Home Blog Page 282

ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ; ಜಿಲ್ಲಾಧಿಕಾರಿ ದಿವ್ಯ ಪ್ರಭು

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ 4ನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಸರ್ಕಾರಿ ನೌಕರರಲ್ಲಿ ಮಾಧ್ಯಮಗಳ ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರಿಗೆ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಧಾರವಾಡ ಜಿಲ್ಲಾ ಘಟಕದ 2025-28ನೇ ಅವಧಿಯ ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು.

ಸರ್ಕಾರದ ವಿವಿಧ ಇಲಾಖೆಗಳಿಗೆ ಮಾಧ್ಯಮದ ಹೆಸರಿನಲ್ಲಿ ಇತರರು ಭೇಟಿ ನೀಡಿ, ಮಾಹಿತಿ ಕೇಳುವ ಅಥವಾ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ಹೆಸರಿನಲ್ಲಿ ಹೆದರಿಸುವ, ಹಣ ಕೇಳುವ ಘಟನೆಗಳು ಜರುಗುತ್ತವೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದಾಗ ಧಾರವಾಡ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆ. ಆದರೂ ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಟಿಯಿಂದ ಸಿಗಬೇಕಾದ ಮಾಹಿತಿ ಮತ್ತು ಗೌರವ ನೀಡಲು ಅಧಿಕಾರಿ, ಸಿಬ್ಬಂದಿಗಳಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ, ಬಜೆಟ್ ಸೇರಿದಂತೆ ವಿವಿಧ ವಿಷಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ದೇಶದ ನಾಗರಿಕರಿಗೆ ಸಿಗುವ ಅವಕಾಶಗಳ ಬಗ್ಗೆ ತಿಳಿಯಪಡಿಸಲಾಗುವುದು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಘನತೆ, ಸ್ಥಾನವಿದೆ. ಕೆಲವು ಸ್ವಾತಂತ್ರ್ಯ ಹೋರಾಟದ ನಾಯಕರು ಲೇಖನಿ ಮತ್ತು ಪತ್ರಿಕೆಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. ಹೊಸ ಹೊಸ ತಂತ್ರಜ್ಞಾನದ ಬಳಕೆ ಬಗ್ಗೆ ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಂಡು ಕುಲಕರ್ಣಿ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮೋಹನ ಹೆಗಡೆ, ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ವಾಗತಿಸಿ, ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಜೆ.ಅಬ್ಬಾಸ್ ಮುಲ್ಲಾ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಭಾಂಡಗೆ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ವೆಂಕಟರಾಜು ಕೆ.ಜಿ., ವಿಜಯವಾಣಿ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಪ್ರಕಾಶ ಶೇಟ್ ವೇದಿಕೆಯಲ್ಲಿ ಇದ್ದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀಪಾದ ಕುಲಕರ್ಣಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರಾದ ವಿಠ್ಠಲದಾಸ್ ಕಾಮತ್, ಷಣ್ಮುಖ ಕೋಳಿವಾಡ, ಗಿರೀಶ ಪಟ್ಟಣಶೆಟ್ಟಿ, ವೆಂಕಟೇಶ ಪ್ರಭು, ರಾಹುಲ ಬೆಳಗಲಿ ಹಾಗೂ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರತಿನಿಧಿಗಳು, ಧಾರವಾಡ ಪತ್ರಕರ್ತರು ಭಾಗವಹಿಸಿದ್ದರು.

ವಾರ್ತಾ ಇಲಾಖೆಯ ಸಿಬ್ಬಂದಿ ಕಾವ್ಯಾ ಗೌಡರ ಪ್ರಾರ್ಥಿಸಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ತಾಯಿ–ಮಗು ಆತ್ಮಹತ್ಯೆಗೆ ಯತ್ನ; ಪೊಲೀಸರಿಂದ ರಕ್ಷಣೆ!

0

ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ ಸೇರಿದಂತೆ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.

