗಳು ಧನದಾಹದಿಂದ ಯಾವ ಜೀವದ ಕಾಳಜಿಯನ್ನು ಮಾಡಲಾರವು. ನಮ್ಮ ಮುಂದಿನ ಪೀಳಿಗೆ ಉಳಿಯಬೇಕಾದರೆ ನಮಗೆ ಎಷ್ಟೇ ಕಷ್ಟವಾದರೂ ಹಿಂಜರಿಯುವ ಮಾತೇ ಇಲ್ಲ. ಮುಂದೆ ಸಾಗಿ ಗಂಭೀರ ಹೆಜ್ಜೆ ಇಡೋಣ ಎಂದರು.

ಧರಣಿಯಲ್ಲಿ ನಿವೃತ್ತ ಪ್ರಾಚಾರ್ಯ ಎಸ್.ಬಿ. ರಾಜೂರು, ಮಲ್ಲಿಕಾರ್ಜುನ ಬಿ. ಗೋನಾಳ, ಶಂಭುಲಿಂಗಪ್ಪ ಹರಗೇರಿ, ಕೃಷಿ ಬೆಲೆ ಆಯೋಗದ ಸದಸ್ಯ ಡಿ.ಎಚ್. ಪೂಜಾರ, ಮಂಜುನಾಥ ಜಿ. ಗೊಂಡಬಾಳ, ಈರಯ್ಯ ಸ್ವಾಮಿ, ವೀರೇಶ ಎಂ.ಭಾಗೂರು, ರಮೇಶ ಪಿ.ಬಿ, ಮಖ್ಬೂಲ್ ರಾಯಚೂರು, ಖ್ಯಾತ ಗಾಯಕ ಸದಾಶಿವ ಪಾಟೀಲ, ರವಿ ಕಾಂತನವರ, ಬಸವರಾಜ ನರೇಗಲ್, ಭೀಮಪ್ಪ ಯಲಬುರ್ಗಾ, ವೀರೇಶ ಎ.ಎ. ಮುಂತಾದವರು ಪಾಲ್ಗೊಂಡಿದ್ದರು.

ಕವಯಿತ್ರಿ ಪುಷ್ಪಲತಾ ಏಳುಭಾವಿ ಅವರು ತಮ್ಮ ಪರಿಸರ ಕಾಳಜಿಯ, ಭೂಮಿ, ಕೃಷಿ ರಕ್ಷಣೆಯ ಸ್ವರಚಿತ ಕವನ ವಾಚನ ಮಾಡಿದರು. ಮಹಾದೇವಪ್ಪ ಎಸ್.ಮಾವಿನಮಡು ಪರಿಸರ ಸಂರಕ್ಷಣೆ, ಜಾಗೃತಿ ಹಾಡುಗಳನ್ನು ಕೊಳಲು ವಾದನ ನುಡಿಸಿ ಹಾಡಿದರು. ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಅವರು `ಕಾರ್ಖಾನೆ ಬಾಧಿತರೆ ಹೋರಾಟ ಮಾಡಿರೋ’ ಎನ್ನುವ ಕವನ ರಚಿಸಿ ವಾಚನ ಮಾಡಿದರು.

ಮಹಿಳೆಯರು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಲಿ: ಪಿಎಸ್‌ಐ ಕೆ ನಾಗರತ್ನ

0

ಹರಪನಹಳ್ಳಿ: ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಚಿಗಟೇರಿ ಪಿಎಸ್‌ಐ ಕೆ ನಾಗರತ್ನ ತಿಳಿಸಿದರು.

ತಾಲೂಕಿನ ದೇವರ ತಿಮಲಾಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶನಿವಾರ ನಡೆದ ತಾಲೂಕು ಮಟ್ಟದ ಮಹಿಳಾ ಜ್ಞಾನ ವಿಕಾಸ ಮತ್ತು ವಿಚಾರ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಮನೆಯಿಂದ ಯಾವುದೇ ಸಭೆ ಸಮಾರಂಭಗಳಿಗು ತೆರಳಿದಾಗ ನಿಮ್ಮ ಬಂಗಾರದ ಒಡವೆಗಳ ಬಗ್ಗೆ ಹೆಚ್ಚಿನ ಗಮನವಿರಬೇಕು, ನಿಮ್ಮ ಮಕ್ಕಳಿಗೆ ಯಾವುದೇ ಪುರುಷ ವ್ಯಕ್ತಿಗಳು ಸ್ಪರ್ಶ ಮಾಡುವ ರೀತಿಯ ಬಗ್ಗೆ ತಾಯಿಯು ತಿಳಿಸಬೇಕು, ಈಚೆಗೆ ಪೊಲೀಸ್ ಇಲಾಖೆಯ ವತಿಯಿಂದ ಮಹಿಳೆಯರ ರಕ್ಷಣೆಗಾಗಿ ವಿಜಯ ಪೊಲೀಸ್ ಪಡೆಯನ್ನು ನೇಮಿಸಿದ್ದಾರೆ.