ಸುರೇಖಾ ಭಜಂತ್ರಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ. ಸದ್ಯ ಮಹಿಳೆಯನ್ನು ಸಾವಳಗಿ ಠಾಣೆಗೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸುರೇಖಾ ಭಜಂತ್ರಿ ಎಂಬ ತಾಯಿ ತಮ್ಮ 2 ವರ್ಷದ ಗಂಡು ಮಗುವಿನೊಂದಿಗೆ ಕೃಷ್ಣಾ ನದಿಗೆ ಹಾರಲು ಮುಂದಾಗಿದ್ದರು. ಈ ಸಮಯದಲ್ಲಿ ಸ್ಥಳೀಯರು, ಮಲ್ಲು ಕಲ್ಯಾಣಿ ಅವರು ಗಮನಿಸಿ ತಕ್ಷಣ 112 ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದಾರೆ. ಸದ್ಯ ಮಹಿಳೆ ವಿಚಾರಣೆ ನಡೆಸಿರುವ ಪೊಲೀಸರು ಗಂಡನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಠಾಣೆಗೆ ಬಂದ ಪತಿ ತಮ್ಮ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

Crime News: ಗಂಡನಿಂದ ಹೆಂಡತಿ ಮೇಲೆ ಗನ್ ನಿಂದ ಶೂಟೌಟ್..! ಚಿಕಿತ್ಸೆ ಫಲಿಸದೇ ಪತ್ನಿ ಸಾವು

0

ಬೆಂಗಳೂರು: ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್‌ ಬಳಿ ಪತಿ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿರುವ ಭೀಕರ ಘಟನೆ ನಡೆದಿದೆ.