ಮಹಿಳೆಯರ ಅಭಿವೃದ್ದಿಗಾಗಿ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಜಾರಿಗೆ ಬಂದಿವೆ, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಚಿತ್ರದುರ್ಗ ಧರ್ಮಸ್ಥಳ ಸಂಘದ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ, ತಾಯಂದಿರು ಹೆಚ್ಚು ಮೊಬೈಲ್, ಟಿವಿಗಳಿಗೆ ಮಾರು ಹೋಗದೆ ತನ್ನ ಕುಟುಂಬ ಮತ್ತು ಮಕ್ಕಳ ಶಿಕ್ಷಣದ ಜೊತೆಗೆ ಸಂಸ್ಕಾರ, ನಮ್ಮ ಪರಂಪರೆಯ ಸಂಸ್ಕೃತಿಯನ್ನು ಕಲಿಸಿಕೊಡಬೇಕು ಎಂದರು.

ಹೆಣ್ಣು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು, ಇಂದು ಎಲ್ಲಾ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯು ಕಾರ್ಯ ನಿರ್ವಹಿಸುತ್ತಿದ್ದಾಳೆ, ಧರ್ಮಸ್ಥಳ ಸಂಘ ನೀಡುವ ಸಾಲ ಸೌಲಭ್ಯಯನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.

ಈ ವೇಳೆ ಪ್ರಮುಖರಾದ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎನ್ ಎಸ್ ಮಮತಾ, ಕುಸುಮಾ ಜಗದೀಶ್, ಕ್ಷೇತ್ರ ಯೋಜನಾಧಿಕಾರಿ ಬಾಬು, ಗೀತಾ, ಅನಿತಾ ಮತ್ತು ಉಪನ್ಯಾಸಕಿ ಸುವರ್ಣ ಆರುಂಡಿ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮೇಲ್ವಿಚಾರಕಿಯರು ಹಾಗೂ ಸೇವಾ ಪ್ರತಿನಿಧಿಗಳು ಇದ್ದರು.

“ಡೈನಾಮಿಕ್ ಹೀರೋ ದೇವರಾಜ್ ಕಂಬ್ಯಾಕ್: ಜ.8ರಿಂದ ‘ಚಂದ್ರಗಿರಿ’ ಚಿತ್ರೀಕರಣ ಶುರು!”

ಶ್ರೀನಿವಾಸ ಪ್ರೊಡಕ್ಷನ್ಸ್ ಸಮರ್ಪಿಸಿ, ಸ್ನೇಹಾಲಯಂ ಕ್ರಿಯೆಷನ್ಸ್ ಲಾಂಛನದಲ್ಲಿ ಶಿಲ್ಪಾ ಶ್ರೀನಿವಾಸ್ ನಿರ್ಮಿಸುತ್ತಿರುವ ಹೊಸ ಸಿನಿಮಾ ‘ಚಂದ್ರಗಿರಿ’ ಚಿತ್ರೀಕರಣ ಜನವರಿ 8ರಿಂದ ಆರಂಭವಾಗಲಿದೆ. ಬಹಳ ದಿನಗಳ ನಂತರ ಡೈನಾಮಿಕ್ ಹೀರೋ ದೇವರಾಜ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ಈ ಸಿನಿಮಾದ ವಿಶೇಷ.

ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಮೂರು ಹಾಡುಗಳನ್ನು ಅನಿರುದ್ಧ ಶಾಸ್ತ್ರಿ, ಕಾರುಣ್ಯ ಮತ್ತು ಶ್ರೀ ಕೃಷ್ಣ ಹಾಡಿದ್ದಾರೆ.

ತುಳಸಿಪುರ ಎಂಬ ಊರಿನಲ್ಲಿ ಪ್ರತೀ ಅಮಾವಾಸ್ಯೆಯ ದಿನ ಕಾಣಿಸಿಕೊಳ್ಳುವ ಎರಡು ಶವಗಳು, ಬೀದಿ ಬೀದಿಗಳಲ್ಲಿ ಕಂಡುಬರುವ ರಕ್ತದ ಕಲೆಗಳು, ಆ ರಹಸ್ಯದ ಹಿಂದಿರುವ ಅಗೋಚರ ಶಕ್ತಿ ಹಾಗೂ ದೈವದ ನೆಲೆಯನ್ನು ಧ್ವಂಸ ಮಾಡಲು ಆತ್ಮಗಳನ್ನು ಸಿದ್ಧಪಡಿಸುವ ದುಷ್ಟರನ್ನು ಆ ಶಕ್ತಿ ಹೇಗೆ ಧಮನಗೊಳಿಸುತ್ತದೆ ಎಂಬುದೇ ಚಿತ್ರದ ಕಥಾವಸ್ತು.

ಹಾರರ್–ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಈ ಸಿನಿಮಾ ಚಿಕ್ಕಬಳ್ಳಾಪುರ, ಬೆಳ್ಳಿಕೆರೆ, ಹೊಸಕೋಟೆ ಸುತ್ತಮುತ್ತ ಚಿತ್ರೀಕರಣಗೊಳ್ಳಲಿದೆ. ಈಗಾಗಲೇ ಬಿಡುಗಡೆಗೆ ಸಿದ್ದವಾಗಿರುವ ಮುಗಿಲ ಮಲ್ಲಿಗೆ ಚಿತ್ರದ ನಿರ್ದೇಶಕ ರಾಜೀವ್ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

 ಮನಸ್ಸುಗಳನ್ನು ಜೋಡಿಸುವ ಶಕ್ತಿ ಸಾಹಿತ್ಯಕ್ಕಿದೆ: ಯು.ಟಿ. ಖಾದರ್

0

ವಿಜಯಸಾಕ್ಷಿ ಸುದ್ದಿ,  ಗಜೇಂದ್ರಗಡ: ಸಮಾಜದಲ್ಲಿ ಸಮುದಾಯಗಳ ನಡುವೆ ಪರಸ್ಪರ ಪ್ರೀತಿ ಬೆಳೆಸುವ, ಮನಸ್ಸುಗಳನ್ನು ಜೋಡಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆದ ದಿ. ಯು.ಟಿ. ಫರೀದ್ ಅವರ ಸ್ಮರಣಾರ್ಥ 2024ನೇ ಸಾಲಿನ ರಾಜ್ಯಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ಕನ್ನಡ–ಉರ್ದು ಕವಿಗೋಷ್ಠಿ ಕಾರ್ಯಕ್ರಮ ಹಾಗೂ ಸಾಹಿತಿ ಹಾಗೂ ಜೈಲರ್ ಡಾ. ಐ.ಜೆ. ಮ್ಯಾಗೇರಿ ಅವರ ‘ಜೈಲ್ ಡೈರಿ’ ಕೃತಿಗೆ ರಾಜ್ಯಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಯುವಜನರಲ್ಲಿ ಇಂತಹ ಸಾಹಿತ್ಯದ ಅಭಿರುಚಿ ಬೆಳೆಸಬೇಕಾಗಿದೆ. ಪಾಲಕರು ಮಾಲ್‌ಗಳಿಗೆ, ಬೀಚ್‌ಗಳಿಗೆ ಮಕ್ಕಳನ್ನು ಕರೆದೊಯ್ದುವಂತೆ ಸಾಹಿತ್ಯ ಕಾರ್ಯಕ್ರಮಗಳಿಗೂ ಕರೆದುಕೊಂಡು ಹೋಗಬೇಕು. ಮಕ್ಕಳಲ್ಲಿ ಪುಸ್ತಕ ಓದುವ, ಸಾಹಿತ್ಯದ ನುಡಿಗಳನ್ನು ಕೇಳುವ ಹವ್ಯಾಸ ಬೆಳೆಯಬೇಕು’ ಎಂದರು.