ತಮಿಳು ಮೂಲದವರಾದ ಬಾಲಮುರುಗನ್ ಮತ್ತು ಭುವನೇಶ್ವರಿ ದಂಪತಿ, ಇಬ್ಬರೂ ಕೋರ್ಟ್‌ನಲ್ಲಿ ಡಿವೋರ್ಸ್‌ ಪ್ರಕರಣದಲ್ಲಿ ಹಾಜರಾಗಿದ್ದರು. ಇಂದು ಕೋರ್ಟ್ ಕೇಸ್ ಮುಗಿಸಿದ ಬಳಿಕ ಅವರ ನಡುವೆ ಜಗಳ ತಾರಕಕ್ಕೇರಿದ್ದು, ಬಾಲಮುರುಗನ್ ಹೆಂಡತಿ ಮೇಲೆ ಗುಂಡೇಟು ನಡೆಸಿದ್ದಾನೆ. ಗಾಯಗೊಂಡ ಭುವನೇಶ್ವರಿಯನ್ನು ಶಾನುಭೋಗ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಾಗಡಿ ರೋಡ್‌ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೆಂಡತಿ ಮೇಲೆ ಗುಂಡು ಹಾರಿಸಿದ ಆರೋಪಿ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಪಿಸ್ತೂಲನ್ನು ಅಕ್ರಮವಾಗಿ ತರಿಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಹಂದಿಗಳ ನಿಯಂತ್ರಣಕ್ಕೆ ಮನವಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಆದರಳ್ಳಿ ಗ್ರಾಮದಲ್ಲಿ ಬೀಡಾಡಿ ದನ-ಕರುಗಳು ಹಾಗೂ ಹಂದಿಗಳಿಂದ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಇದರಿಂದ ಆದರಹಳ್ಳಿ ಗ್ರಾಮವನ್ನು ಮುಕ್ತಗೊಳಿಸಬೇಕು ಎಂದು ಅಲ್ಲಿನ ಕೆಲ ನಿವಾಸಿಗಳು ತಹಸೀಲ್ದಾರ ಧನಂಜಯ ಎಂ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಮದ ನಿವಾಸಿಗಳು, ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ 4-5 ವರ್ಷಗಳಿಂದ ದನ-ಕರುಗಳ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಗ್ರಾಮದಲ್ಲಿ ನೂರಾರು ಹಂದಿಗಳನ್ನು ತಂದು ಬಿಟ್ಟು ಹೋಗಿದ್ದಾರೆ. ಇದರಿಂದ ಅನೇಕ ಅವಘಡಗಳು ಸಂಭವಿಸುತ್ತಿದ್ದು, ದನಕರುಗಳನ್ನು ಬೀದಿಗೆ ಬಿಡುವದರಿಂದ ಹೊಲದಲ್ಲಿ ಬೆಳೆಗಳು ಹಾಳಾಗುತ್ತಿದೆ. ಹಂದಿಗಳ ಕಾಟದಿಂದ ತಿಪ್ಪೆಗಳು ಹಾಗೂ ದನಕರುಗಳಿಗಾಗಿ ಸಂಗ್ರಹಿಸಿದ ಹೊಟ್ಟು, ಮೇವುಗಳ ಬಣವಿಗಳು ಹಾಳಾಗುತ್ತಿದೆ. ಈ ದನಕರುಗಳ ಮಾಲಕರಿಗೆ ಮತ್ತು ಹಂದಿ ಮಾಲಕರಿಗೆ ತಿಳಿಸಿ ಅವುಗಳನ್ನು ಬೇರೆಡೆ ಸಾಗಿಸುವಂತೆ ಕ್ರಮ ವಹಿಸಿ ಇವುಗಳ ಉಪಟಳವನ್ನು ತಡೆಯಬೇಕು ಎಂದು ವಿನಂತಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರರು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಿಪ್ಪಣ್ಣ ಲಮಾಣಿ, ಶಂಕರಗೌಡ ಪಾಟೀಲ, ಹನುಮಂತಗೌಡ ಪಾಟೀಲ, ಮಂಜಪ್ಪ ಹೆಸರೂರ, ನೀಲಪ್ಪ ತಳವಾರ, ಮಹಾಂತಗೌಡ ಪಾಟೀಲ, ಮಮ್ಮಿಸಾಬ ವಾಲಿಕಾರ, ಚನ್ನಪ್ಪ ಲಮಾಣಿ, ಮಂಜುನಾಥ ರಾಹೂತ್, ಗುಡದಪ್ಪ ಅಂಬಿಗೇರ, ಮಲ್ಲಿಕಸಾಬ ವಾಲಿಕಾರ ಮುಂತಾದವರಿದ್ದರು.

ಮಗುವಿನಲ್ಲಿರುವ ಪ್ರತಿಭೆಯ ಅನಾವರಣವಾಗಲಿ: ಎಚ್.ಎನ್. ನಾಯ್ಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರತಿಯೊಂದು ಮಗುವು ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಆ ಮಗುವಿನಲ್ಲಿರುವ ವಿಶೇಷತೆಯನ್ನು ಗುರುತಿಸಿ, ವೇದಿಕೆ ಒದಗಿಸಿ, ಪ್ರತಿಭೆ ಅನಾವರಣ ಮಾಡುವುದು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಕಾರ್ಯಕ್ರಮಗಳು. ಇವುಗಳು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ಅಭಿಪ್ರಾಯಪಟ್ಟರು.

ಅವರು ಲಕ್ಷ್ಮೇಶ್ವರದ ಫೀನಿಕ್ಸ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಲಕ್ಷ್ಮೇಶ್ವರ ಉತ್ತರ ವಲಯದ ಪ್ರತಿಭಾ ಕಾರಂಜಿ ಹಾಗೂ ಲಕ್ಷ್ಮೇಶ್ವರ ಉತ್ತರ ಮತ್ತು ಮಾಗಡಿ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ, ಪ್ರತಿವರ್ಷ ಈ ಭಾಗದ ಮಕ್ಕಳು ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಅವರಿಗೆ ನಾವೆಲ್ಲ ಪ್ರೇರಣೆ ತುಂಬಿ ಪ್ರೋತ್ಸಾಹಿಸಬೇಕಾಗಿದೆ ಎಂದರು.