ಇಂದಿನ ಸಮಾಜದಲ್ಲಿ ಬಡತನ, ಅಜ್ಞಾನ ಮತ್ತು ಅಸಮಾನತೆಗಳ ವಿರುದ್ಧ ಹೋರಾಟಕ್ಕೆ ಶಿಕ್ಷಣವೇ ಪರಿಣಾಮಕಾರಿ ಅಸ್ತ್ರವಾಗಿದೆ ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ಪಾಠಪುಸ್ತಕಗಳಿಗೆ ಸೀಮಿತವಾಗಿರಬಾರದು. ಅವರಿಗೆ ಮೌಲ್ಯಾಧಾರಿತ ಶಿಕ್ಷಣ, ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯತೆಯ ಅರಿವು ಬೆಳೆಸಬೇಕು. ಇದಕ್ಕೆ ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು. ಸಂಭಾಷಣೆ, ಮಾರ್ಗದರ್ಶನ ಮತ್ತು ಪ್ರೋತ್ಸಾಹವೇ ಮಕ್ಕಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಶಕ್ತಿಯಾಗುತ್ತದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಐ.ಜೆ. ಮ್ಯಾಗೇರಿ, ರಾಜೂರ ಎಂಬ ಪುಟ್ಟ ಗ್ರಾಮದ ಕಡು ಬಡತನದ ಹಿನ್ನೆಲೆಯಿಂದ ಹೊರಬಂದು ಇಂದು ಜೈಲರ್ ಹುದ್ದೆ ಹಾಗೂ ಸಾಹಿತ್ಯಿಕ ಗೌರವವನ್ನು ಪಡೆಯಲು ಶಿಕ್ಷಣವೇ ಕಾರಣವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಸಮಾರಂಭದಲ್ಲಿ ಎ.ಎಸ್. ಮಕಾನದಾರ, ಡಾ. ಹಸೀನಾ ಹೆಚ್. ಖಾದ್ರಿ, ಶಿಲ್ಪಾ ಮ್ಯಾಗೇರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಡೆದ ಕನ್ನಡ–ಉರ್ದು ಕವಿಗೋಷ್ಠಿಯಲ್ಲಿ ಮೊಹಮ್ಮದ್ ಅರ್ಶದ್ ಹಿರೇಹಾಳ, ಮುರ್ತುಜಾ ಬೇಗಂ ಕೊಡಗಲಿ, ಅನ್ವರ್ ಅಹ್ಮದ್ ವಣಗೇರಿ, ಖಾಝಿ ಶಬ್ಬಿರ್ ಅಹ್ಮದ್ ಶಬ್ಬಿರ್ ಮನ್ಸೂರಿ ಹಾಗೂ ಬಿ.ಎ. ಮುಹಮ್ಮದ್ ಅಲಿ ಅವರು ತಮ್ಮ ಕವಿತೆಗಳ ಮೂಲಕ ಸಾಹಿತ್ಯಾಸಕ್ತರಿಗೆ ಚಿಂತನೆಗೆ ದಿಕ್ಕು ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಮೊಹಮ್ಮದ್ ಅರ್ಶದ್ ಹಿರೇಹಾಳ ಅವರು ನಿಭಾಯಿಸಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಉಮರ್ ಯು.ಹೆಚ್. ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿ ಎ ಕೆಂಚರೆಡ್ಡಿ, ರಾಜು ಸಾಂಗ್ಲಿಕರ್, ಮುರ್ತಜಾ ಡಾಲಾಯತ್, ಅಜಿತ ಬಾಗಮಾರ, ಬಸವರಾಜ ಕೊಟಗಿ, ಹಸನಸಾಬ ತಟಗಾರ, ರಫೀಕ್ ತೋರಗಲ್, ಎಮ್ ಎಚ್ ಕೋಲಕಾರ, ದಾವಲಸಾಬ ತಾಳಿಕೋಟಿ, ಶರೀಫ ಡಾಲಾಯತ, ಉಪಸ್ಥಿತರಿದ್ದರು.

ಶಾಸಕ ಜಿ.ಎಸ್. ಪಾಟೀಲ ಮಾತನಾಡಿ,  ಯು.ಟಿ. ಖಾದರ್ ಅವರ ಸರಳತೆ, ಸಾಮಾಜಿಕ ಕಾಳಜಿ ಹಾಗೂ ಪ್ರಗತಿಪರ ಚಿಂತನೆಗಳು ಶ್ಲಾಘನೀಯ ಅವರಿಗೆ ಇನ್ನೂ ಉನ್ನತ ಸ್ಥಾನಮಾನ ತಂದುಕೊಡಲಿ ಎಂದು ಹಾರೈಸಿದರು. ಜೊತೆಗೆ ಪ್ರಶಸ್ತಿ ಪುರಸ್ಕೃತ ಡಾ. ಐ.ಜೆ. ಮ್ಯಾಗೇರಿ ಅವರ ಪತ್ನಿ ಆದರ್ಶ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದು, ಆ ಶಾಲೆ ರಾಜ್ಯಮಟ್ಟದಲ್ಲಿ ನಂ.1 ಸ್ಥಾನ ಗಳಿಸಲು ಅವರ ಶ್ರಮ ಪ್ರಮುಖವಾಗಿದೆ ಹಾಗೂ ಸಾಹಿತ್ಯ ಮತ್ತು ಸಂಸ್ಕೃತಿ ಸಮಾಜದ ಅಂತರಾತ್ಮವಾಗಿದ್ದು, ಮುಸ್ಲಿಮ್ ಸಾಹಿತ್ಯವು ಕನ್ನಡ ಸಾಹಿತ್ಯಧಾರೆಯೊಂದಿಗೇ ಬೆರೆತು ಸಮಾಜದ ನೋವು, ಆಶಯ ಮತ್ತು ಹೋರಾಟಗಳನ್ನು ಪ್ರತಿಬಿಂಬಿಸಿದೆ. ಇಂತಹ ಸಾಹಿತ್ಯಿಕ ಪ್ರಶಸ್ತಿಗಳು ಹೊಸ ಬರಹಗಾರರಿಗೆ ಪ್ರೇರಣೆಯಾಗಿ, ಭಾಷೆಗಳ ನಡುವಿನ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದರು.

ನೂತನ ಜಿಲ್ಲಾಧ್ಯಕ್ಷರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾನವ ಹಕ್ಕುಗಳ ರಕ್ಷಣಾ ಸಮಿತಿ ಆರ್ಗನೈಜೇಷನ್ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ಚಂದ್ರು ಮಾಂಗ ಅವರ ಆದೇಶದ ಮೇರೆಗೆ ಸಂಘಟನೆಯ ನೂತನ ಗದಗ ಜಿಲ್ಲಾಧ್ಯಕ್ಷರನ್ನಾಗಿ ಮೊಮ್ಮದ್ ರಫೀಕ್ ಧಾರವಾಡ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಚಂದ್ರು ಮಾಂಗ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಮಾನವ ಹಕ್ಕುಗಳ ರಕ್ಷಣಾ ಸಮಿತಿ ಆರ್ಗನೈಜೇಷನ್ ಸಂಘಟನೆಯ ಎಲ್ಲ ಪದಾಧಿಕಾರಿಗಳು ಮೊಮ್ಮದ್ ರಫೀಕ್ ಧಾರವಾಡ ಅವರಿಗೆ ಶುಭ ಕೋರಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಬಸವಣ್ಣನವರ ಸಿದ್ಧಾಂತಗಳನ್ನು ಆಚರಿಸಬೇಕು: ಸಚಿವ ಸಂತೋಷ್ ಲಾಡ್ ಭೇಟಿ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ವಿವೇಕಾನಂದ ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಪ್ರಕರಣ ನಡೆದ ಇನಾಂವೀರಾಪುರ ಗ್ರಾಮಕ್ಕೂ ಭೇಟಿ ನೀಡಿ, ಅಧಿಕಾರಿಗಳಿಂದ ಮತ್ತು ಸಾರ್ವಜನಿಕರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೆ ಮತ್ತು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮಾಹಿತಿ ತಿಳಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಇನಾಂವೀರಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾನತೆಗಾಗಿ ಹೋರಾಟ ನಡೆಸಿದ ಮಹಾನ್ ಸಮಾಜ ಸುಧಾರಕ ಬಸವಣ್ಣನವರ ತತ್ವಗಳನ್ನು ಪಾಲಿಸಿಕೊಂಡು ಬಂದಿರುವ ಮನೆತನ ದೊಡ್ಡಮನಿ ಅವರದಾಗಿದೆ. ಈ ಮನೆತನದಲ್ಲಿ ಬಸವಣ್ಣನವರ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳೂ ಇದ್ದು, ಬಸವಣ್ಣನವರ ತತ್ವ-ಸಿದ್ಧಾಂತಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬದುಕುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಇಂತಹ ಆದರ್ಶಗಳನ್ನು ಪಾಲಿಸುವ ಮನೆತನಕ್ಕೆ ಈ ರೀತಿಯ ಘಟನೆ ಸಂಭವಿಸಿರುವುದು ಅತ್ಯಂತ ವಿಷಾದಕರ ಸಂಗತಿ. ಬಸವಣ್ಣನವರು ಹಾಕಿಕೊಟ್ಟ ತತ್ವಸಿದ್ಧಾಂತಗಳನ್ನು ಮುಂಬರುವ ದಿನಗಳಲ್ಲಿ ಜನರು ಇನ್ನಷ್ಟು ಅರಿತುಕೊಂಡು ಆಚರಣೆಗೆ ತರಬೇಕೆಂಬುದು ನನ್ನ ಮನವಿಯಾಗಿದೆ ಎಂದು ಹೇಳಿದರು.