ಆನಂದ ಮುಳಗುಂದ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಬಿ. ಕೊಣ್ಣೂರ ವಹಿಸಿದ್ದರು. ಬಿಆರ್‌ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಫೀನಿಕ್ಸ್ ಸಂಸ್ಥೆಯ ಆಡಳಿತ ಮಂಡಳಿಯ ರಾಜಶೇಖರ ಹಾಲೇವಾಡಿಮಠ, ಶಿವಯೋಗಿ ಗಾಂಜಿ, ವಿಜಯ ಹತ್ತಿಕಾಳ, ಚಂದ್ರು ಕಗ್ಗಲಗೌಡರ, ಸುನಿತಾ ಯರ್ಲಗಟ್ಟಿ, ಕವಿತಾ ಮೆಣಸಗಿ, ಮಂಗಳಾ ಹುಲಮನಿ, ಬಿ.ಸಿ. ಪಟ್ಟೇದ, ಎಚ್.ಎಂ. ಗುತ್ತಲ, ಚಂದ್ರು ನೇಕಾರ, ಸಂಗಮೇಶ ಅಂಗಡಿ, ಎಸ್.ಡಿ. ಲಮಾಣಿ, ಎ.ಎಂ. ಅಕ್ಕಿ, ಬಿ.ಬಿ. ಯತ್ತಿನಹಳ್ಳಿ, ಡಿ.ಡಿ. ಲಮಾಣಿ, ಎಲ್.ಎನ್. ನಂದೆಣ್ಣವರ, ಗೀತಾ ಹಳ್ಯಾಳ, ಎಂ.ಎ. ನದಾಫ್, ಎಂ.ಡಿ. ವಾರದ, ಬಿ.ಎಂ. ಯರಗುಪ್ಪಿ, ಎ.ಎಂ. ಛತ್ರದ, ಗಿರೀಶ ಸುಗಜಾನವರ, ಬಿ.ಎಂ. ಕುಂಬಾರ, ಎಸ್.ಸಿ. ಗೋಲಪ್ಪನವರ, ಎಸ್.ಜಿ. ಇಟಗಿ, ಜಿ.ಎನ್. ಮೆಳ್ಳಳ್ಳಿ, ಸಿಆರ್‌ಪಿ ಗಿರೀಶ ನೇಕಾರ, ಜ್ಯೋತಿ ಗಾಯಕವಾಡ, ಕೆ.ಪಿ. ಕಂಬಳಿ, ನವೀನ ಅಂಗಡಿ, ಶಿವಾನಂದ ಅಸುಂಡಿ, ಸಿ.ವಿ. ವಡಕಣ್ಣವರ, ಎನ್.ಎನ್. ಸಾವಿರಕುರಿ, ಎಸ್.ಎಚ್. ಮತ್ತೂರ ಉಪಸ್ಥಿತರಿದ್ದರು.

ಶಾಂಭವಿ ಅಕ್ಕೂರ, ಉಮೇಶ ನೇಕಾರ, ಎಲ್.ಎಂ. ಹುರಳಿಕುಪ್ಪಿ, ಎನ್.ಎಸ್. ಬಂಕಾಪುರ, ಎಚ್.ಡಿ. ನಿಂಗರೆಡ್ಡಿ, ಎನ್.ಎನ್. ಶಿಗ್ಲಿ ನಿರ್ವಹಿಸಿದರು. 15 ಶಾಲೆಗಳ ಸುಮಾರು 400 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿವಿಧ ಕ್ಲಸ್ಟರ್‌ನ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿದ್ದರು.

ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಸ್.ಕೆ. ಹವಾಲ್ದಾರ ಮಾತನಾಡಿ, ಶಿಕ್ಷಣದ ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ. ಇದು ಸಾಧಿತವಾಗಬೇಕಾದರೆ ಕಲೆ, ಸಂಸ್ಕೃತಿ, ಸಾಹಿತ್ಯ ಎಲ್ಲವುಗಳಲ್ಲಿಯೂ ಕೂಡ ಮಗು ವಿಕಸನ ಹೊಂದುವುದು ಮುಖ್ಯ ಎಂದರು.