ಯಾರೂ ಶಾಶ್ವತವಲ್ಲ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ವಚನವನ್ನು ಸ್ಮರಿಸಿ, ಧರ್ಮ ಮತ್ತು ದಯೆ ಇಲ್ಲದೆ, ಮಾನವನಾಗಿ ಹುಟ್ಟಿರುವುದಕ್ಕೆ ಅರ್ಥವೇ ಇರುವುದಿಲ್ಲ ಎಂದು ಅವರು ಹೇಳಿದರು.

ಮುಂಬರುವ ದಿನಗಳಲ್ಲಿ ಮಾನವ ಜಾತಿಯೇ ಶ್ರೇಷ್ಠ ಎಂಬ ಭಾವನೆಯೊಂದಿಗೆ, ದಯೆ ಮತ್ತು ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪರಸ್ಪರ ಪ್ರೀತಿ ಹಾಗೂ ಸೌಹಾರ್ದತೆಯಿಂದ ಬದುಕಿದಾಗ ಮಾತ್ರ ಬಸವಣ್ಣನವರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಹೇಳಿದರು.

ಜಿಲ್ಲಾಡಳಿತದಿಂದ ಗ್ರಾಮದಲ್ಲಿ ಶಾಂತಿ, ಸೌಹಾರ್ದ ಸಭೆ ಜರುಗಿಸಿ, ಗ್ರಾಮಸ್ಥರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕುವಂತೆ ಮನವರಿಕೆ ಮಾಡಲಾಗುವುದು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ, ನೊಂದವರಿಗೆ ನ್ಯಾಯ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್. ಕೋನರಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಡಿಸಿಪಿ ಮಾಣಿಂಗ್ ನಂದಗಾವಿ, ಉಪ ವಿಭಾಗಾಧಿಕಾರಿ ಸಾಲಂ ಹುಸೇನ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭ ಪಿ, ತಹಸೀಲ್ದಾರ ಜೆ.ಬಿ. ಮಜ್ಜಗಿ, ತಾ.ಪಂ ಇಓ ರಾಮಚಂದ್ರ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಪ್ರಮುಖರು ಇದ್ದರು.

ಇನ್ನು ಮುಂದೆ ಗ್ರಾಮಸಭೆಗಳನ್ನು ಆಯೋಜಿಸಿ, ಸರ್ಕಾರ, ಜಿಲ್ಲಾಡಳಿತ ಹಾಗೂ ಶಾಸಕರುಗಳು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ, ಸಮಾಜದಲ್ಲಿ ಮತ್ತೆ ಸೌಹಾರ್ದತೆ ಮತ್ತು ಏಕತೆಯನ್ನು ಪುನಃ ಸ್ಥಾಪಿಸಲು ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ಜನಾಂಗಕ್ಕೆ ಇತಿಹಾಸದ ಅರಿವು ಅಗತ್ಯ: ರಂಭಾಪುರಿ ಶ್ರೀ