ಸರಕಾರಿ ಉರ್ದು ಶಾಲೆಯಲ್ಲಿ ಹಸಿರು ಸಂಭ್ರಮ – ವನಮಹೋತ್ಸವ ಆಚರಣೆ

0

ಗದಗ: ಲಕ್ಕುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದರಫೀಕ ಹುಬ್ಬಳ್ಳಿ ನೆರವೇರಿಸಿದರು. ಮುಸಲ್ಮಾನ ಗೆಳೆಯರ ಬಳಗವು ಕೊಡುಗೆ ನೀಡಿದ ತೆಂಗು, ದಾಳಿಂಬೆ, ಲಿಂಬು ಹಣ್ಣಿನ ಸಸಿಗಳನ್ನು ಶಾಲೆಯ ಆವರಣದಲ್ಲಿ ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಪ್ರಧಾನ ಗುರು ಎ.ಎನ್. ನರೇಗಲ್, ಸಹ ಶಿಕ್ಷಕ ಎಚ್.ಎಂ. ನದಾಫ್, ಸಕ್ರುಸಾಬ ನದಾಫ್, ಶಮೀರ ಹಿರೇಮನಿ ಸೇರಿದಂತೆ ಗೆಳೆಯರ ಬಳಗದ ಸದಸ್ಯರು ಹಾಜರಿದ್ದರು.

ಬೆಂಗಳೂರಿನ ಮಹತ್ವದ ಮೂಲಸೌಕರ್ಯ ಯೋಜನೆಗಳಿಗೆ ಶೀಘ್ರ ಅನುಮತಿ ಕೋರಿ ಕೇಂದ್ರ ಸಚಿವರಿಗೆ ಡಿಕೆಶಿ ಮನವಿ!

0

ನವದೆಹಲಿ: ಬೆಂಗಳೂರಿನ ಮಹತ್ವದ ನಗರಾಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮತಿ ಹಾಗೂ ಬೆಂಬಲ ಕೋರಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು, ಮೆಟ್ರೋ 2ನೇ ಹಂತದ ಪರಿಷ್ಕೃತ ವೆಚ್ಚಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತದ ಯೋಜನೆಗೆ ಅನುಮೋದನೆ, RRTS ಯೋಜನೆಗೆ ಬೆಂಬಲ ಹಾಗೂ ಮಿಟ್ಟಗಾನಹಳ್ಳಿ ಕೆರೆ ಬಳಿ ಲೆಗಸಿ ಲೀಚೇಟ್ ತ್ಯಾಜ್ಯ ವಿಲೇವಾರಿ ಯೋಜನೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

ಪತ್ರದಲ್ಲಿ ಏನಿದೆ?

ಬೆಂಗಳೂರು ದೇಶದ ಪ್ರಮುಖ ಮಹಾನಗರವಾಗಿದ್ದು, ಹಲವು ನಗರಾಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಬಾಕಿ ಪ್ರಸ್ತಾವನೆಗಳಿಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಶೀಘ್ರ ಅನುಮತಿ ನೀಡಬೇಕು ಎಂದು ಅವರು ಕೋರಿದ್ದಾರೆ.

ಮೆಟ್ರೋ 2ನೇ ಹಂತದ ಯೋಜನೆಯ ಪರಿಷ್ಕೃತ ಪೂರ್ಣಗೊಳಿಸುವ ವೆಚ್ಚ ₹26,405 ಕೋಟಿಯಿಂದ ₹40,425 ಕೋಟಿಗೆ ಏರಿಕೆಯಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು 2025 ಜೂನ್ 5ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು 2025 ಜೂನ್ 9ರಂದು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ತಕ್ಷಣ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಇನ್ನು ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದವಿದ್ದು, 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಮಾರ್ಗವಿದ್ದು, ಒಟ್ಟು ವೆಚ್ಚವನ್ನು ₹28,405 ಕೋಟಿ ಎಂದು ಅಂದಾಜಿಸಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರವು 2025 ಜನವರಿ 10ರಂದು ಒಪ್ಪಿಗೆ ನೀಡಿದ್ದು, ಜನವರಿ 15ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರದ ಅನುಮೋದನೆ ಇನ್ನೂ ಬಾಕಿ ಇರುವುದರಿಂದ ಶೀಘ್ರ ಅನುಮತಿ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ಯಾರೂ ಶಿಕ್ಷಣದಿಂದ ವಂಚಿತರಾಗಬಾರದು: ರಾಜಕುಮಾರ ಅಗಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮಾಜದಲ್ಲಿ ಉತ್ತಮ ಶಿಕ್ಷಣ ಪಡೆಯುವದು ಎಲ್ಲರ ಹಕ್ಕಾಗಿದೆ. ಶಿಕ್ಷಣ ಎನ್ನುವದು ಜಗತ್ತಿನ ಅತಿದೊಡ್ಡ ಶಕ್ತಿ. ಇದರಿಂದ ಯಾರೂ ವಂಚಿತರಾಗಬಾರದು. ವಿದ್ಯೆಗೆ ಬಡವ-ಬಲ್ಲಿದ, ಎಂಬ ಬೇಧವಿಲ್ಲ. ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಶ್ರೇಷ್ಠ ನಾಗರಿಕರಾಗಬೇಕು ಎಂದು ಬೆಂಗಳೂರಿನ ಉದ್ಯಮಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರ ಹಳೆಯ ವಿದ್ಯಾರ್ಥಿ ರಾಜಕುಮಾರ ಅಗಡಿ ಅಭಿಪ್ರಾಯಪಟ್ಟರು.

ಅವರು ಪಟ್ಟಣದಲ್ಲಿ ಸುಮಾರು 60-65 ವರ್ಷಗಳ ಹಿಂದೆ ತಾವು ಪ್ರಾಥಮಿಕ ಶಿಕ್ಷಣ ಪಡೆದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಶಾಲೆಯನ್ನು ಸಂಪೂರ್ಣವಾಗಿ ವೀಕ್ಷಿಸಿ ನಂತರ ಶಾಲೆಯ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ತಾವು ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಸೌಲಭ್ಯಗಳ ಕೊರತೆ, ಮನೆಯಲ್ಲಿ ಆರ್ಥಿಕ ಸಮಸ್ಯೆ, ಶೈಕ್ಷಣಿಕ ಸಮಸ್ಯೆ ಇತ್ಯಾದಿಗಳಿಂದ ಅನೇಕರು ಶಿಕ್ಷಣ ವಂಚಿತರಾಗುತ್ತಿದ್ದರು. ಆದರೆ ಇದೀಗ ಸೌಲಭ್ಯಗಳು ಸಾಕಷ್ಟು ದೊರೆಯುತ್ತಿದ್ದು ಅದರಂತೆ ಮಕ್ಕಳು ವಿದ್ಯಾಭ್ಯಾಸ ಮಾಡುವದಕ್ಕೆ ಆದ್ಯತೆ ನೀಡುವದು ಅವಶ್ಯವಾಗಿದೆ. ಪ್ರಾಥಮಿಕ ಶಾಲೆ ನಂ.1 ಈಗ ಸಾಕಷ್ಟು ಬದಲಾವಣೆಯಾಗಿದೆ, ವಿದ್ಯೆ ನೀಡಿದ ಗುರುವನ್ನು, ಕಲಿತ ಶಾಲೆಯನ್ನು ಎಂದಿಗೂ ಮರೆಯಬಾರದು ಎನ್ನುವ ನಿಟ್ಟಿನಲ್ಲಿ ಈ ಶಾಲೆಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಶಾಲೆಗೆ ಅವಶ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ. ನಾನು ಕಲಿತ ಶಾಲೆಯಲ್ಲಿಯೇ ನನಗೆ ಗೌರವ ದೊರೆತಿರುವದು ಹೆಮ್ಮೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜಕುಮಾರ ಅವರ ಸಹೋದರಿ ಹಾಗೂ ಹಳೆಯ ವಿದ್ಯಾರ್ಥಿನಿ ಶುಭಾವತಿ, ಅವರ ಧರ್ಮಪತ್ನಿ, ಶೋಭಾ ಅಗಡಿ, ಕವಿತಾ ಮಂದನಾ, ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಶಿರಬಡಗಿ, ಎಂ.ಆರ್. ಪಾಟೀಲ, ದಿಗಂಬರ ಪೂಜಾರ, ಗಿರೀಶ ಅಗಡಿ, ಮುಖ್ಯೋಪಾಧ್ಯಾಯ ಡಿ.ಎನ್. ದೊಡ್ಡಮನಿ, ಶಿಕ್ಷಕರಾದ ಎಸ್ತೇರ್ ಪೀಟರ್, ರಾಜೇಶ್ವರಿ ಅಡರಕಟ್ಟಿ, ಸವಿತಾ ಬೋಮಲೆ, ಅಕ್ಷತಾ ಕಾಟೇಗಾರ, ಆಯೇಷಾ ನದಾಫ್, ಎಸ್.ಎಸ್. ಮಹಾಲಿಂಗಶೆಟ್ಟರ ಮುಂತಾದವರಿದ್ದರು.