0

ವಿಜಯಸಾಕ್ಷಿ ಸುದ್ದಿ, ತುಮಕೂರು: ಯುವಶಕ್ತಿ ದೇಶದ ಬಲು ದೊಡ್ಡ ಶಕ್ತಿ ಮತ್ತು ಆಸ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಲು ದೊಡ್ಡದು. ಬಾಳೆಗೊಂದು ಗೊನೆಯಿರುವಂತೆ ಯುವಕರ ಬಾಳಿಗೊಂದು ಗುರಿಯಿರಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್‌ನಿಂದ ಸಂಘಟಿಸಿದ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ, ಜನ ಜಾಗೃತಿ ಧರ್ಮ ಸಮಾರಂಭದ 3ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೇ ಇವೆ. ದೈಹಿಕವಾಗಿ ನಾವೆಷ್ಟೇ ಸದೃಢವಾಗಿದ್ದರೂ ಮನಸ್ಸು ದೃಢವಾಗಿರದಿದ್ದರೆ ಯಾವ ಪ್ರಯೋಜನವು ಇಲ್ಲ. ಬೆಳೆಯುವ ಯುವ ಜನಾಂಗದಲ್ಲಿ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರುವ ಅವಶ್ಯಕತೆಯಿದೆ. ಯುವ ಜನಾಂಗಕ್ಕೆ ಇತಿಹಾಸದ ಅರಿವು ಅಗತ್ಯ. ಯುವ ಜನಾಂಗ ಈ ರಾಷ್ಟ್ರದ ಅಮೂಲ್ಯ ಸಂಪತ್ತು. ಆಲಸ್ಯ ಮತ್ತು ದುರ್ವ್ಯಸನಗಳಿಂದ ದೂರವಾಗಿ ಸದೃಢ ಸಮಾಜ ಕಟ್ಟಿ ಬೆಳೆಸುವುದರಲ್ಲಿ ಯುವಕರು ಶ್ರಮಿಸುವ ಅವಶ್ಯಕತೆಯಿದೆ. ಯುವಾವಸ್ಥೆಯಲ್ಲಿ ಧರ್ಮಾಚರಣೆ ಪಾಲಿಸಿದರೆ ಜೀವನ ಉಜ್ವಲವಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಯುವ ಸಾಹಿತಿ, ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ ಮಾತನಾಡಿ, ಯುವ ಜನಾಂಗದಲ್ಲಿ ಅದ್ಭುತ ಶಕ್ತಿಯಿದೆ. ಆ ಶಕ್ತಿಯನ್ನು ಒಳ್ಳೆಯ ಕಾರ್ಯಕ್ಕೆ ಬಳಸಿಕೊಂಡರೆ ಬಲು ದೊಡ್ಡ ಸಾಧನೆ ಮಾಡಲು ಸಾಧ್ಯವಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕೊಡುವ ಕೆಲಸ ಎಲ್ಲರೂ ಮಾಡಬೇಕಾಗಿದೆ. ವಿನಯವಿಲ್ಲದ ವಿದ್ಯೆ, ಪ್ರತಿಭೆಯಿಲ್ಲದ ವ್ಯಕ್ತಿಯ ಜೀವನ ವ್ಯರ್ಥ. ಕಾಯಕದ ಮೂಲಕ ಜೀವನದಲ್ಲಿ ಕಳಾ ಚೈತನ್ಯ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಮಂಜುಳಾ ಲೋಕೇಶ್, ಟಿ.ಸಿ. ಓಹಿಲೇಶ್ವರ, ಜಿ.ಮಲ್ಲಿಕಾರ್ಜುನಯ್ಯ, ಗಂಗಾಧರ ಶಾಸ್ತ್ರಿಗಳು, ಸಿ.ವಿ. ಮಹದೇವಯ್ಯ, ಎಂ.ಎಸ್. ಉಮೇಶ್, ಹೆಚ್.ನೀಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜಿ.ನಾಗರಾಜು ಸೇರಿದಂತೆ ಹಲವಾರು ಗಣ್ಯರು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗೌರವ ಗುರುರಕ್ಷೆ ಸ್ವೀಕರಿಸಿದರು.

ತೆವಡೆಹಳ್ಳಿ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯರು ಉಪಸ್ಥಿತರಿದ್ದರು. ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಸಮಾರಂಭದ ನೇತೃತ್ವ ವಹಿಸಿದ್ದರು. ಜಿ.ಎಸ್. ಸಿದ್ಧರಾಜು ಸ್ವಾಗತಿಸಿದರು. ಓಂಕಾರಸ್ವಾಮಿ ನಿರೂಪಿಸಿದರು. ಆರ್.ಶಿವಕುಮಾರ್ ಮತ್ತು ಕುಟುಂಬ ವರ್ಗದವರು ಪೂಜಾ ಸೇವೆಯನ್ನು ಸಲ್ಲಿಸಿದರು.

ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಆಗಮಿಸಿ ಶ್ರೀ ರಂಭಾಪುರಿ ಜಗದ್ಗುರುಗಳಿಂದ ಆಶೀರ್ವಾದ ಪಡೆದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸಂಸದ ಜಿ.ಎಸ್. ಬಸವರಾಜ ಮಾತನಾಡಿ, ಸುಖ-ಶಾಂತಿಯ ಬದುಕಿಗೆ ಧರ್ಮಾಚರಣೆಯೊಂದೇ ಮೂಲ. ಭಾರತೀಯ ಆದರ್ಶ ಸಂಸ್ಕೃತಿ ಸಭ್ಯತೆ ಜನ ಮರೆಯುತ್ತಿರುವುದರಿಂದ ಅನೇಕ ತಾಪತ್ರಯಗಳನ್ನು ಎದುರಿಸಬೇಕಾಗಿದೆ. ವೀರಶೈವ ಧರ್ಮ ಸಂಸ್ಕೃತಿಯಲ್ಲಿ ಉತ್ಕೃಷ್ಟವಾದ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದೆ ಎಂದರು.

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಸಹಕಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ 

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಉತ್ತಮ ಆರೋಗ್ಯ ವೃದ್ಧಿಗೆ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಅವರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮೊದಲಿನಿಂದಲೂ ಸಿರಿಧಾನ್ಯಕ್ಕೆ ಬಳಕೆಯಿಂದ ಉತ್ತಮ ಆರೋಗ್ಯವಂತ ಬದುಕು ಸಾಗಿಸುತ್ತಿದ್ದರು. ಇಂದು ಆಧುನಿಕ ಭರಾಟೆಯಲ್ಲಿ ಸಿರಿಧಾನ್ಯ ಬಳಕೆ ಕಡಿಮೆಯಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಸಿರಿಧಾನ್ಯ ನಿತ್ಯ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.

ಗದಗ ಜಂಟಿ ಕೃಷಿ ಅಧಿಕಾರಿ ಚೇತನಾ ಪಾಟೀಲ ಮಾತನಾಡಿ, ಜನರ ಆರೋಗ್ಯ ಕಾಪಾಡುವಲ್ಲಿ ಸಿರಿಧಾನ್ಯಗಳ ಬಳಕೆ ಮತ್ತು ಖಾದ್ಯಗಳ ತಯಾರಿಕೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಸಿರಿಧಾನ್ಯಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು, ಹೃದಯದ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಸಹಕಾರಿ ಎಂದರು.

ಗದಗ ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವಣ್ಣವರ ಮಾತನಾಡಿ, ಸಿರಿಧಾನ್ಯಗಳಾದ ರಾಗಿ, ಜೋಳ, ಸಜ್ಜೆ, ನವಣೆ, ಗೊರಲು ಇವುಗಳಲ್ಲಿ ಸಾಕಷ್ಟು ಪೋಷಕಾಂಶಗಳು ಅಡಕವಾಗಿರುವುದರಿಂದ ನಿತ್ಯ ಆಹಾರದಲ್ಲಿ ಬಳಸಿದಲ್ಲಿ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.

ಪ.ಪA ಆವರಣದಿಂದ ಬಾಲಲೀಲಾ ಮಾಹಾಂತ ಶಿವಯೋಗಿಗಳ ಗವಿಮಠ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿರಿಧಾನ್ಯಗಳ ಕುರಿತು ಜಾಥಾ ಹಮ್ಮಿಕೊಳ್ಳಲಾಯಿತು. ಎಸ್.ಎಂ. ನೀಲಗುಂದ, ಕೆ.ಎಲ್. ಕರಿಗೌಡರ, ಜೆಡಿಎ ಚೇತನಾ ಪಾಟೀಲ, ಡಿಡಿಎ ಜಿ.ಎಸ್. ಸ್ಪೂರ್ತಿ, ಎಡಿ ಮಲ್ಲಯ್ಯ ಕೊರವಣ್ಣವರ, ಎಸ್.ಸಿ. ಬಡ್ನಿ ಹಾಗೂ ಜಿಲ್ಲಾ ಕೃಷಿ ಇಲಾಖೆ ಸಿಬ್ಬಂದಿಗಳು ಇದ್ದರು.

error: Content is protected !!