ಶಂಕರ ಬ್ಯಾಡಗಿ ಮಾತನಾಡಿ, 1872ರಲ್ಲಿ ಪ್ರಾರಂಭವಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1 ಹಲವಾರು ಮಹನೀಯರ, ದಾನಿಗಳ ಸಹಕಾರದಿಂದ ಅನೇಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಸುಮಾರು 6 ದಶಕಗಳ ಹಿಂದೆ ಕಲಿತ ಶಾಲೆಯ ಬಗ್ಗೆ ಅಭಿಮಾನದಿಂದ ಆಗಮಿಸಿದ ರಾಜಕುಮಾರ ಅಗಡಿ ಅಂತವರ ಸಹಕಾರ ಈ ಶಾಲೆಗೆ ದೊರಕಲಿ ಎಂದು ಹೇಳಿದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಉಳ್ಳಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಶಾಲಾ ಕೊಠಡಿ, ಕಂಪೌಂಡ್, ಅಡುಗೆ ಕೋಣೆ, ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈಗಾಗಲೇ ಲಕ್ಷ್ಮೇಶ್ವರದ ಎರಡು ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಮತ್ತು ಪ್ರಧಾನಮಂತ್ರಿ ಗ್ರಾಮ ಸಡಕ್ ಇಲಾಖೆಗಳಿಗೆ ಸಂಬಂಧಿಸಿದ ರಸ್ತೆಗಳು ಹಾಳಾಗಿದ್ದು, ಈ ಕುರಿತು ಈಗಾಗಲೇ ಸಂಬಂಧಿಸಿದ ಸಚಿವರಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಅನುದಾನ ಬಂದ ಹಾಗೆ ಆದ್ಯತೆ ಮೇರೆಗೆ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರು ಈಳಿಗೇರ, ಜಗದೀಶ ಹಂಚಿನಾಳ, ಕೃಷ್ಣ ಲಮಾಣಿ, ಶೇಖರಗೌಡ ಪಾಟೀಲ, ಪ್ರಕಾಶ ಬಾಳಿಕಾಯಿ, ರಮೇಶ ಇಟಗಿ, ಗಂಗಾಧರ ಮೆಣಸಿನಕಾಯಿ, ಶಿವು ಕರಡಿ, ಎಲ್.ಪಿ. ಲಮಾಣಿ, ಶಂಕರ ಲಮಾಣಿ, ರಾಯಪ್ಪ ಹಂಚಿನಾಳ, ಅಶೋಕ ಶಿರಹಟ್ಟಿ ಮತ್ತಿತರರು ಇದ್ದರು.

ಸ್ಕೌಟ್ಸ್-ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮಕ್ಕೆ ಖಡಕ್ ರೊಟ್ಟಿ ರವಾನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬೆಳಗಾವಿ ಜಿಲ್ಲೆಯ ಹೊನಗಾದ ಫೀನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ಡಿಸೆಂಬರ್ 27ರಿಂದ ಜನವರಿ 1ರವರೆಗೆ 5 ದಿನಗಳ ಕಾಲ ನಡೆಯಲಿರುವ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್-ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮಕ್ಕೆ ಮಂಗಳವಾರ ಪಟ್ಟಣದ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಶಾಲೆಯ ಆವರಣದಿಂದ ಖಡಕ್ ರೊಟ್ಟಿಗಳನ್ನು ರವಾನಿಸಲಾಯಿತು.

ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಸಿದ್ಧಗೊಂಡ ಸುಮಾರು 15 ಸಾವಿರಕ್ಕೂ ಅಧಿಕ ರೊಟ್ಟಿ ಹಾಗೂ ಚಟ್ನಿಪುಡಿಯನ್ನು ವಾಹನದ ಮೂಲಕ ರವಾನಿಸುವ ಕಾರ್ಯಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯ್ಕ್ ಚಾಲನೆ ನೀಡಿ ಮಾತನಾಡಿ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಎಲ್ಲ ಶಾಲೆಗಳ ಪ್ರಧಾನ ಗುರುಗಳು, ಶಿಕ್ಷಕರು ವಿಶೇಷ ಆದ್ಯತೆ ನೀಡಿ 15 ಸಾವಿರಕ್ಕೂ ಅಧಿಕ ರೊಟ್ಟಿಗಳನ್ನು ಸಿದ್ಧಪಡಿಸಿ ನೀಡಿದ್ದು, ಈ ಜಾಂಬೋರೇಟ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಭೋಜನದ ಭಾಗವಾಗಿ ನಮ್ಮ ತಾಲೂಕಿನಿಂದ ರೊಟ್ಟಿಗಳನ್ನು ಉಚಿತವಾಗಿ ಕಳುಹಿಸುವ ಮೂಲಕ ನಮ್ಮ ತಾಲೂಕಿನಿಂದ ಅಲ್ಪ ಕೊಡುಗೆ ನೀಡಲು ಮುಂದಾಗಿರುವ ಸಹಕಾರವನ್ನು ಸ್ಮರಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಲಕ್ಷ್ಮೇಶ್ವರ ತಾಲೂಕು ಕಾರ್ಯದರ್ಶಿ ಕೆ.ಆರ್. ಲಮಾಣಿ, ಪ್ರಧಾನ ಗುರುಗಳಾದ ಬಸವರಾಜ ಕುಂಬಾರ, ಎಚ್.ಬಿ. ಸಣ್ಣಮನಿ, ಕ.ರಾ.ಪ್ರಾ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಡಿ.ಡಿ. ಲಮಾಣಿ, ಬಿಆರ್‌ಪಿ ಬಿ.ಎಮ್. ಯರಗುಪ್ಪಿ, ಸಿಆರ್‌ಪಿ ಶ್ರೀನಿವಾಸ್ ಮತ್ತೂರ, ಆರ್.ಎಮ್. ಶಿರಹಟ್ಟಿ, ಶಿವಾನಂದ ಚಕ್ರಸಾಲಿ, ಪಿ.ಸಿ. ಕಾಳಶೆಟ್ಟಿ, ಆರ್.ಕೆ. ಉಪನಾಳ ಹಾಗೂ ಗೊಲ್ಲರ ಹಾಜರಿದ್ದರು.

error: Content is protected !!